Breaking News

ರಾಜ್ಯ

ಬಳ್ಳಾರಿ; ವಿಮ್ಸ್‌ನಲ್ಲಿ ಬೆಡ್ ಸಿಗದೇ ಆಸ್ಪತ್ರೆ ಮುಂದೆ ವ್ಯಕ್ತಿ ನರಳಾಟ

ವಿಜಯನಗರ, ಮೇ 04; ಬೆಂಗಳೂರು ನಗರದಲ್ಲಿ ಬೆಡ್ ಸಿಗದೇ ಕೋವಿಡ್ ಸೋಂಕಿತರು ಪರದಾಡುತ್ತಿದ್ದಾರೆ. ಬಳ್ಳಾರಿಯ ವಿಮ್ಸ್‌ನಲ್ಲಿಯೂ ಇಂತಹ ಪ್ರಕರಣ ಈಗ ಬೆಳಕಿಗೆ ಬಂದಿದೆ. ಬೆಡ್ ಸಿಗದೆ ಕೋವಿಡ್ ಸೋಂಕಿತ ನರಳಾಡಿದ ಘಟನೆ ಮಂಗಳವಾರ ನಡೆದಿದ್ದು, ವಿಡಿಯೋ ವೈರಲ್ ಆಗಿದೆ. ಬಳ್ಳಾರಿಯಲ್ಲಿಯೂ ಬೆಡ್‌ನ ಕೊರತೆ ಶುರುವಾಗಿದೆಯೇ? ಎಂಬ ಅನುಮಾನ ಈಗ ಉಂಟಾಗಿದೆ. ಎರಡು ಗಂಟೆಯಿಂದ ಬೆಡ್ ಸಿಗದೆ ಕೋವಿಡ್ ಸೋಂಕಿತ ರೋಗಿ ಆಸ್ಪತ್ರೆಯ ಬಾಗಿಲ ಮುಂದೆ ಮಲಗಿ ನರಳಾಡಿದ್ದಾನೆ. ಮಗನಿಗೆ ಬೆಡ್‌ …

Read More »

ಆಕ್ಸಿಜನ್ ಕೊರತೆಗೆ ಕಾರಣ ಯಾರು : ಪ್ರಧಾನಿಗಳೇ ನಮ್ಮ ಕರ್ನಾಟಕ ಅಂದ್ರೆ ಯಾಕಿಷ್ಟು ನಿರ್ಲಕ್ಷ್ಯ..?

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಲಂಗು ಲಗಾಮು ಇಲ್ಲದೇ ಹುಚ್ಚು ಕುದುರೆಯಂತೆ ಓಡುತ್ತಿರುವ ಕೊರೊನಾಗೆ ಕಡಿವಾಣ ಹಾಕಲು ಹರಸಾಹಸಪಡುತ್ತಿದೆ. ಈ ಮಧ್ಯೆ ರಾಜ್ಯದಲ್ಲಿ ಆಕ್ಸಿಜನ್ ಕೊರತೆ ಎದ್ದು ಕಾಣುತ್ತಿದ್ದು, ಆಮ್ಲಜಕನವಿಲ್ಲದೇ ನೂರಾರು ಮಂದಿ ಕೊನೆಯುಸಿರೆಳೆಯುತ್ತಿದ್ದಾರೆ. ಆಕ್ಸಿಜನ್ ಇದೆ ಎನ್ನುವ ಸರ್ಕಾರ ಈ ಸಮಸ್ಯೆಯನ್ನು ನೀಗಿಸಲು ನಾನಾ ಸರ್ಕಸ್ ನಡೆಸುತ್ತಿದೆ. ಈ ಮಧ್ಯೆ ರಾಜ್ಯದಲ್ಲಿ ಆಕ್ಸಿಜನ್ ಕೊರತೆ ಉಂಟಾಗಲು ನರೇಂದ್ರ ಮೋದಿ ನೇತೃತ್ವದ …

Read More »

ಸಣ್ಣಮಿಕಗಳನ್ನು ಹಿಡಿದಿರುವುದು ದೊಡ್ಡ ತಿಮಿಂಗಿಲಗಳ ರಕ್ಷಣೆಗಾ : ಸಿದ್ದರಾಮಯ್ಯ ಗರಂ

ಬೆಂಗಳೂರು : ರವಿಸುಬ್ರಹ್ಮಣ್ಯ,‌ ಸತೀಶ್ ರೆಡ್ಡಿ‌ ಅವರೇ ಕೋವಿಡ್ ನಿರ್ವಹಣೆಯ ಗುಪ್ತ ಕಾರ್ಯಾಚರಣೆ‌ ನಡೆಸಬೇಕಾಗಿರುವುದು ಬಿಬಿಎಂಪಿಯ ಅಧಿಕಾರಿಗಳ ವಿರುದ್ಧವಲ್ಲ,‌ ವಿಧಾನಸೌಧದಲ್ಲಿ ಕೂತಿರುವ ಮುಖ್ಯಮಂತ್ರಿ,‌ ಸಚಿವರು ಮತ್ತು ಬಿಜೆಪಿ ಶಾಸಕರು‌, ಸಂಸದರ ವಿರುದ್ಧ. ಸಣ್ಣಮಿಕಗಳನ್ನು ಹಿಡಿದಿರುವುದು ದೊಡ್ಡ ತಿಮಿಂಗಿಲಗಳ ರಕ್ಷಣೆಗಾ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಬಿಜೆಪಿ ವಿರುದ್ಧ ಗುಡುಗಿದ್ದಾರೆ. ಕೋವಿಡ್ ಪ್ರಾರಂಭದ ದಿನಗಳಲ್ಲಿಯೇ ನಾನು ಪತ್ರಿಕಾಗೋಷ್ಠಿ ನಡೆಸಿ ಕೋವಿಡ್ ನಿರ್ವಹಣೆಯಲ್ಲಿನ ಭ್ರಷ್ಟಾಚಾರವನ್ನು ದಾಖಲೆ‌ಸಹಿತ ಬಹಿರಂಗಗೊಳಿಸಿದ್ದೆ. ಅದರ ಜೊತೆ ಈಗ ನೀವು …

Read More »

ಮೈಸೂರಿನಲ್ಲಿ ಅಕ್ರಮ ಆಕ್ಸಿಜನ್ ಸಿಲಿಂಡರ್ ಮಾರಾಟ ;ಓರ್ವನನ್ನು ಬಂಧಿಸಿದ ಸಿಸಿಬಿ ಪೊಲೀಸರು

ಮೈಸೂರು: ಕಾಳ ಸಂತೆಯಲ್ಲಿ ಆಕ್ಸಿಜನ್ ಸಿಲಿಂಡರನ್ನು ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ಪ್ರಕರಣವೊಂದು ಮೈಸೂರಿನಲ್ಲಿ ಬೆಳಕಿಗೆ ಬಂದಿದೆ. ನಂಜನಗೂಡು ಸಮೀಪದ ಪೆಟ್ರೋಲ್ ಬಂಕ್ ಬಳಿ ದಾಖಲೆ ಇಲ್ಲದೆ, ಅಕ್ರಮವಾಗಿ ಆಕ್ಸಿಜನ್ ಸಿಲಿಂಡರ್ ಮಾರಾಟ ಮಾಡಲು ಯತ್ನಿಸುತ್ತಿದ್ದ ಮಧುಕುಮಾರ್(37) ಎಂಬ ಆರೋಪಿಯನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ನಂಜನಗೂಡು ತಾಲೂಕು ಹೊಸಕೋಟೆಯ ಮಧುಕುಮಾರ್ ಎನ್ನುವ ವ್ಯಕ್ತಿ ಅಕ್ರಮವಾಗಿ ಆಕ್ಸಿಜನ್ ಮಾರಾಟ ಮಾಡುತ್ತಿದ್ದ. ಆರೋಪಿ ಬಳಿ ಇದ್ದ ತುಂಬಿದ ಆಕ್ಸಿಜನ್ ಸಿಲಿಂಡರ್ ವಶಕ್ಕೆ ಪಡೆದಿರುವ …

Read More »

ದೆಹಲಿಯ ಭಾರತೀಯ ಸೇನಾ ಆಸ್ಪತ್ರೆಯಲ್ಲಿ ದೆಹಲಿ ಸರ್ಕಾರವು ಆಕ್ಸಿಜನ್ ಸರಬರಾಜು ಗಣನೀಯವಾಗಿ ಕಡಿತ

ನವ ದೆಹಲಿ : ದೆಹಲಿಯ ಭಾರತೀಯ ಸೇನಾ ಆಸ್ಪತ್ರೆಯಲ್ಲಿ ದೆಹಲಿ ಸರ್ಕಾರವು ಆಕ್ಸಿಜನ್ ಸರಬರಾಜು ಗಣನೀಯವಾಗಿ ಕಡಿತಗೊಳಿಸಿದ ಹಿನ್ನೆಲೆಯಲ್ಲಿ ಮೆಡಿಕಲ್ ಆಕ್ಸಿಜನ್ ಕೊರತೆಯನ್ನು ಎದುರಿಸುತ್ತಿದೆ ಎಂದು ಮಿಲಿಟರಿ ಮೂಲಗಳು ತಿಳಿಸಿವೆ. ಈ ಬಗ್ಗೆ ಮಾಹಿತಿ ಹಂಚಿಕೊಂಡ ಆಸ್ಪತ್ರೆಗೆ ಸಂಬಂಧಿಸಿದ ಅಧಿಕಾರಿಯೊಬ್ಬರು, ಸದ್ಯದ ಮಟ್ಟಿಗೆ ಆಕ್ಸಿಜನ್ ಕೊರತೆಯಿಲ್ಲದಿದ್ದರೂ, ನಿತ್ಯ ಕಳಿಸುತ್ತಿರುವ ಆಕ್ಸಿಜನ್ ಪ್ರಮಾಣವನ್ನು ಕಡಿತಗೊಳಿಸಿರುವುದರಿಂದ ಮುಂದೆ ಕೋವಿಡ್ 19 ರೋಗಿಗಳ ಚಿಕಿತ್ಸೆಯಲ್ಲಿ ಗಂಭೀರ ಸಮಸ್ಯೆಗಳು ಉಂಟಾಗಬಹುದು ಎಂದು ಹೇಳಿದ್ದಾರೆ. 450 ಹಾಸಿಗೆಗಳ …

Read More »

ವಿದ್ಯಾರ್ಥಿನಿ ಸಾವಿಗೆ ಬೆಡ್‌ ಸಿಗದಿರುವುದೇ ಕಾರಣ: ಆರೋಪ

ದಾವಣಗೆರೆ: ಭಾರತ್‌ ಕಾಲೊನಿಯ 17 ವರ್ಷದ ಬಾಲಕಿ ಮಂಗಳವಾರ ಮೃತಪಟ್ಟಿದ್ದಾಳೆ. ಎಲ್ಲ ಆಸ್ಪತ್ರೆಗಳಿಗೆ ಅಲೆದಾಟ ನಡೆಸಿದರೂ ಬೆಡ್‌ ಸಿಗದೇ, ಸಕಾಲದಲ್ಲಿ ಚಿಕಿತ್ಸೆ ಸಿಗದೇ ಇದ್ದಿದ್ದರಿಂದ ಈ ಸಾವು ಉಂಟಾಗಿದೆ ಎಂದು ಪೋಷಕರು ಆರೋಪಿಸಿದ್ದಾರೆ. ನಗರದ ಭಾರತ್‌ ಕಾಲೊನಿಯ 12ನೇ ಕ್ರಾಸ್‌ ನಿವಾಸಿ ಮಂಜಪ್ಪ-ವೇಡಿಯಮ್ಮ ದಂಪತಿಯ ಮಗಳು ಸಂಗೀತ ಮೃತಪಟ್ಟವಳು. ಸಂಗೀತಾಳಿಗೆ ಸೋಮವಾರ ರಾತ್ರಿ ಎದೆನೋವು ಕಾಣಿಸಿಕೊಂಡಿತ್ತು. ಸ್ಥಳೀಯ ಕ್ಲಿನಿಕ್‌ನಲ್ಲಿ ಗ್ಲುಕೋಸ್‌ ಕೊಡಿಸಿ ಚಿಕಿತ್ಸೆಗಾಗಿ ವಿವಿಧ ಆಸ್ಪತ್ರೆಗೆ ಅಲೆದಾಡಿದ್ದಾರೆ. ಎಲ್ಲಿಯೂ ಬೆಡ್‌ …

Read More »

ಐಸಿಯುನಲ್ಲಿ ವಿದ್ಯುತ್ ಸಂಪರ್ಕ ಕಡಿತ: ಮಂಡ್ಯದಲ್ಲಿ ಕೋವಿಡ್ ಸೋಂಕಿತ ಯುವಕ ಸಾವು

ಮಂಡ್ಯ: ಐಸಿಯುನಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಂಡ ಪರಿಣಾಮ ಕೋವಿಡ್ ಸೋಂಕಿತ ಯುವಕನೊಬ್ಬ ಮೃತಪಟ್ಟಿರುವ ಘಟನೆ ನಗರದ ಜಿಲ್ಲಾಸ್ಪತ್ರೆಯಲ್ಲಿ ಮಂಗಳವಾರ ನಡೆದಿದೆ. ಇಂಡುವಾಳು ಗ್ರಾಮದ ಸುನೀಲ್(29) ಮೃತಪಟ್ಟ ಯುವಕ. ಈತನಿಗೆ 14 ದಿನದ ಹಿಂದೆ ಸೋಂಕು ದೃಢಪಟ್ಟಿತ್ತು. ಮೊದಲ ಮೂರು ದಿನ ಮಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಮನೆಗೆ ತೆರಳಿದ್ದನು. ಮನೆಗೆ ಬಂದ ಎರಡು ದಿನದಲ್ಲಿ ಉಸಿರಾಟ ಸಮಸ್ಯೆ ಕಾಣಿಸಿಕೊಂಡಿದೆ. ತಕ್ಷಣ ಮಿಮ್ಸ್ ಆಸ್ಪತ್ರೆಯ ಐಸಿಯುನಲ್ಲಿ ವೆಂಟಿವೇಟರ್ ವ್ಯವಸ್ಥೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. …

Read More »

ಚಾಮರಾಜನಗರ: ಸೂಕ್ತ ಸಮಯಕ್ಕೆ ಬೆಡ್ ಸಿಗದೆ ಯುವಕ ಸಾವು: ಆಸ್ಪತ್ರೆ ಮುಂದೆ ಸಂಬಂಧಿಕರ ಆಕ್ರೋಶ

ಚಾಮರಾಜನಗರ: ರಕ್ತದ ಆಮ್ಲಜನಕ ಮಟ್ಟ ಕಡಿಮೆಯಾಗಿ ಉಸಿರಾಟದ ತೊಂದರೆಯಿಂದ ಜಿಲ್ಲಾ ಕೋವಿಡ್ ಆಸ್ಪತ್ರೆಗೆ ಚಿಕಿತ್ಸೆಗೆ ಬಂದ ಯುವಕನಿಗೆ ಬೆಡ್ ದೊರಕದೇ ಮೃತಪಟ್ಟ ಘಟನೆ ನಗರದಲ್ಲಿ ಮಂಗಳವಾರ ತಡರಾತ್ರಿ ನಡೆದಿದೆ. ಇದರಿಂದ ರೊಚ್ಚಿಗೆದ್ದ ಯುವಕನ ಕಡೆಯವರು ಜಿಲ್ಲಾಸ್ಪತ್ರೆಯ ಕಿಟಕಿ ಗಾಜುಗಳನ್ನು ಒಡೆದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಚಾಮರಾಜನಗರದ ಅಂಬೇಡ್ಕರ್ ಬಡಾವಣೆಯ ನಿವಾಸಿ ಅಭಿಷೇಕ್ (25) ಮೃತ ಯುವಕ. ಕಳೆದ ಆರು ದಿನದ ಹಿಂದೆಯೇ ಯುವಕನಿಗೆ ಸೋಂಕು ಧೃಢಪಟ್ಟಿತ್ತು. ಹೋಂ ಐಸೋಲೇಷನ್ ನಲ್ಲಿದ್ದರು. ಉಸಿರಾಟದ …

Read More »

ಇಂದು ದೀದಿ ಪ್ರಮಾಣ ವಚನ : 3ನೇ ಬಾರಿ ಮುಖ್ಯಮಂತ್ರಿಯಾಗುತ್ತಿರುವ ಮಮತಾ ಬ್ಯಾನರ್ಜಿ

ಕೊಲ್ಕತ್ತಾ : ತೃಣಮೂಲ ಕಾಂಗ್ರೆಸ್ ಅಧ್ಯಕ್ಷೆ ಮಮತಾ ಬ್ಯಾನರ್ಜಿ ಅವರು ಪಶ್ಚಿಮ ಬಂಗಾಳದ ಮುಖ್ಯಮಂತ್ರಿಯಾಗಿ ಇಂದು (ಬುಧವಾರ) ಕೋಲ್ಕತ್ತಾದ ರಾಜ ಭವನದಲ್ಲಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ರಾಜ್ಯದಲ್ಲಿ ಕೋವಿಡ್ -19 ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಕೋವಿಡ್ ನಿಯಮಾವಳಿಗಳ ನಿರ್ಬಂಧಗಳನ್ನು ಗಮನದಲ್ಲಿಟ್ಟುಕೊಂಡು ಸರಳವಾಗಿ ಪ್ರಮಾಣವಚನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. 2021ರ ವಿಧಾನ ಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಸಾಧಿಸುವ ಮೂಲಕ ದೀದಿ ಮೂರನೇ ಬಾರಿಗೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುತ್ತಿದ್ದಾರೆ. …

Read More »

ಹೊಸ ಗೈಡ್ ಲೈನ್ ಬಿಡುಗಡೆ: ಆರೋಗ್ಯವಂತರಿಗೆ, ಸೋಂಕಿತರಾಗಿದ್ದವರಿಗೆ ಕೋವಿಡ್ ಟೆಸ್ಟ್ ಬೇಕಿಲ್ಲ

ನವದೆಹಲಿ: ಐಸಿಎಂಆರ್ ನಿಂದ ಹೊಸ ಗೈಡ್ ಲೈನ್ ಬಿಡುಗಡೆ ಮಾಡಲಾಗಿದ್ದು, ಪಾಸಿಟಿವ್ ಬಂದವರಿಗೆ ಟೆಸ್ಟ್ ಮಾಡಬೇಕಿಲ್ಲ. ಪ್ರಯಾಣಿಕರಿಗೆ RTPCR ಕಡ್ಡಾಯವಲ್ಲ ಎಂದು ಕೊರೋನಾ ಪರೀಕ್ಷೆಯ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ. ಒಮ್ಮೆ ಪಾಸಿಟಿವ್ ಆದವರಿಗೆ ಮತ್ತೆ ಟೆಸ್ಟ್ ಮಾಡಬೇಕಿಲ್ಲ ಎಂದು ಹೇಳಲಾಗಿದೆ. ಆರೋಗ್ಯವಂತರು ಅಗತ್ಯ ಕಾರ್ಯಗಳಿಗಾಗಿ ಅಂತರಾಜ್ಯ ಪ್ರಯಾಣಮಾಡುವಾಗ ಅವರಿಗೆ RTPCR ಪರೀಕ್ಷೆ ಕಡ್ಡಾಯ ಬೇಡವೆಂದು ಕೇಂದ್ರ ಸರ್ಕಾರ ಹೊಸ ಕೋವಿಡ್ ಪರೀಕ್ಷೆ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಪ್ರಯೋಗಾಲಯಗಳ ಮೇಲೆ ಹೆಚ್ಚಿನ …

Read More »