Breaking News

ರಾಜ್ಯ

ರಾಧೆ’ ಸಿನಿಮಾ, ಬಿಡುಗಡೆ ಆದ ದಿನವೇ ಲೀಕ್!

ಮುಂಬೈ: ಬಾಲಿವುಡ್ ಬಾಕ್ಸ್ ಆಫೀಸ್ ಸುಲ್ತಾನ್ ಸಲ್ಮಾನ್ ಖಾನ್ ನಟನೆಯ ಬಹುನಿರೀಕ್ಷೆಯ ರಾಧೆ: ಯುವರ್ ಮೋಸ್ಟ್ ವಾಂಟೆಡ್ ಭಾಯ್ ಸಿನಿಮಾ ಈದ್ ಹಬ್ಬದ ಪ್ರಯುಕ್ತ ಬಿಡುಗಡೆಯಾಗಿದೆ. ಕೊರೊನಾ ಹಾವಳಿಯ ನಡುವೆಯೂ ಅಭಿಮಾನಿಗಳನ್ನು ರಂಜಿಸಲು ಸಲ್ಲು ರಾಧೆ ಮೂಲಕ ಎಂಟ್ರಿ ಕೊಟ್ಟಿದ್ದಾರೆ. ಸಲ್ಮಾನ್ ಸಿನಿಮಾ ಅಂದ್ಮೇಲೆ ಅಭಿಮಾನಿಗಳ ನಿರೀಕ್ಷೆ ದುಪ್ಪಟ್ಟಾಗಿರುತ್ತೆ. ರಾಧೆ ನೋಡಲು ತುದಿಗಾಲಿನಲ್ಲಿ ನಿಂತಿದ್ದರು. ಆದರಂತೆ ಸಿನಿಮಾ ಒಟಿಟಿಯಲ್ಲಿ ಬಿಡುಗಡೆಯಾಗುತ್ತಿದಂತೆ ಅಭಿಮಾನಿಗಳು ಮುಗಿಬಿದ್ದು ವೀಕ್ಷಿಸಿದ್ದಾರೆ. ಚಿತ್ರಕ್ಕೆ ಮೊದಲ ದಿನ ಮಿಶ್ರ …

Read More »

ಕೊರೋನಾ ಸಂಬಂಧಿತ ಲಸಿಕೆ ಪಡೆದಲ್ಲಿ ಮಾಸ್ಕ್ ಹಾಕುವುದು ಅಗತ್ಯವಿಲ್ಲ ಎಂದು ಅಮೇರಿಕಾ

ನ್ಯೂಯಾರ್ಕ್ – ಕೊರೋನಾ ಸಂಬಂಧಿತ ಲಸಿಕೆ ಪಡೆದಲ್ಲಿ ಮಾಸ್ಕ್ ಹಾಕುವುದು ಅಗತ್ಯವಿಲ್ಲ ಎಂದು ಅಮೇರಿಕಾದ ರೋಗ ನಿಯಂತ್ರಣ ಮಂಡಳಿ ತಿಳಿಸಿದೆ. ಪೂರ್ಣ ಪ್ರಮಾಣದಲ್ಲಿ ಲಸಿಕೆ ಹಾಕಿಸಿಕೊಂಡವರು ಮಾಸ್ಕ್ ಧರಿಸುವುದು ಮತ್ತು ಸಾಮಾಜಿಕ ಅಂತರ ಕಾಪಾಡುವುದು ಅಗತ್ಯವಿಲ್ಲ ಎಂದು ಮಂಡಳಿ ತಿಳಿಸಿದೆ. ಅಮೇರಿಕಾ ಅಧ್ಯಕ್ಷ ಜೊ ಬೈಡನ್ ಕೂಡಾ ಈ ಹೇಳಿಕೆಯನ್ನು ಶೇರ್ ಮಾಡಿದ್ದಾರೆ. ಇದರಿಂದಾಗಿ ಅಮೇರಿಕಾದಲ್ಲಿ ಲಸಿಕೆ ಪಡೆಯಲು ಇನ್ನಷ್ಟು ಜನರು ಮುಂದೆ ಬರಲಿದ್ದಾರೆ ಎಂದು ನಿರೀಕ್ಷಿಸಲಾಗಿದೆ. ಆದರೆ ಭಾರತದಲ್ಲಿ …

Read More »

ಬೆಳಗಾವಿ ಜಿಲ್ಲೆಯ ಆಸ್ಪತ್ರೆಗಳಲ್ಲಿ ಸಧ್ಯ ಲಭ್ಯವಿರುವ ಬೆಡ್ ಮಾಹಿತಿ

ಬೆಳಗಾವಿ – ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಬೆಡ್ ಗಾಗಿ ಆಸ್ಪತ್ರೆಗಳಿಗೆ ತಡಕಾಟ ಹೆಚ್ಚುತ್ತಿದೆ. ಆಸ್ಪತ್ರೆಯಿಂದ ಆಸ್ಪತ್ರೆಗೆ ಓಡಾಡುತ್ತಿದ್ದರೆ ಸೋಂಕಿತರ ಸ್ಥಿತಿ ಗಂಭೀರವಾಗಲಿದೆ. ಹಾಗಾಗಿ ಯಾವ ಆಸ್ಪತ್ರೆಗೆ ಹೋದರೆ ಬೆಡ್ ಲಭ್ಯವಿದೆ ಎನ್ನುವ ಮಾಹಿತಿ ಪಡೆದು ಹೋಗುವುದು ಉತ್ತಮ. ಸಧ್ಯ ಬೆಳಗಾವಿ ಜಿಲ್ಲೆಯ ಯಾವ ಆಸ್ಪತ್ರೆಯಲ್ಲಿ ಯಾವ ಬೆಡ್ ಲಭ್ಯವಿದೆ ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ. ಇಲ್ಲಿ ನೀಡಿರುವ ಮಾಹಿತಿಯಂತೆ ಯಾವುದೇ ಆಸ್ಪತ್ರೆಯಲ್ಲಿ ಬೆಡ್ ಸಿಗದಿದ್ದಲ್ಲಿ ಜಿಲ್ಲಾಡಳಿತ ಇಲ್ಲವೆ …

Read More »

ಕರ್ತವ್ಯನಿರತ ಪೊಲೀಸರ ಮೇಲೆ ಹರಿದ ಲಾರಿ; ಇಬ್ಬರು ಸಾವು

ವಿಜಯವಾಡ: ಲಾರಿ ಹರಿದು ಕರ್ತವ್ಯನಿರತ ಪೊಲೀಸರಿಬ್ಬರು ದಾರುಣವಾಗಿ ಮೃತಪಟ್ಟಿರುವ ಘಟನೆ ಪೂರ್ವ ಗೋದಾವರಿ ಜಿಲ್ಲೆಯಲ್ಲಿ ನಡೆದಿದೆ.ಮುಖ್ಯ ಪೊಲೀಸ್​ ಪೇದೆ ಸತ್ಯನಾರಾಯಣ ಮತ್ತು ಹೋಮ್​ ಗಾರ್ಡ್​ ಎನ್​. ಎಸ್​. ರೆಡ್ಡಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರು ಕಾಕಿನಾಡದ ತಿಮ್ಮಾಪುರಂ ಪೊಲೀಸ್​ ಠಾಣೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು. ವಿಜಯವಾಡದಿಂದ ಬರುತ್ತಿದ್ದ ಲಸಿಕಾ ವಾಹನದ ಬೆಂಗಾವಲು ಸೇವೆಯಲ್ಲಿದ್ದರು. ಗುರುವಾರ ತಡರಾತ್ರಿ 2 ಗಂಟೆ ಸುಮಾರಿಗೆ ಇಬ್ಬರ ಮೇಲೆ ಹರಿದಿದ್ದು, ಸ್ಥಳದಲ್ಲೇ ಲಾರಿ ನಿಲ್ಲಿಸಿ ಚಾಲಕ ಮತ್ತು ಕ್ಲೀನರ್​ …

Read More »

ಪತಿ – ಮಗನಿಗೆ ಕೋವಿಡ್ ಪಾಸಿಟಿವ್ : ಮನನೊಂದ ಮಹಿಳೆ ಕೆರೆಗೆ ಹಾರಿ ಆತ್ಮಹತ್ಯೆ

ಕಲಬುರಗಿ: ಪತಿ ಹಾಗೂ ಮಗನಿಗೆ ಕೊರೊನಾ ಸೊಂಕು ತಗುಲಿದ್ದನ್ನು ನೊಂದುಕೊಂಡ‌ ಮಹಿಳೆ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಕಲಬುರಗಿ ನಗರದ ಜಗತ್ ವೃತ್ತದ ಬಳಿಯಿರೋ ಕೆರೆಯಲ್ಲಿ ಮುಳುಗಿ ಆತ್ಮಹತ್ಯೆ ಮಾಡಿಕೊಂಡಿದ್ದು, ಇಂದುಮತಿ (56 ) ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಪತಿ ಹಾಗೂ ಮಗನಿಗೆ ಕೊರೊನಾ ಸೊಂಕು ತಗುಲಿದೆ. ಇದರಿಂದ ಮಹಿಳೆ ನೊಂದುಕೊಂಡಿದ್ದಳು. ಇಂದುಮತಿ, ಕಲಬುರಗಿ ಜಿಲ್ಲೆಯ ಸೇಡಂ ಪಟ್ಟಣದ ನಿವಾಸಿಯಾಗಿದ್ದು, ಪತಿ ಮತ್ತು ಮಗನಿಗೆ ಸೋಂಕು ದೃಢವಾಗಿದ್ದರಿಂದ …

Read More »

ಗೋವಾದಲ್ಲಿ ಮತ್ತೊಂದು ದುರಂತ : ಆಕ್ಸಿಜನ್ ಕೊರತೆಯಿಂದ 15 ಮಂದಿ ಸಾವು

ಪಣಜಿ: ಗೋವಾದಲ್ಲಿ ಕೋವಿಡ್ ರಣಕೇಕೆ ಹಾಕುತ್ತಿದೆ. ಕಳೆದ 2 ದಿನಗಳ ಹಿಂದೆ ಆಕ್ಸಿಜನ್ ಕೊತೆಯಿಂದ ಬರೋಬ್ಬರಿ 26 ಮಂದಿ ಸಾವನ್ನಪ್ಪಿದ್ದರು. ಇದರ ನೆನಪು ಮಾಸುವ ಮುನ್ನವೇ ಗೋವಾ ಖಾಸಗಿ ಆಸ್ಪತ್ರೆಯಲ್ಲಿ ಮತ್ತೆ 15 ಕೋವಿಡ್ ರೋಗಿಗಳು ಆಕ್ಸಿಜನ್ ಕೊರತೆಯಿಂದ ಸಾವನ್ನಪ್ಪಿದ್ದಾರೆ. ಗೋವಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ 15 ಸೋಂಕಿತರು ಸಾವನ್ನಪ್ಪಿದ್ದಾರೆ. ಕಳೆದ 2 ದಿನಗಳ ಹಿಂದೆ ಇದೇ ಗೋವಾ ವೈದ್ಯಕೀಯ ಕಾಲೇಜ್​ನಲ್ಲಿ 26 ರೋಗಿಗಳು ಆಕ್ಸಿಜನ್ ಕೊರತೆಯಿಂದ ಮೃತಪಟ್ಟಿದ್ದರು. …

Read More »

ಲಸಿಕೆ ಸ್ಲಾಟ್‌ ಪಡೆಯಲು ಅಲರ್ಟ್‌ ಮೆಸೇಜ್‌ ಪಡೆಯಿರಿ

ಹೊಸದಿಲ್ಲಿ: ದೇಶದಲ್ಲಿ ಲಸಿಕೆಗಾಗಿ ಕೋವಿನ್‌ ಪೋರ್ಟಲ್‌ನಲ್ಲಿ ನೋಂದಣಿಗೆ ಇಂಟರ್‌ನೆಟ್‌ ಲಭ್ಯವಿಲ್ಲದ ಸ್ಥಳದಲ್ಲಿ ಅಡಚಣೆ ಉಂಟಾಗುತ್ತಿದೆ. ಅದಕ್ಕಾಗಿ ಚೆನ್ನೈಯಲ್ಲಿ ಬ್ಯುಸಿನೆಸ್‌ ಅನಾಲಿಸ್ಟ್‌ ವೃತ್ತಿಯಲ್ಲಿರುವ ಬ್ರೆಟಿ ಥಾಮಸ್‌ (35) ಎಂಬುವರು ಲಸಿಕೆ ಹಾಕಿಸಲು ಸ್ಲಾಟ್‌ಗಳು ಯಾವಾಗ ಲಭ್ಯವಾಗುತ್ತವೆ ಎಂಬ ಬಗ್ಗೆ ಹೊಸ ತಂತ್ರಾಂಶ ಕಂಡುಹಿಡಿದಿದ್ದಾರೆ. ಅದಕ್ಕೆ ಟೆಲಿಗ್ರಾಂ ಮೂಲಕ ಸದಸ್ಯತ್ವ ಪಡೆಯಲು ಅವಕಾಶ ಕಲ್ಪಿಸಲಾಗಿದೆ. ಅದರಲ್ಲಿ ಸುಮಾರು 4 ಲಕ್ಷ ಮಂದಿ ಸದಸ್ಯರು ಈಗ ಇದ್ದಾರೆ. “ಹೆಚ್ಚಿನ ನಗರ ಮತ್ತು ಪಟ್ಟಣಗಳನ್ನು ಕೇಂದ್ರೀಕರಿಸಿ …

Read More »

ಭಾರತದಲ್ಲಿ ಕೊರೊನಾವೈರಸ್ ಲಸಿಕೆ ಅಭಾವಕ್ಕೆ ಇಲ್ಲಿದೆ ಸಾಕ್ಷ್ಯ

ನವದೆಹಲಿ, ಮೇ 14: ಭಾರತದಲ್ಲಿ ಕೊರೊನಾವೈರಸ್ ಲಸಿಕೆ ಅಭಾವ ಸೃಷ್ಟಿಯಾಗಿರುವುದು ಅಂಕಿ-ಅಂಶಗಳ ಸಹಿತ ಸಾಬೀತಾಗಿದೆ. ದಿನದಿಂದ ದಿನಕ್ಕೆ ಕೊವಿಡ್-19 ಲಸಿಕೆ ವಿತರಣೆ ಪ್ರಮಾಣ ಇಳಿಮುಖ ಆಗುತ್ತಿರುವುದು ಪರಿಸ್ಥಿತಿಗೆ ಹಿಡಿದ ಕೈಗನ್ನಡಿಯಾಗಿದೆ. ಒಂದು ದಿನದಲ್ಲಿ 30 ಲಕ್ಷಕ್ಕಿಂತ ಹೆಚ್ಚು ಫಲಾನುಭವಿಗಳಿಗೆ ಕೊರೊನಾವೈರಸ್ ಲಸಿಕೆ ನೀಡುತ್ತಿದ್ದ ಸಂಖ್ಯೆ ಇದೀಗ ಅರ್ಧಕ್ಕರ್ಧ ತಗ್ಗಿದೆ. ಕೊವಿಡ್-19 ಲಸಿಕೆ ವಿತರಣೆ ಅಭಿಯಾನ ಆರಂಭವಾಗಿ 118 ದಿನಗಳಲ್ಲಿ 17,91,77,029 ಜನರಿಗೆ ಲಸಿಕೆ ನೀಡಲಾಗಿದೆ. ಗುರುವಾರ ರಾತ್ರಿ 8 ಗಂಟೆ …

Read More »

ಮೇ ಅಂತ್ಯದ ತನಕ ಲಸಿಕೆ ಸಿಗಲ್ಲ; ಸುಪ್ರೀಂಗೆ 9 ರಾಜ್ಯಗಳ ಅಫಿಡೆವಿಟ್

ನವದೆಹಲಿ, ಮೇ 13; ಮೇ ಅಂತ್ಯದ ವೇಳೆಗೆ ನಾವು ಬೇಡಿಕೆ ಇಟ್ಟಿರುವ ಕೋವಿಡ್ ಲಸಿಕೆ ಉತ್ಪಾದಕರಿಂದ ರಾಜ್ಯಕ್ಕೆ ತಲುಪಬಹುದು ಎಂದು 9 ರಾಜ್ಯಗಳು ಸುಪ್ರೀಂಕೋರ್ಟ್‌ಗೆ ಹೇಳಿಕೆ ನೀಡಿವೆ. ಸುಪ್ರೀಂಕೋರ್ಟ್ ಕೋವಿಡ್ ಲಸಿಕೆ ಪೂರೈಕೆ ಬಗ್ಗೆ ಸ್ವಯಂ ಪ್ರೇರಿತ ಅರ್ಜಿಯನ್ನು ದಾಖಲಿಸಿಕೊಂಡು ವಿಚಾರಣೆ ನಡೆಸುತ್ತಿದೆ. ಲಸಿಕೆ ಬರುವ ತನಕ 18-44 ವರ್ಷದವಿಗೆ ಲಸಿಕೆ ನೀಡುವುದು ಕಷ್ಟಸಾಧ್ಯವಾಗಲಿದೆ ಎಂದು ರಾಜ್ಯಗಳು ಹೇಳಿವೆ. ಪಂಜಾಬ್, ಮಹಾರಾಷ್ಟ್ರ, ಕೇರಳ, ಉತ್ತರ ಪ್ರದೇಶ, ಜಾರ್ಖಂಡ್, ಹಿಮಾಚಲ ಪ್ರದೇಶ, …

Read More »

ಅಭಿಮಾನಿಗಳಿಗೆ ಮನವಿಯೊಂದನ್ನು ಮಾಡಿದ ಕೆಪಿಸಿಸಿ ಅಧ್ಯಕ್ಷ ಡಿಕೆಶಿ

ಬೆಂಗಳೂರು, ಮೇ 13; ಕೋವಿಡ್ ಪಿಡುಗು ತೀವ್ರವಾಗಿದ್ದು, ಇಡೀ ರಾಜ್ಯ ಚಿಂತಾಜನಕ ಸ್ಥಿತಿಯಲ್ಲಿದೆ. ಹೀಗಾಗಿ ಈ ಬಾರಿ ಯಾರೂ ನನ್ನ ಜನ್ಮದಿನ ಆಚರಿಸಬಾರದು ಎಂದು ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಮನವಿ ಮಾಡಿದ್ದಾರೆ. ಗುರುವಾರ ಪತ್ರಿಕಾ ಪ್ರಕಟಣೆ ಮೂಲಕ ಅವರು ಕಾಂಗ್ರೆಸ್ ಕಾರ್ಯಕರ್ತರು, ಅಭಿಮಾನಿಗಳಿಗೆ ಈ ಕುರಿತು ಮನವಿ ಮಾಡಿದ್ದಾರೆ. ಮೇ 15ರಂದು ಡಿ. ಕೆ. ಶಿವಕುಮಾರ್ 59ನೇ ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿದ್ದಾರೆ. ಆದರೆ ಹುಟ್ಟು ಹಬ್ಬವನ್ನು ಆಚರಿಸಿಕೊಳ್ಳುತ್ತಿಲ್ಲ. …

Read More »