ನವದೆಹಲಿ: ಮಹಾಮಾರಿ ಕೊರೊನಾ ವೈರಸ್ ನಿಂದ ಭಾರತ ನಲುಗುತ್ತಿದೆ. ಇದರ ಹರಡುವಿಕೆ ತಡೆಗಟ್ಟುವ ಉದ್ದೇಶದಿಂದ ಕೆಲವೆಡೆ ಲಾಕ್ ಡೌನ್ ಮಾಡಿರುವ ಪರಿಣಾಮ ಅನೇಕ ಮಂದಿ ವಲಸೆ ಕಾರ್ಮಿಕರು ಅನ್ನಕ್ಕಾಗಿ ಪರದಾಡುತ್ತಿದ್ದಾರೆ. ಇಂತವರಿಗೆ ಅನೇಕ ಮಂದಿ ತಮ್ಮ ಕೈಲಾದಷ್ಟು ಸಹಾಯ ಮಾಡುತ್ತಿದ್ದಾರೆ. ಅಂತೆಯೇ ಇದೀಗ ಬಾಲಿವುಡ್ ನಟಿ ಸನ್ನಿಲಿಯೋನ್ ಕೂಡ ವಲಸೆ ಕಾರ್ಮಿಕರ ನೆರವಿಗೆ ನಿಂತಿದ್ದಾರೆ. ಬಾಲಿವುಡ್ ನಟಿ ಸನ್ನಿಲಿಯೋನ್ ಅವರು ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯರಾಗಿರುತ್ತಾರೆ. ಸದಾ ಕಷ್ಟಕ್ಕೆ ಮಿಡಿಯುವ ಸನ್ನಿ …
Read More »ಎಲೆಕ್ಷನ್ ಡ್ಯೂಟಿಗೆ ಹಾಜರಾಗಿದ್ದ 2 ಸಾವಿರ ಜನರು ಕೊರೊನಾಗೆ ಬಲಿ – 700ಕ್ಕೂ ಹೆಚ್ಚು ಶಿಕ್ಷಕರು
ಲಕ್ನೊ: ಚುನಾವಣೆ ಡ್ಯೂಟಿಗೆ ಹಾಜರಾಗಿದ್ದ ಸುಮಾರು ಎರಡು ಸಾವಿರ ಉದ್ಯೋಗಿಗಳು ಕೊರೊನಾಗೆ ಬಲಿಯಾಗಿದ್ದಾರೆ. ಇದರಲ್ಲಿ 700ಕ್ಕೂ ಹೆಚ್ಚು ಜನರು ಶಿಕ್ಷಕರಿದ್ದಾರೆ ಎಂದು ಪತ್ರಿಕೆಯೊಂದು ವರದಿಯಾಗಿದೆ. ಕೊರೊನಾ ಎರಡನೇ ಅಲೆಯ ನಡುವೆಯೂ ಉತ್ತರ ಪ್ರದೇಶದಲ್ಲಿ ಪಂಚಾಯ್ತಿ ಚುನಾವಣೆ ನಡೆದಿದೆ. ಆದ್ರೆ ಡ್ಯೂಟಿಗೆ ಹಾಜರಾಗಿದ್ದ ಬಹುತೇಕ ನೌಕರರು ಕೊರೊನಾ ಸೋಂಕಿಗೆ ತುತ್ತಾಗಿದ್ದಾರೆ. ಸದ್ಯ 706 ಶಿಕ್ಷಕರು ಸಾವನ್ನಪ್ಪಿರುವ ಬಗ್ಗೆ ವರದಿಯಾಗಿದ್ದು, ಈ ಸಂಖ್ಯೆ ಸಾವಿರದ ಗಡಿ ದಾಟುವ ಆತಂಕವನ್ನ ಶಿಕ್ಷಣ ಇಲಾಖೆ ಹೊರ …
Read More »ಕೊರೊನಾ `ನಿಯಮ ಗಾಳಿಗೆ ತೂರಿ ಲಸಿಕೆಗೆ ಕ್ಯೂ’ ನಿಂತ ಜನ
ಕೋಲಾರ : ಕೊರೊನಾ ನಿಯಂತ್ರಣಕ್ಕೆ ಸರ್ಕಾರ ಕಟ್ಟುನಿಟ್ಟಿನ ಕ್ರಮಗಳನ್ನು ಜಾರಿ ಮಾಡಿದೆ. ಮಾಸ್ಕ್ ಬಳಸಿ, ಸಾಮಾಜಿಕ ಅಂತರ ಕಾಪಾಡಿಕೊಳ್ಳಿ ಅಂತಾ ಹೇಳುತ್ತಲೆ ಇದೆ. ಆದ್ರೆ ಸರ್ಕಾರಿ ಕಚೇರಿಗಳಲ್ಲೇ ಇದರ ಪಾಲನೆ ಆಗುತ್ತಿಲ್ಲ. ಲಸಿಕಾ ಕೇಂದ್ರಗಳಲ್ಲೂ ಕೂಡ ಜನರು ಸಾಮಾಜಿಕ ಅಂತರ ಮರೆತು ಸಾಲಿನಲ್ಲಿ ನಿಲ್ಲುತ್ತಿದ್ದಾರೆ. ಇದನ್ನ ತಡೆಯಬೇಕಿದ್ದ ಅಧಿಕಾರಿಗಳು ಮಾತ್ರ ಎಸಿ ರೂಮಿನಲ್ಲಿ ತಂಪಾಗಿ ಕುಳಿತ್ತಿದ್ದಾರೆ. ಇದಕ್ಕೆ ತಾಜಾ ಉದಾಹರಣೆ ಕೋಲಾರದ ಲಸಿಕಾ ಕೇಂದ್ರ..! ಹೌದು..! ಇಲ್ಲಿನ ಇಟಿಸಿಎಂ ಆಸ್ಪತ್ರೆ …
Read More »ನನ್ನ ಹೆಂಡತಿಗೆ ವೆಂಟಿಲೇಟರ್ ಕೊಡಿಸೋಕೆ ಆಗ್ತಿಲ್ಲ- ಮೈಸೂರು ಡಿಹೆಚ್ಓ
ಮೈಸೂರು: ಕೊರೊನಾ ಸೋಂಕಿತರಿಗೆ ಬೆಡ್ ಹಂಚಿಕೆ ವಿಚಾರದಲ್ಲಿ ಮೈಸೂರು ಡಿಹೆಚ್ಓ ಅಸಹಾಯಕರಾಗಿ ಮಾತನಾಡಿರುವ ಆಡಿಯೋ ವೈರಲ್ ಆಗಿದೆ. ಕೊರೊನಾ ಸೋಂಕಿತರ ಸಂಬಂಧಿಕರೊಡನೆ ಮಾತನಾಡಿರುವ ಮೈಸೂರು ಡಿಹೆಚ್ಓ, ನನ್ನ ಕೈ ಸೋತೋಗಿದೆ. ನನ್ನ ಹೆಂಡತಿಗೆ ವೆಂಟಿಲೇಟರ್ ಕೊಡಿಸಲು ನನಗೆ ಯೋಗ್ಯತೆ ಇಲ್ಲ. ನೀವು ಯಾರಿಗೆ ಬೇಕಾದ್ರು ಕಂಪ್ಲೇಂಟ್ ಕೊಡಿ. ಇವತ್ತೇ ಮನೆಗೆ ಕಳುಹಿಸಿದರು ನಾನು ಹೋಗಲು ರೆಡಿ. ದಯವಿಟ್ಟು ನನ್ನನ್ನು ಕ್ಷಮಿಸಿಬಿಡಿ ನನ್ನಿಂದ ವೆಂಟಿಲೇಟರ್ ಅರೆಂಜ್ ಮಾಡಲು ಆಗಲ್ಲ ಎಂದು ಬೇಸರ …
Read More »ಚಾಮರಾಜನಗರ ದುರಂತ :ಯಾರೂ ಸಹ ಆಕ್ಸಿಜನ್ ಕೊರತೆಯಿಂದ ಮೃತಪಟ್ಟಿಲ್ಲ.- ಸಚಿವ ಸುರೇಶ್ ಕುಮಾರ್
ಚಾಮರಾಜನಗರ : ಚಾಮರಾಜನಗರದಲ್ಲಿ ನಿನ್ನೆ ಬುಧವಾರ ಬೆಳಿಗ್ಗೆ 9 ಗಂಟೆಯಿಂದ ಇಂದು ಗುರುವಾರ ಬೆಳಿಗ್ಗೆ 9 ಗಂಟೆಯ ಅವಧಿಯಲ್ಲಿ 15 ಮಂದಿ ಕೋವಿಡ್ ರೋಗಿಗಳು ಮೃತಪಟ್ಟಿದ್ದಾರೆ. ಇದಲ್ಲದೆ ಕೋವಿಡ್ ಅಲ್ಲದ ಆದರೆ ಕೋವಿಡ್ ಲಕ್ಷಣವುಳ್ಳ 5 ಮಂದಿ ರೋಗಿಗಳು ಸಾವನ್ನಪ್ಪಿದ್ದಾರೆ ಎಂದು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಸುರೇಶ್ ಕುಮಾರ್ ತಿಳಿಸಿದರು. ಚಾಮರಾಜನಗರದಲ್ಲಿ ಮಾತನಾಡಿದ ಅವರು, ಇವರ್ಯಾರೂ ಸಹ ಆಕ್ಸಿಜನ್ ಕೊರತೆಯಿಂದ ಸತ್ತಿಲ್ಲ. ಚಿಕಿತ್ಸೆ ಫಲಕಾರಿಯಾಗದೆ ಕೊರೋನಾ ರೋಗಿಗಳು ಸತ್ತಿದ್ದಾರೆ. …
Read More »ಕೇರಳದಲ್ಲಿ ಮೇ16ರವರೆಗೆ ಲಾಕ್‌ಡೌನ್ : ಸಿಎಂ ಪಿಣರಾಯಿ ವಿಜಯನ್
ತಿರುವನಂತಪುರ: ಹೆಚ್ಚುತ್ತಿರುವ ಕೋವಿಡ್ ಪ್ರಕರಣಗಳಿಗೆ ಕಡಿವಾಣ ಹಾಕುವ ಉದ್ದೇಶದಿಂದ ದೇವರನಾಡು ಕೇರಳದಲ್ಲಿ ಇದೀಗ ಲಾಕ್ ಡೌನ್ ಘೋಷಣೆಯಾಗಿದೆ. ಮೇ 8ರ ಬೆಳಗ್ಗೆ 6 ಗಂಟೆಯಿಂದ ಮೇ16ರವರೆಗೆ ಕೇರಳ ರಾಜ್ಯದಲ್ಲಿ ಲಾಕ್‌ಡೌನ್ ಜಾರಿ ಮಾಡುತ್ತಿರುವುದಾಗಿ ಸಿಎಂ ಪಿಣರಾಯಿ ವಿಜಯನ್ ಹೇಳಿದ್ದಾರೆ. ಸರ್ಕಾರದ ಈ ನಿರ್ಧಾರಕ್ಕೆ ಬುಧವಾರ ಕೇರಳದಲ್ಲಿ 41,953 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿರುವುದೇ ಕಾರಣವಾಗಿದೆ. ಇದು ಇದುವರೆಗಿನ ದೈನಂದಿನ ದಾಖಲೆಯಾಗಿದೆ. ಲಾಕ್‌ಡೌನ್ ವೇಳೆ ಯಾವುದಕ್ಕೆಲ್ಲ ವಿನಾಯತಿ ಇರಲಿದೆ ಎಂಬುದು ಮಾರ್ಗಸೂಚಿಯಲ್ಲಿ …
Read More »ಶಾಕಿಂಗ್ ನ್ಯೂಸ್: ಕೊರೊನಾಗೆ ಮತ್ತೊಬ್ಬ ನಟಿ ಬಲಿ
ದೇಶದಲ್ಲಿ ಕೊರೊನಾ ಪ್ರಕರಣ ಹೆಚ್ಚಾಗ್ತಿದೆ. ಅನೇಕ ಸೆಲೆಬ್ರಿಟಿಗಳು ಕೊರೊನಾ ಸೋಂಕಿಗೆ ಬಲಿಯಾಗ್ತಿದ್ದಾರೆ. ಈಗ ಮತ್ತೊಬ್ಬ ನಟಿ ಕೊರೊನಾಕ್ಕೆ ಬಲಿಯಾಗಿದ್ದಾರೆ. ಸುಶಾಂತ್ ಸಿಂಗ್ ರಜಪೂತ್ ಅಭಿನಯದ ಚಿತ್ರ ಚಿಚೋರ್ ನಲ್ಲಿ ನಟಿಸಿದ್ದ ಅಭಿಲಾಶಾ ಪಾಟೀಲ್ ಕೊರೊನಾಕ್ಕೆ ಬಲಿಯಾಗಿದ್ದಾರೆ. ವರದಿ ಪ್ರಕಾರ, ಅಭಿಲಾಶಾ ಪಾಟೀಲ್, ವಾರಣಾಸಿಯಲ್ಲಿ ಸಿನಿಮಾ ಶೂಟಿಂಗ್ ಮಾಡ್ತಿದ್ದರು. ಶೂಟಿಂಗ್ ಮುಗಿಸಿ ಮುಂಬೈಗೆ ವಾಪಸ್ ಆದವರಿಗೆ ಕೊರೊನಾ ಕಾಣಿಸಿಕೊಂಡಿದೆ. ಆರಂಭಿಕ ರೋಗಲಕ್ಷಣ ಕಾಣಿಸಿಕೊಂಡ ನಂತ್ರ ಪರೀಕ್ಷೆ ಮಾಡಲಾಗಿತ್ತು. ಮನೆಯಲ್ಲಿಯೇ ನಟಿ ಚಿಕಿತ್ಸೆ …
Read More »ಸಚಿವೆ ಶಶಿಕಲಾ ಜೊಲ್ಲೆ ಒಡೆತನದ ಶಿವಶಂಕರ ಜೊಲ್ಲೆ ಪಬ್ಲಿಕ್ ಶಾಲೆಯಲ್ಲಿ ಕೋವಿಡ್ ಕೇರ್ ಆಸ್ಪತ್ರೆ ಆರಂಭ
ಚಿಕ್ಕೋಡಿ: ಸಚಿವೆ ಶಶಿಕಲಾ ಜೊಲ್ಲೆ ಒಡೆತನದ ಶಿವಶಂಕರ ಜೊಲ್ಲೆ ಪಬ್ಲಿಕ್ ಶಾಲೆಯಲ್ಲಿ ಕೋವಿಡ್ ಕೇರ್ ಆಸ್ಪತ್ರೆ ಆರಂಭಿಸಲಾಗಿದ್ದು, ಸೋಂಕಿತರಿಗೆ ಆಕ್ಸಿಜನ್ ಬೆಡ್ ಸಹಿತ ಉಚಿತ ಚಿಕಿತ್ಸೆ ನೀಡಲಾಗುತ್ತಿದೆ. ಜಿಲ್ಲೆಯ ನಿಪ್ಪಾಣಿ ಪಟ್ಟಣದಲ್ಲಿ ಜೊಲ್ಲೆ ಉದ್ಯೋಗ ಸಮೂಹ ಸಂಸ್ಥೆ ವತಿಯಿಂದ ಆರಂಭಿಸಿರುವ ಕೋವಿಡ್ ಕೇರ್ ಆಸ್ಪತ್ರೆಗೆ ಡಿಸಿಎಂ ಲಕ್ಷ್ಮಣ ಸವದಿ ಚಾಲನೆ ನೀಡಿದರು. ಜೊಲ್ಲೆ ಒಡೆತನದ ಶಿವಶಂಕರ ಜೊಲ್ಲೆ ಪಬ್ಲಿಕ್ ಶಾಲೆಯಲ್ಲಿ ಕೋವಿಡ್ ಕೇರ್ ಆಸ್ಪತ್ರೆ ತೆರೆಯಲಾಗಿದೆ. ಈ ಆಸ್ಪತ್ರೆಯಲ್ಲಿ ಕೊವಿಡ್ …
Read More »ಧಾರವಾಡ : ಗ್ರಾಮಗಳ ತುಂಬಾ ಕೊರೊನಾಯಣ
ಧಾರವಾಡ: ಅಮ್ಮ ಮೈಗೆ ಹಚ್ಚುವ ಸೋಪುಗಳು ಯಾಕೆ ವಾಸನೆ ಬರುತ್ತಿಲ್ಲ? ಎಂದು ಪ್ರಶ್ನೆ ಕೇಳುತ್ತಿರುವ ಹಳ್ಳಿಯ ಮಕ್ಕಳು. ಗುಟಕಾವೂ ರಚಿಸುತ್ತಿಲ್ಲವಲ್ಲೋ ಎಂದು ಪರಸ್ಪರ ಸ್ನೇಹಿತರನ್ನು ಕೇಳಿಕೊಳ್ಳುತ್ತಿರುವ ಹಳ್ಳಿಯ ಪಡ್ಡೆ ಹುಡುಗರು. ಮೈ ಕೈ ನೋವು, ನೆಗಡಿ, ಕೆಮ್ಮಿನಿಂದ ಬಳಲುತ್ತಿರುವ ರೈತ ಸಮೂಹ. ಒಟ್ಟಿನಲ್ಲಿ ಜಿಲ್ಲೆಯ ಗ್ರಾಮೀಣ ಪ್ರದೇಶವನ್ನು ಕೋವಿಡ್ ಸಣ್ಣಗೆ ಪ್ರವೇಶ ಮಾಡಿಯಾಗಿದ್ದು, ಇನ್ನೇನಿದ್ದರೂ ಅದನ್ನು ಎದುರಿಸುವುದೊಂದೇ ದಾರಿ. ಹೌದು, ಇದು ವಾಸ್ತವ. ಹೆಚ್ಚು ಕಡಿಮೆ ಒಂದು ತಿಂಗಳ ಮೊದಲು …
Read More »ನಿಷೇಧಾಜ್ಞೆ ಉಲ್ಲಂಘಿಸಿ ಪ್ರತಿಭಟನೆ: ಬಿಜೆಪಿ ಕಾರ್ಯಕರ್ತರ ವಿರುದ್ಧ ಪ್ರಕರಣ
ಹೊಸಪೇಟೆ (ವಿಜಯನಗರ): ಕೋವಿಡ್ ಲಾಕ್‌ಡೌನ್ ನಿಯಮ ಉಲ್ಲಂಘಿಸಿ ನಗರದ ರೋಟರಿ ವೃತ್ತದಲ್ಲಿ ಬುಧವಾರ ಪ್ರತಿಭಟನೆ ನಡೆಸಿದ ಬಿಜೆಪಿ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲಾಗಿದೆ. ಸೆಕ್ಷನ್ 144 ಕರ್ಫ್ಯೂ ಜಾರಿಯಲ್ಲಿರುವುದರಿಂದ ಜನ ಒಂದೆಡೆ ಗುಂಪು ಗೂಡುವಂತಿಲ್ಲ. ಆದರೆ, ಬಿಜೆಪಿ ಕಾರ್ಯಕರ್ತರು ಒಂದೆಡೆ ಸೇರಿ ಪ್ರತಿಭಟನೆ ನಡೆಸಿದರು. ಎಲ್ಲರೂ ಮಾಸ್ಕ್ ಧರಿಸಿದ್ದರು. ಆದರೆ, ಅಂತರವಿರಲಿಲ್ಲ. ಪಟ್ಟಣ ಠಾಣೆಯ ಕೂಗಳತೆಯ ದೂರದಲ್ಲೇ ಇರುವ ರೋಟರಿ ವೃತ್ತದಲ್ಲಿ ಏಕಾಏಕಿ ಪ್ರತಿಭಟನೆ ನಡೆಸಿದ್ದರು. ‘ಪೊಲೀಸ್ ಇಲಾಖೆಯಿಂದ ಅನುಮತಿ …
Read More »
Laxmi News 24×7