Breaking News

ರಾಜ್ಯ

ಎಲ್ಲರೂ ಕೈ ಜೋಡಿಸುವುದರಿಂದ ಉತ್ತಮ ಸಮಾಜ ನಿರ್ಮಾಣ ಸಾಧ್ಯ: ಚೈತನ್ಯ ಕುಲಕರ್ಣಿ ಪ್ರಯತ್ನ ಸಂಘಟನೆ 15ನೇ ವಾರ್ಷಿಕೋತ್ಸವ ಉದ್ಘಾಟನೆ

ಬೆಳಗಾವಿ : ರಾಜಕಾರಣಿಗಳಿಂದಲೇ ಎಲ್ಲವನ್ನೂ ನಿರೀಕ್ಷೆ ಮಾಡುವ ಬದಲು ಎಲ್ಲರೂ ಸೇರಿ ಕೆಲಸ ಮಾಡುವುದರಿಂದ ಉತ್ತಮ ಸಮಾಜ ನಿರ್ಮಾಣ ಸಾಧ್ಯವಿದೆ ಎಂದು ಕ್ರೆಡೈ ಅಫೋರ್ಡೇಬಲ್ ಹೌಸಿಂಗ್ ಕಮಿಟಿಯ ರಾಷ್ಟ್ರೀಯ ಅಧ್ಯಕ್ಷರೂ, ಸಿಜಿಕೆ ಗ್ರುಪ್ ವ್ಯವಸ್ಥಾಪಕ ನಿರ್ದೇಶಕರೂ ಆಗಿರುವ ಚೈತನ್ಯ ಕುಲಕರ್ಣಿ ಹೇಳಿದ್ದಾರೆ. ಬೆಳಗಾವಿಯಲ್ಲಿ ಭಾನುವಾರ ಸಂಜೆ ಪ್ರಯತ್ನ ಸ್ವಯಂ ಸೇವಾ ಸಂಸ್ಥೆಯ 15ನೇ ವಾರ್ಷಿಕೋತ್ಸವ ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು. ಸಮಾಜದಲ್ಲಿ ದಾನಿಗಳಿಗೆ ಕೊರತೆ ಇಲ್ಲ, ಆದರೆ ಅದನ್ನು ಸತ್ಪಾತ್ರರಿಗೆ ತಲುಪಿಸುವವರು …

Read More »

ಹೈವೋಲ್ಟೆಜ್’ನಿಂದ ವಿದ್ಯುತ್ ಉಪಕರಣಗಳು ಸುಟ್ಟು ಹಾನಿ… ಹೆಸ್ಕಾಂಗೆ ಹಿಡಿಶಾಪ ಹಾಕಿದ ಬೆಳಗಾವಿ ನಾಲ್ಕನೇ ಗೇಟ್ ಜನರು

ಹೈವೋಲ್ಟೆಜ್’ನಿಂದ ವಿದ್ಯುತ್ ಉಪಕರಣಗಳು ಸುಟ್ಟು ಹಾನಿ… ಹೆಸ್ಕಾಂಗೆ ಹಿಡಿಶಾಪ ಹಾಕಿದ ಬೆಳಗಾವಿ ನಾಲ್ಕನೇ ಗೇಟ್ ಜನರು ಬೆಳಗಾವಿಯ ನಾಲ್ಕನೇ ರೇಲ್ವೆ ಗೇಟ್ ಬಳಿ ಹೈವೋಲ್ಟೇಜ್’ನಿಂದಾಗಿ ವಿದ್ಯುತ್ ಉಪಕರಣಗಳು ಮತ್ತು ವಿದ್ಯುತ್ ದೀಪಗಳು ಸುಟ್ಟು ಸ್ಥಳೀಯರು ಮತ್ತು ವ್ಯಾಪಾರಿಗಳು ತೀವ್ರ ನಷ್ಟವನ್ನು ಅನುಭವಿಸುವಂತಾಗಿದ್ದು, ಹೆಸ್ಕಾಂ ವಿರುದ್ಧ ಹಿಡಿಶಾಪ ಹಾಕುತ್ತಿದ್ದಾರೆ. ಬೆಳಗಾವಿಯ ನಾಲ್ಕನೇ ರೇಲ್ವೆ ಗೇಟ್ ಬಳಿಯ ಅನಗೋಳ ಬಾಬಲೆ ಗಲ್ಲಿ ಮತ್ತು ಪ್ರದೇಶದಲ್ಲಿ ನಿನ್ನೆ ಭಾನುವಾರ ಬೆಳಿಗ್ಗೆ ಹೈವೋಲ್ಟೆಜ್’ನಿಂದಾಗಿ ಶಾರ್ಟ್ ಸರ್ಕ್ಯೂಟ್’ಗಳು …

Read More »

ಮೆಡಿಕಲ್ ಸೀಟು ಕೊಡಿಸುವುದಾಗಿ ಖಾಸಗಿ ಕಂಪನಿ ಉದ್ಯೋಗಿಗೆ ₹10 ಲಕ್ಷ ವಂಚನೆ ಆರೋಪ

ದಾವಣಗೆರೆ: ಮೆಡಿಕಲ್ ಸೀಟು ಕೊಡಿಸುವುದಾಗಿ ನಂಬಿಸಿ ಖಾಸಗಿ ಕಂಪನಿ ಉದ್ಯೋಗಿಗೆ 10.64 ಲಕ್ಷ ರೂಪಾಯಿ ವಂಚಿಸಿರುವ ಘಟನೆ 2022ರಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಈ ಸಂಬಂಧ ಭರುಣೇಂದ್ರ, ಗೌರವ ಚೌದ್ರಿ ಮತ್ತು ಉಮೇಶ್ ಎಂಬುವರ ವಿರುದ್ಧ ವಂಚನೆ ಮಾಡಿದ್ದಾರೆ ಎಂದು ಆರೋಪಿಸಿ ಪ್ರಕಾಶ್ ಎಂಬವರು ಸಿಇಎನ್ ಪೊಲೀಸ್​ ಠಾಣೆಗೆ ದೂರು ನೀಡಿದ್ದಾರೆ. ಪ್ರಕರಣದ ಹಿನ್ನೆಲೆ: ಪಿಜೆ ಬಡಾವಣೆ ನಿವಾಸಿ ಆಗಿರುವ ಪ್ರಕಾಶ್, ತಮ್ಮ‌ ಸಂಬಂಧಿಕರೊಬ್ಬರ ಪುತ್ರನನ್ನು ಎಂಬಿಬಿಎಸ್‌ಗೆ ಸೇರಿಸಬೇಕೆಂದುಕೊಂಡಿರುವುದಾಗಿ ಸ್ನೇಹಿತರೊಬ್ಬರ ಬಳಿ …

Read More »

ವಸತಿ ಇಲಾಖೆಯಲ್ಲಿ ಭ್ರಷ್ಟಾಚಾರದ ಬಗ್ಗೆ ಶಾಸಕ ಬಿ. ಆರ್. ಪಾಟೀಲ್ ಆರೋಪ

ಬೆಂಗಳೂರು : ವಸತಿ ಇಲಾಖೆಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂಬ ಆಡಳಿತ ಪಕ್ಷದ ಶಾಸಕರ ಹೇಳಿಕೆಗೆ ಪ್ರತಿಪಕ್ಷಗಳಾದ ಬಿಜೆಪಿ ಹಾಗೂ ಜೆಡಿಎಸ್ ಶಾಸಕರು ವಿಧಾನಸೌಧದಲ್ಲಿ ಇಂದು ಪ್ರತಿಕ್ರಿಯೆ ನೀಡಿದ್ದಾರೆ. ಜೆಡಿಎಸ್ ಶಾಸಕ ಎ. ಮಂಜು ಮಾತನಾಡಿ, ಈಗಾಗಲೇ ಕಾಂಗ್ರೆಸ್ ಶಾಸಕ ಬಿ. ಆರ್. ಪಾಟೀಲ್ ಅವರು ಒಂದು ರೀತಿಯಲ್ಲಿ ಮಾತನಾಡಿದ್ದಾರೆ. ಬಿ. ಆರ್. ಪಾಟೀಲ್ ಅವರ ಮಾದರಿಯಲ್ಲೇ ಶಾಸಕ ರಾಜು ಕಾಗೆ ಹೇಳಿದ್ದಾರೆ. ವಸತಿ ಇಲಾಖೆಯಲ್ಲಿ ಭ್ರಷ್ಟಾಚಾರ ಆಗಿದೆ. ಅದರ ಬಗ್ಗೆ ನನಗೂ …

Read More »

ಹಲವು ಅತ್ಯಾಚಾರ, ಕೊಲೆ ಪ್ರಕರಣದಲ್ಲಿ ಶವ ಹೂತುಹಾಕಿದ್ದೆ ಎಂದು ಶರಣಾಗಲು ಮುಂದಾದ ವ್ಯಕ್ತಿ!

ಮಂಗಳೂರು, ಜೂನ್ 23: ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ ಗ್ರಾಮವೊಂದರಲ್ಲಿ ನಡೆದಿರುವ ಹಲವು ಅತ್ಯಾಚಾರ ಮತ್ತು ಕೊಲೆ ಪ್ರಕರಣಗಳನ್ನು ಮುಚ್ಚಿಹಾಕುವುದಕ್ಕಾಗಿ ಮೃತದೇಹಗಳನ್ನು ಹೂತು ಹಾಕಿದ್ದೆ ಎಂದು ಹೇಳಿಕೊಂಡಿರುವ ವ್ಯಕ್ತಿಯೊಬ್ಬ ಪೊಲೀಸರಿಗೆ ಶರಣಾಗಲು ಮುಂದಾಗಿದ್ದಾನೆ. ಈ ಸಂಬಂಧ ವಕೀಲರೊಬ್ಬರ ಬಳಿ ವಿಚಾರ ವಿನಿಮಯ ಮಾಡಿಕೊಂಡಿರುವ ವ್ಯಕ್ತಿ, ಪೊಲೀಸರ ಸಮ್ಮುಖದಲ್ಲಿ ಶವಗಳನ್ನು ಹೊರತೆಗೆಯಲು ನಿರ್ಧರಿಸಿರುವುದಾಗಿ ಹೇಳಿಕೊಂಡಿದ್ದಾನೆ. ಆರೋಪಿ ಶರಣಾಗತಿಗೆ ಒಪ್ಪಿಕೊಂಡಿರುವ ಬಗ್ಗೆ ವಕೀಲರು ಬಿಡುಗಡೆ ಮಾಡಿದ ಮಾಹಿತಿ ಪತ್ರವೊಂದು ವೈರಲ್ ಆಗಿದ್ದು, ಈ ವಿಚಾರವಾಗಿ ಅಡ್ವೋಕೇಟ್ ಅನ್ನು …

Read More »

ರಾಜು ಕಾಗೆ ಅವರನ್ನು ಕರೆದು ಮಾತನಾಡುತ್ತೇನೆ. ಸಿಎಂ

ರಾಯಚೂರು: ”ರಾಜು ಕಾಗೆ ಅವರನ್ನು ಕರೆದು ಮಾತನಾಡುತ್ತೇನೆ. ಸಿಎಂ ಅನುದಾನ ಅಂತ ಇದೆಯಾ? ಅವರು ಹೇಳ್ತಾರಪ್ಪ, ನಾನು ಕರೆದು ಮಾತನಾಡ್ತೀನಿ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಹಲವು ಕಾಮಗಾರಿಗಳ ಉದ್ಘಾಟನೆ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಜಿಲ್ಲೆಗೆ ಆಗಮಿಸಿರುವ ಅವರು, ವಿವಿಧ ವಿಚಾರಗಳ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದರು. ವಸತಿ ಸಚಿವ ಜಮೀರ್​ ಅಹ್ಮದ್ ಖಾನ್​ ರಾಜೀನಾಮೆಗೆ ಕಾಂಗ್ರೆಸ್ ಶಾಸಕ ಬೇಳೂರು ಗೋಪಾಲಕೃಷ್ಣ ಆಗ್ರಹ ವಿಚಾರವಾಗಿ ಪ್ರತಿಕ್ರಿಯಿಸಿ, ”ನನಗೆ ಗೊತ್ತಿಲ್ಲ. ಯಾವ ಸನ್ನಿವೇಶದಲ್ಲಿ ಹೇಳಿದ್ದಾರೆ ಅಂತಲೂ …

Read More »

ಆಡಳಿತ ವ್ಯವಸ್ಥೆ ಕುಸಿದಿದೆ, ನಾನು 2 ದಿನದಲ್ಲಿ ರಾಜೀನಾಮೆ ಕೊಟ್ಟರೂ ಆಶ್ಚರ್ಯವಿಲ್ಲ: ಶಾಸಕ ರಾಜು ಕಾಗೆ

ಚಿಕ್ಕೋಡಿ(ಬೆಳಗಾವಿ): “ಸರ್ಕಾರದ ಆಡಳಿತ ವ್ಯವಸ್ಥೆ ಸಂಪೂರ್ಣ ಕುಸಿದಿದೆ. ಎರಡು ದಿನದಲ್ಲಿ ನಾನು ರಾಜೀನಾಮೆ ಕೊಟ್ಟರೂ ಆಶ್ಚರ್ಯವಿಲ್ಲ. ಶಾಸಕ ಬಿ.ಆರ್​. ಪಾಟೀಲ್​ ಹೇಳಿರುವುದು ಸುಳ್ಳಲ್ಲ” ಎಂದು ಹಿರಿಯ ಶಾಸಕ ರಾಜು ಕಾಗೆ ಸ್ವಪಕ್ಷ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಅವರು ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಐನಾಪುರ ಗ್ರಾಮದಲ್ಲಿ ಮಾಧ್ಯಮಗಳ ಜೊತೆ ಮಾತನಾಡುತ್ತಾ, “ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರಾದ ಬಿ.ಆರ್. ಪಾಟೀಲ್ ಆಡಿರುವ ಮಾತುಗಳು ಸುಳ್ಳಲ್ಲ. ಅವರ ಆಡಿಯೋ ವೈರಲ್ ವಿಚಾರಕ್ಕೆ …

Read More »

ಶಾಸಕ ಬಿ.ಆರ್.ಪಾಟೀಲ್ ಆರೋಪ ಸುಳ್ಳು: ಡಿಸಿಎಂ

ರಾಮನಗರ: ಹಣ ಪಡೆದು ಮನೆ ನೀಡಿದ್ದಾರೆ ಎಂಬ ಶಾಸಕ ಬಿ.ಆರ್.ಪಾಟೀಲ್ ಅವರ ಆರೋಪ ಸುಳ್ಳು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್​ ಹೇಳಿದರು. ಕನಕಪುರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಯಾರೋ ಒಬ್ಬ ಹೇಳಿದರೆ ಇದೆಲ್ಲವೂ ಆಗುತ್ತದೆಯೇ?. ನಾನು ಅಥವಾ ನೀವು ಬಂದು ಗ್ರಾಮ ಸಭೆಯಲ್ಲಿ ಮನೆ ಕೇಳಿದ ತಕ್ಷಣ ಕೊಡಲು ಆಗುತ್ತದೆಯೇ? ಎಂದು ಪ್ರಶ್ನಿಸಿದರು. ಮನೆ ನೀಡಲು ತೀರ್ಮಾನ ಮಾಡುವವರು ಗ್ರಾಮ ಪಂಚಾಯಿತಿ, ಮುನಿಸಿಪಾಲಿಟಿ ಸೇರಿದಂತೆ ಎಲ್ಲೆಲ್ಲಿ ಮನೆ ನಿಡಬೇಕೋ ಆಯಾ ಸ್ಥಳೀಯ …

Read More »

ಗಾಯಕನಿಂದ 3 ಲಕ್ಷಕ್ಕೂ ಹೆಚ್ಚು ಹಣ ಪಡೆದು ವಂಚಿಸಿದ ಮಹಿಳೆಯ​ ವಿರುದ್ಧ

ಮಂಗಳೂರು: ನ್ಯಾಯಾಲಯದಲ್ಲಿರುವ ಪ್ರಕರಣವನ್ನು ಹೈಕೋರ್ಟ್​ನಲ್ಲಿ ವಕೀಲರ ಮೂಲಕ ಕ್ವಾಷ್​ ಮಾಡಿ ಬಗೆಹರಿಸುತ್ತೇನೆ ಎಂದು ನಂಬಿಸಿ ಗಾಯಕರೊಬ್ಬರಿಂದ 3.20 ಲಕ್ಷ ರೂ ಪಡೆದು ವಂಚಿಸಿದ ಬೆಂಗಳೂರಿನ ಸಂಧ್ಯಾ ಪವಿತ್ರ ನಾಗರಾಜ್ ಎಂಬ ಮಹಿಳೆಯ ವಿರುದ್ಧ ಪುಂಜಾಲಕಟ್ಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಏನಿದು ಪ್ರಕರಣ?: ಬೆಳ್ತಂಗಡಿಯ ಮಡಂತ್ಯಾರ್​ ನಿವಾಸಿ, ಗಾಯಕ ರಾಜೇಶ್​​.ಕೆ. (43) ಎಂಬವರಿಗೆ 2024ರಲ್ಲಿ ಫೇಸ್‌ಬುಕ್ ಮೂಲಕ ಆರೋಪಿತೆ ಸಂಧ್ಯಾ ಪವಿತ್ರ ನಾಗರಾಜ್ ಎಂಬಾಕೆಯ ಪರಿಚಯವಾಗಿತ್ತು. ಆಕೆಯೊಂದಿಗೆ ಮೊಬೈಲ್ ಮೂಲಕ ಸಂಪರ್ಕದಲ್ಲಿದ್ದರು. ಆರೋಪಿತೆಯು ರಾಜೇಶ್ …

Read More »

ಮೂಡಲಗಿ – ಪಟ್ಟಣದ ಸಮಗ್ರ ಅಭಿವೃದ್ಧಿಗೆ ಶ್ರಮಿಸುತ್ತಿದ್ದು, ಮುಂದಿನ ದಿನಗಳಲ್ಲಿ ನಾಗರಿಕರ ಅಶೋತ್ತರಗಳನ್ನು ಈಡೇರಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆಂದು ಶಾಸಕ ಮತ್ತು ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿಯವರು

ಮೂಡಲಗಿ – ಪಟ್ಟಣದ ಸಮಗ್ರ ಅಭಿವೃದ್ಧಿಗೆ ಶ್ರಮಿಸುತ್ತಿದ್ದು, ಮುಂದಿನ ದಿನಗಳಲ್ಲಿ ನಾಗರಿಕರ ಅಶೋತ್ತರಗಳನ್ನು ಈಡೇರಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆಂದು ಶಾಸಕ ಮತ್ತು ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿಯವರು ತಿಳಿಸಿದರು. ಶನಿವಾರದಂದು ಇಲ್ಲಿನ ಸಂಗಪ್ಪಣ್ಣ ವೃತ್ತದ ಬಳಿ ಪುರಸಭೆಯಿಂದ ನಿರ್ಮಿಸಲು ಉದ್ದೇಶಿಸಿರುವ ಒಟ್ಟು ೭.೬೮ ಕೋಟಿ ರೂಪಾಯಿ ವೆಚ್ಚದ ವಾಣಿಜ್ಯ ಮಳಿಗೆಗಳ ಗುದ್ದಲಿ ಪೂಜೆಯನ್ನು ನೆರವೇರಿಸಿ ಮಾತನಾಡಿದ ಅವರು, ಪಟ್ಟಣದ ಸರ್ವತೋಮುಖ ಏಳ್ಗೆಯೇ ನನ್ನ ಗುರಿಯಾಗಿದೆ ಎಂದು ಹೇಳಿದರು. ಮೂಡಲಗಿ ತಾಲ್ಲೂಕು …

Read More »