ಅಭಿವೃದ್ಧಿಯಲ್ಲಿ ಉತ್ತರಕರ್ನಾಟಕಕ್ಕೆ ಅನ್ಯಾಯವಾದ್ರೆ ಪ್ರತಿಭಟನೆ ಮಾಡಿಯೇ ಮಾಡುತ್ತೇನೆ. ನಾನು ಮಂತ್ರಿ ಆಗಿರಲಿ ಅಥವಾ ಆಗದೇ ಇರಲಿ ಎಂದು ಆಹಾರ ಸಚಿವ ಉಮೇಶ ಕತ್ತಿ ಮತ್ತೆ ಉತ್ತರಕರ್ನಾಟಕದ ಅಭಿವೃದ್ಧಿ ಮಂತ್ರ ಜಪಿಸಿದ್ದಾರೆ. ಬೆಳಗಾವಿಯ ಪ್ರವಾಸಿ ಮಂದಿರದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಉಮೇಶ ಕತ್ತಿ ಉತ್ತರಕರ್ನಾಟಕದಲ್ಲಿ ಏನು ಆಗಬೇಕೋ ಅದು ಆಗಲೇಬೇಕು. ಉತ್ತರಕರ್ನಾಟಕದಲ್ಲಿ ಆಗಬೇಕಿದ್ದ ಕೆಲಸ ಆಗದಿದ್ದಾಗ ನಾನು ಮಂತ್ರಿ ಇರಲಿ, ಬಿಡಲಿ ಪ್ರತಿಭಟನೆ ಮಾಡಿಯೇ ಮಾಡುತ್ತೇನೆ ಎಂದರು. ಇನ್ನು ಬಜೆಟ್ …
Read More »ನನಗೆ ಯಾವುದೇ ನೋಟಿಸ್ ಬಂದಿಲ್ಲ. ನನ್ನ ಮಾತಿಗೆ ಅಷ್ಟೊಂದು ಡಿಮ್ಯಾಂಡ್ ಇದೆ ನೋಡಿ ಎಂದು ವ್ಯಂಗ್ಯವಾಡಿದ್ದಾರೆ:ಯತ್ನಾಳ್
ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಕುರಿತಾಗಿ ಪದೇ ಪದೇ ಹೇಳಿಕೆ ನೀಡಿದ್ದ ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಅವರಿಗೆ ಬಿಜೆಪಿ ಕೇಂದ್ರ ಶಿಸ್ತು ಸಮಿತಿ ಶೋಕಾಸ್ ನೋಟಿಸ್ ಜಾರಿ ಮಾಡಿದೆ. ಈ ಕುರಿತಾಗಿ ಪ್ರತಿಕ್ರಿಯೆ ನೀಡಿರುವ ಯತ್ನಾಳ್ ಅವರು, ಪಕ್ಷದ ನಾಯಕ ಅರುಣ್ ಸಿಂಗ್ ಅವರು ನೀಡಿದ ಹೇಳಿಕೆಯನ್ನು ಸ್ವಾಗತಿಸುತ್ತೇನೆ. ಅವರ ಹೇಳಿಕೆಗೆ ಬೇಕಾಗಿರುವ ಉತ್ತರ ಕೊಡುತ್ತೇನೆ ಎಂದು ತಿಳಿಸಿದ್ದಾರೆ. ನನಗೆ ನೋಟಿಸ್ ನೀಡಲು ಭಾರಿ ಡಿಮ್ಯಾಂಡ್ …
Read More »ಸಾರಿಗೆ ನೌಕರರ ಐದು ಬೇಡಿಕೆ ಈಡೇರಿಕೆ: ಸಾರಿಗೆ ಇಲಾಖೆ ಆದೇಶ
ಬೆಂಗಳೂರು: ಆರೋಗ್ಯ ಭಾಗ್ಯ ವಿಮೆ, ಕೋವಿಡ್‌ನಿಂದ ಮೃತಪಟ್ಟ ನೌಕರರಿಗೆ ₹ 30 ಲಕ್ಷ ಪರಿಹಾರ ಸೇರಿದಂತೆ ರಾಜ್ಯದ ನಾಲ್ಕು ಸಾರಿಗೆ ನಿಗಮಗಳ ನೌಕರರ ಐದು ಪ್ರಮುಖ ಬೇಡಿಕೆಗಳನ್ನು ಈಡೇರಿಸಿ ಸಾರಿಗೆ ಇಲಾಖೆ ಬುಧವಾರ ಆದೇಶ ಹೊರಡಿಸಿದೆ. ಸರ್ಕಾರಿ ನೌಕರರಿಗೆ ನೀಡುತ್ತಿರುವ ಆರೋಗ್ಯ ಭಾಗ್ಯ ವಿಮೆ ಸೌಲಭ್ಯವನ್ನು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್‌ಆರ್‌ಟಿಸಿ), ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ), ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (ಎನ್‌ಡಬ್ಲ್ಯುಕೆಆರ್‌ಟಿಸಿ) …
Read More »ಲೋಕಾಯುಕ್ತ ವಿಚಾರಣೆಗೆ ಹೈಕೋರ್ಟ್ ಸಮ್ಮತಿ
ಬೆಂಗಳೂರು: ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ) ಸಲ್ಲಿಸುವ ದೋಷಾರೋಪ ಪಟ್ಟಿಗಳು ತಮಗೂ ಲಭ್ಯವಾಗುವಂತೆ ನಿರ್ದೇಶನ ನೀಡಲು ಕೋರಿ ಲೋಕಾಯುಕ್ತ ಸಲ್ಲಿಸಿದ್ದ ಅರ್ಜಿಗೆ ಹೈಕೋರ್ಟ್ ಸಮ್ಮತಿ ಸೂಚಿಸಿದೆ. ಲೋಕಾಯುಕ್ತ ವಕೀಲರ ಮನವಿಗೆ ನ್ಯಾಯಮೂರ್ತಿ ಅರವಿಂದ್‌ಕುಮಾರ್ ನೇತೃತ್ವದ ವಿಭಾಗೀಯ ಪೀಠ ಭಾಗಶಃ ಅವಕಾಶ ನೀಡಿತು. ‘ಕಾನೂನಿನ ಪ್ರಕಾರ ಇರುವ ಅವಕಾಶದಂತೆ ದೋಷಾರೋಪ ಪಟ್ಟಿ ಆಧರಿಸಿ ಲೋಕಾಯುಕ್ತ ಮತ್ತು ಉಪಲೋಕಾಯುಕ್ತರು ಮುಂದುವರಿಯಬಹುದು. ದೋಷಾರೋಪ ಪಟ್ಟಿ ಪ್ರತಿಯನ್ನು ಲೋಕಾಯುಕ್ತಕ್ಕೆ ಎಸಿಬಿ ಒದಗಿಸಬೇಕು’ ಎಂದು ತಿಳಿಸಿತು. ‘ಲೋಕಾಯುಕ್ತ …
Read More »ದ್ವಿತೀಯ PUC ಪರೀಕ್ಷೆ ವೇಳಾಪಟ್ಟಿ ಪ್ರಕಟ
ಬೆಂಗಳೂರು: : ದ್ವಿತಿಯ ಪಿಯುಸಿ ಪರೀಕ್ಷೆಯ ಅಂತಿಮ ವೇಳಾಪಟ್ಟಿಯನ್ನು ರಾಜ್ಯ ಸರ್ಕಾರ ಬಿಡುಗಡೆ ಮಾಡಿದೆ. ಮೇ.24ರಿಂದ ಜೂನ್ 16ರವರೆಗೆ ದ್ವಿತೀಯ ಪಿಯುಸಿ ಅಂತಿಮ ಪರೀಕ್ಷೆ ನಿಗದಿ ಪಡಿಸಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ತಿಳಿಸಿದ್ದಾರೆ. ಹೀಗಿದೆ.. ದ್ವಿತೀಯ ಪಿಯುಸಿ ಅಂತಿಮ ವೇಳಾಪಟ್ಟಿ ಮೇ 24- ಇತಿಹಾಸ ಮೇ 25- ಕರ್ನಾಟಕ ಸಂಗೀತ, ಹಿಂದೂಸ್ತಾನಿ ಸಂಗೀತ ಮೇ 26- ಭೂಗೋಳ ಶಾಸ್ತ್ರ ಮೇ 27- …
Read More »ಕಲ್ಲು ಗಣಿಗಾರಿಕೆ: ಬಿರುಕು ಬಿಟ್ಟ ಮನೆ ಗೋಡೆಗಳು, ಸ್ಫೋಟಕ್ಕೆ ಬೆಚ್ಚಿ ಬೀಳುವ ಜನ
ಶಿರಹಟ್ಟಿ (ಗದಗ ಜಿಲ್ಲೆ): ತಾಲ್ಲೂಕಿನ ಮಾಗಡಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಪರಸಾಪುರ ಗ್ರಾಮದ ಸುತ್ತಮುತ್ತಲಿನ ಪ್ರದೇಶದಲ್ಲಿ ಕಲ್ಲು ಗಣಿಗಾರಿಕೆ ವ್ಯಾಪಕವಾಗಿ ನಡೆಯುತ್ತಿದ್ದು, ಮನೆಯ ಗೋಡೆಗಳು ಬಿರುಕು ಬಿಡುತ್ತಿವೆ. ಕೊಳವೆಬಾವಿಗಳು ಕುಸಿಯುತ್ತಿದ್ದು ರೈತರಲ್ಲಿ ಆತಂಕ ಹೆಚ್ಚಿಸಿದೆ. ಈ ಭಾಗದಲ್ಲಿ ಬೆಳಿಗ್ಗೆ ಹಾಗೂ ರಾತ್ರಿ ವೇಳೆ ನಡೆಸುವ ಸ್ಫೋಟಕದ ಶಬ್ದಕ್ಕೆ ಮಕ್ಕಳು ಮತ್ತು ವೃದ್ಧರು ಬೆಚ್ಚಿ ಬೀಳುವಂತಾಗಿದೆ. ಆದರೂ, ಸಂಬಂಧಪಟ್ಟ ಅಧಿಕಾರಿ ವರ್ಗ ಕ್ರಮ ಕೈಗೊಳ್ಳದಿರುವುದು ಗ್ರಾಮಸ್ಥರ ಆಕ್ರೋಶಕ್ಕೆ ಕಾರಣವಾಗಿದೆ. ‘ಅಳತೆಗೂ ನಿಲುಕದಷ್ಟು …
Read More »ಜನಪ್ರತಿನಿಧಿಗಳ ಜತೆ ಸಂವಹನ ಇರಲಿ: ಗದಗ ಜಿ.ಪಂ ಅಧ್ಯಕ್ಷ ಈರಪ್ಪ ನಾಡಗೌಡ್ರ ಸೂಚನೆ
ಗದಗ: ‘ಎಲ್ಲ ಇಲಾಖೆಗಳ ಅಧಿಕಾರಿಗಳು ಸರ್ಕಾರ ನೀಡುವ ಆದೇಶಗಳು, ನೂತನ ಯೋಜನೆಗಳ ಮಾಹಿತಿ ಹಾಗೂ ಅನುದಾನದ ವಿವರಗಳನ್ನು ಸಂಬಂಧಿಸಿದ ಜನಪ್ರತಿನಿಧಿಗಳ ಗಮನಕ್ಕೆ ತರಬೇಕು. ಈ ಮೂಲಕ ಉತ್ತಮ ಆಡಳಿತಕ್ಕೆ ಸಹಕರಿಸಬೇಕು’ ಎಂದು ಜಿಲ್ಲಾ ಪಂಚಾಯ್ತಿ ಅಧ್ಯಕ್ಷ ಈರಪ್ಪ ನಾಡಗೌಡ್ರ ಸೂಚಿಸಿದರು. ಜಿಲ್ಲಾ ಪಂಚಾಯ್ತಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಸಾಮಾನ್ಯ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಸಭೆಯ ಆರಂಭದಲ್ಲಿ ಡಿಎಚ್‌ಒ ಡಾ.ಸತೀಶ ಬಸರಿಗಿಡದ ಮಾತನಾಡಿ, ‘ಆಂಬುಲೆನ್ಸ್ ಖರೀದಿ ಸಲುವಾಗಿ ಸರ್ಕಾರಕ್ಕೆ …
Read More »ಫಾರ್ಮಸಿ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ 6 ಆರೋಪಿಗಳನ್ನು ಬಂಧಿಸಿದ ಪೊಲೀಸರು
ಹೈದರಾಬಾದ್: ಫಾರ್ಮಸಿ ವಿದ್ಯಾರ್ಥಿನಿಯ ಮೇಲೆ ನಡೆದಿದ್ದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಟಿವಿ ದೃಶ್ಯ ಆಧರಿಸಿ ಪೊಲೀಸರು 6 ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರನ್ನು ರಾಜು, ರಮೇಶ್, ಶಿವ, ನಾದಂ, ಭಾಸ್ಕರ, ಕುಮಾರ್ ಎಂದು ಗುರುತಿಸಲಾಗಿದೆ. ಕಾಲೇಜು ತರಗತಿಯನ್ನು ಮುಗಿಸಿ ಆಟೋ ಹತ್ತಿ ಮನೆಗೆ ಹೋಗುತ್ತಿದ್ದ ವಿದ್ಯಾರ್ಥಿನಿಯನ್ನು ಆಟೋ ಚಾಲಕನೇ ಕಿಡ್ನಾಪ್ ಮಾಡಿ ಸ್ನೇಹಿತರ ಜೊತೆ ಓಮ್ನಿ ಕಾರಲ್ಲಿ ನಿರ್ಜನ ಪ್ರದೇಶಕ್ಕೆ ಕೊಂಡೊಯ್ದು ವಿದ್ಯಾರ್ಥಿನಿ ಮೇಲೆ ಹಲ್ಲೆ ನಡೆಸಿ ಗ್ಯಾಂಗ್ ರೇಪ್ …
Read More »ಮೈಸೂರು- ಚಾಮರಾಜನಗರ ರೈಲು ಮಾರ್ಗ ವಿದ್ಯುದೀಕರಣ ಕಾಮಗಾರಿಗೆ ಶೀಘ್ರವೇ ಚಾಲನೆ
ಮೈಸೂರು: ಬಹುನಿರೀಕ್ಷಿತ, ಬಹು ಅಗತ್ಯವಿದ್ದ ಮೈಸೂರು-ಚಾಮರಾಜನಗರ ರೈಲು ಮಾರ್ಗ ಎಲೆಕ್ಟ್ರಿಫಿಕೇಷನ್ ಕಾಮಗಾರಿಗೆ ಶೀಘ್ರವೇ ಚಾಲನೆ ದೊರೆಯಲಿದೆ. ಕಾಮಗಾರಿಗೆ ಗುತ್ತಿಗೆಯನ್ನು ನೀಡಲಾಗಿದ್ದು, ಈ ಬಗ್ಗೆ ಮಾಹಿತಿ ನೀಡಿರುವ ರೈಲ್ವೆ ವಿದ್ಯುದೀಕರಣಕ್ಕಾಗಿ ಇರುವ ಕೇಂದ್ರ ಕಚೇರಿಯ ಮುಖ್ಯ ಯೋಜನಾ ನಿರ್ದೇಶಕ ಆರ್ ಎ ಚೌಧರಿ ವಿದ್ಯುದೀಕರಣ ಕಾಮಗಾರಿ 12 ತಿಂಗಳಲ್ಲಿ ಮುಕ್ತಾಯಗೊಳ್ಳಲಿದೆ, ಫೆ.1 ರಂದು ಮಂಡನೆಯಾದ ಬಜೆಟ್ ನಲ್ಲಿ ಇದಕ್ಕಾಗಿ ಅನುದಾನವನ್ನೂ ಘೋಷಿಸಲಾಗಿದೆ ಎಂದು ತಿಳಿಸಿದ್ದಾರೆ. ಈ ಯೋಜನೆಗೆ 18.89 ಕೋಟಿ ರೂಪಾಯಿಗಳ …
Read More »ಮೀಸಲಾತಿ ‘ಬಲೆ’ಯಲ್ಲಿ ಸಿಲುಕಿ ಯಡಿಯೂರಪ್ಪ ಸರ್ಕಾರ ವಿಲವಿಲ..!
ಬೆಂಗಳೂರು, ಫೆ.12- ಕಳೆದ ಕೆಲ ತಿಂಗಳಿನಿಂದ ರಾಜ್ಯದಲ್ಲಿ ಹಲವು ಸಮುದಾಯಗಳು ಮೀಸಲಾತಿ ಹೆಚ್ಚಳಕ್ಕಾಗಿ ಒತ್ತಾಯಿಸುತ್ತಿರುವುದು ಸರ್ಕಾರವನ್ನು ಅಕ್ಷರಶಃ ಇಕ್ಕಟ್ಟಿಗೆ ಸಿಲುಕುವಂತೆ ಮಾಡಿದೆ. ಒಂದೆಡೆ ಕುರುಬರು ಎಸ್ಟಿಗೆ ಸೇರಿಸಲು ಶಕ್ತಿ ಪ್ರದರ್ಶನ ತೋರುತ್ತಿದ್ದರೆ, ಇತ್ತ ಪಂಚಮಸಾಲಿ ಲಿಂಗಾಯತರು 2ಎ ಮೀಸಲಾತಿಗೆ ಪಟ್ಟು ಹಿಡಿದಿದ್ದಾರೆ. ಇನ್ನು ವಾಲ್ಮಿಕಿ ಸಮುದಾಯದವರು ಮೀಸಲಾತಿ ಹೆಚ್ಚಿಸುವಂತೆ ಪಟ್ಟು ಹಿಡಿದಿದ್ದಾರೆ.ಎಸ್ಟಿ ಮೀಸಲಾತಿ ಶೇ.7.5ರಷ್ಟು ಹೆಚ್ಚಿಸುವ ಸಂಬಂಧ ಸರ್ಕಾರದ ಮೇಲೆ ನಾನಾ ಸಮುದಾಯಗಳು ಒತ್ತಡ ಹೇರುತ್ತಿವೆ. ಪ್ರಸ್ತುತ ಕನಿಷ್ಠ 8 …
Read More »
Laxmi News 24×7