ಮಂಗಳೂರು : ಎಂಜಿನ್ ಸಮಸ್ಯೆಯಿಂದ ಸಮುದ್ರದಲ್ಲಿ ಬೋಟ್ ವೊಂದು ಸಿಲುಕಿದ ಪರಿಣಾಮ ಅದರಲ್ಲಿದ್ದ ಮೂವರು ಮೀನುಗಾರರನ್ನು ಕರಾವಳಿ ಕಾವಲು ಪಡೆ ರಕ್ಷಣೆ ಮಾಡಿದೆ. ಕಣ್ಣೂರಿನಿಂದ 10 ನಾಟಿಕಲ್ ಮೈಲಿ ದೂರದಲ್ಲಿ ದೋಣಿ ಕೆಟ್ಟು ನಿಂತಿತ್ತು. ಈ ಕುರಿತು ಕರಾವಳಿ ಕಾವಲು ಪಡೆ ಸಿಬ್ಬಂದಿ ಮಾಹಿತಿ ಪಡೆದು, ವಿಕ್ರಮ್ ಹಡಗಿನೊಂದಿಗೆ ಕಾರ್ಯಾಚರಣೆ ನಡೆಸಿ, ಮೂವರನ್ನು ರಕ್ಷಿಸಲಾಗಿದೆ, ರಕ್ಷಿಸಿದ ಮೀನುಗಾರರಿಗೆ ಆಹಾರ, ವೈದ್ಯಕೀಯ ನೆರವು ನೀಡಲಾಗಿದೆ. ‘ತೌಕ್ತೆ ಚಂಡಮಾರುತದಿಂದ ಕರಾವಳಿಯಲ್ಲಿ ಶುಕ್ರವಾರ ರಾತ್ರಿಯಿಂದಲೇ …
Read More »ಕೋವಿಡ್ ಸೋಂಕಿಗೆ ತಂದೆ – ತಾಯಿ ಬಲಿ : ಅನಾಥವಾದ 5 ದಿನದ ಮಗು.!
ಮಂಡ್ಯ: ಕೋವಿಡ್ ಸೋಂಕಿನಿದ ತಂದೆ-ತಾಯಿ ಇಬ್ಬರು ಮೃತಪಟ್ಟ ಹಿನ್ನಲೆಯಲ್ಲಿ 5 ದಿನದ ಮಗು ಅನಾಥವಾದ ಕರುಣಾಜನಕ ಘಟನೆ ನಾಗಮಂಗಲ ತಾಲೂಕಿನ ದೊಡ್ಡೇನಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ನಂಜುಂಡೇಗೌಡ(45) ಹಾಗೂ ಪತ್ನಿ ಮಮತಾ(31) ಕೋವಿಡ್ ಸೋಂಕಿನಿಂದ ಮೃತಪಟ್ಟವರು. ನಂಜುಂಡೇಗೌಡ ಅವರಿಗೆ ಕೋವಿಡ್ ಸೋಂಕು ತಗುಲಿ ಬೆಂಗಳೂರಿನ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಕಳೆದ 15 ದಿನಗಳ ಹಿಂದೆ ಏ.30 ರಂದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದರು. ತುಂಬು ಗರ್ಭಿಣಿಯಾಗಿದ್ದ ಪತ್ನಿ ಮಮತಾಗೂ ಸೋಂಕು …
Read More »ರಕ್ಷಣೆ ಇಲ್ಲದೆ ಸೋಂಕಿತ ಶವ ಹಸ್ತಾಂತರ; ಆರೋಪ
ರಾಯಚೂರು: ಇಲ್ಲಿನ ಓಪೆಕ್ ಕೋವಿಡ್ ಆಸ್ಪತ್ರೆಯಲ್ಲಿ ಮೃತ ಸೊಂಕಿತರ ಶವಗಳಿಗೆ ಕವರ್ ಹಾಕದೆ ಸಂಬಂಧಿಕರಿಗೆ ಹಸ್ತಾಂತರಿಸಲಾಗುತ್ತಿದೆ ಎನ್ನುವ ಆರೋಪಗಳು ಕೇಳಿ ಬಂದಿವೆ. ಸೋಂಕಿನಿಂದ ದಾಖಲಾದವರು ಮೃತಪಟ್ಟಲ್ಲಿ ಆಸ್ಪತ್ರೆ ಸಿಬ್ಬಂದಿಯೇ ಅಂತ್ಯಕ್ರಿಯೆ ನೆರವೇರಿಸುತ್ತಾರೆ. ಇಲ್ಲವೇ ಕುಟುಂಬಸ್ಥರು ಶವ ಕೇಳಿದರೆ, ಶವವನ್ನು ಸಂಪೂರ್ಣ ಕವರ್ ಮಾಡಿ ಕೊಡಬೇಕಿದೆ. ಈವರೆಗೂ ಹಾಗೆಯೇ ನೀಡಲಾಗುತ್ತಿದೆ. ಆದರೆ, ವೀಡಿಯೋ ಹರಿದಾಡುತ್ತಿದ್ದು ಅದರಲ್ಲಿ ಶವ ಹಸ್ತಾರಿಸುವಾಗ ಯಾವುದೇ ಕವರ್ ಹಾಕಿಲ್ಲ. ಪಿಪಿಇ ಕಿಟ್ ಸಹ ನೀಡದೆ ಸಂಬಂಧಿಕರೆ ಅಂತ್ಯ …
Read More »ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಅವರ ಕಿರಿಯ ಸಹೋದರ ಅಶಿಮ್ ಬ್ಯಾನರ್ಜಿ ಕೊರೊನಾಗೆ ಬಲಿ
ನವದೆಹಲಿ: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಅವರ ಕಿರಿಯ ಸಹೋದರ ಅಶಿಮ್ ಬ್ಯಾನರ್ಜಿ ಅವರು ಶನಿವಾರ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಕೊರೊನಾ ಸೋಂಕಿನಿಂದ ಬಳಲುತ್ತಿದ್ದ ಅಶಿಮ್ ಬ್ಯಾನರ್ಜಿ ಅವರು, ಕೋಲ್ಕತ್ತಾದ ಮೇದಿಕಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಇಂದು ಸಾವನ್ನಪ್ಪಿದ್ದಾರೆ ಎಂದು ವರದಿಗಳಿಂದ ತಿಳಿದು ಬಂದಿದೆ. ಪಶ್ಚಿಮ ಬಂಗಾದಲ್ಲಿ ಶುಕ್ರವಾರ 20,846 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿದ್ದು, ಸೋಂಕಿತರ ಸಂಖ್ಯೆ 10,94,802ಕ್ಕೆ ಏರಿಕೆಯಾಗಿದೆ. ಈ ನಡುವೆ …
Read More »ದುಬಾರಿ ಬೆಲೆಗೆ ರೆಮಿಡಿಸಿವಿರ್ ಮಾರುತ್ತಿದ್ದ ವೈದ್ಯ ಸೇರಿದಂತೆ ಇಬ್ಬರ ಬಂಧನ
ಬೆಂಗಳೂರು,ಮೇ.14-ಕೊರೊನಾ ಸೋಂಕಿತನಿಗೆ ಹಂಚಿಕೆಯಾಗಿದ್ದ ರೆಮಿಡಿಸಿವಿರ್ ಔಷಧಿಯನ್ನು ರೋಗಿಗೆ ನೀಡದೆ ಬೇರೆಯವರಿಗೆ ದುಬಾರಿ ಬೆಲೆಗೆ ಮಾರಾಟ ಮಾಡಿಕೊಂಡಿದ್ದ ವೈದ್ಯಾಧಿಕಾರಿ ಹಾಗೂ ಆಸ್ಪತ್ರೆಯ ಹೌಸ್ ಕೀಪಿಂಗ್ ಮ್ಯಾನೇಜರ್‍ನನ್ನು ಬಂಧಿಸಿರುವ ಸಂಜಯನಗರ ಪೊಲೀಸರು ಎರಡು ರೆಮಿಡಿಸಿವಿರ್ ಚುಚ್ಚುಮದ್ದುಗಳು, ಒಂದು ದ್ವಿಚಕ್ರ ವಾಹನ, ಮೊಬೈಲ್ ಫೋನ್ ವಶಪಡಿಸಿಕೊಂಡಿದ್ದಾರೆ. ಹೊಸೂರು ರಸ್ತೆಯಲ್ಲಿರುವ ಮಾತೃ ಆಸ್ಪತ್ರೆಯಲ್ಲಿ ಕೊರೊನಾ ಸೋಂಕಿತರಿಗೆ ಚಿಕಿತ್ಸೆ ನೀಡುವ ಬಿಟಿಎಂ ಬಡಾವಣೆಯ ವೈದ್ಯ ಡಾ.ಸಾಗರ್ ಹಾಗೂ ಹೌಸ್ ಕೀಪಿಂಗ್ ಮ್ಯಾನೇಜರ್ ಕಾಮಾಕ್ಷಿಪಾಳ್ಯದ ನಿವಾಸಿ ಕೃಷ್ಣ ಬಂಧಿತ …
Read More »ಕೋವಿಡ್ ಲಸಿಕೆ ಪೂರೈಕೆ; ಜೂನ್‌ನಿಂದ ಸುಧಾರಿಸಲಿದೆ ಪರಿಸ್ಥಿತಿ
ನವದೆಹಲಿ, ಮೇ 14; ಭಾರತದಲ್ಲಿ ಕೋವಿಡ್ 2ನೇ ಅಲೆ ಆತಂಕ ಮೂಡಿಸಿದೆ. ಸೋಂಕಿನ ವಿರುದ್ಧದ ಲಸಿಕೆ ಪಡೆಯಲು ಜನರು ತಯಾರಾಗಿದ್ದಾರೆ. ಆದರೆ ವಿವಿಧ ರಾಜ್ಯಗಳಲ್ಲಿ ಲಸಿಕೆಯ ಲಭ್ಯತೆಯೇ ಇಲ್ಲ. ಮೇ ತಿಂಗಳಿನಲ್ಲಿ 8.8 ಕೋಟಿ ಡೋಸ್ ಲಸಿಕೆ ದೇಶದಲ್ಲಿ ಲಭ್ಯವಾಗಲಿದೆ ಎಂದು ಅಂದಾಜಿಸಲಾಗಿದೆ. ಜೂನ್ ತಿಂಗಳ ಬಳಿಕ ಲಸಿಕೆ ಉತ್ಪಾದನೆ ಹೆಚ್ಚಾಗಲಿದೆ ಎಂದು ಅಂದಾಜಿಸಲಾಗಿದೆ. ಅಂಕಿ ಅಂಶಗಳ ಪ್ರಕಾರ ಜೂನ್‌ನಲ್ಲಿ 15.81 ಕೋಟಿ ಡೋಸ್, ಆಗಸ್ಟ್‌ನಲ್ಲಿ 36.6 ಕೋಟಿ ಡೋಸ್, …
Read More »ಕೊವ್ಯಾಕ್ಸಿನ್ 2, 3ನೇ ಹಂತದ ಪ್ರಯೋಗ; ಹೇಗೆ ನಡೆಯಲಿದೆ?
ಹೈದರಾಬಾದ್, ಮೇ 14; ಭಾರತ್ ಬಯೋಟೆಕ್ ಅಭಿವೃದ್ಧಿಪಡಿಸಿರುವ ಕೊವ್ಯಾಕ್ಸಿನ್ ಲಸಿಕೆಯನ್ನು 2 ರಿಂದ 18 ವರ್ಷದೊಳಗಿನವರ ಮೇಲೆ ಎರಡು ಮತ್ತು 3ನೇ ಹಂತದಲ್ಲಿ ಕ್ಲಿನಿಕಲ್ ಪ್ರಯೋಗ ನಡೆಸಲು ಕೇಂದ್ರ ಸರ್ಕಾರ ಅನುಮತಿ ನೀಡಿದೆ. ಈಗಾಗಲೇ 18 ವರ್ಷ ಮೇಲ್ಪಟ್ಟವರಿಗೆ ದೇಶದಲ್ಲಿ ಈ ಲಸಿಕೆ ನೀಡಲಾಗುತ್ತಿದೆ. ಕೋವಿಡ್ ಸೋಂಕಿನ ವಿರುದ್ಧ ಭಾರತದಲ್ಲಿ ಲಭ್ಯವಿರುವ ಲಸಿಕೆಯಲ್ಲಿ ಕೊವ್ಯಾಕ್ಸಿನ್ ಸಹ ಒಂದು. ಈ ಲಸಿಕೆಯನ್ನು ಮಕ್ಕಳ ಮೇಲೆ ಪ್ರಯೋಗ ಮಾಡಲು ಭಾರತದ ಪ್ರಧಾನ ಔಷಧ …
Read More »ರಾಜ್ಯದ ಜನತೆಗೆ ಆದಷ್ಟು ಬೇಗ ಲಸಿಕೆ ಕೊಡಿಸಲು ಯತ್ನ: ಸಿಎಂ
ಬೆಂಗಳೂರು : ರಾಜ್ಯದ ಜನತೆಗೆ ಆದಷ್ಟು ಬೇಗ ಲಸಿಕೆ ಕೊಡಿಸಲು ಸರಕಾರ ಸರ್ವ ಪ್ರಯತ್ನ ಮಾಡುತ್ತಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ಬಸವ ಜಯಂತಿ ಅಂಗವಾಗಿ ಬಸವೇಶ್ವರ ವೃತ್ತದಲ್ಲಿರುವ ಬಸವಣ್ಣ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಿದ ಬಳಿಕ ಮಾತನಾಡಿದ ಅವರು, ರಾಜ್ಯಕ್ಕೆ ಅಗತ್ಯವಿರುವ ಲಸಿಕೆ ಪಡೆಯಲು ಗ್ಲೋಬಲ್ ಟೆಂಡರ್ ಕರೆಯಲಾಗಿದೆ. ಲಸಿಕೆ, ಆಮ್ಲಜನಕ ಹಾಗೂ ಔಷಧ ನೀಡುವಲ್ಲಿ ಕೇಂದ್ರ ಸರಕಾರ ಯಾವುದೇ ತಾರತಮ್ಯ ಮಾಡುತ್ತಿಲ್ಲ. ಈಗ ಎಲ್ಲರೂ ಒಟ್ಟಾಗಿ …
Read More »ಯುವತಿಯ ಅನುಮಾನಾಸ್ಪದ ಸಾವು, ಕೊಲೆ ಶಂಕೆ : ಪೊಲೀಸರಿಂದ ತೀವ್ರ ವಿಚಾರಣೆ
ಬನಹಟ್ಟಿ : ರಬಕವಿ-ಬನಹಟ್ಟಿ ತಾಲೂಕಿನ ತೇರದಾಳ ಪೊಲೀಸ್ ಠಾಣೆ ವ್ಯಾಪ್ತಿಯ ರಬಕವಿಯ ವಿದ್ಯಾನಗರದಲ್ಲಿ ಗುರುವಾರ ಸಂಜೆ ಹೊತ್ತು ಯುವತಿಯೊಬ್ಬಳು ಮನೆಯಲ್ಲಿಯೇ ತೀವ್ರ ಅಸ್ವಸ್ಥಗೊಂಡ ಪರಿಣಾಮ ಖಾಸಗಿ ಆಸ್ಪತ್ರೆಗೆ ತೆರಳಿದಾಗ ಮೃತಪಟ್ಟಿರುವದಾಗಿ ತಿಳಿದುಬಂದಿದೆ. ರಬಕವಿಯ ರಶ್ಮಿ ಕಿರಣ ಜುಗಳಿ(28) ಮೃತಪಟ್ಟ ದುರ್ದೈವಿಯಾಗಿದ್ದಾಳೆ. ಯುವತಿಯನ್ನು ಹತ್ಯೆ ಮಾಡಿದ್ದು, ಕುತ್ತಿಗೆ ಭಾಗದಲ್ಲಿ ಬಲವಾದ ಕಲೆ ಇರುವದಾಗಿ ಮೃತಳ ತಂದೆ ಪೊಲೀಸರಿಗೆ ತಿಳಿಸಿದ್ದಾರೆ. ಗಂಡನ ಮನೆಯಲ್ಲಿ ಹಲವು ದಿನಗಳಿಂದ ವರದಕ್ಷಿಣೆಗಾಗಿ ಕಿರುಕುಳ ಹಾಗು ಇತರೆ ತೊಂದರೆ …
Read More »ಬೆಳಗಾವಿ ಜಿಲ್ಲೆಯಲ್ಲಿ 1592 ಪಾಸಿಟಿವ್ ಪ್ರಕರಣ ಪತ್ತೆ : ಹೆಚ್ಚಿದ ಆತಂಕ
ಬೆಳಗಾವಿ: ಕೊರೊನಾ ಪಾಸಿಟಿವ್ ಸಂಖ್ಯೆ ಪ್ರಮಾಣದಲ್ಲಿ ಶುಕ್ರವಾರ ದಿಢೀರ್ ಏರಿಕೆ ಆಗಿದ್ದು, ಒಂದೇ ದಿನ 1592 ಜನರಿಗೆ ಸೋಂಕು ತಗುಲಿದೆ. ಕೆಲ ದಿನಗಳ ಹಿಂದೆ ಸಾವಿರ ಸಮೀಪ ಅಥವಾ ಸಾವಿರದೊಳಗೆ ಪಾಸಿಟಿವ್ ಬರುತ್ತಿದ್ದ ಜಿಲ್ಲೆಯಲ್ಲಿ ಈಗ ಒಂದೇ ದಿನ 1500 ದಾಟಿದ್ದು, ಜನರಲ್ಲಿ ಆತಂಕ ಮೂಡಿಸಿದೆ. ಒಟ್ಟು 43,557 ಜನರಿಗೆ ಸೋಂಕು ತಗುಲಿದಂತಾಗಿದೆ. ಸದ್ಯ 6583 ಸಕ್ರಿಯ ಪ್ರಕರಣಗಳು ಇವೆ. ಜಿಲ್ಲೆಯಾದ್ಯಂತ ಒಂದೇ ದಿನ 358 ಜನ ಗುಣಮುಖರಾಗಿದ್ದಾರೆ. ಈವರೆಗೆ …
Read More »
Laxmi News 24×7