ಬೆಂಗಳೂರು – ಪೊಲೀಸರಿಗೆ ವಾರದ ರಜೆ ನೀಡುತ್ತಿಲ್ಲವೆಂಬ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಅವರು ಕಡ್ಡಾಯವಾಗಿ ಸಿಬ್ಬಂದಿಗೆ ವಾರದ ರಜೆ ನೀಡುವಂತೆ ಗುರುವಾರ ತುರ್ತು ಸುತ್ತೋಲೆ ಹೊರಡಿಸಿದ್ದಾರೆ. ”ರಾಜ್ಯ ಪೊಲೀಸ್ ಸಿಬ್ಬಂದಿಗೆ ವಾರದಲ್ಲಿ ಒಂದು ದಿನ ಕಡ್ಡಾಯ ರಜೆ ನೀಡಲು ಸೂಚಿಸಿದ್ದು ತಪ್ಪಿದರೆ, ಸೂಕ್ತ ಕ್ರಮ ಕೈಗೊಳ್ಳಬೇಕಾಗುತ್ತದೆ” ಎಂದು ಸುತ್ತೋಲೆಯಲ್ಲಿ ಎಚ್ಚರಿಸಿದ್ದಾರೆ. ರಾಜ್ಯದ ಪೊಲೀಸ್ ಕಮಿಷನರ್‌ಗಳು, ಐಜಿಪಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಈ …
Read More »ಸಚಿವ ಮಾಧುಸ್ವಾಮಿಗೆ ಹಿಂದಿನ ಸಾಲು!
ಬೆಂಗಳೂರು: ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ಅವರ ಪುತ್ರ ಬಿ.ವೈ.ವಿಜಯೇಂದ್ರ ವಿರುದ್ಧ ವಿರೋಧ ಪಕ್ಷಗಳು ನಿರಂತರ ನಡೆಸುತ್ತಿದ್ದ ವಾಗ್ದಾಳಿಗೆ ಗುರಾಣಿಯಂತೆ ನಿಲ್ಲುತ್ತಿದ್ದ ಸಚಿವ ಜೆ.ಸಿ.ಮಾಧುಸ್ವಾಮಿಗೆ ಈಗ ‘ಹಿಂಬಡ್ತಿ’ ಆಗಿದೆ. ಕಾನೂನು ಮತ್ತು ಸಂಸದೀಯ ವ್ಯವಹಾರ ಸಚಿವರಾಗಿದ್ದಾಗ ಅವರಿಗೆ ಮೊದಲ ಸಾಲಿನಲ್ಲಿ ಆಸನ ವ್ಯವಸ್ಥೆ ಇತ್ತು. ಸಂಪುಟ ವಿಸ್ತರಣೆ ಮತ್ತು ಖಾತೆ ಬದಲಾವಣೆ ಬಳಿಕ ಇದೀಗ ಎರಡನೇ ಸಾಲಿನಲ್ಲಿ ವ್ಯವಸ್ಥೆ ಮಾಡಲಾಗಿದೆ. ಮಾಧುಸ್ವಾಮಿ ಅವರು ಈ …
Read More »ವಿಕಲಚೇತನರಿಗೆ ತ್ರೀಚಕ್ರ ವಾಹನ(ಬೈಕ್)ಗಳನ್ನು ವಿತರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ
ಗೋಕಾಕ : ವಿಕಲಚೇತನರು ಮುಖ್ಯ ವಾಹಿನಿಗೆ ತರಲು ಸರ್ಕಾರ ಸಾಕಷ್ಟು ಯೋಜನೆಗಳನ್ನು ರೂಪಿಸಿದ್ದು, ಅವುಗಳನ್ನು ಸದ್ಬಳಕೆ ಮಾಡಿಕೊಳ್ಳುವಂತೆ ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಗುರುವಾರ ಸಂಜೆ ಇಲ್ಲಿಯ ಎನ್‍ಎಸ್‍ಎಫ್ ಅತಿಥಿ ಗೃಹದಲ್ಲಿ ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆಯಿಂದ ವಿಕಲಚೇತನರಿಗೆ ತ್ರಿಚಕ್ರ ವಾಹನಗಳನ್ನು ವಿತರಿಸಿ ಅವರು ಮಾತನಾಡಿದರು. ವಿಕಲಚೇತನರನ್ನು ಸಮಾಜ ಗೌರವದಿಂದ ನಡೆಸಿಕೊಳ್ಳಬೇಕು. ಅವರ ಬಗ್ಗೆ ಕೀಳುರಿಮೆ ಮಾಡದೇ ಆದರದಿಂದ ನೋಡಿಕೊಳ್ಳಬೇಕು. ವಿಕಲಚೇತನರ ಪ್ರಗತಿಗಾಗಿ …
Read More »ಎರಡನೇ ಮಗುವಿನ ಆಗಮನದ ದಿನಾಂಕ ತಿಳಿಸಿದ ಸೈಫ್-ಕರೀನಾ ದಂಪತಿ
ನಟ ಸೈಫ್ ಅಲಿ ಖಾನ್ ಹಾಗೂ ಕರೀನಾ ಕಪೂರ್ ದಂಪತಿ ತಮ್ಮ ಎರಡನೇ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಮೊದಲ ಮಗ ತೈಮೂರ್‌ಗೆ ಈಗ ನಾಲ್ಕು ವರ್ಷವಾಗಿದ್ದು, ಈಗ ಎರಡನೇ ಮಗುವಿಗೆ ಗರ್ಭಿಣಿ ಆಗಿದ್ದಾರೆ ನಟಿ ಕರೀನಾ. ಇತ್ತೀಚಿನ ಸಂದರ್ಶನವೊಂದರಲ್ಲಿ ಮಾತನಾಡುತ್ತಾ ಮಗುವಿನ ಡಿಲೆವರಿ ಡೇಟ್ ಅನ್ನು ಹೇಳಿದ್ದಾರೆ ಸೈಫ್ ಅಲಿ ಖಾನ್. ಫೆಬ್ರವರಿ ಮೊದಲ ವಾರದಲ್ಲಿ ಕರೀನಾ ಮಗುವಿಗೆ ಜನ್ಮ ನೀಡಲಿದ್ದಾರಂತೆ. ಈ ವಿಷಯವನ್ನು ಸೈಫ್ ಅಲಿ ಖಾನ್ ಸಂದರ್ಶನವೊಂದರಲ್ಲಿ ಹೇಳಿದ್ದಾರೆ. …
Read More »ಮಂಗಳವಾರ ರಜಾದಿನ’ ಚಿತ್ರದ ನೀನೆ ಗುರು, ನೀನೆ ಗುರಿ, ನೀನೆ ಗುರುತು ಹಾಡು ಬಿಡುಗಡೆ
ಬೆಂಗಳೂರು: ಕೋವಿಡ್ ಅಬ್ಬರದಿಂದ ತತ್ತರಿಸಿದ್ದ ಚಂದನವನ ಮತ್ತೆ ನಿಧಾನವಾಗಿ ತಲೆ ಎತ್ತುತ್ತಿದ್ದು, ಹಲವು ಸಿನಿಮಾಗಳು ಬಿಡುಗಡೆಗೆ ತಯಾರಿ ನಡೆಸಿವೆ. ಈ ನಡುವೆ ಬಿಗ್ ಬಾಸ್ ಖ್ಯಾತಿಯ ಚಂದನ್ ಆಚಾರ್ ಅಭಿನಯದ ‘ಮಂಗಳವಾರ ರಜಾದಿನ’ ಸಿನಿಮಾದ ನೀನೆ ಗುರು, ನೀನೆ ಗುರಿ, ನೀನೆ ಗುರುತು ಎಂಬ ಹಾಡನ್ನು ನಟ ಅಭಿಷೇಕ್ ಅಂಬರೀಷ್ ಬಿಡುಗಡೆಗೊಳಿಸಿದ್ದು, ಇದೀಗ ಯುಟ್ಯೂಬ್ ನಲ್ಲಿ ಭಾರಿ ಸದ್ದು ಮಾಡುತ್ತಿದೆ. ಗೌಸ್ ಫೀರ್ ಅವರ ಸಾಹಿತ್ಯದಲ್ಲಿ ಮೂಡಿಬಂದಿರುವ ಈ ಹಾಡು …
Read More »ರಾಜಕೀಯ ವೈರಿ ಡಿಕೆಶಿ ಕೊಠಡಿಗೆ ಯೋಗೇಶ್ವರ್ ಪ್ರವೇಶ: ಇಲ್ಲೂ ಇದೆಯಾ ಸಾಹುಕಾರ್ ಪಾತ್ರ?
ಬೆಂಗಳೂರು: ಇತ್ತೀಚೆಗಷ್ಟೇ ಸಚಿವ ಸ್ಥಾನ ಪಡೆದಿರುವ ಪರಿಷತ್ ಸದಸ್ಯ ಸಿ.ಪಿ ಯೋಗೇಶ್ವರ್ ಇದೀಗ ಕೊಠಡಿ ರಾಜಕೀಯ ಆರಂಭಿಸಿದ್ದಾರೆ. ತಮ್ಮ ರಾಜಕೀಯ ಬದ್ಧವೈರಿ ಡಿ ಕೆ ಶಿವಕುಮಾರ್ ಅವರು ಸಚಿವರಾಗಿದ್ದ ಪಡೆದಿದ್ದ ಕೊಠಡಿಯನ್ನೇ ಪಡೆದಿದ್ದಾರೆ. ಹೌದು. ಕಾಂಗ್ರೆಸ್- ಜೆಡಿಎಸ್ ಮೈತ್ರಿ ಸರ್ಕಾರದ ಅವಧಿಯಲ್ಲಿ ಸಚಿವರಾಗಿದ್ದ ಡಿ ಕೆ ಶಿವಕುಮಾರ್ ಪಡೆದಿದ್ದ ಕೊಠಡಿಗೆ ಇಂದು ಸಿ.ಪಿ ಯೋಗೇಶ್ವರ್ ಪ್ರವೇಶಿಸಿದ್ದಾರೆ. ವಿಧಾನಸೌಧದ ಮೂರನೇ ಮಹಡಿಯ ಕೊಠಡಿ ಸಂಖ್ಯೆ 336, 337 ಪಡೆದಿರುವ ಸಿ.ಪಿ.ಯೋಗೇಶ್ವರ್, ಇಂದು …
Read More »B.J.P.ಜಿಲ್ಲಾ ಕಾರ್ಯಾಲಯದಲ್ಲಿ ಎಸ್ ಸಿ ಮೋರ್ಚಾ ಜಿಲ್ಲಾ ಕಾರ್ಯಕಾರಣಿ ಸಭೆ
ಭಾರತೀಯ ಜನತಾ ಪಾರ್ಟಿ ಬೆಳಗಾವಿ ಮಹಾನಗರ ಜಿಲ್ಲಾ ಕಾರ್ಯಾಲಯದಲ್ಲಿ ದಿನಾಂಕ 27/01/2021 ರಂದು ಎಸ್ ಸಿ ಮೋರ್ಚಾ ಜಿಲ್ಲಾ ಕಾರ್ಯಕಾರಣಿ ಸಭೆ ಮಾಡಲಾಯಿತು . ಬೆಳಗಾವಿ ಉತ್ತರ ಮತಕ್ಷೇತ್ರದ ಶಾಸಕರಾದ ಶ್ರೀ ಅನಿಲ ಬೆನಕೆ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು ಹಾಗೂ ಸಭೆಯ ಅಧ್ಯಕ್ಷತೆಯನ್ನು ಭಾಜಪಾ ಬೆಳಗಾವಿ ಮಹಾನಗರ ಎಸ್ ಸಿ ಮೋರ್ಚಾ ಅಧ್ಯಕ್ಷರಾದ ಶ್ರೀ ಮಂಜುನಾಥ ಪಮ್ಮಾರ ವಹಿಸಿದ್ದರು . ವಿಶೇಷ ಆಹ್ವಾನಿತರಾಗಿ SC ಮೋರ್ಚಾ ರಾಜ್ಯ ಕಾರ್ಯದರ್ಶಿಗಳಾದ …
Read More »ಸಚಿವ ಸ್ಥಾನ ಭಗ್ನಗೊಂಡ ಬೆನ್ನಲ್ಲೇ ಮತ್ತೊಂದು ಹುದ್ದೆಗೆ ಕರ್ಚಿಫ್ ಹಾಕಿದ ಹೆಚ್. ವಿಶ್ವನಾಥ್
ಬೆಂಗಳೂರು: ಎಂ.ಎಲ್.ಸಿ. ಹೆಚ್. ವಿಶ್ವನಾಥ್ ವಿರುದ್ಧ ಹೈಕೋರ್ಟ್ ನೀಡಿದ್ದ ಅನರ್ಹತೆ ತೀರ್ಪನ್ನು ಸುಪ್ರೀಂಕೋರ್ಟ್ ಎತ್ತಿಹಿಡಿದಿದ್ದು, ವಿಶ್ವನಾಥ್ ಗೆ ಸಚಿವ ಸ್ಥಾನ ನೀಡಲು ಸಾಧ್ಯವಿಲ್ಲ ಎಂದು ಹೇಳಿದೆ. ಸಚಿವ ಸ್ಥಾನ ಕೈತಪ್ಪಿದ ಬೆನ್ನಲ್ಲೇ ಇದೀಗ ಹೆಚ್. ವಿಶ್ವನಾಥ್ ಮತ್ತೊಂದು ಹುದ್ದೆಯ ಮೇಲೆ ಕಣ್ಣಿಟ್ಟಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ವಿಶ್ವನಾಥ್, ನಾನು ಒಂಟಿಯಲ್ಲ ಎಂದು ಹೇಳಿದ್ದಕ್ಕೆ ಧನ್ಯವಾದ. ಆದರೆ ನನಗೆ ಸಚಿವರ ಸಹಾನುಭೂತಿ ಬೇಕಿಲ್ಲ. ನಮ್ಮ 17 ಜನರ ಟೀಂ ಸಿಎಂ ಯಡಿಯೂರಪ್ಪ ಜೊತೆ …
Read More »ಉದ್ಧವ್ ಠಾಕ್ರೆ ಒಬ್ಬ ‘ಮಹಾ’ ಹುಚ್ಚ : ಸಾ.ರಾ.ಗೋವಿಂದು
ಬೆಂಗಳೂರು, ಜ.28- ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಒಬ್ಬ ಅರೆಹುಚ್ಚ ಎಂದುಕೊಂಡಿದ್ದೆವು. ಪೂರ್ತಿ ಹುಚ್ಚ ಎಂಬುದು ಅವರ ಹೇಳಿಕೆಯಿಂದ ಸಾಬೀತಾಗಿದೆ ಎಂದು ಡಾ.ರಾಜ್‍ಕುಮಾರ್ ಅಭಿಮಾನಿಗಳ ಸಂಘದ ಅಧ್ಯಕ್ಷ ಸಾ.ರಾ.ಗೋವಿಂದು ಕಿಡಿಕಾರಿದ್ದಾರೆ. ಮರಾಠಿ ಮಾತನಾಡುವವರು ಇರುವ ಕರ್ನಾಟಕದ ಗಡಿ ಪ್ರದೇಶವನ್ನು ಕೇಂದ್ರಾಡಳಿತ ಪ್ರದೇಶ ಎಂಬುದಾಗಿ ಘೋಷಿಸಬೇಕು ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ನೀಡಿರುವ ಹೇಳಿಕೆಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿರುವ ಅವರು ರಾಜಕೀಯ ಅಸ್ತಿತ್ವಕ್ಕಾಗಿ ಮಾನಸಿಕವಾಗಿ ಸ್ಥಿಮಿತ ಕಳೆದುಕೊಂಡಿರುವ ಉದ್ಧವ್ ಠಾಕ್ರೆ ಅವರಿಗೆ …
Read More »ವಿಧಾನಮಂಡಲ ಅಧಿವೇಶನ ಪ್ರಾರಂಭ; ರಾಜ್ಯಪಾಲರ ಭಾಷಣದ ಹೈಲೈಟ್ಸ್
ಬೆಂಗಳೂರು(ಜ. 28): ಇಂದಿನಿಂದ ಏಳು ದಿನಗಳ ಕಾಲ ವಿಧಾನಮಂಡಲ ಅಧಿವೇಶನ ನಡೆಯಲಿದೆ. ಬೆಳಗ್ಗೆ 11 ಗಂಟೆಗೆ ಅಧಿವೇಶನ ಪ್ರಾರಂಭವಾಯಿತು. ಫೆ. 5ರವರೆಗೆ ನಡೆಯುವ ಈ ಅಧಿವೇಶನದಲ್ಲಿ ತೀವ್ರ ರಾಜಕೀಯ ಜಟಾಪಟಿ ನಡೆಯುವುದು ನಿಶ್ಚಿತವಾಗಿದೆ. ಈ ಮಧ್ಯೆ 11 ಮಸೂದೆಗಳು ಮಂಡನೆಗೆ ಸಿದ್ಧವಾಗಿವೆ. ಇವುಗಳ ಪೈಕಿ 2-3 ಮಸೂದೆಗಳ ಸುಗ್ರೀವಾಜ್ಞೆ ಕೂಡ ಆಗಲಿದೆ. ವಿಧಾನಪರಿಷತ್ನಲ್ಲಿ ಸಭಾಪತಿ ಸ್ಥಾನಕ್ಕಾಗಿ ಬಿಜೆಪಿ ಮತ್ತು ಜೆಡಿಎಸ್ ಪಕ್ಷದ ಮಧ್ಯೆ ಒಪ್ಪಂದ ಆಗಿರುವುದು ಸಾಕಷ್ಟು ಕುತೂಹಲ ಮೂಡಿಸಿದೆ. …
Read More »
Laxmi News 24×7