ನನಗೆ ಉತ್ತರ ಕೊಡಲು ಜಾಸ್ತಿ ಹೊತ್ತು ಬೇಕಿಲ್ಲ. 2023ರಲ್ಲಿ ಜನರಿಂದ ಉತ್ತರ ಕೊಡಿಸಲು ಕಾಯುತ್ತಿದ್ದೇನೆ. ಸರ್ಕಾರವನ್ನು ಬೀಳಿಸಿದವರಿಗೆ ಗ್ರಾಪಂ ಯಾವ ಲೆಕ್ಕ. ಎಂಎಲ್ಎಗಳನ್ನೇ ಎಸ್ಕೇಪ್ ಮಾಡಿದ್ದಾರೆ. ಇವರಿಂದ ಇನ್ನೇನು ನಿರೀಕ್ಷಿಸಲು ಸಾಧ್ಯ? ಕಾಲಾಯ ತಸ್ಮೈ ನಮಃ. ನಾನು ಗೋಕಾಕ್ ಅನ್ನು ಮುಂದಿನ ಚುನಾವಣೆಯಲ್ಲಿ ಟಾರ್ಗೆಟ್ ಮಾಡುತ್ತೇನೆ. ಲಕ್ಷ್ಮಿ ಹೆಬ್ಬಾಳ್ಕರ್, ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಮೊನ್ನೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ ಈ ಒಂದು ಮಾತು ಬೆಳಗಾವಿಯಲ್ಲಿ ಹೊಸ ಚರ್ಚೆ ಹುಟ್ಟು …
Read More »ಪ್ರಮಾಣ ವಚನ ಸ್ವೀಕರಿಸಲು ಹೆಲಿಕಾಪ್ಟರ್ನಲ್ಲಿ ಆಗಮಿಸಿದ ಗ್ರಾಮ ಪಂಚಾಯಿತಿ ಅಧ್ಯಕ್ಷ!
ಅಹ್ಮದ್ನಗರ (ಮಹಾರಾಷ್ಟ್ರ): ಚುನಾವಣೆಗು ಮುನ್ನ ಮತದಾರರನ್ನು ಸೆಳೆಯಲು ಜನಪ್ರತಿನಿಧಿಗಳು ನಾನಾ ಪ್ರಯತ್ನ ಮಾಡುತ್ತಾರೆ. ಗೆಲುವು ಸಾಧಿಸಿದ ಬಳಿಕವು ಡಿಜೆ ಸೌಂಡ್, ಮೆರವಣಿಗೆಯಂತಹ ಸಂಭ್ರಮಾಚರಣೆ ಮಾಡುತ್ತಾರೆ. ಈ ರೀತಿ ಶಾಸಕ ಅಥವಾ ಸಂಸದರ ಚುನಾವಣೆಯಲ್ಲಿ ಸಾಮಾನ್ಯವಾಗಿ ನೋಡಿರುತ್ತೇವೆ. ಆದರೆ, ಇಲ್ಲೊಬ್ಬ ಗ್ರಾಮ ಪಂಚಾಯಿತಿ ಸದಸ್ಯ ಪ್ರಮಾಣ ವಚನ ಸ್ವೀಕರಿಸಲು ಹೆಲಿಕಾಪ್ಟರ್ನಲ್ಲಿ ಬರುವ ಮೂಲಕ ಎಲ್ಲರ ಹುಬ್ಬೇರಿಸಿದ್ದಾರೆ. ಮಹಾರಾಷ್ಟ್ರದ ಅಹ್ಮದ್ನಗರ ಜಿಲ್ಲೆಯ ಅಂಬಿ-ದುಮಾಲಾ ಗ್ರಾಮದಲ್ಲಿ ಹೊಸದಾಗಿ ಆಯ್ಕೆಯಾದ ಗ್ರಾಮ ಪಂಚಾಯಿತಿ ಅಧ್ಯಕ್ಷ, ಪ್ರಮಾಣ …
Read More »ಬಸ್ ಪ್ರಯಾಣ ದರದಲ್ಲಿ ಹೆಚ್ಚಳವಿಲ್ಲ: ಡಿಸಿಎಂ ಲಕ್ಷ್ಮಣ ಸವದಿ
ಕಲಬುರಗಿ: ಡೀಸೆಲ್ ಬೆಲೆ ಹೆಚ್ಚಳವಾಗಿದ್ದರೂ ಬಸ್ ಪ್ರಯಾಣ ದರ ಹೆಚ್ಚಳ ಮಾಡುವ ಪ್ರಸ್ತಾಪ ಸಂಸ್ಥೆ ಮುಂದಿಲ್ಲ ಎಂದು ಸಾರಿಗೆ ಸಚಿವರಾಗಿರುವ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೇಳಿದರು. ನಗರದಲ್ಲಿ ದಿ.ಚಂದ್ರಶೇಖರ ಪಾಟೀಲ ರೇವೂರ ಫೌಂಡೇಶನ್ ದ ಉಚಿತ ಡಯಾಲಿಸಿಸ್ ಕೇಂದ್ರದ ವೈದ್ಯಕೀಯ ಸೇವೆಗೆ ಚಾಲನೆ ನೀಡಿ ಮಾತನಾಡಿದ ಅವರು, ಡೀಸೆಲ್ ದರ ಹೆಚ್ಚಳ ಅವಲೋಕಿಸಿದರೆ ದರ ಹೆಚ್ಚಿಸಬೇಕು. ಆದರೆ ಸಂಸ್ಥೆಯ ಬಸ್ ಗಳಲ್ಲಿ ಸಂಚರಿಸುವರು ಬಡ ಹಾಗೂ ಮಧ್ಯಮ ವರ್ಗದವರಿರುತ್ತಾರೆ. ಕೊರೊನಾದಿಂದ …
Read More »ಐಪಿಎಲ್ ಹರಾಜು 2021: 14.25 ಕೋಟಿ ರೂಗಳಿಗೆ ಆರ್ ಸಿಬಿ ಪಾಲಾದ ಗ್ಲೇನ್ ಮ್ಯಾಕ್ಸ್ ವೆಲ್, ದೆಹಲಿ ಪಾಲಾದ ಸ್ಟೀವ್ ಸ್ಮಿತ್!
ಚೆನ್ನೈ: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ನ 2021 ರ ಆವೃತ್ತಿಯು ಹರಾಜು ಪ್ರಕ್ರಿಯೆಯಲ್ಲಿ ಆಸ್ಟ್ರೇಲಿಯಾದ ಸ್ಫೋಟಕ ಬ್ಯಾಟ್ಸ್ ಮನ್ ಗ್ಲೇನ್ ಮ್ಯಾಕ್ಸ್ ವೆಲ್ ಬರೊಬ್ಬರಿ 14.25 ಕೋಟಿ ರೂಗಳಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪಾಲಾಗಿದ್ದಾರೆ. ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ನ 2021 ರ ಆವೃತ್ತಿಯು ಈ ವರ್ಷದ ಏಪ್ರಿಲ್‌ನಲ್ಲಿ ಪ್ರಾರಂಭವಾಗಲಿದ್ದು, ಈ ನಿಮಿತ್ತ ಇಂದು ಆಟಗಾರರ ಹರಾಜು ಪ್ರಕ್ರಿಯೆ ಭರದಿಂದ ಸಾಗಿದೆ. ಚೆನ್ನೈನಲ್ಲಿ ಆಟಗಾರರ ಮಿನಿ …
Read More »ಡಾ.ರಾಜ್ ಪ್ರತಿಮೆ ವಿಚಾರದಲ್ಲಿ ನಾಲಿಗೆ ಹರಿಬಿಟ್ಟಿದ್ದ ಶಾಸಕ ಹ್ಯಾರಿಸ್ ಕ್ಷಮೆ ಯಾಚನೆ
ಬೆಂಗಳೂರು, ಫೆ.18- ನಟಸಾರ್ವಭೌಮ ಡಾ.ರಾಜ್‍ಕುಮಾರ್ ಅವರ ಪ್ರತಿಮೆ ವಿಷಯದಲ್ಲಿ ಅವಹೇಳನಕಾರಿಯಾಗಿ ಮಾತನಾಡಿ ಸಾರ್ವಜನಿಕ ಆಕ್ರೋಶಕ್ಕೆ ಗುರಿಯಾಗಿದ್ದ ಶಾಂತಿನಗರ ಶಾಸಕ ಎನ್.ಎ.ಹ್ಯಾರಿಸ್ ಕ್ಷಮೆ ಯಾಚಿಸಿದ್ದಾರೆ. ಡಾ.ರಾಜ್‍ಕುಮಾರ್ ಅವರ ಪ್ರತಿಮೆ ವಿಷಯದಲ್ಲಿ ಶಾಸಕ ಹ್ಯಾರಿಸ್ ಹಗುರವಾಗಿ ಮಾತನಾಡಿರುವ ವಿಡಿಯೋ ಮಾಧ್ಯಮಗಳಲ್ಲಿ, ಸಾಮಾಜಿಕ ಜಾಲತಾಣಗಳಲ್ಲಿ ವೈ ರಲ್ ಆಗಿತ್ತು. ನಂತರ ಹ್ಯಾರಿಸ್ ವಿರುದ್ಧ ಸಾರ್ವಜನಿಕ ವಲಯದಲ್ಲಿ ಈ ಬಗ್ಗೆ ತೀವ್ರ ಆಕ್ರೋಶ ವ್ಯಕ್ತವಾದ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡ ಅವರು ಕ್ಷಮೆ ಯಾಚಿಸಿದ್ದಾರೆ. ಹ್ಯಾರಿಸ್ ಅವರು ಈ …
Read More »ಬೆಳಗಾವಿ: ರೈಲು ತಡೆಯಲು ಬಂದ ರೈತರನ್ನು ವಶಕ್ಕೆ ಪಡೆದ ಪೊಲೀಸರು
ಬೆಳಗಾವಿ: ತಿದ್ದುಪಡಿ ಮಾಡಿರುವ ಕೃಷಿ ಕಾಯ್ದೆಗಳನ್ನು ಹಿಂಪಡೆಯಲು ಆಗ್ರಹಿಸಿ ಮತ್ತು ದೆಹಲಿಯ ಗಡಿಗಳಲ್ಲಿ ಹೋರಾಟನಿರತ ರೈತರಿಗೆ ಬೆಂಬಲ ವ್ಯಕ್ತಪಡಿಸಲು ದೆಹಲಿಯ ಸಂಯುಕ್ತ ಕಿಸಾನ್ ಮೋರ್ಚಾ ಕರೆಯ ಮೇರೆಗೆ ನಗರದ ರೈಲು ನಿಲ್ದಾಣದಲ್ಲಿ ರೈಲು ತಡೆ ಚಳವಳಿ ನಡೆಸಲು ಮುಂದಾದ ರೈತ ಮುಖಂಡರನ್ನು ಪೊಲೀಸರು ವಶಕ್ಕೆ ಪಡೆದರು. ಸರ್ಕಾರದ ವಿರುದ್ಧ ಧಿಕ್ಕಾರ ಕೂಗುತ್ತಾ ಬಂದ ರೈತರನ್ನು ಪೊಲೀಸರು ಗೇಟ್‌ನಲ್ಲೇ ತಡೆದರು. ಈ ವೇಳೆ ಪೊಲೀಸರು ಮತ್ತು ಮುಖಂಡರೊಂದಿಗೆ ಮಾತಿನ ಚಕಮಕಿ ನಡೆಯಿತು. …
Read More »ಚಲಿಸುತ್ತಿರುವ ರೈಲಿನಡಿ ಸಿಲುಕಿದ ಹರಿಯಾಣದ ಮಹಿಳೆ ಮುಂದೇನಾಯ್ತು..?
ನೋಡುಗರಿಗೆ ಎದೆ ಝಲ್ ಎನಿಸುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಮಹಿಳೆಯೊಬ್ಬರು ಚಲಿಸುತ್ತಿರುವ ರೈಲಿನ ಕೆಳಗಿದ್ದು, ಉಪಾಯದಿಂದ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಚಲಿಸುತ್ತಿರುವ ರೈಲಿನ ಕೆಳಗೆ ಮಹಿಳೆ ಇರುವುದನ್ನು ನೋಡಿ ಸುತ್ತಲಿನ ಜನ ದಂಗಾಗಿದ್ದಾರೆ. ಹರಿಯಾಣದ ರಥಕ್ನಲ್ಲಿ ಈ ಘಟನೆ ಸಂಭವಿಸಿದೆ. ರೈಲು ಸಿಗ್ನಲ್ಗಾಗಿ ಕಾಯುತ್ತಿರುವಾಗ ಮಹಿಳೆ ಟ್ರೈನ್ ಕೆಳಗಿನಿಂದ ಪಕ್ಕದ ರಸ್ತೆಗೆ ಪಾಸಾಗಲು ಪ್ರಯತ್ನಿಸಿದ್ದಾರೆ ಎನ್ನಲಾಗಿದೆ. ಈ ವೇಳೆ ರೈಲು ಕೂಡಲೇ ಚಲಿಸಿದ್ದು, ಮಹಿಳೆ ಪ್ರಾಣ ರಕ್ಷಣೆಗಾಗಿ ರೈಲು ಹಳಿಯ …
Read More »ಡೆತ್ ನೋಟಲ್ಲಿ ಅಂತ್ಯಕ್ರಿಯೆಗೆ ಸಿದ್ದರಾಮಯ್ಯ ಬರಬೇಕು ಅಂತಾ ಬರೆದಿದ್ದಾನೆ. !
ಮಂಡ್ಯ : ಡೆತ್ ನೋಟಲ್ಲಿ ಅಂತ್ಯಕ್ರಿಯೆಗೆ ಸಿದ್ದರಾಮಯ್ಯ ಬರಬೇಕು ಅಂತಾ ಬರೆದಿದ್ದಾನೆ. ನನಗೆ ಅಷ್ಟೊಂದು ಪರಿಚಯವಿಲ್ಲ. ಅದರೂ ನನ್ನ ಅಭಿಮಾನಿಯಾಗಿದ್ದಾನೆ. ಎಲ್ಲಕ್ಕಿಂತ ಮುಖ್ಯವಾಗಿ ಮನುಷ್ಯತ್ವ ಮುಖ್ಯ. ನನಗೆ ಗೊತ್ತಿಲ್ಲದೆ ದೊಡ್ಡ ಅಭಿಮಾನಿಯಾಗಿ ಡೆತ್ ನೋಟ್ ನಲ್ಲಿ ಬರೆದುಕೊಂಡಿದ್ದಾನೆ. ಅಭಿಮಾನಿ ಆಗಲಿ, ಯಾರೇ ಆಗಲಿ ಅಂತ್ಯಕ್ರಿಯೆಗೆ ಬರಬೇಕು ಅಂತಾ ಬರೆದುಕೊಂಡಿದ್ದಾನೆ. ಅಂತ್ಯಕ್ರಿಯೆಗೆ ಬಂದಿದ್ದೇನೆ ಎಂಬುದಾಗಿ ವಿಪಕ್ಷ ನಾಯಕ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮಂಡ್ಯ ತಾಲೂಕಿನ ಕೋಡಿದೊಡ್ಡಿಯಲ್ಲಿ ಅಭಿಮಾನಿ ರಾಮಕೃಷ್ಣ …
Read More »ಸಿದ್ದರಾಮಯ್ಯ, ಕುಮಾರಸ್ವಾಮಿ ಕೋತಿಗಳ ರೀತಿ ಹೇಳಿಕೆ ಕೊಡುತ್ತಿದ್ದಾರೆ: ಈಶ್ವರಪ್ಪ
ಶಿವಮೊಗ್ಗ, ಫೆ.17: ರಾಮಮಂದಿರ ನಿರ್ಮಾಣಕ್ಕೆ ದೇಣಿಗೆ ಸಂಗ್ರಹಿಸುವ ವಿಚಾರವಾಗಿ ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ ಕುಮಾರಸ್ವಾಮಿ ಮತ್ತ ಸಿದ್ದರಾಮಯ್ಯ ಅವರು ಕೋತಿಗಳ ರೀತಿಯಲ್ಲಿ ಹೇಳಿಕೆ ನೀಡುವ ಮೂಲಕ ಜನಮಾನಸದಿಂದ ದೂರವಾಗುತ್ತಿದ್ದಾರೆ ಎಂದು ಸಚಿವ ಕೆ.ಎಸ್ ಈಶ್ವರಪ್ಪ ಲೇವಡಿ ಮಾಡಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಹಿಂದಿನ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಗೋ ಹತ್ಯೆಯಾಗುತ್ತಿವೆ, ಗೋವುಗಳ ಕಳ್ಳತನ ನಡೆಯುತ್ತಿದೆ ಎಂದು ದೂರು ನೀಡಿದರೆ ಗೋರಕ್ಷರ ಮೇಲೆಯೇ ಕ್ರಮ ಜರುಗಿಸಿದರು. ಇದರ ಪರಿಣಾಮವೇ ಕಾಂಗ್ರೆಸ್ ಸರ್ಕಾರ …
Read More »ಮೋದಿ ಶಕ್ತಿ ಕುಗ್ಗಿಸಲು RJD, ಕಾಂಗ್ರೆಸ್ ಗೆ ವಿಜಯೇಂದ್ರ ಹಣ ನೀಡಿದ್ದಾರೆ: ಯತ್ನಾಳ್ ಬಾಂಬ್
ಬೆಂಗಳೂರು: ಬಿಜೆಪಿ ವರಿಷ್ಠರು ನೀಡಿದ್ದ ಶೋಕಾಸ್ ನೋಟಿಸ್ ಗೆ 11 ಪುಟಗಳಷ್ಟು ಉತ್ತರ ನೀಡಿದ್ದೇನೆ. ಸಿಎಂ ಬಿಎಸ್ ಯಡಿಯೂರಪ್ಪ ಕುಟುಂಬದ ಬಗ್ಗೆ ಬರೆದಿದ್ದೇನೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದರು. ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಜಯೇಂದ್ರ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ ಶಕ್ತಿ ಕುಗ್ಗಿಸಲು ವಿಜಯೇಂದ್ರ ಬಿಹಾರ ಚುನಾವಣೆಗೆ ಫಂಡಿಂಗ್ ಮಾಡಿದ್ದಾರೆ. ಅಲ್ಲಿ ಬಿಜೆಪಿ ಸೋಲಿಸಲು ಆರ್ ಜೆಡಿ, ಕಾಂಗ್ರೆಸ್ ಗೆ …
Read More »
Laxmi News 24×7