Breaking News

ರಾಜ್ಯ

ಜನರಲ್ಲಿ ವೈಚಾರಿಕತೆ, ವೈಜ್ಞಾನಿಕತೆ ಬೆಳೆಯದಿದ್ದರೆ, ಕೇವಲ ಮೌಢ್ಯ ನಿಷೇಧ ಕಾನೂನಿನ ಮೂಲಕ ನಿರೀಕ್ಷಿತ ಬದಲಾವಣೆ ಸಾಧ್ಯವಿಲ್ಲ ಎಂದ ಸಿಎಂ

ಬೆಂಗಳೂರು: ”ದ್ವಿಭಾಷಾ ಸೂತ್ರ ನನ್ನ ಅಭಿಪ್ರಾಯವಾಗಿದೆ. ಅದನ್ನು ಸರ್ಕಾರದ ಅಭಿಪ್ರಾಯ ಮಾಡುವ ದಿಕ್ಕಿನಲ್ಲಿ ಪ್ರಯತ್ನಿಸುತ್ತೇನೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಜನ‌ಪ್ರಕಾಶನ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪ್ರೊ.ಬರಗೂರು ರಾಮಚಂದ್ರಪ್ಪ ಅವರ ಸಂಪಾದಕತ್ವದ “ಕುವೆಂಪು ವಿಚಾರ ಕ್ರಾಂತಿ” ಕೃತಿಯನ್ನು ಜನಾರ್ಪಣೆಗೊಳಿಸಿ ಅವರು ಮಾತನಾಡಿದರು. ”ಕುವೆಂಪು ಅವರ ಪ್ರಖರ ವೈಚಾರಿಕತೆ ಸಮಾಜದಲ್ಲಿ ಜಾತಿ ಅಸಮಾನತೆ ಇರುವವರೆಗೂ ಪ್ರಸ್ತುತವಾಗಿರುತ್ತದೆ. ವೈಚಾರಿಕತೆ, ವೈಜ್ಞಾನಿಕತೆಯ ಬಗ್ಗೆ ಕುವೆಂಪು ಅವರಿಗೆ ಸ್ಪಷ್ಟ ದೃಷ್ಟಿಕೋನ ಇತ್ತು. ಜಾತಿ ತಾರತಮ್ಯ ಇಲ್ಲದ ಸಮಾಜ ಕುವೆಂಪು …

Read More »

ಹುಲಿ ಸಾವು ಪ್ರಕರಣ – ಇಬ್ಬರು ಅಧಿಕಾರಿಗಳ ಅಮಾನತು

ಕಲಬುರಗಿ : ಹುಲಿಗೆ ವಿಷಪ್ರಾಶನ ಮಾಡಿರುವುದು ವರದಿಗಳಲ್ಲಿ ದೃಢಪಟ್ಟಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯ ಲೋಪ ಆರೋಪದ ಮೇಲೆ ಇಬ್ಬರು ಅರಣ್ಯ ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ತಿಳಿಸಿದರು. ಈ ಕುರಿತು ಶನಿವಾರ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನೊಬ್ಬ ಅಧಿಕಾರಿಯ ಅಮಾನತಿಗಾಗಿ DPAR (ಡಿಪಿಎಆರ್)ಗೆ ಮುಖ್ಯಮಂತ್ರಿಗಳಿಗೆ ಶಿಫಾರಸು ಮಾಡಲಾಗಿದ್ದು, ಕ್ರಮದ ಪ್ರಕ್ರಿಯೆ ಮುಂದುವರೆದಿದೆ ಎಂದು ಹೇಳಿದರು. ಹುಲಿ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ನಾನು …

Read More »

ಶಾಲೆಗೆ ಹೋಗದ ಶಿಕ್ಷಕರು – ಅಧಿಕಾರಿಗಳ ಸನ್ಮಾನಕ್ಕೆ ದಂಡಾಗಿ ಹಾಜರಾತಿ!

ಶಾಲೆಗೆ ಹೋಗದ ಶಿಕ್ಷಕರು – ಅಧಿಕಾರಿಗಳ ಸನ್ಮಾನಕ್ಕೆ ದಂಡಾಗಿ ಹಾಜರಾತಿ! ಅಥಣಿ, ಜುಲೈ 2:ತಾಲೂಕಿನ ಹಲವು ಸರಕಾರಿ ಶಾಲೆಗಳಲ್ಲಿ ಹಾಜರಾತಿ ತಪ್ಪಿಸುತ್ತಿರುವ ಹಾಗೂ ಕರ್ತವ್ಯ ಮರೆತ ಶಿಕ್ಷಕರು, ಈ ಬಾರಿ ತರಗತಿ ಕೊಠಡಿಗೆ ಅಲ್ಲ, ಬದಲಿಗೆ ನೂತನ ಕ್ಷೇತ್ರ ಶಿಕ್ಷಣಾಧಿಕಾರಿಗಳ ಸನ್ಮಾನಕ್ಕೆ ದಂಡಾಗಿ ಹಾಜರಾಗಿ ಗಮನಸೆಳೆದಿದ್ದಾರೆ. ಅಥಣಿ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ಹೊಸ ಬಿಇಒ ಎಂ. ಆರ್. ಮುಂಜೆ ಅವರು ಅಧಿಕಾರ ಸ್ವೀಕರಿಸಿದರು. ಅವರನ್ನು ಅಭಿನಂದಿಸಲು ಹಲವಾರು ಶಾಲೆಗಳ …

Read More »

ಶಾರ್ಟ್ ಸರ್ಕೀಟ್’ನಿಂದ ಸುಟ್ಟು ಕರಕಲಾದ ಹೊಟೇಲ್…!!!

ಶಾರ್ಟ್ ಸರ್ಕೀಟ್’ನಿಂದ ಸುಟ್ಟು ಕರಕಲಾದ ಹೊಟೇಲ್…!!! ಬೆಳಗಾವಿಯ ಗೋವಾವೇಸ್’ನಲ್ಲಿ ಶಾರ್ಟ್ ಸರ್ಕೀಟ್’ನಿಂದ “ಹೋಟೆಲ್ ಒಂದು ಅಗ್ನಿಗಾಹುತಿಯಾಗಿ ಲಕ್ಷಾಂತರ ರೂಪಾಯಿಗಳ ನಷ್ಟವಾಗಿದೆ. ಬೆಳಗಾವಿಯ ಗೋವಾವೇಸ್‌ನಲ್ಲಿ ಇರುವ “ಹೋಟೆಲ್ ಅನುಗ್ರಹ”ನಲ್ಲಿ ಕಳೆದ ರಾತ್ರಿ 2 ಗಂಟೆ ಸುಮಾರಿಗೆ ಶಾರ್ಟ್ ಸರ್ಕಿಟ್‌ನಿಂದಾಗಿ ಬೆಂಕಿ ಹೊತ್ತಿಕೊಂಡಿದೆ. ಹೋಟೆಲ್‌ನ ಫರ್ನಿಚರ್ ಸುಡುತ್ತಿರುವ ಶಬ್ದದಿಂದ ಎಚ್ಚರಗೊಂಡ ಸ್ಥಳೀಯ ನಿವಾಸಿಗಳು ತಕ್ಷಣ ಹೋಟೆಲ್ ಮಾಲೀಕರಾದ ಸುಧಾಕರ್ ಪುಜಾರಿ ಅವರಿಗೆ ಮಾಹಿತಿ ನೀಡಿದರು. ಅಲ್ಲದೇ, ಅಗ್ನಿಶಾಮಕ ದಳವನ್ನು ಸಂಪರ್ಕಿಸಿದರು. ಅಗ್ನಿಶಾಮಕ ದಳಕ್ಕೆ …

Read More »

ಚೈನ್ನೈನ 16ನೇ ಐ.ಎ.ಪಿ.ಎಚ್.ಡಿ ಸ್ನಾತಕೋತ್ತರ ಸಮಾವೇಶದಲ್ಲಿ ಬೆಳಗಾವಿಯ ಕೆಎಲ್‌ಇ ವಿಕೆ ದಂತ ವಿಜ್ಞಾನ ವಿಭಾಗದ ಉತ್ತಮ ಪ್ರದರ್ಶನ

ಚೈನ್ನೈನ 16ನೇ ಐ.ಎ.ಪಿ.ಎಚ್.ಡಿ ಸ್ನಾತಕೋತ್ತರ ಸಮಾವೇಶದಲ್ಲಿ ಬೆಳಗಾವಿಯ ಕೆಎಲ್‌ಇ ವಿಕೆ ದಂತ ವಿಜ್ಞಾನ ವಿಭಾಗದ ಉತ್ತಮ ಪ್ರದರ್ಶನ ಇತ್ತೀಚೆಗಷ್ಟೇ ಚೆನ್ನೈನಲ್ಲಿ ನಡೆದ 16ನೇ ಭಾರತೀಯ ಸಾರ್ವಜನಿಕ ಆರೋಗ್ಯ ದಂತವೈದ್ಯ ಶಾಸ್ತ್ರ (IAPHD) ಸ್ನಾತಕೋತ್ತರ ಸಮಾವೇಶದಲ್ಲಿ ಬೆಳಗಾವಿಯ ಕೆಎಲ್‌ಇ ವಿಕೆ ಇನ್ಸ್ಟಿಟ್ಯೂಟ್ ಆಫ್ ಡೆಂಟಲ್ ಸೈನ್ಸಸ್‌ನ ಸಾರ್ವಜನಿಕ ಆರೋಗ್ಯ ದಂತವೈದ್ಯ ಶಾಸ್ತ್ರ ವಿಭಾಗವು ಅತ್ಯುತ್ತಮ ಸಾಧನೆಯೊಂದಿಗೆ ರಾಜ್ಯದ ಗೌರವವನ್ನು ಹೆಚ್ಚಿಸಿದೆ. ಈ ಸಮಾವೇಶದಲ್ಲಿ ಡಾ. ಅಪೂರ್ವ ಮತ್ತು ಡಾ. ಹೃದಯಾ ಅವರು …

Read More »

ಚಾತುರ್ಮಾಸ ಹಿನ್ನೆಲೆ ಜೈನ ಮುನಿ ಶಿಷ್ಯೆಯರ ಪುರಪ್ರವೇಶ ಬೆಳಗಾವಿ ಜೈನ ಸಮಾಜದಿಂದ ಭವ್ಯ ಮೆರವಣಿಗೆಯೊಂದಿಗೆ ಸ್ವಾಗತ

ಚಾತುರ್ಮಾಸ ಹಿನ್ನೆಲೆ ಜೈನ ಮುನಿ ಶಿಷ್ಯೆಯರ ಪುರಪ್ರವೇಶ ಬೆಳಗಾವಿ ಜೈನ ಸಮಾಜದಿಂದ ಭವ್ಯ ಮೆರವಣಿಗೆಯೊಂದಿಗೆ ಸ್ವಾಗತ ಚಾತುರ್ಮಾಸದ ಹಿನ್ನೆಲೆ ಬೆಳಗಾವಿ ನಗರದಲ್ಲಿ ಜೈನ ಮುನಿಗಳ ಶಿಷ್ಯೆಯರ ಭವ್ಯ ಪುರ ಪ್ರವೇಶೋತ್ಸವ ನಡೆಯಿತು. ಸುಮಾರು 1500 ಕಿಲೋ ಮೀಟರ್ ಪಾದಯಾತ್ರೆ ಮಾಡುತ್ತ ಇಂದು ಬೆಳಗಾವಿಗೆ ಪ. ಪೂ ಸುಮನ್ ಸೂರ್ಯೋದಯಾಶ್ರೀಜಿಯ ಶಿಷ್ಯೆ, ಪ. ಪೂ ತಪಸ್ವಿ ರತ್ನಾರತ್ನ ಜ್ಯೋತಿಶ್ರೀಜಿ ಶಿಷ್ಯೆ, ವರ್ಧಮಾನ ತಪಾರಾಧಿಕಾ ಪ. ಪೂ ಅಕ್ಷಯ ಜ್ಯೋತಿಶ್ರೀಜಿ ಅವರ ಶಿಷ್ಯೆ, …

Read More »

ಅನಮೋಡ ಘಾಟ್ ರಸ್ತೆಯಲ್ಲಿ ಭೂಕುಸಿತ!!!

ಅನಮೋಡ ಘಾಟ್ ರಸ್ತೆಯಲ್ಲಿ ಭೂಕುಸಿತ!!! ನಿರಂತರವಾಗಿ ಸುರಿಯುತ್ತಿರುವ ಧಾರಾಕಾರ ಮಳೆಗೆ ಖಾನಾಪೂರ ತಾಲೂಕಿನ ಅನಮೋಡ್ ಘಾಟ್ ರಸ್ತೆಯಲ್ಲಿ ಭೂಕುಸಿತ ಸಂಭವಿಸಿದೆ. ನಿರಂತರವಾಗಿ ಸುರಿಯುತ್ತಿರುವ ಧಾರಾಕಾರ ಮಳೆಗೆ ಖಾನಾಪೂರ ತಾಲೂಕಿನ ಅನಮೋಡ್ ಘಾಟ್ ರಸ್ತೆಯಲ್ಲಿ ಭೂಕುಸಿತ ಸಂಭವಿಸಿದೆ. ಮುಂಜಾಗೃತಾ ಕ್ರಮವಾಗಿ ತಾಲೂಕಾಡಳಿತದಿಂದ ಬ್ಯಾರಿಕೇಡ್ಸ್’ಗಳನ್ನು ಹಾಕಿ ಜನರಿಗೆ ಸೂಚನೆ ನೀಡಲಾಗಿದೆ. ಅನಮೋಡ ಘಾಟ ಬಳಸಿ ಗೋವಾಗೆ ಪ್ರಯಾಣಿಸುವ ಜನರಿಗೆ ಅನಾಹುತ ಎದುರಾಗಿದ್ದು, ಜಾಗೃತೆಯಿಂದ ಸಂಚರಿಸಲು ಮನವಿ ಮಾಡಲಾಗಿದೆ.

Read More »

ಇನ್ನೂ ಎರಡು ದಿನ ಮಹಾಮಳೆ

ಬೆಂಗಳೂರು: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗುತ್ತಿದ್ದು, ಇನ್ನೂ ಎರಡು ದಿನಗಳ ಕಾಲ (ಜು.7) ಜೋರು ಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು ಸೇರಿದಂತೆ ಕರಾವಳಿ ಹಾಗೂ ಮಲೆನಾಡಿನ ಜಿಲ್ಲೆಗಳಲ್ಲಿ ಮಳೆ ಹೆಚ್ಚಾಗುವ ಸಾಧ್ಯತೆ ಇದೆ. ರಾಜ್ಯಾದ್ಯಂತ ಎರಡು ದಿನಗಳ ಕಾಲ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿಯಲ್ಲಿ ಗಂಟೆಗೆ 30 ರಿಂದ 40 …

Read More »

ಚಿನ್ನ ಕಳ್ಳಸಾಗಾಣಿಕೆ ಪ್ರಕರಣ: ರನ್ಯಾ ರಾವ್​​ಗೆ ಸೇರಿದ ₹34.12 ಕೋಟಿ ಮೌಲ್ಯದ ಆಸ್ತಿ ಇಡಿ ವಶ

ಬೆಂಗಳೂರು : ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಬಂಧಿತರಾಗಿರುವ ನಟಿ ರನ್ಯಾ ರಾವ್ ಅವರಿಗೆ ಸೇರಿದ 34.12 ಕೋಟಿ ರೂಪಾಯಿ ಮೌಲ್ಯದ ಆಸ್ತಿಗಳನ್ನು ಜಾರಿ ನಿರ್ದೇಶನಾಲಯ (ED) ಶುಕ್ರವಾರ ಮುಟ್ಟುಗೋಲು ಹಾಕಿಕೊಂಡಿದೆ. ಚಿನ್ನ ಕಳ್ಳಸಾಗಣೆ ಮತ್ತು ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ರನ್ಯಾ ರಾವ್‌ಗೆ ಸೇರಿದ ಬೆಂಗಳೂರು ಮತ್ತು ತುಮಕೂರು ಜಿಲ್ಲೆಗಳಲ್ಲಿರುವ ಆಸ್ತಿಗಳನ್ನು ಜಪ್ತಿ ಮಾಡಲಾಗಿದೆ ಎಂದು ತನಿಖಾ ಸಂಸ್ಥೆಯು ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದೆ. ಬೆಂಗಳೂರಿನ ವಿಕ್ಟೋರಿಯಾ ಲೇಔಟ್‌ನಲ್ಲಿರುವ ಮನೆ, ಅರ್ಕಾವತಿ …

Read More »

ರೈತರು ಉತ್ಪಾದಿಸುವ ಆಹಾರ ಧಾನ್ಯಗಳ ಖರೀದಿ ಜವಾಬ್ದಾರಿ ಎಫ್​​​ಸಿಐಗೆ ವಹಿಸಿ: ಈರಣ್ಣ ಕಡಾಡಿ

ಬೆಂಗಳೂರು: ರೈತರು ಉತ್ಪಾದಿಸುವ ಆಹಾರ ಧಾನ್ಯಗಳನ್ನು ಖರೀದಿಸುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ. ಇದರ ಜವಾಬ್ದಾರಿಯನ್ನು ಭಾರತೀಯ ಆಹಾರ ನಿಗಮ (ಎಫ್ ಸಿಐ)ಗೆ ವಹಿಸುವುದು ಸೂಕ್ತ ಎಂದು ಭಾರತೀಯ ಆಹಾರ ನಿಗಮ (ಎಫ್​​ಸಿಐ) ರಾಜ್ಯ ಘಟಕದ ಅಧ್ಯಕ್ಷ, ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಹೇಳಿದ್ದಾರೆ. ಪ್ರಸಕ್ತ ವರ್ಷದಲ್ಲಿ ಭಾರತೀಯ ಆಹಾರ ನಿಗಮವು ಕರ್ನಾಟಕದಲ್ಲಿ ನಿರ್ವಹಿಸಿರುವ ಕಾರ್ಯಗಳ ಬಗ್ಗೆ ಕಾಡುಗೋಡಿಯಲ್ಲಿರುವ ಎಫ್​​ಸಿಐನಲ್ಲಿ ತಮ್ಮ ಅಧ್ಯಕ್ಷತೆಯಲ್ಲಿ ಇಂದು ಸಭೆ ನಡೆಸಿದ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಡಾಡಿ …

Read More »