ಬೆಂಗಳೂರು: ಪಡಿತರ ಚೀಟಿ ಹೊಂದಿದವರಿಗೆ ಅಕ್ಕಿ ಜೊತೆಗೆ ರಾಗಿ ಮತ್ತು ಜೋಳ ವಿತರಿಸಲಾಗುತ್ತಿದೆ. ದಕ್ಷಿಣ ಕರ್ನಾಟಕ ಭಾಗದಲ್ಲಿ ಪರಿತರ ಚೀಟಿದಾರರಿಗೆ ಅಕ್ಕಿ ಜೊತೆಗೆ ರಾಗಿ ಹಾಗೂ ಉತ್ತರ ಕರ್ನಾಟಕದಲ್ಲಿ ಅಕ್ಕಿ ಜೊತೆ ಜೋಳ ನೀಡಲಾಗುತ್ತಿದೆ. ಅದೇ ರೀತಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಸ್ಥಳೀಯವಾಗಿ ಬಳಕೆಯಲ್ಲಿರುವ ಕುಚ್ಚಲಕ್ಕಿ ವಿತರಿಸಬೇಕೆಂಬ ಬೇಡಿಕೆ ಕೇಳಿಬಂದ ಹಿನ್ನೆಲೆಯಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಚಿವ ಉಮೇಶ್ ಕತ್ತಿ ಅಧ್ಯಕ್ಷತೆಯಲ್ಲಿ ಸಭೆ ನಡೆಸಲಾಗಿದೆ. …
Read More »ಜೂನ್ 13ರವರೆಗೂ ರಾಜ್ಯದಲ್ಲಿ ‘ಲಾಕ್’ ಮುಂದುವರಿಕೆ.? ಸಮಿತಿ ನೀಡಿದ ವರದಿ ಬಗ್ಗೆ ಆರೋಗ್ಯ ಸಚಿವರ ಸ್ಪಷ್ಟನೆ
ಬೆಂಗಳೂರು: ರಾಜ್ಯದಲ್ಲಿ ಪ್ರಸ್ತುತ ಜಾರಿಯಲ್ಲಿ ಲಾಕ್ ಡೌನ್ ಜೂನ್ 13ರವರೆಗೂ ವಿಸ್ತರಣೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಕೊರೊನಾ ಪಾಸಿಟಿವಿಟಿ ರೇಟ್ ಕಡಿಮೆಯಾಗಲು ಜೂನ್ 7ರ ಬಳಿಕ ಇನ್ನೂ ಒಂದು ವಾರಗಳ ಕಾಲ ಕಠಿಣ ಲಾಕ್ ಡೌನ್ ಉತ್ತಮ ಎಂದು ಕೋವಿಡ್ ತಾಂತ್ರಿಕ ಸಲಹಾ ಸಮಿತಿ ವರದಿಯಲ್ಲಿ ತಿಳಿಸಿದೆ ಎಂದು ತಿಳಿದುಬಂದಿದೆ. ರಾಜ್ಯದಲ್ಲಿ ಸೋಂಕಿತರ ಸಂಖ್ಯೆ ಕಡಿಮೆಯಾಗುತ್ತಿದ್ದರೂ ಸಾವಿನ ಸಂಖ್ಯೆ ಕಡಿಮೆಯಾಗಿಲ್ಲ. ಅಲ್ಲದೇ ಗ್ರಾಮೀಣ ಭಾಗದಲ್ಲಿ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ಇನ್ನೂ …
Read More »ಎಣ್ಣೆ ಪ್ರಿಯರಿಗೆ ಶಾಕ್ ಲಸಿಕೆ ತೆಗೆದುಕೊಳ್ಳದವರಿಗೆ ಮದ್ಯ ಸಿಗಲ್ಲ –
ಲಕ್ನೋ: ಕೊರೊನಾ ಲಸಿಕೆ ಪಡೆದವರಿಗೆ ಮಾತ್ರ ಮದ್ಯ ನೀಡಲು ಉತ್ತರ ಪ್ರದೇಶದ ಬಾರ್ ಮಾಲೀಕರು ಮುಂದಾಗಿದ್ದಾರೆ. ಲಸಿಕೆ ಪಡೆಯುವಂತೆ ಜನರನ್ನು ಪ್ರೇರೇಪಿಸಲು ಸರ್ಕಾರ ವಿವಿಧ ಮಾರ್ಗಗಳನ್ನು ಅನುಸರಿಸುತ್ತಿದೆ. ಈ ನಡುವೆ ಉತ್ತರ ಪ್ರದೇಶದ ಇಟಾವಾ ಜಿಲ್ಲಾಡಳಿತ ಒಂದು ಹೆಜ್ಜೆ ಮುಂದೆ ಹೋಗಿ ಲಸಿಕೆ ಪಡೆದವರಿಗೆ ಮಾತ್ರ ಮದ್ಯ ನೀಡಬೇಕೆಂದು ಎಲ್ಲ ಮದ್ಯದಂಗಡಿಗಳಿಗೆ ಆದೇಶ ಹೊರಡಿಸಿದೆ. ಈ ಆದೇಶವನ್ನು ಬಾರ್ ಮಾಲೀಕರು ಒಪ್ಪಿಕೊಂಡಿದ್ದಾರೆ. ಈ ಸಂಬಂಧ ಬಾರ್ ಮುಂಭಾಗ ಗೋಡೆಗಳ ಮೇಲೆ …
Read More »ದೇಹದಲ್ಲಿ ಕಡಿಮೆ ಆಮ್ಲಜನಕದ ಮಟ್ಟದ ಲಕ್ಷಣಗಳು ಯಾವುವು? ಇಲ್ಲಿದೆ ಮಾಹಿತಿ
COVID-19 ಸಾಂಕ್ರಾಮಿಕದ ಮಧ್ಯೆ, ಕಡಿಮೆ ಆಮ್ಲಜನಕದ ಮಟ್ಟದ ರೋಗಲಕ್ಷಣಗಳ ಬಗ್ಗೆ ಎಚ್ಚರವಾಗಿರಲು ಸರ್ಕಾರ ಜನರನ್ನು ಕೇಳಿದ್ದು, ಅದಕ್ಕೆ ಕುರಿತಾದಂತಹ ಮಾಹಿತಿಯ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಇದರಲ್ಲಿ ಉಸಿರಾಟದ ತೊಂದರೆ, ಗೊಂದಲ, ಎಚ್ಚರಗೊಳ್ಳಲು ತೊಂದರೆ ಮತ್ತು ತುಟಿಗಳು ಅಥವಾ ಮುಖವನ್ನು ನೀಲಿ ಬಣ್ಣ ಮಾಡುವುದು ಮುಖ್ಯಲಕ್ಷಣಗಳಾಗಿವೆ. “ವಯಸ್ಕರಿಗೆ ಎದೆ ನೋವು ಕಾಣಿಸಿಕೊಳ್ಳಬಹುದು” ಎಂದು ಅದರಲ್ಲಿ ಹೇಳಲಾಗಿದೆ. ಹಾಗೆಯೇ, ಮಕ್ಕಳು ಮೂಗಿನ ಹೊಳ್ಳೆಗಳಲ್ಲಿ ಉಸಿರಾಡುವಾಗ ಕಷ್ಟಪಡುವುದು, ಅಥವಾ ಕುಡಿಯಲು ಅಥವಾ ತಿನ್ನಲು ಅಸಮರ್ಥತೆಯನ್ನು …
Read More »ಗೆಳತಿ ಮಲೈಕಾ ಮನೆ ಸಮೀಪದಲ್ಲೇ ವಿಲ್ಲಾ ಖರೀದಿಸಿದ ಅರ್ಜುನ್ ಕಪೂರ್; ಬೆಲೆ ಎಷ್ಟು?
ಬಾಲಿವುಡ್ ಬಿಗ್ ಬಿ ಅಮಿತಾಬ್ ಬಚ್ಚನ್ ಇತ್ತೀಚಿಗಷ್ಟೆ ಐಷಾರಾಮಿ ಮನೆ ಖರೀಸಿದ ಬೆನ್ನಲ್ಲೇ ಮತ್ತೋರ್ವ ನಟ ಅರ್ಜುನ್ ಕಪೂರ್ ಮನೆ ಖರೀದಿ ವಿಚಾರವಾಗಿ ಸುದ್ದಿಯಾಗಿದ್ದಾರೆ. ಅರ್ಜುನ್ ಮುಂಬೈನಲ್ಲಿ ವಿಲ್ಲಾ ಕೊಂಡುಕೊಂಡಿದ್ದಾರೆ ಎನ್ನುವ ಸುದ್ದಿ ವೈರಲ್ ಆಗಿದೆ. ಮುಂಬೈನ ಹೃದಯ ಭಾಗದಲ್ಲಿ ಅರ್ಜುನ್ ಕಪೂರ್ ಸ್ಕೈ ವಿಲ್ಲಾ ಖರೀದಿ ಮಾಡಿದ್ದಾರಂತೆ. ಈ ವಿಲ್ಲಾ ಮುಂಬೈನ ಬಾಂದ್ರಾದಲ್ಲಿರುವ ಗೆಳತಿ ಮಲೈಕಾ ಅರೋರ ಅವರ ಮನೆಯ ಸಮೀಪವೇ ಇದೆ ಎಂದು ಹೇಳಲಾಗುತ್ತಿದೆ. ಜೊತೆಗೆ ಅರ್ಜುನ್ …
Read More »ಅಭಿಮಾನಿ ಪ್ರಶ್ನೆಗೆ ಕನ್ನಡದಲ್ಲಿ ಉತ್ತರಿಸಿದ ವಿರಾಟ್!
ಮುಂಬಯಿ : ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಆರ್‌ಸಿಬಿ ಅಭಿಮಾನಿಯೊಬ್ಬರ ಪ್ರಶ್ನೆಗೆ ಕನ್ನಡದಲ್ಲಿ ಉತ್ತರಿಸಿ ಸುದ್ದಿಯಾಗಿದ್ದಾರೆ. ಇದು ಕನ್ನಡಿಗರಿಗೆ ಬಹಳ ಖುಷಿ ತಂದಿದೆ. ಇನ್‌ಸ್ಟಾಗ್ರಾಮ್‌ನಲ್ಲಿ ಓರ್ವ ಅಭಿಮಾನಿ, “ನಿಮಗೆ ಕನ್ನಡ ಮಾತ ನಾಡಲು ಮತ್ತು ಅರ್ಥಮಾಡಿ ಕೊಳ್ಳಲು ಬರುತ್ತದೆಯೇ?’ ಎಂಬ ಪ್ರಶ್ನೆಯನ್ನು ಕೇಳಿದ್ದಾರೆ. ಇದಕ್ಕೆ ಉತ್ತರಿಸಿದ ಕೊಹ್ಲಿ, “ಸ್ವಲ್ಪ ಸ್ವಲ್ಪ ಸರ್, ಬಟ್ ಡೋಂಟ್ ಅಂಡರ್‌ಸ್ಟಾಂಡ್‌ಎಟ್ ಆಲ್’ ಎಂದು ಉತ್ತರಿಸುವ ಮೂಲಕ ಕನ್ನಡಿಗರ ಮನಗೆದ್ದಿದ್ದಾರೆ. ಅದರಲ್ಲೂ ಕೊಹ್ಲಿಯ ಈ …
Read More »ಕ್ರೇಜಿ ಸ್ಟಾರ್ ಹುಟ್ಟುಹಬ್ಬದ ಪ್ರಯುಕ್ತ ರಿಲೀಸ್ ಮಾಡಲಾದ ಕನ್ನಡಿಗ ಚಿತ್ರದ ಟೀಸರ್
ಬೆಂಗಳೂರು : ಕ್ರೇಜಿ ಸ್ಟಾರ್ ರವಿಚಂದ್ರನ್ ಇಂದು ಅವರ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದು, ಅದರ ಪ್ರಯುಕ್ತ ಅವರ ಹೊಸ ಚಿತ್ರದ ಟೀಸರ್ ಬಿಡುಗಡೆ ಮಾಡಿದ್ದಾರೆ. ‘ ಕನ್ನಡಿಗ ಚಿತ್ರದ ಟೀಸರ್ ಬಿಡುಗಡೆ ಮಾಡಲಾಗಿದ್ದು, ಯುಟ್ಯೂಬ್ ನಲ್ಲಿ ಗುಣಭದ್ರ ಎಂಬ ವಿದ್ವಾಂಸನ ಪಾತ್ರದ ಟೀಸರ್ ಬಿಡುಗಡೆಯಾಗಿದೆ . ಅದು , ತಲೆಮಾರುಗಳಿಂದ ಕನ್ನಡ ಭಾಷೆ , ಪರಂಪರೆಯ ಉಳಿವಿಗಾಗಿ ಹೋರಾಡಿದ ಕುಟುಂಬದ ಸದಸ್ಯನ ಪಾತ್ರವಾಗಿದೆ. ಅಲ್ಲದೆ ಈ ಚಿತ್ರದ ಮೂಲಕ ಟಾಮ್ ಆಲ್ಟರ್ …
Read More »ಮಾಡೆಲ್ ಮೇಲೆ ಸಾಮೂಹಿಕ ಅತ್ಯಾಚಾರ; ಬಾಲಿವುಡ್ ಛಾಯಾಗ್ರಹಕನ ಮೇಲೆ ಪ್ರಕರಣ ದಾಖಲು
ಮುಂಬೈ : ಮಾಡೆಲ್ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಮುಂಬೈ ಪೊಲೀಸರು ಬಾಲಿವುಡ್‌ನ ಪ್ರಸಿದ್ಧ ಛಾಯಾಗ್ರಾಹಕರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಮೇ 26 ರಂದು, 28 ವರ್ಷದ ಮಾಡೆಲ್ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಲಾಗಿದ್ದು, ಪ್ರಸಿದ್ಧ ಬಾಲಿವುಡ್ ಛಾಯಾಗ್ರಾಹಕ ಸೇರಿ 8 ಜನರ ವಿರುದ್ಧ ಮುಂಬೈನ ಬಾಂದ್ರಾ ಪೊಲೀಸ್ ಠಾಣೆಯಲ್ಲಿ ಕಿರುಕುಳ ಪ್ರಕರಣ ದಾಖಲಿಸಿದ್ದಾರೆ. ಮಾಡೆಲ್ ನೀಡಿದ ಹೇಳಿಕೆಯ ಆಧಾರದ ಮೇಲೆ ಪೊಲೀಸರು ಐಪಿಸಿಯ 376 …
Read More »ಕಠಿಣ ಲಾಕ್‍ಡೌನ್ ಮಧ್ಯೆ ಹೊರ ರಾಜ್ಯಗಳಿಂದ ಕಳ್ಳ ದಾರಿಗಳ ಮೂಲಕ ಎಂಟ್ರಿ- ಕೊರೊನಾ ಹೊತ್ತು ತರುವ ಆತಂಕ
ಕೋಲಾರ: ಎರಡು ರಾಜ್ಯಗಳನ್ನು ಸಂಪರ್ಕಿಸುವ ಗಡಿ ಜಿಲ್ಲೆಯ ಎಲ್ಲ ದಾರಿಗಳು ಕೊರೊನಾ ಆತಂಕದಿಂದ ಬಂದ್ ಆಗಿವೆ. ಆದರೆ ಹೊರ ರಾಜ್ಯದ ಜನ ಮಾತ್ರ ಗಡಿಗಳಲ್ಲಿ ಕಳ್ಳಾಟ ನಡೆಸುತ್ತಿದ್ದಾರೆ. ರಸ್ತೆ ಬಂದ್ ಮಾಡಿ, ಚೆಕ್ ಪೋಸ್ಟ್ ಗಳನ್ನು ನಿರ್ಮಾಣ ಮಾಡಿದ್ದರೂ, ಹಳ್ಳಿಗಳು, ಕಾಡು ಮೇಡುಗಳ ಕಳ್ಳ ದಾರಿಯ ಮೂಲಕ ಹೊರ ರಾಜ್ಯದ ಜನ ನುಸುಳುತ್ತಿದ್ದಾರೆ. ಬಂಗಾರಪೇಟೆ ತಾಲೂಕು ಕನಮನಹಳ್ಳಿ ಸೇರಿದಂತೆ ಕೆಜಿಎಫ್ ತಾಲೂಕು ವೆಂಕಟಾಪುರ, ಕೆಂಪಾಪುರ, ಮುಳಬಾಗಲು ತಾಲೂಕಿನ ನಂಗಲಿ, ಬೈರಕೂರು, …
Read More »ಬೆಳಗಾವಿಯ ಕಾಂಗ್ರೆಸ್ ಭವನದಲ್ಲಿನೂತನವಾಗಿ ಆರಂಭಿಸಿರುವ “ಕೋವಿಡ್-19 ಹೆಲ್ಪ್ ಲೈನ್ ಸರ್ವೀಸ್ ಸೆಂಟರ್” ಗೆ ಚಾಲನೆ :
ಬೆಳಗಾವಿಯ ಕಾಂಗ್ರೆಸ್ ಭವನದಲ್ಲಿ ಜಿಲ್ಲಾ ಗ್ರಾಮೀಣ ಕಾಂಗ್ರೆಸ್ ಸಮಿತಿಯಿಂದ ನೂತನವಾಗಿ ಆರಂಭಿಸಿರುವ “ಕೋವಿಡ್-19 ಹೆಲ್ಪ್ ಲೈನ್ ಸರ್ವೀಸ್ ಸೆಂಟರ್” ಗೆ ಇಂದು ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ ಶಾಸಕರಾದ ಲಕ್ಷ್ಮಿ ಹೆಬ್ಬಾಳಕರ್, ಮಹಾಂತೇಶ ಕೌಜಲಗಿ, ಮಾಜಿ ಶಾಸಕ ಅಶೋಕ ಪಟ್ಟಣ, ಜಿಲ್ಲಾ ಗ್ರಾಮೀಣ ಕಾಂಗ್ರೆಸ್ ಸಮಿತಿ ಅಧ್ಯಕ್ಷ ವಿನಯ ನಾವಲಗಟ್ಟಿ , ವಿಶ್ವಾಸ ವೈದ್ಯ ಸೇರಿ ಇನ್ನಿತರರು ಉಪಸ್ಥಿತರಿದ್ದರು. “ಕೋವಿಡ್ ಸೋಂಕಿತರಿಗೆ ಔಷಧಿ ವಿತರಣೆ, ಸಲಹೆ, ಸೂಚನೆಗಳನ್ನು ನೀಡುವುದು, ಸೋಂಕಿತರನ್ನು …
Read More »
Laxmi News 24×7