Breaking News

ರಾಜ್ಯ

ನಾಳೆ ಸಚಿವ ಈಶ್ವರಪ್ಪರಿಂದ ಕವಲಗುಡ್ಡದ ಶ್ರೀ ಅಮೋಘಸಿದ್ಧ ಶಾಲೆಯ 14 ಕೊಠಡಿಗಳ ಲೋಕಾರ್ಪಣೆ..ಅಮರೇಶ್ವರ ಮಹಾರಾಜರು

ಕಾಗವಾಡ ತಾಲೂಕಿನ ಸಿದ್ಧಶ್ರೀ ಸಂಸ್ಥಾನ ಶ್ರೀ. ಕರಿಯೋಗಸಿದ್ಧ ಕನ್ನಡ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆ, ಕೌಲಗುಡ್ಡ ಇಲ್ಲಿಗೆ ಕಟ್ಟಿಸಿದ 14 ನೂತನ ಕೋಣೆಗಳ ಕಟ್ಟಡದ ಉದ್ಘಾಟನೆ ಸಮಾರಂಭ ಗುರುವಾರ ರಂದು ಬೆಳಿಗ್ಗೆ 10 ಗಂಟೆಗೆ ಕರ್ನಾಟಕ ರಾಜ್ಯದ ಗ್ರಾಮಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪಾ ಇವರು ಸ್ವಾಮೀಜಿಗಳ ಸಾನ್ನಿಧ್ಯದಲ್ಲಿ ನೆರವೇರಿಸಲಿದ್ದಾರೆಯೆಂದು ಸಿದ್ಧಯೋಗಿ ಅಮರೇಶ್ವರ ಮಹಾರಾಜರು ಮಾಹಿತಿ ನೀಡಿದರು. ಬುಧವಾರ ರಂದು ಇನ್ ವಾಹಿನಿಗೆ ಸಿದ್ಧಯೋಗಿ ಅಮರೇಶ್ವರ ಮಹಾರಾಜರು ಮಾಹಿತಿ ನೀಡುವಾಗ, ಕರಿಯೋಗಸಿದ್ಧ ಕನ್ನಡ …

Read More »

ಟಿಕೇಟ್ ಅಸಲಿ ಆಟ ಇನ್ನು ಶುರು ಇಂದಿನಿಂದಲೇ ನೀತಿ ಸಂಹಿತೆ ಜಾರಿ!

ನವದೆಹಲಿ. ಕೇಂದ್ರ ಸಚಿವ ಸುರೇಶ ಅಂಗಡಿ ಅವರ ನಿಧನದ ನಂತರ ತೆರವಾದ ಸ್ಥಾನಕ್ಕೆ ನಡೆಯುವ ಉಪ ಚುನಾವಣೆಯ  ದಿನಾಂಕ ಇಂದು ಘೋಷಣೆಯಾಗುವ ಸಾಧ್ಯತೆ ಇದೆ. ಕೇಂದ್ರ ಚುನಾವಣೆ ಆಯೋಗ ಈ ಸಂಬಂಧ ಬುಧವಾರ ಬೆಳಿಗ್ಗೆ  11 ಕ್ಕೆ ಪತ್ರಿಕಾಗೋಷ್ಠಿ ಕರೆದಿದೆ. ಆಸ್ಸಾಂ, ಪಶ್ಚಿಮ ಬಂಗಾಳ, ಪುದುಚೆರಿ, ತಮಿಳುನಾಡು ಹಾಗೂ ಕೇರಳ ರಾಜ್ಯಗಳಲ್ಲಿ ಚುನಾವಣೆ ನಡೆಯಬೇಕಿದೆ.‌ ಇವುಗಳ ಜೊತೆಗೆ ಬೆಳಗಾವಿ ಉಪ ಚುನಾವಣೆ ಕೂಡ ನಡೆಯಬಹುದು. ಅದಕ್ಕೆ ತಕ್ಣದಿಂದಲೇ ನೀತಿ ಸಂಹಿತೆ …

Read More »

ಕ್ವಾರಿ ಸ್ಪೋಟ ಪಿಎಸ್ಐ ಅಮಾನತ್

ಬೆಂಗಳೂರು ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆಯ ಹಿರೇನಾಗವಲ್ಲಿ ಕ್ವಾರಿಯಲ್ಲಿ ಸಂಭವಿಸಿದ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಗುಡಿಬಂಡೆ ಪೊಲೀಸ್ ಠಾಣೆ ಪಿಎಸ್ ಐ ಆರ್ ಗೋಪಾಲ ರೆಡ್ಡಿ ಅಮಾನತು ಮಾಡಲಾಗಿದೆ. ,ಈ ಕುರಿತಂತೆ ಗೃಹ ಇಲಾಖೆ ಆದೇಶ ಜಾರಿ ಮಾಡಿದೆ ಕ್ವಾರಿಯ ಮೇಲೆ ದಾಳಿ ನಡೆದ ನಂತರ ಆರೋಪಿಗಳನ್ನು ದಸ್ತಗಿರಿ  ಮಾಡಲು   psi ಗೋಪಾಲ ರೆಡ್ಡಿ ಪ್ರಾಮಾಣಿಕ ಪ್ರಯತ್ನ ಮಾಡಿಲ್ಲ. ಪ್ರಕರಣ ದಾಖಲಿಸಿದ ಬಗ್ಗೆ ಪೊಲೀಸ್ ಐಟಿ ತಂತ್ರಾಂಶದಲ್ಲಿ ನಮೂದಿಸಿಲ್ಲ ಎಂದು ಹೇಳಲಾಗಿದೆ‌   ಪ್ರಕರಣದ …

Read More »

ನೀರಾವರಿ ಬಗ್ಗೆ ಚರ್ಚೆ……..?

ನವದೆಹಲಿ. ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಭೇಟಿ ಮಾಡಿದ ರಾಜ್ಯದ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ‌  ; ಕೃಷ್ಣಾ, ಕಾವೇರಿ ಮತ್ತು ಮಹದಾಯಿ ನೀರಾವರಿ ಯೋಜನೆಗಳ ಅನುಷ್ಠಾನದ ಬಗ್ಗೆ ಚರ್ಚೆ ನಡೆಸಿದರು. ನವದೆಹಲಿಯ ಕೇಂದ್ರ ಜಲಶಕ್ತಿ  ಸಚಿವರ ಕಾರ್ಯಾಲಯದಲ್ಲಿ ಈ ಚರ್ಚೆ ನಡೆಯುತ್ತಿದೆ. ..

Read More »

ಇಂಧನ ದರ ಇಳಿಸುವಂತೆ ಯುವ ಮುಖಂಡ ರಾಹುಲ್ ಜಾರಕಿಹೊಳಿ ಆಗ್ರಹ

ಗೋಕಾಕ: “ಕೇಂದ್ರ ಸರ್ಕಾರ ಕೂಡಲೇ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಇಳಿಸಬೇಕು. ರೈತ ವಿರೋಧಿ ಕೃಷಿ ಕಾನೂನುಗಳನ್ನು ಹಿಂಪಡೆಯಬೇಕು” ಎಂದು ಯುವ ಮುಖಂಡ ರಾಹುಲ್ ಜಾರಕಿಹೊಳಿ ಆಗ್ರಹಿಸಿದರು. ನಗರದಲ್ಲಿ ಬುಧವಾರ ನಡೆದ ಕಾಂಗ್ರೆಸ್ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಿಂದ ಜನಸಾಮಾನ್ಯರಿಗೆ ತೊಂದರೆಯಾಗುತ್ತಿದೆ. ಕೋವಿಡ್ ನಿಂದಾಗಿ ಜನರು ಈಗಾಗಲೇ ಆರ್ಥಿಕ ಸಂಕಷ್ಟದಲ್ಲಿದ್ದಾರೆ. ಈಗ ಅಗತ್ಯ ವಸ್ತುಗಳ ಬೆಲೆಗಳು ಏರಿಕೆಯಾಗಿರುವುದರಿಂದ ಜನಸಾಮಾನ್ಯರಿಗೆ ಹೆಚ್ಚಿನ ಹೊರೆಯಾಗುತ್ತದೆ. ಹೀಗಾಗಿ, …

Read More »

ಶಾರದಾ ಚಿಟ್ ಫಂಡ್ ಹಗರಣ: ಐಪಿಎಸ್ ಅಧಿಕಾರಿ ರಾಜೀವ್ ಕುಮಾರ್ ವಿಚಾರಣೆ 2 ವಾರ ಮುಂದೂಡಿದ ಸುಪ್ರೀಂ ಕೋರ್ಟ್

ದೆಹಲಿ: ಇಡೀ ದೇಶದ ಗಮನವನ್ನು ಸೆಳೆದಿದ್ದ ಶಾರದಾ ಚಿಟ್ ಫಂಡ್ ಹಗರಣದ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಕೋಲ್ಕತ್ತಾ ಪೋಲಿಸ್ ಆಯುಕ್ತ ರಾಜೀವ್ ಕುಮಾರ್ ಮತ್ತು ಇತರೆ ಆರೋಪಿಗಳ ವಿಚಾರಣೆಯನ್ನು ಎರಡು ವಾರ ಕಾಲ ಮುಂದೂಡಿದೆ. ಸಿಬಿಐ ಸಲ್ಲಿಸಿದ್ದ ಮನವಿ ಆಧರಿಸಿ ವಿಚಾರಣೆ ಕೈಗೆತ್ತಿಕೊಂಡಿದ್ದ ಸರ್ವೋಚ್ಛ ನ್ಯಾಯಾಲಯ ಈ ಹಗರಣದ ವಿಚಾರಣೆಯನ್ನು ಎರಡು ವಾರಗಳ ಕಾಲ ಮುಂದೂಡಿದೆ. ಅತಿ ಹೆಚ್ಚು ಬಡ್ಡಿ ದರ ನೀಡುವ ಆಮಿಷವೊಡ್ಡಿ ನಡೆಯುತ್ತಿದ್ದ ಹಗರಣ 2013 …

Read More »

ಅಧಿಕಾರಿಗಳ ಕಿರುಕುಳ : ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾದ ಪೌರಕಾರ್ಮಿಕ

ಮಂಡ್ಯ: ಬಲವಂತವಾಗಿ ಮ್ಯಾನ್ ಹೋಲ್ ಗಿಳಿಸಿ ಮಲ ಸ್ವಚ್ಛಗೊಳಿಸಿದ್ದ ಪ್ರಕರಣದಲ್ಲಿ ಬಲಿಪಶುವಾಗಿದ್ದ ಪೌರಕಾರ್ಮಿಕ ನಾರಾಯಣ ಪುರಸಭೆ ಅಧಿಕಾರಿಗಳ ಕಿರುಕುಳ ತಾಳಲಾರದೆ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮದ್ದೂರಿನಲ್ಲಿ ನಡೆದಿದೆ. ಕೆಲ ದಿನಗಳ ಹಿಂದೆ ಪೌರಕಾರ್ಮಿಕ ನಾರಾಯಣನನ್ನು ಮದ್ದೂರು ಪುರಸಭೆಯ ಮುಖ್ಯಾಧಿಕಾರಿ ಮುರುಗೇಶ್, ಆರೋಗ್ಯ ನಿರೀಕ್ಷಕ ಝಾಸಿಂಖಾನ್, ಪುರಸಭೆ ಅಧ್ಯಕ್ಷ ಸುರೇಶ್ ಕುಮಾರ್ ಬಲವಂತವಾಗಿ ಮ್ಯಾನ್ ಹೋಲ್‌ಗಿಳಿಸಿ ಬರಿಗೈಯ್ಯಲ್ಲಿ ಮಲ ಸ್ವಚ್ಛಗೊಳಿಸಿದ್ದರು ಎಂದು ಆರೋಪಿಸಲಾಗಿತ್ತು. ಈ ಪ್ರಕರಣ ಮಾದ್ಯಮಗಳಲ್ಲಿ ಸೋರಿಕೆಯಾಗಲು …

Read More »

ಕೋವಿಡ್ ನೆಗೆಟಿವ್ ವರದಿ ಇಲ್ಲದೇ ಬರುವ ಜನರು ಪರದಾಡುವಂತೆ ಆಗಿದೆ.

ಕಲಬುರಗಿ: ಕೋವಿಡ್ ಸೋಂಕಿನ ಎರಡನೇ ಅಲೆಯ ನಿಯಂತ್ರಣಕ್ಕಾಗಿ ರಾಜ್ಯದ ಮಹಾರಾಷ್ಟ್ರ ಗಡಿ ಭಾಗದಲ್ಲಿ ಮಂಗಳವಾರ ಬಿಗಿ ಕ್ರಮ ವಹಿಸಲಾಗಿದ್ದು, ಕೋವಿಡ್ ನೆಗೆಟಿವ್ ವರದಿ ಇಲ್ಲದೇ ಬರುವ ಜನರು ಪರದಾಡುವಂತೆ ಆಗಿದೆ. ತಮ್ಮನ ಅಂತ್ಯಸಂಸ್ಕಾರದಲ್ಲಿ ಪಾಲ್ಗೊಳ್ಳಲು ಬಂದ ಮಹಿಳೆಯೊಬ್ಬರಿಗೆ ಗಡಿ ಪ್ರದೇಶಿಸಲು ಅವಕಾಶ ನೀಡದೆ ತಡೆದ ಘಟನೆ ಜಿಲ್ಲೆಯ ಬಳ್ಳೂರ್ಗಿ ಚೆಕ್ ಪೋಸ್ಟ್ ನಲ್ಲಿ ನಡೆದಿದೆ. ಮಹಾರಾಷ್ಟ್ರದಿಂದ ಅಫಜಲಪುರ ತಾಲೂಕಿನ ಬಳ್ಳೂರ್ಗಿ ಮಾರ್ಗವಾಗಿ ಮಹಿಳೆಯೊಬ್ಬರು, ವಿಜಯಪುರ ಜಿಲ್ಲೆಯ ಮೋರಟಗಿ ಗ್ರಾಮದಲ್ಲಿ ರಸ್ತೆ …

Read More »

ಆಸ್ಪತ್ರೆಯಲ್ಲಿ ಯಾರೂ ಇಲ್ಲದ ವೇಳೆ ಮೈಮುಟ್ಟಿ ಕಿರುಕುಳ

ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನ ಅಕ್ಕಿಆಲೂರು ಸಮುದಾಯ ಆರೋಗ್ಯ ಕೇಂದ್ರದಲ್ಲಿ ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಕೇಳಿಬಂದಿದೆ. ಗುತ್ತಿಗೆ ಕಾರ್ಮಿಕರಾಗಿ ಕಳೆದ ಎರಡು ವರ್ಷಗಳಿಂದ ಕೆಲಸ ಮಾಡುತ್ತಿರುವ 33 ವರ್ಷದ ಮಹಿಳೆಗೆ ಆಸ್ಪತ್ರೆಯಲ್ಲಿ ಎಕ್ಸರೇ ಟೆಕ್ನಿಷಿಯನ್ ಆಗಿರುವ ವ್ಯಕ್ತಿ ಲೈಂಗಿಕ ಕಿರುಕುಳ ನೀಡಿದ್ದಾನೆಂದು ಆರೋಪಿಸಲಾಗಿದೆ. ಹಾನಗಲ್ ಠಾಣೆ ಪೊಲೀಸರಿಗೆ ದೂರು ನೀಡಲಾಗಿದ್ದು, ಆಸ್ಪತ್ರೆಯಲ್ಲಿ ಯಾರೂ ಇಲ್ಲದ ವೇಳೆ ಮೈಮುಟ್ಟಿ ಕಿರುಕುಳ ನೀಡಲಾಗಿದೆ ಎಂದು ಹೇಳಲಾಗಿದೆ. ಮೊಬೈಲ್ನಲ್ಲಿ ಆತ …

Read More »

ಚಿಕ್ಕೋಡಿಯ ಈ ಆಸ್ಪತ್ರೆಯಲ್ಲಿ ಹಿತ್ತಲ ಗಿಡ ‘ಮದ್ದು’

ಚಿಕ್ಕೋಡಿ: ಇಲ್ಲಿನ ಸಾರ್ವಜನಿಕ ಆಸ್ಪತ್ರೆಯ ಆಯುಷ್ ವೈದ್ಯಾಧಿಕಾರಿ ಒಬ್ಬರು ರೋಗಿಗಳ ಆರೋಗ್ಯ ಸೇವೆಯೊಂದಿಗೆ ಆಸ್ಪತ್ರೆ ಆವರಣದಲ್ಲಿ ಆಯುರ್ವೇದ ಸಸ್ಯೋದ್ಯಾನ ಅಭಿವೃದ್ಧಿಪಡಿಸಿ, ಆಯುರ್ವೇದ ಔಷಧಿ ಕುರಿತು ಜನಜಾಗೃತಿ ಮೂಡಿಸುವ ಮೂಲಕ ಗಮನ ಸೆಳೆಯುತ್ತಿದ್ದಾರೆ. ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಆಯುಷ್ ವೈದ್ಯಾಧಿಕಾರಿಯಾಗಿರುವ ಡಾ.ಲಕ್ಷ್ಮೀಕಾಂತ ಕಡ್ಲೆಪ್ಪಗೋಳ ಅವರು ಆಸ್ಪತ್ರೆ ಆವರಣ ಖಾಲಿ ಜಾಗದಲ್ಲಿ ಆಯುರ್ವೇದದ ಸಸಿಗಳನ್ನು ಬೆಳೆಸಿದ್ದಾರೆ. ಡಾ.ಕಡ್ಲೆಪ್ಪಗೋಳ ಅವರು ಸರ್ಕಾರ ಜಾರಿಗೊಳಿಸಿದ್ದ ‘ಕಾಯಕಲ್ಪ’ ಯೋಜನೆಯನ್ನು ಬಳಸಿಕೊಂಡು ಆಸ್ಪತ್ರೆಯ ಆವರಣದ ಮೂಲೆಯೊಂದರಲ್ಲಿ ಪಾಳು ಬಿದ್ದಿದ್ದ …

Read More »