ವಿಜಯನಗರ, ಮೇ 30; ಕೋವಿಡ್ ಸೋಂಕಿಗೆ ಅಕ್ಕ ಮತ್ತು ತಮ್ಮ ಬಲಿಯಾದ ಘಟನೆ ಹೊಸಪೇಟೆಯಲ್ಲಿ ನಡೆದಿದೆ. ಚಿಕಿತ್ಸೆ ಫಲಕಾರಿಯಾಗದೇ ಒಂದೇ ದಿನದ ಅಂತರದಲ್ಲಿ ಇಬ್ಬರೂ ಸಹ ಮೃತಪಟ್ಟಿದ್ದಾರೆ. ಮೃತಪಟ್ಟವರನ್ನು ವಿಜಯನಗರ ಜಿಲ್ಲೆಯ ಹೊಸಪೇಟೆಯ ಕ್ಯಾರೋಲಿನ್ ಲೂಸಿಯಾ ಸ್ಮಿತ್ (45) ಹಾಗೂ ಸಾವಿಯೋ ಸ್ಮಿತ್ (42) ಎಂದು ಗುರುತಿಸಲಾಗಿದೆ. ಕೋವಿಡ್ ಸೋಂಕು ತಗುಲಿದ ಬಳಿಕ 8 ದಿನಗಳಿಂದ ಬಳ್ಳಾರಿಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಕಾಂಗ್ರೆಸ್‌ನ ರಾಜ್ಯ ಮಹಿಳಾ ಘಟಕದ ಕಾರ್ಯದರ್ಶಿ ಕ್ಯಾರೋಲಿನ್ …
Read More »ರಾಜ್ಯದಲ್ಲಿ ಲಸಿಕೆ ಹಗರಣ; ಹೈಕೋರ್ಟ್ ಮಧ್ಯ ಪ್ರವೇಶಕ್ಕೆ ಡಿಕೆಶಿ ಮನವಿ
ಬೆಂಗಳೂರು, ಮೇ 29: ರಾಜ್ಯ ಸರ್ಕಾರ ಖರೀದಿಸಿದ ಲಸಿಕೆಯನ್ನು ಖಾಸಗಿ ಆಸ್ಪತ್ರೆಗಳಿಗೆ ಸರಬರಾಜು ಮಾಡಿ, ದುಬಾರಿ ಬೆಲೆಗೆ ಮಾರುತ್ತಿರುವ ಹಗರಣದ ಬಗ್ಗೆ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳು ಮಧ್ಯ ಪ್ರವೇಶಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮನವಿ ಮಾಡಿದ್ದಾರೆ. ಬೆಂಗಳೂರಿನ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಜತೆ ಮಾಧ್ಯಮಗಳ ಮಾತನಾಡಿದ ಅವರು, “ಬೆಡ್ ಹಗರಣ ಬೆಳಕಿಗೆ ಬಂತು. ಬಿಜೆಪಿ ನಾಯಕರು ಒಂದು ಸಮುದಾಯವನ್ನು …
Read More »ವಿಜಯಪುರ ಜಿಲ್ಲೆಯಲ್ಲಿ ಕೊರೊನಾ ನಿಯಂತ್ರಣಕ್ಕೆ ಯಶಸ್ವಿ ಕ್ರಮ: ಸಚಿವೆ ಶಶಿಕಲಾ ಜೊಲ್ಲೆ
ಬೆಂಗಳೂರು: ವಿಜಯಪುರ ಜಿಲ್ಲೆಯಲ್ಲಿ ಕೊರೊನಾ ಎರಡನೇ ಅಲೆಯನ್ಮು ನಿಯಂತ್ರಿಸಲು ಅಧಿಕಾರಿಗಳು ಹಾಗೂ ಎಲ್ಲ ಜನ ಪ್ರತಿನಿಧಿಗಳ ಸಹಕಾರದೊಂದಿಗೆ ಯಶಸ್ವಿಯಾಗಿ ಕಾರ್ಯ ನಿರ್ವಹಿಸಲಾಗುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಶಶಿಕಲಾ ಜೊಲ್ಲೆಯವರು ತಿಳಿಸಿದ್ದಾರೆ. ಶನಿವಾರ ಮುಖ್ಯಮಂತ್ರಿಗಳಾದ ಬಿ ಎಸ್.ಯಡಿಯೂರಪ್ಪ ಅವರು ಕರೆದಿದ್ದ ಐದು ಜಿಲ್ಲೆಗಳ ಜನ ಪ್ರತಿನಿಧಿಗಳು ಮತ್ತು ಉಸ್ತುವಾರಿ ಸಚಿವರುಗಳ ಸಭೆಯಲ್ಲಿ ಬೆಂಗಳೂರಿನ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ …
Read More »ಅನಾಥ ಮಕ್ಕಳಿಗೆ ಸರಕಾರದ ಆಸರೆ: ತಂದೆ-ತಾಯಂದಿರನ್ನು ಕಳೆದುಕೊಂಡ ಮಕ್ಕಳಿಗೆ ಮಾಸಿಕ 3,500 ರೂ.
ಕೊರೊನಾ 2ನೇ ಅಲೆ ಅದೆಷ್ಟೋ ಕುಟುಂಬಗಳನ್ನು ಕಾಡಿದೆ. ಸಾವಿರಾರು ಸಂಸಾರಗಳು ದುಡಿಯುವವರನ್ನು ಕಳೆದುಕೊಂಡಿವೆ. ಸಾವಿರಾರು ಮಕ್ಕಳು ಅಪ್ಪ-ಅಮ್ಮ ಇಬ್ಬರನ್ನೂ ಕಳೆದುಕೊಂಡಿದ್ದಾರೆ. ಇಂಥ ಎಳೆಯರಿಗೆ ಮತ್ತು ಆದಾಯದ ಆಧಾರಸ್ತಂಭ ಕಳೆದುಕೊಂಡವರಿಗೆ ಕೇಂದ್ರ ಮತ್ತು ರಾಜ್ಯ ಸರಕಾರಗಳು ಸಹಾಯದ ಹಸ್ತ ಚಾಚಿವೆ. ಬಾಲ ಸೇವಾ ಯೋಜನೆ ಕೇಂದ್ರ ಸರಕಾರದ ಸಲಹೆಯ ಮೇರೆಗೆ ರಾಜ್ಯ ಸರಕಾರವು ಕೊರೊನಾದಿಂದ ಹೆತ್ತವರನ್ನು ಕಳೆದುಕೊಂಡ ಮಕ್ಕಳಿಗೆ ಮುಖ್ಯಮಂತ್ರಿ ಬಾಲಸೇವಾ ಯೋಜನೆ ಪ್ರಕಟಿಸಿದೆ. ಈ ಮೂಲಕ ಪ್ರತೀ ತಿಂಗಳು 3,500 ರೂ. …
Read More »ಶಿಕ್ಷಕರ ಕೋವಿಡ್ ಆರೈಕೆ ಕೇಂದ್ರಕ್ಕೆ ಚಾಲನೆ
ಯಾದಗಿರಿ: ನಗರದ ಆರ್‌ಟಿಒ ಕಚೇರಿ ಹಿಂಭಾಗದಲ್ಲಿ ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ವತಿಯಿಂದ ಆರಂಭಿಸಲಾದ ಶಿಕ್ಷಕರ ಕೋವಿಡ್ ಆರೈಕೆ ಕೇಂದ್ರಕ್ಕೆ ಲ್ಲಾ ಉಸ್ತುವಾರಿ ಸಚಿವ ಆರ್. ಶಂಕರ್ ಚಾಲನೆ ನೀಡಿದರು. ಕೋವಿಡ್‌ನಿಂದ ಮೃತಪಟ್ಟ 17 ಶಿಕ್ಷಕರ ಭಾವಚಿತ್ರಗಳಿಗೆ ಮಾಲಾರ್ಪಣೆ ಮಾಡಲಾಯಿತು.ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಶಾಂತಗೌಡ ಪಾಟೀಲ ಅವರು ಮೃತ ಶಿಕ್ಷಕರ ನೆನಪಿಗಾಗಿ ಶಾಲಾ ಆವರಣದಲ್ಲಿ ಸಸಿ ನೆಟ್ಟರು. ಶಾಸಕ ವೆಂಕಟರೆಡ್ಡಿ ಮುದ್ನಾಳ, ಸಂಸದ ರಾಜಾ ಅಮರೇಶ್ವರ ನಾಯಕ, …
Read More »ಶಾಸಕರ ಅನುದಾನದಲ್ಲಿ ಯಲ್ಲಾಪುರ ಕ್ಕೆ ನಾಲ್ಕು ಆಂಬುಲೆನ್ಸ್ ನೀಡಿದ ಶಿವರಾಮ ಹೆಬ್ಬಾರ್
ಕಾರವಾರ: ಶಾಸಕರ ಅನುದಾನದಲ್ಲಿ ಕೊರೊನಾ ರೋಗಿಗಳನ್ನು ಆಸ್ಪತ್ರೆಗೆ ಕರೆದೊಯ್ಯಲು ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್ ಅವರು ತಮ್ಮ ವಿಧಾನಸಭಾ ಕ್ಷೇತ್ರ ಯಲ್ಲಾಪುರಕ್ಕೆ ನಾಲ್ಕು ಅಂಬುಲೆನ್ಸ್ ಖರೀದಿಸಿದ್ದಾರೆ. ಖರೀದಿಸಿದ ಅಂಬುಲೆನ್ಸ್ ಗಟ್ಟಿಮುಟ್ಟಾಗಿದೆಯೇ ಎಂದು ಪರೀಕ್ಷಿಸಲು ತಾವೇ ಸ್ವತ: ಹೊಸದಾಗಿ ಬಂದ ಅಂಬುಲೆನ್ಸ್ ಏರಿ ವಾಹನ ಚಲಾಯಿಸಿ ಟ್ರಯಲ್ ನೋಡಿದರು. ಯಲ್ಲಾಪುರದ ಪ್ರವಾಸಿ ಮಂದಿರದಿಂದ ಯಲ್ಲಾಪುರ ನಗರವನ್ನು ಒಂದು ಸುತ್ತುಹಾಕಿ ನಂತರ ಅಂಬುಲೆನ್ಸ್ ಸೇವೆಗೆ ಚಾಲನೆ ನೀಡಿದರು. ಸಚಿವ ಶಿವರಾಮ್ ಹೆಬ್ಬಾರ್ ರವರು …
Read More »ಜನ ಸಹಕರಿಸಿದರೆ ಜೂ.7ರ ನಂತರ ಲಾಕ್‍ಡೌನ್ ಇರಲ್ಲ : ಸಿಎಂ
ಬೆಂಗಳೂರು,- ಜನ ಅಗತ್ಯ ಸಹಕಾರ ನೀಡಿದರೆ ಜೂನ್ 7ರ ನಂತರ ಲಾಕ್‍ಡೌನ್ ಮುಂದುವರೆಸುವ ಪ್ರಶ್ನೆಯೇ ಉದ್ಭವಿಸುವುದಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇಂದಿಲ್ಲಿ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೂನ್ 7ರವರೆಗೂ ಎಂದಿನಂತೆ ಲಾಕ್‍ಡೌನ್ ಮುಂದುವರೆಯಲಿದೆ. 7ರ ನಂತರ ಪರಿಸ್ಥಿತಿ ಅವಲೋಕಿಸಿ ಲಾಕ್‍ಡೌನ್ ವಿಸ್ತರಣೆ ಬಗ್ಗೆ ತೀರ್ಮಾನಿಸಲಾಗುವುದು ಎಂದರು. ಜನ ಕೊರೊನಾ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿದರೆ ಜೂನ್ 7ರ ನಂತರ ಲಾಕ್‍ಡೌನ್ ವಿಸ್ತರಣೆಯ ಅವಶ್ಯಕತೆ ಇರುವುದಿಲ್ಲ. ಹೀಗಾಗಿ ಜನರು ಲಾಕ್‍ಡೌನ್ ಸಂದರ್ಭದಲ್ಲಿ …
Read More »ಏರ್ ಸ್ಪ್ರೇ ಅಸ್ತ್ರ- ಲಘು ವಿಮಾನದಿಂದ ಸೋಂಕು ನಿವಾರಕ ದ್ರಾವಣ ಸಿಂಪಡಣೆ
ಬೆಂಗಳೂರು: ಗಾಳಿಯಲ್ಲಿ ಅಲ್ಪ ಕಾಲ ತೇಲುವ ಕೊರೊನಾ ವೈರಸ್ ನಾಶಕ್ಕೆ ಬಿಬಿಎಂಪಿ ಮುಂದಾಗಿದ್ದು, ಇದಕ್ಕಾಗಿ ಸೋಂಕು ನಿವಾರಕ ದ್ರಾವಣವನ್ನು ವಿಮಾನದ ಮೂಲಕ ಸಿಂಪಡಣೆ ಮಾಡಲು ಪ್ಲಾನ್ ಮಾಡಿದೆ. ವಿಮಾನದ ಮೂಲಕ ಜೈವಿಕ ಸೋಂಕು ನಿವಾರಕವನ್ನು ಸಿಂಪಡಿಸುವ ಏರಿಯಲ್ ವರ್ಕ್ಸ್ ಏರೋ ಎಲ್‍ಎಲ್‍ಪಿ ಸಂಸ್ಥೆಯ ಪ್ರಾಯೋಗಿಕ ಕಾರ್ಯಾಚರಣೆ ಯೋಜನೆಗೆ ಇಂದು ಚಾಲನೆ ಕೊಡಲಾಗಿದೆ. ವಿದೇಶಗಳಂತೆ ಬೆಂಗಳೂರಿನಲ್ಲಿ ಕೂಡ ಲಘು ವಿಮಾನದ ಮೂಲಕ ಸಾಂಕ್ರಾಮಿಕ ಔಷಧಿ ಸಿಂಪಡಣೆ ಮಾಡಲಾಗುತ್ತದೆ. ದೇಶದಲ್ಲೇ ಇದು ಮೊದಲ …
Read More »ರೈತರಿಗೆ ಬಿತ್ತನೆ ಬೀಜ ವಿತರಿಸಿದ ನಾಗಪ್ಪ ಶೇಖರಗೋಳ
ಗೋಕಾಕ: ನಗರದ ಎನ್‍ಎಸ್‍ಎಫ್ ಅತಿಥಿ ಗೃಹದ ಆವರಣದಲ್ಲಿ ಕೃಷಿ ಇಲಾಖೆಯಿಂದ ಸಹಾಯಧನದಲ್ಲಿ ಬಿತ್ತನೆ ಬೀಜ ವಿತರಣಾ ಕಾರ್ಯಕ್ರಮಕ್ಕೆ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಆಪ್ತ ಸಹಾಯಕ ನಾಗಪ್ಪ ಶೇಖರಗೋಳ ಅವರು ಚಾಲನೆ ನೀಡಿದರು. ನಂತರ ಮಾತನಾಡಿದ ಅವರು, ಮುಂಗಾರು ಹಂಗಾಮಿಗೆ ರೈತರಿಗೆ ಅನುಕೂಲವಾಗುವ ದೃಷ್ಟಿಯಿಂದ ರೈತ ಸಂರ್ಪಕ ಕೇಂದ್ರಗಳಾದ ಗೋಕಾಕ, ಅರಭಾವಿ, ಕೌಜಲಗಿ ಹಾಗೂ ಬೀಜ ಮಾರಾಟ ಕೇಂದ್ರಗಳ ಜೊತೆಗೆ 18 ಉಪ ಮಾರಾಟ ಕೇಂದ್ರಗಳಲ್ಲಿಯೂ ಬೀಜಗಳನ್ನು ವಿತರಿಸಲಾಗುತ್ತಿದೆ …
Read More »ಕೊರೊನಾ ಸೋಂಕಿಗೆ ನಾಟಿ ಔಷಧ ನೀಡುತ್ತಿದ್ದ ಮಹಿಳೆಗೆ ತಹಶೀಲ್ದಾರ್ ಎಚ್ಚರಿಕೆ
ಬಳ್ಳಾರಿ: ಕೊರೊನಾ ಸೋಂಕಿಗೆ ನಾಟಿ ಔಷಧ ನೀಡುತ್ತಿದ್ದ ಮಹಿಳೆಗೆ ಜಿಲ್ಲೆಯ ಸಂಡೂರು ತಾಲೂಕಿನ ತಹಶೀಲ್ದಾರ್ ರಶ್ಮಿ ಅವರು ಎಚ್ಚರಿಕೆ ನೀಡಿದ್ದು, ಯಾರಿಗೂ ಔಷಧಿ ನೀಡದಂತೆ ಸೂಚನೆ ಕೊಟ್ಟಿದ್ದಾರೆ. ಸಂಡೂರು ತಾಲೂಕಿನ ಹಳೆ ದರೋಜಿ ಗ್ರಾಮದಲ್ಲಿ ಕೊರೊನಾಗೆ ಮಹಿಳೆಯೊಬ್ಬರು ನಾಟಿ ಔಷಧ ನೀಡುತ್ತಿದ್ದರು. ಈ ಔಷಧ ಪಡೆದರೆ ಕೊರೊನಾ ವಾಸಿಯಾಗುತ್ತೆ ಎಂದು ನಂಬಿರುವ ಹಲವರು ಔಷಧ ಪಡೆಯಲು ಮಹಿಳೆಯ ನಿವಾಸದ ಎದುರು ಆಗಮಿಸುತ್ತಿದ್ದರು. ಮಹಿಳೆ ಮನೆಯಲ್ಲಿ ಔಷಧ ತಯಾರಿಸಿ ಜನರಿಗೆ ನೀಡುತ್ತಿದ್ದಾರೆ …
Read More »
Laxmi News 24×7