Breaking News

ರಾಜ್ಯ

ಇ0ದು ಸಿ.ಡಿ ಲೇಡಿ ನ್ಯಾಯಾಲಯದ ಮುಂದೆ ಹಾಜರು’‌ ,,?

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿಯವರದ್ದು ಎನ್ನಲಾದ ಸಿಡಿ ಪ್ರಕರಣ ದಿನದಿಂದ ದಿನಕ್ಕೆ ಹೊಸ ಟ್ವಿಸ್ಟ್‌ಗಳು ಪಡೆಯುತ್ತಿದೆ. ಇದೀಗ ನಾಳೆ ಸಿ.ಡಿ ಲೇಡಿ ನ್ಯಾಯಾಲಯದ ಮುಂದೆ ಹಾಜರಾಗುತ್ತಾಳೆ ಎಂದು ಆಕೆಯ ಪರ ವಕೀಲ ಕೆಎನ್‌ ಜಗದೀಶ್‌ ಫೇಸ್‌ಬುಕ್‌ ಮೂಲಕ ತಿಳಿಸಿದ್ದಾರೆ. ಸಿಡಿ ಲೇಡಿ ಪೋಷಕರು ತಮ್ಮ ಮಗಳ ಪರವಾಗಿ ನಿಲ್ಲಬೇಕು. ಮಗಳಿಗೆ ಅನ್ಯಾಯವಾಗಿದೆ. ಹೀಗಾಗಿ ಆಕೆ ಪರವಾಗಿ ನಿಲ್ಲಬೇಕು. ನಾವು ಅಂದುಕೊಂಡಂತೆ ಆದರೆ ನಾಳೆ ಆಕೆ ಕೋರ್ಟ್(Court)‌ಗೆ ಹಾಜರಾಗಲಿದ್ದಾರೆ ಎಂದು …

Read More »

ದೇಶದಲ್ಲಿ ಕಾಂಗ್ರೆಸ್‌ ಗಿಲ್ಲ ಅಸ್ತಿತ್ವ

ಹೊನ್ನಾಳಿ: ಕೇಂದ್ರ ಹಾಗೂ ರಾಜ್ಯದಲ್ಲಿ ಕಾಂಗ್ರೆಸ್‌ ಪಕ್ಷ ತನ್ನ ಅಸ್ತಿತ್ವ ಕಳೆದು ಕೊಂಡಿದ್ದು, ಕಾಂಗ್ರೆಸ್‌ ಅನ್ನು ಶಾಶ್ವತವಾಗಿ ವಿರೋಧ ಪಕ್ಷದಲ್ಲಿ ಕೂರಿಸಲು ಜನರು ತೀರ್ಮಾನ ಮಾಡಿದ್ದಾರೆ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ, ಶಾಸಕ ಎಂ.ಪಿ. ರೇಣುಕಾಚಾರ್ಯ ಹೇಳಿದರು. ತಾಲೂಕಿನ ಬೇಲಿಮಲ್ಲೂರು ಗ್ರಾಮದಲ್ಲಿ ಬಿಜೆಪಿ ಯುವ ಮೋರ್ಚಾ ಹಾಗೂ ಎಸ್‌ಟಿ ಮೋರ್ಚಾದಿಂದ ಶನಿವಾರ ಹಮ್ಮಿಕೊಂಡಿದ್ದ ಕಾರ್ಯಕಾರಣಿ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ರಾಜ್ಯದಲ್ಲಿ ಸಂಘಟನೆಗೆ ಹೆಚ್ಚು ಒತ್ತು ನೀಡುವ ಏಕೈಕ ಪಕ್ಷ …

Read More »

ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಮಾಜಿ ಸಚಿವ ರಮೇಶ್ ಜಾರಕಿಹೊಳೀಗೆ ಪೊಲೀಸರ ನೋಟಿಸ್

ಬೆಂಗಳೂರು: ರಾಜ್ಯದಲ್ಲಿ ಭಾರೀ ಸುದ್ದು ಮಾಡುತ್ತಿರುವ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಮಾಜಿ ಸಚಿವ ರಮೇಶ್ ಜಾರಕಿಹೊಳೀಗೆ ಪೊಲೀಸರು ನೋಟಿಸ್ ನೀಡಿದ್ದಾರೆ. ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ರಮೇಶ್‌ ಜಾರಕಿಹೊಳಿ ಅವ್ರಿಗೆ ಪೊಲೀಸರು ನೋಟಿಸ್‌ ನೀಡಿದ್ದು, ಇಂದು ಬೆಳಿಗ್ಗೆ 10 ಗಂಟೆಗೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದಾರೆ.   ಕಬ್ಬನ್‌ ಪಾರ್ಕ್‌ ಪೊಲೀಸರಿಂದ ನೋಟಿಸ್‌ ನೀಡಿದ್ದು, ಸೋಮವಾರ ಬೆಳಿಗ್ಗೆ 10 ಗಂಟೆಗೆ ವಿಚಾರಣೆಗಾಗಿ ಆಡುಗೋಡಿ ಟೆಕ್ನಿಕಲ್‌ ವಿಂಗ್‌ʼಗೆ ಹಾಜರಾಗಲು …

Read More »

ಮಲಗಿದ್ದ ಬಾಲಕಿಯನ್ನು ಹೊತ್ತೊಯ್ದು ಅತ್ಯಾಚಾರ..!

ಹಾಸನ,ಮಾ.28-ಬಸ್ ನಿಲ್ದಾಣದಲ್ಲಿ ಪೋಷಕರೊಂದಿಗೆ ಮಲಗಿದ್ದ ಬಾಲಕಿಯನ್ನು ಹೊತ್ತೊಯ್ದ ಕಾಮುಕ ಅತ್ಯಾಚಾರವೆಸಗಿರುವ ಅಮಾನವೀಯ ಘಟನೆ ಬಡಾವಣೆ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ರಾಮನಗರ ಮೂಲದ ಅಲೆಮಾರಿ ಕುಟುಂಬವೊಂದು ಹಾಸನದ ಹೊಸ ಬಸ್ ನಿಲ್ದಾಣಕ್ಕೆ ಬಂದಿದೆ. ರಾತ್ರಿ ಪೋಷಕರೊಂದಿಗೆ ಮಲಗಿದ್ದ ಆರು ವರ್ಷದ ಬಾಲಕಿಯನ್ನು ಕಾಮುಕ ಎತ್ತಿಕೊಂಡು ಹೋಗಿ ಅತ್ಯಾಚಾರವೆಸಗಿ ಪರಾರಿಯಾಗಿದ್ದಾನೆ. ಬೆಳಗ್ಗೆ ವಿಷಯ ಗೊತ್ತಾಗಿದೆ. ಪೊಲೀಸರ ಮೊರೆಹೋದ ಬಾಲಕಿಯ ಕುಟುಂಬ ದೂರು ನೀಡಿದೆ. ಪೊಲೀಸರು ಸ್ಥಳಕ್ಕಾಗಮಿಸಿ ಸಿಸಿಕ್ಯಾಮೆರಾವನ್ನು ಪರಿಶೀಲಿಸಿದಾಗ ಬಾಲಕಿಯನ್ನು ಎತ್ತಿಕೊಂಡು ಹೋಗುವ …

Read More »

ವಿಪಕ್ಷ ನಾಯಕ ಸಿದ್ದರಾಮಯ್ಯನವರಿಗೆ ನೆನಪಿನ ಶಕ್ತಿ ಕಡಿಮೆ ಆಗಿದೆ. ಮೇಟಿ ಪ್ರಕರಣವನ್ನು ಸಿಐಡಿಗೆ ಕೊಟ್ಟು ಮುಚ್ಚಿ ಹಾಕಿದ್ದರು.: ಬೊಮ್ಮಾಯಿ

ಬೆಂಗಳೂರು: ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ಸಮರ್ಪಕವಾಗಿ ಕೆಲಸ ಮಾಡುತ್ತಿದೆ. ಆಡಿಯೋ, ವೀಡಿಯೋ, ಸಿಡಿ ಎಲ್ಲವನ್ನೂ ಪರಿಶೀಲನೆ ನಡೆಸಲಾಗುತ್ತಿದೆ. ಶೀಘ್ರದಲ್ಲಿಯೇ ಸತ್ಯಾಸತ್ಯತೆ ಹೊರಬರಲಿದೆ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಬೊಮ್ಮಾಯಿ, ವಿಪಕ್ಷ ನಾಯಕ ಸಿದ್ದರಾಮಯ್ಯನವರಿಗೆ ನೆನಪಿನ ಶಕ್ತಿ ಕಡಿಮೆ ಆಗಿದೆ. ಮೇಟಿ ಪ್ರಕರಣವನ್ನು ಸಿಐಡಿಗೆ ಕೊಟ್ಟು ಮುಚ್ಚಿ ಹಾಕಿದ್ದರು. ಮೇಟಿ ವಿರುದ್ಧ ಕೇಸ್ ಕೂಡ ದಾಖಲಿಸಿರಲಿಲ್ಲ. ಆದರೆ ಈ ಪ್ರಕರಣದಲ್ಲಿ ನಾವು ಯುವತಿ ದೂರು …

Read More »

ಷ ಡಿ.ಕೆ.ಶಿವಕುಮಾರ್ ವಾಹನದ ಮೇಲೆ ಕಲ್ಲು ತೂರಾಟ, ಚಪ್ಪಲಿ ಎಸೆದಂತಹ ಯಾವುದೇ ಘಟನೆ ನಡೆದೇ ಇಲ್ಲ ಎಂದು ಬೆಳಗಾವಿ ಡಿಸಿಪಿ ವಿಕ್ರಂ ಅಮಟೆ

ಬೆಳಗಾವಿ: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಾಹನದ ಮೇಲೆ ಕಲ್ಲು ತೂರಾಟ, ಚಪ್ಪಲಿ ಎಸೆದಂತಹ ಯಾವುದೇ ಘಟನೆ ನಡೆದೇ ಇಲ್ಲ ಎಂದು ಬೆಳಗಾವಿ ಡಿಸಿಪಿ ವಿಕ್ರಂ ಅಮಟೆ ಸಮಜಾಯಿಷಿ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿ.ಕೆ.ಶಿವಕುಮಾರ್ ಹಾಗೂ ಬೆಂಬಲಿಗರ ವಾಹನದ ಮೇಲೆ ಕಲ್ಲು ತೂರಾಟದಂತಹ ಘಟನೆ ನಡೆದಿಲ್ಲ. ವಿಐಪಿಗಳು ಬಂದು ಹೋದ ಮೇಲೆ ಅಂತಹ ಘಟನೆ ನಡೆದಿದ್ದರೆ ದೃಶ್ಯಾವಳಿಗಳನ್ನು ಪರಿಶೀಲಿಸಿ ಅಂತವರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ ಎಂದರು. ಡಿ.ಕೆ.ಶಿವಕುಮಾರ್ ಬೆಳಗಾವಿ ಭೇಟಿಗೆ …

Read More »

ಡಿಕೆಶಿ ಕಾರಿಗೆ ಚಪ್ಪಲಿ ಎಸೆದ ರಮೇಶ್‌ ಜಾರಕಿಹೊಳಿ ಬೆಂಬಲಿಗರು

ಬೆಳಗಾವಿ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷದ ಅಭ್ಯರ್ಥಿ ಸತೀಶ್‌ ಜಾರಕಿಹೊಳಿ ಪರವಾಗಿ ಪ್ರಚಾರಕ್ಕೆ ಬೆಳಗಾವಿಗೆ ತೆರಳಿದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ವಿರುದ್ಧ ರಮೇಶ್‌ ಜಾರಕಿಹೊಳಿ ಬೆಂಬಲಿಗರು ಘೋಷಣೆ ಕೂಗಿದರು. ಈ ವೇಳೆ ಡಿಕೆಶಿ ಬೆಂಬಲಿಗರ ಕಾರಿಗೆ ಚಪ್ಪಲಿಯನ್ನು ಎಸೆದು ಆಕ್ರೋಶ ವ್ಯಕ್ತಪಡಿಸಿದರು. ಬೆಳಗಾವಿ ವಿಮಾನ ನಿಲ್ದಾಣದ ಬಳಿ ಕಾರಿನಲ್ಲಿ ಡಿಕೆಶಿ ತೆರಳುತ್ತಿದ್ದಾಗ ರಸ್ತೆಯುದ್ದಕ್ಕೂ ನಿಂತಿದ್ದ ರಮೇಶ್‌ ಜಾರಕಿಹೊಳಿ ಬೆಂಬಲಿಗರು ಪ್ರತಿಭಟನೆ ನಡೆಸಿದರು. ʻಗೋ ಬ್ಯಾಕ್‌ ಡಿಕೆಶಿʼ ಎಂದು ಕೂಗಿ, ಕಾರಿಗೆ …

Read More »

ಡಿಕೆಶಿಗೆ ಪ್ರತಿಭಟನೆಯ ಬಿಸಿ; ಬೆಂಬಲಿಗರ ವಾಹನದ ಮೇಲೆ ಚಪ್ಪಲಿ ಎಸೆತ; ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ

ಬೆಳಗಾವಿ: ಬೆಳಗಾವಿ ಲೋಕಸಭಾ ಉಪಚುನಾವಣೆ ಪ್ರಚಾರ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಬೆಳಗಾವಿಗೆ ಆಗಮಿಸಿದ್ದು, ಮಾಜಿ ಸಚಿವ ರಮೇಶ್ ಜಾರಕಿಹೊಳಿ ಬೆಂಬಲಿಗರ ಪ್ರತಿಭಟನೆ ಬಿಸಿ ತಟ್ಟಿದೆ. ರಮೇಶ್ ಜಾರಕಿಹೊಳಿ ಬೆಂಬಲಿಗರ ತೀವ್ರ ಪ್ರತಿಭಟನೆ, ವಿರೋಧದ ನಡುವೆಯೂ ಡಿ.ಕೆ.ಶಿವಕುಮಾರ್ ಇಂದು ಬೆಳಗಾವಿಗೆ ಭೇಟಿ ನೀಡಿದ್ದು, ಸಾಂಬ್ರಾ ವಿಮಾನ ನಿಲ್ದಾಣದಿಂದ ಹೋಟೆಲ್ ಗೆ ತೆರಳುತ್ತಿದ್ದಂತೆಯೇ ರಮೇಶ್ ಜಾರಕಿಹೊಳಿ ಬೆಂಬಲಿಗರು ಕಪ್ಪು ಬಾವುಟ ಪ್ರದರ್ಶಿಸಿ, ಡಿಕೆಶಿಗೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಆದರೆ ಪೊಲೀಸರು ತಡೆಯೊಡ್ಡಿದ್ದಾರೆ. …

Read More »

ಬೆಳಗಾವಿಯಲ್ಲಿ ಕೆಪಿಸಿಸಿ ಅಧ್ಯಕ್ಷರಿಗೆ ಚಪ್ಪಲಿ ಎಸೆದು ಸ್ವಾಗತ ಸ್ವಾಗತ

ಬೆಳಗಾವಿ – ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆಗೆ ಸೋಮವಾರಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ನಾಮಪತ್ರ ಸಲ್ಲಿಸಲಿರುವ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಭಾನುವಾರ ಬೆಳಗಾವಿಗೆ ಆಗಮಿಸಿದರು. ರಾಮಲಿಂಗಾರೆಡ್ಡಿ ಅವರ ಜೊತೆಗೆ ಆಗಮಿಸಿದ ಶಿವಕುಮಾರ ಅವರಿಗೆ ವಿಮಾನ ನಿಲ್ದಾಣದಲ್ಲಿ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಸೇರಿದಂತೆ ಕಾಂಗ್ರೆಸ್ ಮುಖಂಡರು, ಶಾಸಕರು ಅದ್ಧೂರಿಯಾಗಿ ಸ್ವಾಗತಕೋರಿದರು. ಸತೀಶ್ ಜಾರಕಿಹೊಳಿ ಅವರನ್ನು ಕಾಂಗ್ರೆಸ್ ನ ಎಲ್ಲ ಮುಖಂಡರೂ ಸೇರಿ ಒಮ್ಮತದಿಂದ ಅಭ್ಯರ್ಥಿಯನ್ನಾಗಿಸಿದ್ದೇವೆ. ಒಳ್ಳೆಯ …

Read More »

ಉಪ ಚುನಾವಣೆ: ಬೆಳಗಾವಿಗೆ ಡಿಕೆ ಶಿವಕುಮಾರ್ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್ ಭೇಟಿ

ಬೆಳಗಾವಿ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಭಾನುವಾರನಗರಕ್ಕೆ ಭೇಟಿ ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷದ ಅಭ್ಯರ್ಥಿ ಸತೀಶ ಜಾರಕಿಹೊಳಿ ಪರವಾಗಿ ಪ್ರಚಾರ ಕಾರ್ಯತಂತ್ರ ರೂಪಿಸುವುದಕ್ಕಾಗಿ ಅವರು ಪ್ರವಾಸ ಕೈಗೊಂಡಿದ್ದಾರೆ. ಸಾಂಬ್ರಾ ವಿಮಾನನಿಲ್ದಾಣಕ್ಕೆ ಬರುವ ಅವರು, ಸಂಜೆ 7ಕ್ಕೆ ಕಾಂಗ್ರೆಸ್‌ ನಾಯಕರೊಂದಿಗೆ ಸಮಾಲೋಚನೆ ನಡೆಸಲಿದ್ದಾರೆ. ಮಾರ್ಚ್‌ 29ರಂದು ಬೆಳಿಗ್ಗೆ 11ಕ್ಕೆ ಇಲ್ಲಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಪಕ್ಷದ ಅಭ್ಯರ್ಥಿಯೊಂದಿಗೆ ನಾಮಪತ್ರ ಸಲ್ಲಿಕೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ವಿಧಾನಸಭೆ ವಿರೋಧಪಕ್ಷದ …

Read More »