ಮೈಸೂರು, ಮಾರ್ಚ್ 6: ಮೈಸೂರು ನಗರದಲ್ಲಿ ಪೊಲೀಸ್ ಕಾನ್ಸ್‌ಟೇಬಲ್ ಆಗಿ ಕಾರ್ಯ ನಿರ್ವಹಿಸುತ್ತಿರುವ ವ್ಯಕ್ತಿಯೊಬ್ಬ ಪತ್ನಿಗೆ ವಂಚಿಸಿ ಮತ್ತೊಂದು ಹುಡುಗಿಯನ್ನು ಮದುವೆಯಾಗಿರುವ ವಿಚಾರ ಬೆಳಕಿಗೆ ಬಂದಿದೆ. ಮಹಿಳಾ ಠಾಣೆಯಲ್ಲಿ ದಾಖಲಾಗಿರುವ ದೂರಿನ ಪ್ರಕಾರ ಲಷ್ಕರ್ ಠಾಣೆಯಲ್ಲಿ ಕಾನ್ಸ್‌ಟೇಬಲ್ ಆಗಿರುವ ಸಮೀವುಲ್ಲಾ, 2017 ರಲ್ಲಿ ಎಚ್.ಡಿ ಕೋಟೆಯ ಪ್ರಾಥಮಿಕ ಶಾಲೆಯ ಕನ್ನಡ ಶಿಕ್ಷಕಿಯನ್ನು ಮದುವೆಯಾಗಿದ್ದ. ಮದುವೆ ಸಮಯದಲ್ಲಿ ವರದಕ್ಷಿಣೆಯಾಗಿ ಬೈಕ್ ಹಾಗೂ ಚಿನ್ನಾಭರಣ ಪಡೆದುಕೊಂಡಿದ್ದ. ಆರು ತಿಂಗಳು ಪತ್ನಿಯೊಂದಿಗೆ ಅನ್ಯೋನ್ಯವಾಗಿ …
Read More »ಬಿಎಂಟಿಸಿ ಟಿಕೆಟ್ ದರ ಹೆಚ್ಚಳ ಅನಿವಾರ್ಯ:ಶಿಖಾ
ಬೆಂಗಳೂರು: ಬಿಎಂಟಿಸಿ ದರ ಹೆಚ್ಚಳ ಅನಿವಾರ್ಯ ಎಂದು ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕರಾದ ಸಿ. ಶಿಖಾ ಹೇಳಿದ್ದಾರೆ. ದರ ಹೆಚ್ಚಳ ಕುರಿತು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದು, ಬಜೆಟ್ನಲ್ಲಿ ನಿರ್ಧಾರ ಹೊರಬರುವ ಸಾಧ್ಯತೆಯಿದೆ. ಕೊರೋನಾ ಬಳಿಕ 10 ಲಕ್ಷ ಪ್ರಯಾಣಿಕರ ಸಂಖ್ಯೆ ಕುಸಿತವಾಗಿದೆ. ಬಿಎಂಟಿಸಿ ಸಂಸ್ಥೆ ಕೊರೋನಾ ಕಾರಣದಿಂದ ಆರ್ಥಿಕ ಸಂಕಷ್ಟದಲ್ಲಿದೆ ಎಂದು ತಿಳಿಸಿದ್ದಾರೆ. ಡೀಸೆಲ್ ಬೆಲೆ ಕಳೆದ ವರ್ಷಕ್ಕಿಂತ 30 ರೂಪಾಯಿ ಹೆಚ್ಚಳವಾಗಿದೆ. ಹೀಗಾಗಿ ಬಿಎಂಟಿಸಿ ಟಿಕೆಟ್ ದರ ಹೆಚ್ಚಳ ಅನಿವಾರ್ಯ …
Read More »ಸಿಡಿ ಸ್ಪೋಟದ ಹಿಂದೆ ಯಾರಿದ್ದಾರೆ ಅನ್ನೋದು ಗೊತ್ತಿದೆ.. ಆದ್ರೆ, ಹೇಳಲ್ಲ: ಎಸ್.ಟಿ ಸೋಮಶೇಖರ್
ಬೆಂಗಳೂರು: ರಮೇಶ್ ಜಾರಕಿಹೊಳಿ ಸಿ.ಡಿ ಸ್ಫೋಟದ ಹಿಂದೆ ಯಾವ ಗುಂಪಿದೆ, ಇದಕ್ಕೆ ಯಾರು ನಾಯಕತ್ವ ಕೊಡುತ್ತಿದ್ದಾರೆ ಅನ್ನೋದು ನನಗೆ ಗೊತ್ತು ಎಂದು ಸಚಿವ ಎಸ್.ಟಿ ಸೋಮಶೇಖರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವ್ರು, ಸಿಡಿ ಬಹಿರಂಗದ ಹಿಂದೆ ತೇಜೋವಧೆ ಮಾಡುವ ಉದ್ದೇಶವಿದೆ. ಇದ್ರ ಹಿಂದೆ ಯಾರಿದ್ದಾರೆ ಅನ್ನೋ ಖಚಿತ ಮಾಹಿತಿ ನನಗಿದೆ. ಆದ್ರೆ, ನಾನು ಒಬ್ಬನೇ ಇದನ್ನೆಲ್ಲಾ ಹೇಳುವುದಕ್ಕೆ ಬರೋದಿಲ್ಲ ಎಂದರು. ಇನ್ನು ರಾಜಕೀಯವಾಗಿ ತಮ್ಮ ವಿರುದ್ಧ ಫೈಟ್ ಮಾಡಲಿ. ಆದ್ರೆ, …
Read More »ರಮೇಶ್ ಜಾರಕಿಹೊಳಿಯ ಮಹಿಳಾ ಬೆಂಬಲಿಗರು ಘೋಷಣೆ ಕೂಗಿ ಆಕ್ರೋಶ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಕಿಡಿಕಾರಿದರು.
ಹುಬ್ಬಳ್ಳಿ: ರಮೇಶ್ ಜಾರಕಿಹೊಳಿ CD ಬಹಿರಂಗ ಪ್ರಕರಣದಲ್ಲಿ ನನ್ನ ಹೆಸರು ಯಾಕೆ ಎಳೆದು ತರ್ತಿದ್ದಾರೆ ಗೊತ್ತಿಲ್ಲ ಎಂದು ನಗರದಲ್ಲಿ ‘ಕೈ’ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯಿಸಿದ್ದಾರೆ. ಜೊತೆಗೆ, ರಾಜಕಾರಣಿಗಳು ಒಂದು ಉದಾಹರಣೆ ಸೆಟ್ ಮಾಡಬೇಕು ಎಂದು ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು. ಸಿ.ಡಿ ವಿಚಾರದಲ್ಲಿ ನಾನೇನು ಮಾತನಾಡಲ್ಲ. ಬೇರೆ ವಿಚಾರವಾಗಿ ಏನಾದ್ರು ಪ್ರಶ್ನೆ ಇದ್ರೇ ಕೇಳಿ. ಆ ವಿಚಾರದಲ್ಲಿ ನನ್ನ ಹೆಸರಿ ಯಾಕೆ ಎಳೆದು ತರುತ್ತಿದ್ದಾರೆ ಎಂದು ನಂಗೆ ಗೊತ್ತಿಲ್ಲ. …
Read More »ಸಿಡಿ ಸಂತ್ರಸ್ತೆಯ ಮೌನ, ಷಡ್ಯಂತ್ರದ ಅನುಮಾನಕ್ಕೆ ಕಾರಣ: ಬೊಮ್ಮಾಯಿ
ಹಾವೇರಿ, ಮಾರ್ಚ್ 06: ಸಂತ್ರಸ್ತೆ ಇನ್ನೂ ದೂರು ನೀಡದಿರುವುದರಿಂದ ರಮೇಶ್ ಜಾರಕಿಹೊಳಿ ವಿರುದ್ಧದ ವಿಡಿಯೋ ಸುತ್ತ ಸಾಕಷ್ಟು ಅನುಮಾನ ಮೂಡುತ್ತಿದೆ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ. ಹಾವೇರಿಯಲ್ಲಿ ಮಾತನಾಡಿದ ಅವರು, ರಮೇಶ ಜಾರಕಿಹೊಳಿ ಪ್ರಕರಣ ಆದ ಬಳಿಕ ಬಹಳಷ್ಟು ಊಹಾಪೋಹಗಳು, ಸಂಶಯಾಸ್ಪದ ಷಡ್ಯಂತ್ರಗಳು, ಪೂರ್ವಭಾವಿ ಹನಿಟ್ರ್ಯಾಪ್ ಸೇರಿದಂತೆ ಬಹಳಷ್ಟು ವಿಚಾರಗಳು ಬೆಳಕಿಗೆ ಬಂದಿವೆ. ಹೀಗಾಗಿ ಕೆಲವು ಸಚಿವರು, ಶಾಸಕರಾಗಲಿ ಅವರ ತೇಜೋವಧೆ ಆಗುವ ಸಾಧ್ಯತೆಗಳು ಹೆಚ್ಚಿವೆ. ತೇಜೋವಧೆ, …
Read More »ಗೋಕಾಕ: ವಿವಾದಿತ ಸಿಡಿ ಪ್ರಕರಣದ ತನಿಖೆಯನ್ನು ಸಿಬಿಐ ಅಥವಾ ಸಿಐಡಿಗೆ ವಹಿಸಬೇಕೆಂದು ಆಗ್ರಹಿಸಿ ಮೆಳವಂಕಿ ಗ್ರಾಮದ ಗೌಡನ ಕ್ರಾಸ್‍ದಲ್ಲಿ ಪ್ರತಿಭಟನೆ ನಡೆಸುತ್ತಿರುವುದು.
ಗೋಕಾಕ: ರಮೇಶ ಜಾರಕಿಹೊಳಿ ಅವರ ಮೆಳವಂಕಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಅಡಿಬಟ್ಟಿ, ಚಿಗಡೊಳ್ಳಿ ಮತ್ತು ಮೆಳವಂಕಿ ಗ್ರಾಮದ ಅಭಿಮಾನಿ ಬಳಗ ಹಾಗೂ ಬೆಂಬಲಿಗರು ಶನಿವಾರದಂದು ವಿವಾದಿತ ಸಿಡಿ ಪ್ರಕರಣದ ತನಿಖೆಯನ್ನು ಸಿಬಿಐ ಅಥವಾ ಸಿಐಡಿಗೆ ವಹಿಸಬೇಕೆಂದು ಆಗ್ರಹಿಸಿ ಕಂದಾಯ ನಿರೀಕ್ಷಕ ಎಮ್.ಆಯ್.ಹಿರೇಮಠ ಅವರ ಮುಖಾಂತರ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರಿಗೆ ಮನವಿ ಸಲ್ಲಿಸಿದರು. ಮೆಳವಂಕಿ ಗ್ರಾಮದ ಗೌಡನ ಕ್ರಾಸದಲ್ಲಿ ಸೇರಿದ ರಮೇಶ ಜಾರಕಿಹೊಳಿ ಅವರ ಅಭಿಮಾನಿಗಳು ಹಾಗೂ ಬೆಂಬಲಿಗರು ಮಾನವ ಸರಪಳಿ ನಿರ್ಮಿಸಿ …
Read More »ಇಂಧನ ದರ ಇಳಿಕೆ : ಕೇಂದ್ರ, ರಾಜ್ಯ ಸರ್ಕಾರಗಳು ನಿರ್ಧರಿಸಲಿ- ಕೇಂದ್ರ ಹಣಕಾಸು ಸಚಿವೆ
ನವದೆಹಲಿ, ಮಾ.05: ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ತೆರಿಗೆ ಕಡಿತಗೊಳಿಸುವುದು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜಂಟಿಯಾಗಿ ನಿರ್ಧಾರ ಕೈಗೊಳ್ಳಬೇಕು ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಇಂಧನ ಏರಿಕೆ ಮಾಡಬೇಕೆಂಬ ಗ್ರಾಹಕರ ಬೇಡಿಕೆಯಲ್ಲಿ ಅರ್ಥವಿರುವುದನ್ಬು ಅವರು ಒಪ್ಪಿಕೊಂಡಿದ್ದಾರೆ. ಐಡಬ್ಲ್ಯೂಪಿಸಿಯಲ್ಲಿ ಪತ್ರಕರ್ತರ ಜೊತೆಗಿನ ಸಂವಾದದಲ್ಲಿ ಮಾತನಾಡಿದ ಅವರು, ರಾಜಸ್ಥಾನ, ಮಧ್ಯಪ್ರದೇಶ, ಮಹಾರಾಷ್ಟ್ರ ಸೇರಿದಂತೆ ಹಲವು ರಾಜ್ಯಗಳಲ್ಲಿ ಪೆಟ್ರೋಲ್ ದರ ನೂರು ರೂ ಗಡಿ ದಾಟಿದೆ. ಇದಕ್ಕೆ ಕೇಂದ್ರ …
Read More »ನಿನ್ನೆ ನಾಪತ್ತೆ, ಇವತ್ತು ಮೃತದೇಹ ಪತ್ತೆ: ಅಂಬಾನಿ ಮನೆ ಬಳಿ ಸ್ಪೋಟಕವಿದ್ದ ವಾಹನದ ಮಾಲೀಕನ ಶವ ಪತ್ತೆ; ಸಾವಿನ ಸುತ್ತ ಅನುಮಾನದ ಹುತ್ತ
ಮುಂಬೈನಲ್ಲಿ ಶ್ರೀಮಂತ ಉದ್ಯಮಿ ಮುಖೇಶ್ ಅಂಬಾನಿ ಅವರ ಮನೆಯ ಬಳಿ ಸ್ಫೋಟಕ ತುಂಬಿದ ಸ್ಕಾರ್ಪಿಯೋ ವಾಹನದ ಮಾಲೀಕನ ಮೃತದೇಹ ಥಾಣೆಯಲ್ಲಿ ಪತ್ತೆಯಾಗಿದೆ. ಮುಂಬೈನಲ್ಲಿರುವ ಮುಕೇಶ್ ಅಂಬಾನಿಯ ಅಂಟಿಲಿಯಾ ನಿವಾಸದ ಬಳಿ 24 ಜಿಲೆಟಿನ್ ಕಡ್ಡಿಗಳನ್ನು ಇಡಲಾಗಿದ್ದ ಸ್ಕಾರ್ಪಿಯೋ ಕಾರು ಪತ್ತೆಯಾಗಿದ್ದು, ಅನುಮಾನಾಸ್ಪದ ವಾಹನದಲ್ಲಿ ಸ್ಪೋಟಕಗಳನ್ನು ತುಂಬಿಟ್ಟಿದ್ದು ಭಯೋತ್ಪಾದಕರ ಕೃತ್ಯ ಇರಬಹುದೆಂದು ಹೇಳಲಾಗಿತ್ತು. ಮುಂಬೈ ಅಪರಾಧ ವಿಭಾಗದ ಪೊಲೀಸರು ಮತ್ತು ಎಟಿಎಸ್ ತನಿಖೆ ಕೈಗೊಂಡಿದ್ದು, ಸಿಸಿಟಿವಿ ದೃಶ್ಯಾವಳಿ ಪರಿಶೀಲನೆ ನಡೆಸಿ ಮುಕೇಶ್ …
Read More »ಆಡಳಿತಾರೂಢ ಬಿಜೆಪಿಯ 12ಕ್ಕೂ ಹೆಚ್ಚು ಸಚಿವರು-ಶಾಸಕರಿಗೆ ಭಯ..!
ಬೆಂಗಳೂರು,ಮಾ.6- ಸಿಡಿ ಬಿಡುಗಡೆಯಾದ ಬೆನ್ನಲ್ಲೆ ಆಡಳಿತಾರೂಢ ಬಿಜೆಪಿಯಲ್ಲಿ ಸುಮಾರು ಒಂದು ಡಜನ್‍ಗೂ ಅಧಿಕ ಸಚಿವರು ಮತ್ತು ಶಾಸಕರಿಗೆ ಸಿ.ಡಿ ಭೂತ ಕಾಡುತ್ತಿದೆ. ಕಾಂಗ್ರೆಸ್-ಜೆಡಿಎಸ್‍ಗೆ ಕೈ ಕೊಟ್ಟು ಮುಂಬೈಗೆ ತೆರಳಿದ ಸಚಿವರು ಮತ್ತು ಶಾಸಕರಿಗೆ ಸಿ.ಡಿ ಭಯ ಎದುರಾಗಿದ್ದು, ಬಹುತೇಕ ಎಲ್ಲರೂ ನ್ಯಾಯಾಲಯದ ಮೊರೆ ಹೋಗಲು ಸಿದ್ದತೆ ನಡೆಸಿದ್ದಾರೆ. ಈಗಾಗಲೇ ಸಚಿವರಾದ ಎಸ್.ಟಿ.ಸೋಮಶೇಖರ್, ನಾರಾಯಣಗೌಡ, ಬಿ.ಸಿ.ಪಾಟೀಲ್, ಭೈರತಿ ಬಸವರಾಜ್ ಹಾಗೂ ಡಾ.ಕೆ.ಸುಧಾಕರ್ ತಮ್ಮ ವಿರುದ್ಧ ಯಾವುದೇ ರೀತಿಯ ಮಾನಹಾನಿ ವರದಿಗಳನ್ನು ಬಿತ್ತರಿಸದಂತೆ …
Read More »ಅನಾವಶ್ಯಕವಾಗಿ ಕೋರ್ಟ್ ಗೆ ಹೋಗಿ ಮತ್ತಷ್ಟು ಗೋಜಲಾಗಿಸುವುದು ಒಳ್ಳೆಯದಲ್ಲ: ಸದಾನಂದ ಗೌಡ
ಬೆಂಗಳೂರು: ಅನಾವಶ್ಯಕವಾಗಿ ಕೋರ್ಟ್ ಗೆ ಹೋಗಿ ಮತ್ತಷ್ಟು ಗೋಜಲಾಗಿಸುವುದು ಒಳ್ಳೆಯ ಬೆಳವಣಿಗೆಯಲ್ಲ ಎಂದು ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಮ್ಮ ವಿರುದ್ಧ ಯಾವುದೇ ಆಕ್ಷೇಪಾರ್ಹ ಸುದ್ದಿಗಳನ್ನು ಪ್ರಸಾರ ಮಾಡದಿರುವಂತೆ ಮಾಧ್ಯಮಗಳಿಗೆ ನಿರ್ಬಂಧ ಹೇರಬೇಕೆಂದು ರಾಜ್ಯದ ಆರು ಸಚಿವರು ಕೋರ್ಟ್ ಮೊರೆ ಹೋಗಿರುವ ವಿಚಾರದ ಬಗ್ಗೆ ಅಭಿಪ್ರಾಯ ವ್ಯಕ್ತಪಡಿಸಿದರು. ಸ್ವಾಭಾವಿಕವಾಗಿ ಇಂತಹ ಆರೋಪ ಬಂದಾಗ ತನಿಖೆಗೆ ಮಂತ್ರಿಗಳು ಸಹಕಾರ ನೀಡಬೇಕು. ವೈಯಕ್ತಿಕವಾಗಿ ಹಲವಾರು ಜನ …
Read More »
Laxmi News 24×7