ಬೆಂಗಳೂರು – ಬಿಜೆಪಿ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ರಾಜ್ಯಕ್ಕೆ ಆಗಮಿಸಿರುವ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ ಸಿಂಗ್ ಅವರನ್ನು ವಯಕ್ತಿಕವಾಗಿ ಭೇಟಿ ಮಾಡಲು 28 ಬಿಜೆಪಿ ಶಾಸಕರು ಅವಕಾಶ ಕೇಳಿದ್ದಾರೆ. ಬೆಳಗ್ಗೆ 9 ಗಂಟೆಯಿಂದ ಕುಮಾರಕೃಪಾ ಗೆಸ್ಟ್ ಹೌಸ್ ನಲ್ಲಿ ಶಾಸಕರ ಜೊತೆಗೆ ಅರುಣ ಸಿಂಗ್ ವಯಕ್ತಿಕವಾಗಿ ಮಾತನಾಡಲಿದ್ದಾರೆ. ಬೆಳಗಾವಿಯ ಇಬ್ಬರು ಶಾಸಕರು ಸೇರಿದಂತೆ ಸುಮಾರು 28 ಶಾಸಕರು ಪ್ರತ್ಯೇಕವಾಗಿ ಭೇಟಿ ಮಾಡಿ ಮಾತನಾಡಲು ಅವಕಾಶ ಕೇಳಿದ್ದಾರೆ. ಹರತಾಳು ಹಾಲಪ್ಪ, ಸಿದ್ದು …
Read More »ಹಾವೇರಿ ಜಿಲ್ಲೆಯಲ್ಲಿ ತುಂತುರು ಮಳೆ – ಮನೆಯ ಗೋಡೆಗಳಿಗೆ ಹಾನಿ
ಹಾವೇರಿ: ಜಿಲ್ಲೆಯಲ್ಲಿ ಬೆಳಗ್ಗೆಯಿಂದಲೇ ಮೋಡಕವಿದ ವಾತಾವರಣವಿದೆ. ಮೋಡಕವಿದ ವಾತಾವರಣದೊಂದಿಗೆ ಆಗಾಗ ತುಂತುರು ಮಳೆ ಆಗುತ್ತಿದೆ. ತುಂತುರು ಮಳೆಗೆ ಮನೆಯ ಹಳೆಯ ಗೋಡೆಗಳು ನೆನೆದು ಬಿದ್ದ ಘಟನೆ ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನಲ್ಲಿ ನಡೆದಿದೆ. ನೆರಗಲ್ ಗ್ರಾಮದ ತಿರಕಪ್ಪ ಗೋದಿ ಎಂಬವರ ಮನೆಯ ಗೋಡೆ ನೆಲಕಚ್ಚಿದೆ. ಅರಳೇಶ್ವರ ಗ್ರಾಮದ ಗಂಗಯ್ಯ ಹಿರೇಮಠ ಹಾಗೂ ಹಾನಗಲ್ ತಾಲೂಕಿನ ಅಕ್ಕಿವಳ್ಳಿ ಗ್ರಾಮದ ರಾಜು ಪಗಡೆ ಎಂಬವರ ಮನೆಯ ಗೋಡೆ ನೆಲಕಚ್ಚಿದೆ. ಮೂರು ಮನೆಯ ಗೋಡೆಗಳು …
Read More »ರಾಜ್ಯದಲ್ಲಿ ಸಿಎಂ ಬದಲಾವಣೆ ಬಗ್ಗೆ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಹೇಳಿದ್ದೇನು ಗೊತ್ತಾ..?
ಬೆಂಗಳೂರು : ರಾಜ್ಯ ರಾಜಕೀಯದಲ್ಲಿ ಗರಿಗೆದರಿರುವಂತ ಮುಖ್ಯಮಂತ್ರಿ ಬದಲಾವಣೆ ಕುರಿತಂತೆ ಹಾಗೂ ಬಿಜೆಪಿ ಕೋರ್ ಕಮಿಟಿ ಸಭೆಯ ಹಿನ್ನಲೆಯಲ್ಲಿ, ರಾಜ್ಯಕ್ಕೆ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಅವರು ಆಗಮಿಸಿದ್ದಾರೆ. ಅಂತರಾಷ್ಟ್ರೀಯ ವಿಮಾನ ನಿಲ್ದಾಮದಲ್ಲಿಯೇ ಸುದ್ದಿಗಾರರೊಂದಿಗೆ ಮಾತನಾಡಿದಂತ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಅವರು, ರಾಜ್ಯದಲ್ಲಿ ಬಿಜೆಪಿ ಸರ್ಕಾರ ಕೊರೋನಾ ಸಂದರ್ಭದಲ್ಲಿ ಉತ್ತಮವಾಗಿ ಕೆಲಸ ನಿರ್ವಹಿಸುತ್ತಿದೆ. ಕಾಂಗ್ರೆಸ್ ಸಹಿಸದೇ ಬರೀ ವಾಗ್ದಾಳಿ ನಡೆಸುತ್ತಿದೆ. ಜೆಡಿಎಸ್ ಮಾತ್ರ ಐಸೋಲೇಷನ್ ನಲ್ಲಿ ಇದೆ. …
Read More »‘ಅಜ್ಜಿಗೆ ಅರಿವೆ ಚಿಂತೆ,ಮೊಮ್ಮಗಳಿಗೆ ಡಾಬಿನ ಚಿಂತೆ’:ಅರುಣ್ ಸಿಂಗ್ ಭೇಟಿಗೆ ಕಾಂಗ್ರೆಸ್ ಲೇವಡಿ
ಬೆಂಗಳೂರು: “ಅಜ್ಜಿಗೆ ಅರಿವೆ ಚಿಂತೆ, ಮೊಮ್ಮಗಳಿಗೆ ಡಾಬಿನ ಚಿಂತೆ” ಎನ್ನುವಂತೆ ರಾಜ್ಯದ ಜನತೆಗೆ ಬದುಕಿನ ಚಿಂತೆ, ಬಿಜೆಪಿಗೆ ಕುರ್ಚಿ ಕದನದ ಚಿಂತೆಯಾಗಿದೆ. ಒಂದು ಕಡೆ ಸಹಿ ಸಂಗ್ರಹಿಸುವವರು, ಮತ್ತೊಂದು ಕಡೆ ಪತ್ರ ಬರೆಯುವವರು, ಇನ್ನೊಂದು ಕಡೆ ಆ’ಸಂತೋಷಗೊಂಡವರು! ಎಂದಿಗೂ ಜನಪರವಾಗಿರದ ಬಿಜೆಪಿಗೆ ಅಧಿಕಾರ ಸಿಗುವುದು ರಾಜ್ಯಕ್ಕೆ ‘ಶಾಪ’ ತಟ್ಟಿದಂತೆ ಎಂದು ಕಾಂಗ್ರೆಸ್ ಟೀಕೆ ಮಾಡಿದೆ. ಕರ್ನಾಟಕ ಕಾಂಗ್ರೆಸ್ ಟ್ವಿಟ್ಟರ್ ಖಾತೆಯಲ್ಲಿ ಬಿಜೆಪಿ ವಿರುದ್ಧ ಟೀಕೆಗಳ ಸುರಿಮಳೆಗೈಯಲಾಗಿದೆ. ಅರುಣ್ ಸಿಂಗ್ ಅವರೇ, …
Read More »ವಯಸ್ಸಲ್ಲದ ವಯಸ್ಸಲ್ಲಿ ಮಗಳ ಮದುವೆ ಮಾಡಲು ಮುಂದಾದ ಪೋಷಕರಿಗೆ ಬಿಗ್ ಶಾಕ್
ಬಾಗಲಕೋಟೆ: ಮುಧೋಳ ತಾಲ್ಲೂಕಿನ ನಾಗರಾಳ ಗ್ರಾಮದಲ್ಲಿ ಅಪ್ರಾಪ್ತ ಬಾಲಕಿ ಮದುವೆಯನ್ನು ಅಧಿಕಾರಿಗಳು ತಡೆದಿದ್ದಾರೆ. ಜೂನ್ 18 ರಂದು ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಕಂದ್ರಾಳ ಗ್ರಾಮದಲ್ಲಿ 9ನೇ ತರಗತಿ ಓದುತ್ತಿರುವ ಅಪ್ರಾಪ್ತ ಬಾಲಕಿಯ ಮದುವೆ ನಿಗದಿಯಾಗಿತ್ತು. ಮಕ್ಕಳ ಸಹಾಯವಾಣಿಗೆ ಬಂದ ಕರೆಯ ಮಾಹಿತಿ ಆಧರಿಸಿ ಅಧಿಕಾರಿಗಳು, ಪೊಲೀಸರು ಗ್ರಾಮಕ್ಕೆ ತೆರಳಿದ್ದು, ನಿಗದಿಯಾಗಿದ್ದ ಮದುವೆಯನ್ನು ತಡೆದಿದ್ದಾರೆ. ಪೋಷಕರಿಂದ ಮುಚ್ಚಳಿಕೆ ಪತ್ರ ಬರೆಸಿಕೊಂಡು ಅಪ್ರಾಪ್ತೆಯನ್ನು ಬಾಲಮಂದಿರಕ್ಕೆ ದಾಖಲಿಸಲಾಗಿದೆ. ಬಾಲ್ಯವಿವಾಹ ಮಾಡದಂತೆ ಪೋಷಕರಿಗೆ ತಾಕೀತು …
Read More »ಬ್ರಾಹ್ಮಣರ ವಿರುದ್ಧ ಅವಹೇಳನ ಆರೋಪ: ವಿಚಾರಣೆಗೆ ಹಾಜರಾದ ನಟ ಚೇತನ್
ಬೆಂಗಳೂರು: ಬ್ರಾಹ್ಮಣರ ವಿರುದ್ಧ ಅವಹೇಳನಾಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ತಮ್ಮ ವಿರುದ್ಧ ಕೇಸ್ ದಾಖಲಾಗಿರೋ ಹಿನ್ನೆಲೆ, ಇಂದು ನಟ ಚೇತನ್ ವಿಚಾರಣೆಗೆ ಹಾಜರಾಗಿದ್ದಾರೆ. ಪ್ರಕರಣ ಸಂಬಂಧ ಬಸವನಗುಡಿ ಪೊಲೀಸ್ರು ಚೇತನ್ಗೆ ನೋಟೀಸ್ ನೀಡಿದ್ದರು. ಹೀಗಾಗಿ ತಮ್ಮ ಸ್ನೇಹಿತರು ಹಾಗೂ ವಕೀಲರ ಜೊತೆ ಚೇತನ್ ಇಂದು ಬಸವನಗುಡಿ ಇನ್ಸ್ಪೆಕ್ಟರ್ ಆರ್. ರಮೇಶ್ ಎದುರು ವಿಚಾರಣೆಗೆ ಹಾಜರಾಗಿದ್ದಾರೆ. ಬ್ರಾಹ್ಮಣ ಸಮುದಾಯದ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆಂದು ವಿಪ್ರ ಯುವ ವೇದಿಕೆಯ ಪವನ್ …
Read More »ASI ಮನೆ ಮೇಲಿನ ಎಸಿಬಿ ದಾಳಿ: ₹6 ಕೋಟಿ ಬಂಗಲೆಯಲ್ಲಿ ಎಲ್ಲವೂ ಖಾಲಿ ಖಾಲಿ
ಬೆಂಗಳೂರು: ಉದ್ಯಮಿಯಿಂದ ಲಂಚ ಪಡೆದ ಪ್ರಕರಣ ಸಂಬಂಧ ಕೊಡಿಗೇಹಳ್ಳಿ ಎಎಸ್‌ಐ ದಯಾನಂದಸ್ವಾಮಿ ಮನೆ ಮೇಲೆ ನಿನ್ನೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದರು. ಈ ವೇಳೆ ಕೇವಲ ಐವತ್ತು ಸಾವಿರ ನಗದು ಪತ್ತೆಯಾಗಿದ್ದು, ಅಧಿಕಾರಿಗಳೇ ಶಾಕ್ ಆಗಿದ್ರು. ಆರು ಕೋಟಿ ಮೌಲ್ಯದ ಬಂಗಲೆಯಲ್ಲಿ ಎಲ್ಲವೂ ಖಾಲಿ ಖಾಲಿಯಾಗಿದ್ದು, ದಯಾನಂದಸ್ವಾಮಿ ದಾಳಿಗೂ ಮುನ್ನವೇ ದಾಖಲೆಗಳನ್ನ ಎಸ್ಕೇಪ್ ಮಾಡಿಸಿರುವ ಅನುಮಾನ ಮೂಡಿದೆ. ಮನೆಯ ದಾಖಲೆಗಳು, ಹಾಗೂ ಕೆಲವು ವಾಹನಗಳ ದಾಖಲೆಗಳು ಮಾತ್ರ ನಿನ್ನೆ ಪತ್ತೆಯಾಗಿದೆ. …
Read More »ಕೊನೆಗೂ ಜಾರಿಯಾಯ್ತು ರೋಹಿಣಿ ಸಿಂಧೂರಿ ಆದೇಶ.. ಭೂಗಳ್ಳರಲ್ಲಿ ನಡುಕ
ಮೈಸೂರು: ಭೂ ಕಬಳಿಕೆ ಪ್ರಕರಣ ಸಂಬಂಧ ಕೊನೆಗೂ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರ ಆದೇಶ ಜಾರಿಯಾಗಿದೆ. ನಿರ್ಗಮಿತ ಡಿಸಿ ರೋಹಿಣಿ ಆದೇಶದಿಂದ ನಗರಾಭಿವೃದ್ಧಿ ಪ್ರಾಧಿಕಾರ ಎಚ್ಚೆತ್ತಿದ್ದು, ಮೂಡಾದಿಂದ ಇಂದು ಕೇರ್ಗಳ್ಳಿಯಲ್ಲಿ ಅನಧಿಕೃತ ಒತ್ತುವರಿ ತೆರವು ಮಾಡಲಾಗ್ತಿದೆ. ಕೇರ್ಗಳ್ಳಿ ಸರ್ವೆ ನಂಬರ್ 115ರಲ್ಲಿ ಒತ್ತುವರಿ ಆಗಿದೆ ಎನ್ನಲಾಗಿದ್ದು, ಆರ್ಟಿಸಿಯಲ್ಲಿ 61 ಎಕರೆ ಹೆಚ್ಚುವರಿಯಾಗಿ ಭೂಮಿ ದಾಖಲಾಗಿದೆ. ಆರ್.ಟಿ.ನಗರ ಬಡಾವಣೆ ಉದ್ದೇಶಕ್ಕಾಗಿ ಮೂಡಾ ಭೂಮಿ ಸ್ವಾಧೀನಪಡಿಸಿಕೊಂಡಿದ್ದು, ಖಾಸಗಿಯವರು ಅನಧಿಕೃತವಾಗಿ ಅನುಭವದಲ್ಲಿರುವುದು ಪತ್ತೆಯಾಗಿದೆ. …
Read More »ಬ್ಲ್ಯಾಕ್ ಫಂಗಸ್, ವೈಟ್ ಫಂಗಸ್ ನಡುವೆ ಮತ್ತೊಂದು ಅಪಾಯಕಾರಿ ಗ್ರೀನ್ ಫಂಗಸ್ ಪ್ರಕರಣ ಪತ್ತೆ
ನವದೆಹಲಿ: ಕೊರೊನಾ ಸೋಂಕಿನ ನಡುವೆ ಬ್ಲ್ಯಾಕ್ ಫಂಗಸ್, ವೈಟ್ ಫಂಗಸ್, ಯೆಲ್ಲೋ ಫಂಗಸ್ ಗಳು ಅಟ್ಟಹಾಸ ಮೆರೆಯುತ್ತಿದ್ದು, ಇದೀಗ ಗ್ರೀನ್ ಫಂಗಸ್ ಎಂಬ ಮತ್ತೊಂದು ಅಪಾಯಕಾರಿ ಫಂಗಸ್ ಭಾರತದಲ್ಲಿ ಪತ್ತೆಯಾಗಿದೆ. ಕೊರೊನಾದಿಂದ ಗುಣಮುಖನಾಗಿದ್ದ ಮಧ್ಯಪ್ರದೇಶದ ಒಂದೋರ್ ನಲ್ಲಿ 34 ವರ್ಷದ ವ್ಯಕ್ತಿಯಲ್ಲಿ ಗ್ರೀನ್ ಫಂಗಸ್ ಪತ್ತೆಯಾಗಿದೆ. ಇದು ದೇಶದಲ್ಲೇ ಮೊದಲ ಗ್ರೀನ್ ಫಂಗಸ್ ಪ್ರಕರಣವಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಸೋಂಕಿತನನ್ನು ಮುಂಬೈಗೆ ಶಿಫ್ಟ್ ಮಾಡಲಾಗಿದೆ ಎಂದು ಅರಬಿಂದೋ ಇನ್ಸ್ ಟಿಟ್ಯೂಟ್ ಆಫ್ …
Read More »ಕನ್ನಡ ಸಿನಿ ಕಾರ್ಮಿಕರ ನೆರವಿಗೆ ನಿಂತ ಸಾಯಿ ಕುಮಾರ್ ಸಹೋದರರು
ಕೊರೊನಾ ಎರಡನೇ ಅಲೆ ಭೀಕರ ಪರಿಸ್ಥಿತಿ ಎದುರಿಸಲು ಸಾಕಷ್ಟು ಮಂದಿ ನೆರವಿಗೆ ನಿಂತಿದ್ದಾರೆ. ತಮ್ಮ ಕೈಲಾದ ಸಹಾಯ ಮಾಡುತ್ತಿದ್ದಾರೆ. ಕೊರೊನಾ ಲಾಕ್ ಡೌನ್‌ನಿಂದ ಸಂಕಷ್ಟಕ್ಕೆ ಸಿಲುಕಿರುವ ಅನೇಕ ಮಂದಿಗೆ ಸಿನಿ ಸೆಲೆಬ್ರಿಟಿಗಳು ಸಹಾಯ ಹಸ್ತ ಚಾಚಿದ್ದಾರೆ. ಕೊರೊನಾ ಲಾಕ್ ಡೌನ್‌ನಿಂದ ಸಿನಿಮಾ ಕೆಲಸಗಳು ಸ್ಥಗಿತಗೊಂಡಿದೆ. ಸಿನಿ ಕಾರ್ಮಿಕರ ಬದುಕು ಕಷ್ಟದಲ್ಲಿದೆ. ಕೆಲಸವಿಲ್ಲದೆ ಬದುಕು ಸಾಗಿಸಲು ಪರದಾಡುತ್ತಿದ್ದಾರೆ. ಕಷ್ಟದಲ್ಲಿರುವ ಸಿನಿ ಕಾರ್ಮಿಕರಿಗೆ ಅನೇಕ ಸ್ಟಾರ್ ಕಲಾವಿದರು ನೆರವು ನೀಡಿದ್ದಾರೆ. ಸುದೀಪ್, ಉಪೇಂದ್ರ, …
Read More »
Laxmi News 24×7