Breaking News

ರಾಜ್ಯ

ಮಾಗಡಿ ರಸ್ತೆಯ ಟೋಲ್‍ಗೇಟ್ ಅಂಡರ್‍ಪಾಸ್ ಮೇಲಿದ್ದ ನಟ ಸಾಹಸ ಸಿಂಹ ವಿಷ್ಣುವರ್ಧನ್ ಪ್ರತಿಮೆಯನ್ನ ರಾತ್ರೋ ರಾತ್ರಿ ತೆಗೆಯಲಾಗಿದೆ.

ಬೆಂಗಳೂರು: ಮಾಗಡಿ ರಸ್ತೆಯ ಟೋಲ್‍ಗೇಟ್ ಅಂಡರ್‍ಪಾಸ್ ಮೇಲಿದ್ದ ನಟ ಸಾಹಸ ಸಿಂಹ ವಿಷ್ಣುವರ್ಧನ್ ಪ್ರತಿಮೆಯನ್ನ ರಾತ್ರೋ ರಾತ್ರಿ ತೆಗೆಯಲಾಗಿದೆ. ವಿಷಯ ತಿಳಿದು ಸ್ಥಳದಲ್ಲಿ ಜಮಾಯಿಸಿರುವ ವಿಷ್ಣುವರ್ಧನ್ ಅಭಿಮಾನಿಗಳು ಆಕ್ರೋಶ ಹೊರ ಹಾಕಿದ್ದಾರೆ. ಮುನ್ನೇಚ್ಚರಿಕೆ ಕ್ರಮವಾಗಿ ಸ್ಥಳದಲ್ಲಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಟೋಲ್‍ಗೇಟ್ ಸರ್ಕಲ್ ಗೆ ಶ್ರೀ ಬಾಲ ಗಂಗಾಧರ ಸ್ವಾಮೀಜಿ ವೃತ್ತ ಅಂತ ಹೆಸರಿಡಲಾಗಿದೆ. ಹಾಗಾಗಿ ವಿಷ್ಣುವರ್ಧನ್ ಪ್ರತಿಮೆ ಸ್ಥಳದಲ್ಲಿ ಬಾಲಗಂಗಾಧರ ಸ್ವಾಮೀಜಿ ಸ್ಟ್ಯಾಚು ಇಡಲು ನಿರ್ಧರಿಸಲಾಗಿದೆ. ಹೀಗಾಗಿ ರಾತ್ರಿ …

Read More »

ತಾಯಿಯೇ ಮಗಳನ್ನು ಅಪಹರಿಸಿ ಪರಾರಿ

ಕಾರವಾರ: ತನಗೆ ಇಷ್ಟವಿಲ್ಲದೇ ಪ್ರೀತಿಸಿ ಮದುವೆಯಾಗಿದ್ದಕ್ಕೆ ತಾಯಿಯೇ ಮಗಳನ್ನು ಅಪಹರಿಸಿ ಪರಾರಿಯಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ಇಂದು ವರದಿಯಾಗಿದೆ. ತಾಯಿಯಿಂದ ಅಪಹರಣಕ್ಕೊಳಗಾದ ಯುವತಿಯನ್ನು ರುತಿಕಾ ಎಂದು ಗುರುತಿಸಲಾಗಿದೆ. ಈಕೆಯ ತಾಯಿ ರೂಪ ಶಿರ್ಸಿಕರ್ ಆಗಿದ್ದು, ಶಿರಸಿ ನಗರದಲ್ಲಿ ಬ್ಯೂಟಿಪಾರ್ಲರ್ ನಡೆಸುತ್ತಿದ್ದಳು. ರುತಿಕಾ ಶಿರಸಿಯ ಬಸವೇಶ್ವರ ನಗರದ ಮಣಿಕಂಠ ಎಂಬ ಯುವಕನನ್ನು ಪ್ರೀತಿಸಿ ಕೆಲವು ದಿನದ ಹಿಂದೆ ವಿವಾಹವಾಗಿದ್ದಳು. ಈ ಬಗ್ಗೆ ತಾಯಿ ರೂಪ ಶಿರ್ಸಿಕರ್‍ಗೆ ಇಷ್ಟವಿರಲಿಲ್ಲ. ಮಗಳು ತನ್ನ …

Read More »

FDA, SDA ಅಬ್ಯರ್ಥಿಗಳ ಆದೇಶಕ್ಕೆ ಒಪ್ಪಿಗೆ ಸೂಚಿಸಲು ಅಬ್ಯರ್ಥಿಗಳಿಂದ ಸಚಿವರಿಗೆ ಮನವಿ

FDA, SDA ಅಬ್ಯರ್ಥಿಗಳ ಆದೇಶಕ್ಕೆ ಒಪ್ಪಿಗೆ ಸೂಚಿಸಲು ಅಬ್ಯರ್ಥಿಗಳಿಂದ ಸಚಿವರಿಗೆ ಮನವಿ 2017 ನೇ ಸಾಲಿನ ಎಸ್.ಡಿ.ಎ.ಹಾಗೂ ಎಫ್, ಡಿ,ಎ ಹುದ್ದೆಗಳಿಗೆ ನೇಮಕಾತಿ ಆದೇಶ ನೀಡಲು ಆರ್ಥಿಕ ಇಲಾಖೆಗೆ ಒಪ್ಪಿಗೆ ಸೂಚಿಸುವಂತೆ ಸಚಿವ ರಮೇಶ ಜಾರಕಿಹೊಳಿ ಅವರಿಗೆ SDA ಹಾಗೂ FDA ಅಭ್ಯರ್ಥಿಗಳು ಮನವಿ ಮಾಡಿಕೊಂಡರು. 2017 ನೇ ಸಾಲಿನ SDA ಹಾಗೂ FDA ಪರೀಕ್ಷೆಯಲ್ಲಿ ಆಯ್ಕೆಗೊಂಡು ನಿಯಮಾನುಸಾರ ಎಲ್ಲ ಮೂಲ ದಾಖಲಾತಿ ಪರಿಶೀಲನೆ ಪ್ರಕ್ರಿಯೆ ಮುಗಿದಿದ್ದು, ಹಾಗೂ ಆರ್ಥಿಕ …

Read More »

ಕೊಣ್ಣೂರಲ್ಲಿ ಪೋಲಿಸ ಇಲಾಖೆಯಿಂದ ಅಪರಾದ ತಡೆ ಕಾರ್ಯಕ್ರಮ

ಬೆಳಗಾವಿ ಜಿಲ್ಲೆಯಲ್ಲಿ ಅಪರಾದ ಮಾಸಾಚಾರಣೆ ತಡೆ ನಿಮಿತ್ಯವಾಗಿ ಗೋಕಾಕ ತಾಲೂಕಿನ ಕೊಣ್ಣೂರ ಉಪ ಪೋಲಿಸ್ ಠಾಣಾವತಿಯಿಂದ ASI ಟಿ,ಎಸ್,ದಳವಾಯಿ, ನೇತೃತ್ವದಲ್ಲಿ ಪೋಲಿಸ್ ಸಿಬ್ಬಂದಿಗಳಾದ ದುಂಡೇಶ ಅಂತರಗಟ್ಟಿ, ಸಂಜೀವ ಮಾನೆಪ್ಪಗೋಳ, ಮಹೇಶ ಕಾಂಬಳೆ ಹಾಗೂ ಸರದಾರ ಹಸರಂಗಿಯವರು ಉಪಸ್ಥಿತರಿದ್ದು ಸಾರ್ವಜನಿಕರಿಗೆ ಅಪರಾದ ಮಾಡುವುದರಿಂದ ಎನೆನು ಹಾನಿಯಾಗುತ್ತದೆ ಎಂದು ತಿಳುವಳಿಕೆ ನೀಡಿದರು, ಅದರಂತೆ ಕೊರಾನಾದ ಬಗ್ಗೆ ಎಲ್ಲರೂ ಮಾಸ್ಕ್ ದರಿಸಿ ,ಸಾಮಾಜಿಕ ಅಂತರ ಕಾಯ್ದುಕೊಳ್ಳಲು ತಿಳಿಸಿದರು.

Read More »

ಅವಸಾನದ ಅಂಚಿನಲ್ಲಿನ 5 ಸರ್ಕಾರಿ ಶಾಲೆಗಳನ್ನ ದತ್ತು ಪಡೆದ ಸಚಿವ ರಮೇಶ್ ಜಾರಕಿಹೊಳಿ

ಬೆಳಗಾವಿ :  ಗೋಕಾಕ್ ತಾಲ್ಲೂಕಿನ ಮಮದಾಪುರ ಗ್ರಾಮದಲ್ಲಿರುವ ಸರ್ಕಾರಿ  ಕನ್ನಡ ಗಂಡು ಮಕ್ಕಳ ಹಿರಿಯ ಪ್ರಾಥಮಿಕ ಶಾಲೆ ಸೇರಿ ಒಟ್ಟು ಐದು ಶಾಲೆಗಳನ್ನು  ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ‌ ಅವರು ದತ್ತು‌ ಪಡೆದು, ಮಾನವೀಯತೆ ಮೆರೆದಿದ್ದಾರೆ. ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಗೋಕಾಕ್‌ ತಾಲ್ಲೂಕಿನಲ್ಲಿರುವ ಖನಗಾಂವ ಗ್ರಾಮದ ಕನ್ನಡ ಪ್ರಾಥಮಿಕ ಶಾಲೆ, ಮಮದಾಪೂರದ ಸರಕಾರಿ ಮಾದರಿ ಗಂಡು ಮಕ್ಕಳ ಶಾಲೆ, ಅಂಕಲಗಿಯ ಕನ್ನಡ ಹೆಣ್ಣು ಮಕ್ಕಳ ಹಿರಿಯ ಪ್ರಾಥಮಿಕ ಶಾಲೆ, ಧುಪಧಾಳದ …

Read More »

ಅಸಲಿ-ನಕಲಿ ದೇಶಭಕ್ತರು ಯಾರು ಎಂಬುದ್ದನ್ನು ಜನರು ತೀರ್ಮಾನ ಮಾಡುತ್ತಾರೆ: ಸತೀಶ್ ಜಾರಕಿಹೊಳಿ

ಗೋಕಾಕ: ಇತಿಹಾಸದಲ್ಲಿ ಬಹಳಷ್ಟು ಘಟನೆಗಳು ನಡೆದಿವೆ. ಬಿಜೆಪಿ ಪಕ್ಷವು ದೇಶದ ಇತಿಹಾಸವನ್ನು ತಿರುಚುವ ಮೂಲಕ ಜನರನ್ನು ದಾರಿ ತಪ್ಪಿ ಸುತ್ತಿದೆ. ದೇಶದಲ್ಲಿರುವ ಪ್ರತಿಯೊಂದು ಸಮುದಾಯವು ಸಮಾನತೆ ಹಾಗೂ ಪ್ರೀತಿಯಿಂದ ಬಾಳುತ್ತಿದೆ. ಆದರೆ ಬಿಜೆಪಿಯು ಜಾತಿ ಜಾತಿಗಳ ಮಧ್ಯೆ ಜಗಳ ಹಚ್ಚಿ ದೇಶದಲ್ಲಿನ ಶಾಂತಿ ಕದಡಲು ಮುಂದಾಗಿದೆ ಎಂದು ಬಿಜೆಪಿ ವಿರುದ್ಧ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ವಾಗ್ದಾಳಿ ನಡೆಸಿದ್ದಾರೆ. ಗೋಕಾಕನ ತಮ್ಮ ಹಿಲ್ ಗಾರ್ಡನ್ ನಿವಾಸದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, …

Read More »

ಸ್ಯಾಂಡಲ್‍ವುಡ್ ಮತ್ತೊಬ್ಬ ನಿರ್ದೇಶಕನ್ನು ಬಲಿ ಪಡೆದ ಕೊರೊನಾ..!

ಬೆಂಗಳೂರು, ಡಿ.25- ಕೊರೊನಾ ಮಾರಿಯು ಸ್ಯಾಂಡಲ್‍ವುಡ್ ಅನ್ನು ಬೆಂಬಿಡದಂತೆ ಕಾಡುತ್ತಿದ್ದು ಅನಾರೋಗ್ಯದಿಂದ ಬಳಲುತ್ತಿದ್ದ ನಿರ್ದೇಶಕ ಭರತ್ (45) ನಿನ್ನೆ ರಾತ್ರಿ ಚಾಮರಾಜನಗರದ ಖಾಸಗಿ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ. ರೋರಿಂಗ್ ಸ್ಟಾರ್ ಶ್ರೀಮುರಳಿ ಹಾಗೂ ಮೋಹಕ ತಾರೆ ರಮ್ಯಾ ಅಭಿನಯದ ಕಂಠಿ ಚಿತ್ರ ನಿರ್ದೇಶಿಸುವ ಮೂಲಕ ಚಿತ್ರ ಪಯಣ ಆರಂಭಿಸಿದ ರಾಮನಗರ ಚಿಕ್ಕಮುಳುವಾಡಿ ಗ್ರಾಮದ ಭರತ್ ಹೊಸ ಸಿನಿಮಾದ ತಯಾರಿಯಲ್ಲಿರುವಾಗಲೇ ತಮ್ಮ ಬಣ್ಣದ ಲೋಕದ ಪಯಣ ಮುಗಿಸಿದ್ದಾರೆ. ಕ್ರೇಜಿಸ್ಟಾರ್ ರವಿಚಂದ್ರನ್ ಅವರ ನಿರ್ದೇಶನದ …

Read More »

ಪ್ರವಾಸಿ ತಾಣಗಳು ಕೊರೋನಾ ಹರಡುವುದಕ್ಕೆ ರಹದಾರಿಗಳಾಗಿ ಬಿಡುತ್ತವಾ ಎನ್ನುವ ಆತಂಕ?

ಕೊಡಗು: ಕ್ರಿಸ್ ಮಸ್ ಮತ್ತು ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಮೂರು ದಿನಗಳ ಕಾಲ ನಿರಂತರವಾಗಿ ಸರ್ಕಾರಿ ರಜೆ ಬಂದಿದ್ದೇ ತಡ, ಕೊಡಗು ಜಿಲ್ಲೆಗೆ ಸಾವಿರಾರು ಪ್ರವಾಸಿಗರು ದಾಂಗುಡಿ ಇಟ್ಟಿದ್ದಾರೆ. ಹೀಗಾಗಿ ಕೊಡಗಿನ ಪ್ರಸಿದ್ಧ ಪ್ರವಾಸಿ ತಾಣಗಳಾದ ದುಬಾರೆ, ದುಬಾರೆ ಸಾಕಾನೆ ಶಿಬಿರ ಸೇರಿದಂತೆ ಹಲವು ಪ್ರವಾಸಿ ತಾಣಗಳಲ್ಲಿ ಸಾವಿರಾರು ಪ್ರಯಾಣಿಕರು ತುಂಬಿ ತುಳುಕುತಿದ್ದಾರೆ. ಆದರೆ ಎಲ್ಲೆಡೆ ಸಾಮಾಜಿಕ ಅಂತರ ಮಾತ್ರ ಸಂಪೂರ್ಣ ಮಾಯವಾಗಿಬಿಟ್ಟಿದೆ. ಹೌದು, ವಿಶ್ವ ಪ್ರಸಿದ್ಧ ದುಬಾರೆ ಸಾಕಾನೆ …

Read More »

ಪ್ರಧಾನಿ ಮೋದಿಯವರು ತಾವು ಪ್ರಧಾನಿಯಲ್ಲ, ಸಾಮಾನ್ಯ ಸೇವಕ ಎನ್ನುವಾಗ ನಾನು ಸಾಮಾನ್ಯ ಕಾರ್ಯಕರ್ತನೆ

ವಿಜಯಪುರ: ಯತ್ನಾಳ್ ಓರ್ವ ಆರ್ಡಿನರಿ ಶಾಸಕ ಎಂಬ ಕೇಂದ್ರ ಸಚಿವ ಸದಾನಂದಗೌಡ ಹೇಳಿಕೆಗೆ ಪ್ರತಿಕ್ರಿಯಿಸಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಸದಾನಂದಗೌಡ ಹೇಳಿದ್ದು ನೂರಕ್ಕೆ ನೂರರಷ್ಟು ನಿಜ. ಒಳ್ಳೆಯ ಸಲಹೆ ನೀಡಿದ್ದಾರೆ. ನಮ್ಮ ಪ್ರಧಾನಿ ಮೋದಿಯವರು ತಾವು ಪ್ರಧಾನಿಯಲ್ಲ, ಸಾಮಾನ್ಯ ಸೇವಕ ಎನ್ನುವಾಗ ನಾನು ಸಾಮಾನ್ಯ ಕಾರ್ಯಕರ್ತನೆ ಎಂದು ಹೇಳಿದ್ದಾರೆ. ನಾನು ಓರ್ವ ಸಾಮಾನ್ಯ ಶಾಸಕ. ರಾಷ್ಟ್ರೀಯ ನಾಯಕ ಎಂದು ನಾನೆಲ್ಲೂ ಹೇಳಿಲ್ಲ. ನಾನು ವಾಜಪೇಯಿ ಅವಧಿಯಲ್ಲಿ ಕೇಂದ್ರ ಸಚಿವನಾಗಿದ್ದೆ. ಡಿ.ವಿ.ಸದಾನಂದಗೌಡರು …

Read More »

ಗ್ರಾಮ ಪಂಚಾಯತಿಗಳ ಚುನಾವಣೆಯ ಮತಗಳ ಏಣಿಕೆ ಕಾರ್ಯ ದಿ. 30 ರಂದು ನಗರದ ಸರ್ಕಾರಿ ಪದವಿಪೂರ್ವ ಮಹಾವಿದ್ಯಾಲಯದಲ್ಲಿ ಜರುಗಲಿದ್ದು

ಗೋಕಾಕ: ಕಳೆದ ದಿ.22 ರಂದು ನಡೆದ ಗ್ರಾಮ ಪಂಚಾಯತಿಗಳ ಚುನಾವಣೆಯ ಮತಗಳ ಏಣಿಕೆ ಕಾರ್ಯ ದಿ. 30 ರಂದು ನಗರದ ಸರ್ಕಾರಿ ಪದವಿಪೂರ್ವ ಮಹಾವಿದ್ಯಾಲಯದಲ್ಲಿ ಜರುಗಲಿದ್ದು ಅದರ ನಿಮಿತ್ಯವಾಗಿ ಶುಕ್ರವಾರದಂದು ಸರ್ಕಾರಿ ಪದವಿಪೂರ್ವ ಮಹಾವಿದ್ಯಾಲಯದಲ್ಲಿ ಮತ ಏಣಿಕೆ ಕಾರ್ಯಕ್ಕೆ ನಿಯೋಜಿಸಿರುವ ಏಣಿಕೆ ಮೇಲ್ವಿಚಾರಕರಿಗೆ ಹಾಗೂ ಸಿಬ್ಬಂದಿಗೆ ಒಂದು ದಿನದ ತರಬೇತಿಥಿಟಿಜಿಟಿu ತಹಶೀಲದಾರ ಪ್ರಕಾಶ ಹೊಳೆಪ್ಪಗೋಳ ಅವರ ಅಧ್ಯಕ್ಷತೆಯಲ್ಲಿ ನೀಡಲಾಯಿತು. ನಂತರ ಪತ್ರಿಕೆಯೊಂದಿಗೆ ಮಾತನಾಡಿದ ತಹಶೀಲದಾರ ಪ್ರಕಾಶ ಹೊಳೆಪ್ಪಗೋಳ ಅವರು, ದಿ. …

Read More »