Breaking News

ರಾಜ್ಯ

ಲಸಿಕೆಗೆ ಕೊರತೆ ಇರುವಾಗ ಟ್ವಿಟರ್ ಬ್ಲೂ ಟಿಕ್ ಬಗ್ಗೆ ಚರ್ಚೆ: ಕೇಂದ್ರ ಸರ್ಕಾರದ ವಿರುದ್ಧ ರಾಹುಲ್ ಗಾಂಧಿ ಟೀಕೆ

ದೆಹಲಿ: ಕೊರೊನಾ ಸೋಂಕು ವಿರುದ್ಧದ ಲಸಿಕೆಗೆ ಕೊರತೆ ಇರುವಾಗ, ಟ್ವಿಟರ್​ನಲ್ಲಿ ಬ್ಲೂ ಟಿಕ್ ವಿಚಾರವಾಗಿ ಚರ್ಚೆಯಲ್ಲಿ ತೊಡಗಿರುವುದಕ್ಕೆ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ನಾಯಕ, ಸಂಸದ ರಾಹುಲ್ ಗಾಂಧಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೊವಿಡ್-19 ಲಸಿಕೆ ಹಾಗೂ ಟ್ವಿಟರ್ ಬ್ಲೂ ಟಿಕ್ ಬಗ್ಗೆ ವ್ಯಂಗ್ಯವಾಗಿ ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ. ಯಾರಿಗಾದರೂ ಕೊವಿಡ್ ಲಸಿಕೆ ಬೇಕಾದರೆ ಅವರು ಆತ್ಮನಿರ್ಭರರಾಗಿ ಇರಬೇಕಷ್ಟೆ. ಸ್ವಾವಲಂಬಿಯಾಗಿರಬೇಕು. ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಟ್ವಿಟರ್​ನಲ್ಲಿ ಬ್ಲೂ ಟಿಕ್​ಗಾಗಿ …

Read More »

ದರ್ಶನ್​ ಕೊಟ್ಟ ಆ ಒಂದು ಕರೆಗೆ ಅಭಿಮಾನಿಗಳಿಂದ ಬಂತು ಅಭೂತಪೂರ್ವ ಪ್ರತಿಕ್ರಿಯೆ; ಸಾಕ್ಷಿ ತೋರಿಸಿದ ಡಿ ಬಾಸ್

ನಟ ದರ್ಶನ್​ ಹೇಳಿದ್ದನ್ನು ಅಭಿಮಾನಿಗಳು ಚಾಚೂತಪ್ಪದೆ ಪಾಲಿಸುತ್ತಾರೆ. ಈ ಮೊದಲು ಕರ್ನಾಟಕದಲ್ಲಿ ಪ್ರವಾಹ ಉಂಟಾದ ಸಂದರ್ಭದಲ್ಲಿ ‘ನನ್ನ ಬರ್ತ್​ಡೇ ಆಚರಣೆ ಬೇಡ. ಬದಲಿಗೆ ದಿನಸಿ ತಂದುಕೊಡಿ. ಅದನ್ನು ಪ್ರವಾಹ ಪೀಡಿತ ಪ್ರದೇಶಕ್ಕೆ ತಲುಪಿಸುತ್ತೇವೆ’ ಎಂದು ದರ್ಶನ್​ ಹೇಳಿದ್ದರು. ಇದನ್ನು ಅಭಿಮಾನಿಗಳು ಮಾಡಿದ್ದರು. ಈಗ ಕೊವಿಡ್​ ಸಂದರ್ಭದಲ್ಲಿ ಪ್ರಾಣಿಗಳನ್ನು ದತ್ತು ಪಡೆಯುವಂತೆ ದರ್ಶನ್​ ಮನವಿ ಮಾಡಿದ್ದು, ಅವರ ಕರೆಗೆ ಅಭೂತಪೂರ್ವ ಪ್ರತಿಕ್ರಿಯೆ ವ್ಯಕ್ತವಾಗಿದೆ. ಪ್ರಾಣಿಗಳ ಮೇಲಿನ ನಿಮ್ಮ ಪ್ರೀತಿಗೆ 🙏ಹೃದಯಪೂರ್ವಕ ಧನ್ಯವಾದಗಳು …

Read More »

ಸುಸಜ್ಜಿತ ಸಂಚಾರಿ ಆಸ್ಪತ್ರೆ ಉದ್ಘಾಟಿಸಿದ ಡಿಸಿಎಂ ಲಕ್ಷ್ಮಣ ಸವದಿ

ಚಿಕ್ಕೋಡಿ: ಕೊರೊನಾ ನಿಯಂತ್ರಣಕ್ಕಾಗಿ ವಿಶೇಷವಾಗಿ ನಿರ್ಮಿಸಿರುವ ಸುಸಜ್ಜಿತ ಪ್ರಥಮ ಚಿಕಿತ್ಸೆ ಸಂಚಾರಿ ಆಸ್ಪತ್ರೆಯನ್ನು ಡಿಸಿಎಂ ಹಾಗೂ ಸಾರಿಗೆ ಸಚಿವ ಲಕ್ಷ್ಮಣ ಸವದಿ ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದಲ್ಲಿ ಉದ್ಘಾಟಿಸಿದರು. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯಿಂದ ಪರಿವರ್ತನೆಗೊಳಿಸಿ ಕೊಡಲಾದ ಈ ಬಸ್ಸಿನಲ್ಲಿ ಆಕ್ಸಿಜನ್ ಕಾನ್ಸಂಟ್ರೇಟರ್ ಅಳವಡಿಸಿದ ನಾಲ್ಕು ಬೆಡ್, ಒಂದು ವೆಂಟಿಲೇಟರ್ ಬೆಡ್ ಸೇರಿದಂತೆ ಆಸ್ಪತ್ರೆ ಸಿಬ್ಬಂದಿ ಈ ಬಸ್ಸಿನಲ್ಲಿ ಕಾರ್ಯ ನಿರ್ವಹಿಸಲಿದ್ದಾರೆ. ಬಸ್ ಉದ್ಘಾಟಿಸಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, …

Read More »

7 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ಭೀಕರ ದಾಳಿ.. ಪರಿಹಾರಕ್ಕಾಗಿ ಒತ್ತಾಯ

ದಾವಣಗೆರೆ: 7 ವರ್ಷದ ಬಾಲಕಿ ಮೇಲೆ ಬೀದಿ ನಾಯಿಗಳು ಭೀಕರವಾಗಿ ದಾಳಿ ನಡೆಸಿರೋ ಶಾಕಿಂಗ್ ಘಟನೆ ದಾವಣಗೆರೆಯ ಆಜಾದ್ ನಗರದಲ್ಲಿ ನಡೆದಿದೆ. ಸಲಾಮ್ ಹಾಗೂ ತಬಸುಬ ಬಾನು ಎಂಬವರ ಮಗಳು ಕನೋಸ್ ಫಾತಿಮಾ ದಾಳಿಗೊಳಗಾದ ಬಾಲಕಿ. ಮಧ್ಯ ರಾತ್ರಿ ಮೂರು ಗಂಟೆ ಸುಮಾರಿಗೆ ಫಾತಿಮಾ ಮೇಲೆ ನಾಯಿಗಳು ದಾಳಿ ನಡೆಸಿವೆ. ಇದರಿಂದ ಬಾಲಕಿಯ ಕಾಲು, ತಲೆ ಸೇರಿದಂತೆ ಮೈತುಂಬಾ ಗಂಭೀರ ಗಾಯಗಳಾಗಿವೆ. ಫಾತಿಮಾಳನ್ನ ಸದ್ಯ ಬಾಪುಜಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ …

Read More »

ಸ್ವಿಮ್ಮಿಂಗ್ ಪೂಲ್ ನಿರ್ಮಾಣದ ಬಗ್ಗೆ ಉತ್ತರ ಕೊಟ್ಟ ಸಿಂಧೂರಿ

ಮೈಸೂರು: ನಿರ್ಗಮಿತ ಮೈಸೂರು ಡಿ.ಸಿ ರೋಹಿಣಿ ಸಿಂಧೂರಿ ಕಳೆದ ಒಂದು ತಿಂಗಳಿನಿಂದ ಹಲವು ವಿಚಾರಗಳಲ್ಲಿ ಜನಪ್ರತಿನಿಧಿಗಳ ಆರೋಪಗಳಿಗೆ ಗುರಿಯಾಗಿದ್ದರು. ಅದ್ರಲ್ಲಿ ಜಿಲ್ಲಾಧಿಕಾರಿಯ ಸರ್ಕಾರಿ ನಿವಾಸದಲ್ಲಿ ಹೈಟೆಕ್​ ಸ್ವಿಮ್ಮಿಂಗ್ ಪೂಲ್ ನಿರ್ಮಾಣ ಮಾಡಿಸಿದ ವಿಚಾರವೂ ಚರ್ಚೆಗೆ ಗ್ರಾಸವಾಗಿತ್ತು. ಈ ಬಗ್ಗೆ ಸಿಂಧೂರಿ ಸರ್ಕಾರಕ್ಕೆ ಉತ್ತರ ಕೊಟ್ಟಿದ್ದಾರೆ. ಡಿಸಿ ಮನೆ ಬಳಿ ಸ್ವಿಮ್ಮಿಂಗ್‌ಪೂಲ್ ನಿರ್ಮಾಣ‌ ಮಾಡಬೇಕೆಂಬುದು ಐದು ವರ್ಷಗಳ ಹಿಂದಿನ ಯೋಜನೆ ಎಂದು ನಿಖಾಧಿಕಾರಿ, ಪ್ರಾದೇಶಿಕ ಆಯುಕ್ತ ಡಾ.ಜಿ.ಸಿ ಪ್ರಕಾಶ್ ಅವರಿಗೆ ರೋಹಿಣಿ …

Read More »

ಪೆಟ್ರೋಲ್ ಗರಿಷ್ಠ ದರ; 2ನೇ ಸ್ಥಾನದಲ್ಲಿ ಉತ್ತರ ಕನ್ನಡ ಜಿಲ್ಲೆ!

ಕಾರವಾರ, ಜೂನ್ 06; ದೇಶದಲ್ಲಿ ತೈಲ ಬೆಲೆ ದಿನದಿಂದ ದಿನಕ್ಕೆ ಏರುತ್ತಲೇ ಇದೆ. ಈಗಾಗಲೇ ಹಲವು ಕಡೆ ಪೆಟ್ರೋಲ್ ದರ ಸಾರ್ವಕಾಲಿಕ ಏರಿಕೆಯಾಗಿ 100 ರೂ. ಗಡಿ ದಾಟಿದೆ. ಕರ್ನಾಟಕದಲ್ಲಿ ಕೂಡ ಹಲವು ಜಿಲ್ಲೆಗಳಲ್ಲಿ ದರ ಸೆಂಚುರಿ ಬಾರಿಸುವ ಹೊಸ್ತಿಲಲ್ಲಿದ್ದು, ಚಿಕ್ಕಮಗಳೂರಿನಲ್ಲಿ ಈಗಾಗಲೇ ಲೀಟರ್‌ಗೆ 100.06 ರೂ.ನಂತೆ ಬೆಲೆ ಇದೆ. ಇದರ ನಂತರದ ಸ್ಥಾನದಲ್ಲಿ ಉತ್ತರ ಕನ್ನಡವಿದ್ದು, ಕಾರವಾರದಲ್ಲಿ 99.57 ರೂ.ಗೆ ಬಂದುಮುಟ್ಟಿದೆ. ಜಿಲ್ಲೆಯ ಇತರೆ ತಾಲೂಕುಗಳಿಗೆ ಹೋಲಿಸಿದರೆ ಗಡಿ …

Read More »

ರಾತ್ರೋರಾತ್ರಿ ಬೆಂಗಳೂರಿಗೆ ತೆರಳಿದ ಯತ್ನಾಳ್: ಗಂಭೀರ ಸ್ವರೂಪ ಪಡೆದ ಸಿಎಂ ಬದಲಾವಣೆ ಚರ್ಚೆ

ವಿಜಯಪುರ: ಬಿ.ಎಸ್. ಯಡಿಯೂರಪ್ಪ ಸರ್ಕಾರದ ವಿರುದ್ಧ ನಿರಂತರ ಗುಡುತ್ತಲೇ ಇರುವ ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಶನಿವಾರ ರಾತ್ರೋರಾತ್ರಿ ಬೆಂಗಳೂರಿಗೆ ತೆರಳಿದ್ದಾರೆ. ಭಾನುವಾರ ಬೆಳಿಗ್ಗೆ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಹೇಳಿಕೆಗೂ, ಯತ್ನಾಳ್ ಬೆಂಗಳೂರು ಭೇಟಿಗೂ ರಾಜಕೀಯ ತಳುಕು ಹಾಕಲಾಗುತ್ತಿದೆ. ವಾರದ ಹಿಂದೆ ಬೆಂಗಳೂರಿನಿಂದ ಮರಳಿದ್ದ ಯತ್ನಾಳ್, ಎಂದಿನಂತೆ ಕೋವಿಡ್ ನಿಯಂತ್ರಣಕ್ಕಾಗಿ ನಿತ್ಯವೂ ಕ್ಷೇತ್ರದಲ್ಲಿ ವಿವಿಧ ಕಾರ್ಯಕ್ರಮದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದರು. ಶನಿವಾರ ಪರಿಸರ ದಿನಾಚರಣೆ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡಿದ್ದರು. ಅಲ್ಲದೇ ಸಿ.ಎಂ. …

Read More »

ರಾಜೀನಾಮೆ ನೀಡಲು ಯಡಿಯೂರಪ್ಪಗೆ ಆರ್ ಎಸ್‌ಎಸ್ ಮನವೊಲಿಸಿದೆ: ವಿಶ್ವನಾಥ್

ಮೈಸೂರು: ದೆಹಲಿ ಹೇಳಿದಂತೆ ಕೇಳುವುದು ಮೊದಲಿಂದಲೂ ಇರುವ ಪರಿಪಾಠ. ರಾಜ್ಯದಲ್ಲಿ ಪರ್ಯಾಯ ನಾಯಕರನ್ನು ಮಾಡುತ್ತಾರೆ ಎಂದಿರುವುದು ಸ್ವಾಗತಾರ್ಹ. ನನಗೆ ಪರ್ಯಾಯ ನಾಯಕರಿದ್ದಾರೆ ಎಂದು ಹೇಳಿರುವುದು ಯಡಿಯೂರಪ್ಪರ ದೊಡ್ಡ ಮಾತು ಎಂದು ಎಂಎಲ್ ಸಿ ವಿಶ್ವನಾಥ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಜನ, ರಾಜಕೀಯ ನಾಯಕರು ಬಹಳ ವಿಶ್ವಾಸ ಇಟ್ಟುಕೊಂಡು ಬಂದಿದ್ದಾರೆ. ಯಡಿಯೂರಪ್ಪ ಈಗಿನ ಪರಿಸ್ಥಿತಿಯಲ್ಲಿ ರಾಜ್ಯದ ಹಿತಕ್ಕಾಗಿ ದೆಹಲಿ ನಾಯಕರ ಮಾತು ಕೇಳಿ ಕೆಳಗಿಳಿಯುತ್ತೇನೆ ಎಂದಿರುವುದನ್ನು ನಾನು ಸ್ವಾಗತ …

Read More »

ಶವ ಪಡೆಯುವ‌ ವಿಚಾರಕ್ಕೆ ಸಮಂಧಿಸಿದಂತೆ ಬೆಳಗಾವಿ ಜಿಲ್ಲಾ ಆಸ್ಪತ್ರೆ ಎದುರು ಮೃತ ವ್ಯೆಕ್ತಿಯ ಸಮಂಧಿಕರು ಹಾಗು ವೈದ್ಯಕೀಯ ಸಿಬ್ಬಂಧಿ ನಡುವೆ ಗಲಾಟೆ

ಬೆಳಗಾವಿ-ಕೊರೊನಾ ಸೊಂಕಿನಿಂದ ಮೃತಪಟ್ಟ ವ್ಯಕ್ತಿ ಶವ ಪಡೆಯುವ‌ ವಿಚಾರಕ್ಕೆ ಸಮಂಧಿಸಿದಂತೆ ಬೆಳಗಾವಿ ಜಿಲ್ಲಾ ಆಸ್ಪತ್ರೆ ಎದುರು ಮೃತ ವ್ಯೆಕ್ತಿಯ ಸಮಂಧಿಕರು ಹಾಗು ವೈದ್ಯಕೀಯ ಸಿಬ್ಬಂಧಿ ನಡುವೆ ಗಲಾಟೆ ನಡೆದಿದೆ. ಬೆಳಗಾವಿ ಬಿಮ್ಸ್ ಆಸ್ಪತ್ರೆ ಮುಂಭಾಗ ಬಿಮ್ಸ್ ಸಿಬ್ಬಂದ್ಧಿ- ಸಂಬಂಧಿಗಳ ನಡುವೆ ಒಂದು ಘಂಟೆಗೂ ಹೆಚ್ವು ಕಾಲ ಗಲಾಟೆ,ಗದ್ದಲ,ಮುಂದುವರೆದಿತ್ತು.ಕೊರೊನಾದಿಂದ ಸುರೇಶ ಮೇತ್ರಿ(51) ಕೊರೊನಾದಿಂದ ಸಾವನೊಪ್ಪದ್ದು ಮೃತದೇಹ ಹಸ್ತಾಂತರ ಮಾಡುವ ವಿಚಾರದಲ್ಲಿ ಈ ಗಲಾಟೆ ನಡೆದಿದೆ. ಕಾಕತಿ ಗ್ರಾಮದ ಅಂಬೇಡ್ಕರ್ ಗಲ್ಲಿ ‌ನಿವಾಸಿ …

Read More »

2 ರಾಜ್ಯಗಳು 12 ನೇ ತರಗತಿ ಪರೀಕ್ಷೆಗಳನ್ನು ರದ್ದು!!!

ನವದೆಹಲಿ: ದೇಶದಲ್ಲಿ ಕೋವಿಡ್ -19 ಬಿಕ್ಕಟ್ಟಿನ ಮಧ್ಯೆ ಈವರೆಗೆ 12 ರಾಜ್ಯಗಳು ತಮ್ಮ 12 ನೇ ತರಗತಿ ಪರೀಕ್ಷೆಗಳನ್ನು ರದ್ದುಗೊಳಿಸಿವೆ. ಅದರಲ್ಲಿ ಉತ್ತರ ಪ್ರದೇಶ, ಮಧ್ಯಪ್ರದೇಶ, ಹರಿಯಾಣ, ಉತ್ತರಾಖಂಡ, ಮಹಾರಾಷ್ಟ್ರ, ರಾಜಸ್ಥಾನ, ಗುಜರಾತ್, ಒಡಿಶಾ, ತಮಿಳುನಾಡು, ಹಿಮಾಚಲ ಪ್ರದೇಶ, ಗೋವಾ ಮತ್ತು ಕರ್ನಾಟಕ ಸೇರಿವೆ. ಇನ್ನು, ಕೇರಳ ಮತ್ತು ಬಿಹಾರದಲ್ಲಿ ಈಗಾಗಲೇ 12 ನೇ ತರಗತಿ ರಾಜ್ಯ ಮಂಡಳಿ ಪರೀಕ್ಷೆಗಳನ್ನು ನಡೆಸಲಾಗಿದೆ. 12 ನೇ ತರಗತಿ ರಾಜ್ಯ ಮಂಡಳಿ ಪರೀಕ್ಷೆಗಳನ್ನು …

Read More »