ಮೊಳಕಾಲ್ಮುರು: ಬಸ್ ಹಾಗೂ ಕ್ರೂಸರ್ ಮಧ್ಯೆ ಮೊಳಕಾಲ್ಮುರು ತಾಲ್ಲೂಕಿನ ಬಿಜಿ ಕೆರೆ ಬಳಿ ಭಾನುವಾರ ಬೆಳಿಗ್ಗೆ ಭೀಕರ ಅಪಘಾತ ಸಂಭವಿಸಿದ್ದು, ಐದು ಜನರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ತಿಮ್ಮಣ್ಣ(40) ಪತ್ನಿ ರತ್ನಮ್ಮ(38) ಸೋಮನಮರಡಿ ಗ್ರಾಮದ ದುರುಗಪ್ಪ(16), ಗಜಲಿ ಗ್ರಾಮದ ಮಹೇಶ (19) ಹಾಗು 55 ವರ್ಷದ ಓರ್ವ ವ್ಯಕ್ತಿ ಎಂದು ತಿಳಿದು ಬಂದಿದೆ. ಮೃತರು ರಾಯಚೂರು ಜಿಲ್ಲೆ ದೆವದುರ್ಗ ತಾಲೂಕಿನ ಹುಣಸೂರು ಗ್ರಾಮದವರಾಗಿದ್ದಾರೆ ಎನ್ನಲಾಗುತ್ತಿದೆ. ಗಾಯಾಳುಗಳನ್ನು ಬಳ್ಳಾರಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಬಸ್ …
Read More »ಗ್ರಾಪಂ.ಚುನಾವಣೆಗೆ ಸ್ಪರ್ಧಿಸಿದ್ದ ಅಂಬೋಜಿ ನಿಧನ
ಖಾನಾಪುರ : ತಾಲ್ಲೂಕಿನ ನ್ಯಾಯವಾದಿ, ಗ್ರಾಮ ಪಂಚಾಯಿತಿ ಚುನಾವಣೆಗೆ ಸ್ಪರ್ಧಿಸಿದ್ದ ಸಿ.ಬಿ.ಅಂಬೋಜಿ (64) ಭಾನುವಾರ ಬೆಳಿಗಿನ ಜಾವ ನಿಧನರಾದರು. ಬಿಷ್ಟಾದೇವಿ ಜೀರ್ಣೊದ್ದಾರ ಟ್ರಸ್ಟ್ ಅಧ್ಯಕ್ಷರಾಗಿದ್ದರು. ಕಕ್ಕೇರಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಕಕ್ಕೇರಿ ಗ್ರಾಪಂ ಸದಸ್ಯರಾಗಿ ಸೇವೆ ಸಲ್ಲಿಸಿದ್ದರು. ಮಂಗಳವಾರ ನಡೆದ ಗ್ರಾಪಂ ಚುಣಾವಣೆಗೆ ಕಕ್ಕೇರಿ ಗ್ರಾಮದ ವಾರ್ಡ್ ನಂ.2ಕ್ಕೆ ಸ್ಪರ್ಧೆ ಮಾಡಿದ್ದರು.
Read More »ಮೂರು ಸಾವಿರ ಮಠದ ಆಸ್ತಿ ವಾಪಸ್ ನೀಡಿ: ಕೆಎಲ್ಇ ಸಂಸ್ಥೆಗೆ ದಿಂಗಾಲೇಶ್ವರ ಸ್ವಾಮೀಜಿ ಒತ್ತಾಯ
ಹುಬ್ಬಳ್ಳಿ : ಹುಬ್ಬಳ್ಳಿಯ ಮೂರು ಸಾವಿರ ಮಠದ ಆಸ್ತಿಯನ್ನು ಕೆ ಎಲ್ ಇ ಸಂಸ್ಥೆಯವರು ವಾಪಸ್ ಮಠಕ್ಕೆ ನೀಡಬೇಕು ಎಂದು ಬಾಲೆಹೊಸೂರಿನ ದಿಂಗಾಲೇಶ್ವರ ಸ್ವಾಮೀಜಿ ಆಗ್ರಹಿಸಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಮೂರು ಸಾವಿರ ಮಠದ ಆಸ್ತಿಯಲ್ಲಿ ನಗರದ ಗಬ್ಬೂರು ಬಳಿ ಕೆಎಲ್ ಇ ಸಂಸ್ಥೆ ವೈದ್ಯಕೀಯ ಕಾಲೇಜು ನಿರ್ಮಾಣ ಮಾಡಲಾಗುತ್ತಿದೆ. ಕೆಎಲ್‌ಇ ಸಂಸ್ಥೆಯವರಿಗೆ ಮಠದಿಂದ 24 ಎಕರೆ 30 ಗುಂಟೆ ಜಾಗ ಕೊಟ್ಟಿದ್ದು ತಪ್ಪು. ಮಠದ ಆಡಳಿತ ಮಂಡಳಿ ನೇತೃತ್ವದಲ್ಲೇ …
Read More »ಗೋಕಾಕ: ಜ.6 ರಂದು ತೆರಿಗೆ ಸಂದಾಯ ಮಾಡದ 21 ವಾಹನಗಳ ಹರಾಜು!!
ಗೋಕಾಕ: ಕರ್ನಾಟಕ ಮೋಟಾರು ವಾಹನ ತೆರಿಗೆ ಕಾಯ್ದೆಯ ಪ್ರಕಾರ ತೆರಿಗೆ ಸಂದಾಯ ಮಾಡದಿರುವ ಕಾರಣ ಮುಟ್ಟುಗೋಲು ಹಾಕಿಕೊಂಡಿರುವ 21 ವಾಹನಗಳನ್ನು ಜ. 6 ರಂದು ಮುಂಜಾನೆ 10.30 ಘಂಟೆಗೆ ನಗರದ ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿ ಆವರಣದಲ್ಲಿ ಬಹಿರಂಗು ಹರಾಜು ಮಾಡಲಾಗುವುದು ಸಾರಿಗೆ ಅಧಿಕಾರಿ ಟಿ.ಜೆ.ಹೇಮಾವತಿ ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿರುವ ಅವರು, ಬಾಕಿ ಇರುವ ತೆರಿಗೆ ಸಂದಾಯ ಮಾಡಿ ವಾಹನವನ್ನು ತಮ್ಮ ಸ್ವಾಧೀನಕ್ಕೆ ತೆಗೆದುಕೊಳ್ಳುಲು …
Read More »ಬ್ಯಾಲೇಟ್ ಪೇಪರ್ ನಲ್ಲಿ ಬಕೆಟ್ ಬದಲು ಅಲ್ಮೇರಾ ಚಿಹ್ನೆ: ಮತದಾನ ಸ್ಥಗಿತ
ರಾಮದುರ್ಗ: ಬ್ಯಾಲೆಟ್ ಪೇಪರ್‌ನಲ್ಲಿ ಅಭ್ಯರ್ಥಿ ಚಿಹ್ನೆಯನ್ನು ತಪ್ಪಾಗಿ ಮುದ್ರಿಸಿರುವ ಹಿನ್ನೆಲೆ ಕದಂಪೂರ ವಾರ್ಡ್ ನಂಬರ್ 6 ರ ಚುನಾವಣೆ ಮುಂದೂಡಿಕೆ ಮಾಡಲಾಗಿದೆ. ತಾಲೂಕಿನ ಕದಂಪೂರ ಗ್ರಾಮದಲ್ಲಿ 6 ನೇ ವಾರ್ಡ್ಗೆ ನಿರ್ಮಲಾ ಮಹಾಂತೇಶ ಖಾನಪೇಟ್ ಎಂಬುವರು ಸ್ಪರ್ಧಿಸಿದ್ದಾರೆ. ಇವರಿಗೆ ಬಕೆಟ್ ಚಿಹ್ನೆ ನೀಡಲಾಗಿತ್ತು. ಆದರೆ ಮತದಾನದ ಬ್ಯಾಲೆಟ್ ಪೇಪರ್‌ನಲ್ಲಿ ‘ಬಕೆಟ್’ ಚಿಹ್ನೆ ಬದಲು ‘ಅಲ್ಮೇರಾ’ ಚಿಹ್ನೆ ಮುದ್ರಣವಾಗಿದೆ. ಇದರಿಂದಾಗಿ ಮತದಾನ ಮೂಂದೂಡಿಕೆ ಮಾಡಲಾಗಿದೆ. ಸ್ಥಳಕ್ಕೆ ತಹಶೀಲ್ದಾರ್ ಭೇಟಿ ನೀಡಿ ಪರಿಶೀಲನೆ …
Read More »ಮತದಾನ ಮಾಡಿದ ಅಭ್ಯರ್ಥಿ ಭಿಕ್ಷುಕ ಅಂಕ ನಾಯಕ : ಗೆಲುವಿನ ವಿಶ್ವಾಸ
ಮೈಸೂರು : ಜಿಲ್ಲೆಯ ನಂಜನಗೂಡು ತಾಲ್ಲೂಕಿನ ಬೊಕ್ಕಹಳ್ಳಿ ಗ್ರಾಮದಲ್ಲಿ ಗ್ರಾಮ ಪಂಚಾಯಿತಿ ಚುನಾವಣಾ ಕಣಕ್ಕೆ ಇಳಿಸಿದರುವ ಭಿಕ್ಷುಕ ಅಂಕ ನಾಯಕ ಮತದಾನ ಮಾಡಿದರು. ಅಂಕ ನಾಯಕ ಗೆಲುವಿನ ವಿಶ್ವಾಸದಲ್ಲಿದ್ದಾರೆ. ಗ್ರಾಮ ಪಂಚಾಯಿತಿ ಬ್ಲಾಕ್ ನಂ.1ರಲ್ಲಿ ಭಾನುವಾರ ಮತದಾನ ಮಾಡಿದರು. ಬಳಿಕ ಮಾತನಾಡಿದ ಅವರು, “ಗ್ರಾಮದ ಜನರಿಂದ ಉತ್ತಮ ಸ್ಪಂದನೆ ಸಿಕ್ಕಿದೆ. ಹೀಗಾಗಿ ಚುನಾವಣೆಯಲ್ಲಿ ಗೆಲುವು ಸಾಧಿಸುತ್ತೇನೆ ಎಂಬ ವಿಶ್ವಾಸ ವಿದೆ” ಎಂದರು. ಈ ಹಿಂದೆ ಗ್ರಾಪಂ.ಸದಸ್ಯರು ಯಾವುದೇ ಮೂಲ ಸೌಕರ್ಯ …
Read More »ಜನವರಿ ಒಂದರಿಂದ 10 ಮತ್ತು 12ನೆ ತರಗತಿ ಶಾಲೆ ಪ್ರಾರಂಭ
ರಾಜ್ಯ ಸರ್ಕಾರದ ಕೋವಿಡ್-19 ಮಾರ್ಗಸೂಚಿಯನ್ವಯ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಎಲ್ಲಾ ಶಿಕ್ಷಣ ಸಂಸ್ಥೆಗಳಲ್ಲಿ ಜನವರಿ ಒಂದರಿಂದ 10 ಮತ್ತು 12ನೆ ತರಗತಿ ಶಾಲೆ ಪ್ರಾರಂಭವಾಗಲಿದ್ದು, 6 ರಿಂದ 9ನೆ ತರಗತಿ ವಿದ್ಯಾರ್ಥಿಗಳಿಗೆ ವಿದ್ಯಾಗಮ ಕಾರ್ಯಕ್ರಮ ಪ್ರಾರಂಭಿಸಲಾಗುವುದು ಎಂದು ಡಿಡಿಪಿಐ ಸಿ.ನಂಜಯ್ಯ ತಿಳಿಸಿದ್ದಾರೆ. ಈ ಸಂಜೆ ಪತ್ರಿಕೆಯೊಂದಿಗೆ ಮಾತನಾಡಿದ ಅವರು, ಮಕ್ಕಳು ಮತ್ತು ಶಿಕ್ಷಕರ ಆರೋಗ್ಯದ ದೃಷ್ಟಿಯಿಂದ ಪಂಚಾಯತ್ ರಾಜ್ ಇಲಾಖೆ, ನಗರಾಭಿವೃದ್ಧಿ ಮತ್ತು ಸ್ಥಳೀಯ ಸಂಸ್ಥೆಗಳ ಸಹಕಾರದಲ್ಲಿ …
Read More »ಶಿಕ್ಷಕರ ಸಂಘದಿಂದ ನಾಗಪ್ಪ ಶೇಖರಗೋಳ ಅವರಿಗೆ ಸತ್ಕಾರ
ಗೋಕಾಕ: ಶಿಕ್ಷಕರು ತಮ್ಮ ಕರ್ತವ್ಯದ ಜೊತೆಗೆ ಸಂಘದ ಪ್ರಗತಿಗೂ ಶ್ರಮಿಸಿ, ಶಿಕ್ಷಕರ ಸಂಘವನ್ನು ಮಾದರಿ ಸಂಘವನ್ನಾಗಿ ರೂಪಿಸಲು ಅರಭಾವಿ ಶಾಸಕರ ಆಪ್ತ ಸಹಾಯಕ ನಾಗಪ್ಪ ಶೇಖರಗೋಳ ಹೇಳಿದರು. ಶನಿವಾರದಂದು ನಗರದ ಎನ್‍ಎಸ್‍ಎಫ್ ಅತಿಥಿ ಗೃಹದಲ್ಲಿ ಮೂಡಲಗಿ ವಲಯದ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳು ನೀಡಿದ ಸತ್ಕಾರ ಸ್ವೀಕರಿಸಿ ಮಾತನಾಡಿದ ಅವರು, ಶಿಕ್ಷಕರು ರಾಷ್ಟ್ರದ ಶಿಲ್ಪಿಗಳಾಗಿದ್ದು, ಸಮಾಜವನ್ನು ಬದಲಿಸುವ ಶಕ್ತಿ ಶಿಕ್ಷಕರಿಗಿದೆ ಎಂದು ತಿಳಿಸಿದರು. ನೂತನವಾಗಿ ಸಂಘಕ್ಕೆ ಆಯ್ಕೆಯಾದ ಪದಾಧಿಕಾರಿಗಳು …
Read More »ಬ್ರಿಟನ್‍ನಿಂದ ರಾಜ್ಯಕ್ಕೆ 1638 ಜನರು ಹಿಂತಿರುಗಿದ್ದಾರೆ. ಇದರಲ್ಲಿ 14 ಜನರಿಗೆ ಕೊರೊನಾ ಪಾಸಿಟಿವ್
ಬೆಂಗಳೂರು,ಡಿ.26- ಬ್ರಿಟನ್ ದೇಶವನ್ನೇ ತಲ್ಲಣ್ಣಗೊಳಿಸಿರುವ ರೂಪಾಂತರಗೊಂಡ ಹೊಸ ಮಾದರಿಯ ಕೊರೊನಾ ಸೋಂಕು ಕರ್ನಾಟಕಕ್ಕೂ ಕಾಲಿಟ್ಟಿದೆಯೇ ಇಲ್ಲವೇ ಎಂಬುದು ನಾಳೆ ಬಹಿರಂಗಗೊಳ್ಳಲಿದೆ. ಬ್ರಿಟನ್‍ನಿಂದ ಸ್ವದೇಶಕ್ಕೆ ಆಗಮಿಸಿರುವ 1638 ಜನರಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದ್ದು, ನಾಳೆ ವರದಿ ಬಹಿರಂಗಗೊಳ್ಳಲಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಕೆ.ಸುಧಾಕರ್ ಹೇಳಿರುವುದು ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬ್ರಿಟನ್‍ನಿಂದ ರಾಜ್ಯಕ್ಕೆ 1638 ಜನರು ಹಿಂತಿರುಗಿದ್ದಾರೆ. ಇದರಲ್ಲಿ 14 ಜನರಿಗೆ …
Read More »ಮಾಗಡಿ ರಸ್ತೆಯ ಅಂಡರ್ ಪಾಸ್ ಮೇಲ್ಭಾಗದಲ್ಲಿ ವಿಷ್ಣುವರ್ಧನ್ ಪ್ರತಿಮೆ ಸ್ಥಳಾಂತರದ ಬಗ್ಗೆ ನಟ ಅನಿರುದ್ಧ್ ಪ್ರತಿಕ್ರಿಯೆ ನೀಡಿದ್ದಾರೆ.
ಬೆಂಗಳೂರು: ಮಾಗಡಿ ರಸ್ತೆಯ ಅಂಡರ್ ಪಾಸ್ ಮೇಲ್ಭಾಗದಲ್ಲಿ ವಿಷ್ಣುವರ್ಧನ್ ಪ್ರತಿಮೆ ಸ್ಥಳಾಂತರದ ಬಗ್ಗೆ ನಟ ಅನಿರುದ್ಧ್ ಪ್ರತಿಕ್ರಿಯೆ ನೀಡಿದ್ದಾರೆ. ಮಾಧ್ಯಮದಜೊತೆ ಮಾತನಾಡಿದ ಅನಿರುದ್ಧ್, ಪ್ರತಿಷ್ಠಾಪನೆಯಾಗಿರುವ ಮೂರ್ತಿಯನ್ನ ರಾತ್ರೋ ರಾತ್ರಿ ಯಾರಿಗೂ ಹೇಳದೇ ತೆಗೆಯುವುದು ಎಷ್ಟು ಸೂಕ್ತ. ಈ ರೀತಿಯ ಕೆಲಸಗಳಿಂದ ಹಿರಿಯ ವ್ಯಕ್ತಿಗೆ ಅವಮಾನ ಮಾಡಿದಂತೆ ಆಗಲ್ವಾ? ಇದರಿಂದ ಅಭಿಮಾನಿಗಳಿಗೆ ದುಃಖ ಆಗುತ್ತೆ. ವಿಷ್ಣುವರ್ಧನ್ ಅಪ್ಪಾಜಿ ಪ್ರತಿಮೆಯನ್ನ ಯಾರು ತೆಗೆದ್ರು ಮತ್ತು ಯಾಕೆ ತೆಗೆದರು ಎಂದು ಬೇಸರ ವ್ಯಕ್ತಪಡಿಸಿದರು. : …
Read More »
Laxmi News 24×7