Breaking News

ರಾಜ್ಯ

ಬಿಜೆಪಿಗೆ ಬಿಗ್ ಶಾಕ್ ಒಂಬತ್ತು ಸಾವಿರ ಮತಗಳ ಅಂತರದಲ್ಲಿ ಮುಂದಿದ್ದಾರೆ ಸತೀಶ್ ಜಾರಕಿಹೊಳಿ

ಬೆಳಗಾವಿಯಲ್ಲಿ ಬಿಜೆಪಿಗೆ ಬಿಗ್ ಶಾಕ್ ಒಂಬತ್ತು ಸಾವಿರ ಮತಗಳ ಅಂತರದಲ್ಲಿ ಮುಂದಿದ್ದಾರೆ ಸತೀಶ್ ಜಾರಕಿಹೊಳಿ ಸಮಯ ಕಳೆದಂತೆ ಮತ್ತೆ ಸತೀಶ್ ಜಾರಕಿಹೊಳಿ ಮೇಲುಗೈ ಅಭಿಮಾನಿ ಗಳಲ್ಲಿ ಉತ್ಸಾಹದ ವಾತಾವರಣ ಒಂಬತ್ತು ಸಾವಿರಕ್ಕೂ ಹೆಚ್ಚಿನ ಮತ ಗಳಿಂದ ಸಾಹುಕಾರ ಮುಂದೆ

Read More »

ತಮಿಳುನಾಡಿನಲ್ಲಿ ಮೇ 6 ರಂದು ಡಿಎಂಕೆಯಿಂದ ಹೊಸ ಸರ್ಕಾರ ರಚನೆ

ಚೆನ್ನೈ, ಮೇ 2: ತಮಿಳುನಾಡಿನಲ್ಲಿ ಮೇ 6 ರಂದು ಡಿಎಂಕೆ ಹೊಸ ಸರ್ಕಾರ ರಚಿಸುವುದು ಬಹುತೇಕ ಖಾತ್ರಿಯಾಗಿದೆ. ಇಂದು ರಾಜಕೀಯದಲ್ಲಿ ತಮ್ಮದೇ ಆದ ಸ್ಥಾನವನ್ನು ರೂಪಿಸಿಕೊಳ್ಳಲು ಶ್ರಮಿಸುತ್ತಿರುವ, ಡಿಎಂಕೆ ಮತ್ತು ಎಐಡಿಎಂಕೆ ಪಕ್ಷಗಳ ಹೊಸ ತಲೆಮಾರಿನ ನಾಯಕರ ಭವಿಷ್ಯವೂ ನಿರ್ಧಾರವಾಗಲಿದೆ.   ತಮಿಳುನಾಡು, ಕೇರಳ, ಪುದುಚೇರಿ, ಅಸ್ಸಾಂ, ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯ ಫಲಿತಾಂಶ ಇಂದು ಹೊರಬೀಳಲಿದೆ. ಡಿಎಂಕೆ ಮುಖ್ಯಸ್ಥ ಸ್ಟಾಲಿನ್ ಹಾಗೂ ಅವರ ಪುತ್ರ ಉದಯನಿಧಿ ಸ್ಟಾಲಿನ್ ಮುನ್ನಡೆ …

Read More »

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆ ಫಲಿತಾಂಶ : 200 ಕ್ಷೇತ್ರಗಳಲ್ಲಿ ಟಿಎಂಸಿ ಮುನ್ನಡೆ

ನವದೆಹಲಿ : ತೀವ್ರ ಕುತೂಹಲ ಕೆರಳಿಸಿರುವ ಪಂಚರಾಜ್ಯಗಳ ಚುನಾವಣೆ ಫಲಿತಾಂಶ ಇಂದು ಪ್ರಕಟವಾಗಲಿದ್ದು, ಬೆಳಗ್ಗೆ 8 ಗಂಟೆಯಿಂದ ಮತ ಎಣಿಕೆ ಶುರುವಾಗಿದ್ದು, ಮಧ್ಯಾಹ್ನದ ವೇಳೆಗೆ ಸೋಲು ಗೆಲುವಿನ ಸ್ಪಷ್ಟ ಚಿತ್ರಣ ಸಿಗಲಿದೆ. ಕೇರಳ ವಿಧಾನಸಭೆ ಚುನಾವಣೆ ಫಲಿತಾಂಶ : ಕೇರಳದಲ್ಲಿ ಸತತವಾಗಿ 2 ನೇ ಬಾರಿಗೆ ಎಲ್ ಡಿಎಫ್ ಅಧಿಕಾರ ಸಿಗುವ ಸಾಧ್ಯತೆ ಇದೆ. ಕೇರಳ ವಿಧಾನಸಭಾ ಚುನಾವಣೆಮತ ಎಣಿಕೆಯಲ್ಲಿ ಎಲ್ ಡಿಎಫ್ 91 ಸ್ಥಾನಗಳಲ್ಲಿ, ಯುಡಿಎಫ್ 48 ರಲ್ಲಿ …

Read More »

ಇಂದು ಉಪ ಚುನಾವಣೆ ಫಲಿತಾಂಶ ಪ್ರಕಟ: ಸಂಭ್ರಮಾಚರಣೆಗೆ ಅವಕಾಶವಿಲ್ಲ

ಉಡುಪಿ, : ಕರ್ನಾಟಕದ ಒಂದು ಲೋಕಸಭೆ ಹಾಗೂ ಎರಡು ವಿಧಾನಸಭೆ ಕ್ಷೇತ್ರಗಳ ಉಪ ಚುನಾವಣೆಗಳ ಫಲಿತಾಂಶ ಇಂದು ಪ್ರಕಟವಾಗಲಿದ್ದು, ಯಾವುದೇ ರೀತಿಯ ಸಂಭ್ರಮಾಚರಣೆಗೆ ಅವಕಾಶ ಇಲ್ಲ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ. ಉಡುಪಿ ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉಪ ಚುನಾವಣೆ ಫಲಿತಾಂಶ ಸಂದರ್ಭದಲ್ಲಿ ಕಟ್ಟುನಿಟ್ಟಿನ ನಿಯಮ ಜಾರಿ ಮಾಡುತ್ತೇವೆ. ಯಾವುದೇ ರೀತಿಯ ಸಂಭ್ರಮಾಚರಣೆಗೆ ಅವಕಾಶ ಇಲ್ಲ. ಚುನಾವಣಾ ಆಯೋಗ ಈಗಾಗಲೇ ಸೂಚನೆ ನೀಡಿದೆ. ಯಾವುದೇ …

Read More »

ಸರ್ಕಾರದ ಹೊಸ ಮಾರ್ಗಸೂಚಿಗೆ ತರಕಾರಿ ಮಾರಾಟ ಮಹಿಳೆಯರ ಕಣ್ಣೀರು

ಗದಗ: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಪ್ರಕರಣ ಸಂಖ್ಯೆ ಹೆಚ್ಚಾಗುತ್ತಿದೆ. ಇದಕ್ಕನುಗುಣವಾಗಿ ಸಾವಿನ ಸಂಖ್ಯೆಯು ಗಣನೀಯವಾಗಿ ಏರಿಕೆಯಾಗುತ್ತಿದೆ. ಈ ಹಿನ್ನೆಲೆ ರಾಜ್ಯ ಸರ್ಕಾರ 14 ದಿನಗಳ ಕಾಲ ಲಾಕ್​ಡೌನ್​ ಜಾರಿಗೊಳಿಸಿದೆ. ಲಾಕ್​ಡೌನ್​ ನಡುವೆ ನಿನ್ನೆಯ ವರೆಗೆ ಬೆಳಿಗ್ಗೆ 6 ಗಂಟೆಯಿಂದ ಬೆಳಿಗ್ಗೆ 10 ಗಂಟೆಯ ವರೆಗೆ ಅಗತ್ಯ ವಸ್ತುಗಳನ್ನು ಖರೀದಿಸಲು ಅವಕಾಶ ನೀಡಿತ್ತು. ಈ ವೇಳೆ ಜನರು ಕೊರೊನಾ ಬಗ್ಗೆ ಕಿಂಚಿತ್ತು ಭಯ ಪಡದೇ, ಮಾಸ್ಕ್ ಧರಿಸದೆ ಮತ್ತು ಸಾಮಾಜಿಕ …

Read More »

ಬೆಂಗಳೂರು: ಹೊರವಲಯದಲ್ಲಿ ಸಾಮೂಹಿಕ ಶವಸಂಸ್ಕಾರ ಮುಂದುವರಿಕೆ

ಬೆಂಗಳೂರು: ಕೋವಿಡ್‌ನಿಂದ ಸಾವಿಗೀಡಾಗುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಏರುತ್ತಿದ್ದು, ಚಿತಾಗಾರಗಳ ಮುಂದೆ ಶವಗಳ ಸಾಲು ಉದ್ದವಾಗುತ್ತಲೇ ಇದೆ. ಮೃತರ ಸಂಬಂಧಿಕರು ದಿನವಿಡೀ ಕಾಯಬೇಕಾದ ಸ್ಥಿತಿ ನಿರ್ಮಾಣವಾಗಿದೆ. ನಗರದ ಹೊರವಲಯದ ತಾವರೆಕೆರೆ ಮತ್ತು ಇಲ್ಲಿಂದ 2 ಕಿ.ಮೀ. ದೂರದಲ್ಲಿರುವ ಗಿಡ್ಡೇನಹಳ್ಳಿ, ಚಾಮರಾಜಪೇಟೆ ಸ್ಮಶಾನದಲ್ಲಿ ಸಾಮೂಹಿಕ ಶವಸಂಸ್ಕಾರಕ್ಕೆ ಸರ್ಕಾರ ವ್ಯವಸ್ಥೆ ಮಾಡಿದ್ದು, ಇಲ್ಲಿಯೂ ಕೂಡ ಆಂಬುಲೆನ್ಸ್‌ಗಳು ಸಾಲುಗಟ್ಟಿ ನಿಂತಿವೆ. ಏಕಕಾಲಕ್ಕೆ 26 ಶವಗಳನ್ನು ದಹನ ಮಾಡಲಾಗುತ್ತಿದೆ. ಎರಡು ಪಾಳಿಗಳಲ್ಲಿ ಸಿಬ್ಬಂದಿ ಕಾರ್ಯನಿರ್ವಹಿಸುತ್ತಿದ್ದರು. ಶನಿವಾರ …

Read More »

ಕೇರಳ ವಿಧಾನಸಭೆ ಚುನಾವಣೆ ಫಲಿತಾಂಶ : `LDF’ ಗೆ ಭರ್ಜರಿ ಮುನ್ನಡೆ

ನವದೆಹಲಿ : ತೀವ್ರ ಕುತೂಹಲ ಕೆರಳಿಸಿರುವ ಪಂಚರಾಜ್ಯಗಳ ಚುನಾವಣೆ ಫಲಿತಾಂಶ ಇಂದು ಪ್ರಕಟವಾಗಲಿದ್ದು, ಬೆಳಗ್ಗೆ 8 ಗಂಟೆಯಿಂದ ಮತ ಎಣಿಕೆ ಶುರುವಾಗಿದ್ದು, ಮಧ್ಯಾಹ್ನದ ವೇಳೆಗೆ ಸೋಲು ಗೆಲುವಿನ ಸ್ಪಷ್ಟ ಚಿತ್ರಣ ಸಿಗಲಿದೆ. ಕೇರಳ ವಿಧಾನಸಭೆ ಚುನಾವಣೆ ಫಲಿತಾಂಶ : ಕೇರಳದಲ್ಲಿ ಸತತವಾಗಿ 2 ನೇ ಬಾರಿಗೆ ಎಲ್ ಡಿಎಫ್ ಅಧಿಕಾರ ಸಿಗುವ ಸಾಧ್ಯತೆ ಇದೆ. ಕೇರಳ ವಿಧಾನಸಭಾ ಚುನಾವಣೆಮತ ಎಣಿಕೆಯಲ್ಲಿ ಎಲ್ ಡಿಎಫ್ 76 ಸ್ಥಾನಗಳಲ್ಲಿ, ಯುಡಿಎಫ್ 47 ರಲ್ಲಿ …

Read More »

ಪಶ್ಚಿಮ ಬಂಗಾಳದಲ್ಲಿ TMC, ತಮಿಳುನಾಡಲ್ಲಿ DMKಗೆ ಮುನ್ನಡೆ; ಮುಗ್ಗರಿಸುತ್ತಾ ಬಿಜೆಪಿ?

ಬೆಂಗಳೂರು: ಪಂಚರಾಜ್ಯಗಳ ವಿಧಾನಸಭೆ ಚುನಾವಣೆಯ ಮತ ಎಣಿಗೆ ಶುರುವಾಗಿದೆ. ಪಶ್ಚಿಮ ಬಂಗಾಳದಲ್ಲಿ ಆಡಳಿತಾರೂಢ ಎಂಟಿಸಿ ಆರಂಭಿಕ ಮುನ್ನಡೆ ಕಾಯ್ದುಕೊಂಡಿದೆ. ಮಮತಾ ಬ್ಯಾನರ್ಜಿ ಸರ್ಕಾರದತ್ತ ಈ ಬಾರಿಯೂ ಮತದಾರರು ವಾಲಿದ್ದು, ಬೆಳಗ್ಗೆ 10 ಗಂಟೆ ಹೊತ್ತಿಗೆ 102 ಕ್ಷೇತ್ರಗಳಲ್ಲಿ ಟಿಎಂಸಿ ಮುನ್ನಡೆ ಕಾಯ್ದುಕೊಂಡಿದೆ. ಇನ್ನು ಬಿಜೆಪಿಯೂ ಪ್ರಬಲ ಪೈಪೋಟಿ ನೀಡುತ್ತಿದ್ದು 84 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. 292 ಕ್ಷೇತ್ರಗಳ ಮತ ಎಣಿಕೆ ನಡೆಯುತ್ತಿದ್ದು, ಯಾವ ಪಕ್ಷ ಜನ ಬೆಂಬಲದೊಂದಿಗೆ ಮ್ಯಾಜಿಕ್​ ನಂಬರ್​ …

Read More »

ಗೋಕಾಕ್ ಮತ ಕ್ಷೇತ್ರದಲ್ಲಿ ಕಾಂಗ್ರೆಸ್ ಹಿನ್ನಡೆ ಅನುಭವಿಸಿದೆ. ಲಕ್ಷ್ಮೀ ಹೆಬ್ಬಾಳಕರ ಅವರ ಕ್ಷೇತ್ರದಲ್ಲಿ ಕಾಂಗ್ರೆಸ್ ಭಾರೀ ಹಿನ್ನಡೆ ಅನುಭವಿಸಿದೆ

ಬೆಳಗಾವಿ: ಬೆಳಗಾವಿ ಲೋಕಸಭೆ ಉಪಚುನಾವಣೆಯಲ್ಲಿ ಅಣ್ಣ ರಮೇಶ ಜಾರಕಿಹೊಳಿಯ ಕ್ಷೇತ್ರ ಗೋಕಾಕದಲ್ಲಿ ಕಾಂಗ್ರೆಸ್ ನ ಸತೀಶ ಜಾರಕಿಹೊಳಿಗೆ ಈ ಕ್ಷಣದಲ್ಲಿ ಹಿನ್ನಡೆ ಆಗಿದ್ದು, ಜತೆಗೆ ಲಕ್ಷ್ಮೀ ಹೆಬ್ಬಾಳಕರ ಅವರ ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿಯೂ ಕಾಂಗ್ರೆಸ್ ಮೂರನೇ ಸ್ಥಾನಕ್ಕೆ ಕುಸಿದಿದೆ. ಬೆಳಗಾವಿ ಲೋಕಸಭೆ ಚುನಾವಣಾ ಫಲಿತಾಂಶ ಕ್ಷಣ ಕ್ಷಣಕ್ಕೂ ರೋಚಕ ಪಡೆಯುತ್ತಿದ್ದು, ಬಿಜೆಪಿಯ ಹಾಗೂ ಕಾಂಗ್ರೆಸ್ ಮಧ್ಯೆ ನೇರ ಹಣಾಹಣಿ ಶುರುವಾಗಿದೆ. ಸದ್ಯ 11,831 ಸಾವಿರಕ್ಕೂ ಹೆಚ್ಚು ಮತಗಳ ಅಂತರವನ್ನು ಮಂಗಳಾ …

Read More »

ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ 8ನೇ ಸುತ್ತಿನಲ್ಲಿ ಬಿಜೆಪಿ 1811 ಮತಗಳಿಂದ ಮುನ್ನಡೆ

ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ 8ನೇ ಸುತ್ತಿನಲ್ಲಿ ಬಿಜೆಪಿ 1811 ಮತಗಳಿಂದ ಮುನ್ನಡೆ ಸಾಧಿಸಿದೆ. ಮೊದಲ 7 ಸುತ್ತಿನವರೆಗೆ ಕಾಂಗ್ರೆಸ್ ಮುನ್ನಡೆ ಸಾಧಿಸಿತ್ತು. ಸಧ್ಯ ಬಿಜೆಪಿ 42700, ಕಾಂಗ್ರೆಸ್ 40889 ಮತ ಪಡೆದಿದೆ.

Read More »