Breaking News

ರಾಜ್ಯ

ಪೊಲೀಸ್ ದಾಳಿಗೆ ಹೆದರಿ ನದಿಗೆ ಹಾರಿದ ಯುವಕರ ಮೃತದೇಹ ಪತ್ತೆ!!

ರಾಮದುರ್ಗ: ಜೂಟಾಟ ವೇಳೆ ಪೊಲೀಸರು ದಾಳಿ  ನಡೆಸಿದ ವೇಳೆ ಹೆದರಿ ಮಲಪ್ರಭಾ ನದಿಗೆ ಹಾರಿದ ಇಬ್ಬರ ಮೃತದೇಹ    ಪತ್ತೆಯಾಗಿವೆ. ಮಂಜು ಬಂಡಿವಡ್ಡರ್(30), ಸಮೀರ್ ಬಟಕುರ್ಕಿ(22) ಮೃತರು. ಮಲಪ್ರಭಾ ನದಿ ದಡದಲ್ಲಿ ಜೂಜಾಡುತ್ತಿದ್ದ ಯುವಕರ ಗುಂಪಿನ ಮೇಲೆ ರಾಮದುರ್ಗ ಪೊಲೀಸರು ದಾಳಿ ನಡೆಸಿದ್ದರು. ಈ ವೇಳೆ ಬಂಧನ ಭೀತಿಯಿಂದ ಆರು ಜನರು ಮಲಪ್ರಭಾ ನದಿಗೆ ಹಾರಿದ್ದರು. ಈ ವೇಳೆ ನಾಲ್ವರು ಈಜಿ ದಡ ಸೇರಿದ್ರೆ ಇಬ್ಬರು ಯುವಕರು ನಾಪತ್ತೆಯಾಗಿದ್ದರು. ಬೆಳಗ್ಗೆಯಿಂದ …

Read More »

ರೈತರಿಗೆ ಗೌರವ ಕೊಡಿ, ಅವರೊಂದಿಗೆ ಮಾತನಾಡಿ : ಕೇಂದ್ರ ಸರ್ಕಾರಕ್ಕೆ ಫಾರೂಕ್ ಅಬ್ದುಲ್ಲಾ ಮನವಿ

ನವದೆಹಲಿ : ಮೂರು ವಿವಾದಾತ್ಮಕ ಕೃಷಿ ಕಾನೂನುಗಳ ವಿರುದ್ಧ ಪ್ರತಿಭಟನೆ ಮಾಡುತ್ತಿರುವ ರೈತರೊಂದಿಗೆ ಮಾತುಕತೆ ನಡೆಸಿ ಪರಿಹಾರ ಕಂಡುಕೊಳ್ಳಬೇಕೆಂದು ನ್ಯಾಷನಲ್ ಕಾನ್ಫರೆನ್ಸ್ (ಎನ್ ಸಿ) ನಾಯಕ ಫಾರೂಕ್ ಅಬ್ದುಲ್ಲಾ ಮಂಗಳವಾರ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಭಾರತ ಇಂದು ಜಗತ್ತಿನ ಪ್ರಜಾಪ್ರಭುತ್ವಕ್ಕೆ ಮಾದರಿ ಎಂದು ಹೇಳಿದರು. ಆದರೆ ಇಂದು ಅದು ತನ್ನ ಅಸ್ತಿತ್ವವನ್ನು ಕಳೆದುಕೊಳ್ಳುತ್ತಿದೆ ಎಂದು ಹೇಳಿದರು. ಲೋಕಸಭೆಯಲ್ಲಿ ಮಾತನಾಡಿದ ಜಮ್ಮು ಮತ್ತು ಕಾಶ್ಮೀರದ ಹಿರಿಯ ರಾಜಕಾರಣಿ, ‘ರೈತರ ಸಮಸ್ಯೆ ಬಗ್ಗೆ …

Read More »

ಖೋಡೆಸ್ ಕಂಪನಿಗಳ ಮೇಲೆ ಐಟಿ ದಾಳಿ

ಬೆಂಗಳೂರು: ಖೋಡೇಸ್ ಗ್ರೂಪ್ ಮಾಲೀಕರ ಕಚೇರಿ ಹಾಗೂ ನಿವಾಸದ ಮೇಲೆ ದಾಳಿ ನಡೆಸಿ ಐಟಿ ಅಧಿಕಾರಿಗಳು ಶಾಕ್‌ ನೀಡಿದ್ದಾರೆ. ಬೆಂಗಳೂರಿನಲ್ಲಿರುವ ಖೋಡೇಸ್ ಲಿಕ್ಕರ್ ಮಾಲೀಕರ ಮನೆ, ಫ್ಯಾಕ್ಟರಿ , ಕಚೇರಿಗಳ ಮೇಲೆ ಇಂದು ಬೆಳಗ್ಗೆ ಐಟಿ ಅಧಿಕಾರಿಗಳ ತಂಡಗಳು ದಾಳಿ ನಡೆಸಿ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ. ಖೋಡೇಸ್ ಗ್ರೂಪ್‌ ಮಾಲೀಕ ರಾಮಚಂದ್ರ ಖೋಡೆ ಅವರ ಮೆಜೆಸ್ಟಿಕ್ ಬಳಿಯ ಮನೆ, ಕಚೇರಿ ಹಾಗೂ ಫ್ಯಾಕ್ಟರಿ ಸೇರಿದಂತೆ 15 ಕ್ಕೂ ಹೆಚ್ಚು ದಾಳಿ ನಡೆಸಿದ್ದಾರೆ. …

Read More »

ಮದ್ಯ ಖಜಾನೆ ಧಣಿ,ಮನೆಯನ್ನೇ ಕಚೇರಿ ಮಾಡಿದ್ದ BBMP ಅಧಿಕಾರಿ ದೇವೇಂದ್ರಪ್ಪ ಸೇವೆಯಿಂದ ಅಮಾನತು!

ಬೆಂಗಳೂರು: ಲಂಚ ಪಡೆಯುತ್ತಿದ್ದ ವೇಳೆ ಎಸಿಬಿ ಅಧಿಕಾರಿಗಳ ಬಲೆಗೆ ಬಿದ್ದ ಬಿಬಿಎಂಪಿ ನಗರ ಯೋಜನೆ ಸಹಾಯಕ ನಿರ್ದೇಶಕ ದೇವೇಂದ್ರಪ್ಪನನ್ನು ಸೇವೆಯಿಂದ ಅಮಾನತು ಮಾಡಿ ಆದೇಶಿಸಲಾಗಿದೆ. ಪೂರ್ಣಗೊಂಡ ಕಟ್ಟಡಕ್ಕೆ ಅಕ್ಯುಪೆನ್ಸ್ ಸರ್ಟಿಫಿಕೇಟ್ ನೀಡಲು ಲಂಚ ಪಡೆಯುತ್ತಿದ್ದ ವೇಳೆ ದೇವೇಂದ್ರಪ್ಪ ಸಿಕ್ಕಿಬಿದ್ದಿದ್ದರು. ಹುಳಿಮಾವು ಬಿಬಿಎಂಪಿ ವ್ಯಾಪ್ತಿಯಲ್ಲಿ ಖಾಸಗಿಯವರಿಗೆ ಸೇರಿದ ಸ್ವತ್ತಿನಲ್ಲಿ ಕಟ್ಟಡ ನಿರ್ಮಾಣ ಮಾಡಿ ಸಿಗ್ಮಿಸ್‌ ಬ್ರಿವರೀಸ್‌ ಘಟಕದ ಕಟ್ಟಡ ನಿರ್ಮಾಣ ರ್ಪೂಗೊಳಿಸಲಾಗಿತ್ತು. ಆದರೆ ಪೂರ್ಣಗೊಂಡ ಕಟ್ಟಡ ಕಾಮಗಾರಿಗೆ ಓ.ಸಿ. ಪಡೆಯಲು ಕಂಪನಿ …

Read More »

ಡಾ.ರಾಜ್​ ಅಪಹರಣ: ರಾಜ್ಯ ಸರ್ಕಾರ ಮುಚ್ಚಿಟ್ಟಿದ್ದ ಸ್ಫೋಟಕ ರಹಸ್ಯ ಬಯಲು

ಬೆಂಗಳೂರು: ಕನ್ನಡದ ವರನಟ ಡಾ.ರಾಜ್ ಕುಮಾರ್​ ಅವರನ್ನ ಅಪಹರಿಸಿದ್ದ ನರಹಂತಕ ವೀರಪ್ಪನ್​ಗೆ ಕೋಟ್ಯಂತರ ಹಣವನ್ನು ರಾಜ್ಯ ಸರ್ಕಾರ ಕೊಟ್ಟಿತ್ತು ಎಂಬ ಸ್ಫೋಟಕ ಮಾಹಿತಿ ಬಯಲಾಗಿದೆ. ಅಣ್ಣಾವ್ರನ್ನು ಬಿಡುಗಡೆ ಮಾಡಲು ಮೂರು ಹಂತದಲ್ಲಿ 15.22 ಕೋಟಿ ರೂಪಾಯಿಯನ್ನು ಅಂದಿನ ಮುಖ್ಯಮಂತ್ರಿ ಎಸ್​.ಎಂ. ಕೃಷ್ಣ ನೇತೃತ್ವದ ಸರ್ಕಾರ ನೀಡಿತ್ತು ಎಂಬ ಮಾಹಿತಿ ಪತ್ರಕರ್ತ ಶಿವಸುಬ್ರಮಣ್ಯನ್​ ಅವರು ಬರೆದಿರುವ ಪುಸ್ತಕದಲ್ಲಿ ರಿವೀಲ್​ ಆಗಿದೆ. 2000ರ ಜುಲೈ 30ರ ರಾತ್ರಿ ಗಾಜನೂರಿನ ತೋಟದ ಮನೆಯಿಂದ ಡಾ.ರಾಜ್‌ಕುಮಾರ್ …

Read More »

ಮಲ್ಲಿಕಾರ್ಜುನ ಖರ್ಗೆಗೆ ಬೆದರಿಕೆ ಕರೆ

ಹೊಸದಿಲ್ಲಿ: ಪ್ರಧಾನಿ ಮೋದಿ ಅವರನ್ನು ಟೀಕಿಸಿದ ಕಾಂಗ್ರೆಸ್‌ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಬೆದರಿಕೆ ಕರೆಗಳು ಬರುತ್ತಿವೆ ಎಂದು ಪಕ್ಷದ ಮೂಲಗಳು ಹೇಳಿವೆ. ಸೋಮವಾರವಷ್ಟೇ ಮೋದಿ ಅವರು ರಾಜ್ಯಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣದ ಮೇಲಿನ ಚರ್ಚೆಗೆ ಉತ್ತರ ನೀಡಿದ್ದರು. ಈ ಬಗ್ಗೆ ಪ್ರತಿಕ್ರಿಯಿಸಿದ್ದ ಖರ್ಗೆಯವರು, ಮೋದಿ ಭಾಷಣವನ್ನು ಟೀಕಿಸಿದ್ದರು. ಇದಾದ ಬಳಿಕ ವ್ಯಕ್ತಿಯೊಬ್ಬ ಖರ್ಗೆ ಅವರಿಗೆ ಕರೆ ಮಾಡಿ, “ನೀವೇಕೆ ಮೋದಿ ಅವರನ್ನು ಟೀಕಿಸುತ್ತಿದ್ದೀರಿ’ ಎಂದು ಬೆದರಿಕೆ ಹಾಕಿದ್ದಾನೆ ಎಂದು ಕಾಂಗ್ರೆಸ್‌ ಮೂಲಗಳು …

Read More »

ರಾಜ್ಯದ ಎಲ್ಲಾ ಶಾಲೆಗಳಲ್ಲಿ ಕನ್ನಡ ಒಂದು ಭಾಷೆಯಾಗಿ ಕಲಿಸುವುದು ಕಡ್ಡಾಯ.: ಸುರೇಶ್‍ಕುಮಾರ್

ರಾಜ್ಯದ ಎಲ್ಲಾ ಶಾಲೆಗಳಲ್ಲಿ ಕನ್ನಡ ಒಂದು ಭಾಷೆಯಾಗಿ ಕಲಿಸುವುದು ಕಡ್ಡಾಯ..ಶಿಕ್ಷಣ ಸಚಿವ ಸುರೇಶ್‍ಕುಮಾರ್ ಯಾವುದೇ ಶಾಲೆ ಆಗಿರಬಹುದು. ಬೆಂಗಳೂರಿನ ಕೇಂದ್ರೀಯ ಶಾಲೆಯಿಂದ ಹಿಡಿದು ಕೊನೆಯ ಶಾಲೆವರೆಗೂ ಕನ್ನಡವನ್ನು ಒಂದು ಭಾಷೆಯಾಗಿ ಕಲಿಸಬೇಕು. ಇದು ಈ ನೆಲದ ಕಾನೂನಾಗಿದೆ. ಅದಕ್ಕೋಸ್ಕರ ಕಾಯ್ದೆ ಕೂಡ ಜಾರಿಗೆ ತರಲಾಗಿದೆ. ಕನ್ನಡ ಕಲಿಸಲು ಸಮರ್ಪಕವಾದ ಶಿಕ್ಷಕರನ್ನು ತುಂಬಿಸಿಕೊಳ್ಳಲು ಶೀಘ್ರವೇ ಕ್ರಮ ಕೈಗೊಳ್ಳುತ್ತೇವೆ ಎಂದು ಶಿಕ್ಷಣ ಸಚಿವ ಸುರೇಶ್‍ಕುಮಾರ್ ಅವರು ಭರವಸೆ ನೀಡಿದರು. ಗಡಿ ಭಾಗದ ಮರಾಠಿ, …

Read More »

ವಾಲ್ಮೀಕಿ ಜಾತ್ರೆಯಲ್ಲಿ ಪ್ರಿಯಾಂಕ.. ಪುತ್ರಿಗೆ ರಾಜಕೀಯ ತರಬೇತಿ ನೀಡುತ್ತಿದ್ದಾರಾ ಸತೀಶ್ ಜಾರಕಿಹೊಳಿ?

ದಾವಣಗೆರೆ : ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ತಮ್ಮ ಮಗಳಿಗೆ ರಾಜಕೀಯ ತರಬೇತಿ ನೀಡುತ್ತಿದ್ದಾರಾ ಎಂಬ ಅನುಮಾನ ಕಾಡುತ್ತಿದೆ. ವಾಲ್ಮೀಕಿ ಜಾತ್ರೆಯಲ್ಲಿ ಪ್ರಿಯಾಂಕ ಜಾರಕಿಹೊಳಿ.. ಜಿಲ್ಲೆಯ ಹರಿಹರ ತಾಲೂಕಿನ ರಾಜನಹಳ್ಳಿ ವಾಲ್ಮೀಕಿ ಮಠದಲ್ಲಿ ನಡೆಯುತ್ತಿರುವ 3ನೇ ಮಹರ್ಷಿ ವಾಲ್ಮೀಕಿ ಜಾತ್ರೆಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಮಗಳು ಪ್ರಿಯಾಂಕ ಅವರು ಆಗಮಿಸಿ, ವಾಲ್ಮೀಕಿ ಮಠದ ಪ್ರಸನ್ನಾನಂದಪುರಿ ಸ್ವಾಮೀಜಿ ಜೊತೆ ವೇದಿಕೆ ಹಂಚಿಕೊಂಡಿದ್ದಾರೆ. ಕೆಲವು ದಿನಗಳಿಂದ ಸಾರ್ವಜನಿಕ ಕಾರ್ಯಕ್ರಮದಲ್ಲಿ ಸಹ ಹೆಚ್ಚು …

Read More »

ಡಿಕೆ ಶಿವಕುಮಾರ್ ಪುತ್ರಿ ವಿವಾಹ: ದೆಹಲಿಯಿಂದ ಹಲವು ಗಣ್ಯರ ಆಗಮನ ಸಾಧ್ಯತೆ

ಬೆಂಗಳೂರು,ಫೆಬ್ರವರಿ 08:ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಪುತ್ರಿ ವಿವಾಹ ಫೆಬ್ರವರಿ 14 ರಂದು ನಡೆಯಲಿದ್ದು, ದೆಹಲಿಯಿಂದ ಹಲವು ರಾಜಕೀಯ ನಾಯಕರು ಬರಲಿದ್ದಾರೆ. ರಾಹುಲ್ ಗಾಂಧಿ, ಕೆಸಿ ವೇಣುಗೋಪಾಲ್, ರಣದೀಪ್ ಸುರ್ಜೇವಾವಾಲಾ ಸೇರಿದಂತೆ ಹಲವು ಕೇಂದ್ರ ನಾಯಕರು ಆಗಮಿಸುವ ಸಾಧ್ಯತೆಯಿದೆ, ಇನ್ನೂ ರಾಜ್ಯದ ಸಿಎಂ ಬಿಎಸ್ ಡಿಯೂರಪ್ಪ, ಡಿಸಿಎಂಗಳು ಹಾಗೂ ಸಚಿವರು ಕೂಡ ವಿವಾಹ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಇಬ್ಬರು ರಾಜಕೀಯ ನಾಯಕರುಗಳ ಕುಟುಂಬದ ಕಡೆಯಿಂದ ಎಲ್ಲಾ ಪ್ರತಿಷ್ಠಿತ ರಾಜಕಾರಣಿಗಳಿಗೆ ಆಹ್ವಾನ ನೀಡಲಾಗಿದೆ, …

Read More »

ಕೌಟುಂಬಿಕ ಸಮಸ್ಯೆಗಳನ್ನು ಕಂಡು, ಕೇಳಿದ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಅಕ್ಷರಶಃ ಕಣ್ಣೀರಾದರು.

ಬೆಳಗಾವಿ – ನರೇಗಾ ಯೋಜನೆ ಹಾಗೂ ಇಟ್ಟಿಗೆ ಬಟ್ಟಿಗಳಲ್ಲಿ ಕೆಲಸ ಮಾಡುತ್ತಿರುವ ಮಹಿಳೆಯರು ಪಡುತ್ತಿರುವ ಕಷ್ಟ ಮತ್ತು ಅವರ ಕೌಟುಂಬಿಕ ಸಮಸ್ಯೆಗಳನ್ನು ಕಂಡು, ಕೇಳಿದ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಅಕ್ಷರಶಃ ಕಣ್ಣೀರಾದರು.  ​ದೇಸೂರ್ ಪ್ರದೇಶಕ್ಕೆ ಭೇಟಿ ನೀಡಿದ ಲಕ್ಷ್ಮಿ ಹೆಬ್ಬಾಳಕರ್, ನರೇಗಾ ಯೋಜನೆಯಡಿ ಕೆಲಸ ಮಾಡುತ್ತಿರುವ ಸುಮಾರು 350ಕ್ಕೂ ಹೆಚ್ಚಿನ ​ ಮಹಿಳೆಯರನ್ನು ಭೇಟಿಮಾಡಿ ಸಂವಾದ ನಡೆಸಿದರು. ಅವರ ಆರೋಗ್ಯದ ಬಗ್ಗೆ ವಿಚಾರಿಸಿ, ಕೌಟುಂಬಿಕ ಪರಿಸ್ಥಿತಿಗಳನ್ನು ಆಲಿಸಿದರು. ಕೆಲಸ ಸ್ಥಳದಲ್ಲಿ ಅವರಿಗೆ …

Read More »