Breaking News

ರಾಜ್ಯ

ಪಿಕಾರ್ಡ್ ಬ್ಯಾಂಕ್ ಮಾಜಿ ಅಧ್ಯಕ್ಷರ ಮೇಲೆ ಹಲ್ಲೆ

ಹೊನ್ನಾಳಿ: ತಾಲ್ಲೂಕಿನ ಕುಂದೂರು ಗ್ರಾಮದ ಹೊರವಲಯದ ಮನೆಯೊಂದರ ಮೇಲೆ ಐದು ಜನರಿದ್ದ ದುಷ್ಕರ್ಮಿಗಳ ತಂಡ ಗುರುವಾರ ರಾತ್ರಿ ಕುಂದೂರು ಗ್ರಾಮದ ನಿವಾಸಿ, ಹೊನ್ನಾಳಿ ಪಿಕಾರ್ಡ್ ಬ್ಯಾಂಕ್ ಮಾಜಿ ಅಧ್ಯಕ್ಷ ಎಂಜಿಆರ್ ಮಂಜುನಾಥ್ ಅವರ ಮೇಲೆ ಹಲ್ಲೆ ನಡೆಸಿದೆ. ತೀವ್ರವಾಗಿ ಗಾಯಗೊಂಡಿರುವ ಅವರನ್ನು ಹೊನ್ನಾಳಿ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ. ಕುಂದೂರು ಗ್ರಾಮಕ್ಕೆ ಪಿಎಸ್‌ಐ ಬಸನಗೌಡ ಬಿರಾದಾರ ಅವರು ಭೇಟಿ ನೀಡಿ ಪರಿಶೀಲಿಸಿದರು. ಈ ಸಂಬಂಧ ಒಬ್ಬನನ್ನು ಪೊಲೀಸರು ಬಂಧಿಸಿದ್ದಾರೆ‌. ತಪ್ಪಿಸಿಕೊಂಡಿರುವ ಇತರ …

Read More »

ತಮಿಳು ಚಿತ್ರರಂಗದ​ ಹಿರಿಯ ಹಾಸ್ಯ ಕಲಾವಿದ ವಿವೇಕ್​ ವಿಧಿವಶ

ಚೆನ್ನೈ: ನಿನ್ನೆ (ಏಪ್ರಿಲ್​ 16) ಹೃದಯಾಘಾತದಿಂದ ಆಸ್ಪತ್ರೆಗೆ ದಾಖಲಾಗಿದ್ದ ತಮಿಳು ಚಿತ್ರರಂಗದ ಹಿರಿಯ ಹಾಸ್ಯ ಕಲಾವಿದ ವಿವೇಕ್ ಚಿಕಿತ್ಸೆ ಫಲಿಸದೇ ಇಂದು ಬೆಳಗ್ಗೆ (ಏಪ್ರಿಲ್​ 17) ವಿಧಿವಶರಾಗಿದ್ದಾರೆ.​ ಎಡ ಮುಂಭಾಗದ ಅಪಧಮನಿ ನಾಳವು ಶೇ 100 ರಷ್ಟು ಬ್ಲಾಕ್​ ಆಗಿದ್ದು, ತೀವ್ರತರವಾದ ಹೃದಯಾಘಾತಕ್ಕೆ ಕಾರಣವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ವಿವೇಕ್ ಅವರ ಹೃದಯಾಘಾತಕ್ಕೆ ಗುರುವಾರ ತೆಗೆದುಕೊಂಡ ಕೋವಿಡ್​ ಲಸಿಕೆ ಕಾರಣ ಎಂಬ ಆರೋಪ ಕೇಳಿಬಂದಿತ್ತು. ಇದರ ಬೆನ್ನಲ್ಲೇ ಸ್ಪಷ್ಟನೆ ನೀಡಿದ …

Read More »

ರೈಲು ಇಳಿಯುತ್ತಿದ್ದಂತೆ ನಿಲ್ದಾಣದಿಂದ ಎದ್ನೋ ಬಿದ್ನೋ ಎಂದು ಓಡಿದ ಜನರು: ಕಾರಣ ಕೇಳಿದ್ರೆ ದಂಗಾಗ್ತೀರಾ!

ಪಟನಾ: ಎಲ್ಲಿ ನಮ್ಮನೆಲ್ಲ ಹಿಡಿದು ಕರೊನಾ ವೈರಸ್​ ಟೆಸ್ಟ್​ ಮಾಡಿಸುತ್ತಾರೋ ಎಂಬ ಭಯದಲ್ಲಿ ಮಕ್ಕಳು, ಯುವಕರು ಸೇರಿದಂತೆ ಅನೇಕರು ರೈಲು ನಿಲ್ದಾಣದಲ್ಲಿ ಯರ್ರಾಬಿರ್ರಿ ಓಡಿದ ಘಟನೆ ಬಿಹಾರದ ಬುಕ್ಸರ್​ನಲ್ಲಿ ಗುರುವಾರ ನಡೆದಿದೆ.​ ರೈಲು ಇಳಿದು ನಿಲ್ದಾಣದಿಂದ ಹೊರ ಹೋಗುವ ಮುಂಚೆ ಕರೊನಾ ಟೆಸ್ಟ್​ ಮಾಡಿಸಲು ಅಲ್ಲಿನ ಆರೋಗ್ಯ ಕಾರ್ಯಕರ್ತರು ಕೇಳಿದಾಗ, ಟೆಸ್ಟ್​ ತಪ್ಪಿಸಿಕೊಳ್ಳುವ ಉದ್ದೇಶದಿಂದಲೇ ಜನರು ಅಲ್ಲಿಂದ ಕಾಲ್ಕಿತ್ತಿದ್ದಾರೆ. ಇದಕ್ಕೆ ಸಂಬಂಧಿಸಿದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ರೈಲು …

Read More »

ಬೀದಿಬದಿ ವ್ಯಾಪಾರಿಗಳಿಗೆ ಸೌಲಭ್ಯ ಕಲ್ಪಿಸಲು ಆಗ್ರಹ

ಲಿಂಗಸುಗೂರು: ‘ಬೀದಿಬದಿ ವ್ಯಾಪಾರಿಗಳಿಗೆ ಜೀವನ ಭದ್ರತೆ ಒದಗಿಸಲು ಸ್ಥಳೀಯ ಸಂಸ್ಥೆಗಳು ವ್ಯಾಪಾರ ಘಟಕಗಳನ್ನು ರಚಿಸಿ, ಅಗತ್ಯ ಸೌಲಭ್ಯಗಳನ್ನು ಕಲ್ಪಿಸಬೇಕು’ ಎಂದು ಆಗ್ರಹಿಸಿ ಬೀದಿಬದಿ ವ್ಯಾಪಾರಿಗಳ ಮಹಾಮಂಡಲ ತಾಲ್ಲೂಕು ಘಟಕದ ಪದಾಧಿಕಾರಿಗಳು ಶುಕ್ರವಾರ ಪುರಸಭೆ ಮುಖ್ಯಾಧಿಕಾರಿ ವಿಜಯಲಕ್ಷ್ಮಿ ಅವರಿಗೆ ಮನವಿ ಸಲ್ಲಿಸಿದರು. ‘ರಸ್ತೆ ಬದಿ ವ್ಯಾಪಾರಿಗಳ ಅನುಕೂಲಕ್ಕೆ ಮಾರುಕಟ್ಟೆ ಸಮಿತಿ ರಚಿಸಲಾಗಿದೆ. ಸಮಿತಿ ಸದಸ್ಯರನ್ನು ಕನಿಷ್ಠ ಮೂರು ತಿಂಗಳಿಗೊಮ್ಮೆ ಏಳು ದಿನಗಳ ನೋಟಿಸ್‍ ನೀಡಿ ಸಭೆ ಕರೆದು ಕುಂದುಕೊರತೆ ವಿಚಾರಣೆ ಮಾಡುವುದನ್ನು …

Read More »

ರಸ್ತೆ ಅಪಘಾತದ ಪರಿಹಾರ ನೀಡುವಲ್ಲಿ ವಿಳಂಬ- KSRTC ಕಚೇರಿ ವಸ್ತುಗಳು ಜಪ್ತಿ

ಗದಗ: ಅಪಘಾತದಿಂದ ಮೃತಪಟ್ಟಿದ್ದ ಬಾಲಕನ ಕುಟುಂಬಕ್ಕೆ ಪರಿಹಾರ ನೀಡುವಲ್ಲಿ ವಿಳಂಬ ಮಾಡಿದಕ್ಕೆ ವಾಯುವ್ಯ ಸಾರಿಗೆ ವಿಭಾಗೀಯ ಕಚೇರಿಯ ವಸ್ತುಗಳನ್ನು ಜಪ್ತಿ ಮಾಡಿದ ಘಟನೆ ನಗರದಲ್ಲಿ ನಡೆದಿದೆ. ನಗರದ ಮುಳಗುಂದ ನಾಕಾ ಬಳಿ ಇರುವ ವಾಯುವ್ಯ ಸಾರಿಗೆ ವಿಭಾಗೀಯ ಕಚೇರಿಯಲ್ಲಿನ ಕಂಪ್ಯೂಟರ್, ಮಾನಿಟರ್, ಸಿಪಿಯು ಸೇರಿದಂತೆ ಹಲವಾರು ವಸ್ತುಗಳನ್ನು ಜಪ್ತಿ ಮಾಡಲಾಗಿದೆ. ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ರಾಜಶೇಖರ್ ಪಾಟೀಲ್ ಅವರ ಆದೇಶದ ಮೇರೆಗೆ ಜಪ್ತಿ ಮಾಡಲಾಗಿದೆ. ಏನಿದು ಪ್ರಕರಣ? 2009ರಲ್ಲಿ …

Read More »

ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರೊಂದಿಗೆ ಸಂಪರ್ಕ ಹೊಂದಿದ್ದ ಸವದತ್ತಿ ಶಾಸಕ ಆನಂದ ಮಾಮನಿಗೆ ಕೊರೊನಾ ದೃಢ

ಬೆಂಗಳೂರು: ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರೊಂದಿಗೆ ಸಂಪರ್ಕ ಹೊಂದಿದ್ದ ಸವದತ್ತಿ ಶಾಸಕ ಆನಂದ ಮಾಮನಿಗೆ ಕೊರೊನಾ ದೃಢಪಟ್ಟಿದೆ. ಉಪಚುನಾವಣಾ ಪ್ರಚಾರಕ್ಕಾಗಿ ಸಿಎಂ ಬಿಎಸ್ ಯಡಿಯೂರಪ್ಪನವರು ಕಳೆದ ನಾಲ್ಕು ದಿನಗಳಿಂದ ಬೆಳಗಾವಿ, ಬಸವ ಕಲ್ಯಾಣ, ಮಸ್ಕಿಗೆ ಪ್ರವಾಸ ಬೆಳೆಸಿದ್ದರು. ಈ ವೇಳೆ ಸಿಎಂ ಬಿಎಸ್‍ವೈರನ್ನು ಭೇಟಿ ಮಾಡಿದ್ದ ಸವದತ್ತಿ ಶಾಸಕ ಆನಂದ ಮಾಮನಿಗೆ ಇಂದು ಕೊರೊನಾ ಪಾಸಿಟಿವ್ ವರದಿ ಬಂದಿದೆ. ಸೋಮವಾರದಿಂದ ಜ್ವರದಲ್ಲಿ ಬಳಲುತ್ತಿರುವ ಸಿಎಂ ಬಿಎಸ್‍ವೈ ಮಾತ್ರೆಗಳನ್ನು ಸೇವಿಸಿ ಚುನಾವಣೆ ಪ್ರಚಾರ …

Read More »

ವಿಜಯಪುರ: ಐತಿಹಾಸಿಕ ಗೋಳಗುಮ್ಮಟ ಪ್ರವೇಶಕ್ಕೆ ಮೇ 15ರವರೆಗೆ ನಿರ್ಬಂಧ

ವಿಜಯಪುರ, ಎ.16: ರಾಜ್ಯ ಹಾಗೂ ವಿಜಯಪುರ ಜಿಲ್ಲಾದ್ಯಂತ ಕೊರೋನ ಸೋಂಕು ಪ್ರಕರಣಗಳ ಹೆಚ್ಚಳದ ಹಿನ್ನೆಲೆಯಲ್ಲಿ ಐತಿಹಾಸಿಕ ಗೋಳಗುಮ್ಮಟ ವೀಕ್ಷಣೆಗೆ ಮೇ 15ರ ವರೆಗೆ ಪ್ರವಾಸಿಗರಿಗೆ ಪ್ರವೇಶ ನಿರ್ಬಂಧ ಹೇರಲಾಗಿದೆ. ಗೋಳಗುಮ್ಮಟಕ್ಕೆ ಪ್ರವೇಶ ನಿರ್ಬಂಧಿಸಿ ಭಾರತೀಯ ಪುರಾತತ್ವ ಇಲಾಖೆ ಆದೇಶ ಹೊರಡಿಸಿದೆ. ಈ ಹಿನ್ನೆಲೆಯಲ್ಲಿ ಗೋಳಗುಮ್ಮಟ ಪ್ರವೇಶ ದ್ವಾರದ ಬಾಗಿಲಿಗೆ ಬೀಗ ಹಾಕಲಾಗಿದೆ.

Read More »

ಬಸ್‌ ಗೆ ಕಲ್ಲು ಎಸೆದ ಕಿಡಿಗೇಡಿಗಳು: ಸಾರಿಗೆ ನೌಕರರ ಮುಷ್ಕರಕ್ಕೆ ಚಾಲಕ ಬಲಿ

ಬಾಗಲಕೋಟೆ: 6ನೇ ವೇತನ ಆಯೋಗ ಜಾರಿಗೊಳಿಸುವಂತೆ ಒತ್ತಾಯಿಸಿ ರಾಜ್ಯದಲ್ಲಿ ಮುಷ್ಕರ ನಡೆಸುತ್ತಿರುವ ಸಾರಿಗೆ ನೌಕರರ ಹೋರಾಟ ತೀವ್ರಗೊಂಡಿದ್ದು, ಮುಷ್ಕರದ ವೇಳೆಯೂ ಸೇವಾನಿರತವಾಗಿದ್ದ ಸಾರಿಗೆ ಸಂಸ್ಥೆಯ ಚಾಲಕನೊಬ್ಬ ಬಲಿಯಾಗಿದ್ದಾನೆ. ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬಾಗಲಕೋಟೆ ವಿಭಾಗೀಯ ಜಮಖಂಡಿ ಘಟಕದ ಚಾಲಕ ನಭಿರಸೂಲ ಅವಟಿ (59) ಶುಕ್ರವಾರ ಮೃತಪಟ್ಟಿದ್ದಾರೆ. ಚಾಲಕ ನಭಿರಸೂಲ ಅವರು ಬೆಳಗ್ಗೆ ಸೇವೆಗೆ ಹಾಜರಾಗಿದ್ದರು. ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಘತ್ತರಗಿಯಿಂದ ಜಮಖಂಡಿಗೆ ಮರಳುತ್ತಿದ್ದ ವೇಳೆ ಜಮಖಂಡಿ …

Read More »

8 ನಗರಗಳಲ್ಲಿ ನೈಟ್ ಕರ್ಫ್ಯೂ ಮುಂದುವರಿಕೆ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ಮಿತಿಮೀರುತ್ತಿದೆ. ಹಾಗಾಗಿ ಕೋವಿಡ್ ನಿಯಂತ್ರಣಕ್ಕೆ ಕಠಿಣ ನಿಯಮ ಜಾರಿಗೆ ತರುವ ನಿಟ್ಟಿನಲ್ಲಿ ಚರ್ಚೆ ನಡೆಸಲಾಗುತ್ತಿದೆ. ಏಪ್ರಿಲ್ 20ರಂದು ಟಫ್ ರೂಲ್ಸ್ ಜಾರಿ ಬಗ್ಗೆ ನಿರ್ಧರಿಸಲಾಗುವುದು ಎಂದು ತಿಳಿಸಿದರು. ಕೋವಿಡ್ ಸಲಹಾ ಸಮಿತಿ ತಜ್ಞರ ಜೊತೆ ತುರ್ತು ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಈಗ ಜಾರಿಯಲ್ಲಿರುವ 8 ನಗರಗಳ ನೈಟ್ ಕರ್ಫ್ಯೂ ಏಪ್ರಿಲ್ 20ರವರೆಗೂ ಮುಂದುವರೆಯಲಿದೆ. 20ರಂದು ಮತ್ತೊಮ್ಮೆ ಸಭೆ ನಡೆಸಿ ಮುಂದೆ …

Read More »

ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಮತ್ತು ಅವರ ಸಹೋದರ, ಹರ್ಷಾ ಶುಗರ್ಸ್ ಎಂ.ಡಿ. ಚನ್ನರಾಜ ಹಟ್ಟಿಹೊಳಿ ಅವರಿಗೆ ಕೊರೆನಾ ಪಾಸಿಟಿವ್

  ಬೆಳಗಾವಿ :ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಮತ್ತು ಅವರ ಸಹೋದರ, ಹರ್ಷಾ ಶುಗರ್ಸ್ ಎಂ.ಡಿ. ಚನ್ನರಾಜ ಹಟ್ಟಿಹೊಳಿ ಅವರಿಗೆ ಕೊರೆನಾ ಪಾಸಿಟಿವ್ ಬಂದಿದೆ. ಶುಕ್ರವಾರ ಬೆಳಗ್ಗೆ ಪರೀಕ್ಷೆ ಮಾಡಿಸಿಕೊಂಡಿದ್ದು, ಪಾಸಿಟಿವ್ ಬಂದಿರುವುದರಿಂದ ವೈದ್ಯರ ಸಲಹೆಯ ಮೇರೆಗೆ ಹೋಂ ಕ್ವಾರಂಟೈನ್ ಆಗಿದ್ದಾರೆ. ತಮ್ಮೊಡನೆ ಸಂಪರ್ಕಕ್ಕೆ ಬಂದವರು ಪರೀಕ್ಷೆ ಮಾಡಿಸಿಕೊಳ್ಳುವಂತೆ ಮತ್ತು ಆದಷ್ಟು ಜಾಗರೂಕತೆಯಿಂದ ಇರುವಂತೆ ಲಕ್ಷ್ಮಿ ಹೆಬ್ಬಾಳಕರ್ ಮತ್ತು ಚನ್ನರಾಜ ಹಟ್ಟಿಹೊಳಿ ವಿನಂತಿಸಿದ್ದಾರೆ.

Read More »