ಬೆಳಗಾವಿ: ಮಹದಾಯಿ ನದಿ ನೀರು ಹಂಚಿಕೆ ವಿಚಾರವಾಗಿ ಪ್ರಧಾನಿ ಮೋದಿ ಮಧ್ಯಸ್ಥಿಕೆವಹಿಸಿ ಸಮಸ್ಯೆ ಪರಿಹಾರ ಮಾಡಿಕೊಡಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದರು. ಕರ್ನಾಟಕಕ್ಕೆ ಮಹದಾಯಿಯ ಒಂದು ಹನಿ ನೀರು ಕೊಡುವುದಿಲ್ಲ ಎಂದ ಗೋವಾ ಸಿಎಂ ಹೇಳಿಕೆ ವಿಚಾರವಾಗಿ ನಗರದ ತಮ್ಮ ನಿವಾಸದಲ್ಲಿ ಸತೀಶ ಜಾರಕಿಹೊಳಿ ಅವರು ಪ್ರತಿಕ್ರಿಯಿಸಿ, ಈ ಹಿಂದೆ ಹುಬ್ಬಳ್ಳಿಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಡಿಸೆಂಬರ್ ನಲ್ಲಿ ಸಿಹಿ ಸುದ್ದಿ ನೀಡುವುದಾಗಿ ಘೋಷಣೆ ಮಾಡಿದ್ದರು ಒಂದು ವರ್ಷ …
Read More »ಮಹದಾಯಿ ನೀರು ಕೊಡಲ್ಲ ಎಂದ ಗೋವಾ ಸಿಎಂಗೆ ಬಿಎಸ್ವೈ ತಿರುಗೇಟು
ಬೆಂಗಳೂರು,ಜ.31-ಉತ್ತರ ಕರ್ನಾಟಕದ ಕೆಲವು ಜಿಲ್ಲೆಗಳಿಗೆ ಶಾಶ್ವತ ಕುಡಿಯುವ ನೀರು ಪೂರೈಕೆ ಮಾಡುವ ಮಹದಾಯಿ ನದಿನೀರು ಹಂಚಿಕೆಯಲ್ಲಿ ಕರ್ನಾಟಕ ಯಾವುದೇ ಕಾರಣಕ್ಕೂ ಯಾರಿಗೂ ಬಗ್ಗುವುದಿಲ್ಲ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ. ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಹೇಳಿಕೆಗೆ ತಿರುಗೇಟು ನೀಡಿದ ಅವರು, ಮಹದಾಯಿ ನದಿನೀರಿನಲ್ಲಿ ನ್ಯಾಯಾೀಕರಣದ ತೀರ್ಪಿನಂತೆ ನಮಗೂ ಕೂಡ ನೀರು ಸಿಗಲೇಬೇಕು. ನಾವು ಕೂಡ ಯಾರಿಗೂ ಬಗ್ಗುವುದಿಲ್ಲ, ಜಗ್ಗುವುದೂ ಇಲ್ಲ ಎಂದು ಗುಡುಗಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹದಾಯಿ ನದಿನೀರು …
Read More »ಬಿಗ್‌ಬಾಸ್ 08 ಗೆ ರಾಕಿಂಗ್ ಸ್ಟಾರ್ ಯಶ್ ತಾಯಿ?
ಸ್ಟಾರ್ ನಟ ಯಶ್ ಅವರ ತಾಯಿ ಪುಷ್ಪಾ ಅವರು ಕನ್ನಡ ಬಿಗ್‌ಬಾಸ್ 8 ರಲ್ಲಿ ಸ್ಪರ್ಧಿಯಾಗಿ ಭಾಗವಹಿಸಲಿದ್ದಾರೆ ಎನ್ನಲಾಗುತ್ತಿದೆ. ಕೆಲವು ದಿನಗಳಿಂದಲೂ ಸಾಮಾಜಿಕ ಜಾಲತಾಣದಲ್ಲಿ ಈ ಸುದ್ದಿ ಹರಿದಾಡುತ್ತಿದೆ. ಪುಷ್ಪಾ ಅವರು ಕೆಲವು ದಿನಗಳ ಹಿಂದೆಯಷ್ಟೆ ಸಿಹಿ ಕಹಿ ಚಂದ್ರು ನಡೆಸಿಕೊಡುವ ಅಡುಗೆ ಕಾರ್ಯಕ್ರಮ ‘ಬೊಂಬಾಟ್ ಭೋಜನ’ದಲ್ಲಿ ಭಾಗವಹಿಸಿದ್ದರು. ಅದಾದ ನಂತರ ಪುಷ್ಪಾ ಅವರು ಬಿಗ್‌ಬಾಸ್ ಗೆ ಬರಲಿದ್ದಾರೆ ಎಂಬ ಸುದ್ದಿ ಜೋರಾಗಿ ಹರಿದಾಡಲು ಆರಂಭವಾಯಿತು. ಆದರೆ ಯಶ್ ಅಭಿಮಾನಿಗಳು …
Read More »ಕಿಚ್ಚಾ ಸುದೀಪ ಅಭಿನಯದ ಕನ್ನಡ ಚಲನಚಿತ್ರ “ವಿಕ್ರಾಂತ ರೋಣಾ” ದ ಶಿರ್ಷೀಕೆ ದುಬೈನ ಬುರ್ಜ ಖಲಿಫಾದ ಮೇಲೆ ಬಿಡುಗಡೆ
ಗೋಕಾಕ: ಕಿಚ್ಚಾ ಸುದೀಪ ಅಭಿನಯದ ಕನ್ನಡ ಚಲನಚಿತ್ರ “ವಿಕ್ರಾಂತ ರೋಣಾ” ದ ಶಿರ್ಷೀಕೆ ಹಾಗೂ ಲಾಂಛನವನ್ನು ಜನೆವರಿ 31ರಂದು ದುಬೈನ ಬುರ್ಜ ಖಲಿಫಾದ ಮೇಲೆ ಬಿಡುಗಡೆ ಮಾಡುವ ಮೂಲಕ ವಿಶ್ವದಾಖಲೆ ಮಾಡಲಿದೆ. ಎರಡು ಸಾವಿರ ಅಡಿ ಎತ್ತರದ ನಟ ಕಿಚ್ಚಾ ಸುದೀಪ ಅವರ ಕಟೌಟನ್ನು ಈ ಕಟ್ಟಡದಲ್ಲಿ ಹಾಕುವ ಮೂಲಕ ಚಲನಚಿತ್ರ ರಂಗದಲ್ಲಿಯೇ ಅತೀ ಎತ್ತರದ ಕಟೌಟನಲ್ಲಿ ರಾರಾಜಿಸುವ ಕೀರ್ತಿಗೆ ಸುದೀಪ ಪಾತ್ರರಾಗುತ್ತಿದ್ದಾರೆ. ಈ ದೃಶ್ಯವನ್ನು ಭಾರತದಲ್ಲಿ ಜನೇವರಿ 31ರ …
Read More »ಫೆಬ್ರವರಿ 1ರಿಂದ ಭಕ್ತರಿಗೆ ಸವದತ್ತಿ ಯಲ್ಲಮ್ಮ ದರ್ಶನ
ಸವದತ್ತಿ – ಪ್ರಸಿದ್ಧ ಯಾತ್ರಾ ಕ್ಷೇತ್ರ ಸವದತ್ತಿ ಯಲ್ಲಮ್ಮ ದೇವಸ್ಥಾನ ಫೆಬ್ರವರಿ 1ರಿಂದ ಭಕ್ತರಿಗೆ ಮುಕ್ತವಾಗಲಿದೆ. ಕೊರೋನಾ ಹಿನ್ನೆಲೆಯಲ್ಲಿ ಭಕ್ತರಿಗೆ ದೇವಿಯ ದರ್ಶನವನ್ನು ಕಳೆದ 10 ತಿಂಗಳಿನಿಂದ ನಿರ್ಬಂಧಿಸಲಾಗಿತ್ತು. ಇದೀಗ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದು, ಫೆಬ್ರವರಿ 1ರಿಂದ ದರ್ಶನಕ್ಕೆ ಅವಕಾಶ ನೀಡಲಾಗಿದೆ. ಈ ಕುರಿತು ದೇವಸ್ಥಾನದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರವಿ ಕೊಟಾರಗಸ್ತಿ ಮಾಹಿತಿ ನೀಡಿದ್ದಾರೆ. ಕರ್ನಾಟಕ ಮತ್ತು ಮಹಾರಾಷ್ಟ್ರದ ಲಕ್ಷಾಂತರ ಜನರು ಸವದತ್ತಿ ಯಲ್ಲಮ್ಮ ದೇವಿಯ ಭಕ್ತರಿದ್ದಾರೆ. ಫೆಬ್ರವರಿ ತಿಂಗಳಲ್ಲಿ …
Read More »ಡಬಲ್ ಮರ್ಡರ್ ಕೇಸ್ – ಮಗಳ ನಾಲಗೆಯನ್ನು ತುಂಡರಿಸಿ ತಿಂದಳು ತಾಯಿ
ತಿರುಪತಿ: ಆಂಧ್ರದ ಮದನಪಲ್ಲಿಯಲ್ಲಿ ಜನವರಿ 24ರಂದು ಹೆತ್ತವರೇ ಇಬ್ಬರು ಮಕ್ಕಳನ್ನು ಕೊಂದ ಪ್ರಕರಣದಲ್ಲಿ ಬೆಚ್ಚಿಬೀಳುವ ವಿಚಾರಗಳು ಬೆಳಕಿಗೆ ಬರುತ್ತಿವೆ. ತನ್ನನ್ನು ತಾಯಿ ಕಾಳಿಯ ಅಪರಾವತಾರ ಎಂದು ಭಾವಿಸಿಕೊಂಡ ನನ್ನ ಪತ್ನಿ ಪದ್ಮಜ, ದೊಡ್ಡ ಮಗಳು ಅಲೇಖ್ಯಾಳನ್ನು ಕೊಂದ ನಂತರ, ನಾಲಗೆಯನ್ನು ಕಟ್ ಮಾಡಿಕೊಂಡು ತಿಂದುಬಿಟ್ಟಳು’ ಎಂದು ಪುರುಷೋತ್ತಮ ನಾಯ್ಡು ಕಣ್ಣೀರಿಡುತ್ತಾ ವೈದ್ಯರ ಮುಂದೆ ಹೇಳಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಮರಣೋತ್ತರ ಪರೀಕ್ಷೆಯ ವರದಿ ಬಂದ ನಂತರ ಈ ವಿಚಾರದಲ್ಲಿ ಸ್ಪಷ್ಟತೆ ಸಿಗುವ …
Read More »ದೆಹಲಿ ಗಡಿಯಲ್ಲಿ ಇಂಟರ್‌ನೆಟ್ ಸೇವೆ ಬಂದ್
ನವದೆಹಲಿ/ ಬೆಂಗಳೂರು: ದೆಹಲಿ ಗಡಿಗಳಲ್ಲಿ ಹೈಡ್ರಾಮಾ ಮುಂದುವರಿದಿದೆ. ಮೊನ್ನೆ ಘಾಜಿಪುರ ಗಡಿಯಲ್ಲಿ ಕರೆಂಟ್, ನೀರು ಕಡಿತಗೊಳಿಸಿದ್ದ ಸರ್ಕಾರ ಈಗ ರೈತರು ಪ್ರತಿಭಟನೆ ನಡೆಸುತ್ತಿರುವ ಎಲ್ಲ ಗಡಿಗಳಲ್ಲಿ ಇಂಟರ್‌ನೆಟ್ ಸೇವೆಯನ್ನು ಇದ್ದಕ್ಕಿದ್ದಂತೆ ಬಂದ್ ಮಾಡಿದೆ. ಸಿಂಘು, ಟಿಕ್ರಿ, ಗಾಜಿಪುರ್ ಗಡಿಯಲ್ಲಿ ಜ.31ರ ರಾತ್ರಿ 11 ಗಂಟೆಯವರೆಗೆ ತಾತ್ಕಾಲಿಕವಾಗಿ ಇಂಟರ್‌ನೆಟ್ ಸೇವೆ ಸ್ಥಗಿತಗೊಳಿಸುವಂತೆ ಕೇಂದ್ರ ಗೃಹ ಸಚಿವಾಲಯ ಆದೇಶಿಸಿದೆ. ನಡೆಯುತ್ತಿರುವ ರೈತರ ಪ್ರತಿಭಟನೆಯ ಮಧ್ಯೆ ಸಾರ್ವಜನಿಕ ಸುರಕ್ಷತೆಯನ್ನು ಕಾಪಾಡಿಕೊಳ್ಳಲು ಈ ನಿರ್ಧಾರ ಕೈಗೊಳ್ಳಲಾಗಿದೆ …
Read More »ಬೆಳಗಾವಿ ಕೃಷ್ಣಾ ಪಾಟೀಲ್ ಎಂಬುವವರ ಹೋರಿಯನ್ನು 4ಲಕ್ಷ 55 ಸಾವಿರ ರೂಪಾಯಿ ಕೊಟ್ಟು ಖರೀದಿ
ಧಾರವಾಡ: ತಾಲೂಕಿನ ಚಿಕ್ಕಮಲ್ಲಿಗವಾಡ ಗ್ರಾಮದ ಬಸಪ್ಪ ಅವರಿಗೆ ಸೇರಿದ ಹೋರಿಯೊಂದು 4.55 ಲಕ್ಷ ರೂ.ಗೆ ಬಿಕಾರಿಯಾಗಿ ಎಲ್ಲರ ಹುಬ್ಬೆರುವಂತೆ ಮಾಡಿದೆ. ಬೆಳಗಾವಿ ಜಿಲ್ಲೆಯ ಬೆಳಗುಂದಿಯ ಕೃಷ್ಣಾ ಪಾಟೀಲ್ ಎಂಬುವವರು ಈ ಹೋರಿಯನ್ನು ಹುಡುಕಿಕೊಂಡು ಬಂದು, 4ಲಕ್ಷ 55 ಸಾವಿರ ರೂಪಾಯಿ ಕೊಟ್ಟು ಖರೀದಿ ಮಾಡಿದ್ದಾರೆ. ಹೋರಿಯ ಮಾಲೀಕ ಬಸಪ್ಪ ಅವರ ತಂದೆ ಭೀಮಪ್ಪ ಕಳೆದ ನಾಲ್ಕು ವರ್ಷಗಳ ಹಿಂದೆ ರಾಣೆಬೆನ್ನೂರ ತಾಲೂಕು ದೇವರಗುಡ್ಡದಲ್ಲಿ 30 ಸಾವಿರ ರೂಪಾಯಿಗೆ ಜೋಡಿ ಹೋರಿ …
Read More »ನಾಳೆ ಪೋಲಿಯೋ ಲಸಿಕೆ ಅಭಿಯಾನ; ಹತ್ತಿರದ ಲಸಿಕಾ ಕೇಂದ್ರದ ಬಗ್ಗೆ ಮಾಹಿತಿಗೆ ಈ ಆಪ್ ಬಳಸಿ
ನಾಳೆ ಭಾನುವಾರ, ಜನವರಿ 31ರಂದು ರಾಜ್ಯಾದ್ಯಂತ ಪೋಲಿಯೋ ಲಸಿಕೆ ಅಭಿಯಾನ ನಡೆಯಲಿದೆ ಎಂದು ಆರೋಗ್ಯ ಸಚಿವ ಡಾ.ಸುಧಾಕರ್ ಮಾಹಿತಿ ನೀಡಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಸಚಿವರು, ಈ ಹಿಂದೆ ಎಷ್ಟೇ ಬಾರಿ ಪೋಲಿಯೋ ಲಸಿಕೆ ಹಾಕಿಸಿದ್ದರೂ 5 ವರ್ಷದೊಳಗಿನ ಎಲ್ಲ ಮಕ್ಕಳಿಗೂ ಕಡ್ಡಾಯವಾಗಿ ಲಸಿಕೆ ಹಾಕಿಸಬೇಕು ಎಂದು ಪೋಷಕರಲ್ಲಿ ಮನವಿ ಮಾಡಿದ್ದಾರೆ. ನಿಮ್ಮ ಹತ್ತಿರದ ಲಸಿಕಾ ಕೇಂದ್ರದ ಬಗ್ಗೆ ಮಾಹಿತಿ ಪಡೆಯಲು ಈ ಆಪ್ ಬಳಸಿ.
Read More »ಗೋಕಾಕ ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಗೋಕಾಕ ಆಯ್ಕೆ
ಗೋಕಾಕ: ಇಲ್ಲಿನ ನಗರಸಭೆ ಸ್ಥಾಯಿ ಸಮಿತಿಯ ನೂತನ ಅಧ್ಯಕ್ಷರಾಗಿ ಕುತ್ಬುದ್ಧೀನ್ ಗೋಕಾಕ ಶನಿವಾರ ಆಯ್ಕೆಯಾಗಿದ್ದಾರೆ. ಕುತ್ಬುದ್ಧೀನ್ ಅವರು ಮೂರು ಬಾರಿ ನಗರಸಭೆಗೆ ಆಯ್ಕೆಯಾಗಿದ್ದರು. ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ, ಮುಖಂಡರಾದ ಲಖನ್ ಜಾರಕಿಹೊಳಿ ಹಾಗೂ ಅಂಬಿರಾವ್ ಪಾಟೀಲ ಅವರ ಸೂಚನೆಯ ಮೇರೆಗೆ ಇವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ. ಈ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷ ಜಯಾನಂದ ಹುಂಚ್ಯಾಳ, ನಗರ ಸೇವಕರಾದ ಅಬ್ಬಾಸ ದೇಸಾಯಿ, ಸಂತೋಷ …
Read More »
Laxmi News 24×7