Breaking News

ರಾಜ್ಯ

ಬೆಳಗಾವಿ ಗಡಿ ವಿಷಯದಲ್ಲಿ ರಾಜಿ ಮಾಡಿಕೊಳ್ಳುವುದಿಲ್ಲ: ಆರ್.ಅಶೋಕ್

ಬೆಳಗಾವಿ: ಬೆಳಗಾವಿ ಗಡಿ ವಿಷಯದಲ್ಲಿ ಕರ್ನಾಟಕ ಸರ್ಕಾರ ರಾಜಿ ಮಾಡಿಕೊಳ್ಳುವುದಿಲ್ಲ. ಈ ನೆಲ, ಈ ಜಲವನ್ನು ಯಾವುದೇ ಬೆಲೆ ತೆತ್ತಾದರೂ ರಕ್ಷಣೆ ಮಾಡುತ್ತೇವೆ ಎಂದು ಕಂದಾಯ ಸಚಿವ ಆರ್. ಅಶೋಕ ಹೇಳಿದರು. ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಸರ್ಕಾರ ರಕ್ಷಣೆ ಮಾಡುತ್ತದೆ. ಶಿವಸೇನೆ ಪುಂಡಾಟಿಕೆ ನಿಲ್ಲಿಸಲು ಸರ್ಕಾರ ಕಠಿಣ ಕ್ರಮ ಕೈಗೊಳ್ಳಲಿದೆ. ಶಿವಸೇನೆ ಪುಂಡಾಟಿಕೆ ನಿರಂತರವಾಗಿ ನಡೆಯುತ್ತಿದೆ. ಕಠಿಣ ಕ್ರಮ ಜರುಗಿಸಿ ನಾವು ನಿಲ್ಲಿಸಬೇಕಿದೆ …

Read More »

ಥಿಯೇಟರ್ ಗಳಲ್ಲಿ ಶೇ.100ರಷ್ಟು ಆಸನ ಭರ್ತಿ ಮುಂದುವರಿಕೆ :ಸಿನಿಮಾ ಮಂದಿಗೆ ಸಿಹಿ ಸುದ್ದಿ ನೀಡಿದ ಸಿಎಂ

ಬೆಂಗಳೂರು : ಕೊರೊನಾ ಹೆಚ್ಚಳದಿಂದ ಸಿನಿಮಾ ಮಂದಿರಗಳಲ್ಲಿ ಶೇ.50 ರಷ್ಟು ಆಸನ ಭರ್ತಿಗೆ ಮಾತ್ರ ಸರ್ಕಾರ ಅವಕಾಶ ನೀಡುವ ಸಾಧ್ಯತೆ ಇದೆ ಎಂದು ಭೀತಿಗೆ ಸಿಲುಕಿದ್ದ ಸಿನಿಮಾ ಉದ್ಯಮಕ್ಕೆ ಸಿಎಂ ಗುಡ್ ನ್ಯೂಸ್ ಕೊಟ್ಟಿದ್ದಾರೆ. ಥಿಯೇಟರ್​ಗಳಲ್ಲಿ ಪೂರ್ಣ ಆಸನ ಭರ್ತಿಗೆ ಇರುವ ಅವಕಾಶದಲ್ಲಿ ಬದಲಾವಣೆ ಇಲ್ಲ ಎಂದು ಸಿಎಂ ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ. ರಾಜ್ಯದಲ್ಲಿ ಸಿನಿಮಾ ಮಂದಿರಗಳಲ್ಲಿ ಶೇ.50ರಷ್ಟು ಪ್ರೇಕ್ಷಕರಿಗೆ ಮಾತ್ರ ಅವಕಾಶ ನೀಡುವ ಯಾವ ಪ್ರಸ್ತಾಪವೂ ಸರ್ಕಾರದ ಮುಂದಿಲ್ಲ. ಪ್ರೇಕ್ಷಕರು …

Read More »

ಸಿದ್ದರಾಮಯ್ಯ ವಿರುದ್ಧ ಮತ್ತೆ ಭುಗಿಲೆದ್ದ ಅಸಮಾಧಾನ.. ತವರು ಜಿಲ್ಲೆಯಲ್ಲಿ ತನ್ವೀರ್ ಸೇಠ್ ಬೆಂಬಲಿಗರ ಸಿಟ್ಟು..!

ಮೈಸೂರು: ಅದ್ಯಾಕೋ ಮೈಸೂರು ಮೇಯರ್ ಆಯ್ಕೆ ನಂತ್ರ ಕಾಂಗ್ರೆಸ್‌ನಲ್ಲಿ ಆರಂಭವಾದ ಒಳಬೇಗುದಿ ಆರುವ ಲಕ್ಷಣಗಳೇ ಕಾಣುತ್ತಿಲ್ಲ. ಎಲ್ಲವೂ ಸರಿ ಆಯ್ತು ಅನ್ನೋ ವೇಳೆಗೆ ತನ್ವೀರ್‌ ಬೆಂಬಲಿಗರ ಅಮಾನತು ಮತ್ತೆ ಮೈಸೂರು ಕಾಂಗ್ರೆಸ್‌ನಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದೆ. ಮೈಸೂರು ಮೇಯರ್‌ ಸ್ಥಾನ ಬಿಟ್ಟುಕೊಟ್ಟ ನಂತ್ರ ಆದ ಬೆಳವಣಿಗೆಯಲ್ಲಿ ತನ್ವೀರ್‌ ಸೇಠ್ ಹಾಗೂ ಸಿದ್ದರಾಮಯ್ಯ ನಡುವೆ ಮುಸುಕಿನ ಗುದ್ದಾಟ ಆರಂಭವಾಗಿತ್ತು. ಇದಕ್ಕೆ ತುಪ್ಪ ಸುರಿಯುವಂತೆ ಸಿದ್ದು ಆಪ್ತ ಶಾಸಕ ರಮೇಶ್‌ಕುಮಾರ್‌ ಎನ್. ಆರ್ …

Read More »

ರಾಯಚೂರು ವಿಮಾನ ನಿಲ್ದಾಣ: ಎಎಐ ತಂಡದಿಂದ ಸ್ಥಳ ಪರಿಶೀಲನೆ

ರಾಯಚೂರು: ನಗರ ಹೊರವಲಯದಲ್ಲಿರುವ ಯರಮರಸ್ ಬಳಿ ನಿರ್ಮಿಸಲು ಉದ್ದೇಶಿಸಲಾಗಿರುವ ವಿಮಾನ ನಿಲ್ದಾಣಕ್ಕೆ ಅನುಮತಿ ದೊರೆಯುವ ಸಾಧ್ಯತೆಗಳ ಬಗ್ಗೆ ಕೇಂದ್ರ ವಿಮಾನ ನಿಲ್ದಾಣ ಪ್ರಾಧಿಕಾರ (ಎಎಐ) ತಂಡವು ಶುಕ್ರವಾರ ಭೇಟಿ ನೀಡಿದ ಬಳಿಕ ಆಶಾಭಾವ ವ್ಯಕ್ತಪಡಿಸಿತು. ಆನಂತರ ಜಿಲ್ಲಾಧಿಕಾರಿಯವರ ಕಚೇರಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಸಭೆಯಲ್ಲಿ ಈ ಅಭಿಪ್ರಾಯ ವ್ಯಕ್ತಪಡಿಸಿತು. ರಾಯಚೂರು ವಿಮಾನ ನಿಲ್ದಾಣಕ್ಕೆ ಮೀಸಲಿಟ್ಟಿರುವ 400 ಎಕರೆ ಪ್ರದೇಶ ಸೂಕ್ತವೂ, ಉತ್ತಮವೂ ಆಗಿದೆ, ಅದರೊಂದಿಗೆ ಹೆಚ್ಚುವರಿ ಭೂಮಿಯೂ ಬೇಕಾಗಬಹುದು ಎಂದು ನವದೆಹಲಿಯ ವಿಮಾನಯಾನ …

Read More »

ಕೈಗಾರಿಕೆಗಳಲ್ಲಿ ಸ್ಥಳೀಯರಿಗೆ ಉದ್ಯೋಗ ನೀಡದಿದ್ರೆ, ಮುಲಾಜಿಲ್ಲದೇ ಕ್ರಮ ಕೈಗೊಳ್ತೇವೆ: ಜಗದೀಶ್ ಶೆಟ್ಟರ್‌ ಎಚ್ಚರಿಕೆ

ಬೆಂಗಳೂರು: ಕೈಗಾರಿಕೆಗಳ ಸ್ಥಾಪನೆ ಮಾಡುವ ವೇಳೆ ಸ್ಥಳೀಯರಿಗೆ ಉದ್ಯೋಗ ನೀಡದೆ ನಿಯಮ ಉಲ್ಲಂಘಿಸಿದ್ರೆ, ಅಂತಹ ಉದ್ಯಮಿಗಳ ವಿರುದ್ಧ ಯಾವುದೇ ಮುಲಾಜಿಲ್ಲದೇ ಕಠಿಣ ಕ್ರಮ ಕೈಗೊಳ್ಳಲಾಗುತ್ತೆ ಎಂದು ಬೃಹತ್‌ ಕೈಗಾರಿಕಾ ಸಚಿವ ಜಗದೀಶ್‌ ಶೆಟ್ಟರ್‌ ಎಚ್ಚರಿಕೆ ನೀಡಿದ್ದಾರೆ. ಶುಕ್ರವಾರ ವಿಧಾನಸಭೆಯಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ‘ಕೈಗಾರಿಕೆಗಳಿಗೆ ಜಮೀನು ನೀಡುವ ವೇಳೆಯೇ ಒಪ್ಪಂದ ಮಾಡಿಕೊಳ್ಳಲಾಗುತ್ತೆ. ಜಮೀನು ನೀಡಿದ ಕುಟುಂಬಸ್ಥರಿಗೆ ಉದ್ಯೋಗ ನೀಡಬೇಕು. ಕಾರಣವೊಡ್ಡಿ ಉದ್ಯೋಗ ನೀಡದಿದ್ರೆ ಯಾವುದೇ ಮುಲಾಜಿಲ್ಲದೆ ಕಾನೂನು ಕ್ರಮ ಕೈಗೊಳ್ಳಲಾಗುತ್ತೆ. …

Read More »

ಸರ್ಕಾರಿ ಬಸ್ ಡಿಕ್ಕಿ: ಬೈಕ್‌ನಲ್ಲಿದ್ದ ಬ್ಯಾಂಕ್ ಮ್ಯಾನೇಜರ್-ಕ್ಯಾಷಿಯರ್ ಇಬ್ಬರೂ ಸ್ಥಳದಲ್ಲೇ ದುರ್ಮರಣ

ವಿಜಯಪುರ: ರಾಜ್ಯ ಸರ್ಕಾರಿ ಬಸ್ ಡಿಕ್ಕಿಯಾಗಿ ಬೈಕ್‌ನಲ್ಲಿದ್ದ ಇಬ್ಬರು ದಾರುಣವಾಗಿ ಮೃತಪಟ್ಟಿದ್ದಾರೆ. ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಲಾಳಸಂಗಿ ಗ್ರಾಮದ ಬಳಿ ಈ ಅಪಘಾತ ಸಂಭವಿಸಿದೆ. ಸರ್ಕಾರಿ ಬಸ್ ಹಾಗೂ ಬೈಕ್ ಮುಖಾಮುಖಿ ಡಿಕ್ಕಿಯಾಗಿ ಬೈಕ್‌ನಲ್ಲಿದ್ದ ಬ್ಯಾಂಕ್ ಮ್ಯಾನೇಜರ್ ಡಿ.ಎಸ್.ಬಿರಾದಾರ್ ಮತ್ತು ಕ್ಯಾಷಿಯರ್ ಚೈತನ್ಯ ಕುಮಾರ್ ಸ್ಥಳದಲ್ಲೇ ದುರ್ಮರಣಕ್ಕೀಡಾಗಿದ್ದಾರೆ. ಖೇಡಗಿ ಗ್ರಾಮದಲ್ಲಿರುವ ಕೆವಿಜಿ ಬ್ಯಾಂಕ್ ಶಾಖೆಯಲ್ಲಿ ಇವರಿಬ್ಬರೂ ಕಾರ್ಯನಿರ್ವಹಿಸುತ್ತಿದ್ದರು. ಸರ್ಕಾರಿ ಬಸ್ ಮತ್ತು ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇಂಡಿ …

Read More »

ನಾಲ್ಕು ಗಂಟೆ ವಿಚಾರಣೆ ವೇಳೆ ರಮೇಶ್ ಜಾರಕಿಹೊಳಿಗೆ 56 ಪ್ರಶ್ನೆ:S.I.T.

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ ಐಟಿ ಅಧಿಕಾರಿಗಳು ತನಿಖೆ ತೀವ್ರಗೊಳಿಸಿದ್ದು, ಮಾಜಿ ಸಚಿವರ ವಿಚಾರಣೆ ನಡೆಸಿದ್ದಾರೆ. ಸಿಡಿ, ಆಡಿಯೋ ಕ್ಲಿಪ್ ಜೊತೆಗೆ ಸಿಸಿಟಿವಿ ದೃಶ್ಯಾವಳಿಗಳ ಬಗ್ಗೆಯೂ ತನಿಖೆ ನಡೆಸುತ್ತಿರುವ ಎಸ್ ಐಟಿ ಅಧಿಕಾರಿಗಳು ರಮೇಶ್ ಜಾರಕಿಹೊಳಿಯವರನ್ನು 4 ಗಂಟೆಗಳ ಕಾಲ ವಿಚಾರಣೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಅಧಿಕಾರಿಗಳು ಕೇಳಿದ ಬಹುತೇಕ ಪ್ರಶ್ನೆಗಳಿಗೆ ಉತ್ತರಿಸಲು ರಮೇಶ್ ಜಾರಕಿಹೊಳಿ ನಿರಾಕರಿಸಿದ್ದಾರೆ. ಸಿಡಿಯಲ್ಲಿರುವುದು ನಾನಲ್ಲ, ಅದು ನನ್ನ …

Read More »

ಕಾಮೆಡ್ ಕೆ ಪದವಿ ಪೂರ್ವ ಪರೀಕ್ಷಾ ದಿನಾಂಕ ಪ್ರಕಟ

ಬೆಂಗಳೂರು:ಕರ್ನಾಟಕದ ವೈದ್ಯಕೀಯ ಎಂಜಿನಿಯರಿಂಗ್ ಮತ್ತು ದಂತ ಕಾಲೇಜುಗಳ ಒಕ್ಕೂಟ (COMEDK UGET 2021) ನಡೆಸುವ ಎಂಜಿನಿಯರಿಂಗ್ ಕೋರ್ಸ್‌ಗಳಿಗೆ ಪದವಿಪೂರ್ವ ಪ್ರವೇಶ ಪರೀಕ್ಷೆ ಜೂನ್ 20 ರಂದು ನಡೆಯಲಿದೆ. ಆನ್‌ಲೈನ್ ಮೋಡ್‌ನಲ್ಲಿ 400 ಪರೀಕ್ಷಾ ಕೇಂದ್ರಗಳೊಂದಿಗೆ ರಾಷ್ಟ್ರದಾದ್ಯಂತ 150 ನಗರಗಳಲ್ಲಿ ಪರೀಕ್ಷೆಯನ್ನು ನಡೆಸಲಾಗುವುದು. 2020 ರಲ್ಲಿ ನೋಂದಾಯಿತ 63,000 ರಂತೆ ಈ ವರ್ಷ ಸುಮಾರು 80,000 ನೋಂದಣಿಗಳನ್ನು ಸಂಘಟಕರು ನಿರೀಕ್ಷಿಸಿದ್ದಾರೆ. ಕಳೆದ ವರ್ಷ, ಪ್ರವೇಶ ಪರೀಕ್ಷೆಯನ್ನು ಮೂರು ಬಾರಿ ಮುಂದೂಡಲಾಯಿತು ಮತ್ತು …

Read More »

ಪ್ರತಿಭಟನಾನಿರತ ರೈತರಿಗೂ ಲಸಿಕೆ ನೀಡಿ: ರೈತ ಮುಖಂಡ ರಾಕೇಶ್‌ ಟಿಕಾಯತ್‌

ನವದೆಹಲಿ: ದೆಹಲಿಯ ಗಡಿಗಳಲ್ಲಿ 111 ದಿನಗಳಿಂದ ಕೃಷಿ ಕಾಯ್ದೆಗಳನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವ ರೈತರಿಗೆ ಕೋವಿಡ್‌ ಲಸಿಕೆ ನೀಡಬೇಕೆಂದು ರೈತ ಮುಖಂಡ ರಾಕೇಶ್‌ ಟಿಕಾಯತ್‌ ಗುರುವಾರ ಒತ್ತಾಯಿಸಿದ್ದಾರೆ. ಈ ವಿಚಾರವಾಗಿ ಮಾತನಾಡಿರುವ ಅವರು, ‘ದೇಶದಾದ್ಯಂತ ಕೋವಿಡ್‌ ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆ ಕಂಡುಬರುತ್ತಿದ್ದು, ಪ್ರತಿಭಟನಾ ಸ್ಥಳದಲ್ಲಿಯೇ ಮುನ್ನೆಚ್ಚರಿಕಾ ಕ್ರಮವಾಗಿ ಸಮಾಜಿಕ ಅಂತರ ಹಾಗೂ ಕೊರೊನಾ ಸಂಬಂಧಿ ಮಾರ್ಗಸೂಚಿಗಳನ್ನು ಅನುಸರಿಸುತ್ತಿದ್ದೇವೆ. ಹೋರಾಟದಲ್ಲಿ ಪಾಲ್ಗೊಂಡಿರುವ ರೈತರಿಗೆ ಸರ್ಕಾರವು ಲಸಿಕೆ ನೀಡಬೇಕು. ನಾನು ಕೂಡ ಲಸಿಕೆ …

Read More »

ಅಮಾನತುಗೊಂಡ ಪೊಲೀಸ್ ಅಧಿಕಾರಿ ಬಳಿ ಮತ್ತೆರಡು ಲಕ್ಸುರಿ ಕಾರು ಪತ್ತೆ

ಮುಂಬಯಿ: ಅಮಾನತುಗೊಂಡಿರುವ ಮುಂಬಯಿ ಪೊಲೀಸ್ ಅಧಿಕಾರಿ ಸಚಿನ್ ವಾಜೆಗೆ ಸಂಬಂಧಪಟ್ಟ ಇನ್ನೆರಡು ಲಕ್ಸುರಿ ಕಾರುಗಳನ್ನು ರಾಷ್ಟ್ರೀಯ ತನಿಖಾ ದಳ(ಎನ್ ಐಎ) ವಶಪಡಿಸಿಕೊಂಡಿದೆ. ಎನ್ ಐಎ ಮೂಲಗಳ ಪ್ರಕಾರ ಟೊಯೊಟಾ ಲ್ಯಾಂಡ್ ಕ್ರೂಸರ್ ಪ್ರಡೊ ಕಾರು ವಾಜೆ ನಿವಾಸದಲ್ಲಿ ಪತ್ತೆಯಾಗಿದೆ. ಮರ್ಸಡೀಸ್ ಕಾರನ್ನು ಕೂಡ ಸಚಿನ್ ಮನೆಯಿಂದ ವಶಕ್ಕೆ ಪಡೆಯಲಾಗಿದೆ. ಇದುವರೆಗೆ ಒಟ್ಟು ಐದು ಲಕ್ಸುರಿ ಕಾರುಗಳನ್ನು ವಶಕ್ಕೆ ಪಡೆಯಲಾಗಿದೆ. ವಾಜೆ ಜತೆಯಲ್ಲಿ ಕೆಲಸ ಮಾಡುತ್ತಿದ್ದ ಇಬ್ಬರು ಹಿರಿಯ ಪೊಲೀಸ್ ಇನ್ಸ್ …

Read More »