ಚಿತ್ರದುರ್ಗ : ಸಿಎಂ ಯಡಿಯೂರಪ್ಪ ಅವರಿಗೆ ದಣಿವಾಗಿದೆ. ಅವರ ಕುಟುಂಬವೇ ಸರ್ಕಾರವನ್ನು ನಡೆಸುತ್ತಿದೆ. ಅವರ ಮಗ ವಿಜಯೇಂದ್ರ, ಇಡೀ ಕುಟುಂಬ ಕಾವೇರಿ ನಿವಾಸದಲ್ಲಿ ನೇರವಾಗಿ ಹಸ್ತಕ್ಷೇಪ ಮಾಡುತ್ತಿದ್ದಾರೆ. ಇದನ್ನು ಹೈಕಮಾಂಡ್ ಗಮನಿಸುತ್ತಿದೆ. ತಮ್ಮ ಕುಟುಂಬವನ್ನು ಮತ್ತಷ್ಟು ಉದ್ಧಾರ ಮಾಡಲು ಯಡಿಯೂರಪ್ಪ ಸಿಎಂ ಆಗಿ ಉಳಿದಿದ್ದಾರೆ. ಅವರು ಆದಷ್ಟು ಬೇಗ ರಾಜಕೀಯ ನಿವೃತ್ತಿ ಪಡೆದು ಮೊಮ್ಮಕ್ಕಳನ್ನು ಆಡಿಸಲಿ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮುಖ್ಯಮಂತ್ರಿ ಯಡಿಯೂರಪ್ಪನವರ ವಿರುದ್ದ ವಾಗ್ದಾಳಿ …
Read More »ಇಂದು ಕುರುಬ ಸಮುದಾಯದಿಂದ ಬೃಹತ್ ಸಮಾವೇಶ
ಬೆಂಗಳೂರು (ಫೆ. 7): ಕುರುಬ ಸಮುದಾಯ ಬೃಹತ್ ಸಮಾವೇಶಕ್ಕೆ ಇಂದು ರಾಜಧಾನಿ ಸಾಕ್ಷಿಯಾಗಲಿದೆ. ಈ ಮೂಲಕ ತಮ್ಮ ಮೀಸಲಾತಿಯ ಕೂಗನ್ನು ಸರ್ಕಾರಕ್ಕೆ ಮುಟ್ಟಿಸಲು ಸಮುದಾಯ ನಿರ್ಧರಿಸಿದೆ. ಈಗಾಗಲೇ ಕಾಗಿನೆಲೆ ಪೀಠದ ಶ್ರೀ ನಿರಂಜನಾನಂದ ಸ್ವಾಮೀಜಿಗಳ ನೇತೃತ್ವದಲ್ಲಿ ಕಾಗಿನೆಲೆಯಿಂದ ಬೆಂಗಳೂರಿಗೆ ಯಶಸ್ವಿ ಪಾದಯಾತ್ರೆಯನ್ನು ನಡೆಸಲಾಗಿದೆ. ನಗರದ ಹೊರವಲದಲ್ಲಿರುವ ಮಾದಾವರ ಅಂತಾರಾಷ್ಟ್ರೀಯ ಪ್ರದರ್ಶನ ಮೈದಾನದಲ್ಲಿ ಇಂದು ಬೃಹತ್ ಸಮಾವೇಶ ನಡೆಯಲಿದ್ದು, ಸುಮಾರು 10 ಲಕ್ಷಕ್ಕೂ ಹೆಚ್ಚು ಜನ ಭಾಗಿಯಾಗುವ ನಿರೀಕ್ಷೆ ಇದೆ. ರಾಜ್ಯ …
Read More »ಯಾವುದೆ ಆಪತ್ತಿರಲಿ ತುರ್ತು ಸಂಖ್ಯೆ 112 ಕರೆ ಮಾಡುವುದು ನೆನಪಿರಲಿ : PSI ನಾಗರಾಜ ಖಿಲಾರೆ.
ಗೋಕಾಕ : ಗೋಕಾಕ ತಾಲೂಕಿನ ಕೊಣ್ಣೂರಲ್ಲಿ ಶನಿವಾರ ಗೋಕಾಕ ಗ್ರಾಮೀಣ ಪೋಲಿಸ್ ಠಾಣೆಯ ಪಿ,ಎಸ್,ಆಯ್, ನಾಗರಾಜ ಖಿಲಾರೆಯವರು ಶ್ರೀಲಕ್ಷ್ಮಿ ದೇವಸ್ಥಾನದಲ್ಲಿ ಜನಸಂಪರ್ಕ ಸಭೆ ಮತ್ತು ಅಂಬೇಡ್ಕರ ನಗರದಲ್ಲಿರುವ ಶ್ರೀ ದುರ್ಗಾದೇವಿ ದೇವಸ್ಥಾನದಲ್ಲಿ ನಡೆದ ದಲಿತ ಸಬೆ ಮತ್ತು ಒಂದೆ ದೇಶ ಒಂದೆ ತುರ್ತು ಸಂಖ್ಯೆಯ ಅರಿವು ಮೂಡಿಸುವ ಕಾರ್ಯಕ್ರಮದಲ್ಲಿ ಸ್ಥಳಿಯರನ್ನು ಉದ್ದೇಶಿಸಿ ಮಾತನಾಡಿ ತಮ್ಮ ಸುತ್ತಮುತ್ತಲು ಅಗ್ನಿ ದುರಂತ ಸಂಭವಿಸಿದ್ದಲ್ಲಿ,ಅಪಘಾತವಾಗಿದ್ದಲ್ಲಿ,ಅಪರಾಧವಾಗಿದ್ದಲ್ಲಿ ಹಾಗೂ ವಿನಾಕಾರಣ ಯಾರಾದರೂ ಅಣ್ಯ ವ್ಯಕ್ತಿಗಳು ಕುಡಿದು …
Read More »ಅವಿರೋಧ ಆಯ್ಕೆಯಾದ್ರು ನಿತ್ಯ ತರಕಾರಿ ಸೊಪ್ಪು ಮಾರುವ ಗ್ರಾ.ಪಂ ಅಧ್ಯಕ್ಷೆ:
ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಗೆಲ್ಲಲು ಸಾಕಷ್ಟು ಖರ್ಚು ಮಾಡುವುದನ್ನು ನೋಡಿದ್ದೇವೆ. ಇನ್ನು ಅಧ್ಯಕ್ಷ ಸ್ಥಾನಕ್ಕಾಗಿ ದುಡ್ಡಿನ ಮಳೆಯನ್ನೇ ಹರಿಸುತ್ತಾರೆ. ಆದರೆ, ಅಧಿಕಾರ ಬಂದ ಬಳಿಕ ಪಂಚಾಯಿತಿ ಬರುವ ನಿಧಿಯನ್ನೆಲ್ಲ ಗುಳಂ ಮಾಡುತ್ತಾರೆ. ಗ್ರಾಮ ಅಭಿವೃದ್ಧಿಗೆ ಬಳಸುವ ಹಣ ಏಕ ವ್ಯಕ್ತಿಯ ಉದ್ಧಾರಕ್ಕಾಗಿ ದುರ್ಬಳಕೆ ಮಾಡಲಾಗುತ್ತದೆ. ಪಂಚಾಯಿತಿ ಅಧ್ಯಕ್ಷ ಸ್ಥಾನಕ್ಕೆ ಅನೇಕರು ಪೈಪೋಟಿ ನಡೆಸುತ್ತಾರೆ. ಆದರೆ, ಇಲ್ಲೊಬ್ಬ ಮಹಿಳೆ ಅವಿರೋಧವಾಗಿ ಒಂದು ರೂಪಾಯಿ ಖರ್ಚಿಲ್ಲದೆ ಅಧ್ಯಕ್ಷ ಸ್ಥಾನಕ್ಕೇರಿದ್ದಾರೆ. ಹೀಗಿದ್ದರೂ ಆ ಮಹಿಳೆ …
Read More »ಪತಿ ಬದುಕಿದ್ದಾಗಲೇ ಡೆತ್ ಸರ್ಟಿಫಿಕೆಟ್ ಮಾಡಿಸಿದ ಪತ್ನಿ! ಕಾರಣವೇನು ಗೊತ್ತಾ?
ಬೆಂಗಳೂರು: ಬದುಕಿರುವ ಪತಿ ಮೃತಪಟ್ಟಿದ್ದಾರೆ ಎಂದು ಅವರ ಮರಣ ಪ್ರಮಾಣ ಪತ್ರ ಮಾಡಿಸಿಕೊಂಡು “ವಿಧವಾ ವೇತನ’ ಪಿಂಚಣಿ ಪಡೆದಿರುವ ಪ್ರಕರಣ ಮಾಗಡಿ ರಸ್ತೆ ಠಾಣಾ ವ್ಯಾಪ್ತಿಯಲ್ಲಿ ಬೆಳಕಿಗೆ ಬಂದಿದೆ. ಪತ್ನಿ ಮಾಡಿರುವ ಮರಣ ಪ್ರಮಾಣ ಪತ್ರ ಸಿಕ್ಕಿದ ಬಳಿಕ ಶಾಕ್‌ಗೆ ಒಳಗಾದ ಪತಿಯೇ ಪತ್ನಿ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾರೆ. ಭಾಸ್ಕರ್ ಎಂಬುವವರು ನೀಡಿರುವ ದೂರಿನ ಅನ್ವಯ ಆತನ ಪತ್ನಿ ಸುಜಾತಾ ಹಾಗೂ ಮತ್ತಿತರರ ವಿರುದ್ಧ ವಂಚನೆ ಪ್ರಕರಣ ದಾಖಲಿಸಿಕೊಂಡಿರುವ …
Read More »ಕೊಲೆಗೆ ಕಾರಣವಾಯ್ತು 20 ರೂ. ಇಡ್ಲಿ: ತಳ್ಳುಗಾಡಿ ವ್ಯಾಪಾರಿಯ ಕೊಲೆಗೈದ ಮೂವರು
ಮುಂಬೈ: ಕೆಲವೊಮ್ಮೆ ಸಣ್ಣ ಪುಟ್ಟ ಕಾರಣಗಳಿಗೂ ಕೊಲೆಗಳು ನಡೆಯುತ್ತದೆ. ಕೇವಲ 20 ರೂ ವಿಚಾರಕ್ಕೆ ವ್ಯಕ್ತಿಯ ಕೊಲೆಯಾಗುತ್ತದೆ ಎಂದರೆ ನಂಬುವುದು ಕಷ್ಟ. ಆದರೆ ಇಂತಹ ಘಟನೆ ನಡೆದಿದ್ದು ಮಹಾರಾಷ್ಟ್ರದ ಥಾಣೆಯಲ್ಲಿ. ಥಾಣೆಯಲ್ಲಿ ತಳ್ಳು ಗಾಡಿ ವ್ಯಾಪಾರಿಯೊಬ್ಬನನ್ನು ಕೊಲೆ ಮಾಡಲಾಗಿದೆ. 26 ವರ್ಷದ ವೀರೇಂದ್ರ ಯಾದವ್ ಎಂಬಾತನೇ ಕೊಲೆಯಾದ ಯುವಕ. ವೀರೆಂದ್ರ ಯಾದವ್ ಇಲ್ಲಿನ ಮೀರಾ ರಸ್ತೆಯಲ್ಲಿ ತಳ್ಳುಗಾಡಿಯಲ್ಲಿ ಇಡ್ಲಿ ಉಪಹಾರದ ವ್ಯಾಪಾರ ಮಾಡುತ್ತಿದ್ದ. ಶುಕ್ರವಾರ ಬೆಳಗ್ಗೆ ಆತನ ಗಾಡಿಯ ಬಳಿ …
Read More »ರೈತ ಬಾಂಧವರು ಮನಸ್ಪೂರ್ತಿಯಾಗಿ ಶ್ರೀ ಸಂತೋಷ್ ಜಾರಕಿಹೊಳಿ ಅವರಿಗೆ ಸನ್ಮಾನಿಸಿದರು ….
ಗೋಕಾಕ: ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಸುಮಾರು ದಿನಗಳಿಂದ ಚರ್ಚೆ ಯಲ್ಲಿ ಇದ್ದ ಈ ಶುಗರ್ ಫ್ಯಾಕ್ಟರಿ .. ಇದರ ಬಗ್ಗೆ ನಾವು ಹೇಳುವುದಕ್ಕಿಂತ ಜನ ಹೇಳೋದು ಕೇಳಿದ್ರೆ ಬಹುಶ ಈ ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರ್ಮನ್ ಸಂತೋಷ್ ಜಾರಕಿಹೊಳಿ ಅವರಿಗೆ ಸಂತೋಷ್ ಜಾರಕಿಹೊಳಿ ಅವರಿಗೆ ಖುಷಿ ಆಗಬಹುದು. ಒಂದು ಈ ಕಾರ್ಖಾನೆ ರಾಜ್ಯದಲ್ಲಿಯೇ ಮಾದರಿ ಯಾಕೆ ಗೊತ್ತಾ ಪ್ರಥಮ್ ವಾಗಿ ಅನ್ನದಾತರಿಗೆ ಬರಬೇಕಾದ ಬಿಲ್ಲನ್ನು ಕೊಟ್ಟು ಮಾದರಿ ಯಾಗಿದೆ. ಇನ್ನು …
Read More »ಎಸ್ಪಿ ಹೆಸರಿನಲ್ಲಿ ಪಿಎಸ್‌ಐಗೆ ಪಂಗನಾಮ
ಕಲಬುರ್ಗಿ : ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನನಗೆ ತುಂಬಾ ಪರಿಚಯ. ಅವರ ಮತ್ತೊಂದು ಪರ್ಸನಲ್ ನಂಬರ್ ಇದು. ಹಾಗೇ ಹೀಗೆ ಅಂತ ಪಿಎಸ್‌ಐ ಒಬ್ಬರೊಂದಿಗೆ ಮತನಾಡಿದಂತ ಚಾಲಾಕಿಯೊಬ್ಬರು, ಬರೋಬ್ಬರಿ ಪೀಕಿದ್ದು ಮಾತ್ರ 8.5 ಲಕ್ಷ ಹಣ. ಕೊನೆಗೆ ಅನುಮಾನಗೊಂಡಂತ ಪಿಎಸ್‌ಐ ನೇರವಾಗಿ ಎಸ್ಪಿ ಜೊತೆಗೆ ಮಾತನಾಡಿದಾಗ ಗೊತ್ತಾಗಿದ್ದೇ ಯಾಮಾರಿಸಿದವನ ನಿಜವಾದ ಬಣ್ಣ. ಹೀಗೆ ಪಂಗನಾಮ ಹಾಕಿದ ಆಸಾಮಿ ಅಂದರ್ ಕೂಡ ಆಗಿದ್ದಾನೆ.ಹೌದು.. ಪಿಎಸ್‌ಐ ಒಬ್ಬರಿಗೆ ಎಸ್ಪಿ ಹೆಸರಿನಲ್ಲಿ ವಂಚಿಸಿರುವಂತ ಘಟನೆ …
Read More »#KarnatakaWithFarmersProtest ಎಂಬ ಟ್ವಿಟರ್ ಅಭಿಯಾನವನ್ನು ಕರ್ನಾಟಕ ರಕ್ಷಣಾ ವೇದಿಕೆ ಹಮ್ಮಿಕೊಂಡಿದೆ.
ಬೆಂಗಳೂರು: ಕೇಂದ್ರದ ಕೃಷಿ ಕಾಯ್ದೆಗಳ ವಿರುದ್ಧ ದೆಹಲಿಯ ಗಡಿಗಳಲ್ಲಿ ರೈತರು ನಡೆಸುತ್ತಿರುವ ಹೋರಾಟಕ್ಕೆ ಕರ್ನಾಟಕ ರಕ್ಷಣಾ ವೇದಿಕೆ ಬೆಂಬಲ ವ್ಯಕ್ತಪಡಿಸಿದೆ. ಆ ಮೂಲಕ ಟ್ವಿಟರ್ ಅಭಿಯಾನಕ್ಕೆ ಕರವೇ ಸಿದ್ಧತೆ ನಡೆಸಿದೆ. ಶನಿವಾರ(ಫೆ.06) ಸಂಜೆ ಐದು ಗಂಟೆಯಿಂದ #ರೈತಹೋರಾಟದೊಂದಿಗೆಕರ್ನಾಟಕ ಮತ್ತು #KarnatakaWithFarmersProtest ಎಂಬ ಟ್ವಿಟರ್ ಅಭಿಯಾನವನ್ನು ಕರ್ನಾಟಕ ರಕ್ಷಣಾ ವೇದಿಕೆ ಹಮ್ಮಿಕೊಂಡಿದೆ. ಈ ಬಗ್ಗೆ ಪ್ರಕಟಣೆ ಹೊರಡಿಸಿರುವ ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ, ‘ಇದೊಂದು ಐತಿಹಾಸಿಕ ಸಂದರ್ಭವಾಗಿದೆ. ನಮ್ಮ ನಾಡು ರೈತರ ಜತೆ …
Read More »ವಯೋಮಿತಿ ಮೀರದ ಅಭ್ಯರ್ಥಿಗಳಿಗೆ ಇನ್ನೊಮ್ಮೆ ಪರೀಕ್ಷೆ (UPSC)ಬರೆಯಲು ಅನುಮತಿ
ನವದೆಹಲಿ: ಕೇಂದ್ರ ಲೋಕಸೇವಾ ಆಯೋಗ (UPSC) ನಡೆಸುವ ನಾಗರಿಕ ಸೇವಾ ಪರೀಕ್ಷೆ(CSE)ಗಳಲ್ಲಿ ಪಾಲ್ಗೊಳ್ಳಲು 2020 ಕೊನೆಯ ದಿನವಾಗಿದ್ದು ವಯೋಮಿತಿ ಮೀರದ ಅಭ್ಯರ್ಥಿಗಳಿಗೆ ಇನ್ನೊಮ್ಮೆ ಪರೀಕ್ಷೆ ಬರೆಯಲು ಅನುಮತಿ ನೀಡಲು ಕೇಂದ್ರ ಸರ್ಕಾರ ಸಮ್ಮತಿ ಸೂಚಿಸಿದೆ. ಈ ನಿಯಮ ಸಡಿಲಿಕೆ ನಾಗರಿಕ ಸೇವಾ ಪರೀಕ್ಷೆಗಳನ್ನು ತೆಗೆದುಕೊಳ್ಳಲು ಅರ್ಹ ಅಭ್ಯರ್ಥಿಗಳಿಗೆ ಇನ್ನೊಂದು ಅವಕಾಶ ಒದಗಿಸಲು ಮಾತ್ರ ಸೀಮಿತವಾಗಿರುತ್ತದೆ. ಪರೀಕ್ಷೆ ತೆಗೆದುಕೊಳ್ಳಲು 2020 ಕೊನೆಯ ಅವಕಾಶವಾಗಿದ್ದ ಮತ್ತು ವಯೋಮಿತಿ ಮೀರದ ಅಭ್ಯರ್ಥಿಗಳಿಗೆ ಮಾತ್ರ ಈ …
Read More »
Laxmi News 24×7