ಗೋಕಾಕ : ಗೋಕಾಕ ಹಾಗೂ ಮೂಡಲಗಿ ತಾಲೂಕುಗಳಲ್ಲಿ ಮಹಾಮಾರಿ ಕೊರೋನಾ ನಿಯಂತ್ರಿಸಲು ಅಧಿಕಾರಿಗಳು ಸಕಲ ಸಿದ್ಧತೆಯೊಂದಿಗೆ ಸಮರೋಪಾದಿಯಲ್ಲಿ ಕಾರ್ಯಪ್ರವೃತ್ತರಾಗಬೇಕೆಂದು ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ಗುರುವಾರದಂದು ನಗರದ ಪ್ರವಾಸಿ ಮಂದಿರದಲ್ಲಿ ಗೋಕಾಕ ಹಾಗೂ ಮೂಡಲಗಿ ತಾಲೂಕಾ ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಕೊರೋನಾ ಎರಡನೇ ಅಲೆಯನ್ನು ನಿಯಂತ್ರಿಸಿ, ಮುಂದಾಗುವ ಅನಾಹುತಗಳನ್ನು ತಪ್ಪಿಸುವಂತೆ ತಿಳಿಸಿದರು. ಇದುವರೆಗೆ ಗೋಕಾಕ ತಾಲೂಕಿನಲ್ಲಿ 79 …
Read More »ಪಿಎಂ ಕೇರ್ಸ್ ನಿಧಿಯಿಂದ ರಾಜ್ಯಕ್ಕೆ ಕೊರೋನ ನಿರ್ವಹಣೆಗೆ ನೀಡಿರುವ ದುಡ್ಡು ಎಷ್ಟು?: ಸಿದ್ದರಾಮಯ್ಯ
ಬೆಂಗಳೂರು, ಎ. 22: `ಆಡಳಿತ ನಡೆಸುವವರ ಕೆಲಸ ಪ್ರಶ್ನೆ ಕೇಳುವುದಲ್ಲ, ಜನರ ಪ್ರಶ್ನೆಗಳಿಗೆ ಉತ್ತರ ನೀಡುವುದು. ತಮ್ಮದು ವಿರೋಧ ಪಕ್ಷ ಅಲ್ಲ, ಆಡಳಿತಾರೂಢ ಪಕ್ಷ ಎನ್ನುವುದನ್ನು ರಾಜ್ಯ ಬಿಜೆಪಿ ಸರಕಾರ ಏನಾದರೂ ಮರೆತುಬಿಟ್ಟಿದೆಯಾ ಹೇಗೆ?’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, `ಪಂಚ ಪ್ರಶ್ನೆಗೆ ಉತ್ತರಿಸುವ ಧೈರ್ಯ ತೋರುವಿರಾ ಸಿದ್ದರಾಮಯ್ಯ?’ ಎಂಬ ಬಿಜೆಪಿ ಟ್ವೀಟ್‍ಗೆ ತಿರುಗೇಟು ನೀಡಿದ್ದಾರೆ. ಗುರುವಾರ ಸರಣಿ ಟ್ವೀಟ್ ಮಾಡಿರುವ ಅವರು, …
Read More »ಕೋವಿಡ್ ಸಂಕಷ್ಟದಲ್ಲಿದ್ದರೂ ಸರ್ಕಾರ ಪ್ರಧಾನಿ ಮೋದಿಯ ಪ್ರಚಾರದಲ್ಲಿ ನಿರತವಾಗಿದೆ :H.D.K.
ಕರೋನಾ ವಿಚಾರ ಹಿನ್ನಲೆ, ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ರಾಜ್ಯ ಹಾಗು ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ವೈರಸ್ ಹೊಡೆತಕ್ಕೆ ರಾಷ್ಟ್ರವೇ ತತ್ತರಿಸಿದೆ. ಜನ ಚಿಕಿತ್ಸೆ ಸಿಗದೆ ಪರದಾಡುತ್ತಿದ್ದಾರೆ. ಇಂಥ ಸೂತಕದ ಸಂದರ್ಭದಲ್ಲಿ ರಾಜ್ಯ ಸರ್ಕಾರ ಕೋಟ್ಯಂತರ ರೂಪಾಯಿ ಹಣ ಖರ್ಚು ಮಾಡಿ ಎಲ್ಲ ಪತ್ರಿಕೆಗಳ ಮುಖಪುಟದಲ್ಲಿ ಪ್ರಧಾನಿ ನಗುಮೊಗದ ಜಾಹೀರಾತೊಂದನ್ನು ನೀಡಿದೆ. ಈ ಮೂಲಕ ಜನರ ನೋವನ್ನು ಗೇಲಿ ಮಾಡಿದೆ. ಇದು ನಿಜಕ್ಕೂ ಆತ್ಮಸಾಕ್ಷಿಯ ನಡೆಯಲ್ಲ ಎಂದು …
Read More »ಇನ್ನು ಕೆಲವೇ ಹೊತ್ತಿನಲ್ಲಿಹೊಸ ಮಾರ್ಗಸೂಚಿ ಬಿಡುಗಡೆ
ಬೆಂಗಳೂರು – ಲಾಕ್ ಡೌನ್ ಮಾದರಿಯಲ್ಲಿ ಪರಿಷ್ಕೃತ ಮಾರ್ಗಸೂಚಿ ಪ್ರಕಟಿಸಿರುವ ರಾಜ್ಯಸರಕಾರದ ನಡೆಯಿಂದ ಉಂಟಾಗಿರುವ ಗೊಂದಲಕ್ಕೆ ಸ್ಪಷ್ಟನೆ ನೀಡಿ ಮತ್ತು ಕೆಲವು ಮಾರ್ಪಾಡು ಮಾಡಿ ಹೊಸ ಮಾರ್ಗಸೂಚಿ ಪ್ರಕಟಿಸಲು ಸರಕಾರ ನಿರ್ಧರಿಸಿದೆ. ಇನ್ನು ಕೆಲವೇ ಹೊತ್ತಿನಲ್ಲಿ ಹೊಸ ಪರಿಷ್ಕೃತ ಮಾರ್ಗಸೂಚಿ ಪ್ರಕಟವಾಗಲಿದೆ. ನಿನ್ನೆ ಸಂಜೆ ಪ್ರಕಟಿಸಿರುವ ಮಾರ್ಗಸೂಚಿ ಇಂದು ಬೆಳಗ್ಗೆ ಜಾರಿಯಾಗುವ ವೇಳೆಗೆ ಭಾರಿ ಗೊಂದಲಕ್ಕೆ ಕಾರಣವಾಗಿತ್ತು. ಅದು ಸಾರ್ವಜನಿಕರಿಗೆ ಸರಿಯಾಗಿ ತಲುಪಿರಲಿಲ್ಲ. ಏಕಾ ಏಕಿ ಪೊಲೀಸರು ಬಂದು ಅಂಗಡಿ …
Read More »ಆಕಸ್ಮಿಕ ಬೆಂಕಿಗೆ ಮೆಕ್ಕೆಜೋಳದ ರಾಶಿ ಸುಟ್ಟು ಭಸ್ಮ
ಹಾವೇರಿ: ಆಕಸ್ಮಿಕ ಬೆಂಕಿಗೆ ರಾಶಿ ಮಾಡಲು ಹಾಕಿದ್ದ ಮೆಕ್ಕೆಜೋಳದ ತೆನೆಗಳು ಸಂಪೂರ್ಣ ಸುಟ್ಟು ಭಸ್ಮವಾದ ಘಟನೆ ಹಾವೇರಿ ಜಿಲ್ಲೆ ರಟ್ಟೀಹಳ್ಳಿ ತಾಲೂಕಿನ ಕಡೂರು ಗ್ರಾಮದಲ್ಲಿ ನಡೆದಿದೆ. ಕಡೂರು ಗ್ರಾಮದ ಎಂಟು ಜನ ರೈತರಿಗೆ ಸೇರಿದ ಮೆಕ್ಕೆಜೋಳ ರಾಶಿಯಾಗಿದ್ದು, 20 ಎಕರೆ ಜಮೀನಿನಲ್ಲಿ ಬೆಳೆದಿದ್ದರು. ರಾಶಿ ಮಾಡಲು ಹಾಕಿದ್ದ ವೇಳೆ ಆಕಸ್ಮಿಕ ಬೆಂಕಿ ಬಿದ್ದು ಸಂಪೂರ್ಣ ಸುಟ್ಟು ಕರಕಲಾಗಿವೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯ …
Read More »ಗಾಳಿ, ಮಳೆಯಿಂದ ಬೀದಿಗೆ ಬಿದ್ದ ಹಾವೇರಿ ಜನರ ಬದುಕು; ಶಾಶ್ವತ ಸೂರಿಗೆ ಸ್ಥಳೀಯರ ಆಗ್ರಹ
ಹಾವೇರಿ: ಜಿಲ್ಲೆಯ ಹಂದಿಗನೂರು, ಯಲಗಚ್ಚ, ಮೇಲ್ಮುರಿ ಸೇರಿದಂತೆ ಕೆಲವೆಡೆ ಬಿರುಗಾಳಿ ಸಮೇತ ಸುರಿದ ಮಳೆಗೆ ಮನೆಗಳ ಮೇಲ್ಛಾವಣಿಗಳು ಹಾರಿ ಹೋಗಿವೆ. ಮನೆಗಳ ಮೇಲ್ಛಾವಣಿಗಳು ಹಾರಿ ಹೋಗಿದ್ದರಿಂದ ಮನೆಯಲ್ಲಿದ್ದ ಅಪಾರ ಪ್ರಮಾಣದ ವಸ್ತುಗಳು ಹಾನಿಯಾಗಿವೆ. ರಟ್ಟೀಹಳ್ಳಿ ತಾಲೂಕಿನ ಮಾಸೂರು ಗ್ರಾಮದಲ್ಲಿ ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಹೆಣ್ಣು ಮಕ್ಕಳ ಶಾಲೆಯ ಕಟ್ಟಡದ ಮೇಲೆ ಮರವೊಂದು ಉರುಳಿ ಬಿದ್ದಿದೆ. ಶಾಲಾ ಆವರಣದಲ್ಲಿದ್ದ ಮರ ಉರುಳಿ ಬಿದ್ದಿದ್ದರಿಂದ ಶಾಲೆಯ ಮೇಲ್ಛಾವಣಿ ಸಂಪೂರ್ಣ ಜಖಂಗೊಂಡಿದೆ. ಶಾಲೆಯಲ್ಲಿ …
Read More »ಧಾರವಾಡ; ರಾತ್ರಿ ಕರ್ಫ್ಯೂ ತಹಶೀಲ್ದಾರ್ ನಗರ ಪ್ರದಕ್ಷಿಣೆ
ಧಾರವಾಡ, ಏಪ್ರಿಲ್ 22; ಕರ್ನಾಟಕ ಸರ್ಕಾರ ಕೋವಿಡ್ ಸೋಂಕು ಹರಡುವಿಕೆ ತಡೆಯಲು ರಾಜ್ಯಾದ್ಯಂತ ರಾತ್ರಿ ಕರ್ಫ್ಯೂ ಘೋಷಣೆ ಮಾಡಿದೆ. ರಾತ್ರಿ 9 ರಿಂದ ಬೆಳಗ್ಗೆ 6 ಗಂಟೆಯ ತನಕ ಕರ್ಫ್ಯೂ ಜಾರಿಯಲ್ಲಿರುತ್ತದೆ. ಧಾರವಾಡದಲ್ಲಿಯೂ ಕರ್ಫ್ಯೂ ಜಾರಿಯಲ್ಲಿದೆ. ಧಾರವಾಡ ತಹಶೀಲ್ದಾರ್ ಸಂತೋಷ್ ಬಿರಾದಾರ್ ಮತ್ತು ಜಿಲ್ಲಾಧಿಕಾರಿ ನಿತೇಶ ಪಾಟೀಲ ರಾತ್ರಿ ಕರ್ಪ್ಯೂ ಜಾರಿ ಬಗ್ಗೆ ನಗರದಲ್ಲಿ ಪರಿಶೀಲನೆ ನಡೆಸಿದರು. ಸೆಕ್ಷನ್ 144 ಅನ್ವಯ ಜಾರಿಗೊಳಿಸಿರುವ ನಿಷೇಧಾಜ್ಞೆಯನ್ನು ಕಟ್ಟುನಿಟ್ಟಾಗಿ ಅನುಷ್ಠಾನ ಗೊಳಿಸಿರುವ …
Read More »ಮುಖ ಕಾಣದ ಹಾಗೆ ಮಾಸ್ಕ್ ಹಾಕ್ಕೊಂಡು ಸರ್ಕಾರವನ್ನು ಟೀಕಿಸಿದ ಸಿ.ಟಿ. ರವಿ
ಬೆಂಗಳೂರು, ಏಪ್ರಿಲ್ 22: ಕೊರೋನಾ ನಿಯಂತ್ರಣ ಬಗ್ಗೆ ಸರ್ಕಾರ ಸೀರಿಯಸ್ ಆಗಿ ಆಲೋಚನೆ ಮಾಡಿಲ್ಲ ಎಂಬುದು ಎದ್ದು ಕಾಣುತ್ತದೆ. ಸಿನಿಮಾ , ಥಿಯೇಟರ್ ಬಂದ್ ಮಾಡುವ ಬಗ್ಗೆ ತಜ್ಞರು ವರದಿ ನೀಡಿದರೂ ಅದನ್ನು ಅನುಷ್ಠಾನ ಮಾಡಲಿಲ್ಲ ಸರ್ಕಾರ. ಯಾವುದೋ ಧಮ್ಕಿಗಳಿಗೆ ಮಣಿದು ಇದೀಗ ಅದಕ್ಕೆ ತಕ್ಕ ಬೆಲೆ ತೆತ್ತುವಂತಾಗಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಾಗಡಿ ರಸ್ತೆಯಲ್ಲಿರುವ ಸುಮ್ಮನಹಳ್ಳಿ …
Read More »ರಾಯಚೂರು: ಅಗತ್ಯವಸ್ತುಗಳ ಮಳಿಗೆಗಳು ಮಾತ್ರ ಓಪನ್
ರಾಯಚೂರು: ನಗರದಲ್ಲಿ ಅಗತ್ಯ ವಸ್ತು ಮಾರಾಟದ ಅಂಗಡಿಗಳನ್ನು ಹೊರತುಪಡಿಸಿ ಇನ್ನುಳಿದವುಗಳನ್ನು ಪೊಲೀಸರು ಬಂದ್ ಮಾಡಿಸಿದ್ದಾರೆ. ಕೆಲವು ಮಳಿಗೆಗಳ ಮಾಲೀಕರು ಪೊಲೀಸರೊಂದಿಗೆ ವಾಗ್ವಾದ ಮಾಡುತ್ತಿದ್ದು, ಮಧ್ಯಾಹ್ನ 2 ಗಂಟೆವರೆಗೂ ವ್ಯಾಪಾರಕ್ಕೆ ಅವಕಾಶ ನೀಡುವಂತೆ ಒತ್ತಾಯಿಸುತ್ತಿದ್ದಾರೆ. ಆದರೆ, ರಾಯಚೂರು ನಗರದಲ್ಲಿಯೇ ಕೊರೊನಾ ಸೋಂಕು ವೇಗವಾಗಿ ಹರಡಿಕೊಳ್ಳುತ್ತಿರುವುದರಿಂದ ಬಿಗಿಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸರು ಮನವರಿಕೆ ಮಾಡುತ್ತಿದ್ದಾರೆ. ಜಿಲ್ಲೆಯ ಇತರೆ ತಾಲ್ಲೂಕು ಕೇಂದ್ರಗಳಾದ ಸಿಂಧನೂರು, ಲಿಂಗಸುಗೂರು, ಮಾನ್ವಿ, ದೇವದುರ್ಗ, ಸಿರವಾರ ಹಾಗೂ ಮಸ್ಕಿಯಲ್ಲಿ ಎಂದಿನಂತೆ ವ್ಯಾಪಾರ …
Read More »ಸರ್ಕಾರದ ಮಾರ್ಗಸೂಚಿ ವಿಚಾರ-ಅಂಗಡಿ ಮಾಲೀಕರಿಂದ ಆಕ್ರೋಶ
ಧಾರವಾಡ: ಜಿಲ್ಲೆಯ ಜನತೇ ಸರ್ಕಾರದ ಕೊರೊನಾ ಮಾರ್ಗ ಸೂಚಿಗಳ ವಿಷಯದಲ್ಲಿ ಈಗಲೂ ಗೊಂದಲದಲ್ಲಿದ್ದಾರೆ. ನಗರದ ಅಂಗಡಿ ಮಾಲೀಕರು ಪ್ರತಿ ದಿನದಂತೆ ಇವತ್ತು ಅಂಗಡಿಗಳನ್ನು ತೆರೆದಿದ್ದರು. ಆದರೆ ಪೊಲೀಸರು ಬಂದು ಅಂಗಡಿಗಳನ್ನು ಬಂದ್ ಮಾಡಿಸಿದ್ದಾರೆ. ಇದನ್ನು ಕಂಡು ಸರ್ಕಾರದ ವಿರುದ್ಧ ಅಂಗಡಿ ಮಾಲೀಕರು ಆಕ್ರೋಶ ಹೊರಹಾಕಿದ್ದಾರೆ. ಧಾರವಾಡ ಜಿಲ್ಲೆಯ ಪಟ್ಟಣದಲ್ಲಿ ಸರ್ಕಾರದ ಮಾರ್ಗಸೂಚಿಯಂತೆ ಅಗತ್ಯ ವಸ್ತುಗಳ ಅಂಗಡಿಗಳನ್ನು ಹೊರತು ಪಡಿಸಿ, ಬಟ್ಟೆ, ಪಾತ್ರೆ, ಮೊಬೈಲ್ ಸೇರಿ ಹಲವು ಅಂಗಡಿಗಳನ್ನು ಪೊಲೀಸರು ಬಂದ್ …
Read More »
Laxmi News 24×7