Breaking News

ರಾಜ್ಯ

ಜೂ. 21ರಿಂದ ಕೆಎಂಸಿ ಮಣಿಪಾಲ ಆಸ್ಪತ್ರೆಯಲ್ಲಿ ಎಲ್ಲ ಸೇವೆ ಲಭ್ಯ

ಉಡುಪಿ, ಜೂನ್ 18; ಸೋಮವಾರದಿಂದ ಮಣಿಪಾಲದ ಕೆಎಂಸಿ ಆಸ್ಪತ್ರೆಯ ಹೊರರೋಗಿ, ಒಳರೋಗಿ ಸೇವೆಗಳು, ನಾನ್ ಓಪಿಡಿ ವಿಶೇಷ ಸೇವೆಗಳು ಮತ್ತು ಆರೋಗ್ಯ ತಪಾಸಣೆ ಪ್ಯಾಕೇಜ್ ಸೇರಿದಂತೆ ಎಲ್ಲ ವಿಭಾಗಗಳು ಸಾರ್ವಜನಿಕರ ಸೇವೆಗೆ ಮುಕ್ತವಾಗಲಿದೆ. ಹೊರರೋಗಿ ವಿಭಾಗ ಸೇವೆಗಳು ಇಡೀ ದಿನ ಅಂದರೆ ಬೆಳಗ್ಗೆ 8 ರಿಂದ ಸಂಜೆ 5ರ ವರೆಗೆ ಲಭ್ಯವಾಗಲಿದೆ ಎಂದು ಕಸ್ತೂರ್ಬಾ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕರಾದ ಡಾ. ಅವಿನಾಶ ಶೆಟ್ಟಿ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಎಲ್ಲ ರೀತಿಯ …

Read More »

ಮಹಾಮಾರಿ ಕೊರೊನಾ ವೈರಸ್ ನಿಂದ ಸ್ಥಗಿತಗೊಂಡಿದ್ದ ಬಿಎಂಟಿಸಿ ಬಸ್ ಸೋಮವಾರದಿಂದ ನಗರದಾದ್ಯಂತ ಸಂಚರಿಸುವುದು ಖಚಿತ

ಬೆಂಗಳೂರು: ಮಹಾಮಾರಿ ಕೊರೊನಾ ವೈರಸ್ ನಿಂದ ಸ್ಥಗಿತಗೊಂಡಿದ್ದ ಬಿಎಂಟಿಸಿ ಬಸ್ ಸೋಮವಾರದಿಂದ ನಗರದಾದ್ಯಂತ ಸಂಚರಿಸುವುದು ಖಚಿತವಾಗಿದೆ. ನಾಳೆ ಹಾಗೂ ನಾಡಿದ್ದು ಬಸ್ ಸಿಬ್ಬಂದಿಗೆ ಕೊರೊನಾ ಟೆಸ್ಟ್ ನಡೆಸಲಾಗುತ್ತದೆ. ಕರ್ತವ್ಯಕ್ಕೆ ಹಾಜರಾಗುವ ಮುನ್ನ ನೆಗೆಟಿವ್ ರಿಪೋರ್ಟ್ ಕಡ್ಡಾಯವಾಗಿರೋದ್ರಿಂದ ನಾಳೆ ಆಯಾಯ ಘಟಕದಲ್ಲಿ ಟೆಸ್ಟಿಂಗ್ ಕ್ಯಾಂಪ್ ಇರಿಸಲಾಗುತ್ತದೆ. ಹೀಗಾಗಿ ಕೊರೊನಾ ಟೆಸ್ಟ್ ಮಾಡಿಸಿಕೊಳ್ಳುವಂತೆ ಘಟಕದ ವ್ಯವಸ್ಥಾಪಕರು ಈಗಾಗಲೇ ಸೂಚನೆ ನೀಡಿದ್ದಾರೆ.   ಎಲ್ಲಾ ಘಟಕದಲ್ಲಿಯೂ ಟೆಸ್ಟಿಂಗ್ ಕ್ಯಾಂಪ್ ಇರುತ್ತದೆ. ನಾಳೆ ಹಾಗೂ ನಾಡಿದ್ದು …

Read More »

ಲಾಕ್ ಡೌನ್ ನಿಂದಾಗಿ ಬೆಳಗಾವಿಯಲ್ಲಿ ಸಂಕಷ್ಟಕ್ಕೀಡಾಗಿದ್ದ 6 ಒಂಟೆಗಳನ್ನು ರಕ್ಷಿಸಲಾಗಿದ್ದು, ಪ್ರಾಣಿ ಕಲ್ಯಾಣ ಮಂಡಳಿ ಸದಸ್ಯೆ ಡಾ.ಸೋನಾಲಿ ಸರ್ನೋಬತ್

ಬೆಳಗಾವಿ – ಲಾಕ್ ಡೌನ್ ನಿಂದಾಗಿ ಬೆಳಗಾವಿಯಲ್ಲಿ ಸಂಕಷ್ಟಕ್ಕೀಡಾಗಿದ್ದ 6 ಒಂಟೆಗಳನ್ನು ರಕ್ಷಿಸಲಾಗಿದ್ದು, ಪ್ರಾಣಿ ಕಲ್ಯಾಣ ಮಂಡಳಿ ಸದಸ್ಯೆ ಡಾ.ಸೋನಾಲಿ ಸರ್ನೋಬತ್ ಉಸ್ತುವಾರಿ ನೋಡಿಕೊಂಡರು. ಡಾ.ಸೋನಾಲಿ ಸರ್ನೋಬತ್         ಜನರ ಮನರಂಜನೆಗಾಗಿ ಕೆಲವರು ಬೆಳಗಾವಿಗೆ 7 ಒಂಟೆಗಳನ್ನು ಕರೆತಂದಿದ್ದರು. ಆದರೆ ಲಾಕ್ ಡೌನ್ ನಿಂದಾಗಿ ಅವುಗಳಿಗೆ ಆಹಾರ ಮತ್ತು ಆರೋಗ್ಯದ ಸಮಸ್ಯೆ ಉಂಟಾಗಿತ್ತು. ಅವುಗಳ ಮಾಲಿಕರಿಗೆ ಯಾವುದೇ ಆದಾಯವಿರಲಿಲ್ಲ. ಇದರಿಂದಾಗಿ ಒಂದು ಒಂಟೆ ಮರಣ ಹೊಂದಿತು. …

Read More »

ಮಗು ಅಪಹರಣದ ಆರೋಪಿಗೆ ಷರತ್ತುಬದ್ಧ ಜಾಮೀನು ಮಂಜೂರು

ಪಣಜಿ: ಮಗುವಿನ ಅಪಹರಣ ಪ್ರಕರಣದಲ್ಲಿ ಶಂಕಿತ ಆರೋಪಿ ವಿಶ್ರಾಂತಿ ಗಾವಡೆಗೆ ಬಾಲ ನ್ಯಾಯಾಲಯವು ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ತನಿಖಾ ಕಾರ್ಯ ಪೂರ್ಣಗೊಳ್ಳುವ ವರೆಗೆ ಮಗುವಿನ ಪಾಲಕರು ವಾಸಿಸುವ ಪರಿಸರಕ್ಕೆ ತೆರಳಬಾರದು ಎಂದು ನ್ಯಾಯಾಲಯವು ಶಂಕಿತ ಆರೋಪಿಗೆ ಷರತ್ತು ವಿಧಿಸಿದೆ. ಬಾಲ ನ್ಯಾಯಾಲಯದ ನ್ಯಾಯಾಧೀಶ ವಿಜಯಾ ಆಮರೆ ರವರು ಶುಕ್ರವಾರ ವಿಚಾರಣೆ ಕೈಗೆತ್ತಿಕೊಂಡು, 10,000 ರೂ ಮೌಲ್ಯದ ವಯಕ್ತಿಕ ಬಾಂಡ್ ಮೇಲೆ ಜಾಮೀನು ಮಂಜೂರು ಮಾಡಲಾಗಿದೆ. ಈ ಪ್ರಕರಣದ ಸಾಕ್ಷೀದಾರರಾಗಿರುವ …

Read More »

ಗುರ್ಲಾಪೂರ ಕ್ರಾಸ್ ಬಳಿ ಪ್ರವಾಸಿ ಮಂದಿರ ನಿರ್ಮಾಣಕ್ಕೆ ಶೀಘ್ರ ಟೆಂಡರ್ ಶಾಸಕ ಬಾಲಚಂದ್ರ ಜಾರಕಿಹೊಳಿ.

  ಮೂಡಲಗಿ : ಸಾರ್ವಜನಿಕ ಸಂಚಾರಕ್ಕೆ ಅಡಚಣೆಯಾಗಿದ್ದ ಗುರ್ಲಾಪೂರದಿಂದ ಮೂಡಲಗಿವರೆಗಿನ ರಸ್ತೆ ಕಾಮಗಾರಿಯು ಎರಡು ತಿಂಗಳೊಳಗೆ ಪೂರ್ಣಗೊಂಡು ಸುಗಮ ಸಂಚಾರಕ್ಕೆ ಅನುಕೂಲವಾಗಲಿದೆ ಎಂದು ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದರು. ಪಟ್ಟಣದ ಹೊರವಲಯದ ಗುರ್ಲಾಪೂರ ಕ್ರಾಸ್ ಬಳಿ ಕರ್ನಾಟಕ ನೀರಾವರಿ ನಿಗಮದ ಅನುದಾನದಡಿ 4.90 ಕೋಟಿ ರೂ. ವೆಚ್ಚದಲ್ಲಿ ಗುರ್ಲಾಪೂರ ಕ್ರಾಸ್‍ದಿಂದ ಮೂಡಲಗಿವರೆಗಿನ ರಸ್ತೆ ಸುಧಾರಣಾ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ಮೂಡಲಗಿ …

Read More »

ಜೈಲಿನಿಂದ ಫೋನ್ ಕರೆ; ಶಾಸಕ ಬೆಲ್ಲದ್ ಫೋನ್ ಕದ್ದಾಲಿಕೆ ತನಿಖೆಗೆ ಸಿದ್ಧತೆ

ಬೆಂಗಳೂರು: ಬಿಜೆಪಿ ಶಾಸಕ ಅರವಿಂದ್ ಬೆಲ್ಲದ್ ಫೋನ್ ಕದ್ದಾಲಿಕೆ ಪ್ರಕರಣದ ಬಗ್ಗೆ ತನಿಖೆ ನಡೆಸಲಾಗುವುದು ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ತಿಳಿಸಿದ್ದಾರೆ. ಶಾಸಕ ಬೆಲ್ಲದ್ ಅವರಿಗೆ ಜೈಲಿನಲ್ಲಿರುವ ಯುವರಾಜ ಸ್ವಾಮಿ ಎಂಬುವವರಿಂದ ಕರೆ ಬಂದಿದ್ದು, ಫೋನ್ ಕದ್ದಾಲಿಕೆ ಮಾಡುತ್ತಿರುವ ಬಗ್ಗೆ ಸ್ವತಃ ಶಾಸಕರು ಆರೋಪಿಸಿದ್ದರು. ಈ ಕುರಿತು ಮಾತನಾಡಿರುವ ಪೊಲೀಸ್ ಆಯುಕ್ತ ಕಮಲ್ ಪಂತ್, ಫೋನ್ ಕದ್ದಾಲಿಕೆ ಬಗ್ಗೆ ತನಿಖೆ ನಡೆಸುವಂತೆ ಡಿಜಿ, ಐಜಿಪಿ ಕಚೇರಿಯಿಂದ …

Read More »

ಹಿಡಕಲ್ ಜಲಾಶಯದಿಂದ ನೀರು ಬಿಡುತ್ತಾರೆ ಎಂಬ ಸುದ್ದಿ ಸುಳ್ಳು ; ಹುಕ್ಕೇರಿ ತಹಶೀಲ್ದಾರ ಹೂಗಾರ

  ಘಟಪ್ರಭ; ನದಿಪಾತ್ರದ ಜನರಿಗೆ ಸುಳ್ಳು ಸುದ್ದಿ ಕೊಡುತ್ತಿರುವ ವಾಟ್ಸಪ್ ಸಂದೇಶಗಳು ಶುದ್ಧ ಸುಳ್ಳು ಎಂದು ಹುಕ್ಕೇರಿ ತಹಸಿಲ್ದಾರ ಡಿ.ಎಚ್.ಹೂಗಾರ ತಿಳಿಸಿದ್ದಾರೆ.   ಪ್ರಸ್ತುತ ಹುಕ್ಕೇರಿ ತಾಲೂಕಿನಲ್ಲಿ ಅತಿಯಾಗಿ ಮಳೆ ಸುರಿಯುತ್ತಿದ್ದು ಕಾರಣ ಹುಕ್ಕೇರಿ ತಾಲೂಕಿನ ಯರನಾಳ ಮದಮಕನಾಳ ಗ್ರಾಮಗಳ ಮಧ್ಯೆ ಇರುವ ಸೇತುವೆ ಹಾಗೂ ಪಾಶ್ಚಪೂರ ಕುಂದರಗಿ ಗ್ರಾಮಗಳ ಮಧ್ಯೆ ಇರುವ ಸೇತುವೆಗಳು ಸಂಪೂರ್ಣವಾಗಿ ಜಲಾವೃತಗೊಂಡು ಸಂಪರ್ಕ ಕಡಿತಗೊಂಡಿದೆ. ಹಾಗೂ ಸದರಿ ಗ್ರಾಮಗಳಿಗೆ ತೆರಳಲು ಪರ್ಯಾಯ ಮಾರ್ಗಗಳು ಲಭ್ಯವಿರುತ್ತವೆ …

Read More »

2023ರ ಚುನಾವಣೆಯಲ್ಲಿ ನಾವೇ ಅಧಿಕಾರಕ್ಕೆ ಬರುತ್ತೇವೆ , ಮತ್ತೆ ಸಿಎಂ ನಾವೇ: H.D.K.

ಮಂಡ್ಯ: 2023ರ ಚುನಾವಣೆಯಲ್ಲಿ ನಾವೇ ಅಧಿಕಾರಕ್ಕೆ ಬರುತ್ತೇವೆ ಎಂದು ಹೇಳುವ ಮೂಲಕ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಮತ್ತೊಮ್ಮೆ ಮುಖ್ಯಮಂತ್ರಿಯಾಗುವ ಅಭಿಲಾಷೆ ವ್ಯಕ್ತಪಡಿಸಿದ್ದಾರೆ. ಪತ್ರಕರ್ತರೊಂದಿಗೆ ಮಾತನಾಡಿದ ಕುಮಾರಸ್ವಾಮಿ, ನಾವು ಪ್ರಾಮಾಣಿಕವಾಗಿ ಹೋರಾಟ ಮಾಡುತ್ತಿದ್ದೇವೆ. ಜೆಡಿಎಸ್ ಪಕ್ಷ ಹೋರಾಡುತ್ತಿರುವುದು ಅಧಿಕಾರಕ್ಕಾಗಿ ಅಲ್ಲ, ನಿಮ್ಮ ಗೌರವಯುತ ಬದುಕು, ನಾಡಿನ ಸಮಸ್ಯೆ ಬಗೆಹರಿಸಲು. ರಾಷ್ಟ್ರೀಯ ಪಕ್ಷಗಳು ಕಿತ್ತಾಟದಲ್ಲಿ ತೊಡಗಿದ್ದು, ರಾಜ್ಯದ ಸಂಪತ್ತು ಲೂಟಿ ಮಾಡಲು ಹೊರಟಿವೆ ಎಂದು ವಾಗ್ದಾಳಿ ನಡೆಸಿದರು.   ರಾಜ್ಯ ಬಿಜೆಪಿ …

Read More »

ಹಳ್ಳಿಗಳ ಜನರಿಗೆ ಲಸಿಕೆ ನೀಡುವಲ್ಲಿ ಸರ್ಕಾರ ಸಂಪೂರ್ಣ ವಿಫಲ: ಪ್ರಿಯಾಂಕ್‌ ಖರ್ಗೆ ಕಿಡಿ

ಕಲಬುರ್ಗಿ: ‘ಜಿಲ್ಲೆಯ ಜನಸಂಖ್ಯೆಯಲ್ಲಿ ಇನ್ನೂ ಕೇವಲ ಶೇ 10ರಷ್ಟು ಮಂದಿಗೆ ಮಾತ್ರ ಕೋವಿಡ್‌ ಲಸಿಕೆ ನೀಡಲಾಗಿದೆ. ಅದರಲ್ಲೂ ಹಳ್ಳಿಗಳ ಜನರಿಗೆ ಲಸಿಕೆ ನೀಡುವಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ’ ಎಂದು ಶಾಸಕ ಪ್ರಿಯಾಂಕ್‌ ಖರ್ಗೆ ಕಿಡಿ ಕಾರಿದರು. ‘ಆರೋಗ್ಯ ಕಾರ್ಯಕರ್ತರು, ಮುಂಚೂಣಿ ಸೇನಾನಿಗಳಿಗೇ ಪೂರ್ಣವಾಗಿ ಲಸಿಕೆ ನೀಡಿಲ್ಲ. ಇನ್ನು ನಾಗರಿಕರಿಗೆ ಯಾವಾಗ ನೀಡುತ್ತಾರೆ? ಲಸಿಕೆ ನೀಡುವಲ್ಲಿ ರಾಜ್ಯ ಸರ್ಕಾರ ಕಲಬುರ್ಗಿ ಜಿಲ್ಲೆಯ ಬಗ್ಗೆ ಮಲತಾಯಿ ಧೋರಣೆ ತಾಳಿದ್ದೇ ಈ ಹಿನ್ನಡೆಗೆ ಕಾರಣ’ …

Read More »

ನಾಯಕತ್ವ ಬದಲಾವಣೆ ಧ್ವನಿ ಎತ್ತಿ ಉಸ್ತುವಾರಿ ಬಂದ್ರೂ ಭೇಟಿಯಾಗದ ಯತ್ನಾಳ್

ಬೆಂಗಳೂರು: ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಅವರ ಭೇಟಿಗೆ ನಾನು ಅವಕಾಶ ಕೇಳಿಲ್ಲ ಎಂದು ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. ಕಳೆದ ಎರಡು ದಿನಗಳಿಂದ ಬೆಂಗಳೂರಿನಲ್ಲಿರುವ ಅರುಣ್ ಸಿಂಗ್ ಬಿಜೆಪಿ ಕಚೇರಿಯಲ್ಲಿ ಪಕ್ಷದ ಶಾಸಕರು, ಸಚಿವರು, ನಾಯಕರ ಅಭಿಪ್ರಾಯ ಸಂಗ್ರಹಿಸುತ್ತಿದ್ದಾರೆ. ಅನೇಕರು ಅವರನ್ನು ಭೇಟಿಯಾಗಿ ತಮ್ಮ ಅಭಿಪ್ರಾಯ ಹೇಳಿದ್ದು, ಬಸವನಗೌಡ ಪಾಟೀಲ್ ಯತ್ನಾಳ್ ಅವರು ಮಾತ್ರ ಅರುಣ್ ಸಿಂಗ್ ಭೇಟಿಗೆ ಸಮಯವನ್ನು ಕೇಳಿಲ್ಲ. ನಾಯಕತ್ವ ಬದಲಾವಣೆ …

Read More »