Breaking News

ರಾಜ್ಯ

ಸಾರಿಗೆ ನೌಕರರಿಗೆ ಶೀಘ್ರ 6ನೇ ವೇತನ ಆಯೋಗದ ಸೌಲಭ್ಯ: ಲಕ್ಷ್ಮಣ ಸವದಿ ಭರವಸೆ

ಹೊಳಲ್ಕೆರೆ: ಸಾರಿಗೆ ನೌಕರರಿಗೆ 6ನೇ ವೇತನ ಆಯೋಗದ ಸೌಲಭ್ಯಗಳನ್ನು ಶೀಘ್ರವೇ ನೀಡಲಾಗುವುದು ಎಂದು ಉಪಮುಖ್ಯಮಂತ್ರಿ, ಸಾರಿಗೆ ಸಚಿವ ಲಕ್ಷ್ಮಣ ಸವದಿ ಭರವಸೆ ನೀಡಿದರು. ತಾಲ್ಲೂಕಿನ ಬಸಾಪುರ ಗೇಟ್‌ನಲ್ಲಿ ಭಾನುವಾರ ₹ 16 ಕೋಟಿ ವೆಚ್ಚದ ಕೆಎಸ್‌ಆರ್‌ಟಿಸಿ ಚಾಲಕರ ತರಬೇತಿ ಕೇಂದ್ರದ ಉದ್ಘಾಟನೆ ಹಾಗೂ ₹ 9 ಕೋಟಿ ವೆಚ್ಚದ ಬಸ್ ಡಿಪೊ ಕಾಮಗಾರಿಯ ಶಂಕುಸ್ಥಾಪನೆ ಸಮಾರಂಭದಲ್ಲಿ ಅವರು ಮಾತನಾಡಿದರು. ‘ಕೊರೊನಾ ಸಂಕಷ್ಟ ಕಾಲದಲ್ಲೂ ಸರ್ಕಾರದಿಂದ ₹ 1,900 ಕೋಟಿ ಹಣ …

Read More »

ನಿನಗೆ ತಾಕತ್ತಿದ್ದರೆ ಸಿಎಂ ಬದಲಾವಣೆ ಮಾಡಿ ತೋರಿಸು: ಯತ್ನಾಳ್‍ಗೆ ರೇಣುಕಾಚಾರ್ಯ ಸವಾಲ್

ದಾವಣಗೆರೆ: ನಿನಗೆ ಸವಾಲು​ ಹಾಕ್ತೀನಿ.. ತಾಕತ್ತಿದ್ದರೆ ಮುಖ್ಯಮಂತ್ರಿಗಳನ್ನ ಬದಲಾವಣೆ ಮಾಡಿ ನೋಡು ಅಂತ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ ರೇಣುಕಾಚಾರ್ಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳೆಗೆ ಸವಾಲೆಸೆದಿದ್ದಾರೆ. ಪಂಚರಾಜ್ಯಗಳ ಚುನಾವಣೆಯ ನಂತರ ನೂರಕ್ಕೆ ನೂರರಷ್ಟು ಸಿಎಂ ಬದಲಾವಣೆ ಖಚಿತ ಎಂದು ಯತ್ನಾಳ್ ಹೇಳಿಕೆ ನೀಡಿದ್ದರು. ಈ ಹಿನ್ನೆಲೆ ರೇಣುಕಾಚಾರ್ಯ ಏಕವಚನದಲ್ಲೇ​​ ಯತ್ನಾಳ್​ ವಿರುದ್ಧ ಕಿಡಿಕಾರಿದ್ದಾರೆ. ​ರಾಜ್ಯದಲ್ಲಿ ಬಿಜೆಪಿಯನ್ನ ಕಟ್ಟಿ ಬೆಳೆಸಿದ್ದು ಯಡಿಯೂರಪ್ಪ, ಅನಂತಕುಮಾರ್​. ಯಡಿಯೂರಪ್ಪನವರನ್ನ ಮುಖ್ಯಮಂತ್ರಿಯನ್ನಾಗಿ ಮಾಡಿದ್ದು, ಪ್ರಧಾನಮಂತ್ರಿ ನರೇಂದ್ರಮೋದಿ …

Read More »

ಸಿಡಿ ಪ್ರಕರಣವನ್ನು ಬೇರೆ ತನಿಖಾ ಸಂಸ್ಥೆಗೆ ವಹಿಸುವುದಿಲ್ಲ: ಸಚಿವ ಬಸವರಾಜ ಬೊಮ್ಮಾಯಿ

ಧಾರವಾಡ: ಸಿಡಿ ಪ್ರಕರಣದ ತನಿಖೆಯನ್ನು ಎಸ್ ಐ ಟಿ ಸಮರ್ಥವಾಗಿ ನಡೆಸುತ್ತಿದೆ. ಹೀಗಾಗಿ ಈ ಪ್ರಕರಣದ ತನಿಖೆಯನ್ನು ಬೇರೆ ಸಂಸ್ಥೆ ಗೆ‌ ವಹಿಸುವುದಿಲ್ಲ ಎಂದು ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವರಾದ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದರು. ಧಾರವಾಡದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಎಸ್ ಐ ಟಿ ಸಿಡಿ ತನಿಖೆಯನ್ನು ನಿಷ್ಪಕ್ಷಪಾತ, ನಿಷ್ಠುರ, ನ್ಯಾಯಸಮ್ಮತವಾಗಿ ನಡೆಸುತ್ತಿದೆ ಎಂದು ಅವರು ಸ್ಪಷ್ಟಪಡಿಸಿದರು. ಹೊರ ರಾಜ್ಯಗಳಲ್ಲಿ ಕೋವಿಡ್ ಹೆಚ್ಚಾಗುತ್ತಿದೆ. ರಾಜ್ಯದಲ್ಲಿ …

Read More »

ಮೇ.2ರ ನಂತ್ರ ಯಾವುದೇ ಕ್ಷಣದಲ್ಲಿ ‘ಸಿಎಂ ಬದಲಾವಣೆ, ಉ.ಕರ್ನಾಟಕ ವ್ಯಕ್ತಿ ಮುಂದಿನ ಸಿಎಂ : ಯತ್ನಾಳ್

ವಿಜಯಪುರ : ಇದೀಗ ಪಂಚರಾಜ್ಯಗಳ ವಿಧಾನಸಭಾ ಚುನಾವಣೆಯ ಕಾವಿದೆ. ಇಂತಹ ಪಂಚರಾಜ್ಯಗಳ ವಿಧಾನಸಭಾ ಚುನಾವಣೆ ಮುಗಿಯುತ್ತಲೇ ಮೇ.2ರ ನಂತ್ರ ಯಾವುದೇ ಕ್ಷಣದಲ್ಲಿ ಆದ್ರು.. ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಆಗಲಿದ್ದಾರೆ ಎಂಬುದಾಗಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮತ್ತೊಂದು ಬಾಂಬ್ ಸಿಡಿಸಿದ್ದಾರೆ. ‘ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಉತ್ತರ ಕರ್ನಾಟಕ ಭಾಗದವರಿಗೆ ಮುಖ್ಯಮಂತ್ರಿ ಅವಕಾಶ ಇದೆ ಎಂದು ಮಾತ್ರವೇ ಗೊತ್ತಿದೆ. ಆದ್ರೇ ಅದರಲ್ಲಿ ನನ್ನ ಹೆಸರು ಇರುವ ಬಗ್ಗೆ ಖಚಿತ …

Read More »

ಬಿಎಸ್‌ಎನ್‌ಎಲ್‌ ಕಂಬವನ್ನೂ ಸೇರಿಸಿ ಕಟ್ಟಡ ನಿರ್ಮಾಣ!

ಬೆಂಗಳೂರು: ರಸ್ತೆ ಬದಿ ಇದ್ದ ಬಿಎಸ್‌ಎನ್‌ಎಲ್‌ ಕಂಬವನ್ನೇ ಸೇರಿಸಿಕೊಂಡು ಕಟ್ಟಡವೊಂದನ್ನು ಕೆ.ಜಿ.ಹಳ್ಳಿಯಲ್ಲಿ ಕಟ್ಟಲಾಗಿದೆ. ಸ್ಥಳೀಯರೊಬ್ಬರು ‘ಪ್ರಜಾವಾಣಿ’ಗೆ ಈ ಚಿತ್ರ ಕಳುಹಿಸಿದ್ದಾರೆ. ಅದರ ಪ್ರಕಾರ, ಗಾಂಧಿ ರಸ್ತೆಯಲ್ಲಿ ಬಿಎಸ್‌ಎನ್‌ಎಲ್‌ ಕೇಬಲ್‌ಗಳ ಅಳವಡಿಸಿರುವ ಕಂಬ ಇದೆ. ಹೊಸದಾಗಿ ಕಟ್ಟಡ ನಿರ್ಮಿಸಿದವರು ಕಂಬವನ್ನೇ ಕಟ್ಟಡದೊಳಕ್ಕೆ ಸೇರಿಕೊಂಡಿದ್ದಾರೆ. ‘ರಸ್ತೆ ಒತ್ತುವರಿ ಮಾಡಿರುವುದಲ್ಲದೇ ಸರ್ಕಾರ ಹಾಕಿರುವ ಕಂಬವನ್ನೇ ಮನೆಯೊಳಕ್ಕೆ ಸೇರಿಸಿಕೊಂಡಿದ್ದಾರೆ. ಈ ಬಗ್ಗೆ ಅಧಿಕಾರಿಗಳಿಗೆ ತಿಳಿಸಿದರೂ ಕ್ರಮ ಕೈಗೊಂಡಿಲ್ಲ. ಶುಕ್ರವಾರ ಈ ಚಿತ್ರ ತೆಗೆಯಲಾಗಿತ್ತು. ಶನಿವಾರ ಬೆಳಿಗ್ಗೆ …

Read More »

ಕೊರೋನಾ‌ ಎರಡನೇ ಅಲೆ: ಬೆಂಗಳೂರಿನ ಈ 10 ಏರಿಯಾಗಳ ಕಡೆ ಹೋಗಲೇ ಬೇಡಿ!

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರು ಎರಡನೇ ಬಾರಿಗೆ ಕೊರೋನಾ‌ ಸುಳಿಯಲ್ಲಿದೆ. ಇಂದು ನಗರದ ಒಂದೇ ಅಪಾರ್ಟ್ಮೆಂಟ್ ನಲ್ಲಿ ಏಳು ಪ್ರಕರಣಗಳು ಬೆಳಕಿಗೆ ಬಂದಿದೆ. ಜೊತೆಯಲ್ಲಿ ಬೆಂಗಳೂರಿನ ಈ 10 ಏರಿಯಾಗಳು ಕೊರೋನ ಹಾಟ್ ಸ್ಪಾಟ್ ಅಂತ ಬಿಬಿಎಂಪಿ ವರದಿ ಹೇಳುತ್ತಿದೆ. ಸತತ ಐದನೇ ದಿನವೂ ನಗರದಲ್ಲಿ ಸಾವಿರದ ಗಡಿ ದಾಟಿದ ಕೊರೋನಾ ರಣಕೇಕೆ ಹಾಕಿದೆ. ಇದರ ಬೆನ್ನಲ್ಲೇ ನಗರದ ನಾಗಸಂಧ್ರದ ಶೋಭಾ ಅಪಾರ್ಟ್ಮೆಂಟ್ ವೊಂದರಲ್ಲೇ ಏಳು ಪ್ರಕರಣಗಳು ಪತ್ತೆಯಾಗಿದೆ. ಒಂದೇ …

Read More »

ಬಿಗ್ ಬಾಸ್’ ಮನೆಯಿಂದ ಕಿರುತೆರೆ ನಟಿ ‘ಗೀತಾ ಭಟ್’ ಔಟ್

ಸಿನಿಮಾ ಡೆಸ್ಕ್ : ಕಿರುತೆರೆ ಪ್ರೇಕ್ಷಕರ ನೆಚ್ಚಿನ ಜನಪ್ರಿಯ ರಿಯಾಲಿಟಿ ಶೋ ‘ಬಿಗ್ ಬಾಸ್’ ಆರಂಭವಾಗಿ ಮೂರನೇ ವಾರ ಕಳೆಯುತ್ತಿದೆ. ಮೂರನೇ ವಾರದ ವಾರಾಂತ್ಯದಲ್ಲಿ ಬಿಗ್ ಬಾಸ್ ಮನೆಯಿಂದ ಕಿರುತೆರೆ ನಟಿ ಗೀತಾ ಭಟ್ ಹೊರಬಿದ್ದಿದ್ದಾರೆ. ಮೊದಲ ವಾರ ಬಿಗ್ ಬಾಸ್ ಮನೆಯಿಂದ ಧನಶ್ರೀ ಔಟ್ ಆಗಿದ್ದರು. ಕಳೆದ ವಾರ ಅಂದರೆ ಎರಡನೇ ವಾರ ನಿರ್ಮಲಾ ಚೆನ್ನಪ್ಪ ಹೊರಬಿದ್ದಿದ್ದರು. ಇದೀಗ ಮೂರನೇ ವಾರಾಂತ್ಯದಲ್ಲಿ ಬಿಗ್ ಬಾಸ್ ಮನೆಯಿಂದ ನಟಿ ಗೀತಾ …

Read More »

ಬಸವಕಲ್ಯಾಣ ಉಪ ಚುನಾವಣೆಯಲ್ಲಿ ವಿಜಯೇಂದ್ರ ಸ್ಪರ್ಧೆ? ಸ್ಪಷ್ಟನೆ ನೀಡಿದ ಸಿಎಂ ಯಡಿಯೂರಪ್ಪ

ಸಿಂಧನೂರು (ರಾಯಚೂರು): ಈ ಬಾರಿಯ ಉಪ ಚುನಾವಣೆಯಲ್ಲಿ ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದಲ್ಲಿ ವಿಜಯೇಂದ್ರ ಅಭ್ಯರ್ಥಿಯಾಗಲಿದ್ದಾರೆ ಎಂಬುದು ನೂರಕ್ಕೆ ನೂರು ಸುಳ್ಳು. ಆದರೆ, ಅವರು ಮೈಸೂರಿಗೆ ಹೋಗಿ ಅಲ್ಲಿರುತ್ತಾರೆ. ಅಲ್ಲಿಯೇ ಮನೆ ಮಾಡಲಿದ್ದು, ಇದರಿಂದ ಐದಾರು ಜಿಲ್ಲೆಗಳಲ್ಲಿ ಪಕ್ಷಕ್ಕೆ ಅನುಕೂಲವಾಗಲಿದೆ. ಮುಂದಿನ ಬಾರಿ ವರುಣಾ ಕ್ಷೇತ್ರಕ್ಕೆ ಯಾರು ಸ್ಪರ್ಧಿಸುತ್ತಾರೆಂಬುದನ್ನು ಹೈಕಮಾಂಡ್ ನಿರ್ಧರಿಸುತ್ತದೆ ಎಂದು ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದರು. ನಗರದಲ್ಲಿ ಮಾಜಿ ಸಂಸದ ಕೆ.ವಿರೂಪಾಕ್ಷಪ್ಪ ಅವರ ನಿವಾಸದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದರು. …

Read More »

ಉಸ್ತುವಾರಿ ಸಚಿವರ ಸಮ್ಮುಖದಲ್ಲೇ ಕೈ ಕೈ ಮಿಲಾಯಿಸಿದ ಮುಖಂಡರು

ಮಳವಳ್ಳಿ: ‘ಸರ್ಕಾರದ ನಡೆ ಗ್ರಾಮದ ಕಡೆ’ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಸಿ.ನಾರಾಯಣಗೌಡ ಅವರ ಸಮ್ಮುಖದಲ್ಲೇ ಶನಿವಾರ ಕಾಂಗ್ರೆಸ್‌-ಜೆಡಿಎಸ್‌ ಸದಸ್ಯರು ಮಾತಿನ ಚಕಮಕಿ ನಡೆದಿ ಕೈಕೈ ಮಿಲಾಯಿಸಲು ಮುಂದಾದರು. ‌ತಾಲ್ಲೂಕಿನ ಬಿಜಿಪುರ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಆವರಣದಲ್ಲಿ ನಡೆದ ಅಭಿವೃದ್ಧಿ ಕಾಮಗಾರಿಗಳ ಭೂಮಿಪೂಜೆ ಕಾರ್ಯಕ್ರಮದಲ್ಲಿ ತಾ.ಪಂ.ಅಧ್ಯಕ್ಷ ಪುಟ್ಟಸ್ವಾಮಿ ಮಾತನಾಡುತ್ತಾ ಮಾಜಿ ಶಾಸಕ ಪಿ.ಎಂ.ನರೇಂದ್ರಸ್ವಾಮಿ ಅವರ ಹೆಸರು ಪ್ರಸ್ತಾಪಿಸಿದರು. ಬಹು ನಿರೀಕ್ಷಿತ ಪೂರಿಗಾಲಿ ಹನಿ ನೀರಾವರಿ ಕಾಮಗಾರಿ ಕುಂಠಿತವಾಗಿದ್ದು, ಕಾಮಗಾರಿ ಪೂರ್ಣಗೊಳಿಸುವಂತೆ …

Read More »

ಬೆಳಗಾವಿ: 8 ವಿಧಾನಸಭಾ ಕ್ಷೇತ್ರಗಳ ಪೈಕಿ 6 ಕಡೆ ಬಿಜೆಪಿ ಪ್ರಾಬಲ್ಯ

ಬೆಳಗಾವಿ: ಬೆಳಗಾವಿ ಲೋಕಸಭಾ ಕ್ಷೇತ್ರ ವ್ಯಾಪ್ತಿಯ 8 ವಿಧಾನಸಭಾ ಕ್ಷೇತ್ರಗಳ ಪೈಕಿ 6ರಲ್ಲಿ ಬಿಜೆಪಿ ಶಾಸಕರಿದ್ದಾರೆ. ಎರಡು ಕಡೆ ಮಾತ್ರ ಕಾಂಗ್ರೆಸ್‌ ಪ್ರತಿನಿಧಿಗಳಿದ್ದಾರೆ. ಜೊತೆಗೆ ಜಿಲ್ಲಾ, ತಾಲ್ಲೂಕು ಪಂಚಾಯ್ತಿಯಲ್ಲೂ ಬಿಜೆಪಿಯವರ ಬಲವೇ ಹೆಚ್ಚಿದೆ. ಅಲ್ಲದೇ, ಈಚೆಗೆ ನಡೆದ ಗ್ರಾಮ ಪಂಚಾಯ್ತಿ ಚುನಾವಣೆಯಲ್ಲೂ ಕಮಲ ಪಕ್ಷದ ಬೆಂಬಲಿತರು ಜಾಸ್ತಿ ಸಂಖ್ಯೆಯಲ್ಲಿ ಗೆದ್ದಿದ್ದಾರೆ. ಇವೆಲ್ಲ ಅಂಶಗಳೂ ಉಪ ಚುನಾವಣೆಯಲ್ಲಿ ಪರಿಣಾಮ ಬೀರಲಿವೆ. ಬೆಳಗಾವಿ ಉತ್ತರ (ಅನಿಲ ಬೆನಕೆ), ಬೆಳಗಾವಿ ದಕ್ಷಿಣ (ಅಭಯ ಪಾಟೀಲ), …

Read More »