ನವದೆಹಲಿ : ಧೂಮಪಾನಿಗಳಿಗೆ ರೈಲ್ವೆ ಇಲಾಖೆ ಬಿಗ್ ಶಾಕ್ ನೀಡಿದ್ದು, ರೈಲಿನಲ್ಲಿ ಪ್ರಯಾಣಿಸುವಾಗ ಧೂಮಪಾನ ಮಾಡಿದರೆ 1000 ರೂ. ದಂಡ ಹಾಗೂ ಮೂರು ವರ್ಷ ಜೈಲು ಶಿಕ್ಷೆ ವಿಧಿಸಲು ಮುಂದಾಗಿದ್ದು, ಈ ನಿಯಮ ಸೋಮವಾರದಿಂದಲೇ ಕಟ್ಟುನಿಟ್ಟಾಗಿ ಜಾರಿಗೆ ಬಂದಿದೆ. ರೈಲುಗಳಲ್ಲಿ ಸಂಭವಿಸುತ್ತಿರುವ ಅಗ್ನಿ ದುರಂತ ತಡೆಯುವುದಕ್ಕಾಗಿ ರೈಲ್ವೆ ಇಲಾಖೆ ಈ ಆದೇಶ ಹೊರಡಿಸಿದ್ದು, ಧೂಮಪಾನ ಮಾಡುವುದು ಮತ್ತು ಉರಿಯುವಂತಹ ವಸ್ತುಗಳ ಸಾಗಣೆಗೆ ರೈಲಿನಲ್ಲಿ ಸಂಪೂರ್ಣ ನಿಷೇಧ ಮಾಡಲಾಗಿದೆ. ರೈಲ್ವೆ ಕಾಯ್ದೆಯ …
Read More »ಠಾಕ್ರೆ ಬಗ್ಗೆ ಮಾತಾಡಿದರೆ ಆಸಿಡ್ ದಾಳಿ ಮಾಡುತ್ತೇವೆ ಎಂದು ಶಿವಸೇನೆ ಬೆದರಿಕೆ’ – ನವನೀತ್ ಕೌರ್
ವದೆಹಲಿ: ಲೋಕಸಭೆಯಲ್ಲಿ ಮಹಾರಾಷ್ಟ್ರ ಸರ್ಕಾರದ ವಿರುದ್ಧ ಮಾತಾಡಿದಕ್ಕಾಗಿ ನನಗೆ ಮಹಾರಾಷ್ಟ್ರ ಶಿವಸೇನಾ ಸಂಸದ ಅರವಿಂದ ಸಾವಂತ್ ತನಗೆ ಬೆದರಿಕೆ ಹಾಕಿದ್ದಾರೆ ಎಂದು ದೂರಿರುವ ಅಮರಾವತಿಯ ಪಕ್ಷೇತರ ಸಂಸದೆ ನವನೀತ್ ಕೌರ್ ರಾಣಾ ಅವರು, ಮಹಾರಾಷ್ಟ್ರ ಸರ್ಕಾರದ ವಿರುದ್ಧ ಮಾತನಾಡಿದ ಕಾರಣಕ್ಕೆ ನನಗೆ ಫೋನ್ ಕರೆ ಹಾಗೂ ಪತ್ರಗಳ ಮೂಲಕ ಆಸಿಡ್ ದಾಳಿ ಬೆದರಿಕೆ ಹಾಕಲಾಗಿದೆ ಎಂದು ಸ್ಪೀಕರ್ ಓಂ ಬಿರ್ಲಾ ಅವರಲ್ಲಿ ದೂರು ನೀಡಿದ್ದಾರೆ. ಆದರೆ ಈ ಆರೋಪವನ್ನು ಅಲ್ಲಗಳೆದಿರುವ …
Read More »ಪೊಲೀಸರಿಂದ ತಪ್ಪಿಸಿಕೊಳ್ಳಲು ಸಿಗ್ನಲ್ ಆಯಪ್ ಬಳಸುತ್ತಿರುವ ಸಿಡಿ ಪ್ರಕರಣದ ಕಿಂಗ್‌ಪಿನ್‌ಗಳು!
ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರದು ಎನ್ನಲಾದ ಅಶ್ಲೀಲ ಸಿಡಿ ಪ್ರಕರಣ ಬಹಿರಂಗವಾದ ಬಂದ ಬಳಿಕ 20 ದಿನಗಳಿಂದ ಪೊಲೀಸರ ಕೈಗೆ ಸಿಗದೆ ತಲೆಮರೆಸಿಕೊಂಡಿರುವ ಕಿಂಗ್‌ಪಿನ್‌ಗಳು ಗೌಪ್ಯ ಸಂವಹನಕ್ಕೆ ‘ಸಿಗ್ನಲ್’ ಆಯಪ್ ಮೆಸೆಂಜರ್ ಬಳಸುತ್ತಿದ್ದಾರೆ ಎಂಬ ಸಂಗತಿ ವಿಶೇಷ ತನಿಖಾ ದಳದ ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಸಿಡಿ ಸ್ಫೋಟದ ಮಾಸ್ಟರ್ ಮೈಂಡ್ ಎನ್ನಲಾದ ಖಾಸಗಿ ಸುದ್ದಿವಾಹಿನಿಯ ಪತ್ರಕರ್ತರು ಮತ್ತು ವಿವಾದಿತ ಯುವತಿ ಎಸ್‌ಐಟಿ ಗಾಳಕ್ಕೆ ಸಿಲುಕದಂತೆ ಹೊರ ರಾಜ್ಯಗಳಲ್ಲಿ …
Read More »ಧ ಇಡಿಗೆ ದೂರು ಕೊಟ್ಟ ಕಾಂಗ್ರೆಸ್ ….
ಬೆಂಗಳೂರು, ಮಾರ್ಚ್ 23: ಮಾಜಿ ಸಚಿವ, ಗೋಕಾಕ ಕ್ಷೇತ್ರದ ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ವಿರುದ್ಧ ಕಾಂಗ್ರೆಸ್ ಹೋರಾಟವನ್ನು ತೀವ್ರಗೊಳಿಸಿದೆ. ಸಿಡಿ ವಿಚಾರದಲ್ಲಿ ಕಾಂಗ್ರೆಸ್ ಇಡಿಗೆ ಮಾಜಿ ಸಚಿವರ ವಿರುದ್ಧ ದೂರು ನೀಡಿದೆ. ಮಂಗಳವಾರ ಬೆಂಗಳೂರಿನ ಶಾಂತಿ ನಗರದಲ್ಲಿರುವ ಜಾರಿ ನಿರ್ದೇಶನಾಲಯದ ಕಚೇರಿಗೆ ಕಾಂಗ್ರೆಸ್ ಮುಖಂಡ ಮೋಹನ್ ದೂರು ನೀಡಿದ್ದಾರೆ. ಸಿಡಿ ಪ್ರಕರಣದಲ್ಲಿ ನಡೆದಿರುವ ಹಣದ ವ್ಯವಹಾರದ ಬಗ್ಗೆ ತನಿಖೆ ನಡೆಸಬೇಕು ಎಂದು ಮನವಿ ಮಾಡಿದ್ದಾರೆ. ಮಾಧ್ಯಮಗಳ ಜೊತೆ …
Read More »ಕೋವಿಡ್ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳಲು ವಿಪತ್ತು ನಿರ್ವಹಣಾ ಕಾಯ್ದೆಯಡಿ ಅವಕಾಶ : ಡಾ.ಕೆ.ಹರೀಶ್ ಕುಮಾರ್
ಬೆಳಗಾವಿ: ಕೋವಿಡ್ ಲಸಿಕೆಯಿಂದ ಯಾವುದೇ ಅಡ್ಡಪರಿಣಾಮವಿಲ್ಲ ಎಂಬುದು ಖಚಿತವಾಗಿರುವುದರಿಂದ ಲಸಿಕೆ ಪಡೆಯಲು ಜನರು ಮುಂದೆ ಬರುತ್ತಿದ್ದಾರೆ. ಆದ್ದರಿಂದ ಈ ಸಂದರ್ಭವನ್ನು ಬಳಸಿಕೊಂಡು ಜಿಲ್ಲೆಯಲ್ಲಿ ಎಲ್ಲರಿಗೂ ಲಸಿಕೆ ನೀಡಲು ಅಗತ್ಯ ವ್ಯವಸ್ಥೆ ಕಲ್ಪಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಕೆ.ಹರೀಶ್ ಕುಮಾರ್ ಸೂಚನೆ ನೀಡಿದರು. ಕೋವಿಡ್ ನಿಯಂತ್ರಣ ಮತ್ತು ಲಸಿಕಾಕರಣ ಕುರಿತು ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಂಗಳವಾರ (ಮಾ.23) ನಡೆದ ತಹಶಿಲ್ದಾರರ ಜತೆಗಿನ ವಿಡಿಯೋ ಸಂವಾದದಲ್ಲಿ ಅವರು ಮಾತನಾಡಿದರು. ಲಸಿಕೆ ಹಾಕಿಸಿಕೊಳ್ಳಲು ಅನುಕೂಲವಾಗುವಂತೆ ಗ್ರಾಮೀಣ ಪ್ರದೇಶಗಳ …
Read More »ವಿಜಯೇಂದ್ರಗೆ ದೂರು ನೀಡಿದ್ದ ಮಹಿಳೆ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ
ಶಿವಮೊಗ್ಗ: ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರಿಗೆ ದೂರು ನೀಡಿದ್ದ ಮಹಿಳೆ ಮೇಲೆ ದುಷ್ಕರ್ಮಿಗಳು ಸೋಮವಾರ ಬೆಳಿಗ್ಗೆ ಹಲ್ಲೆ ನಡೆಸಿದ್ದಾರೆ. ಗಂಭೀರವಾಗಿ ಗಾಯಗೊಂಡಿರುವ ಮಹಿಳೆಯನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಭದ್ರಾವತಿ ತಾಲೂಕು ಶಂಕರಘಟ್ಟದಲ್ಲಿ ಮಹಿಳೆ ಮೇಲೆ ಹಲ್ಲೆ ಮಾಡಲಾಗಿದೆ. ಅವರು ಖರೀದಿಸಿದ ಜಮೀನಿನ ಮೇಲೆ ಪ್ರಭಾವಿಗಳು ಕಣ್ಣಿಟ್ಟಿದ್ದು ಕಬಳಿಸಲು ಮುಂದಾಗಿ ಮಹಿಳೆಗೆ ನಿರಂತರವಾಗಿ ಹಿಂಸೆ ಕೊಡುತ್ತಿದ್ದಾರೆ. ಇದರಿಂದ ಬೇಸತ್ತ ಮಹಿಳೆ ದಯಾಮರಣಕ್ಕಾಗಿ ಬಿ.ವೈ. …
Read More »ಹಬ್ಬದ ವಿಶೇಷ, ಪ್ಯಾಸೆಂಜರ್ ರೈಲುಗಳು ಜೂನ್ ತನಕ ವಿಸ್ತರಣೆ
ಹುಬ್ಬಳ್ಳಿ, ಮಾರ್ಚ್ 22: ನೈಋತ್ಯ ರೈಲ್ವೆ ಸದ್ಯ ಸಂಚಾರ ನಡೆಸುತ್ತಿರುವ ಹಬ್ಬದ ವಿಶೇಷ ರೈಲು ಮತ್ತು ಪ್ಯಾಸೆಂಜರ್ ವಿಶೇಷ ರೈಲುಗಳ ವೇಳಾಪಟ್ಟಿಯನ್ನು ವಿಸ್ತರಣೆ ಮಾಡಿದೆ. ಮಾರ್ಚ್ ಅಂತ್ಯಕ್ಕೆ ರೈಲುಗಳ ಸಂಚಾರ ಕೊನೆಗೊಳ್ಳಬೇಕಿತ್ತು. ಹಬ್ಬದ ವಿಶೇಷ ಎಕ್ಸ್‌ಪ್ರೆಸ್ ರೈಲು ಮತ್ತು ಪ್ಯಾಸೆಂಜರ್ ರೈಲುಗಳ ಸಂಚಾರವನ್ನು ಜೂನ್ ತನಕ ವಿಸ್ತರಣೆ ಮಾಡಲಾಗಿದೆ. ಯಾವ-ಯಾವ ರೈಲುಗಳ ಸೇವೆ ವಿಸ್ತರಣೆ ಮಾಡಲಾಗಿದೆ ಎಂಬ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಹುಬ್ಬಳ್ಳಿ-ಸಿಕಂದರಾಬಾದ್ ರೈಲು ಮಾರ್ಚ್ 31 ರಿಂದ ಜೂನ್ …
Read More »ಗೋವಾ ಪ್ರವಾಸಿಗರಿಗೆ ಕೊರೊನಾ ನೆಗೆಟಿವ್ ವರದಿ ಕಡ್ಡಾಯ
ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ 2ನೇ ಅಲೆಯ ವೇಗ ಹೆಚ್ಚುತ್ತಿರುವ ಹಿನ್ನೆಲೆ ಗೋವಾಗೆ ತೆರಳುವ ಪ್ರತಿಯೊಬ್ಬ ಪ್ರವಾಸಿಗರು ಕೊವಿಡ್-19 ನೆಗೆಟಿವ್ ವರದಿ ಸಲ್ಲಿಸುವುದನ್ನು ಕಡ್ಡಾಯಗೊಳಿಸಲು ಸರ್ಕಾರ ಮುಂದಾಗಿದೆ. ಕೊರೊನಾವೈರಸ್ ನೆಗೆಟಿವ್ ವರದಿ ಕಡ್ಡಾಯಕ್ಕೆ ಸಂಬಂಧಿಸಿದಂತೆ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಅವರಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಆರೋಗ್ಯ ಸಚಿವ ವಿಶ್ವಜಿತ್ ರಾಣೆ ತಿಳಿಸಿದ್ದಾರೆ. ಕೊವಿಡ್-19 ಶಿಷ್ಟಾಚಾರ ಪಾಲನೆಯ ಉದ್ದೇಶದಿಂದಾಗಿ ಮಹಾರಾಷ್ಟ್ರ, ಕರ್ನಾಟಕ ರಾಜ್ಯಗಳು ಅಂತರ-ರಾಜ್ಯ ಪ್ರಯಾಣಿಕರಿಗೆ ಕೊವಿಡ್-19 ನೆಗೆಟಿವ್ ವರದಿ …
Read More »ಕನ್ಯಾಕುಮಾರಿ ಟು ಕಾಶ್ಮೀರ: ಕೋವಿಡ್ ವಾರಿಯರ್ ಗಳ ಗೌರವಾರ್ಥ ಕನ್ನಡಿಗನಿಂದ ಪಾದಯಾತ್ರೆ
ಮೈಸೂರು: ಕೋವಿಡ್ ವಾರಿಯರ್ ಗಳ ತ್ಯಾಗಮತ್ತು ಪ್ರಯತ್ನಗಳನ್ನು ಪ್ರಶಸ್ತಿ ನೀಡುವುದು, ಕಲಾಕೃತಿ ರಚನೆ ಸೇರಿ ಅನೇಕ ವಿಧದಲ್ಲಿ ಸರ್ಕಾರ ಹಾಗೂ ಸರ್ಕಾರೇತರ ಸಂಸ್ಥೆಗಳು ಗುರುತಿಸಿವೆ. ಆದರೆ ಮೈಸೂರಿನ ಈ 33 ವರ್ಷದ ವ್ಯಕ್ತಿ ಸಾಂಕ್ರಾಮಿಕ ರೋಗವನ್ನು ಎದುರಿಸುತ್ತಿರುವ ಕೋವಿಡ್ ವಾರಿಯರ್ ಗಳಿಗೆ ಅದ್ಭುತ ಗೌರವ ಸಲ್ಲಿಸಲು ನಿರ್ಧರಿಸಿದ್ದು ‘ವಾಕ್ ಫಾರ್ ಹ್ಯುಮಾನಿಟಿ’ ಎಂಬ ನೂತನ ಪ್ರಯತ್ನ ಪ್ರಾರಂಬಿಸಿದ್ದಾರೆ. ಮೈಸೂರಿನವರಾದ ಭರತ್ ಪಿ ಎನ್, ಕೋವಿಡ್ ಮುಂಚೂಣಿ ವಾರಿಯರ್ ಗಳ ಶ್ರಮ …
Read More »ಯಾವ ಪುರುಷಾರ್ಥಕ್ಕೆ ಸರ್ಕಾರ ಬೀಳಿಸಿದ್ವೋ ಅನ್ನಿಸ್ತಿದೆ, ಈ ಅಡ್ಜಸ್ಟ್ಮೆಂಟ್ ಸರ್ಕಾರದಲ್ಲಿ ಹೆಚ್ಡಿಕೆ, ಸಿದ್ದು ಮೋಸದ ಪಾಲಿದೆ: ಹೆಚ್.ವಿಶ್ವನಾಥ್
ಮೈಸೂರು: ರಾಜ್ಯದಲ್ಲಿರೋದು ಬಿಜೆಪಿ ಸರ್ಕಾರ ಅಲ್ಲ. ಅದು ನ್ಯಾಷನಲ್ ಸರ್ಕಾರ. ಸಿದ್ದರಾಮಯ್ಯರನ್ನ ಕುಮಾರಸ್ವಾಮಿ ರಕ್ಷಣೆ ಮಾಡ್ತಾರೆ, ಕುಮಾರಸ್ವಾಮಿರವನ್ನ ಸಿದ್ದರಾಮಯ್ಯ ರಕ್ಷಣೆ ಮಾಡ್ತಾರೆ, ಇಬ್ಬರೂ ಸೇರಿ ಯಡಿಯೂರಪ್ಪರನ್ನ ರಕ್ಷಿಸುತ್ತಿದ್ದಾರೆ. ಇದು ಒಬ್ಬೊರಿಗೊಬ್ಬರು ಅಡ್ಜಸ್ಟ್ಮೆಂಟ್ ರಾಜಕಾರಣ. ಇದರಲ್ಲಿ ಯಡಿಯೂರಪ್ಪ ನ್ಯಾಷನಲ್ ಗೌರ್ನ್ಮೆಂಟ್ ಚೀಫ್ ಮಿನಿಸ್ಟರ್. ಅವರು ಬುದ್ದಿ ಚಾತುರ್ಯದಿಂದ ಎಲ್ಲರನ್ನು ಅಡ್ಜಸ್ಟ್ ಮಾಡಿಕೊಂಡಿದ್ದಾರೆ. ಅವರವರ ಭ್ರಷ್ಟಾಚಾರ ಮುಚ್ಚಿಕೊಳ್ಳಲು ಈ ರೀತಿ ಅಡ್ಜಸ್ಟ್ಮೆಂಟ್ ರಾಜಕೀಯ ಮಾಡುತ್ತಿದ್ದಾರೆ ಎಂದು ಬಿಜೆಪಿ ಎಂಎಲ್‌ಸಿ, ಹಳ್ಳಿಹಕ್ಕಿ ಹೆಚ್.ವಿಶ್ವನಾಥ್ ತಮ್ಮ …
Read More »
Laxmi News 24×7