ಪಾಟ್ನಾ, ಏಪ್ರಿಲ್ 17: ಮೇವು ಹಗರಣಕ್ಕೆ ಸಂಬಂಧಿಸಿದಂತೆ ಆರ್‌ಜೆಡಿ ಮುಖ್ಯಸ್ಥ ಹಾಗೂ ಬಿಹಾರ ಮಾಜಿ ಸಿಎಂ ಲಾಲೂ ಪ್ರಸಾದ್ ಯಾದವ್‌ಗೆ ಶನಿವಾರ ಜಾರ್ಖಂಡ್ ಹೈಕೋರ್ಟ್ ಜಾಮೀನು ನೀಡಿದೆ. ಇದೇ ಫೆಬ್ರವರಿಯಲ್ಲಿ ಲಾಲೂ ಪ್ರಸಾದ್ ಯಾದವ್ ಅವರಿಗೆ ಜಾಮೀನು ನೀಡಲು ನ್ಯಾಯಾಲಯ ನಿರಾಕರಿಸಿದ್ದು, ಎರಡು ತಿಂಗಳ ನಂತರ ಹೊಸ ಅರ್ಜಿ ಸಲ್ಲಿಸಲು ಸೂಚಿಸಿತ್ತು. ಶನಿವಾರ ಜಾಮೀನು ನೀಡಿದ್ದು, ಜೈಲಿನಿಂದ ಶೀಘ್ರವೇ ಅವರು ಹೊರ ಹೋಗಲಿರುವುದಾಗಿ ತಿಳಿದುಬಂದಿದೆ. ಲಾಲೂ ಪ್ರಸಾದ್ ಅವರು …
Read More »ಕಳೆದ 24 ಗಂಟೆಗಳಲ್ಲಿ 3 ಬಾರಿ ಆಮ್ಲಜನಕ ಪೂರೈಕೆಗೆ ಸರ್ಕಾರದಿಂದ ಆರ್ಡರ್
ನವದೆಹಲಿ, : ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದ್ದು, ಆಮ್ಲಜನಕ ಪೂರೈಸಲು ಕೇಂದ್ರ ಸರ್ಕಾರವು ಕಳೆದ 24 ಗಂಟೆಗಳಲ್ಲಿ 3 ಬಾರಿ ಆರ್ಡರ್ ಮಾಡಿದೆ. ಕಳೆದ 10 ದಿನಗಳಿಂದ ಕೊರೊನಾ ಸೋಂಕಿತರ ಸಂಖ್ಯೆ ತೀವ್ರವಾಗುತ್ತಿದ್ದು, ಆಕ್ಸಿಜನ್ ಪೂರೈಕೆಯಿಲ್ಲದೆ ರೋಗಿಗಳು ಮೃತಪಡುತ್ತಿದ್ದಾರೆ ಎನ್ನುವ ಆರೋಪಗಳು ಕೇಳಿಬರುತ್ತಿವೆ. ಇದೀಗ ಸರ್ಕಾರವು ಆಕ್ಸಿಜನ್ ಸಿಲಿಂಡರ್‌ಗಾಗಿ ಒಂದೇ ದಿನದಲ್ಲಿ ಮೂರು ಬಾರಿ ಆರ್ಡರ್ ಮಾಡಿದೆ. ದೇಶಾದ್ಯಂತ ಕೊರೊನಾ ಸೋಂಕಿತ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ …
Read More »ಬಸವಕಲ್ಯಾಣ : ಶೇ. 19.48ರಷ್ಟು ಮತದಾನ
ಬೀದರ: ಬಸವಕಲ್ಯಾಣ ವಿಧಾನಸಭೆ ಕ್ಷೇತ್ರದ ಉಪ ಚುನಾವಣೆ ಹಿನ್ನಲೆ ಶನಿವಾರ ಮತದಾನ ಪ್ರಕ್ರಿಯೆ ಶಾಂತಿಯುತವಾಗಿ ನಡೆಯುತ್ತಿದ್ದು, ಬೆಳಿಗ್ಗೆ 7 ರಿಂದ 11 ಗಂಟೆವರೆಗೆ ಶೇ.19.48 ರಷ್ಟು ಮತದಾನ ದಾಖಲಾಗಿದೆ. ಹೆಚ್ಚುವರಿ 62 ಮತಗಟ್ಟೆಗಳು ಸೇರಿದಂತೆ ಒಟ್ಟು 326 ಮತಗಟ್ಟೆಗಳಲ್ಲಿ ಮತದಾನ ನಡೆಯಲಿದೆ. 326 ಮತಗಟ್ಟೆಗಳ ಪೈಕಿ 95 ಸೂಕ್ಷ್ಮ ಮತಗಟ್ಟೆಗಳೆಂದು ಮತ್ತು 231 ಮತಗಟ್ಟೆಗಳು ಸಾಮಾನ್ಯ ಮತಗಟ್ಟೆಗಳೆಂದು ಗುರುತಿಸಲಾಗಿದೆ. 1,14,794 ಮಹಿಳಾ ಮತದಾರರು, 1,24,984 ಪುರುಷ ಮತದಾರರು ಮತ್ತು ಇತರೇ …
Read More »ಬೆಳಗಾವಿ ಉಪಚುನಾವಣೆ : ಅಧಿಕಾರಿಗಳ ನಿರ್ಲಕ್ಷ್ಯ ಖಂಡಿಸಿ ಮತದಾನ ಬಹಿಷ್ಕಾರ ಹಾಕಿದ ಗ್ರಾಮಸ್ಥರು
ಬೆಳಗಾವಿ : ಬೆಳಗಾವಿ ಲೋಕಸಭಾ ಉಪಚುನಾವಣೆ ಶಾಂತಿಯುತವಾಗಿ ಆರಂಭವಾಗಿದ್ದು ಬೆಳಿಗ್ಗೆ 9 ಗಂಟೆಯವರೆಗೆ ಶೇ 5.47 ರಷ್ಟು ಮತದಾನವಾಗಿದೆ. ಬಿಜೆಪಿ ಅಭ್ಯರ್ಥಿ ಮಂಗಲಾ ಅಂಗಡಿ ಅವರು ತಮ್ಮ ಕುಟುಂಬ ಸಮೇತ ಮತಗಟ್ಟೆಗೆ ಬಂದು ಸರದಿಯಲ್ಲಿ ನಿಂತು ಮತ ಚಲಾಯಿಸಿದರು. ಶಾಂತಿಯುತ ಮತದಾನವಾಗುತ್ತಿರುವ ಮಧ್ಯೆ ತಮ್ಮ ಹಳ್ಳಿಯ ಸ್ಥಳಾಂತರಕ್ಕೆ ಒತ್ತಾಯಿಸಿ ರಾಮದುರ್ಗ ತಾಲೂಕಿನ ಪ್ರವಾಹ ಪೀಡಿತ ಚಿಕ್ಕತಡಸಿ ಹಾಗೂ ಹಿರೇತಡಸಿ ಗ್ರಾಮಸ್ಥರು ಮತದಾನ ಬಹಿಷ್ಕಾರ ಮಾಡಿದ್ದಾರೆ. ಗ್ರಾಮದ ಸ್ಥಳಾಂತರ ವಿಷಯದಲ್ಲಿ ಅಧಿಕಾರಿಗಳ …
Read More »ಕೊವಿಡ್-19 ನಿಯಂತ್ರಣಕ್ಕೆ ಹೊಸ ಅಸ್ತ್ರ; ಲಾಕ್ಡೌನ್ ಮಾಡುವ ಬದಲು ಈ ಯೋಜನೆಗೆ ಸಿದ್ಧವಾಗ್ತಿದೆಯಾ ಸರ್ಕಾರ?
ಬೆಂಗಳೂರು: ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿನ ಪ್ರಸರಣ ದಿನೇದಿನೆ ಏರಿಕೆಯಾಗುತ್ತಿದ್ದು, ಸರ್ಕಾರ ಮತ್ತೊಮ್ಮೆ ಲಾಕ್ಡೌನ್ ಹೇರಬಹುದಾ ಎಂಬ ಪ್ರಶ್ನೆ ಕಾಡುತ್ತಿದೆ. ನಿನ್ನೆಯಷ್ಟೇ ಮುಖ್ಯಮಂತ್ರಿ ನೇತೃತ್ವದಲ್ಲಿ ಸಭೆಯಾಗಿದ್ದು, ಏಪ್ರಿಲ್ 20ರವರೆಗೆ ನೈಟ್ ಕರ್ಫ್ಯೂ ಮುಂದುವರಿಯಲಿದೆ. ಮಂಗಳವಾರ ಇನ್ನೊಂದು ಸಭೆಯ ಬಳಿಕ ಮುಂದಿನ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ಸಿಎಂ ನಿನ್ನೆ ತಿಳಿಸಿದ್ದಾರೆ. ಆದರೆ ಸರ್ಕಾರ ಕೊರೊನಾವನ್ನು ಮಣಿಸಲು ಇನ್ನೊಂದು ಹೊಸ ಪ್ಲ್ಯಾನ್ ಮಾಡಿದೆ ಎನ್ನಲಾಗಿದೆ. ನೈಟ್ ಕರ್ಫ್ಯೂ ಸಮಯ ಬದಲಿಸಲು ಮುಂದಾಗಿದೆ. ಬಹುತೇಕ …
Read More »ಗೋಕಾಕ ನಲ್ಲಿ ಮತ ಚಲಾವಣೆ ಮಾಡಿದ ಸಂತೋಷ್ ಜಾರಕಿಹೊಳಿ ದಂಪತಿ…
ಗೋಕಾಕ: ಬೆಳಗಾವಿ ಸೇರಿದಂತೆ ಎಲ್ಲಾಕಡೆ ಮತದಾನ ಮಂದಗತಿಯಿಂದ ಪ್ರಾರಂಭ ವಾಗಿದ್ದು ಸಮಯ್ ಕಳೆದಂತೆ ಜೋರಾಗಿಯೇ ನಡಿತಿದೆ ಸುಮಾರು 20ರಿಂದ 30 ಶೇಕಡಾ ಮತದಾನ ಗೋಕಾಕ ಹಾಗೂ ಅರಭಾವಿ ಕ್ಷೇತ್ರದಲ್ಲಿ ಆಗಿದೆ ಎಂಬ ಮಾಹಿತಿ ಸದ್ಯಕ್ಕೆ ಲಭ್ಯ ವಾಗುತ್ತಿದೆ. ಇಂದು ಮಾಜಿ ಸಚಿವ ಹಾಗೂ ಗೋಕಾಕ ಹಾಲಿ ಶಾಸಕ ರಮೇಶ್ ಜಾರಕಿಹೊಳಿ ಅವರ್ ಸುಪುತ್ರ ಶ್ರೀ ಸಂತೋಷ್ ಜಾರಕಿಹೊಳಿ ಹಾಗೂ ಅವರ್ ಸೊಸೆ ಅಂಬಿಕಾ ಸಂತೋಷ್ ಜಾರಕಿಹೊಳಿ ಅವರು ಎಲ್ಲರಂತೆ ಸರಳ …
Read More »ಕೆಂಪುಕೋಟೆ ಮೇಲೆ ಬಾವುಟ ಪ್ರಕರಣ- ನಟ ದೀಪ್ ಸಿಧುಗೆ ಜಾಮೀನು
ನವದೆಹಲಿ: ಗಣರಾಜ್ಯೋತ್ಸವ ದಿನ ರೈತ ಸಂಘಟನೆಗಳ ಟ್ರಾಕ್ಟರ್ ರ‍್ಯಾಲಿಯಲ್ಲಿ ಕೆಂಪು ಕೋಟೆ ಮೇಲೆ ಬಾವುಟ ಹಾರಿಸಿದ್ದ ನಟ ದೀಪ್ ಸಿಧುಗೆ ದೆಹಲಿ ಕೋರ್ಟ್ ಜಾಮೀನು ನೀಡಿದೆ. ಜನವರಿ 26 ರ ಹಿಂಸಾಚಾರ ಪ್ರಕರಣದಲ್ಲಿ ದೆಹಲಿ ನ್ಯಾಯಾಲಯವು ದೀಪ್ ಸಿಧುಗೆ ಜಾಮೀನು ನೀಡಿದೆ. ಕಳೆದ ವಿಚಾರಣೆಯ ವೇಳೆ, ಜನವರಿ 26 ರಂದು ಕೆಂಪು ಕೋಟೆಗೆ ಹೋಗುವಂತೆ ಆಂದೋಲನ ನಡೆಸುತ್ತಿರುವ ರೈತರಿಗೆ ಯಾವುದೇ ಕರೆ ನೀಡಿಲ್ಲ ಎಂದು ದೀಪ್ ಸಿಧು ನ್ಯಾಯಾಲಯಕ್ಕೆ ಮನವಿ …
Read More »ಹೆಚ್‍ಡಿಕೆಗೆ ಕೊರೊನಾ ಸೋಂಕು
ಬೆಂಗಳೂರು: ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಕೊರೊನಾ ಸೋಂಕು ತಗುಲಿದೆ. ತಮ್ಮ ಕೋವಿಡ್ ವರದಿ ಪಾಸಿಟಿವ್ ಬರುತ್ತಲೇ ಟ್ವಿಟ್ಟರ್ ಮೂಲಕ ಮಾಹಿತಿ ನೀಡಿರುವ ಕುಮಾರಸ್ವಾಮಿ ಅವರು, ತಮ್ಮ ಸಂಪರ್ಕಕ್ಕೆ ಬಂದವರು ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳುವಂತೆ ಮನವಿ ಮಾಡಿಕೊಂಡಿದ್ದಾರೆ. ಕೆಲ ದಿನಗಳ ಹಿಂದೆ ಮಾಜಿ ಪ್ರಧಾನಿಗಳಾದ ದೇವೇಗೌಡರು ಮತ್ತು ಅವರ ಶ್ರೀಮತಿ ಚನ್ನಮ್ಮ ಅವರಿಗೂ ಸೋಂಕು ತಗುಲಿತ್ತು. ಇದೀಗ ಕುಮಾರಸ್ವಾಮಿ ಅವರಿಗೂ ಸೋಂಕು ತಗುಲಿದೆ. ನಿನ್ನೆಯಷ್ಟೆ ಸಿಎಂ ಬಿ.ಎಸ್.ಯಡಿಯೂರಪ್ಪನವರಿಗೂ ಕೊರೊನಾ ದೃಢಪಟ್ಟ …
Read More »ಮಸ್ಕಿಯಲ್ಲಿ ಝಗಮಗಿಸುವ ‘ಸಖಿ’ ಮತಗಟ್ಟೆ
ಮಸ್ಕಿ (ರಾಯಚೂರು): ಮಸ್ಕಿ ವಿಧಾನಸಭೆ ಉಪಚುನಾವಣೆಗೆ ಶನಿವಾರ ಮತದಾನ ನಡೆಯುತ್ತಿದ್ದು, ಮಹಿಳಾ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿರುವ ಎರಡು ಕಡೆಗೆ ‘ಸಖಿ’ ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಈ ಮತಗಟ್ಟೆಗಳ ವಿಶೇಷ ಅಲಂಕಾರವು ಗಮನ ಸೆಳೆಯುತ್ತಿದೆ. ಮಸ್ಕಿ ಪಟ್ಟಣದ ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜು ಶುಕ್ರವಾರ ಗುಲಾಬಿ ವರ್ಣದಲ್ಲಿ ಮುಳುಗಿಸಲಾಗಿದೆ. ‘ಪಿಂಕ್ ಬೂತ್’ ಹೆಸರಿಗೆ ತಕ್ಕಂತೆ ಗುಲಾಬಿ ವರ್ಣವೈವಿಧ್ಯದಲ್ಲಿ ಅಲಂಕಾರ ಮಾಡಲಾಗಿದ್ದು, ಕಾಲೇಜು ಮೂಲ ಕಟ್ಟಡ ಎಲ್ಲಿದೆ ಎಂದು ಹುಡುಕಾಟ ಮಾಡುವಷ್ಟು ಬದಲಾವಣೆ ಮಾಡಲಾಗಿದೆ. …
Read More »ಉಪಚುನಾವಣೆ: ಬೆಳಗಾವಿ ಮತ್ತು ಮಸ್ಕಿ, ಬಸವಕಲ್ಯಾಣದಲ್ಲಿ ಮತದಾನ ಆರಂಭ
ಬೆಳಗಾವಿ/ರಾಯಚೂರು: ಕಾಂಗ್ರೆಸ್ ಮತ್ತು ಬಿಜೆಪಿ ಮಧ್ಯೆ ತೀವ್ರ ಜಿದ್ದಾಜಿದ್ದಿನ ಕಣಗಳಾಗಿರುವ ಬೆಳಗಾವಿ ಲೋಕಸಭಾ ಕ್ಷೇತ್ರ ಹಾಗೂ ಮಸ್ಕಿ, ಬಸವಕಲ್ಯಾಣ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಮತದಾನ ಆರಂಭವಾಗಿದೆ. ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಕಾರಣ ಸೋಂಕು ಹರಡದಂತೆ ಎಚ್ಚರ ವಹಿಸಲು ಮತಗಟ್ಟೆಗಳಲ್ಲಿ ಅಂತರ ಕಾಯ್ದುಕೊಂಡು ಮತದಾನ ಮಾಡಬೇಕಿದೆ. ಹೀಗಾಗಿ, ಮತದಾನದ ಅವಧಿಯನ್ನು ಒಂದು ಗಂಟೆ ಹೆಚ್ಚಿಸಲಾಗಿದ್ದು, ಬೆಳಿಗ್ಗೆ 7ರಿಂದ ಸಂಜೆ 7ರ ವರೆಗೆ ಮತದಾನಕ್ಕೆ ಅವಕಾಶ ಕಲ್ಪಿಸಲಾಗಿದೆ. ಕೇಂದ್ರದಲ್ಲಿ ಸಚಿವರಾಗಿದ್ದ ಸುರೇಶ ಅಂಗಡಿ …
Read More »
Laxmi News 24×7