Breaking News

ರಾಜ್ಯ

ಶಿವಸೇನೆಯಿಂದ ಅಂಗಡಿ ಮಾಲೀಕರಿಗೆ ಬೆದರಿಕೆ

ಬೆಳಗಾವಿ: ಒಂದೆಡೆ ಗಡಿ ಜಿಲ್ಲೆ ಬೆಳಗಾವಿಯಲ್ಲಿ ಶಿವಸೇನೆ ಪುಂಡಾಟ ಮುಂದುವರೆದಿದ್ದರೆ ಇದೀಗ ಕೊಲ್ಲಾಪುರದಲ್ಲಿಯೂ ಮಳಿಗೆಗಳಿಗೆ ಕನ್ನಡದಲ್ಲಿರುವ ಬೋರ್ಡ್ ಗಳ ಮೇಲೆ ಕಪ್ಪು ಮಸಿ ಬಳಿದು ಆಕ್ರೋಶ ವ್ಯಕ್ತಪಡಿಸಿದೆ. ಶಿವಸೇನೆ ಕಾರ್ಯಕರ್ತರು ಕೊಲ್ಲಾಪುರದ ಮಳಿಗೆಗಳ ಮೇಲಿರುವ ಕನ್ನಡ ಬೋರ್ಡ್ ಗಳಿಗೆ ಕಪ್ಪು ಮಸಿ ಬಳಿಯುವ ಕೆಲಸ ಮಾಡುತ್ತಿದ್ದು, ಕನ್ನಡ ಬೋರ್ಡ್ ಹಾಕಿದರೆ ವ್ಯಾಪಾರ ಮಾಡಲು ಬಿಡುವುದಿಲ್ಲ ಎಂದು ಅಂಗಡಿ ಹಾಗೂ ಮಳಿಗೆಗಳ ಮಾಲೀಕರಿಗೆ ಶಿವಸೇನೆ ಮುಖಂಡ ಸಂಜಯ್ ಪವಾರ್ ಬೆದರಿಕೆ ಹಾಕುತ್ತಿದ್ದಾರೆ. …

Read More »

ಚುನಾವಣೆ ಹೊಸ್ತಿಲಲ್ಲೇ ‘ಬಿಜೆಪಿ’ ತೊರೆದ ಶಾಸಕರು..!

ನಾಲ್ಕು ರಾಜ್ಯಗಳು ಹಾಗೂ ಒಂದು ಕೇಂದ್ರಾಡಳಿತ ಪ್ರದೇಶ ವಿಧಾನಸಭೆಗಳಿಗೆ ಚುನಾವಣೆ ಘೋಷಣೆಯಾಗಿದ್ದು, ಗೆಲುವಿಗಾಗಿ ಎಲ್ಲ ಪಕ್ಷಗಳು ಭರ್ಜರಿ ತಯಾರಿ ನಡೆಸುತ್ತಿವೆ. ಗೆಲುವನ್ನೇ ಮಾನದಂಡವನ್ನಾಗಿರಿಸಿಕೊಂಡು ಅಭ್ಯರ್ಥಿಗಳಿಗೆ ಟಿಕೆಟ್ ನೀಡಲಾಗುತ್ತಿದ್ದು, ಈ ರೀತಿ ತಮಗೆ ಬಿಜೆಪಿ ಟಿಕೆಟ್ ತಪ್ಪಿದ ಹಿನ್ನೆಲೆಯಲ್ಲಿ ಇಬ್ಬರು ಹಾಲಿ ಶಾಸಕರು ಪಕ್ಷ ತೊರೆದಿದ್ದಾರೆ. ಅಸ್ಸಾಂ ಆಡಳಿತರೂಢ ಬಿಜೆಪಿಯ ಶಾಸಕರಾದ ದಿಲೀಪ್ ಕುಮಾರ್ ಹಾಗೂ ಶೀಲಾದಿತ್ಯ ದೇವ್ ಅವರುಗಳಿಗೆ ಟಿಕೆಟ್ ನಿರಾಕರಿಸಲಾಗಿದ್ದು, ಈ ಹಿನ್ನೆಲೆಯಲ್ಲಿ ಇಬ್ಬರು ಶಾಸಕರು ಪಕ್ಷ ತೊರೆದು …

Read More »

ವಿದೇಶದಲ್ಲಿ ಗಾಳಿಪಟ ಹಾರಿಸಿ ಸಂಭ್ರಮಿಸಿದ ನಟ ಗಣೇಶ್

ಗೋಲ್ಡನ್ ಸ್ಟಾರ್ ಗಣೇಶ್ ಸದ್ಯ ಬಹುನಿರೀಕ್ಷೆಯ ಗಾಳಿಪಟ-2 ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ನಿರ್ದೇಶಕ ಯೋಗರಾಜ್ ಭಟ್ ಸಾರಥ್ಯದಲ್ಲಿ ಮೂಡಿಬರುತ್ತಿರುವ ಗಾಳಿಪಟ-2 ಸಿನಿಮಾದ ಚಿತ್ರೀಕರಣ ಸದ್ಯ ಕಜಕಿಸ್ತಾನದಲ್ಲಿ ನಡೆಯುತ್ತಿದೆ. ಚಿತ್ರೀಕರಣದ ನಡುವೆ ಬಿಡುವು ಮಾಡಿಕೊಂಡು ಗಣಿ ಗಾಳಿಪಟ ಉತ್ಸವದಲ್ಲಿ ಭಾಗಿಯಾಗಿದ್ದಾರೆ. ಪುತ್ರ ವಿಹಾನ್ ಫೋಟೋವಿರುವ ಗಾಳಿಪಟ ಹಾರಿಸಿ ಗಣೇಶ್ ಸಂಭ್ರಮಿಸಿದ್ದಾರೆ. ಈ ಸುಂದರ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿದ್ದಾರೆ. ಗಣೇಶ್ ಜೊತೆ ನಟ ದಿಗಂತ್ ಮತ್ತು ಪವನ್ ಕುಮಾರ್ ಸಹ ಕಜಕಿಸ್ತಾನದಲ್ಲಿದ್ದಾರೆ. …

Read More »

ಸಾಂಸ್ಕೃತಿಕ ನಗರಿಯಲ್ಲಿ ‘ಯುವರತ್ನ’ ಪ್ರೀ ರಿಲೀಸ್

ಸಂತೋಷ್ ಆನಂದ್ ರಾಮ್ ನಿರ್ದೇಶನದ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಭಿನಯದ ಬಹು ನಿರೀಕ್ಷೆಯ ‘ಯುವರತ್ನ’ ಚಿತ್ರದ ಪ್ರೀ ರಿಲೀಸ್ ಕಾರ್ಯಕ್ರಮವನ್ನು ಮಾರ್ಚ್ 20ರಂದು ಮೈಸೂರಿನಲ್ಲಿ ನೆರವೇರಿಸಲಿದ್ದಾರೆ. ಏಪ್ರಿಲ್ 1ರಂದು ಈ ಚಿತ್ರ ಬಿಡುಗಡೆಯಾಗುತ್ತಿದ್ದು ಪುನೀತ್ ರಾಜ್ ಕುಮಾರ್ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ ಈ ಸಿನಿಮಾದಲ್ಲಿ ಸಯ್ಯೇಶಾ ನಾಯಕಿಯಾಗಿ ನಟಿಸಿದ್ದಾರೆ ವಿಜಯ್ ಕಿರಗಂದೂರು ಹೊಂಬಾಳೆ ಫಿಲ್ಮ್ಸ್ ಬ್ಯಾನರ್ ನಡಿ ನಿರ್ಮಾಣ ಮಾಡಿದ್ದಾರೆ. ಪ್ರಕಾಶ್ ರಾಜ್, ಧನಂಜಯ್, ಸೋನು ಗೌಡ …

Read More »

ಪ್ರಪಾತಕ್ಕೆ ಬಿದ್ದ ಖಾಸಗಿ ಬಸ್: ಕನಿಷ್ಠ 9 ಮಂದಿ ಸಾವು

ಹಿಮಾಚಲ ಪ್ರದೇಶದ ಚಂಬಾ ಜಿಲ್ಲೆಯ ಟಿಸ್ಸಾ ಪ್ರದೇಶದಲ್ಲಿ ಖಾಸಗಿ ಬಸ್ 200 ಮೀಟರ್ ಆಳದ ಕಮರಿಗೆ ಉರುಳಿ ಬಿದ್ದು ಕನಿಷ್ಠ 9 ಜನ ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ 12 ಮಂದಿ ಗಾಯಗೊಂಡಿದ್ದಾರೆ. ಚಂಬಾ ಜಿಲ್ಲಾಧಿಕಾರಿ ರಾಣಾ ಮತ್ತು ಪೊಲೀಸ್ ವರಿಷ್ಠಾಧಿಕಾರಿ ಘಟನಾ ಸ್ಥಳಕ್ಕೆ ಭೇಟಿ ನೀಡಿ ರಕ್ಷಣಾ ಕಾರ್ಯಾಚರಣೆಯ ಮೇಲ್ವಿಚಾರಣೆ ನಡೆಸಿದ್ದಾರೆ. ಟಿಸ್ಸಾದಿಂದ ಚಂಬಾ ಕಡೆಗೆ ಚಲಿಸುತ್ತಿದ್ದ ಬಸ್ ಚಾಲಕನ ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಉರುಳಿದೆ. ಗಾಯಾಳುಗಳನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಲಾಗಿದೆ …

Read More »

ಬಿಗ್​ ಬಾಸ್​ ಎಂದರೆ ವಿವಾದಾತ್ಮಕ ರಿಯಾಲಿಟಿ ಶೋ ಎಂಬ ಭಾವನೆ ಹಲವರಲ್ಲಿದೆ.?

ಬಿಗ್​ ಬಾಸ್​ ಎಂದರೆ ವಿವಾದಾತ್ಮಕ ರಿಯಾಲಿಟಿ ಶೋ ಎಂಬ ಭಾವನೆ ಹಲವರಲ್ಲಿದೆ. ಅದಕ್ಕೆ ಪೂರಕ ಎಂಬಂತಹ ಕೆಲವು ಘಟನೆಗಳು ದೊಡ್ಮನೆಯೊಳಗೆ ಆಗಾಗ ನಡೆಯುತ್ತಿರುತ್ತವೆ. ಬಿಗ್​ ಬಾಸ್​ ಕನ್ನಡ ಸೀಸನ್​ 8 ಆರಂಭ ಆಗಿ ಕೇವಲ 10 ದಿನ ಕಳೆದಿದೆ ಅಷ್ಟೇ. 9ನೇ ದಿನವೇ ಮನೆ ರಣಾಂಗಣ ಆಗಿದೆ. ಟಾಸ್ಕ್​ ಸಲುವಾಗಿ ಸ್ಪರ್ಧಿಗಳೆಲ್ಲ ಮೃಗಗಳಂತೆ ವರ್ತಿಸಿದ್ದಾರೆ. ಬಿಗ್​ ಬಾಸ್​ ಮನೆಯಲ್ಲಿ ವಾತಾವರಣ ಗರಂ ಆಗಲು ಕಾರಣವಾಗಿದ್ದು ವೈರಸ್​ ವರ್ಸಸ್​ ಮನುಷ್ಯರು ಗೇಮ್​. …

Read More »

ಮಗಳ ಮೇಲೆ ಅತ್ಯಾಚಾರ! ದೂರು ಕೊಟ್ಟ ತಂದೆ ಅಪಘಾತದಲ್ಲಿ ಸಾವು!

ತನ್ನ ಮಗಳ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದವರ ವಿರುದ್ಧ ದೂರು ನೀಡಿದ್ದ ವ್ಯಕ್ತಿ ಎರಡು ದಿನಗಳ ಬಳಿಕ ಅಪಘಾತದಲ್ಲಿ ಮೃತಪಟ್ಟಿರೋದು ಸಾಕಷ್ಟು ಅನುಮಾನಕ್ಕೆ ಕಾರಣವಾಗಿದೆ. ಅದು ಕೂಡ ತಮ್ಮ ಮಗಳ ವೈದ್ಯಕೀಯ ಪರೀಕ್ಷೆ ನಡೆಯುತ್ತಿದ್ದ ಆಸ್ಪತ್ರೆ ಎದುರಿಗೇ ಅಪಘಾತವಾಗಿ ಮೃತಪಟ್ಟಿದ್ದಾರೆ. ಈ ಘಟನೆ ಉತ್ತರಪ್ರದೇಶದ ಕಾನ್ಪುರ್​ನಲ್ಲಿ ನಡೆದಿದೆ. ಇವತ್ತು ಬೆಳಗ್ಗೆ ಟೀ ಕುಡಿಯೋಣ ಅಂತ ವ್ಯಕ್ತಿ ಆಸ್ಪತ್ರೆಯಿಂದ ಹೊರಬಂದಿದ್ದಾರೆ. ಈ ವೇಳೆ ಎರಗಿ ಬಂದ ಟ್ರಕ್ ಅವರ ಪ್ರಾಣವನ್ನೇ ತೆಗೆದುಬಿಟ್ಟಿದೆ. …

Read More »

ಎಸಿಬಿ ಅಧಿಕಾರಿಗಳಿಂದ ಪೊಲೀಸ್ ಇನ್ಸ್‌ಪೆಕ್ಟರ್ ವಿಕ್ಟರ್ ಸೈಮನ್ ಬಂಧನ

ಬೆಂಗಳೂರು: ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಆರೋಪದ ಮೇಲೆ ದಾಳಿಗೊಳಗಾಗಿದ್ದ ಬೆಂಗಳೂರು ಮಹಾನಗರ ಕಾರ್ಯಪಡೆ (ಬಿಎಂಟಿಎಫ್) ಪೊಲೀಸ್ ಇನ್ಸ್‌ಪೆಕ್ಟರ್ ವಿಕ್ಟರ್ ಸೈಮನ್ ಅವರನ್ನು ಭ್ರಷ್ಟಾಚಾರ ನಿಗ್ರಹ ದಳದ (ಎಸಿಬಿ) ಅಧಿಕಾರಿಗಳು ಬುಧವಾರ ಬಂಧಿಸಿದ್ದಾರೆ. ಮಂಗಳವಾರ ವಿಕ್ಟರ್ ಸೈಮನ್ ಅವರ ಮನೆ ಮತ್ತು ಇತರ ಕೆಲವು ಸ್ಥಳಗಳ ಮೇಲೆ ಎಸಿಬಿ ದಾಳಿ ನಡೆದಿತ್ತು. ಮನೆಯಲ್ಲಿ ₹1 ಕೋಟಿ ಮೌಲ್ಯದ ಬಾಂಡ್ ಪೇಪರ್ ಸೇರಿದಂತೆ ಅಪಾರ ಪ್ರಮಾಣದ ಆಸ್ತಿ ಪತ್ತೆಯಾಗಿತ್ತು. ‘ಇನ್ನೂ ಕೆಲವು …

Read More »

ರಾಜ್ಯದಲ್ಲಿ 2.28 ಲಕ್ಷ ಬಿಪಿಎಲ್‌ ಪಡಿತರ ಚೀಟಿ ರದ್ದು: ಸಚಿವ ಉಮೇಶ್‌ ಕತ್ತಿ

ಬೆಂಗಳೂರು: ರಾಜ್ಯದಲ್ಲಿ 2,28,188 ಅನರ್ಹ ಬಿಪಿಎಲ್‌ ಪಡಿತರ ಚೀಟಿಗಳನ್ನು ಪತ್ತೆ ಮಾಡಿ ರದ್ದುಪಡಿಸಲಾಗಿದೆ. ಅರ್ಹತೆ ಇಲ್ಲದೆ ಬಿಪಿಎಲ್‌ ಪಡಿತರ ಚೀಟಿ ಪಡೆದಿದ್ದ ವ್ಯಕ್ತಿಗಳಿಂದ ₹ 3.07 ಕೋಟಿ ದಂಡ ವಸೂಲಿ ಮಾಡಲಾಗಿದೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಉಮೇಶ್ ಕತ್ತಿ ತಿಳಿಸಿದರು. ಮಂಗಳವಾರ ವಿಧಾನ ಪರಿಷತ್‌ನಲ್ಲಿ ಕಾಂಗ್ರೆಸ್‌ನ ಪಿ.ಆರ್‌. ರಮೇಶ್‌ ಪ್ರಶ್ನೆಗೆ ಉತ್ತರಿಸಿದ ಸಚಿವರು, ‘ರಾಜ್ಯದಲ್ಲಿ 10.90 ಲಕ್ಷ ಅಂತ್ಯೋದಯ ಅನ್ನ ಯೋಜನೆ ಪಡಿತರ ಚೀಟಿಗಳು ಮತ್ತು …

Read More »

ನಕಲಿ ಸಿ.ಡಿ ತಯಾರಿಸಿದ್ದು ಕಾಂಗ್ರೆಸಿನ ಕೆಲವು ‘ಮನೆಹಾಳ’ ನಾಯಕರು: ಸಚಿವ ಸೋಮಶೇಖರ್

ಬೆಂಗಳೂರು: ‘ಸಮ್ಮಿಶ್ರ ಸರ್ಕಾರ’ದ ಪತನಕ್ಕೆ ಕಾರಣರಾದವರ ರಾಜಕೀಯ ಜೀವನ ಮುಗಿಸಲು ಕಾಂಗ್ರೆಸ್‌ ಪಿತೂರಿ ಮಾಡಿದ್ದು, ಅದರ ಭಾಗವಾಗಿಯೇ ರಮೇಶ ಜಾರಕಿಹೊಳಿ ಅವರ ತೇಜೋವಧೆಯ ಸಿ.ಡಿ ಬಿಡುಗಡೆ ಆಗಿದೆ ಎಂದು ಸಹಕಾರ ಸಚಿವ ಎಸ್‌.ಟಿ.ಸೋಮಶೇಖರ್‌ ದೂರಿದರು. ‘ನಕಲಿ ಸಿ.ಡಿ ತಯಾರಿಸಿದ್ದು ನೂರಕ್ಕೆ ನೂರರಷ್ಟು ಆ ಪಕ್ಷದಲ್ಲಿರುವ ಕೆಲವು ಮನೆಹಾಳ ನಾಯಕರೇ’ ಎಂದು ಹೇಳಿದ ಅವರು, ’20 ವರ್ಷಕ್ಕೂ ಹೆಚ್ಚು ಕಾಲ ಕಾಂಗ್ರೆಸ್‌ನಲ್ಲಿದ್ದ ನನಗೆ ಆ ಪಕ್ಷದ ಮಹಾನ್‌ ನಾಯಕರ ನೈತಿಕತೆ- ಅನೈತಿಕತೆಯ …

Read More »