Breaking News

ರಾಜ್ಯ

ಖಾತೆ ಹಂಚಿಕೆ ಅಸಮಾಧಾನ ರಮೇಶ್ ಜಾರಕಿಹೊಳಿ ನೇತೃತ್ವದಲ್ಲಿ ನಾಲ್ವರು ಸಚಿವರು ಚಿಕ್ಕಮಗಳೂರಿನ ರೆಸಾರ್ಟ್ ಒಂದರಲ್ಲಿ

ಚಿಕ್ಕಮಗಳೂರು: ಖಾತೆ ಹಂಚಿಕೆ ಅಸಮಾಧಾನದ ಬೆನ್ನಲ್ಲೇ ಮತ್ತೆ ರೆಸಾರ್ಟ್ ರಾಜಕೀಯ ಆರಂಭವಾಗಿದ್ದು, ಜಲ ಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ನೇತೃತ್ವದಲ್ಲಿ ನಾಲ್ವರು ಸಚಿವರು ಚಿಕ್ಕಮಗಳೂರಿನ ರೆಸಾರ್ಟ್ ಒಂದರಲ್ಲಿ ಬೀಡುಬಿಟ್ಟಿದ್ದಾರೆ. ಚಿಕ್ಕಮಗಳೂರಿನ ಸರಾಯ್ ರೆಸಾರ್ಟ್ ನಲ್ಲಿ ರಮೇಶ್ ಜಾರಕಿಹೊಳಿ ನೇತೃತ್ವದಲ್ಲಿ ಅಸಮಾಧಾನಿತ ಸಚಿವರುಗಳ ಗೌಪ್ಯ ಸಭೆ ನಡೆದಿದೆ. ಸಭೆಯಲ್ಲಿ ಸಿ.ಪಿ.ಯೋಗೇಶ್ವರ್, ಗೋಪಾಲಯ್ಯ, ಶಾಸಕ ಎಂಪಿ ಕುಮಾರಸ್ವಾಮಿ ಸೇರಿದಂತೆ ಹಲವರು ಭಾಗಿಯಾಗಿದ್ದಾರೆ. ಒಟ್ಟಾರೆ ಖಾತೆ ಹಂಚಿಕೆ ಬೆನ್ನಲ್ಲೇ ಅಸಮಾಧಾನಿತ ಸಚಿವರು, ಶಾಸಕರ ಈ …

Read More »

ಮಹಾರಾಷ್ಟ್ರ ಏಕೀಕರಣ ಸಮಿತಿ ಬ್ಯಾನ್ ಮಾಡಿ,:ವಾಟಾಳ್ ನಾಗರಾಜ್

ಎಂಇಎಸ್ ಮುಖಂಡರಿಗೆ ಮರಾಠಿ, ಮಹಾರಾಷ್ಟ್ರ ಬೇಕು ಎನ್ನುವುದಾದ್ರೆ ಉದ್ಧವ್ ಠಾಕ್ರೆ ಹತ್ತಿರ ಹೋಗಬೇಕು. ಇನ್ನು 15 ದಿನಗಳಲ್ಲಿ ಮಹಾರಾಷ್ಟ್ರ ಏಕೀಕರಣ ಸಮಿತಿ ಬ್ಯಾನ್ ಮಾಡಿ, ಕರ್ನಾಟಕ ಏಕೀಕರಣ ಸ್ಥಾಪಿಸಬೇಕು ಎಂದು ಸಿಎಂ ಬಿಎಸ್ ಯಡಿಯೂರಪ್ಪಗೆ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಆಗ್ರಹಿಸಿದರು. ಗಡಿ ವಿಚಾರದಲ್ಲಿ ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಉದ್ಧಟತನ ಹೇಳಿಕೆ ಹಾಗೂ ಶಿವಸೇನೆ, ಎಂಇಎಸ್ ಪುಂಡಾಟ ಖಂಡಿಸಿ ಬೆಳಗಾವಿಯ ರಾಣಿ ಚನ್ನಮ್ಮಾಜಿ ವೃತ್ತದಲ್ಲಿ ಕನ್ನಡ ಹೋರಾಟಗಾರ ವಾಟಾಳ್ …

Read More »

ಹುಣಸೋಡು ಜಿಲೆಟಿನ್ ಸ್ಫೋಟ ಪ್ರಕರಣ: ಮೂವರು ವಶಕ್ಕೆ, ಬಾಂಬ್ ನಿಷ್ಕ್ರಿಯ ದಳ ಭೇಟಿ

ಶಿವಮೊಗ್ಗ: ಹುಣಸೋಡು ಬಳಿಯ ಕ್ರಶರ್‌ನಲ್ಲಿ ಜಿಲೆಟಿನ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ವಶಕ್ಕೆ ಪಡೆದಿರುವುದಾಗಿ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಂ ಶಾಂತರಾಜು ಪ್ರಜಾವಾಣಿಗೆ ತಿಳಿಸಿದ್ದಾರೆ. ಕಲ್ಲು ಗಣಿಗಾರಿಕೆಗೆ ಭೂಮಿ ನೀಡಿದ್ದ ಅವಿನಾಶ್ ಕುಲಕರ್ಣಿ, ನಿರ್ವಹಣೆ ಮಾಡುತ್ತಿದ್ದ ನರಸಿಂಹ ಗಂಧದಮನೆ, ಸುಧಾಕರ್ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಬೆಳಿಗ್ಗೆ 11ರ ಸುಮಾರಿಗೆ ಘಟನಾ ಸ್ಥಳಕ್ಕೆ ಬಾಂಬ್ ನಿಷ್ಕ್ರಿಯ ದಳ, ಗಣಿ ಮತ್ತು ಭೂ ವಿಜ್ಞಾನ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. …

Read More »

ಪಂಚಮಸಾಲಿ ಸಮಾಜ ೨ ಎ ಮೀಸಲಾತಿ ಪಟ್ಟಿಗೆ ಸೇರಿಸಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಭರವಸೆ ನೀಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ

ಮೂಡಲಗಿ : ಲಿಂಗಾಯತ ಪಂಚಮಸಾಲಿ ೨ಎ ಮೀಸಲಾತಿ ಸೇರಿಸುವಂತೆ ಸರ್ಕಾರದ ಮೇಲೆ ಒತ್ತಡ ತರುವಂತೆ ಒತ್ತಾಯಿಸಿ, ಪಂಚಮಸಾಲಿ ಅಭಿವೃದ್ಧಿ ಸಮಿತಿ ವತಿಯಿಂದ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿಗೆ ಮನವಿ ಸಲ್ಲಿಸಲಾಯಿತು. ಶಾಸಕ ಬಾಲಚಂದ್ರ ಜಾರಕಿಹೋಳಿ ಮನವಿಯನ್ನು ಸ್ವಿಕರಿಸಿ ಮಾತನಾಡಿ, ಪಂಚಮಸಾಲಿ ಸಮುದಾಯ ಬಂದುಗಳು ನಡೆಸುತ್ತಿರುವ ೨ಎ ಮೀಸಲಾತಿಯ ಪಡೆಯುವಲು ನಡೆಸುತ್ತಿರುವ ಪಾದಯಾತ್ರೆಗೆ ಸಂರ್ಪೂಣವಾಗಿ ಸಹಕಾರ ಇದೆ ಮತ್ತು ಅದು ಯಶಶ್ವಿಯಾಗುವುದು ಎಂದು ಹೇಳಿದರು. ರಾಜ್ಯ ಸಭಾ ಸಂಸದ ಈರಣ್ಣ ಕಡಾಡಿ …

Read More »

ಸಂಗಮೇಶ ಪ್ರಭಾಕರ ಎಸಿಎಫ್ ಆಗಿ ಬಡ್ತಿ

ಬೆಳಗಾವಿ‌ : ನಾಗರಗಾಳಿ ವಲಯ ಅರಣ್ಯಾಧಿಕಾರಿ (RFO) ಸಂಗಮೇಶ ಪ್ರಭಾಕರ ಅವರಿಗೆ ಸರ್ಕಾರ ಎಸಿಎಫ್ ಹುದ್ದೆಗೆ ಮುಂಬಡ್ತಿ ನೀಡಿದೆ. ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ(ACF) ಆಗಿ ಮುಂಬಡ್ತಿ ನೀಡಲಾಗಿದೆ. ಕೃಷಿ ಇಲಾಖೆಯಡಿ ಹಾವೇರಿ ಜಲಾನಯನ ಅಭಿವೃದ್ಧಿ ಇಲಾಖೆಯ ಎಸಿಎಫ್ ಆಗಿ ಸಂಗಮೇಶ ಅವರನ್ನು ನೇಮಕ ಮಾಡಿದೆ.

Read More »

ಸರಕಾರ ಹೇಡಿ ಸರಕಾರವಾಗಬಾರದು: ಹೊರಟ್ಟಿ,

ಬೆಳಗಾವಿ –  ಪುಂಡಾಟಿಕೆ ನಡೆಸುತ್ತಿರುವ ಮಹಾರಾಷ್ಟ್ರ ಏಕೀಕರಣ ಸಮಿತಿಯವರಿಗೆ ಕರ್ನಾಟಕದ ಪೋಲೀಸರು ಹಾಗೂ ಜಿಲ್ಲಾಡಳಿತ ಸಹ ಹೆದರುತ್ತಾರೆಯೇ? ಎದು ಪ್ರಶ್ನಿಸಿರುವ ವಿಧಾನಪರಿಷತ್ ಮಾಜಿ ಸಭಾಪತಿ, ಮಾಜಿ ಸಚಿವ, ಹಾಲಿ ಸದಸ್ಯ ಬಸವರಾಜ ಹೊರಟ್ಟಿ, ಕನ್ನಡದ ಮಣ್ಣಿನಲ್ಲಿದ್ದು ನಾಡು ನುಡಿಯ ವಿರುದ್ಧ ದ್ರೋಹ ಬಗೆಯುವ ನಾಡದ್ರೋಹಿ ಎಂಇಎಸ್.ನವರಿಗೆ ಯಾವುದೇ ಕಾರಣಕ್ಕೂ ಹೋರಾಟ ಮಾಡಲು ಅನುಮತಿ ನೀಡಬಾರದು. ಇಂತಹ ನಾಡದ್ರೋಹಿಗಳ ದೇಶದ್ರೋಹ ಕೆಲಸಕ್ಕೆ ರಾಜ್ಯ ಸರಕಾರ ಅವರ ಮೇಲೆ ಉಗ್ರ ಕ್ರಮ ತೆಗೆದುಕೊಳ್ಳಬೇಕು …

Read More »

ಅಗ್ನಿ ಅವಘಡದಿಂದ ರೂ.1 ಸಾವಿರ ಕೋಟಿ ನಷ್ಟ ಉಂಟಾಗಿದೆ: ಕೊರೋನಾ ಲಸಿಕಾ ತಯಾರಿಕಾ ಸಂಸ್ಥೆ ಸೀರಮ್ ಹೇಳಿಕೆ!

ಪುಣೆ: ಜಗತ್ತಿನ ಅತೀದೊಡ್ಡ ಲಸಿಕ ತಯಾರಿಕೆ ಸಂಸ್ಥೆಯಾಗಿರುವ ಹಾಗೂ ಕೊರೋನಾ ವೈರಸ್’ಗೆ ದೊಡ್ಡ ಪ್ರಮಾಣದಲ್ಲಿ ಕೋವಿಶೀಲ್ಡ್ ಲಸಿಕೆ ತಯಾರಿಸುವ ಮೂಲಕ ಜಗತ್ತಿನ ಗಮನ ಸೆಳೆದಿರುವ ಮಹಾರಾಷ್ಟ್ರದ ಪುಣೆಯಲ್ಲಿನ ಸೀರಮ್ ಕಂಪನಿಯಲ್ಲಿ ಗುರುವಾರ ಸಂಭವಿಸಿದ ಭಾರೀ ಅಗ್ನಿ ಅವಘಡದಿಂದ ರೂ.1 ಕೋಟಿ ನಷ್ಟ ಎದುರಾಗಿದೆ ಎಂದು ಸಂಸ್ಥೆ ಹೇಳಿಕೊಂಡಿದೆ. ಗುರುವಾರ ನಿರ್ಮಾಣ ಹಂತದ 5 ಮಹಡಿಯ ಕಟ್ಟಡದಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, 5 ಕಟ್ಟಡ ಕಾರ್ಮಿಕರು ಮೃತಪಟ್ಟಿದ್ದರು. ಅದೃಷ್ಟವಶಾತ್ ಬೆಂಕಿಯಲ್ಲಿ ಸಿಕ್ಕಿಹಾಕಿಕೊಂಡಿದ್ದ …

Read More »

ದೇಶದಲ್ಲಿ ಉತ್ತಮ ಆಡಳಿತ ನೀಡಿದ್ದು ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ, ಆ ಕಾಲ ಮರುಕಳಿಸಲಿ: ಶಾಸಕ ಸತೀಶ ಜಾರಕಿಹೊಳಿ ಬಣ್ಣನೆ ಸಿದ್ದರಾಮಯ್ಯ ನೇತೃತ್ವದಲ್ಲಿ 5 ವರ್ಷ ಕಾಂಗ್ರೆಸ್ ದೇಶಕ್ಕೆ ಮಾದರಿ

ಚಿಕ್ಕೋಡಿ:  ಸಿದ್ದರಾಮಯ್ಯ ನೇತೃತ್ವದಲ್ಲಿ ಐದು ವರ್ಷ ಪೈರೈಸಿದ  ಕಾಂಗ್ರೆಸ್ ಸರ್ಕಾರ ದೇಶದಲ್ಲಿ ಉತ್ತಮ ಆಡಳಿತ ನೀಡಿದ ಉದಾಹರಣೆ ಇದೆ. ಅದೇ ರೀತಿ ಮತ್ತೆ ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ವಿಶ್ವಾಸ ವ್ಯಕ್ತಪಡಿಸಿದರು. ಯಕ್ಸಂಬಾ ಪಟ್ಟಣದಲ್ಲಿ ಶುಕ್ರವಾರ ನಡೆದ ನೂತನ ಗ್ರಾಮ ಪಂಚಾಯತಿ ಸದಸ್ಯರಿಗೆ ಸತ್ಕಾರ ಹಾಗೂ ಅನ್ನಪೂರ್ಣೇಶ್ವರಿ ಸಂಸ್ಥೆ ಆಯೋಜಿಸಿರುವ ಹೊಲಿಗೆ ಯಂತ್ರ ವಿತರಣೆ ಸಮಾರಂಭದಲ್ಲಿ ಮಾತನಾಡಿದರು. ಹಿಂದೆ ಕಾಂಗ್ರೆಸ್ …

Read More »

ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಮೇ 29ರಂದು ಚುನಾವಣೆ

ಹೊಸದಿಲ್ಲಿ : ಕಾಂಗ್ರೆಸ್‌ ಅಧ್ಯಕ್ಷ ಸ್ಥಾನಕ್ಕೆ ಮೇ 29ರಂದು ಚುನಾವಣೆ ನಡೆಸುವ ಪ್ರಸ್ತಾವವನ್ನು ಪಕ್ಷದ ಕೇಂದ್ರೀಯ ಚುನಾವಣಾ ಸಮಿತಿ ಮುಂದಿಟ್ಟಿದೆ.   ಇದೇ ದಿನವೇ ಎಐಸಿಸಿ ಅಧಿವೇಶನ ನಡೆಸಲು ಉದ್ದೇಶಿಸಲಾಗಿದೆ. ಈ ಎರಡು ವಿಷಯಗಳ ಬಗ್ಗೆ ಕಾಂಗ್ರೆಸ್‌ ಕಾರ್ಯಕಾರಿ (ಸಿಡಬ್ಲ್ಯೂಸಿ) ಸಮಿತಿ ಸಭೆ ಅಂತಿಮ ನಿರ್ಧಾರ ಕೈಗೊಳ್ಳಲಿದೆ.   ಸಭೆಯಲ್ಲಿ ಪ್ರಸ್ತುತ ರಾಜಕೀಯ ಪರಿಸ್ಥಿತಿ, ಕೃಷಿ ಕಾಯ್ದೆಗಳು ಹಾಗೂ ರೈತರ ಪ್ರತಿಭಟನೆ, ಸಂಸತ್‌ನ ಬಜೆಟ್‌ ಅಧಿವೇಶನದಲ್ಲಿ ಪಕ್ಷದ ಕಾರ್ಯತಂತ್ರ ಮುಂತಾದ …

Read More »

ಶಾರ್ಟ್ ಸರ್ಕಿಟ್ : ಸುಟ್ಟು ಕರಕಲಾದ 150 ಎಕರೆ ಪ್ರದೇಶದ ಮೇವು

ಚಿಕ್ಕೋಡಿ : ಗಾಳಿ ವಿದ್ಯುತ್ ಉತ್ಪಾದನಾ ಘಟಕದಲ್ಲಿ (ವಿಂಡ ಪಾವರ್) ಶಾರ್ಟ್ ಸರ್ಕಿಟ್ ದಿಂದ ಲಕ್ಷಾಂತರ ರೂ.ಮೌಲ್ಯದ 150 ಎಕರೆ ಪ್ರದೇಶದಲ್ಲಿ ಬೆಳೆದಿರುವ ಹುಲ್ಲು ಗಾವಲು ಸುಟ್ಟು ಕರಕಲಾಗಿದೆ. ತಾಲ್ಲೂಕಿನ ಜೈನಾಪೂರ ಗ್ರಾಮದ ಹೊರವಲಯದಲ್ಲಿ ಶುಕ್ರವಾರ ಸಂಭವಿಸಿದೆ. ಬೇಸಿಗೆ ಕಾಲದಲ್ಲಿ ಜೈನಾಪೂರ ಗ್ರಾಮದ ಜಾನುವಾರುಗಳಿಗೆ ಮೇವು ಪೂರೈಕೆ ಮಾಡುತ್ತಿದ್ದ ಬೆಟ್ಟದಲ್ಲಿನ ಹುಲ್ಲು ಸುಟ್ಟು ಕರಕಲಾಗಿದ್ದು, ಜಾನುವಾರುಗಳಿಗೆ ಮೇವು ಇಲ್ಲದೆ ಗ್ರಾಮದ ರೈತರು ಕಂಗಾಲಾಗಿದ್ದಾರೆ. ರೈತರು ಬೇಸಿಗೆಯಲ್ಲಿ ಅದೇ ಮೇವಿನ ಮೇಲೆ …

Read More »