ಪುಣೆ: ಇಲ್ಲಿನ ಮುಲ್ಶಿ ಕೈಗಾರಿಕಾ ಪ್ರದೇಶದ ರಾಸಾಯನಿಕ ಕಾರ್ಖಾನೆಯೊಂದರಲ್ಲಿ ಸೋಮವಾರ ಸಂಭವಿಸಿದ ಅಗ್ನಿ ಅವಘಢದಲ್ಲಿ 15 ಮಂದಿ ಮಹಿಳೆಯರು ಸೇರಿ 18 ಜನರು ಮೃತಪಟ್ಟಿದ್ದಾರೆ. ಪಿರಂಗುಟ್ ಗ್ರಾಮದಲ್ಲಿರುವ ‘ಎಸ್‌ವಿಎಸ್ ಅಕ್ವಾ ಟೆಕ್ನಾಲಜೀಸ್’ ಕಾರ್ಖಾನೆಯಲ್ಲಿ ದುರಂತ ಸಂಭವಿಸಿದೆ. ಸುಮಾರು 20 ಮಂದಿ ಪಾರಾಗಿದ್ದಾರೆ. ಬೆಂಕಿಯಿಂದ ತೀವ್ರವಾಗಿ ಸುಟ್ಟಿದ್ದ ಶವಗಳನ್ನು ಹೊರತೆಗೆಯಲಾಗಿದೆ. ಈ ಕುರಿತು ತನಿಖೆಗೆ ಆದೇಶಿಸಲಾಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ. ಬೆಂಕಿಯಿಂದಾಗಿ ವಾತಾವರಣವನ್ನು ದಟ್ಟ ಹೊಗೆ ಆವರಿಸಿತ್ತು. ಸ್ಥಳಕ್ಕೆ ಪುಣೆ ಜಿಲ್ಲಾಧಿಕಾರಿ …
Read More »ರಾಜಕೀಯ ಮಾತು ನಿಲ್ಲಿಸಿ ಕೆಲಸ ಮಾಡಿ: ಸ್ವಪಕ್ಷಿಯರ ಮೇಲೆ ಬಿಎಸ್‌ವೈ ಸಿಡಿಮಿಡಿ
ಬೆಂಗಳೂರು: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಕುರಿತು ನಡೆಯುತ್ತಿರುವ ಚರ್ಚೆಯ ಬಗ್ಗೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಸ್ವಪಕ್ಷೀಯರ ಮೇಲೆಯೇ ಸಿಡಿಮಿಡಿಗೊಂಡಿದ್ದಾರೆ. ಈ ಕುರಿತು ಸೋಮವಾರ ಟ್ವೀಟ್ ಮಾಡಿರುವ ಅವರು, ‘ಕೋವಿಡ್ ಸಾಂಕ್ರಾಮಿಕದಿಂದ ಜನ ಸಂಕಷ್ಟಗಳನ್ನು ಎದುರಿಸುತ್ತಿರುವ ಈ ಸಂದರ್ಭದಲ್ಲಿ, ಪ್ರತಿಯೊಬ್ಬ ಬಿಜೆಪಿ ಶಾಸಕರು ತಮ್ಮ ತಮ್ಮ ಕ್ಷೇತ್ರದಲ್ಲಿ ಕೋವಿಡ್ ನಿಯಂತ್ರಣ ಕಾರ್ಯಗಳಿಗೆ ಆದ್ಯತೆ ನೀಡಬೇಕು.ಯಾರೂ ಕೂಡ ಸಹಿ ಸಂಗ್ರಹಿಸುವುದಾಗಲಿ, ರಾಜಕೀಯ ಹೇಳಿಕೆಗಳನ್ನು ನೀಡುವುದಾಗಲಿ ಮಾಡದೆ, ಸಂಕಷ್ಟದಲ್ಲಿರುವ ಜನರಿಗೆ ನೆರವಾಗಬೇಕು ಎಂದು …
Read More »ವಧು ಯಾಮಿಯನ್ನ ರಾಧೆ ಮಾಗೆ ಹೋಲಿಸಿದ ನಟ – ಚಪ್ಪಲಿ ಕೇಳಿದ ಕಂಗನಾ
ಮುಂಬೈ: ವಧು ಯಾಮಿ ಗೌತಮಿಯನ್ನ ರಾಧೆ ಮಾಗೆ ನಟ ವಿಕ್ರಾಂತ್ ಮೆಸ್ಸಿ ಹೋಲಿಕೆ ಮಾಡಿದ್ದಕ್ಕೆ ನಟಿ ಕಂಗನಾ ರಣಾವತ್ ಕೆಂಡಾಮಂಡಲವಾಗಿದ್ದಾರೆ. ನಟನ ಕಮೆಂಟ್ ಗೆ ರಿಪ್ಲೈ ಮಾಡಿರುವ ಕಂಗನಾ, ನನ್ನ ಚಪ್ಪಲಿ ಕೊಡು ಎಂದು ಕಮೆಂಟ್ ಮಾಡಿದ್ದಾರೆ. ಜೂನ್ 4ರಂದು ಯಾಮಿ ಹಿಮಾಚಲ ಪ್ರದೇಶದಲ್ಲಿ ಉರಿ ಚಿತ್ರದ ನಿರ್ದೇಶಕ, ರೈಟರ್ ಆದಿತ್ಯ ಅವರ ಜೊತೆ ವೈವಾಹಿಕ ಬಂಧನಕ್ಕೆ ಕಾಲಿಟ್ಟಿದ್ದರು. ಕೊರೊನಾ ಹಿನ್ನೆಲೆ ಆಪ್ತರ ಸಮ್ಮುಖದಲ್ಲಿ ಈ ಮದುವೆ ನಡೆದಿತ್ತು. ಫೋಟೋಗಳು …
Read More »ರಾಜ್ಯಗಳಿಗೂ ಕೇಂದ್ರದಿಂದಲೇ ಪೂರೈಕೆ: ಪ್ರಧಾನಿ ಮೋದಿ
ನವದೆಹಲಿ: ಲಸಿಕೆ ವಿತರಣೆ ಸಂಬಂಧ ಮತ್ತೊಂದು ಮಹತ್ವದ ಹೆಜ್ಜೆ ಇಡುವ ಮೂಲಕ ಲಸಿಕೆ ವಿರುದ್ಧ ನಡೆಯುತ್ತಿರುವ ಟೀಕೆಗಳಿಗೆ ಉತ್ತರ ನೀಡಿದ್ದಾರೆ. ಜೂ. 21ರ ಬಳಿಕ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತವಾಗಿ ಲಸಿಕೆ ನೀಡಲಾಗುವುದು ಎಂಬುದನ್ನು ಸ್ಪಷ್ಟವಾಗಿ ಹೇಳಿದ್ದಾರೆ. ಇಂದು ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ ಈ ಮಹತ್ವದ ನಿರ್ಧಾರದ ಕುರಿತು ತಿಳಿಸಿದ್ದು, ಈ ಮೊದಲು ಲಸಿಕೆ ವಿತರಣೆ ಸಂಬಂಧ ರಾಜ್ಯಗಳಿಗೆ ಶೇ. 50 ಜವಾಬ್ದಾರಿ ವಹಿಸಲಾಗಿತ್ತು. ಆದರೆ ಲಸಿಕೆ …
Read More »ಶೈಕ್ಷಣಿಕ ಜಿಲ್ಲೆಯ ಮಾದರಿಯಲ್ಲಿ ಚಿಕ್ಕೋಡಿಯನ್ನು ಕೃಷಿ ಜಿಲ್ಲೆಯಾಗಿ ಘೋಷಣೆಯ ಸಾಧ್ಯತೆ : ಬಿ.ಸಿ.ಪಾಟೀಲ
ಬೆಳಗಾವಿ: ಬೆಳಗಾವಿ ದೊಡ್ಡ ಜಿಲ್ಲೆಯಾಗಿರುವುದರಿಂದ ಶೈಕ್ಷಣಿಕ ಜಿಲ್ಲೆಯ ಮಾದರಿಯಲ್ಲಿ ಚಿಕ್ಕೋಡಿಯನ್ನು ಕೃಷಿ ಜಿಲ್ಲೆಯಾಗಿ ಘೋಷಿಸುವ ಬಗ್ಗೆ ಸರಕಾರದ ಮಟ್ಟದಲ್ಲಿ ಚರ್ಚಿಸಿದ ಬಳಿಕ ಈ ರೀತಿಯ ಘೋಷಣೆಯ ಸಾಧ್ಯತೆ ಕುರಿತು ಪರಿಶೀಲಿಸಲಾಗುವುದು ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ ಭರವಸೆ ನೀಡಿದರು. ರಸಗೊಬ್ಬರ, ಬಿತ್ತನೆ ಬೀಜಗಳ ಲಭ್ಯತೆ ಸೇರಿದಂತೆ ವಿವಿಧ ವಿಷಯಗಳ ಕುರಿತು ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ನಡೆದ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಬೆಳಗಾವಿ ದೊಡ್ಡ …
Read More »ರಾಜ್ಯದಲ್ಲಿ ಇವತ್ತು ಕೊರೋನಾ ಮತ್ತಷ್ಟು ಇಳಿಕೆ
ಬೆಂಗಳೂರು: ರಾಜ್ಯದಲ್ಲಿ ಇವತ್ತು ಕೊರೋನಾ ಮತ್ತಷ್ಟು ಇಳಿಕೆಯಾಗಿದ್ದು, 11,958 ಜನರಿಗೆ ಸೋಂಕು ತಗುಲಿದೆ. ಒಟ್ಟು ಸೋಂಕಿತರ ಸಂಖ್ಯೆ 27,07,481 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿಂದು 340 ಸೋಂಕಿತರು ಸಾವನ್ನಪ್ಪಿದ್ದು, ಇದುವರೆಗೆ 31,920 ಸೋಂಕಿತರು ಸಾವನ್ನಪ್ಪಿದ್ದಾರೆ. ಇಂದು 27,299 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದು, ಇದುವರೆಗೆ 24,36,716 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ 2,38,824 ಸಕ್ರಿಯ ಪ್ರಕರಣಗಳು ಇವೆ. ರಾಜಧಾನಿ ಬೆಂಗಳೂರಿನಲ್ಲಿ ಕೂಡ ಇಳಿಮುಖವಾಗಿದೆ. 199 ಮಂದಿ ಸೋಂಕಿತರು ಮೃತಪಟ್ಟಿದ್ದು, ಹೊಸದಾಗಿ 1992 ಜನರಿಗೆ …
Read More »ಅಪಘಾತ ಪೀಡಿತ ಪ್ರದೇಶಗಳಲ್ಲಿ “ಮೃತ್ಯುಂಜಯ ಧೂತ್’ ತಂಡ ನಿಯೋಜನೆ
ಮುಂಬಯಿ: ಥಾಣೆ, ರಾಯಗಢ, ಪುಣೆ ಮತ್ತು ನಾಗಪುರ ಜಿಲ್ಲೆಯಾದ್ಯಂತ ಅಪಘಾತ ಪೀಡಿತ ಪ್ರದೇಶಗಳಲ್ಲಿ “ಮೃತ್ಯುಂಜಯ ಧೂತ್’ ತಂಡಗಳನ್ನು ನಿಯೋಜಿಸಿರುವ ಹೆದ್ದಾರಿ ಪೊಲೀಸರು. ಈ ಮೂಲಕ ಕಳೆದ ಮೂರು ತಿಂಗಳಲ್ಲಿ 277 ಮಂದಿಯ ಜೀವ ಉಳಿಸಲು ಸಹಾಯವಾಗಿದೆ ಎಂದು ತಿಳಿಸಿದೆ. ಈ ತಂಡಗಳಲ್ಲಿ ಹತ್ತಿರದ ಹಳ್ಳಿಗಳ ಸಾಮಾ ನ್ಯ ಜನರು, ಪೆಟೊ›àಲ್ ಪಂಪ್ ಮತ್ತು ಡಾಬಾ ಗಳಲ್ಲಿ ಕೆಲಸ ಮಾಡುವವರು ಹಾಗೂ ಸಾಮಾಜಿಕ ಸಂಸ್ಥೆಗಳೊಂದಿಗೆ ಸಂಬಂಧ ಹೊಂದಿರುವವರನ್ನು ಧೂತ್ ಕಾರ್ಯಕರ್ತ ರನ್ನಾಗಿ …
Read More »ಮಕ್ಕಳಿಗೆ ಮದ್ಯ ಕುಡಿಸಿ ವಿಡಿಯೋ ಮಾಡಿ ವಿಕೃತಿ: ಕೊನೆಗೂ ಸಿಕ್ಕಿಬಿದ್ದರು ಖದೀಮರು
ರಾಮನಗರ: ಕರೊನಾದಿಂದ ಶಾಲೆಗಳು ಬಂದ್ ಆಗಿರುವ ಪರಿಣಾಮ ಮಕ್ಕಳ ಭವಿಷ್ಯದ ಬಗ್ಗೆ ಪಾಲಕರು ಕಂಗಾಲಾಗಿರುವ ಸಂದರ್ಭದಲ್ಲೇ ಮಕ್ಕಳಿಗೆ ಮದ್ಯಪಾನ ಮಾಡಿಸಿ ಮತ್ತಿನಲ್ಲಿ ಅವರು ಆಡುವ ಆಟಗಳನ್ನು ವಿಡಿಯೋ ಮಾಡಿ ವಿಕೃತಿ ಮೆರೆದಿರುವ ಪ್ರಕರಣ ರಾಮನಗರ ಜಿಲ್ಲೆಯಲ್ಲಿ ತಲ್ಲಣ ಮೂಡಿಸಿತ್ತು. ಬಾಳೆತೋಟವೊಂದರ ತೋಟದ ಮನೆ ಬಳಿ 10 ವರ್ಷದೊಳಗಿನ 7 ಮಕ್ಕಳಿಗೆ ಬಾಡೂಟದ ಜತೆ ಮದ್ಯ ನೀಡಿ ಕುಡಿಯುವಂತೆ ಉತ್ತೇಜಿಸುತ್ತಿರುವ ದೃಶ್ಯವನ್ನೊಳಗೊಂಡ ವಿಡಿಯೋ ಸೇರಿ 3 ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದವು. …
Read More »ತುಮಕೂರಿನಲ್ಲಿ ಲಾರಿ-ಬೈಕ್ ಮುಖಾಮುಖಿ ಡಿಕ್ಕಿ: ಮಹಿಳೆ ಸೇರಿ ಇಬ್ಬರು ಸಾವು
ತುಮಕೂರು: ಲಾರಿ-ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ನಡೆದ ಭೀಕರ ಅಪಘಾತದಲ್ಲಿ ಮಹಿಳೆ ಸೇರಿ ಇಬ್ಬರು ಸಾವನ್ನಪ್ಪಿರುವ ಘಟನೆ ತುಮಕೂರಿನ ಗುಬ್ಬಿ ತಾಲೂಕು ಸಾಗರನಹಳ್ಳಿ ಗೇಟ್ ಸಮೀಪ ನಡೆದಿದೆ. ಮೃತರನ್ನು ಬೈಕ್ ಸವಾರ ರಾಮಚಂದ್ರ (30) ಹಾಗೂ ಪ್ರಿಯಾ (25) ಎಂದು ಗುರುತಿಸಲಾಗಿದೆ. ಇವರು ಚಿಕ್ಕಮಗಳೂರಿನ ಕಡೂರು ತಾಲೂಕು ಬೀರೂರಿನವರಾಗಿದ್ದು ಬೆಂಗಳೂರು ಅಂಚೆ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದರೆಂದು ತಿಳಿದುಬಂದಿದೆ. ರಾಷ್ಟ್ರೀಯ ಹೆದ್ದಾರಿ 206ರ ಸಾಗರನಹಳ್ಳಿ ಗೇಟ್ ಸಮೀಪ ಅಪಘಾತವಾಗಿದ್ದು ಬೈಕ್ …
Read More »ಮನೆ ಮೇಲೆ ಕಟ್ಟಡದ ಗೋಡೆ ಕುಸಿತ: ಒಬ್ಬರ ಸಾವು, 17 ಮಂದಿ ರಕ್ಷಣೆ
ಮುಂಬೈ: ಬಾಂದ್ರಾದಲ್ಲಿ ನಾಲ್ಕು ಅಂತಸ್ತಿನ ಕಟ್ಟಡದ ಗೋಡೆಯು ಪಕ್ಕದ ಎರಡು ಅಂತಸ್ತಿನ ಮನೆಯ ಮೇಲೆ ಕುಸಿದಿರುವ ಪರಿಣಾಮ ಸಂಭವಿಸಿರುವ ದುರಂತದಲ್ಲಿ ಓರ್ವ ಮೃತಪಟ್ಟಿದ್ದು, ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬಾಂದ್ರಾ (ಪೂರ್ವ) ಖೇರ್ವಾಡಿ ರಸ್ತೆಯಲ್ಲಿರುವ ರಜಾಕ್ ಚಾವ್ಲ್‌ನಲ್ಲಿ ಭಾನುವಾರ ತಡರಾತ್ರಿ ಘಟನೆ ನಡೆದಿದ್ದು, ಇದುವರೆಗೆ 17 ಮಂದಿಯನ್ನು ರಕ್ಷಿಸಲಾಗಿದೆ. 28 ವರ್ಷದ ರಿಯಾಸ್ ಅಹ್ಮದ್ ಎಂಬವರು ಮೃತಪಟ್ಟಿದ್ದಾರೆ. ಗಾಯಗೊಂಡವರಲ್ಲಿ ಓರ್ವ ಮಹಿಳೆಯು ಸೇರಿದ್ದಾರೆ ಎಂದು ತಿಳಿಸಿದ್ದಾರೆ. ಅವಘಡ ಸಂಭವಿಸಿದ …
Read More »
Laxmi News 24×7