ಬೆಳಗಾವಿ: ಈ ವರ್ಷದ ಅನುದಾನ ಯಾವುದೇ ಕಾರಣಕ್ಕೂ ವ್ಯಪಗತ(ಲ್ಯಾಪ್ಸ್) ಆಗಬಾರದು. ಒಂದು ವೇಳೆ ಅನುದಾನ ವ್ಯಪಗತವಾದರೆ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ಮತ್ತು ತಾಲ್ಲೂಕು ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿಗಳನ್ನು ಹೊಣೆ ಮಾಡಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಎಲ್.ಕೆ.ಅತೀಕ್ ಎಚ್ಚರಿಕೆ ನೀಡಿದರು. ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಬುಧವಾರ (ಫೆ.24) ನಡೆದ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು …
Read More »ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಜಿಲ್ಲಾ ಪ್ರವಾಸ.!
ಗೋಕಾಕ್: ಜಲ ಸಂಪನ್ಮೂಲ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಅವರು ಫೆ.೨೭ ರಿಂದ ಮಾ.೨ ರ ವರಗೆ ಬೆಳಗಾವಿ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಫೆ.೨೭ ರಂದು ೧೦ ಗಂಟೆಗೆ ನಗರದ ಎನ್‌ಇಎಸ್ ಶಾಲಾ ಆವರಣದಲ್ಲಿ ನಡೆಯಲಿರುವ ತಾಲೂಕು ಮಟ್ಟದ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಪಾಲ್ಗೊಂಡು, ಸಂಜೆ ನಗರದಲ್ಲಿ ವಾಸ್ತವ್ಯ ಮಾಡಲಿದ್ದಾರೆ. ಫೆ.೨೮ ರಂದು ಗೋಕಾಕ ತಾಲೂಕಿನ ಜಮನಾಳ ಗ್ರಾಮದ ಸಿದ್ದಲಿಂಗೇಶ್ವರ ದೇವಸ್ಥಾನದ ಹತ್ತಿರ ಆಣೆಕಟ್ಟು ಸ್ಥಳ …
Read More »ಮಠದ ಆಸ್ತಿ ಕಬಳಿಸಲು ಹುನ್ನಾರ: ವಿದ್ಯಾರಣ್ಯ ಭಾರತೀ ಸ್ವಾಮೀಜಿ ಆರೋಪ
ಚಿತ್ರದುರ್ಗ: ಶಿವಮೊಗ್ಗ ಜಿಲ್ಲೆಯ ಕೂಡಲಿ ಶೃಂಗೇರಿ ಶಂಕರಾಚಾರ್ಯ ಮಹಾಸಂಸ್ಥಾನಕ್ಕೆ ಸೇರಿದ ಆಸ್ತಿಯನ್ನು ಕಬಳಿಸಲು ಗುಂಪೊಂದು ಹುನ್ನಾರ ನಡೆಸಿದೆ ಎಂದು ಮಹಾಸಂಸ್ಥಾನದ ಪೀಠಾಧಿಪತಿ ವಿದ್ಯಾಭಿನವ ವಿದ್ಯಾರಣ್ಯ ಭಾರತೀ ಸ್ವಾಮೀಜಿ ಆರೋಪ ಮಾಡಿದರು. ‘ಈಚೆಗೆ ಮಠದೊಳಗೆ ಏಕಾಏಕಿ ನುಗ್ಗಿದ ಗುಂಪೊಂದು ಶಿಷ್ಯರ ಮೇಲೆ ಹಲ್ಲೆ ಮಾಡಿದೆ. ಈ ಕುರಿತು ಪ್ರಕರಣ ದಾಖಲಿಸಿದ್ದೇವೆ. ಅದೇ ಊರಿನವರೇ ಇದರಲ್ಲಿ ಭಾಗಿಯಾಗಿದ್ದಾರೆ’ ಎಂದು ಗುರುವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ‘ಮಹಾಸಂಸ್ಥಾನಕ್ಕೆ ಐತಿಹಾಸಿಕ ಹಿನ್ನೆಲೆ ಇದೆ. ಬೆಂಗಳೂರು ಸೇರಿ ರಾಜ್ಯದ …
Read More »ಒಡಿಶಾದಲ್ಲಿ 45 ಕೆ.ಜಿ. ಆನೆ ದಂತ ವಶ, ಇಬ್ಬರ ಬಂಧನ
ಬಾರಿಪಾದ (ಒಡಿಶಾ), ಫೆ.25 (ಪಿಟಿಐ)- ರಾಜ್ಯದ ಮಯೂರ್‍ಭಾನ್ಜ ಜಿಲ್ಲೆಯಲ್ಲಿ 45 ಕಿಲೋ ಗ್ರಾಂ ತೂಕವುಳ್ಳ ಎಂಟು ಆನೆ ದಂತಗಳನ್ನು ವಶಪಡಿಸಿಕೊಂಡು, ಇದಕ್ಕೆ ಸಂಬಂಧಪಟ್ಟಂತೆ ಇಬ್ಬರನ್ನು ಬಂಸಲಾಗಿದೆ ಎಂದು ಒಡಿಶಾ ಅರಣ್ಯ ಇಲಾಖೆ ಅಕಾರಿಗಳು ತಿಳಿಸಿದ್ದಾರೆ. ಖಚಿತ ಸುಳಿವಿನ ಮೇರೆಗೆ ಕಾರ್ಯಾಚರಣೆ ನಡೆಸಿದ ಉದಾಲಾ ವಲಯದ ಅರಣ್ಯ ಸಿಬ್ಬಂದಿ ಸಿಮಿಲ್ಪಾಲ್ ರಾಷ್ಟ್ರೀಯ ಉದ್ಯಾನವನ ತಪ್ಪಲಿನ ಅಂಗರ್ಪಾದ ಗ್ರಾಮಕ್ಕೆ ಭೇಟಿ ನೀಡಿ, ಆನೆ ದಂತ ಖರೀದಿದಾರರಂತೆ ನಟಿಸಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ದಂತಗಳನ್ನು ವಶಕ್ಕೆ …
Read More »ಅರಣ್ಯ ಸಿಬ್ಬಂದಿಗೆ ಇಂಧನ ಭತ್ಯೆ ಅಗತ್ಯ: ಲಿಂಬಾವಳಿ
ಬೆಂಗಳೂರು: ಅರಣ್ಯ ರಕ್ಷಣೆಯಲ್ಲಿ ಮಹತ್ವದ ಪಾತ್ರ ನಿರ್ವಹಿಸುತ್ತಿರುವ ಅರಣ್ಯ ಇಲಾಖೆಯ ಕೆಳಹಂತದ ಸಿಬ್ಬಂದಿಗೆ ಇಂಧನ ಭತ್ಯೆ ನೀಡಬೇಕಾದ ಅಗತ್ಯವಿದೆ ಎಂದು ಅರಣ್ಯ ಸಚಿವ ಅರವಿಂದ ಲಿಂಬಾವಳಿ ಹೇಳಿದರು. ಅರಣ್ಯ ಭವನದಲ್ಲಿ ಬುಧವಾರ ನಡೆದ ಹಿರಿಯ ಐಎಫ್‌ಎಸ್ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ‘ಇಲಾಖೆಯ ಕೆಳಹಂತದ ಸಿಬ್ಬಂದಿಗೆ ವಾಹನ ಸೌಲಭ್ಯ ನೀಡಿಲ್ಲ. ಅರಣ್ಯ ರಕ್ಷಣೆಗಾಗಿ ಅವರು ಸ್ವಂತ ವಾಹನವನ್ನೇ ಬಳಕೆ ಮಾಡುತ್ತಿದ್ದಾರೆ. ಅಂತಹ ಸಿಬ್ಬಂದಿಗೆ ಇಂಧನ ಭತ್ಯೆಯನ್ನಾದರೂ ನೀಡಬೇಕಿದೆ’ ಎಂದರು. ಕಾಡು ಪ್ರಾಣಿಗಳ …
Read More »ಮೈಸೂರು ಮೇಯರ್ ಆಯ್ಕೆ ಹಿಂದೆ ಚಾಮುಂಡೇಶ್ವರಿ ಪರ್ಯಾಯ ನಾಯಕತ್ವದ ಲೆಕ್ಕಾಚಾರ?
ಮೈಸೂರು: ಮೇಯರ್ ಸ್ಥಾನಕ್ಕೆ ಜೆಡಿಎಸ್‌ನಲ್ಲಿ ಆರು ಜನರು ಆಕಾಂಕ್ಷಿಗಳಿದ್ದರೂ; ರುಕ್ಮಿಣಿ ಅವರನ್ನೇ ಕುಮಾರಸ್ವಾಮಿ ಆಯ್ಕೆ ಮಾಡಿದ್ದರ ಹಿಂದೆ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷ ಬಲವರ್ಧನೆಗೊಳಿಸುವ ತಂತ್ರಗಾರಿಕೆ ಇದೆ ಎನ್ನಲಾಗಿದೆ. ರುಕ್ಮಿಣಿ ಪತಿ ಮಾದೇಗೌಡ, ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಶ್ರೀರಾಮಪುರ ಜಿಲ್ಲಾ ಪಂಚಾಯಿತಿ ಕ್ಷೇತ್ರದ ಜೆಡಿಎಸ್ ಸದಸ್ಯರು. ಶಾಸಕ ಜಿ.ಟಿ.ದೇವೇಗೌಡ, ಜಿಲ್ಲಾ ಪಂಚಾಯಿತಿ ಚುನಾವಣೆ ಸಂದರ್ಭ ಮಾದೇಗೌಡರಿಗೆ ಟಿಕೆಟ್ ನಿರಾಕರಿಸಿದ್ದರು. ಮಾದೇಗೌಡ, ಕುಮಾರಸ್ವಾಮಿ ಬಳಿಗೆ ತೆರಳಿ ಮಾತುಕತೆ ನಡೆಸಿ ಪಕ್ಷದ ‘ಬಿ’ …
Read More »ಖಾಸಗಿ ಶಾಲೆ ಮಾಲೀಕ ಆತ್ಮಹತ್ಯೆ! ಸಾವಿಗೂ ಮುನ್ನ ಬರೆದ ಡೆತ್ನೋಟ್ನಲ್ಲಿದೆ ನೋವು
ಕಲಬುರಗಿ: ವಿಷ ಸೇವಿಸಿ ಖಾಸಗಿ ಶಾಲೆಯ ಮಾಲೀಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯಲ್ಲಿ ಸಂಭವಿಸಿದೆ. ಕಲಬುರಗಿಯ ವಿವೇಕಾನಂದ್ ನಗರದ ನಿವಾಸಿ ಶಂಕರ್ ಬಿರಾದರ್(43) ಮೃತ ದುರ್ದೈವಿ. ಸೇಡಂ ತಾಲೂಕಿನಲ್ಲಿ ಖಾಸಗಿ ಶಾಲೆ ಹೊಂದಿರುವ ಶಂಕರ್ ಬಿರಾದರ್, ಡೆತ್ನೋಟ್ ಬರೆದಿಟ್ಟು ಮನೆಯಲ್ಲೇ ವಿಷ ಕುಡಿದು ಸತ್ತಿದ್ದಾರೆ. ಸಾಲಭಾದೆ ಮತ್ತು ಸಾಲಗಾರರ ಕಿರುಳಕ್ಕೆ ಬೇಸತ್ತ ಶಂಕರ್ ಬಿರಾದಾರ್ ಸಾವಿನ ಮನೆಯ ಕದ ತಟ್ಟಿದ್ದಾರೆ. ಖಾಸಗಿ ಶಾಲೆ ನಡೆಸಲು ಸಾಲ ಮಾಡಿಕೊಂಡಿದ್ದರು. ಸಾಲ ಪಾವತಿಸಿಲ್ಲ ಎಂದು …
Read More »ಬೋಧನಾ ಶುಲ್ಕ ಕಡಿತ: ಹೈಕೋರ್ಟ್ ನೋಟಿಸ್
ಬೆಂಗಳೂರು: ಬೋಧನಾ ಶುಲ್ಕ ಶೇ 70ರಷ್ಟು ಮಾತ್ರ ಪಡೆಯಬೇಕು ಎಂದು ಸರ್ಕಾರ ಹೊರಡಿಸಿದ್ದ ಸುತ್ತೋಲೆ ಪ್ರಶ್ನಿಸಿ ಖಾಸಗಿ ಶಾಲೆಗಳ ಸಂಘಗಳು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ನೀಡಿದೆ. ‘ಶೇ 70ರಷ್ಟು ಶುಲ್ಕ ಸಂಗ್ರಹಿಸಬೇಕು ಮತ್ತು ಶುಲ್ಕದ ವಿವರ ಒಳಗೊಂಡ ಪಟ್ಟಿ ಪ್ರಕಟಿಸಬೇಕು. ಲೆಕ್ಕಪರಿಶೋಧನಾ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಬೇಕು ಎಂದು ಸುತ್ತೋಲೆ ಹೊರಡಿಸಿ ಸರಿಯಲ್ಲ’ ಎಂದು ಕರ್ನಾಟಕ ರಾಜ್ಯ ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆಗಳ ನಿರ್ವಹಣಾ ಒಕ್ಕೂಟ …
Read More »ಬಿಎಂಟಿಸಿ ಪ್ರಯಾಣ ದರ ಏರಿಸಲು ಪ್ರಸ್ತಾವನೆ ಬಂದಿದೆ: ಲಕ್ಷ್ಮಣ ಸವದಿ
ಬೆಂಗಳೂರು: ಬಿಎಂಟಿಸಿ ಪ್ರಯಾಣ ದರ ಏರಿಸುವ ಬಗ್ಗೆ ನಿಗಮದಿಂದ ಪ್ತಸ್ತಾವನೆ ಬಂದಿದ್ದು, ಈ ಸಂಬಂಧ ಮುಖ್ಯಮಂತ್ರಿ ಅಂತಿಮ ತೀರ್ಮಾನ ತೆಗೆದುಕೊಳ್ಳಲಿದ್ದಾರೆ ಎಂದು ಉಪಮುಖ್ಯಮಂತ್ರಿ ಲಕ್ಷ್ಮಣಸವದಿ ತಿಳಿಸಿದರು. ಉಳಿದ ನಿಗಮಗಳಲ್ಲಿ ಕಳೆದ ವರ್ಷವೇ ಶೇ 13 ರಷ್ಟು ಏರಿಕೆ ಮಾಡಲಾಗಿದೆ. ಬಿಎಂಟಿಸಿ ಶೇ 18 ರಿಂದ ಶೇ 20 ರಷ್ಟು ಏರಿಕೆಗೆ ಪ್ರಸ್ತಾವನೆ ಸಲ್ಲಿಸಿದೆ. ಅಷ್ಟು ಪ್ರಮಾಣ ಏರಿಕೆ ಸಾಧ್ಯವಿಲ್ಲ. ಪ್ರಯಾಣಿಕರಿಗೆ ಹೊರೆ ಆಗದಂತೆ ಏರಿಕೆ ಗೆ ಮನವಿ ಮಾಡಲಾಗುವುದು. ಅಂತಿಮ ನಿರ್ಧಾರ …
Read More »ಎಲ್ ಪಿಜಿ ಸಿಲಿಂಡರ್ ಬೆಲೆ ಮತ್ತೆ ಏರಿಕೆ
ನವದೆಹಲಿ: ತೈಲ ಕಂಪೆನಿ ಇಂಡಿಯನ್ ಆಯಿಲ್ ಕಂಪೆನಿಯು ಫೆಬ್ರವರಿಯಲ್ಲಿ ಮೂರನೇ ಸಲ ಗ್ಯಾಸ್ ಸಿಲಿಂಡರ್ ಬೆಲೆಯ ಏರಿಕೆ ಮಾಡಿದೆ. ಪ್ರತೀ 14.2 ಕೆಜಿ ಎಲ್ ಪಿಜಿ ಸಿಲಿಂಡರ್ ಬೆಲೆಯನ್ನು 769ರಿಂದ 794ಕ್ಕೆ ಏರಿಕೆ ಮಾಡಿದೆ. ಇದಕ್ಕೆ ಮೊದಲು ಫೆಬ್ರವರಿ 4 ಮತ್ತು 14ರಂದು ಬೆಲೆ ಏರಿಕೆ ಮಾಡಲಾಗಿತ್ತು. ಡಿಸೆಂಬರ್ ನಲ್ಲಿ ಕೂಡ ಎರಡು ಸಲ ಸಿಲಿಂಡರ್ ಬೆಲೆ ಏರಿಕೆ ಮಾಡಲಾಗಿತ್ತು. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆಯು ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಿಲಿಂಡರ್ …
Read More »
Laxmi News 24×7