ಬೆಂಗಳೂರು: ಪ್ರಧಾನಿ ಇಂದಿರಾ ಗಾಂಧಿಯವರು 1975ರಲ್ಲಿ ದೇಶದಲ್ಲಿ ತುರ್ತು ಪರಿಸ್ಥಿತಿ ಘೋಷಿಸಿದ್ದರು. ಕೇವಲ ತಮ್ಮ ಅಧಿಕಾರಕ್ಕಾಗಿ ನಮ್ಮ ಪವಿತ್ರ ಸಂವಿಧಾನವನ್ನೇ ಆಗ ಬಲಿ ಕೊಡಲಾಗಿತ್ತು ಎಂದು ಬಿಜೆಪಿ ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯ ಮತ್ತು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬೇಸರ ವ್ಯಕ್ತಪಡಿಸಿದರು. “ಸಿಟಿಜನ್ ಫಾರ್ ಸೋಷಿಯಲ್ ಜಸ್ಟೀಸ್ ಬೆಂಗಳೂರು” ವತಿಯಿಂದ ಇಂದು ಟೌನ್ ಹಾಲ್ ನಲ್ಲಿ “1975ರ ತುರ್ತು ಪರಿಸ್ಥಿತಿ 50ನೇ ವರ್ಷ-ಕರಾಳ ದಿನಗಳು” ಎನ್ನುವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಆಗ …
Read More »ಮದ್ಯದಂಗಡಿ ನವೀಕರಣ ಶುಲ್ಕ ಶೇ.50ರಷ್ಟು ಹೆಚ್ಚಿಸಿ ರಾಜ್ಯ ಸರ್ಕಾರದ ಆದೇಶ
ಬೆಂಗಳೂರು: ಮದ್ಯದಂಗಡಿ ಮಾಲೀಕರ ವಿರೋಧದ ಹಿನ್ನೆಲೆ ಪರವಾನಗಿ ನವೀಕರಣ ಶುಲ್ಕ ಶೇ.50 ರಷ್ಟು ಹೆಚ್ಚಿಸಿ ರಾಜ್ಯ ಸರ್ಕಾರ ಅಂತಿಮ ಆದೇಶ ಹೊರಡಿಸಿದೆ. ಜುಲೈ 1ರಿಂದ ಈ ಪರಿಷ್ಕೃತ ನವೀಕರಣ ಶುಲ್ಕ ಜಾರಿಗೆ ಬರಲಿದೆ. ಈ ಮುಂಚೆ ರಾಜ್ಯ ಸರ್ಕಾರದ ಪರವಾನಗಿ ಶುಲ್ಕ ಶೇ.100ರಷ್ಟು ಹೆಚ್ಚಿಸಿ ಕರಡು ಅಧಿಸೂಚನೆ ಹೊರಡಿಸಿತ್ತು. ಆದರೆ, ಮದ್ಯದಂಗಡಿ ಮಾಲೀಕರಿಂದ ಇದಕ್ಕೆ ಭಾರೀ ವಿರೋಧ ವ್ಯಕ್ತವಾಗಿತ್ತು. ಮದ್ಯದಂಗಡಿ ಮಾಲೀಕರು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ನವೀಕರಣ ಶುಲ್ಕ ಶೇ.100ರಷ್ಟು …
Read More »ರಾಷ್ಟ್ರಪತಿಗಳು ದ್ರೌಪದಿ ಮುರ್ಮು ಅವರನ್ನು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೊತೆಗೆ ಲೋಕೋಪಯೋಗಿ ಸಚಿವರಾದ ಸತೀಶ ಜಾರಕಿಹೊಳಿ ಅವರು ರಾಷ್ಟ್ರಪತಿ ನಿವಾಸದಲ್ಲಿ ಭೇಟಿ
ಗೌರವಾನ್ವಿತ ರಾಷ್ಟ್ರಪತಿಗಳು ದ್ರೌಪದಿ ಮುರ್ಮು ಅವರನ್ನು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೊತೆಗೆ ಲೋಕೋಪಯೋಗಿ ಸಚಿವರಾದ ಸತೀಶ ಜಾರಕಿಹೊಳಿ ಅವರು ರಾಷ್ಟ್ರಪತಿ ನಿವಾಸದಲ್ಲಿ ಭೇಟಿಯಾಗಿ, ಸನ್ಮಾನಿಸಿದರು ಭಾರತ ಸರ್ಕಾರದೊಂದಿಗೆ ಮಾನ್ಯ ರಾಷ್ಟ್ರಪತಿಗಳ ಅನುಮೋದನೆಗಾಗಿ ಬಾಕಿ ಇರುವ ರಾಜ್ಯದ ಕಾನೂನು ಪ್ರಸ್ತಾವನೆಗಳ ಕುರಿತು ಈ ಸಂದರ್ಭದಲ್ಲಿ ಚರ್ಚೆ ನಡೆಸಿದರು. ಈ ವೇಳೆ ಸಚಿವರಾದ ಕೆ.ಜೆ.ಜಾರ್ಜ್, ಹೆಚ್.ಸಿ.ಮಹದೇವಪ್ಪ, ಸರ್ಕಾರದ ಮುಖ್ಯ ಕಾರ್ಯದರ್ಶಿ ಶ್ರೀಮತಿ ಶಾಲಿನಿ ರಜನೀಶ್ ಅವರು ಉಪಸ್ಥಿತರಿದ್ದರು. #satishjarkiholi #delhi
Read More »ಮನೆ ಮುಂದೆ ಆಟವಾಡುತ್ತಿದ್ದ ಬಾಲಕಿಯನ್ನು ಕರೆದೊಯ್ದು ಅತ್ಯಾಚಾರವೆಸಗಿದ ಇಬ್ಬರು ಅಪ್ರಾಪ್ತರ ಬಂಧನ
ದಾವಣಗೆರೆ: ಬಾಲಕಿ ಮೇಲೆ ಇಬ್ಬರು ಅಪ್ರಾಪ್ತರು ಅತ್ಯಾಚಾರ ಎಸಗಿರುವ ಘಟನೆ ದಾವಣಗೆರೆ ತಾಲೂಕಿನ ಗ್ರಾಮವೊಂದರಲ್ಲಿ ಭಾನುವಾರ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಘಟನೆ ಸಂಬಂಧ ಹದಡಿ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದ್ದು, ಇಬ್ಬರು ಅಪ್ರಾಪ್ತರನ್ನು ವಶಕ್ಕೆ ಪಡೆಯಲಾಗಿದೆ. ಮನೆ ಮುಂದೆ ಆಟವಾಡುತ್ತಿದ್ದ ಏಳು ವರ್ಷದ ಬಾಲಕಿಯನ್ನು ನೆರೆಹೊರೆಯ 15 ಮತ್ತು 17 ವರ್ಷದ ಅಪ್ರಾಪ್ತ ಬಾಲಕರು ಪುಸಲಾಯಿಸಿ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿದ್ದಾರೆ. ಮಗಳು ಕಾಣಿಸದ ಹಿನ್ನೆಲೆ ತಾಯಿ ಹುಡುಕಿಕೊಂಡು …
Read More »ಸರ್ಕಾರಿ ಕಾಲೇಜಿನಲ್ಲಿ ವಿಜ್ಞಾನ ಹಾಗೂ ವಾಣಿಜ್ಯ ಪಿಯು ವಿಭಾಗಕ್ಕೆ ಶಾಸಕ ರಮೇಶ್ ಜಾರಕಿಹೊಳಿ ಚಾಲನೆ
ಸರ್ಕಾರಿ ಕಾಲೇಜಿನಲ್ಲಿ ವಿಜ್ಞಾನ ಹಾಗೂ ವಾಣಿಜ್ಯ ಪಿಯು ವಿಭಾಗಕ್ಕೆ ಶಾಸಕ ರಮೇಶ್ ಜಾರಕಿಹೊಳಿ ಚಾಲನೆ ಗೋಕಾಕ ತಾಲೂಕಿನ ಖನಗಾಂವ ಗ್ರಾಮದ ಸರಕಾರಿ ಆದರ್ಶ ಪದವಿ ಪೂರ್ವ ಕಾಲೇಜಿನಲ್ಲಿ ನೂತನವಾಗಿ ವಿಜ್ಞಾನ ಹಾಗೂ ವಾಣಿಜ್ಯ ವಿಭಾಗಗಳ ಉದ್ಘಾಟನೆಯನ್ನು ಗೋಕಾಕ್ ಶಾಸಕ ರಮೇಶ್ ಜಾರಕಿಹೊಳಿ ಅವರು ನೆರವೇರಿಸಿದರು. ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ಧ ಗೋಕಾಕ ಶಾಸಕರಾದ ರಮೇಶ ಜಾರಕಿಹೊಳಿ ಅವರು ಸಸಿಗೆ ನೀರುಣಿಸಿವ ಮೂಲಕ ಉದ್ಘಾಟನೆ ನೆರವೇರಿಸಿದರು. ಈ ಸಂದರ್ಭದಲ್ಲಿ ಭೀಮನಗೌಡ ಪೊಲೀಸಗೌಡರ,ಬಿಇಓ …
Read More »ಶಾಂತಾಯಿ ವೃದ್ಧಾಶ್ರಮಕ್ಕೆ ನಟ ಸಯ್ಯಾಜಿ ಶಿಂಧೆ ಭೇಟಿ
ಶಾಂತಾಯಿ ವೃದ್ಧಾಶ್ರಮಕ್ಕೆ ನಟ ಸಯ್ಯಾಜಿ ಶಿಂಧೆ ಭೇಟಿ ಬಹುಭಾಷಾ ನಟ ಸಯ್ಯಾಜಿ ಶಿಂಧೆ ಅವರು ಬೆಳಗಾವಿಯ ಶಾಂತಾಯಿ ವೃದ್ಧಾಶ್ರಮಕ್ಕೆ ಭೇಟಿ ನೀಡಿ, ಅಲ್ಲಿನ ವೃದ್ಧರೊಂದಿಗೆ ಬೆರೆತು ಸಮಯ ಕಳೆದರು. ಇಂದು ಬೆಳಗಾವಿಗೆ ಭೇಟಿ ನೀಡಿರುವ ಬಹುಭಾಷಾ ನಟ ಸಯ್ಯಾಜಿ ಶಿಂಧೆ ಅವರು ಬೆಳಗಾವಿಯ ಶಾಂತಾಯಿ ವೃದ್ಧಾಶ್ರಮಕ್ಕೆ ಭೇಟಿ ನೀಡಿ, ಅಲ್ಲಿನ ವೃದ್ಧರೊಂದಿಗೆ ಬೆರೆತು ಸಮಯ ಕಳೆದರು. ಇದೇ ವೇಳೆ ಅವರು ಇತ್ತಿಚೆಗೆ ತಾವು ನಟಿಸಿದ ಆಲ್ ಇಜ್ ವೆಲ್ ಚಿತ್ರವನ್ನು …
Read More »ಕನ್ನಡ ಚಿತ್ರರಂಗದ ಉಳಿವಿಗೆ ಸರ್ಕಾರವೇ ಚಿತ್ರಮಂದಿರ ನಿರ್ಮಿಸಬೇಕು’
ಗಂಗಾವತಿ: ”ಕನ್ನಡ ಚಿತ್ರರಂಗದ ಪಾಲಿಗೆ 70ರಿಂದ 90ರ ದಶಕ ಸುವರ್ಣಯುಗವಾಗಿತ್ತು. ಆದ್ರೀಗ ಸಾಕಷ್ಟು ಸವಾಲುಗಳನ್ನು ಎದುರಿಸುತ್ತಿದೆ. ಕನ್ನಡ ಚಿತ್ರರಂಗದ ಅಳಿವು-ಉಳಿವು ಸರ್ಕಾರದ ಕೈಯಲ್ಲಿದೆ” ಎಂದು ಹಿರಿಯ ನಿರ್ದೇಶಕ ಓಂ ಸಾಯಿ ಪ್ರಕಾಶ್ ತಿಳಿಸಿದರು. ‘ಸೆಪ್ಟಂಬರ್ 10’ ಶೀರ್ಷಿಕೆಯ ಚಿತ್ರದ ಪ್ರಚಾರಾರ್ಥ ಆಗಮಿಸಿದ್ದ ಅವರು ನಗರದಲ್ಲಿ ಈ ಬಗ್ಗೆ ಮಾತನಾಡಿದರು. ‘…ಇಲ್ಲವಾದಲ್ಲಿ ಇನ್ನೊಂದು 10-15 ವರ್ಷಕ್ಕೆ ಕನ್ನಡ ಚಿತ್ರರಂಗ ನಾಶ’: ಕನ್ನಡ ಸಿನಿಮಾಗಳು ಉಳಿಬೇಕಾದರೆ ಸರ್ಕಾರವೇ ಮಿನಿ ಥಿಯೇಟರ್ಗಳನ್ನು ನಿರ್ಮಾಣ ಮಾಡಬೇಕು. ಕೇವಲ …
Read More »ಬೆಂಗಳೂರು, ಶಿವಮೊಗ್ಗ, ಧಾರವಾಡ ಸೇರಿ ಕರ್ನಾಟಕದ ಹಲವೆಡೆ ಲೋಕಾಯುಕ್ತ ದಾಳಿ
ಬೆಂಗಳೂರು, ಜೂನ್ 24: ಶಿವಮೊಗ್ಗದ ಅರ್ಗ್ಯಾನಿಕ್ ಫಾರ್ಮಿಂಗ್ ಸಹಾಯಕ ನಿರ್ದೇಶಕ ಪ್ರದೀಪ್, ಚಿಕ್ಕಮಗಳೂರು ನಗರಸಭೆ ಅಧಿಕಾರಿ ಲತಾಮಣಿ ಮನೆ ಮೇಲೆ ಸೇರಿದಂತೆ ಕರ್ನಾಟಕದ ವಿವಿಧ ಕಡೆಗಳಲ್ಲಿ ಲೋಕಾಯುಕ್ತ (Lokayukta) ಅಧಿಕಾರಿಗಳು ಮಂಗಳವಾರ ಮುಂಜಾನೆಯೇ ದಾಳಿ ನಡೆಸಿದ್ದಾರೆ. ಆನೇಕಲ್ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಕೆ.ಜಿ.ಅಮರನಾಥ್, ಗದಗದ ಪಟ್ಟಣ ಪೊಲೀಸ್ ನಿರೀಕ್ಷಕ ಧ್ರುವರಾಜ್, ಧಾರವಾಡ ಮಲಪ್ರಭಾ ಯೋಜನೆ ಇಂಜಿನಿಯರ್ ಅಶೋಕ್ ವಾಲ್ಸಂದ್, ಕಲಬುರಗಿ ಪಿಆರ್ಇ ವಿಭಾಗದ ಇಇ ಮಲ್ಲಿಕಾರ್ಜುನ ಅಲಿಪುರ, ಸಣ್ಣೂರು ಗ್ರಾ.ಪಂ. ಪಿಡಿಒ ರಾಮಚಂದ್ರ ಮನೆ ಮೇಲೆಯೂ …
Read More »ಬಿಜೆಪಿಯವರಿಗೆ ಅಭಿವೃದ್ಧಿ ವಿಚಾರದಲ್ಲಿ ನಮ್ಮನ್ನು ಟೀಕಿಸುವ ಯಾವ ನೈತಿಕ ಹಕ್ಕೂ ಇಲ್ಲ:ಸಿದ್ಧರಾಮಯ್ಯ
ರಾಯಚೂರು: ರಾಯಚೂರು ಗ್ರಾಮೀಣ ಕ್ಷೇತ್ರದಲ್ಲಿ ಒಂದೇ ದಿನ 936 ಕೋಟಿ ಮೊತ್ತದ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದ್ದೇವೆ. ಕೊಟ್ಟ ಮಾತಿನಂತೆ ನಡೆದ ಸರ್ಕಾರ ನಮ್ಮದು ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಪುನರುಚ್ಚರಿಸಿದರು. ಸೋಮವಾರ ಗ್ರಾಮೀಣ ಕ್ಷೇತ್ರದ ತಾಲೂಕಿನ ಯರಗೇರಾ ಗ್ರಾಮದಲ್ಲಿ ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯದ ನಾಮಫಲಕ ಅನಾವರಣ, ಮಹರ್ಷಿ ವಾಲ್ಮಿಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ ಮತ್ತು ಇತರೆ ನಿಗಮಗಳಿಂದ ಸೌಲಭ್ಯ ವಿತರಣೆ, 371(ಜೆ) ದಶಮಾನೋತ್ಸವ ಮತ್ತು 936 ಕೋಟಿಗಳ …
Read More »ಉತ್ತರ ಕನ್ನಡದಲ್ಲಿ ಹೆಚ್ಚಿದ ಚಿರತೆಗಳ ಓಡಾಟ
ಕಾರವಾರ (ಉತ್ತರ ಕನ್ನಡ): ಇತ್ತೀಚೆಗೆ ಉತ್ತರಕನ್ನಡ ಜಿಲ್ಲೆಯ ಹಲವೆಡೆ ಚಿರತೆಗಳ ಓಡಾಟ ಹೆಚ್ಚಾಗಿದ್ದು, ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಶಿರಸಿ ಮತ್ತು ದಾಂಡೇಲಿಯಲ್ಲಿ ನಡೆದ ಎರಡು ಪ್ರತ್ಯೇಕ ಘಟನೆಗಳಲ್ಲಿ ಚಿರತೆಗಳು ಜನವಸತಿ ಪ್ರದೇಶಗಳಲ್ಲಿ ಕಾಣಿಸಿಕೊಂಡಿದ್ದರಿಂದ ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ. ಶಿರಸಿ ತಾಲೂಕಿನ ನಿರ್ನಳ್ಳಿಯಲ್ಲಿ ಭಾನುವಾರ ಮಧ್ಯರಾತ್ರಿ ನರಸಿಂಹ ಹೆಗಡೆ ಎಂಬುವರ ಮನೆಯ ಅಂಗಳಕ್ಕೆ ಚಿರತೆಯೊಂದು ಬಂದಿರುವುದು ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಈ ಘಟನೆಯು ಈ ಹಿಂದೆ ನಡೆದ ಚಿರತೆಗಳ ಓಡಾಟದ ಸರಣಿಗೆ ಮತ್ತೊಂದು ಸೇರ್ಪಡೆಯಾಗಿದೆ. …
Read More »
Laxmi News 24×7