Breaking News

ರಾಜ್ಯ

ಪುತ್ರನನ್ನು ಕಳೆದುಕೊಂಡ ತಂದೆ-1 ಕೋಟಿ ಪರಿಹಾರ ಕೊಟ್ಟ ಕೇಜ್ರಿವಾಲ್

ನವದೆಹಲಿ: ಕೊರೊನಾ ವಾರಿಯರ್ ಆಗಿರುವ ವೈದ್ಯರೊಬ್ಬರು ಕೋವಿಡ್‍ಗೆ ಬಲಿಯಾಗಿದ್ದು, ಅವರ ಕುಟುಂಬಕ್ಕೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಬರೋಬ್ಬರಿ 1ಕೋಟಿ ರೂಪಾಯಿ ಹಣವನ್ನು ಪರಿಹಾರವಾಗಿ ಕೊಟ್ಟಿದ್ದಾರೆ. ಡಾ. ಅನಾಸ್(26) ಮೃತ ವೈದ್ಯರಾಗಿದ್ದಾರೆ. ಇವರು ಕೊರೊನಾ ಸೋಂಕಿನಿಂದ ಇತ್ತೀಚೆಗಷ್ಟೇ ಮೃತಪಟ್ಟಿದ್ದರು. ಇವರ ಕುಟುಂಬಕ್ಕೆ ಅರವಿಂದ್ ಕೇಜ್ರಿವಾಲ್ ಅವರು ಸಹಾಯವನ್ನು ಮಾಡಿದ್ದಾರೆ. ಮೃತ ಡಾ. ಅನಾಸ್ ಅವರ ಮನೆಗೆ ಭೇಟಿನೀಡಿ ಅವರ ತಂದೆಗೆ ಸಾಂತ್ವನ ಹೇಳಿರುವ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು …

Read More »

ದಲಿತ ಯುವಕನಿಗೆ ಮೂತ್ರ ಕುಡಿಸಿದ ಆರೋಪ: ಪಿಎಸ್​ಐ ವಿರುದ್ಧ ಎಫ್​ಐಆರ್​ ದಾಖಲು

ಚಿಕ್ಕಮಗಳೂರು: ದಲಿತ ಯುವಕನಿಗೆ ಮೂತ್ರ ಕುಡಿಸಿದ ಆರೋಪ ಪ್ರಕರಣ ಸಂಬಂಧ ಮೂಡಿಗೆರೆ ತಾಲೂಕಿನ ಗೋಣಿಬೀಡು ಪಿಎಸ್​ಐ ಅರ್ಜುನ್​ ವಿರುದ್ಧ ಶನಿವಾರ ಎಫ್​ಐಆರ್​ ದಾಖಲಾಗಿದೆ. ಯುವಕ ಪುನೀತ್ ನೀಡಿರುವ ದೂರಿನನ್ವಯ ಪ್ರಕರಣ ದಾಖಲಾಗಿದೆ. ಪುನೀತ್​ ಮೂಡಿಗೆರೆ ತಾಲೂಕಿನ ಕಿರುಗುಂದ ಗ್ರಾಮದ ನಿವಾಸಿ. ವಿವಾಹಿತ ಮಹಿಳೆಗೆ ಫೋನ್​ ಮಾಡಿದ ಆರೋಪ ಮೇಲೆ ಪುನೀತ್​ನನ್ನು ವಿಚಾರಣೆಗಾಗಿ ಅರ್ಜುನ್​ ಠಾಣೆಗೆ ಕರೆದೊಯ್ದಿದ್ದರು. ವಿಚಾರಣೆ ಸಂದರ್ಭದಲ್ಲಿ ಜಾತಿನಿಂದನೆ ಮಾಡಿ, ಮೂತ್ರ ಕುಡಿಸಿದ್ದಾರೆಂದು ಅರ್ಜುನ್​ ವಿರುದ್ಧ ಪುನೀತ್​ ಗಂಭೀರ …

Read More »

ದೇಶದಲ್ಲಿ ಕರ್ನಾಟಕವೇ ಸಕ್ರಿಯ ಕೋವಿಡ್ -19 ಪ್ರಕರಣಗಳ ಸಂಖ್ಯೆಯಲ್ಲಿ ಅಗ್ರ ಸ್ಥಾನ

ನವದೆಹಲಿ: ಕಳೆದ 24 ಗಂಟೆಯ ಕೊರೊನಾವೈರಸ್ ಸಕ್ರಿಯ ಪ್ರಕರಣಗಳನ್ನು ತೋರಿಸುವ ಸರ್ಕಾರದ ವಿವಿಧ ರಾಜ್ಯಗಳು ಮತ್ತು ಯುಟಿಗಳಲ್ಲಿ ಸಕ್ರಿಯ ಕೋವಿಡ್ -19 ಪ್ರಕರಣಗಳ ಸಂಖ್ಯೆಯನ್ನು ಸೂಚಿಸಲು ಕೇಂದ್ರವು ಶನಿವಾರ ನಕ್ಷೆಯನ್ನು ಹಂಚಿಕೊಂಡಿದೆ. ಅದರಂತೆ, ಒಂದು ಲಕ್ಷಕ್ಕೂ ಹೆಚ್ಚು ಸಕ್ರಿಯ ಕೋವಿಡ್ -19 ಪ್ರಕರಣಗಳನ್ನು ಹೊಂದಿರುವ ಎಂಟು ರಾಜ್ಯಗಳಲ್ಲಿ ಕರ್ನಾಟಕ ಮೊಡಲಸ್ಥನ ಹೊಂದಿದೆ. ಅದರಂತೆ ಕರ್ನಾಟಕ 5.14 ಲಕ್ಷ ಸಕ್ರಿಯ ಪ್ರಕರಣಗಳನ್ನು ಹೊಂದಿದ್ದು, ಮಹಾರಾಷ್ಟ್ರ 3.69 ಲಕ್ಷ , ಕೇರಳ 3.06 …

Read More »

ಕೊರೋನಾ ಸೋಂಕಿತರಿಗೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರಿಂದ ಔಷಧ ಕಿಟ್ ವಿತರಣೆ

  ಮೂಡಲಗಿ: ಕೊರೋನಾ ಎರಡನೇ ಅಲೆಗೆ ಬ್ರೇಕ್ ನೀಡಲು ಸಂಕಲ್ಪ ತೊಟ್ಟಿರುವ ಕಹಾಮ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಗೋಕಾಕ್ ಹಾಗೂ ಮೂಡಲಗಿ ತಾಲ್ಲೂಕಿನ ಸೋಂಕಿತರಿಗೆ ಔಷಧೀಯ ಕಿಟ್ ಗಳನ್ನು ವಿತರಿಸಲಾಯಿತು. ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದ ಕೊವಿಡ್ ಕಾಳಜಿ ಕೇಂದ್ರದಲ್ಲಿ ಶನಿವಾರ ನಡೆದ ಸರಳ ಕಾರ್ಯಕ್ರಮದಲ್ಲಿ ಶಾಸಕರ ಪರವಾಗಿ ಅವರ ಆಪ್ತ ಸಹಾಯಕ ನಾಗಪ್ಪ ಶೇಖರಗೋಳ ಅವರು ವೈದ್ಯಾಧಿಕಾರಿಗಳಿಗೆ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಗೋಕಾಕ್ …

Read More »

ದೇಶಾದ್ಯಂತ ಕೊರೊನಾ 2ನೇ ಅಟ್ಟಹಾಸ 420 ವೈದ್ಯರು ಕೊರೊನಾಗೆ ಬಲಿ

ನವದೆಹಲಿ: ದೇಶಾದ್ಯಂತ ಕೊರೊನಾ 2ನೇ ಅಟ್ಟಹಾಸ ಹೆಚ್ಚುತ್ತಿದ್ದು, ಕೊರೊನಾ ಸೋಂಕಿತರಿಗೆ ಚಿಕಿತ್ಸೆ ನೀಡುತ್ತಿದ್ದ ವೈದ್ಯರುಗಳೇ ಸೋಂಕಿಗೆ ಬಲಿಯಾಗುತ್ತಿದ್ದಾರೆ. ಕೊರೊನಾ 2ನೇ ಅಲೆಯಲ್ಲಿ ದೇಶದಲ್ಲಿ ಈವರೆಗೆ ಬರೋಬ್ಬರಿ 420 ವೈದ್ಯರು ಸೋಂಕಿಗೆ ಸಾವನ್ನಪ್ಪಿದ್ದಾರೆ. ಇದರಲ್ಲಿ 100 ವೈದ್ಯರು ದೆಹಲಿಯೊಂದರಲ್ಲಿಯೇ ಮೃತಪಟ್ಟಿದ್ದಾರೆ ಎಂದು ಭಾರತೀಯ ವೈದ್ಯಕೀಯ ಮಂಡಳಿ (IMA) ಮಾಹಿತಿ ನೀಡಿದೆ. ಕೊರೊನಾ ವಿರುದ್ಧದ ಹೋರಾಟದಲ್ಲಿ ಮುಂಚೂಣಿಯಲ್ಲಿರುವ ವೈದ್ಯರು, ವೈದ್ಯಕೀಯ ಸಿಬ್ಬಂದಿಗಳು ಮಹಾಮಾರಿಗೆ ತುತ್ತಾಗುತ್ತಿರುವುದು ದುರಂತ.

Read More »

ಖಾಸಗಿ ವ್ಯಕ್ತಿಗಳೊಂದಿಗೆ ಸೇರಿ ಪೊಲೀಸನಿಂದ ಹಗಲು ದರೋಡೆ;

ಅಥಣಿ): ಖಾಸಗಿ ವ್ಯಕ್ತಿಗಳೊಂದಿಗೆ ಕಾರಲ್ಲಿ ಬಂದು ಬೈಕ್ ಸೀಜ್ ಮಾಡುವ ಬೆದರಿಕೆಯೊಡ್ಡಿ ರಸೀದಿ ನೀಡದೆ ಹಣ ಸುಲಿಗೆ ಮಾಡುತ್ತಿದ್ದ ಐಗಳಿ ಠಾಣೆಯ ಪೋಲಿಸ್ ಪೇದೆ ಸಂಗಪ್ಪ ನಾಯಕ ಇವರನ್ನು ಜನ ಮುತ್ತಿಗೆ ಹಾಕಿ ತರಾಟೆಗೆ ತೆಗೆದುಕೊಂಡ ಘಟನೆ ಶನಿವಾರ ಬೆಳಗ್ಗೆ ನಡೆದಿದೆ.       ಸಮೀಪದ ಕೊಟ್ಟಲಗಿ ಗ್ರಾಮದಲ್ಲಿ ಎರಡು ದಿನಗಳಿಂದ ಹಣ ವಸೂಲಿಗಿಳಿದಿದ್ದ ಪೋಲಿಸ್‍, ಶನಿವಾರ ಬೆಳಗ್ಗೆ ಹಾಲು ಹಾಕಲು ಬಂದಿದ್ದ ರೈತನೋರ್ವನಿಗೆ ಕೋಲಿನಿಂದ ಥಳಿಸಿದ್ದಾನೆ. ಮೊಣಕೈ …

Read More »

ಕೋವಿಡ್ ಕೇರ್ ಸೆಂಟರ್‌ನಿಂದ ಸೋಂಕಿತ ವ್ಯಕ್ತಿ ಪರಾರಿ: ಸ್ಥಳೀಯರಿಗೆ ಆತಂಕ

ಗದಗ: ಜಿಲ್ಲೆಯ ವರವಿ ಗ್ರಾಮದಲ್ಲಿ ಜಿಲ್ಲಾಡಳಿತ ಆರಂಭಿಸಿರುವ ಕೋವಿಡ್ ಕೇರ್ ಸೆಂಟರ್‌ನಿಂದ ಸೋಂಕಿತ ವ್ಯಕ್ತಿಯೊಬ್ಬರು ಪರಾರಿಯಾಗಿದ್ದು, ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಉತ್ತರ ಪ್ರದೇಶ ವಿಷ್ಣುಪುರ ಜಿಲ್ಲೆ ದೊರಿಯಾ ಗ್ರಾಮದ ಆಜಾದ್ ಚವ್ಹಾಣ್ (28 ವ) ಎಂಬಾತನಿಗೆ ಇತ್ತೀಚೆಗೆ ಕೋವಿಡ್ ಸೋಂಕು ದೃಢಪಟ್ಟಿತ್ತು. ಸೋಂಕಿತ ವ್ಯಕ್ತಿ ಸ್ಥಳೀಯ ರಸ್ತೆ ಕಾಮಗಾರಿಯಲ್ಲಿ ಕಾರ್ಮಿನಾಗಿದ್ದರಿಂದ ಸೂಕ್ತ ವಸತಿ, ಪೌಷ್ಠಿಕ ಆಹಾರ ಮತ್ತು ವೈದ್ಯಕೀಯ ಸೌಲಭ್ಯ ಕಲ್ಪಿಸುವ ಉದ್ದೇಶದಿಂದ ಮೇ 20 ರಂದು ಕೇರ್ ಸೆಂಟರ್‌ಗೆ …

Read More »

ಆಮ್ಲಜನಕ ಘಟಕದ ಕಾಮಗಾರಿಗೆ ಶಂಕುಸ್ಥಾಪನೆ , 20 ದಿನದಲ್ಲಿ ಕಾಮಗಾರಿ ಪೂರ್ಣಗೊಳಿಸುವ ಭರವಸೆ

ಬೆಳಗಾವಿ – ಬೆಳಗಾವಿ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಆವರಣದಲ್ಲಿ ಪ್ರತಿ ನಿಮಿಷಕ್ಕೆ 700 ಲೀಟರ್ ಆಮ್ಲಜನಕವನ್ನು ಉತ್ಪಾದಿಸುವ ಆಧುನಿಕ ತಂತ್ರಜ್ಞಾನವನ್ನು ಹೊಂದಿದೆ ಘಟಕಕ್ಕೆ ಇಂದು ಶಾಸಕರುಗಳಾದ  ಅಭಯ ಪಾಟೀಲ ಹಾಗೂ  ಅನೀಲ‌ ಬೆನಕೆ  ಶಂಕುಸ್ಥಾಪನೆ ನೆರವೇರಿಸಿದ್ದಾರೆ. ಎಲ್&ಟಿ ಕಂಪನಿಯ ವತಿಯಿಂದ ನಿರ್ಮಾಣಗೊಳ್ಳುವ ಈ ಘಟಕವು ಸುಮಾರು 60 ಲಕ್ಷ ರೂಪಾಯಿಗಳ ಅಂದಾಜು ಮೊತ್ತವಾಗಿದ್ದು, 50 ಚದರ‌ ಅಡಿಯ ಜಾಗದಲ್ಲಿ ಈ ಯಂತ್ರವನ್ನು ಅಳವಡಿಸಲಾಗುವುದು. ಇದರಿಂದ ಸುಮಾರು 50 ರಿಂದ 60 ಹಾಸಿಗೆಗಳಿಗೆ …

Read More »

ಕೊರೊನಾ ಸೋಂಕಿಗೆ ಆಯುರ್ವೇದ ಔಷಧ : ವೈದ್ಯನ ಮನೆ ಮುಂದೆ ಮುಗಿಬಿದ್ದ ಜನರು

ಹೈದರಾಬಾದ್: ಕೊರೊನಾ ಸೋಂಕಿಗೆ ವೈದ್ಯರೊಬ್ಬರು ಆಯುರ್ವೇದ ಔಷಧವೊಂದನ್ನು ಕಂಡುಹಿಡಿದಿದ್ದು, ಔಷಧಕ್ಕಾಗಿ ಜನರು ವೈದ್ಯನ ಮನೆ ಮುಂದೆ ಮುಗಿಬಿದ್ದ ಘಟನೆ ಆಂಧ್ರಪ್ರದೇಶದ ನೆಲ್ಲೂರು ಜಿಲ್ಲೆಯಲ್ಲಿ ನಡೆದಿದೆ. ಆಯುರ್ವೇದ ವೈದ್ಯ ಆನಂದಯ್ಯ ಎಂಬುವವರು ಕೊರೊನಾ ಸೋಂಕಿಗೆ ಔಷಧವನ್ನು ಕಂಡು ಹಿಡಿದಿದ್ದು, ಸೋಂಕಿತರ ಚಿಕಿತ್ಸೆಗಾಗಿ ಈ ಔಷಧ ನೀಡುತ್ತಿದ್ದಾರೆ. ಇನ್ನು ಔಷಧಿಗಾಗಿ ಜನರು ಆಗಮಿಸುತ್ತಿದ್ದು, ಸ್ಥಳದಲ್ಲಿ 10 ಸಾವಿರಕ್ಕೂ ಅಧಿಕ ಜನರು ಕಿಲೋಮೀಟರ್ ಗಟ್ಟಲೇ ಉದ್ದ ಸರತಿ ಸಾಲಿನಲ್ಲಿ ನಿಂತಿದ್ದು, ಈ ವಿಡಿಯೋ ಸಾಮಾಜಿಕ …

Read More »

ಡಾಕ್ಟರ್ ಆದ ಫಾರ್ಮಸಿಸ್ಟ್‍ಗೆ ಖಾಕಿ ಟ್ರಿಟ್ಮೆಂಟ್ !

ಚಿತ್ರದುರ್ಗ :ಸರ್ಕಾರಿ ಆಸ್ಪತ್ರೆಯಲ್ಲಿ ಫಾರ್ಮ್ ಸಿಸ್ಟ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ವ್ಯಕ್ತಿಯೊಬ್ಬ ನಡೆಸುತಿದ್ದ ಖಾಸಗಿ ಕ್ಲಿನಿಕ್ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಹಿರಿಯೂರು ತಾಲೂಕಿನ ಜವನಗೊಂಡನಹಳ್ಳಿ ಗ್ರಾಮದಲ್ಲಿ ಖಾಸಗಿ ಕ್ಲಿನಿಕ್ ನಡೆಸುತ್ತಿದ್ದ ವಿವೇಕಾನಂದನನ್ನು ಬಂಧಿಸಲಾಗಿದೆ. ಖಚಿತ ಮಾಹಿತಿ ಮೇರೆಗೆ ಅಧಿಕಾರಿಗಳ ತಂಡ ಶುಕ್ರವಾರ ತಡರಾತ್ರಿ ದಾಳಿ ನಡೆಸಿದೆ. ದಾಳಿ ವೇಳೆ ಸಾವಿರಾರು ರೂ. ಮೌಲ್ಯದ ಔಷಧಿಗಳು ಹಾಗೂ ನಗದು ವಶಪಡಿಸಿಕೊಂಡಿದ್ದಾರೆ. ಹಿರಿಯೂರಿನ ಸಾರ್ವಜನಿಕ ಆಸ್ಪತ್ರೆಯಲ್ಲಿ ಫಾರ್ಮಾಸಿಸ್ಟ್ ಆಗಿ ಕರ್ತವ್ಯ ನಿರ್ವಹಿಸುತ್ತಿರುವ …

Read More »