Breaking News

ರಾಜ್ಯ

ರವಿ ಚನ್ನಣ್ಣನವರ್, ಮೈಸೂರು ಎಸ್‍ಪಿ ಸೇರಿ 12 ಐಪಿಎಸ್ ಅಧಿಕಾರಿಗಳ ವರ್ಗಾವಣೆ

ಬೆಂಗಳೂರು: ರವಿ.ಡಿ.ಚನ್ನಣ್ಣನವರ್, ಮೈಸೂರು ಎಸ್‍ಪಿ ಸೇರಿ 12 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಎಸ್‍ಪಿಯಾಗಿದ್ದ ರವಿ.ಡಿ.ಚನ್ನಣ್ಣನವರ್ ಅವರನ್ನು ಸಿಐಡಿ ಎಸ್‍ಪಿಯಾಗಿ ವರ್ಗಾವಣೆಗೊಳಿಸಲಾಗಿದೆ. ಉಡುಪಿಯಲ್ಲಿ ಕರಾವಳಿ ಭದ್ರತಾ ಪೊಲೀಸ್ ಪಡೆಯ ಎಸ್‍ಪಿಯಾಗಿದ್ದ ಆರ್.ಚೇತನ್ ಅವರನ್ನು ಮೈಸೂರು ಎಸ್‍ಪಿಯಾಗಿ ತಕ್ಷಣಕ್ಕೆ ಜಾರಿಗೆ ಬರುವಂತೆ ವರ್ಗಾವಣೆಗೊಳಿಸಲಾಗಿದೆ. ಕೋಲಾರ ಎಸ್‍ಪಿಯಾಗಿದ್ದ ಕಾರ್ತಿಕ್ ರೆಡ್ಡಿಯವರನ್ನು ಬೆಂಗಳೂರಿನ ವೈರ್‍ಲೆಸ್ ವಿಭಾಗಕ್ಕೆ, ಸಿಐಡಿ ಎಸ್‍ಪಿಯಾಗಿದ್ದ ರಾಹುಲ್ ಕುಮಾರ್ ಶಹಪೂರ್‍ವಾಡ್ ಅವರನ್ನು ತುಮಕೂರು …

Read More »

ಬೆಂಗಳೂರು: ವೀರ್ಯ ತಿಮಿಂಗಲದ ಅಂಬರ್ ಗ್ರೀಸ್ ಮಾರಾಟ-ನಾಲ್ವರ ಬಂಧನ

ಬೆಂಗಳೂರು: ನಗರದಲ್ಲಿ ಅಕ್ರಮವಾಗಿ ವೀರ್ಯ ತಿಮಿಂಗಲದ ಅಂಬರ್ ಗ್ರೀಸ್ ಮಾರಾಟ ಮಾಡುತ್ತಿದ್ದ ನಾಲ್ವರನ್ನು ಪೂರ್ವ ವಿಭಾಗದ ಪೊಲೀಸರು ಬಂಧಿಸಿದ್ದಾರೆ. ಸೈಯದ್ ತಜ್ಮುಲ್ (54), ಸಲೀಂ ಪಾಷಾ (48), ರಫೀ ಉಲ್ಲಾ ಶರೀಫ್ (45) ಹಾಗೂ ನಾಸೀರ್ ಪಾಷಾ (34) ಬಂಧಿತ ಆರೋಪಿಗಳು. ಬಂಧಿತರಿಂದ ಅಂದಾಜು 8 ಕೋಟಿ ರೂ ಬೆಲೆಬಾಳುವ 6ಕೆಜಿ 700 ಗ್ರಾಂ ತೂಕದ ವೀರ್ಯ ತಿಮಿಂಗಲದ ಅಂಬರ್ ಗ್ರೀಸ್ ಅನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕಾಡುಗೊಂಡನಹಳ್ಳಿ …

Read More »

ಪೊಲೀಸರಿಗೆ ಹಾಫ್ ಡೋಸ್ ಹಾಕಿ ಡಾಕ್ಟ್ರಮ್ಮ ದೋಖಾ- ಲಸಿಕೆ ಹಾಕಿಸಿಕೊಂಡವರಿಗೆ ಆತಂಕ

ಕೊರೊನಾ ವ್ಯಾಕ್ಸಿನ್ ಅನ್ನ ಕಾಳ ಸಂತೆಯಲ್ಲಿ ಮಾರಾಟ ಮಾಡುತ್ತಿದ್ದ ವೈದ್ಯೆ ಪುಷ್ಪಿತಾಳ ಇನ್ನೊಂದು ಕರ್ಮಕಾಂಡ ಬಯಲಾಗಿದೆ. ಮಂಜುನಾಥ ನಗರ ಆರೋಗ್ಯಕೇಂದ್ರದಲ್ಲಿ ವ್ಯಾಕ್ಸಿನ್ ಹಾಕಿಸಿಕೊಂಡ ಕೊರೊನಾ ವಾರಿಯರ್ ಗಳಿಗೆ ಮತ್ತು ನಾಗರೀಕರಿಗೆ ಭಯ ಅವರಿಸಿದೆ. ಬೆಂಗಳೂರಿನಲ್ಲಿ ಹಾಫ್ ಡೋಸ್ ಇಂಜೆಕ್ಷನ್ ಕರ್ಮಕಾಂಡ ಬಯಲಾಗಿದೆ. ಕೊರೊನಾ ವಾರಿಯರ್ಸ್ ಪೊಲೀಸರಿಗೂ ಹಾಫ್ ಡೋಸ್ ವ್ಯಾಕ್ಸಿನ್ ಹಾಕಿರೋ ಗಂಭೀರ ಆರೋಪ ಕೇಳಿ ಬಂದಿದೆ. ಹಗಲಿರುಳೆನ್ನದೇ ಜೀವ ಒತ್ತೆಯಿಟ್ಟು ಕೆಲಸ ಮಾಡೋ ಕೊರೊನಾ ವಾರಿಯರ್ಸ್​​​ಗೆ ದೋಖಾ ಮಾಡಲಾಗಿದೆ. …

Read More »

ನಿತ್ಯಾನಂದ ಭಾರತದಲ್ಲಿ ಕಾಲಿಟ್ಟ ಬಳಿಕವೇ ಕೊರೊನಾ ನಿರ್ಮೂಲನೆ; ಕೈಲಾಸವಾಸಿ ಭವಿಷ್ಯವಾಣಿ..!

ನವದೆಹಲಿ: ಭಾರತ ಕೊರೊನಾ ಎರಡನೇ ಅಲೆಯ ವಿರುದ್ಧ ಹೋರಾಟ ನಡೆಸುತ್ತಿದ್ದರೆ ಸ್ವಯಂ ಘೋಷಿತ ದೇವ ಮಾನವ ಮತ್ತೊಮ್ಮೆ ವಿವಾದತ್ಮಾಕ ಹೇಳಿಕೆ ನೀಡಿ ಸುದ್ದಿಯಾಗಿದ್ದಾರೆ. 2019ರಲ್ಲಿ ಭಾರತದಿಂದ ಪರಾರಿಯಾಗಿದ್ದ ಅತ್ಯಾಚಾರ ಆರೋಪಿ ನಿತ್ಯಾನಂದ ಸದ್ಯ ಈಕ್ವೆಡಾರ್​ ದ್ವೀಪವೊಂದನ್ನು ಖರೀದಿ ಮಾಡಿ ಅದಕ್ಕೆ ಕೈಲಾಸ ಎಂದು ನಾಮಕರಣ ಮಾಡಿ ಅಲ್ಲಿಯೇ ನೆಲೆಸಿದ್ದಾರೆ. ಈ ನಡುವೆ ನಿತ್ಯಾನಂದ ತನ್ನ ಹೊಸ ವೀಡಿಯೊ ಒಂದನ್ನ ಬಿಡುಗಡೆ ಮಾಡಿದ್ದಾರೆ. ಇದರಲ್ಲಿ ನಾನು ಭಾರತಕ್ಕೆ ಕಾಲಿಟ್ಟರೆ ಮಾತ್ರ ದೇಶದಲ್ಲಿ …

Read More »

ರಾಜ್ಯದಲ್ಲಿ 10 ಸಾವಿರಕ್ಕಿಂತ ಕಡಿಮೆ ಪ್ರಕರಣ

ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಹೊಸ ಪ್ರಕರಣಗಳ ಸಂಖ್ಯೆ ಇಳಿಮುಖ ಮಾಡಿದ್ದು, ಕಳೆದ 55 ದಿನಗಳಲ್ಲಿ ಇದೇ ಮೊದಲ ಬಾರಿಗೆ 24 ಗಂಟೆಗಳ ಅವಧಿಯಲ್ಲಿ 10 ಸಾವಿರಕ್ಕಿಂತ (9,808) ಕಡಿಮೆ ಸಂಖ್ಯೆಯ ಪ್ರಕರಣ ಮಂಗಳವಾರ ವರದಿಯಾಗಿದೆ. ಕಳೆದ ಏ.14ರಂದು ಪ್ರಕರಣ ಗಳ ಸಂಖ್ಯೆ 10 ಸಾವಿರದ ಗಡಿ ದಾಟಿತ್ತು. ಬಳಿಕ ಏರುಗತಿ ಪಡೆದು, 50 ಸಾವಿರದ ಗಡಿಯ ಆಸುಪಾಸಿಗೆ ಏರಿಕೆ ಕಂಡಿತ್ತು. ಈಗ ಎರಡು ವಾರಗಳಿಂದ ಇಳಿಮುಖ ಕಂಡಿದ್ದು, ಸೋಂಕು ದೃಢ …

Read More »

ಮಂಗಳೂರು ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಪ್ರೊ.ಎಂ.ಐ.ಸವದತ್ತಿ ಅನಾರೋಗ್ಯದಿಂದ ನಿಧನ.

ಧಾರವಾಡ: ಮಂಗಳೂರು ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಪ್ರೊ.ಎಂ.ಐ.ಸವದತ್ತಿ ಅನಾರೋಗ್ಯದಿಂದ ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಸವದತ್ತಿ ಅವರಿಗೆ 90 ವರ್ಷ ವಯಸ್ಸಾಗಿತ್ತು. ಧಾರವಾಡದ ನವೋದಯ ನಗರ ಬಡಾವಣೆ ನಿವಾಸದಲ್ಲಿ ಇಂದು ಕೊನೆಯುಸಿರೆಳೆದಿದ್ದಾರೆ. ಮಂಗಳೂರು ವಿಶ್ವವಿದ್ಯಾಲಯದ ಕುಲಪತಿಗಳಾಗಿದ್ದ ಎಂ.ಐ.ಸವದತ್ತಿ, ಖ್ಯಾತ ವಿಜ್ನಾನಿಕೂಡ ಆಗಿದ್ದರು.

Read More »

ಪೆಟ್ರೋಲ್ ದರ ಹೆಚ್ಚಳ: ಜಾಗಟೆ ತಟ್ಟೆ ಬಾರಿಸಿ ವಿನೂತನ ಪ್ರತಿಭಟನೆ ನಡೆಸಿದ ಯುವ ಕಾಂಗ್ರೆಸ್

ಶಿವಮೊಗ್ಗ: ಪೆಟ್ರೋಲ್ ದರ ಶತಕ ಬಾರಿಸಿದ್ದನು ವಿರೋಧಿಸಿ ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯಕರ್ತರು ವಿನೂತನ ಪ್ರತಿಭಟನೆ ನಡೆಸಿದರು. ನಗರದ ಪೆಟ್ರೋಲ್ ಬಂಕ್ ಮುಂಭಾಗದಲ್ಲಿ ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯಕರ್ತರು ಸಿಹಿ ಹಂಚಿ ಜಾಗಟೆ ತಟ್ಟೆ ಶಂಕ ಬಾರಿಸಿ ಅಣಕು ಸಂಭ್ರಮಾಚರಣೆಯ ಮೂಲಕ ಪ್ರತಿಭಟಿಸಿದರು. ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರದ ವಿರುದ್ಧ ತಟ್ಟೆ ಜಾಗಟೆ ಶಂಕಗಳನ್ನು ಬಾರಿಸಿ ಪೆಟ್ರೋಲ್ ಬಂಕಿಗೆ ಬರುವ ಗ್ರಾಹಕರಿಗೆ ಹಾಗೂ ಸಾರ್ವಜನಿಕರಿಗೆ ಸಿಹಿ ನೀಡುವ …

Read More »

ಮುದ್ದೇಬಿಹಾಳ ಬಳಿ ಅಪರಿಚಿತ ಯುವತಿ ಶವ ಪತ್ತೆ, ಕೊಲೆ ಶಂಕೆ

ವಿಜಯಪುರ : ಜಿಲ್ಲೆಯ ಮುದ್ದೇಬಿಹಾಳ ತಾಲೂಕು ಜಮ್ಮಲದಿನ್ನಿ ಕ್ರಾಸ್ ಬಳಿ ಇರುವ ಸೆತುವೆ ಪೈಪ್ ನಲ್ಲಿ ಅಪರಿಚಿತ ಯುವತಿಯ ಶವ ಪತ್ತೆ ಆಗಿದೆ. ಸುಮಾರು 18 ವಯಸ್ಸಿನ ಯುವತಿಯ ಕತ್ತಿಗೆ ವೇಲ್ ನಿಂದ ಬಿಗಿದು, ತಲೆ ಮೇಲೆ ಕಲ್ಲು ಎತ್ತಿಹಾಕಿದಂತೆ ತಲೆಗೆ ಭಾರಿ ಪೆಟ್ಟು ಬಿದ್ದು ರಕ್ತಸ್ರಾವ ಆಗಿದೆ. ಸ್ಥಳದಲ್ಲಿನ ಸ್ಥಿತಿಯನ್ನು ಆಧರಿಸಿ ಪೊಲೀಸರು ಪ್ರಾಥಮಿಕ ಹಂತದಲ್ಲಿ ಇದು ಕೊಲೆ ಎಂದು ಶಂಕಿಸಿದ್ದಾರೆ. ಸುದ್ದಿ ತಿಳಿಯುತ್ತಲೇ ಸ್ಥಳಕ್ಕೆ ಧಾವಿಸಿರುವ ಮುದ್ದೇಬಿಹಾಳ …

Read More »

ಐಎಎಸ್ ಅಧಿಕಾರಿಗಳ ವರ್ಗಾವಣೆಗೆ ಭೂ ಹಗರಣ ಕಾರಣ-ಸಿದ್ದರಾಮಯ್ಯ

ಬೆಂಗಳೂರು: ‘ಮೈಸೂರಿನಲ್ಲಿ ಇಬ್ಬರು ಐಎಎಸ್ ಅಧಿಕಾರಿಗಳ ನಡುವಿನ ಕಿತ್ತಾಟಕ್ಕೆ ಭೂ ಹಗರಣ ಕಾರಣ. ಅದರ ಬಗ್ಗೆ ಸ್ವತಂತ್ರ ಸಂಸ್ಥೆ ಮೂಲಕ ತನಿಖೆ ನಡೆಸಬೇಕು. ವರ್ಗಾವಣೆ ಶಿಕ್ಷೆ ಅಲ್ಲ. ಈ ಇಬ್ಬರೂ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು’ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದರು. ಸುದ್ದಿಗಾರರ ಜೊತೆ ಮಂಗಳವಾರ ಮಾತನಾಡಿದ ಅವರು, ‘ಮೈಸೂರು ಮಹಾ ನಗರಪಾಲಿಕೆಯ ಆಯುಕ್ತರಾಗಿದ್ದ ಶಿಲ್ಪಾನಾಗ್ ಮತ್ತು ಜಿಲ್ಲಾಧಿಕಾರಿಯಾಗಿದ್ದ ರೋಹಿಣಿ ಸಿಂಧೂರಿ ನಡುವಿನ ಜಗಳಕ್ಕೆ ಬಿಜೆಪಿಯ …

Read More »

ಮುಂಗಾರು ಅಬ್ಬರ.ಮುಂಬಯಿಯಲ್ಲಿ ಧಾರಾಕಾರ ಮಳೆ; ಟ್ರಾಫಿಕ್ ಜಾಮ್, ರೈಲು ಸಂಚಾರ ವ್ಯತ್ಯಯ

ಮುಂಬಯಿ: ನಿಗದಿತ ಸಮಯಕ್ಕಿಂತ ಒಂದು ದಿನ ಮೊದಲೇ ಮುಂಗಾರು ಮಳೆ ಮುಂಬಯಿ ನಗರಿಯನ್ನು ಪ್ರವೇಶಿಸಿದ್ದು, ಧಾರಾಕಾರ ಮಳೆ ಸುರಿದ ಪರಿಣಾಮ ರಸ್ತೆಗಳೆಲ್ಲಾ ಜಲಾವೃತಗೊಂಡಿದ್ದು, ಸಂಚಾರಕ್ಕೆ ಅಡ್ಡಿಯುಂಟಾಗಿತ್ತು. ಅಲ್ಲದೇ ಸ್ಥಳೀಯ ಬಸ್ ಮತ್ತು ರೈಲುಗಳ ಸಂಚಾರದ ಮೇಲೂ ಪರಿಣಾಮ ಬೀರಿರುವುದಾಗಿ ಬುಧವಾರ(ಜೂನ್ 09) ಅಧಿಕಾರಿಗಳು ತಿಳಿಸಿದ್ದಾರೆ.   ಇಂದು ಮುಂಬಯಿಗೆ ಮುಂಗಾರು ಮಳೆ ಪ್ರವೇಶಿಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯ ಮುಂಬಯಿ ಕಚೇರಿಯ ವರಿಷ್ಠ ಡಾ.ಜಯಂತ್ ಸರ್ಕಾರ್ ತಿಳಿಸಿರುವುದಾಗಿ ಪಿಟಿಐ ವರದಿ …

Read More »