Breaking News

ರಾಜ್ಯ

ತಾಯಿ ನಿಧನಕ್ಕೆ ಆಕ್ರೋಶಗೊಂಡ ಪೊಲೀಸ್​ ಅಧಿಕಾರಿಯಿಂದ ವೈದ್ಯರ ಮೇಲೆ ಹಲ್ಲೆ..!

ಚಿಕಿತ್ಸೆ ಫಲಕಾರಿಯಾಗದೇ ತಾಯಿ ಮೃತಪಟ್ಟಿದ್ದಕ್ಕೆ ಆಕ್ರೋಶಗೊಂಡ ಪೊಲೀಸ್​ ಇನ್​ಸ್ಪೆಕ್ಟರ್​ ವೈದ್ಯರ ಮೇಲೆ ಹಲ್ಲೆ ನಡೆಸಿದ ಘಟನೆ ಪ್ರಯಾಗ್​ರಾಜ್​​ನ ಸ್ವರೂಪ್​ ರಾಣಿ ನೆಹರು ಆಸ್ಪತ್ರೆಯಲ್ಲಿ ನಡೆದಿದೆ. ಚಿಕಿತ್ಸೆ ಪಡೆಯುತ್ತಿದ್ದ ವೇಳೆ ಪೊಲೀಸ್​ ಅಧಿಕಾರಿಯ 72 ವರ್ಷದ ತಾಯಿ ಸಾವಿಗೀಡಾಗಿದ್ದದಾರೆ. ಇದರಿಂದ ಆಕ್ರೋಶಗೊಂಡ ಜುಲ್ಫೀಕರ್​ ಅಲಿ ಹಾಗೂ ಆತನ ಸಹೋದರ ವೈದ್ಯರ ನಿರ್ಲಕ್ಷ್ಯದಿಂದ ಈ ರೀತಿ ಆಗಿದೆ ಎಂದು ಆರೋಪಿಸಿದ್ದಾರೆ. ಇಬ್ಬರು ಮೊಬೈಲ್​ನಲ್ಲಿ ವಿಡಿಯೋ ಮಾಡಲು ಆರಂಭಿಸಿದ್ದಾರೆ. ಇದಕ್ಕೆ ವೈದ್ಯರು ತಡೆ ಒಡ್ಡುತ್ತಿದ್ದಂತೆಯೇ …

Read More »

VTU’ನ ಎಲ್ಲಾ ಪರೀಕ್ಷೆ ಮುಂದೂಡಿಕೆ, ಇಲ್ಲಿದೆ ಅಧಿಕೃತ ಮಾಹಿತಿ

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆ ರಾಜ್ಯದಲ್ಲಿ ನಾಳೆಯಿಂದ 14 ದಿನ ಕೊರೊನಾ ಕರ್ಪ್ಯೂ ಜಾರಿಗೊಳಿಸಲಾಗಿದೆ. ಈ ಹಿನ್ನೆಲೆ ವಿಶ್ವೇಶ್ವರ ತಾಂತ್ರಿಕ ವಿಶ್ವವಿದ್ಯಾಲಯದ ( VTU) ಎಲ್ಲಾ ಪರೀಕ್ಷೆಗಳು ಮುಂದೂಡಿಕೆಯಾಗಿದೆ ಎಂದು ವಿವಿ ಮಾಹಿತಿ ನೀಡಿದೆ. ಮುಂದಿನ ಆದೇಶದವರೆಗೂ ಪರೀಕ್ಷೆಗಳನ್ನು ಮುಂದೂಡಿ ವಿಟಿಯು ಆದೇಶ ಹೊರಡಿಸಿದೆ. ನಾಳೆ ಸಂಜೆಯಿಂದ 14 ದಿನಗಳ ಕಾಲ ರಾಜ್ಯದಲ್ಲಿ ‘ಕೊರೊನಾ ಕರ್ಪ್ಯೂ’ ಜಾರಿಗೊಳಿಸಿ ರಾಜ್ಯ ಸರ್ಕಾರ ಮಹತ್ತರ ಆದೇಶ ಹೊರಡಿಸಿದೆ. …

Read More »

ಸಾರ್ವಜನಿಕರ ಬೇಡಿಕೆಗಳಿಗೆ ಅನುಗುಣವಾಗಿ12 ಸಾವಿರಕ್ಕೂ ಹೆಚ್ಚು ಬಸ್ಸುಗಳನ್ನು ವ್ಯವಸ್ಥೆ

ಬೆಂಗಳೂರು: ನಾಳೆಯಿಂದ ಕರ್ಫ್ಯೂ ಮತ್ತು ಲಾಕ್ಡೌನ್ ಬಿಗಿಗೊಳಿಸಿರುವುದರಿಂದ ಗಮನಾರ್ಹ ಸಂಖ್ಯೆಯ ಸಾರ್ವಜನಿಕರು ತಮ್ಮತಮ್ಮ ಊರುಗಳಿಗೆ ತೆರಳಲು ಅನುಕೂಲವಾಗುವಂತೆ ನಮ್ಮ 3 ಸಾರಿಗೆ ನಿಗಮಗಳಿಂದ ಸಾರ್ವಜನಿಕರ ಬೇಡಿಕೆಗಳಿಗೆ ಅನುಗುಣವಾಗಿ12 ಸಾವಿರಕ್ಕೂ ಹೆಚ್ಚು ಬಸ್ಸುಗಳನ್ನು ವ್ಯವಸ್ಥೆ ಮಾಡಲಾಗಿದೆ ಎಂದು ಡಿಸಿಎಂ, ಸಾರಿಗೆ ಸಚಿವ ಲಕ್ಷ್ಮಣ ಸವದಿ ತಿಳಿಸಿದ್ದಾರೆ. ಈ ಬಸ್ಸುಗಳು ಬೆಂಗಳೂರಿನಿಂದ ಹೊರಗಡೆ ಮತ್ತು ಬೇರೆ ಬೇರೆ ಪ್ರದೇಶಗಳಿಂದ ಬೆಂಗಳೂರಿಗೆ ಮತ್ತು ಇತರ ಪ್ರದೇಶಗಳಿಗೆ ಸಂಚರಿಸಲಿವೆ. ನಾಳೆ ರಾತ್ರಿಯ ನಿಗದಿತ ಕರ್ಫ್ಯೂ ಸಮಯದ …

Read More »

ರಾಜ್ಯದಲ್ಲಿ ಕೊರೋನಾ ನಿಯಂತ್ರಣ ಕುರಿತು ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಲು ಸಿಎಂಗೆ ಸಲಹೆ – ಸಚಿವ ಎಂಟಿಬಿ ನಾಗರಾಜ್

ಬೆಂಗಳೂರು : ರಾಜ್ಯಾಧ್ಯಂತ ಕೊರೋನಾ ಸೋಂಕು ವ್ಯಾಪಕವಾಗಿ ಹರಡುತ್ತಿದೆ. ಇದನ್ನು ತಡೆಗಟ್ಟುವ ನಿಟ್ಟಿನಲ್ಲಿ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳುವ ತುರ್ತು ಸಂದರ್ಭ ಒದಗಿ ಬಂದಿದೆ. ಇಂತಹ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ಸಲಹೆ ಮಾಡಲಾಗಿದೆ. ಸಭೆಯ ಬಳಿಕ ಯಾವ ನಿರ್ಧಾರ ಕೈಗೊಳ್ಳಲಿದ್ದಾರೆ ಎಂಬುದನ್ನು ಪ್ರಕಟಿಸಲಿದ್ದಾರೆ ಎಂದು ಸಚಿವ ಎಂಟಿಬಿ ನಾಗರಾಜ್ ತಿಳಿಸಿದರು. ಸಂಪುಟ ಸಭೆಯ ಬಳಿಕ ಮಾತನಾಡಿದಂತ ಸಚಿವ ಎಂ.ಟಿ.ಬಿ ನಾಗರಾಜ್ ಅವರು, ರಾಜ್ಯದಲ್ಲಿ ಕೊರೋನಾ ಸೋಂಕು …

Read More »

ಕುಟುಂಬದ 18 ಜನರಿಗೆ ಸೋಂಕು ತಗುಲಿತ್ತು, ಇಂಥ ರೋಗ ವೈರಿಗಳಿಗೂ ಬರಬಾರದು:ಲಕ್ಷ್ಮೀ ಹೆಬ್ಬಾಳ್ಕರ್

ಬೆಳಗಾವಿ: ನಿರ್ಲಕ್ಷ್ಯ ಮಾಡಿದ್ದರಿಂದ ನಮ್ಮ ಮನೆಯಲ್ಲಿ ಹದಿನೆಂಟು ಜನ ಕುಟುಂಬಸ್ಥರಿಗೆ ಕೊರೊನಾ ಸೋಂಕು ದೃಢವಾಗಿತ್ತು. ದೇವರ ದಯೆಯಿಂದ ಎಲ್ಲರೂ ಗುಣಮುಖರಾಗಿದ್ದೇವೆ. ಕೊರೊನಾ ಬಗ್ಗೆ ನಾವೂ ನಿರ್ಲಕ್ಷ್ಯ ಮಾಡಿದ್ದೆವು. ಇಂತಹ ರೋಗ ನಮ್ಮ ವೈರಿಗಳಿಗೂ ಬರಬಾರದು ಎಂದು ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು. ಕೊರೊನಾ ಸೂೀಂಕಿನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂತಹ ರೋಗ ನಮ್ಮ ವೈರಿಗಳಿಗೂ ಬರಬಾರದು. ಕೋವಿಡ್ ವಾರಿಯರ್ಸ್ ದೇವರಾಗಿ ನಮ್ಮ ಕಣ್ಣಿಗೆ ಕಾಣಿಸುತ್ತಿದ್ದಾರೆ. …

Read More »

ನಾಳೆ ರಾತ್ರಿಯಿಂದ ‘ಕರ್ನಾಟಕ 14 ದಿನ ಲಾಕ್ ಡೌನ್’ – ಏನು ಇರುತ್ತದೆ? ಏನು ಇರೋಲ್ಲ? ಇಲ್ಲಿದೆ ಮಾಹಿತಿ

ಬೆಂಗಳೂರು: ನಾಳೆ ಸಂಜೆಯಿಂದ 14 ದಿನಗಳ ಕಾಲ ‘ಕರ್ನಾಟಕ ಸಂಪೂರ್ಣ ಲಾಕ್‌ಡೌನ್‌’ ಮಾಡಲಾಗುವುದರ ಬಗ್ಗೆ ಮಹತ್ವದ ತೀರ್ಮಾನವನ್ನು ತೆಗೆದುಕೊಂಡಿದೆ. ಈ ಬಗ್ಗೆ ಈ ಬಗ್ಗೆ ಇಂದು ಸುದ್ದಿಗಾರರಿಗೆ ಸಿಎಂ ಬಿಎಸ್‌ವೈ ಮಾಹಿತಿ ನೀಡಿದರು. ಇದೇ ವೇಳೆ ಅವರು ಮಾಹಿತಿ ನೀಡಿ. ಬಸ್‌ ಸಂಚಾರ ಇರೋದಿಲ್ಲ ಅಂಥ ಹೇಳಿದ ಅವರು 18 ವರ್ಷ ಮೇಲ್ಪಟ್ಟವರಿಗೆ ಸರ್ಕಾರಿ ಆಸ್ಪತ್ರೆಯಲ್ಲಿ ಕೋವಿಡ್ ಲಸಿಕೆ ಉಚಿತವಾಗಿ ನೀಡಲಾಗುವುದು ಅಂಥ ಸಿಎಂ ಬಿಎಸ್‌ವೈ ಹೇಳಿದರು. ಕಟ್ಟಡ ಕಾಮಗಾರಿಗಳಿಗೆ, …

Read More »

ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ’ಯಿಂದಲೇ ‘ಕೊರೋನಾ ರೂಲ್ಸ್’ ಬ್ರೇಕ್ : ‘ಮಾಸ್ಕ್ ಧರಿಸದೇ’ ಮದುವೆ ಕಾರ್ಯಕ್ರಮದಲ್ಲಿ ಭಾಗಿ

ಕಾರವಾರ : ಕೊರೋನಾ ಸೋಂಕಿನ ನಿಯಂತ್ರಣಕ್ಕಾಗಿ ರಾಜ್ಯದಲ್ಲಿ ಮಾಸ್ಕ್ ಹಾಗೂ ಸಾಮಾಜಿಕ ಅಂತರ ಕಡ್ಡಾಯವಾಗಿದೆ. ಆದ್ರೇ.. ಈ ನಿಯಮ ಮೀರಿ ವಿಧಾನಸಭೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿಯವರೇ, ಮಾಸ್ಕ್ ಧರಿಸದೇ ಮದುವೆ ಕಾರ್ಯಕ್ರಮದಲ್ಲಿ ಭಾಗವಹಿಸಿ, ಕೊರೋನಾ ರೂಲ್ಸ್ ಬ್ರೇಕ್ ಮಾಡಿದ್ದಾರೆ ಎಂಬುದಾಗಿ ಸೋಷಿಯಲ್ ಮೀಡಿಯಾದಲ್ಲಿ ಪೋಟೋ ಶೇರ್ ಮಾಡಿ, ಸಾರ್ವಜನಿಕರು ಕಿಡಿಕಾರಿದ್ದಾರೆ. ವಿಧಾನಸಭೆಯ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿಯವರು, ನಿನ್ನೆಯ ಭಾನುವಾರದಂದು ಸಿದ್ದಾಪುರದಲ್ಲಿ ನಡೆದಂತ ಆಪ್ತರ ಮದುವೆಯ ಕಾರ್ಯಕ್ರಮಕ್ಕೆ ಆಗಮಿಸಿದ್ದರು. …

Read More »

ತಾಲೂಕು, ಜಿಲ್ಲಾ ಪಂಚಾಯಿತಿ, ಮಹಾನಗರ ಪಾಲಿಕೆ ಚುನಾವಣೆ ಮುಂದೂಡಲು ಶಿಫಾರಸ್ಸು

ರಾಜ್ಯದಲ್ಲಿ ಕೊರೋನಾ ಪರಿಸ್ಥಿತಿ ಗಂಭೀರವಾಗಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ನಡೆಯಲಿರುವ ಎಲ್ಲ ಚುನಾವಣೆಗಳನ್ನೂ ಮುಂದೂಡುವಂತೆ ಚುನಾವಣೆ ಆಯೋಗಕ್ಕೆ ರಾಜ್ಯ ಸರಕಾರ ಶಿಫಾರಸ್ಸು ಮಾಡಲಿದೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಈ ವಿಷಯ ತಿಳಿಸಿದ್ದಾರೆ. ಮುಂದಿನ 14 ದಿನ ಜನತಾ ಕರ್ಫ್ಯೂ ಜಾರಿಯಾಗಲಿದ್ದು, ಅಗತ್ಯ ಸೇವೆಗಳನ್ನು ಹೊರತುಪಡಿಸಿ ಎಲ್ಲವನ್ನೂ ಬಂದ್ ಮಾಡಲಾಗುವುದು. ಪರಿಸ್ಥಿತಿ ಸುಧಾರಿಸದಿದ್ದಲ್ಲಿ ಮುಂದಿನ ದಿನಗಳಲ್ಲಿ ಇನ್ನಷ್ಟು ಕಠಿಣ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಸಿಎಂ ತಿಳಿಸಿದರು. ತಾಲೂಕು, ಪಂಚಾಯಿತಿ, ಜಿಲ್ಲಾ ಪಂಚಾಯಿತಿ, ಮಹಾನಗರ ಪಾಲಿಕೆ …

Read More »

ರಾಜ್ಯದಲ್ಲಿ ಇಂದಿನಿಂದ ಭಾರೀ ಮಳೆಯಾಗುವ ಸಾಧ್ಯತೆ

ಬೆಂಗಳೂರು : ರಾಜ್ಯದಲ್ಲಿ ಇಂದಿನಿಂದ ಐದು ದಿನಗಳ ಕಾಲ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಬೀಸುತ್ತಿರುವುದರಿಂದ ರಾಜ್ಯದಲ್ಲಿ ಈಗಾಗಲೇ ಹಲವೆಡೆ ಮಳೆಯಾಗುತ್ತಿದೆ. ಇದೇ ರೀತಿ ಇನ್ನೂ 5 ದಿನಗಳ ಕಾಲ ಮಳೆ ಮುಂದುವರಿಯಲಿದೆ. ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಮತ್ತು ಹಾಸನ ಜಿಲ್ಲೆಗಳಲ್ಲಿ ಏ. 29, 30 ರಂದು ಗುಡುಗು ಮಿಂಚು ಸಹಿತ ಭಾರೀ ಮಳೆಯಾಗಲಿದೆ ಎಂದು …

Read More »

ಗದಗ: ಭಾರತ್ ಗ್ಯಾಸ್ ಏಜೆನ್ಸಿಯಲ್ಲಿ ಆಕಸ್ಮಿಕ ಬೆಂಕಿ: ತಪ್ಪಿದ ಅನಾಹುತ

ಗದಗ: ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ನಗರದ ಬ್ಯಾಂಕ್ ರೋಡ್‌ನಲ್ಲಿರುವ ಭಾರತ್ ಗ್ಯಾಸ್ ಏಜೆನ್ಸಿಯಲ್ಲಿ ಬೆಂಕಿ ಹೊತ್ತಿಕೊಂಡಿರುವ ಘಟನೆ ರವಿವಾರ ನಡೆದಿದ್ದು, ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ರವಿವಾರ ರಾತ್ರಿ 9.15ರ ಸುಮಾರಿಗೆ ಭಾರತ್ ಗ್ಯಾಸ್ ಏಜೆನ್ಸಿ ಸಮೀಪದ ವಿದ್ಯುತ್ ಕಂಬದಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಇದನ್ನು ಗಮನಿಸಿದ ಸ್ಥಳೀಯರು, ಹೆಸ್ಕಾಂ ಗೆ ಮಾಹಿತಿ ನೀಡಿದ್ದರು. ತಕ್ಷಣ ಸ್ಥಳಕ್ಕೆ ಭೇಟಿ ನೀಡಿದ ಹೆಸ್ಕಾಂ ಸಿಬ್ಬಂದಿ ಸರಿಪಡಿಸಲು ಪ್ರಯತ್ನಿಸಿದರು. ಈ ವೇಳೆ ಆಕಸ್ಮಿಕವಾಗಿ ಗ್ಯಾಸ್ …

Read More »