Breaking News

ರಾಜ್ಯ

ಪಂಚರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಯಾರು ಗೆಲ್ಲಬಹುದು? ಸಮೀಕ್ಷೆ ಏನು ಹೇಳುತ್ತಿದೆ?

ದೆಹಲಿ: ಮುಂಬರುವ ಐದು ರಾಜ್ಯಗಳ ವಿಧಾನಸಭಾ ಚುನಾವಣೆಯ ಪೈಕಿ ಮೂರು ರಾಜ್ಯಗಳಲ್ಲಿ ಪ್ರಸ್ತುತ ಆಡಳಿತ ವಹಿಸಿರುವ ರಾಜ್ಯಗಳೇ ಮತ್ತೆ ಅಧಿಕಾರದ ಗದ್ದುಗೆ ಏರಲಿದೆ ಎಂದು ಟೈಮ್ಸ್ ನೌ ಹಾಗೂ ಸಿ-ವೋಟರ್ ಜಂಟಿಯಾಗಿ ನಡೆಸಿರುವ ಸಮೀಕ್ಷೆಯ ವರದಿ ತಿಳಿಸಿದೆ. ಪಶ್ಚಿಮ ಬಂಗಾಳ, ಅಸ್ಸಾಂ, ತಮಿಳುನಾಡು, ಕೇರಳ ಹಾಗೂ ಅಸ್ಸಾಂನಲ್ಲಿ ಮುಂದಿನ ತಿಂಗಳು ಚುನಾವಣೆ ನಡೆಯಲಿದೆ. ಇದಕ್ಕೆ ಪೂರ್ವಭಾವಿಯಾಗಿ ನಡೆಸಿದ ಸಮೀಕ್ಷೆಯಲ್ಲಿ ಕುತೂಹಲಕಾರಿ ಅಂಶಗಳು ತಿಳಿದುಬಂದಿದೆ. ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಹಾಗೂ ತೃಣಮೂಲ …

Read More »

ದೇಶೀಯ ವಿಮಾನಯಾನ: ಪ್ರಯಾಣಿಕರ ಸಂಖ್ಯೆ ಕುಸಿತ

ನವದೆಹಲಿ: ದೇಶದಲ್ಲಿ ಕಳೆದ ತಿಂಗಳು ವಿಮಾನಯಾನ ಕೈಗೊಳ್ಳುವವರ ಸಂಖ್ಯೆಯಲ್ಲಿ ಭಾರಿ ಇಳಿಕೆಯಾಗಿದೆ ಎಂದು ಡಿಜಿಸಿಎ ವರದಿ ಆಧರಿಸಿ ಐಸಿಆರ್‌ಎ ಹೇಳಿದೆ. ಪ್ರಯಾಣ ನಿರ್ಬಂಧ ಮತ್ತು ವಿಮಾನ ಪ್ರಯಾಣದಲ್ಲಿ ಇರುವ ಕೆಲವೊಂದು ನಿಯಮಗಳಿಂದಾಗಿ ಪ್ರಯಾಣಿಕರ ಸಂಖ್ಯೆಯಲ್ಲಿ ಇಳಿಕೆಯಾಗಿದ್ದು, ಫೆಬ್ರುವರಿ ತಿಂಗಳಿನಲ್ಲಿ ಒಟ್ಟಾರೆ ಶೇ 37 ಕುಸಿತ ಕಂಡುಬಂದಿದೆ ಎಂದು ವರದಿಯಾಗಿದೆ. ಫೆಬ್ರುವರಿ ತಿಂಗಳಿನಲ್ಲಿ ದೇಶೀಯ ವಿಮಾನದಲ್ಲಿ ಒಟ್ಟು 78 ಲಕ್ಷ ಮಂದಿ ಪ್ರಯಾಣಿಸಿದ್ದಾರೆ. ಆದರೆ ಜನವರಿ 2021ಕ್ಕೆ ಹೋಲಿಸಿದರೆ ಸ್ವಲ್ಪ ಪ್ರಮಾಣದಲ್ಲಿ …

Read More »

ಅನೈತಿಕ ಸರ್ಕಾರವಾಗಿದ್ದರೆ ಸದನದಲ್ಲಿ ಚರ್ಚಿಸಿ: ಕಾಂಗ್ರೆಸ್ ಗೆ ಜಗದೀಶ್ ಶೆಟ್ಟರ್ ಸವಾಲು

ಬೆಂಗಳೂರು: ಕಲಾಪ ಸಲಹಾ ಸಮಿತಿ ಸಭೆಯನ್ನು ಕಾಂಗ್ರೆಸ್ ಪಾರ್ಟಿ ಸಭೆಗೆ ಬಹಿಷ್ಕರಿಸಿದೆ. ಬಜೆಟ್ ಕಲಾಪವನ್ನೂ ಬಹಿಷ್ಕರಿಸಿತ್ತು. ಇಂತಹ ನಡವಳಿಕೆ ಪ್ರಜಾತಂತ್ರ ವ್ಯವಸ್ಥೆಯಲ್ಲಿ ಸರಿಯಲ್ಲ ಎಂದು ಸಚಿವ ಜಗದೀಶ್ ಶೆಟ್ಟರ್ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅನೈತಿಕ ಸರ್ಕಾರವಾಗಿದ್ದರೆ ನೀವು ಸದನದಲ್ಲಿ ಚರ್ಚಿಸಿ. ಬಹಿಷ್ಕರಸಿ ಏನು ಪ್ರಯೋಜನ? ಇದರಿಂದ ಯಾವುದೇ ಪ್ರಯೋಜನವಿಲ್ಲ ಎಂದರು. ನಾನು ಪ್ರತಿಪಕ್ಷ ನಾಯಕನಾಗಿದ್ದಾಗ ಸಭಾತ್ಯಾಗ ಎಂದು ಮಾಡಬಾರದುಅವರೇ ಹೇಳುತ್ತಿದ್ದರು. ಸದನದೊಳಗೆ ಏನೇ ಇದ್ದರೂ ಚರ್ಚೆ ಮಾಡಿ ಎನ್ನುತ್ತಿದ್ದರು. …

Read More »

ಬೆಳ್ಳಂಬೆಳಗ್ಗೆ ರಾಜ್ಯದ 11 ಜಿಲ್ಲೆಗಳಲ್ಲಿ ಏಕಕಾಲಕ್ಕೆ ಎಸಿಬಿ ದಾಳಿ..!

ಬೆಂಗಳೂರು: ವಿವಿಧ ಇಲಾಖೆಯ 9 ಅಧಿಕಾರಿಗಳ ಮನೆ ಮತ್ತು ಕಚೇರಿ ಸೇರಿ 11 ಜಿಲ್ಲೆಯ 28 ಕಡೆ ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ) ಮಂಗಳವಾರ ಬೆಳಿಗ್ಗೆ ಏಕ ಕಾಲದಲ್ಲಿ ದಾಳಿ ನಡೆಸಿದೆ. ಚಿಕ್ಕಬಳ್ಳಾಪುರ ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ಕೃಷ್ಣೇಗೌಡ ಅವರಿಗೆ ಸೇರಿದ ಚಿಕ್ಕಬಳ್ಳಾಪುರ ಮತ್ತು ಕೋಲಾರದಲ್ಲಿನ ಮನೆ, ಸಹೋದರನ ಮನೆ ಮೇಲೂ ದಾಳಿ ನಡೆಸಲಾಗಿದೆ. ಬೆಳಗಾವಿ ವೃತ್ತದ ಉಪ ಮುಖ್ಯ ಎಲೆಕ್ಟ್ರಿಕಲ್ ಎಂಜಿನಿಯರ್ ಹನುಮಂತ ಶಿವಪ್ಪ ಚಿಕ್ಕಣ್ಣನವರ ಅವರಿಗೆ ಸೇರಿದ …

Read More »

ಮಹಾನ್ ನಾಯಕನಿಂದ ಈ ಷಡ್ಯಂತ್ರ ನಡೆದಿದೆ: ರಮೇಶ್ ಜಾರಕಿಹೊಳಿ

ಬೆಂಗಳೂರು, ಮಾರ್ಚ್ 9: ಒಬ್ಬ ಮಹಾನ್ ನಾಯಕನಿಂದ ಈ ಷಡ್ಯಂತ್ರ ನಡೆದಿದೆ. ಅವರ ಬಗ್ಗೆ ಈಗ ಹೇಳಲು ಆಗುವುದಿಲ್ಲ. ಸಿಡಿ ಬಿಡುಗಡೆ ಬಗ್ಗೆ ಹೈಕಮಾಂಡ್ ಮೊದಲೇ ನನಗೆ ಮಾಹಿತಿ ನೀಡಿತ್ತು ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹೇಳಿದರು. ಸಿಡಿ ಪ್ರಕರಣದಲ್ಲಿ ರಾಜೀನಾಮೆ ನೀಡಿದ ಬಳಿಕ ಮಂಗಳವಾರ ಮೊದಲ ಬಾರಿಗೆ ಸುದ್ದಿಗೋಷ್ಠಿ ನಡೆಸಿದ ರಮೇಶ್ ಜಾರಕಿಹೊಳಿ, ನನ್ನ ವಿರುದ್ಧ ರಾಜಕೀಯ ಷಡ್ಯಂತ್ರ ನಡೆದಿದೆ ಎಂದು ಭಾವುಕರಾದರು. ಈ ಸಿಡಿಯನ್ನು ನಾಲ್ಕು …

Read More »

‘ನಾನು ನಿರಪರಾಧಿ, ಅಪರಾಧಿಯಲ್ಲ’ ಸುದ್ದಿಗೋಷ್ಠಿಯಲ್ಲಿ ಮಹತ್ವದ ಮಾಹಿತಿ ಬಿಚ್ಚಿಟ್ಟ ರಮೇಶ್ ಜಾರಕಿಹೊಳಿ

ಬೆಂಗಳೂರು: ಸಿಡಿ ಹೊರಬಂದ ದಿನ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿ, ಬಳಿಕ ನಾಪತ್ತೆಯಾಗಿದ್ದ ರಮೇಶ್ ಜಾರಕಿಹೊಳಿ ಇಂದು ಬೆಂಗಳೂರಿನ ತಮ್ಮ ಸದಾಶಿವನಗರ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ್ದಾರೆ. ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ರಮೇಶ್ ಜಾರಕಿಹೊಳಿ ನಡೆಸುತ್ತಿರುವ ಮೊದಲ ಸುದ್ದಿಗೋಷ್ಠಿ ಇದಾಗಿದ್ದು, ಸಾಕಷ್ಟು ಕುತೂಹಲ ಮೂಡಿಸಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರಮೇಶ್ ಜಾರಕಿಹೊಳಿ ‘ನನ್ನ ಪರವಾಗಿ ನಿಂತ ಎಲ್ಲರಿಗೂ ಹೃದಯಪೂರ್ವಕ ವಂದನೆ. ನನಗೆ ಮಾನಸಿಕವಾಗಿ ಧೈರ್ಯ ತುಂಬಿದ ಸಿಎಂ ಬಿಎಸ್‌ ಯಡಿಯೂರಪ್ಪ, ಮಾಜಿ …

Read More »

32 ವರ್ಷ ಕಲ್ಲು ತಿಂದೇ ಬದುಕುತ್ತಿದ್ದಾನೀತ, ವರ್ಷಗಳ ಹೊಟ್ಟೆನೋವಿಗಿದು ಔಷಧವಾಯ್ತಂತೆ!

ಮುಂಬೈ: ಒಲ್ಲದ ಗಂಡನಿಗೆ ಮೊಸರಲ್ಲಿ ಕಲ್ಲು ಎಂಬ ಗಾದೆಮಾತಿದೆ. ಚಿಕ್ಕಚಿಕ್ಕ ವಿಷಯಕ್ಕೂ ಕಿರಿಕ್‌ ಮಾಡುತ್ತಿದ್ದರೆ, ಪತ್ನಿ ಮಾಡಿದ ಎಲ್ಲದರಲ್ಲಿಯೂ ತಪ್ಪು ಹುಡುಕುತ್ತಿದ್ದರೆ ಅಂಥ ಗಂಡನಿಗೆ ಹೀಗೆ ಹೇಳುವುದುಂಟು. ಅಂದರೆ ಕಲ್ಲು ಇಲ್ಲಿ ನೆಗೆಟಿವ್‌ ಚಿಹ್ನೆ ತೋರಿಸುತ್ತದೆ. ಆದರೆ ಇಲ್ಲೊಬ್ಬ ಭೂಪ ನಿಜವಾಗಿಯೂ ಕಲ್ಲನ್ನು ತಿಂದೇ ಜೀವಿಸುತ್ತಿದ್ದಾನೆ. ಅದೂ ಒಂದೆರಡು ತಿಂಗಳೋ, ವರ್ಷವೋ ಅಲ್ಲ… ಬರೋಬ್ಬರಿ 32 ವರ್ಷ! ಆಹಾರದ ಬದಲಿಗೆ ಪ್ರತಿ ದಿನ 250 ಗ್ರಾಂ ಕಲ್ಲನ್ನು ಆಹಾರವಾಗಿ ತಿಂದು …

Read More »

ಅಂಬಾನಿ ಮನೆ ಬಳಿ ಸ್ಕಾರ್ಪಿಯೊ ಪತ್ತೆ ಪ್ರಕರಣ ಎನ್‌ಐಎಗೆ: ಏನೋ ಅಡಗಿದೆ ಎಂದ ಠಾಕ್ರೆ

ಮುಂಬೈ: ಉದ್ಯಮಿ ಮುಕೇಶ್‌ ಅಂಬಾನಿ ಅವರ ಮುಂಬೈ ನಿವಾಸದ ಸಮೀಪ ಸ್ಪೋಟಕಗಳನ್ನು ತುಂಬಿದ ವಾಹನವನ್ನು ಜಪ್ತಿ ಮಾಡಿರುವ ಪ್ರಕರಣದ ತನಿಖೆಯನ್ನು ಸೋಮವಾರ ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ಕೈಗೆತ್ತಿಕೊಂಡಿದೆ. ಕೇಂದ್ರ ಗೃಹ ಸಚಿವಾಲಯದ ಆದೇಶದಂತೆ ಎನ್‌ಐಎ ಈ ಪ್ರಕರಣ ವನ್ನು ಕೈಗೆತ್ತಿಕೊಳ್ಳುತ್ತಿರುವುದಾಗಿ ತನಿಖಾ ಸಂಸ್ಥೆಯ ವಕ್ತಾರರು ಸೋಮವಾರ ತಿಳಿಸಿದರು. ಈ ಬೆಳವಣಿಗೆಯು ಮಹಾರಾಷ್ಟ್ರದ ಉದ್ಧವ್ ಠಾಕ್ರೆ ಸರ್ಕಾರದ ಹುಬ್ಬೇರುವಂತೆ ಮಾಡಿದೆ. ಈ ಕುರಿತು ಪ್ರತಿಕ್ರಿಯಿಸಿರುವ ಸಿಎಂ ‘ಈ ಪ್ರಕರಣದಲ್ಲಿ ಏನೋ …

Read More »

ದೇವಸ್ಥಾನದ ಕಾಣಿಕೆ ಡಬ್ಬಿ ಕಳ್ಳತನ – ವಿಶ್ವಹಿಂದೂ ಪರಿಷತ್ ಸಂಚಾಲಕ ಅರೆಸ್ಟ್

ಮಂಗಳೂರು ಮಾರ್ಚ್ 8: ಬೈಕ್, ದೇವಸ್ಥಾನದ ಕಾಣಿಕೆ ಡಬ್ಬಿ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶ್ವ ಹಿಂದೂ ಪರಿಷತ್ ಸಂಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಮೊಂಟೆಪದವು ನಿವಾಸಿ ತಾರನಾಥ್ ಮೋಹನ್ ಎಂದು ಗುರುತಿಸಲಾಗಿದ್ದು, ಇತ ವಿಶ್ವಹಿಂದೂಪರಿಷತ್ ಹಾಗೂ ಬಜರಂಗದಳ ಉಳ್ಳಾಲ ಗ್ರಾಮಾಂತರ ಪ್ರಖಂಡದ ಸಂಚಾಲಕ ಎಂದು ತಿಳಿದು ಬಂದಿದೆ. ನಿನ್ನೆ ಮಧ್ಯರಾತ್ರಿ ಸಿಸಿಟಿವಿಯಲ್ಲಿ ದೊರೆತ ಮಾಹಿತಿ ಆಧಾರದಲ್ಲಿ ಸಾರ್ವಜನಿಕರೇ ಆರೋಪಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಆರೋಪಿ ಮಂಜನಾಡಿ ದೇವಸ್ಥಾನದಿಂದ ಕಾಣಿಕೆ ಡಬ್ಬಿ …

Read More »

ಬಾಲಕರಿಗೆ ಲೈಂಗಿಕ ಕಿರುಕುಳ ನೀಡಿದ್ದವನಿಗೆ 10 ವರ್ಷ ಜೈಲು; ಒಬ್ಬನ ಮೇಲೆಯೇ 21 ಪೋಕ್ಸೋ ಪ್ರಕರಣಗಳು

ಉಡುಪಿ: ಈತನ ಮೇಲಿದ್ದಿದ್ದು ಒಂದೆರಡು ಪ್ರಕರಣಗಳಲ್ಲ. ಬರೋಬ್ಬರಿ 21 ಪೋಕ್ಸೋ ಪ್ರಕರಣಗಳು. ಅಷ್ಟಕ್ಕೂ ಈತನ ಮೇಲೆ ಹೀಗೆ ಇಷ್ಟೊಂದು ಕೇಸುಗಳು ಬೀಳಲು ಕಾರಣ ಈತ ಬಾಲಕರಿಗೆ ನೀಡಿದ್ದ ಲೈಂಗಿಕ ಕಿರುಕುಳ. ಹೌದು.. ಬಾಲಕರಿಗೆ ಲೈಂಗಿಕವಾಗಿ ಕಿರುಕುಳು ನೀಡಿದ್ದ ಈ ವ್ಯಕ್ತಿಗೆ ನ್ಯಾಯಾಲಯ ಈಗ 10 ವರ್ಷ ಜೈಲುಶಿಕ್ಷೆ ವಿಧಿಸಿದೆ. ಈ ಆರೋಪಿಯ ಹೆಸರು ಚಂದ್ರ ಹೆಮ್ಮಾಡಿ. ಈತನ ಮೇಲೆ 21 ಪ್ರಕರಣಗಳಿದ್ದು, ಆ ಪೈಕಿ ಒಂದು ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿ …

Read More »