ಬೆಳಗಾವಿ: ‘ಬಿ.ಎಸ್. ಯಡಿಯೂರಪ್ಪ ನೇತೃತ್ವದ ಸರ್ಕಾರವು ಭ್ರಷ್ಟಾಚಾರ ಮತ್ತು ದುರಾಡಳಿತದಲ್ಲಿ ದೇಶದಲ್ಲೇ ನಂ.1 ಸ್ಥಾನದಲ್ಲಿದೆ’ ಎಂದು ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೇವಾಲಾ ದೂರಿದರು. ಇಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಪ್ರಜಾಪ್ರಭುತ್ವದ ಕಗ್ಗೊಲೆ ಮಾಡಿ, ಶಾಸಕರನ್ನು ಖರೀದಿಸಿ ಬಂದ ಅನೈತಿಕ ಸರ್ಕಾರವಿದು. ಜನಾದೇಶದಿಂದ ರಚನೆಯಾದುದಲ್ಲ. ಅವ್ಯವಹಾರ, ಅಕ್ರಮಗಳಿಂದಲೇ ಕೂಡಿರುವ ಆಡಳಿತದಿಂದಾಗಿ ರಾಜ್ಯದಲ್ಲಿ ಅಭಿವೃದ್ಧಿ ಕುಂಠಿತವಾಗಿದ್ದು, ಜನರು ತೀವ್ರ ಸಂಕಷ್ಟಕ್ಕೆ ಒಳಗಾಗಿದ್ದಾರೆ’ ಎಂದು ವಾಗ್ದಾಳಿ ನಡೆಸಿದರು. ‘ಸಚಿವರೊಬ್ಬರು ದೇಶದಲ್ಲೇ ಮೊದಲ …
Read More »ಸುಳೇಭಾವಿಯ ಆದಿಶಕ್ತಿ ಶ್ರೀ ಮಹಾಲಕ್ಷ್ಮಿ ದೇವಿಯ ಗದ್ದುಗೆಯ ಸ್ಥಳದಲ್ಲಿ ಶ್ರೀ ಸತೀಶಣ್ಣನವರ ಪರ ಪಕ್ಷದ ಬೃಹತ್ ಶಕ್ತಿ ಪ್ರದರ್ಶನ “
ಬೆಳಗಾವಿ ಗ್ರಾಮೀಣ ವಿಧಾನ ಸಭಾ ಕ್ಷೇತ್ರದ ಆದಿಶಕ್ತಿ ಶ್ರೀ ಮಹಾಲಕ್ಷ್ಮಿ ದೇವಿಯ ನಾಡು #ಸುಳೇಭಾವಿ ಗ್ರಾಮದಲ್ಲಿ ಲೋಕಸಭಾ ಚುನಾವಣೆಯ ಪ್ರಚಾರಾರ್ಥ ಪಕ್ಷದ ವತಿಯಿಂದ ಶ್ರೀ ಸತೀಶಣ್ಣಾ ಜಾರಕಿಹೊಳಿಯವರ ಪರ ಬೃಹತ್ ಸಮಾವೇಶವನ್ನು ಕೈಗೊಳ್ಳಲಾಯಿತು. ಸಮಾವೇಶ ಪ್ರಾರಂಭಕ್ಕೂ ಮುನ್ನ ಮುಕ್ಕೋಟಿ ದೇವಾನು ದೇವತೆಗಳು ವರುಣದೇವನ ಮುಖಾಂತರ ಹರಸಿ, ಆಶೀರ್ವದಿಸಿದ್ದು ನಿಜಕ್ಕೂ ಪವಾಡ, ಮಳೆಯ ಹನಿಗಳು ನಮ್ಮೆಲ್ಲರ ಮೇಲೆ ಹೂ ಗಳಂತೆ ಚೆಲ್ಲಿದ್ದು ಆ ದೇವಾನು ದೇವತೆಗಳ ವರ ಪ್ರಸಾದವೇ ಆಗಿದೆ, ಇದು …
Read More »5ನೇ ದಿನಕ್ಕೆ ಕಾಲಿಟ್ಟ ಸಾರಿಗೆ ನೌಕರರ ಮುಷ್ಕರ : ಇಂದು 8 ಗಂಟೆಯವರೆಗೆ ಸಂಚರಿಸಿದ ಸಾರಿಗೆ ಬಸ್ ಗಳು ಎಷ್ಟು ಗೊತ್ತಾ.?
ಬೆಂಗಳೂರು : ಸಾರಿಗೆ ನೌಕರರ ಮುಷ್ಕರ ಇಂದಿಗೆ 5ನೇ ದಿನಕ್ಕೆ ಕಾಲಿಟ್ಟಿದೆ. 6ನೇ ವೇತನ ಆಯೋಗ ಶಿಫಾರಸ್ಸು ಸೇರಿದಂತೆ ವಿವಿಧ ಬೇಡಿಕೆಗಳನ್ನು ಒತ್ತಾಯಿಸಿ, ಇಂದು ಕೂಡ ಸಾರಿಗೆ ನೌಕರರು ಅನಿರ್ಧಿಷ್ಟಾವಧಿಯ ಮುಷ್ಕರ ಮುಂದುವರೆಸಿದ್ದಾರೆ. ಇಂತಹ ಸಾರಿಗೆ ನೌಕರರ ಮುಷ್ಕರದಿಂದಾಗಿ ರಾಜ್ಯಾಧ್ಯಂತ ಸಾರಿಗೆ ಬಸ್ ಸಂಚಾರ ಕೂಡ ವಿರಳವಾಗಿದೆ. ಯುಗಾದಿ ಹಬ್ಬಕ್ಕೆ ತೆರಳುತ್ತಿರುವಂತ ನೌಕರರು ಬಸ್ ಗಳಿಲ್ಲದೇ ಪರದಾಡುವಂತ ಪರಿಸ್ಥಿತಿಯನ್ನು ಎದುರಿಸುವಂತಾಗಿದೆ. ಇದರ ಮಧ್ಯೆ 8 ಗಂಟೆಯವರೆಗೆ ವಿವಿಧ ನಿಗಮಗಳಿಂದ ಒಟ್ಟು …
Read More »ಯಡಿಯೂರಪ್ಪನವರ ಕೈ ಬಲಪಡಿಸಿ ಅವರಿಗೆ ಶಕ್ತಿ ತುಂಬುವಂತೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ ಹೇಳಿದರು.
ಗೋಕಾಕ: ಮಹಿಳೆಯರ ಕಲ್ಯಾಣಕ್ಕಾಗಿ ಬಿಜೆಪಿ ನೇತೃತ್ವದ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಶ್ರಮಿಸುತ್ತಿದ್ದು, ಸಾಕಷ್ಟು ಯೋಜನೆಗಳನ್ನು ಮಹಿಳೆಯರ ಅಭ್ಯುದಯಕ್ಕಾಗಿ ರೂಪಿಸಿವೆ. ಸಮಗ್ರ ಅಭಿವೃದ್ದಿ ದೃಷ್ಟಿಕೋನದಿಂದ ಬಿಜೆಪಿಗೆ ಆಶೀರ್ವದಿಸಿ ಪ್ರಧಾನಿ ನರೇಂದ್ರ ಮೋದಿ ಮತ್ತು ಸಿಎಮ್ ಯಡಿಯೂರಪ್ಪನವರ ಕೈ ಬಲಪಡಿಸಿ ಅವರಿಗೆ ಶಕ್ತಿ ತುಂಬುವಂತೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ ಹೇಳಿದರು. ಶನಿವಾರದಂದು ಇಲ್ಲಿನ ಹೊರವಲಯದ ಪ್ರಭಾ ಶುಗರ್ಸ್ ಪ್ರಿಯದರ್ಶಿನಿ ಸಮುದಾಯ ಭವನದಲ್ಲಿ ಅಭ್ಯರ್ಥಿ ಮಂಗಳಾ ಅಂಗಡಿ …
Read More »ಬ್ಯಾಂಕ್ ಆಫ್ ಬರೋಡಾ – ಪದವಿ ಆದವರಿಗೆ ಉದ್ಯೋಗಾವಕಾಶ
ಸೀನಿಯರ್ ರಿಲೇಶನ್‌ಶಿಪ್ ಮ್ಯಾನೇಜರ್, ಟೆರಿಟರಿ ಹೆಡ್, ಪ್ರಾಡಕ್ಟ್ ಹೆಡ್, ಐಟಿ ಫಂಕ್ಷನಲ್ ಅನಾಲಿಸ್ಟ್ ಮತ್ತು ಇತರ ಹುದ್ದೆಗಳ ನೇಮಕಾತಿಗಾಗಿ ಬ್ಯಾಂಕ್ ಆಫ್ ಬರೋಡಾ (ಬಿಒಬಿ) ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ bankofbaroda.in ಮೂಲಕ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳು 29 ಏಪ್ರಿಲ್ 2021 ರೊಳಗೆ ಇತ್ತೀಚಿನ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಖಾಲಿ ಹುದ್ದೆಗಳ ವಿವರಗಳು ಬ್ಯಾಂಕ್ ಆಫ್ ಬರೋಡಾ (ಬಿಒಬಿ) …
Read More »ಸೈಯದ್ ಗ್ರಂಥಾಲಯಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳನ್ನು ಬಂಧಿಸಿ: ಸಿದ್ದರಾಮಯ್ಯ ಆಗ್ರಹ
ಮೈಸೂರು: ಸೈಯದ್ ಇಸಾಕ್ ಅವರ ಸಾರ್ವಜನಿಕ ಗ್ರಂಥಾಲಯಕ್ಕೆ ಬೆಂಕಿ ಇಟ್ಟು ಸಾವಿರಾರು ಪುಸ್ತಕಗಳನ್ನು ನಾಶ ಮಾಡಿದ ದುಷ್ಕರ್ಮಿಗಳ ವಿರುದ್ಧ ರಾಜ್ಯ ಸರ್ಕಾರ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿ ಪ್ರತಿಕ್ರಿಯಿಸಿರುವ ಅವರು, ʻಮೈಸೂರಿನ ಅಕ್ಷರ ಪ್ರೇಮಿ ಸೈಯದ್ ಇಸಾಕ್ ಅವರು ಕಷ್ಟಪಟ್ಟು ಕಟ್ಟಿ ನಡೆಸುತ್ತಿದ್ದ ಸಾರ್ವಜನಿಕ ಗ್ರಂಥಾಲಯವನ್ನು ಸುಟ್ಟುಹಾಕಿರುವುದು ಹೇಯಕೃತ್ಯ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು, ಈ ಅಕ್ಷರವಿರೋಧಿ ದುಷ್ಕರ್ಮಿಗಳನ್ನು …
Read More »ಕೊರೊನಾ ವೈರಸ್ ಭೀತಿ: ತಲೈವಿ ಚಿತ್ರಕ್ಕೆ ಮತ್ತೆ ನಿರಾಸೆ
ಕೊರೊನಾ ವೈರಸ್ ಎರಡನೇ ಅಲೆಯಿಂದ ಮತ್ತೊಂದು ಚಿತ್ರ ಸಂಕಷ್ಟಕ್ಕೆ ಸಿಲುಕಿದೆ. ಭಾರತೀಯ ಚಿತ್ರ ಪ್ರಪಂಚದಲ್ಲಿ ಭಾರಿ ನಿರೀಕ್ಷೆ ಮೂಡಿಸಿರುವ ತಲೈವಿ ಸಿನಿಮಾದ ಬಿಡುಗಡೆ ದಿನಾಂಕ ಮುಂದಕ್ಕೆ ಹೋಗಿದೆ. ಈ ಮೊದಲು ನಿರ್ಧರಿಸಿದಂತೆ ಏಪ್ರಿಲ್ 23 ರಂದು ತಲೈವಿ ತಮಿಳು, ತೆಲುಗು ಹಾಗೂ ಹಿಂದಿ ಭಾಷೆಯಲ್ಲಿ ತೆರೆಗೆ ಬರಬೇಕಿತ್ತು. ಅದಕ್ಕೆ ಬೇಕಾದ ತಯಾರಿ ಸಹ ನಡೆದಿತ್ತು. ಆದರೆ ದೇಶದಲ್ಲಿ ಕೋವಿಡ್ ಪ್ರಕರಣ ಸಂಖ್ಯೆಯಲ್ಲಿ ಮತ್ತೆ ಏರಿಕೆ ಕಂಡ ಪರಿಣಾಮ ಬಿಡುಗಡೆಯಿಂದ ಹಿಂದೆ …
Read More »ಹಳಿ ದಾಟಲು ಬಂದ ಆನೆ ಕಂಡು ರೈಲು ನಿಲ್ಲಿಸಿದ ಲೋಕೋಪೈಲಟ್
ಜನಸಂಖ್ಯಾ ಸ್ಫೋಟದ ಪರಿಣಾಮದಿಂದಾಗಿ ದೇಶದ ಅರಣ್ಯ ಸಂಪತ್ತು ಕ್ಷೀಣಿಸುತ್ತಲೇ ಇದೆ. ಪ್ರಾಣಿಗಳಿಗೆ ತಂತಮ್ಮ ಸ್ವಾಭಾವಿಕ ನೆಲೆಯಲ್ಲಿ ಮಾನವನ ಉಪಟಳವಿಲ್ಲದೆ ಬದುಕುವುದು ಅಸಾಧ್ಯ ಎಂಬಂತೆ ಆಗಿಬಿಟ್ಟಿದೆ. ಇಂಥ ಚಾಲೆಂಜಿಂಗ್ ಪರಿಸ್ಥಿತಿಯಲ್ಲೂ ಸಹ ಪ್ರಾಣಿಗಳ ಜೀವಿಸುವ ಹಕ್ಕನ್ನು ಗೌರವಿಸುವ ಮಂದಿ ಅಪರೂಪಕ್ಕೆ ಅಲ್ಲಿ ಇಲ್ಲಿ ಇನ್ನೂ ಇದ್ದಾರೆ. ಇಂಥದ್ದೇ ಗುಣವಿರುವ ಲೋಕೋ ಪೈಲಟ್‌ಗಳಾದ ಎಸ್.ಸಿ. ಸರ್ಕಾರ್ ಹಾಗೂ ಟಿ. ಕುಮಾರ್ ಅವರು ಹಳಿಗಳ ಮೇಲೆ ಆನೆ ಮರಿಯೊಂದು ಹೋಗುತ್ತಿದ್ದ ಕಾರಣ ರೈಲನ್ನು ಕೆಲಕಾಲ …
Read More »ನೀರಿನ ಟ್ಯಾಂಕ್‍ಗೆ ವಿಷ ಮಾತ್ರೆಯ ಬಾಟೆಲ್ ಹಾಕಿದ ಕಿರಾತಕರು
ವಿಜಯನಗರ: ಕುಡಿಯುವ ನೀರಿನ ಟ್ಯಾಂಕ್ ವಿಷದ ಮಾತ್ರೆಗಳು ತುಂಬಿದ ಬಾಟೆಲ್ ಹಾಕಿರುವ ಘಟನೆ ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಚಿಗಟೇರಿ ಗ್ರಾಮದಲ್ಲಿ ನಡೆದಿದೆ. ಗ್ರಾಮಸ್ಥರ ಸಮಯ ಪ್ರಜ್ಞೆಯಿಂದ ಭಾರೀ ಅನಾಹುತ ತಪ್ಪಿದೆ. ಬೆಳೆಗಳಿಗೆ ಸಿಂಪಡಿಸುವ ಕ್ರಿಮಿನಾಶಕ ಮಾತ್ರೆಗಳುಳ್ಳ ಬಾಟೆಲ್ ಇದಾಗಿದೆ. ಇಂದು ಬೆಳಗ್ಗೆ ನೀರು ಸರಬರಾಜು ಮಾಡುವ ಸಿಬ್ಬಂದಿ ಟ್ಯಾಂಕ್ ಮೇಲೇರಿ ಪರಿಶೀಲಿಸಿದಾಗ ನೀರಿನಲ್ಲಿ ವಿಷದ ಬಾಟೆಲ್ ಬಿದ್ದಿರೋದು ಕಂಡು ಬಂದಿದೆ. ಕೂಡಲೇ ಗ್ರಾಮಸ್ಥರಿಗೆ ವಿಷಯ ತಿಳಿಸಿದ್ದಾರೆ. ಸದ್ಯ ನೀರಿನಲ್ಲಿದ್ದ …
Read More »RSS ಮುಖ್ಯಸ್ಥ ಮೋಹನ್ ಭಾಗವತ್ ಅವರಿಗೆ ಕೊರೊನಾವೈರಸ್!
ನಾಗ್ಪುರ್, ಏಪ್ರಿಲ್ 10: ದೇಶದಲ್ಲಿ ಕೊರೊನಾವೈರಸ್ ಸೋಂಕಿನ ಹರಡುವಿಕೆ ವೇಗ ಹೆಚ್ಚುತ್ತಿದೆ. ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸರಸಂಘ ಚಾಲಕ ಮೋಹನ್ ಭಾಗವತ್ ಅವರಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಕೊವಿಡ್-19 ಸೋಂಕು ತಗುಲಿರುವು ಹಿನ್ನೆಲೆ ಮೋಹನ್ ಭಾಗವತ್ ಅವರನ್ನು ನಾಗ್ಪುರದಲ್ಲಿರುವ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ನೀಡಲಾಗುತ್ತಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ. ಇತ್ತೀಚಿನ ದಿನಗಳಲ್ಲಿ ಅವರ ಜೊತೆಗೆ ಸಂಪರ್ಕಕ್ಕೆ ಬಂದಿದ್ದವರು ಸ್ವಯಂಪ್ರೇರಿತರಾಗಿ ಕೊರೊನಾವೈರಸ್ ಸೋಂಕಿನ ತಪಾಸಣೆ …
Read More »
Laxmi News 24×7