Breaking News

ರಾಜ್ಯ

ಮಾಜಿ ಸಚಿವ, ಜೆಡಿಎಸ್ ಶಾಸಕ ಎಂ.ಸಿ ಮನಗುಳಿ ನಿಧನ

ಬೆಂಗಳೂರು: ಸಿಂದಗಿ ಕ್ಷೇತ್ರದ ಜೆಡಿಎಸ್ ಶಾಸಕ, ಮಾಜಿ ಸಚಿವ ಎಂ.ಸಿ ಮನಗುಳಿ ವಿಧಿವಶರಾಗಿದ್ದಾರೆ. ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಮನಗುಳಿ ಅವರನ್ನು ಕಳೆದ ಶನಿವಾರ ಬೆಂಗಳೂರಿನ ಅಪೋಲೊ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ. ಅವರಿಗೆ 85 ವರ್ಷ ವಯಸ್ಸಾಗಿತ್ತು. ಮಲ್ಲಪ್ಪ‌ ಚೆನ್ನವೀರಪ್ಪ ಮನಗೂಳಿ ಅವರು ಸತತ ಏಳು ಬಾರಿ ಚುನಾವಣೆಯಲ್ಲಿ ಸ್ಪರ್ಧಿಸಿ, ಎರಡು ಬಾರಿ ಶಾಸಕರಾಗಿದ್ದರು. 1994ರಲ್ಲಿ ದೇವೇಗೌಡರ ಸಂಪುಟದಲ್ಲಿ ಸಚಿವರಾಗಿದ್ದರು. ಮತ್ತೆ ಕಳೆದ ಕಾಂಗ್ರೆಸ್- ಜೆಡಿಎಸ್‌ ಮೈತ್ರಿ …

Read More »

ರೈತ ಸಮುದಾಯಕ್ಕೆ ಮತ್ತೊಂದು ಗುಡ್ ನ್ಯೂಸ್

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಬುಧವಾರ ಕೇಂದ್ರ ಸಂಪುಟ ಸಭೆ ನಡೆಯಿತು. ಈ ಸಭೆಯಲ್ಲಿ ರೈತರ ಮಹತ್ವದ ನಿರ್ಣಯ ಕೈಗೊಳ್ಳಲಾಗಿದೆ. ತೆಂಗು ಬೆಳೆಯುವ ರೈತರಿಗೆ ಎಂಎಸ್ ಪಿ ಕೊಡುಗೆ ನೀಡಲಾಗಿದೆ ಅಂತ ತಿಳಿದು ಬಂದಿದೆ. ಸಚಿವ ಸಂಪುಟ ಸಭೆಯ ಬಳಿಕ ಮಾಧ್ಯಮಗಳಿಗೆ ಸಚಿವ ಸಂಪುಟದಲ್ಲಿ ತೆಗೆದುಕೊಂಡ ನಿರ್ಧಾರಗಳನ್ನು ಮಾಧ್ಯಮಗಳಿಗೆ ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ಅವರು ತಿಳಿಸಿದರು. ಇದೇ ವೇಳೆ ಅವರು ಮಾತನಾಡಿ, ಕೊಬ್ಬರಿ ಬೆಳೆಗಾರರ ಪರವಾಗಿ ಕೇಂದ್ರ …

Read More »

ಸೌಜನ್ಯ ಕೊಲೆ ಪ್ರಕರಣ: ಸಿಬಿಐ ಮರು ತನಿಖೆಗೆ ಹೈಕೋರ್ಟ್‌ ನಕಾರ

ಬೆಂಗಳೂರು: ಧರ್ಮಸ್ಥಳದ ಉಜಿರೆಯ ಎಸ್‌ಡಿಎಂ ವಿದ್ಯಾರ್ಥಿನಿ ಸೌಜನ್ಯ ಕೊಲೆ ಪ್ರಕರಣವನ್ನು ಸಿಬಿಐಗೆ ಮರು ತನಿಖೆಗೆ ವಹಿಸಲು ಹೈಕೋರ್ಟ್‌ ನಿರಾಕರಿಸಿದೆ. ಪ್ರಕರಣವನ್ನು ಸಿಬಿಐಗೆ ಮರು ತನಿಖೆಗೆ ವಹಿಸಬೇಕು ಎಂದು ಕೋರಿ ಸೌಜನ್ಯ ತಂದೆ ಚಂದಪ್ಪಗೌಡ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿ ನ್ಯಾಯಮೂರ್ತಿ ಕೆ. ಸೋಮಶೇಖರ್‌ ಅವರಿದ್ದ ಏಕಸದಸ್ಯ ನ್ಯಾಯಪೀಠ ಬುಧವಾರ ಆದೇಶ ಹೊರಡಿಸಿದೆ. ಈಗಾಗಲೇ ಪ್ರಕರಣವನ್ನು ಸ್ಥಳೀಯ ಪೊಲೀಸರು, ಸಿಐಡಿ ಬಳಿಕ ಸಿಬಿಐ ತನಿಖೆ ನಡೆಸಿದೆ. ಸಂತೋಷ್‌ ರಾವ್‌ ವಿರುದ್ಧ ಸಿಬಿಐ ಚಾರ್ಜ್‌ಶೀಟ್‌ …

Read More »

5A ಕಾಲುವೆ ಅನುಷ್ಠಾನ ಜಾರಿಗಾಗಿ ಮಾಜಿ ಶಾಸಕರಿಂದ ಆಣೆ ಪ್ರಮಾಣ ಪ್ರಹಸನ

ಮಸ್ಕಿ (ರಾಯಚೂರು): ಎನ್‌ಆರ್‌ಬಿಸಿಯ 5A ಕಾಲುವೆ ಅನುಷ್ಠಾನ ಸಾಧ್ಯವಿದ್ದರೆ ಎಲ್ಲ ಪ್ರಯತ್ನಗಳಿಗೂ ನಾವು ಬದ್ಧವಿದ್ದು, ಯಾವ ದೇವರ ಮೇಲೆ ಬೇಕಾದರೂ ಪ್ರಮಾಣ ಮಾಡುವುದಾಗಿ ಮಾಜಿ ಶಾಸಕ ಪ್ರತಾಪ್ ಗೌಡ ಪಾಟೀಲ್ ತಿಳಿಸಿದರು. ಯೋಜನೆ ಜಾರಿ ಬೇಡಿಕೆಯೊಂದಿಗೆ ಕಳೆದ 69 ದಿನಗಳಿಂದ ರೈತರು ಧರಣಿ ನಡೆಸಿದ ಸ್ಥಳಕ್ಕೆ ಭೇಟಿ ನೀಡಿದ ಅವರು, ಯೋಜನೆ ಜಾರಿಗೆ ನಾವು ಶಕ್ತಿ ಮೀರಿ ಪ್ರಾಮಾಣಿಕ ಪ್ರಯತ್ನ ಮಾಡಿದ್ದೇವೆ. ಬೇಕಾದರೆ ಇನ್ನೂ ಯಾರನ್ನಾದರೂ ಭೇಟಿ ಮಾಡಬೇಕಿದ್ದರೆ ಕರೆಯಿರಿ …

Read More »

ಬಿ.ಸಿ.ಪಾಟೀಲ್‌ ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ : ಉಗ್ರಪ್ಪ ಆರೋಪ

ಬೆಂಗಳೂರು: ರೈತರನ್ನು ಭಯೋತ್ಪಾದಕರು ಎಂದು ಹೇಳಿರುವ ಕೃಷಿ ಸಚಿವ ಬಿ.ಸಿ.ಪಾಟೀಲ್‌ ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ ಎಂದು ಮಾಜಿ ಸಂಸದ ಉಗ್ರಪ್ಪ ಹಾಗೂ ವಿಧಾನಪರಿಷತ್‌ ಸದಸ್ಯ ಪ್ರಕಾಶ್‌ ರಾಥೋಡ್‌ ಆರೋಪಿಸಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರೈತರು ಯಾವಾಗ ಭಯೋತ್ಪಾದಕರಾದರು. ಕೃಷಿ ಸಚಿವರಾಗಿ ಈ ರೀತಿಯ ಮಾತು ಆಡಬಹುದೇ ಎಂದು ಪ್ರಶ್ನಿಸಿದರು. ಬಿ.ಸಿ.ಪಾಟೀಲ್‌ ರೈತರ ಕ್ಷಮೆಯಾಚಿಸಬೇಕು. ಸಂಪುಟದಿಂದ ಅವರನ್ನು ಕೈ ಬಿಡಬೇಕು. ರೈತ ಸಮುದಾಯಕ್ಕೆ ಅವರು ಅವಮಾನ ಮಾಡಿದ್ದಾರೆ …

Read More »

ರಾಜ್ಯದ ಒಂದಿಂಚು ಜಾಗವನ್ನೂ ಬಿಡೆವು, ನಮ್ಮನ್ನು ಕೆಣಕಿದರೆ ಪರಿಣಾಮ ನೆಟ್ಟಗಿರಲ್ಲ :ನಾರಾಯಣಗೌಡ

ಗಜೇಂದ್ರಗಡ(ಗದಗ): ಭಾರತ -ಪಾಕ್ ಗಡಿಯಲ್ಲಿ ಪಾಕಿಸ್ತಾನ ಹೇಗೆ ನಡೆದುಕೊಳ್ಳುತ್ತಿಯೋ ಅದೇ ರೀತಿಯಲ್ಲಿ ಬೆಳಗಾವಿ ಗಡಿ ವಿಚಾರದಲ್ಲಿ ಮಹಾರಾಷ್ಟ್ರ ನಡೆದುಕೊಳ್ಳುತ್ತಿದೆ. ವಿನಾಕಾರಣ ಕನ್ನಡಿಗರನ್ನು ಕೆಣಕಿದರೆ, ಪರಿಣಾಮ ನೆಟ್ಟಗಿರುವುದಿಲ್ಲ ಎಂದು ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ ಗುಡುಗಿದರು. ಪಟ್ಟಣದಲ್ಲಿ ಬೆಳಗಾವಿ ವಿಭಾಗ ಮಟ್ಟದ ಕರವೇ ಸಮಾವೇಶದಲ್ಲಿ ಪಾಲ್ಗೊಳ್ಳುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿ ದ ಅವರು, ಭಾಷಾವಾರು ಪ್ರಾಂತ್ಯಗಳ ಆಧಾರದ ಮೇಲೆ ರಾಜ್ಯಗಳನ್ನು ರಚಿಸಿ, ಅಖಂಡ ಭಾರತವನ್ನು ಸ್ಥಾಪಿಸಲಾಗಿದೆ. ಆದರೆ, ಮಹಾರಾಷ್ಟ್ರದ ಉದ್ಧವ್ ಠಾಕ್ರೆ ಗಡಿ …

Read More »

ಸಿಎಂ ಬಿಎಸ್​ವೈ, ನಿರಾಣಿ ವಿರುದ್ಧದ ಡಿನೋಟಿಫೈ ಪ್ರಕರಣ ತನಿಖೆಗೆ ಸುಪ್ರೀಂಕೋರ್ಟ್ ಗ್ರೀನ್ ಸಿಗ್ನಲ್

ಬೆಂಗಳೂರು: 2010-11ರಲ್ಲಿ ನಡೆದಿದ್ದ ಡಿನೋಟಿಫೈ ಪ್ರಕರಣ ಸಂಬಂಧ ಸಿಎಂ ಬಿಎಸ್ ಯಡಿಯೂರಪ್ಪ ಹಾಗೂ ಸಚಿವ ಮುರುಗೇಶ್ ನಿರಾಣಿ ವಿರುದ್ಧ ದೂರು ದಾಖಲಾಗಿತ್ತು. ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅಕ್ರಮ ಡಿನೋಟಿಫಿಕೇಷನ್ ಪ್ರಕರಣವನ್ನು ತನಿಖೆಗೆ ವಹಿಸಿ ಹೈಕೋರ್ಟ್​ ಆದೇಶ ನೀಡಿತ್ತು. ಈ ಆದೇಶ ಪ್ರಶ್ನಿಸಿ ಸಿಎಂ ಯಡಿಯೂರಪ್ಪ ಹಾಗೂ ಸಚಿವ ಮುರುಗೇಶ್ ನಿರಾಣಿ ಅವರು ಸುಪ್ರೀಂ ಕೋರ್ಟ್​ನಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು. ಇಂದು ಈ ಪ್ರಕರಣದ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್​ನ ​ ಮುಖ್ಯ ನ್ಯಾಯಮೂರ್ತಿ ಎಸ್​ಎ ಬೋಬ್ಡೆ, …

Read More »

ಕೆಎಂಎಫ್‍ಗೆ ಹಾಲು ನೀಡುವ ರೈತರ ಮಕ್ಕಳಿಗೆ ಬೆಳಗಾವಿಯಲ್ಲಿ 3 ಕೋಟಿ ರೂ. ವೆಚ್ಚದ ಹೈಟೆಕ್ ಹಾಸ್ಟೇಲ್ ನಿರ್ಮಾಣ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

ಗೋಕಾಕ : ಕೆಎಂಎಫ್‍ಗೆ ಹಾಲು ಪೂರೈಸುತ್ತಿರುವ ರೈತರ ಮಕ್ಕಳ ಶೈಕ್ಷಣಿಕ ಅನುಕೂಲಕ್ಕಾಗಿ ಬೆಳಗಾವಿಯಲ್ಲಿ 3 ಕೋಟಿ ರೂ. ವೆಚ್ಚದಲ್ಲಿ ಅತ್ಯಾಧುನಿಕ ವಸತಿ ನಿಲಯವನ್ನು ನಿರ್ಮಿಸಿಕೊಡಲಾಗುವುದು ಎಂದು ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಇಲ್ಲಿಯ ಎನ್‍ಎಸ್‍ಎಫ್ ಅತಿಥಿ ಗೃಹದಲ್ಲಿ ಬೆಳಗಾವಿ ಜಿಲ್ಲಾ ಹಾಲು ಒಕ್ಕೂಟ ಏರ್ಪಡಿಸಿದ್ದ ಕೃತಕ ಗರ್ಭಧಾರಣಾ ಕಾರ್ಯಕರ್ತರಿಗೆ ಇನಾಫ್ ತಂತ್ರಾಂಶವನ್ನು ಒಳಗೊಂಡ ಟ್ಯಾಬ್ ಮತ್ತು ಒಕ್ಕೂಟದ ಕಲ್ಯಾಣ ನಿಧಿಯಿಂದ ಫಲಾನುಭವಿಗಳಿಗೆ ಚೆಕ್‍ಗಳನ್ನು ವಿತರಿಸಿ …

Read More »

ಪ್ರಚೋದನಕಾರಿ ಹೇಳಿಕೆ: ಮಹಾ ಸಿಎಂಗೆ ಸಚಿವ ಶ್ರೀಮಂತ ಪಾಟೀಲ್ ತಿರುಗೇಟು

ಬೆಳಗಾವಿ: ಗಡಿ ವಿಚಾರವಾಗಿ ಪ್ರಚೋದನಕಾರಿ ಹೇಳಿಕೆ ನೀಡುತ್ತಿರುವ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ ಠಾಕ್ರೆ ಅವರಿಗೆ ಸಚಿವ ಶ್ರೀಮಂತ ಪಾಟೀಲ್ ತಿರುಗೇಟು ನೀಡಿದ್ದಾರೆ. ಎಂಇಎಸ್ ಉದ್ಧಟತನ ಹೆಚ್ಚುತ್ತಿದೆ. ಈ ಹಿನ್ನೆಲೆಯಲ್ಲಿ ಎಂಇಎಸ್ ನಿಷೇಧಿಸುವಂತೆ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಒತ್ತಾಯಿಸುವುದಾಗಿ ಹೇಳಿದ್ದಾರೆ. ಅವರಿಗೆ ಒಳ್ಳೆಯದನ್ನು ಬರೆಯಲು ಬರುವುದಿಲ್ಲ. ಅದಕ್ಕಾಗಿ ಈ ರೀತಿಯ ಕೆಲಸ ಮಾಡ್ತಿದ್ದಾರೆ. ಮಹಾರಾಷ್ಟ್ರ ಸಿಎಂಗೆ ಮಾಡಲು ಕೆಲಸವೇ ಇಲ್ಲ. ಯಾವಾಗಲೂ ಗಡಿ ವಿವಾದದ ಬಗ್ಗೆ ಮಾತನಾಡುತ್ತಿರುತ್ತಾರೆ. ಆಗದ ವಿಷಯ, ವಿಚಾರಗಳ …

Read More »

ಬೆಳಗಾವಿ ಜಿ.ಪಂನಲ್ಲಿ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ: ಅಧಿಕಾರಿಗಳಿಗೆ ಸಚಿವ ರಮೇಶ ಜಾರಕಿಹೊಳಿ ಸಲಹೆ, ಸೂಚನೆ

ಬೆಳಗಾವಿ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ಸಭೆ ನಡೆಯಿತು. ಸಚಿವ ರಮೇಶ ಜಾರಕಿಹೊಳಿ ನೇತೃತ್ವ ವಹಿಸಿದ್ದರು. ರಾಜ್ಯಸಭೆ ಸದಸ್ಯ ಈರಣ್ಣ ಕಡಾಡಿ, ಶಾಸಕರಾದ ಮಹೇಶ ಕುಮಟಳ್ಳಿ, ಅನಿಲ ಬೆನಕೆ, ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಆಶಾ ಐಹೊಳೆ, ಜನಪ್ರತಿನಿಧಿಗಳು, ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು. ಬೆಳಗಾವಿ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ಸಭೆ ಬುಧವಾರ ಸಚಿವ ರಮೇಶ ಜಾರಕಿಹೊಳಿ ನೇತೃತ್ವದಲ್ಲಿ ನಡೆಯಿತು. ಈ ವೇಳೆ …

Read More »