ನವದೆಹಲಿ : ಯುನೈಟೆಡ್ ಸ್ಟೇಟ್ಸ್ ಮತ್ತು ಕೆನಡಾದ ನಂತರ, ಸಿಂಗಾಪುರ ಮತ್ತು ಯುನೈಟೆಡ್ ಅರಬ್ ಎಮಿರೇಟ್ಸ್ 12-15 ವಯೋಮಾನದ ತುರ್ತು ಬಳಕೆಗಾಗಿ ಫೈಜರ್-ಬಯೋಎನ್ ಟೆಕ್ ಕೋವಿಡ್-19 ಲಸಿಕೆಯನ್ನು ಅನುಮೋದಿಸಿವೆ. ಯುರೋಪಿಯನ್ ವೈದ್ಯಕೀಯ ಏಜೆನ್ಸಿಯು ಮಕ್ಕಳಲ್ಲಿ ಫೈಜರ್ ಲಸಿಕೆಯ ಬಳಕೆಯನ್ನು ಪರಿಶೀಲಿಸುವ ಪ್ರಕ್ರಿಯೆಯಲ್ಲಿದೆ. ಕೊರೊನಾ ವೈರಸ್ ನ ಹೆಚ್ಚು ಟ್ರಾನ್ಸ್ ಮಿಸಿಬಲ್ ರೂಪಾಂತರಗಳು ಹೊರಹೊಮ್ಮುತ್ತಿರುವುದರಿಂದ ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಕೆಲವು ದೇಶಗಳು ಮಕ್ಕಳಲ್ಲಿ ಹೆಚ್ಚಿನ ಸೋಂಕುಗಳನ್ನು ನೋಡುತ್ತಿರುವ ನಡುವೆ …
Read More »ದೆಹಲಿಯಲ್ಲಿ ಕೊರೊನಾ ಪ್ರಕರಣಗಳ ಇಳಿಕೆ: ಮೂರನೇ ಅಲೆ ಎದುರಿಸಲು ಸಿದ್ಧತೆ
ದೆಹಲಿ, ಮೇ 20: ಕಳೆದ ನಾಲ್ಕು ವಾರಗಳ ಹಿಂದೆ ದೇಶದ ರಾಜಧಾನಿ ದೆಹಲಿ ಕೊರೊನಾ ವೈರಸ್‌ನಿಂದ ತತ್ತರಿಸಿಹೋಗಿತ್ತು. ಎರಡನೇ ಅಲೆ ದೇಶಾದ್ಯಂತ ದೊಡ್ಡ ಆಘಾತವನ್ನು ನೀಡುತ್ತಿರುವಂತೆಯೇ ದೆಹಲಿ ಆಸ್ಪತ್ರೆಗಳಲ್ಲಿಯೂ ಆಕ್ಸಿಜನ್, ಬೆಡ್ ಸಮಸ್ಯೆಗಳು ಭಾರೀ ಪ್ರಮಾಣದಲ್ಲಿ ತಲೆದೂರಿತ್ತು. ಆದರೆ ಸದ್ಯ ಕೊರೊನಾ ವೈರಸ್ ಪ್ರಕರಣಗಳು ದೆಹಲಿಯಲ್ಲಿ ಕಡಿಮೆಯಾಗುತ್ತಿದೆ. ಹೀಗಾಗಿ ದೆಹಲಿ ಸರ್ಕಾರ ಮೂರನೇ ಅಲೆ ಎದುರಿಸಲು ಸಿದ್ಧತೆಗಳನ್ನು ಆರಂಭಿಸಿದೆ. ಬುಧವಾರ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಮೂರನೇ ಅಲೆ ಎದುರಿಸಲು …
Read More »ಕೊರೊನಾವೈರಸ್: ಹೊಸ ಪ್ರಕರಣಗಳ ಇಳಿಕೆ, ಗುಣಮುಖರ ಸಂಖ್ಯೆ ಏರಿಕೆ!
ನವದೆಹಲಿ, ಮೇ 20: ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಎರಡನೇ ಅಲೆಯಿಂದ ತತ್ತರಿಸಿದ ಭಾರತದಲ್ಲಿ ಮಹಾಮಾರಿ ಕೊಂಚ ನಿಯಂತ್ರಣಕ್ಕೆ ಬಂದಿದೆ. ದೇಶದಲ್ಲಿ ಹೊಸ ಸೋಂಕಿತ ಪ್ರಕರಣಕ್ಕಿಂತ ಗುಣಮುಖರ ಸಂಖ್ಯೆ ಏರುಮುಖವಾಗಿದೆ. ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 2,76,070 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಇದೇ ಅವಧಿಯಲ್ಲಿ 3,69,077 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಒಂದು ದಿನದಲ್ಲಿ ಮಹಾಮಾರಿಗೆ 3,874 ಮಂದಿ ಬಲಿಯಾಗಿದ್ದಾರೆ. ಭಾರತದಲ್ಲಿ ಒಟ್ಟು 2,57,72,400 …
Read More »ಮನೆಯಿಂದ ಹೊರ ಬರುವ ಮುನ್ನ ಎಚ್ಚರ: ಬಿಗಿ ಕ್ರಮಕ್ಕೆ ಪೊಲೀಸರಿಗೆ ಗೃಹ ಸಚಿವರ ಸೂಚನೆ
ಬೆಂಗಳೂರು: ಇನ್ನು ಮುಂದೆ ಅನಗತ್ಯವಾಗಿ ಮನೆಯಿಂದ ವಾನಹದೊಂದಿಗೆ ಹೊರಬಂದರೆ ವಾಹನದ ಆಸೆ ಬಿಟ್ಟು, ಕೇಸು ಹಾಕಿಸಿಕೊಳ್ಳಲು ಸಿದ್ದರಾಗಿ. ಯಾಕೆಂದರೆ ಇಂತಹ ಸೂಚನೆಯನ್ನು ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರು ಪೊಲೀಸರಿಗೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಜಾಸ್ತಿಯಾಗುತ್ತಿದೆ. ಜನರು ಕೋವಿಡ್ ನಿಯಮ ಪಾಲನೆ ಮಾಡುತ್ತಿಲ್ಲ. ಜಿಲ್ಲೆಯಲ್ಲಿ ನಾಲ್ಕು ದಿನ ಸಂಪೂರ್ಣ ಲಾಕ್ ಡೌನ್ ಇದ್ದರೂ ಜನ ಅನಗತ್ಯ ಓಡಾಟ ನೆಡೆಸುತ್ತಿದ್ದಾರೆ. ಇದರಿಂದ ಲಾಕ್ ಡೌನ್ …
Read More »ಮೇ 25ರವರೆಗೆ ಹಾವೇರಿ ಜಿಲ್ಲೆಯಲ್ಲಿ ಸಂಪೂರ್ಣ ಲಾಕ್‌ಡೌನ್
ಹಾವೇರಿ, ಮೇ 20: ಏಲಕ್ಕಿ ನಾಡು ಹಾವೇರಿಯಲ್ಲಿ ಕೊರೊನಾ ಸೋಂಕು ಪ್ರಕರಣಗಳು ಹೆಚ್ಚುತ್ತಿರುವ ಕಾರಣದಿಂದಾಗಿ ಕಠಿಣ ಲಾಕ್‌ಡೌನ್‌ಗೆ ಹಾವೇರಿ ಜಿಲ್ಲಾಡಳಿತ ಮುಂದಾಗಿದೆ. ಜಿಲ್ಲಾದ್ಯಂತ ಕೋವಿಡ್ ಎರಡನೇ ಅಲೆ ನಿಯಂತ್ರಿಸುವ ಸಲುವಾಗಿ ಈ ಕುರಿತು ಆದೇಶ ಹೊರಡಿಸಿರುವ ಹಾವೇರಿ ಜಿಲ್ಲಾಧಿಕಾರಿ ಎಸ್.ಬಿ ಶೆಟ್ಟೆಣ್ಣನವರ ಅವರು ಇದೇ ಮೇ 21ರಿಂದ ಮೇ 25ರ ತನಕ ಹಾವೇರಿ ಜಿಲ್ಲೆಯಲ್ಲಿ ಎರಡು ಹಂತದಲ್ಲಿ ಸಂಪೂರ್ಣ ಲಾಕ್‌ಡೌನ್ ಜಾರಿಗೆ ತರಲಾಗಿದೆ ಎಂದು ತಿಳಿಸಿದ್ದಾರೆ. ಮೊದಲ ಹಂತದಲ್ಲಿ ಮೇ …
Read More »ಕೊರೊನಾದಿಂದ ಗುಣಮುಖರಾದವರಿಗೆ ಸಿಹಿ ಹಂಚಿ, ಪುಷ್ಪವೃಷ್ಟಿ ಮಾಡಿದ ಶಾಸಕ ರೇಣುಕಾಚಾರ್ಯ
ದಾವಣಗೆರೆ: ಕೊರೊನಾ ಎರಡನೇ ಅಲೆ ವೇಗವಾಗಿ ಹಬ್ಬುತ್ತಿದೆ. ಕೊರೊನಾ ಸೋಂಕಿತರನ್ನು ಸೂಕ್ತ ರೀತಿಯಿಂದ ನೋಡಿಕೊಳ್ಳಲು ಸರ್ಕಾರ ವಿವಿಧ ರೀತಿಯಲ್ಲಿ ಶ್ರಮಿಸುತ್ತಿದೆ. ಆದರೂ ಸಾಮಾಜಿಕವಾಗಿ ಕೊರೊನಾ ಸೋಂಕಿತರನ್ನು ಕಾಣುವ ವಿಧಾನ ಹಲವೆಡೆ ಅಷ್ಟೊಂದು ಉತ್ತಮವಾಗಿಲ್ಲ. ಈ ಮಧ್ಯೆ ಬಿಜೆಪಿ ಶಾಸಕ ರೇಣುಕಾಚಾರ್ಯ ಕೊರೊನಾ ಸೋಂಕಿತರಿಗೆ ವಿವಿಧ ರೀತಿಯ ಬೆಂಬಲ, ಧೈರ್ಯ ನೀಡುತ್ತಿದ್ದಾರೆ. ಅಂಥದ್ದೇ ಒಂದು ಘಟನೆ ಜಿಲ್ಲೆಯಲ್ಲಿ ಇಂದು ನಡೆದಿದೆ. ಕೊರೊನಾದಿಂದ ಗುಣಮುಖರಾದವರಿಗೆ ಶಾಸಕರು ಪುಷ್ಪವೃಷ್ಟಿ ಸುರಿಸಿದ್ದಾರೆ. ಹೊನ್ನಾಳಿ ಕ್ಷೇತ್ರದ ಶಾಸಕ …
Read More »24 ರ ನಂತರ ಲಾಕ್ ಡೌನ್ ವಿಸ್ತರಣೆ ಬಗ್ಗೆ ಸಿಎಂ ಹೇಳಿದ್ದು ಇದು
ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ಮೇ.24ರ ನಂತ್ರ ಕೊರೋನಾ ನಿಯಂತ್ರಣಕ್ಕಾಗಿ ಲಾಕ್ ಡೌನ್ ವಿಸ್ತರಣೆ ಕುರಿತಂತೆ ಅಂದೇ ನಿರ್ಧಾರ ಪ್ರಕಟಿಸೋದಾಗಿ ಸಿಎಂ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ. ಈ ಕುರಿತಂತೆ ಸಚಿವರೊಂದಿಗೆ ಸಭೆ ನಡೆಸಿದ ಬಳಿಕ, ಸುದ್ದಿಗೋಷ್ಠಿ ನಡೆಸಿ ಮಾತನಾಡಿದಂತ ಅವರು, ಕೋವಿಡ್ 19 ಸಾಂಕ್ರಾಮಿಕ 2ನೇ ಅಲೆಯ ತೀವ್ರತೆಯಿಂದಾಗಿ ಹೆಚ್ಚುತ್ತಿರುವಂತ ಸೋಂಕಿತರ ಸಂಖ್ಯೆ ನಿಯಂತ್ರಿಸುವ ಸಲುವಾಗಿ ಮೇ.24ರವರೆಗೆ ವಾಣಿಜ್ಯ ಮತ್ತು ಇತರೆ …
Read More »ಕೇಂದ್ರ ಹಾಗೂ ರಾಜ್ಯ ಸರ್ಕಾರಗಳೆರಡರ ಮೇಲೆಯೂ ನಮಗೆ ನಂಬಿಕೆ ಹೋಗಿದೆ. ಹಳೆಯ ಪ್ಯಾಕೇಜ್ನ ಪರಿಹಾರ ಧನವನ್ನ ಸರಿಯಾಗಿ ನೀಡಿದ್ರೆ ಮಾತ್ರ ಈ ಪ್ಯಾಕೇಜ್ನ್ನು ನಂಬಬಹುದು: ಸತೀಶ್ ಜಾರಕಿಹೊಳಿ
ರಾಜ್ಯ ಸರ್ಕಾರ ಘೋಷಣೆ ಮಾಡಿದ ಕೊರೊನಾ ವಿಶೇಷ ಪ್ಯಾಕೇಜ್ಗೆ ವಿರೋಧ ಪಕ್ಷದ ನಾಯಕರು ಒಬ್ಬರಾದ ಮೇಲೆ ಒಬ್ಬರಂತೆ ಅಸಮಾಧಾನ ಹೊರಹಾಕ್ತಿದ್ದಾರೆ. ಇದೀಗ ಈ ಸಾಲಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಸಹ ಸೇರಿದ್ದು ಇದು ವಿಪಕ್ಷಗಳ ಒತ್ತಡಕ್ಕೆ ಮಣಿದು ಕಾಟಾಚರಕ್ಕೆ ತಂದ ಪ್ಯಾಕೇಜ್ ಆಗಿದೆ ಎಂದು ವ್ಯಂಗ್ಯವಾಡಿದ್ರು. ಬೆಳಗಾವಿಯಲ್ಲಿ ಈ ವಿಚಾರವಾಗಿ ಮಾತನಾಡಿದ ಅವರು ಮೊದಲು ನೀವು ನಿಮ್ಮ ಹಳೆಯ ಪ್ಯಾಕೇಜ್ನ ಲೆಕ್ಕಾಚಾರವನ್ನ ಕೊಡಿ. ಕಳೆದ ಬಾರಿ ನೀವು ಆಟೋ …
Read More »ಕರೆ ಮಾಡಿ ಸಹಾಯ ಕೇಳಿದ ಮಹಿಳೆ, ಮಂಚಕ್ಕೆ ಕರೆದ ಭೂಪ
ಗದಗ: ಗಂಡನಿಗೆ ಕೆಲಸ ಕೊಡಿಸುವಂತೆ ಸಹಾಯ ಕೇಳಿದ ಮಹಿಳೆಯನ್ನು ಮುಖಂಡನೊಬ್ಬ ಮಂಚಕ್ಕೆ ಆಹ್ವಾನಿಸಿದ್ದು, ಪೊಲೀಸರಿಗೆ ದೂರು ನೀಡಲಾಗಿದೆ. ಗದಗ ತಾಲೂಕಿನ ಹುಯಿಲಗೋಳ ಗ್ರಾಮ ಪಂಚಾಯಿತಿ ಸದಸ್ಯೆಯ ಪತಿ ವಿರುದ್ಧ ಇಂತಹ ಆರೋಪ ಕೇಳಿಬಂದಿದೆ. ಗ್ರಾಮ ಪಂಚಾಯಿತಿಯಲ್ಲಿ 18 ವರ್ಷಗಳಿಂದ ಕೆಲಸ ಮಾಡುತ್ತಿದ್ದ ವ್ಯಕ್ತಿಗೆ ಎರಡು ತಿಂಗಳ ಹಿಂದೆ ಕೈಗೆ ಪೆಟ್ಟಾಗಿ ವಿಶ್ರಾಂತಿ ಪಡೆದಿದ್ದ. ಆತ ಸರಿಯಾಗಿ ಕೆಲಸ ಮಾಡದ ಕಾರಣ ಪಂಚಾಯಿತಿಯವರು ಕೆಲಸಕ್ಕೆ ಸರಿಯಾಗಿ ಬರದಿದ್ದ ಬರಬೇಡ ಎಂದು ಹೇಳಿದ್ದಾರೆ. …
Read More »ವರ್ಗಾವಣೆ ನಿರೀಕ್ಷೆಯಲ್ಲಿದ್ದ ಶಿಕ್ಷಕರಿಗೆ ಗುಡ್ ನ್ಯೂಸ್: ಶಿಕ್ಷಕರ ನೇಮಕಾತಿಗೆ ಸಚಿವ ಸುರೇಶ್ ಕುಮಾರ್ ಸೂಚನೆ
ಬೆಂಗಳೂರು: ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ಚುರುಕುಗೊಳಿಸುವಂತೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದು, ಲಾಕ್ಡೌನ್ ಮುಗಿದ ಕೂಡಲೇ ಶಿಕ್ಷಕರ ವರ್ಗಾವಣೆ ಮಾಡಲಾಗುವುದು. 6 ರಿಂದ 8 ನೇ ತರಗತಿ ಪದವೀಧರ ಶಿಕ್ಷಕರ ನೇಮಕಾತಿಗೆ ಸಂಬಂಧಿಸಿದಂತೆ ವೃಂದ ಮತ್ತು ನೇಮಕಾತಿ ನಿಯಮಗಳಿಗೆ ತಿದ್ದುಪಡಿ ತರಲು ಆದೇಶಿಸಿದ್ದು, ವಿಳಂಬವಾಗಿರುವ ಕಾರಣ ನೇಮಕಾತಿಗೆ ಯಾವುದೇ ಕ್ರಮ ಕೈಗೊಳ್ಳಲಾಗಿಲ್ಲ. ಈ ಹಿನ್ನೆಲೆಯಲ್ಲಿ ಕಾಲಮಿತಿಯೊಳಗೆ ನೇಮಕಾತಿಗೆ ಕ್ರಮ ಕೈಗೊಳ್ಳಲು …
Read More »
Laxmi News 24×7