Breaking News

ರಾಜ್ಯ

ಮಾಂಸದೂಟ ಸೇವಿಸಿ ಅಸ್ವಸ್ಥವಾಗಿದ್ದ 6ವರ್ಷದ ಮಗು ಸಾವು

ರಾಮನಗರ: ಬುಧವಾರದಂದು ಚನ್ನಪಟ್ಟಣ ತಾಲ್ಲೂಕಿನ ಮೊಳೆದೊಡ್ಡಿ ಗ್ರಾಮದಲ್ಲಿ ಬೀಗರ ಔತಣ ಕೂಟದಲ್ಲಿ ಮಾಂಸದೂಟ ಸೇವಿಸಿ ಜನರು ಅಸ್ವಸ್ಥತಗೊಂಡ ಘಟನೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೈಸೂರಿನ ಖಾಸಗಿ ಅಸ್ಪತ್ರೆಯಲ್ಲಿ 6 ವರ್ಷದ ಹೆಣ್ಣುಮಗು ಮೃತಪಟ್ಟಿದೆ. ಬೀಗರ ಔತಣದಲ್ಲಿ ಊಟ ಮಾಡಿದ್ದ 6 ವರ್ಷದ ಹೆಣ್ಣು ಮಗು ಚೈತನ್ಯ ಚಿಕಿತ್ಸೆ ಫಲಿಸದೇ ಗುರುವಾರ ಮೃತಪಟ್ಟಿದ್ದು, ಗ್ರಾಮದ ವೆಂಕಟಭೈರ-ಸೌಮ್ಯ ದಂಪತಿಯ ಮಗು ಚೈತನ್ಯ ಬೀಗರೂಟದಲ್ಲಿ ಫುಡ್ ಪಾಯ್ಸನ್ ನಿಂದ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ …

Read More »

ಬಸ್ – ಕಾರು ಮುಖಾಮುಖಿ ಡಿಕ್ಕಿ : ಓರ್ವ ಸಾವು, 10ಕ್ಕೂ ಹೆಚ್ಚು ಜನರಿಗೆ ಗಾಯ

ಖಾನಾಪುರ : ಬೆಳಗಾವಿ-ಪಣಜಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುರುವಾರ ಸಂಜೆ ಕಾರು, ಸಾರಿಗೆ ಸಂಸ್ಥೆ ಬಸ್ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಕಾರು ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದು, 10 ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ. ಕಾರು ಚಾಲಕ ಮಹಾರಾಷ್ಟ್ರ ಮೂಲದ ಭಿಕಾಜಿ ಸಾವಂತ(46) ಮೃತರು. ತಾಲ್ಲೂಕಿನ ತೋರಾಳಿ ಗ್ರಾಮದ ನಿವಾಸಿ ಪ್ರಕಾಶ ಪಾಟೀಲ ಸೇರಿ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಹತ್ತಕ್ಕೂ ಪ್ರಯಾಣಿಕರು ಗಾಯಗೊಂಡಿದ್ದಾರೆ. ಗಂಭೀರ ಗಾಯಗೊಂಡವರನ್ನು ಬೆಳಗಾವಿ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. …

Read More »

ಗ್ಯಾಸ್ ಸಿಲಿಂಡರ್ ಸಾಗಾಟದ ಲಾರಿಯಲ್ಲಿ ಗ್ಯಾಸ್ ಸೋರಿಕೆ

ಮಂಗಳೂರು: ಗ್ಯಾಸ್ ಸಿಲಿಂಡರ್ ಸಾಗಾಟದ ಲಾರಿಯಲ್ಲಿ ಗ್ಯಾಸ್ ಸೋರಿಕೆಯಾದ ಘಟನೆ ಮಂಗಳೂರಿನ ತೊಕ್ಕೊಟ್ಟು ಬಳಿ ನಡೆದಿದೆ. ನಗರದ ಬೈಕಂಪಾಡಿಯಿಂದ ಕೇರಳ ಕಡೆಗೆ ಅಡುಗೆ ಅನಿಲದ ಸಿಲಿಂಡರನ್ನು ಸಾಗಿಸುತ್ತಿದ್ದ ಲಾರಿಯಲ್ಲಿ ಏಕಾಏಕಿ ಗ್ಯಾಸ್ ಸೋರಿಕೆ ಕಾಣಿಸಿಕೊಂಡಿದೆ. ಈ ವಿಚಾರ ಗೊತ್ತಾದ ತಕ್ಷಣ ಚಾಲಕ ಪರಿಶೀಲಿಸಿದ್ದು, ಒಂದು ಸಿಲಿಂಡರ್ ಸೋರಿಕೆ ಆಗಿರೋದು ಬೆಳಕಿಗೆ ಬಂದಿದೆ. ಬಳಿಕ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ ತುರ್ತು ಕಾರ್ಯಾಚರಣೆ ನಡೆಸಿದ್ದಾರೆ‌. ಈ ಸಂದರ್ಭ ರಾಷ್ಟ್ರೀಯ ಹೆದ್ದಾರಿ 66 …

Read More »

ನಮ್ಮ ಸಾಹುಕಾರ್ ಪಡೆಯ 2021 ಹೊಸ ವರ್ಷದ ಕ್ಯಾಲೆಂಡರ್.

ನಮ್ಮ ಸಾಹುಕಾರ್ ಪಡೆಯ 2021 ಹೊಸ ವರ್ಷದ ಕ್ಯಾಲೆಂಡರ್ ಹಾಗೂ ಸಾಹುಕಾರ್ ಪಡೆ ಕರ್ನಾಟಕ ಜಾಲತಣವನ್ನು ಉದ್ಘಾಟನೆ ಮಾಡಿದ ನಮ್ಮ ರಮೇಶ್ ಅಣ್ಣ ಜಾರಕಿಹೊಳಿ ಸಾಹುಕಾರ್ ಹಾಗು ಅಮರನಾಥ್ ಜಾರಕಿಹೊಳಿ ಸಾಹುಕಾರ್ ರವರು ಉದ್ಘಾಟನೆ ಈ ಸಂದರ್ಭದಲ್ಲಿ       ಸಾಹುಕಾರ ಪಡೆ ಕರ್ನಾಟಕ ಗೌರವ ಅಧ್ಯಕ್ಷರು ದೋಡ್ಡಯ್ಯ ಎಮ್. ಎಚ್. ಹಾಗೂ ಸಂಸ್ಥಾಪಕರು ಮತ್ತು ರಾಜ್ಯಾಧ್ಯಕ್ಷರು ಶೇಖರ.ಎಸ್ ರಾಜ್ಯ ಕಾರ್ಯದರ್ಶಿಗಳು ದೀಪು.ಎಮ್. ಮತ್ತು ಚೇತನ ಹಾಗೂ ಸಾಗರ್ …

Read More »

ಕನ್ನಡ ಚಲನಚಿತ್ರ ನಿರ್ಮಾಪಕರ ಸಂಘದ ನೂತನ ಕಟ್ಟಡಕ್ಕೆ ಸಿಎಂ ಶಂಕುಸ್ಥಾಪನೆ

ಬೆಂಗಳೂರು, ಡಿ.10- ಕನ್ನಡ ಚಿತ್ರೋದ್ಯಮ ಜಾಗತಿಕ ಮಟ್ಟದಲ್ಲಿ ಹೆಸರು ಪಡೆಯುವಂತಾಗಲಿ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆಶಿಸಿದರು. ನಗರದ ಶಿವಾನಂದ ವೃತ್ತದ ಬಳಿ ಇರುವ ಗಾಂಧಿ ಭವನದ ಎದುರು ಕನ್ನಡ ಚಲನಚಿತ್ರ ನಿರ್ಮಾಪಕರ ಸಂಘದ ನೂತನ ಕಟ್ಟಡ ನಿರ್ಮಾಣಕ್ಕೆ ಇಂದು ಶಂಕುಸ್ಥಾಪನೆ ನೆರವೇರಿಸಿ ನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಈಗಾಗಲೇ ಬಹಳಷ್ಟು ಒಳ್ಳೆಯ ಚಿತ್ರಗಳು ಬಂದಿವೆ. ಇನ್ನಷ್ಟು ಅತ್ಯುತ್ತಮ ಕನ್ನಡ ಚಲನಚಿತ್ರಗಳು ಬಂದು ಜಾಗತಿಕ ಮಟ್ಟದಲ್ಲಿ ಹೆಸರು ಪಡೆಯಲಿ ಎಂದು ಹಾರೈಸಿದರು. …

Read More »

ಪಶ್ವಿಮ ಬಂಗಾಳದಲ್ಲಿ ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆ

ಕೋಲ್ಕತ್ತಾ,ಡಿ.10-ಪಶ್ವಿಮ ಬಂಗಾಲದಲ್ಲಿ ಬಿಜೆಪಿ ಕಾರ್ಯಕರ್ತರ ಮೇಲೆ ತೃಣಮೂಲ ಕಾಂಗ್ರೆಸ್ ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆ. ಬಂಗಾಳದ ದಕ್ಷಿಣ 24 ಪರಗಣ ಪ್ರದೇಶಕ್ಕೆ ಬಿಜೆಪಿ ರಾಷ್ಟ್ರಧ್ಯಕ್ಷ ಜೆ.ಪಿ.ನಡ್ಡಾ ಭೇಟಿ ನೀಡುವ ಕಾರ್ಯಕ್ರಮವಿತ್ತು. ಹೀಗಾಗಿ ನಡ್ಡಾ ಭಾಷಣ ಮಾಡುವ ಪ್ರದೇಶದಲ್ಲಿ ಕೇಸರಿ ಬಾವುಟಗಳನ್ನು ಹಾರಿಸಲಾಗಿತ್ತು. ಸ್ಥಳಕ್ಕೆ ಆಗಮಿಸಿದ ಟಿಎಂಸಿ ಕಾರ್ಯಕರ್ತರು ಬಾವುಟಗಳನ್ನು ಹರಿದುಹಾಕಿ ಬಿಜೆಪಿ ಮುಖಂಡರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ವರದಿಯಾಗಿದೆ. ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆ ನಡೆದಿರುವ ಬಂಗಾಳದಲ್ಲಿ ಜಂಗಲ್ ರಾಜ್ …

Read More »

ವಿವಾಹದ ಔತಣಕೂಟ,ಊಟಕ್ಕೆ ಕೂತಾಗ ಊಟದಲ್ಲಿ ಬರೀ ಕಲ್ಲು

ಚಿಕ್ಕಮಗಳೂರು: ವಿವಾಹದ ಔತಣಕೂಟದಲ್ಲಿ ಭಾಗವಹಿಸಿದವರ ಹಲ್ಲುಗಳು ಜುಮ್ ಎನ್ನುವಂತಾಗಿದ್ದು, ಉಪ್ಪಿನ ಪಾಕೆಟ್‍ನಲ್ಲಿನ ಭಾರೀ ಪ್ರಮಾಣದ ಕಲ್ಲಿನಿಂದಾಗಿ ಜನ ತತ್ತರಿಸಿ ಹೋಗಿದ್ದಾರೆ.ಜಿಲ್ಲೆಯ ಮೂಡಿಗೆರೆ ತಾಲೂಕಿನ ಗೌಡಹಳ್ಳಿ ಬಳಿಯ ಹೆಮ್ಮದಿ ಗ್ರಾಮದಲ್ಲಿ ಮದುವೆ ನಡೆದಿತ್ತು. ಸರದಿ ಸಾಲಲ್ಲಿ ಊಟಕ್ಕೆ ಕೂತವರು ಕಲ್ಲು ಅನ್ನದಲ್ಲೋ, ಮಟನ್‍ನಲ್ಲೋ ಎಂದು ಗೊಂದಲಕ್ಕೀಡಾಗಿದ್ದರು. ಹೆಮ್ಮದಿ ಗ್ರಾಮದ ರತನ್ ಅವರು ಸ್ನೇಹಿತರು ಹಾಗೂ ನವದಂಪತಿಗಳಿಗೆ ಔತಣಕೂಟ ಏರ್ಪಡಿಸಿದ್ದರು. ಆದರೆ ಊಟಕ್ಕೆ ಕೂತಾಗ ಊಟದಲ್ಲಿ ಬರೀ ಕಲ್ಲು ಸಿಕ್ಕಿತ್ತು.   ಜನ …

Read More »

ನಂದವಾಡಗಿ ಏತ ನೀರಾವರಿ ಯೋಜನೆ ಬಗ್ಗೆ ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೋಳಿ ದೀರ್ಘ ಚರ್ಚೆ

ನಂದವಾಡಗಿ ಏತ ನೀರಾವರಿ ಯೋಜನೆ ಬಗ್ಗೆ ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೋಳಿ ದೀರ್ಘ ಚರ್ಚೆ ನಂದವಾಡಗಿ ಏತ ನೀರಾವರಿ ಯೋಜನೆಗೆ ಸಂಬಂಧಿಸಿದ ಉನ್ನತ ಮಟ್ಟದ ಸಭೆ ಜಲಸಂಪನ್ಮೂಲ ಸಚಿವರಾದ *ಶ್ರೀ ರಮೇಶ್ ಜಾರಕಿಹೊಳಿ‌* ಅವರ ಅಧ್ಯಕ್ಷತೆಯಲ್ಲಿ ಬೆಂಗಳೂರಿನಲ್ಲಿಂದು ನಡೆಯಿತು. ಕೃಷ್ಣ ಭಾಗ್ಯ ಜಲನಿಗಮ ನಿಯಮಿತದ ಕಚೇರಿಯಲ್ಲಿ ನಡೆದ ಸಭೆಯಲ್ಲಿ ನಂದವಾಡಗಿ ಏತ ನೀರಾವರಿ 2ನೇ ಹಂತದ ಯೋಜನೆಗಳ ಕುರಿತು ಸುದೀರ್ಘವಾಗಿ ಚರ್ಚಿಸಲಾಯಿತು. ಸಭೆಯಲ್ಲಿ ಕೊಪ್ಪಳ ಕ್ಷೇತ್ರದ ಲೋಕಸಭಾ ಸದಸ್ಯ ಸಂಗಣ್ಣ …

Read More »

ಭೂ ಸುಧಾರಣೆ ಕಾಯ್ದೆ ಖಂಡಿಸಿ ಅನ್ನದಾತರು ನಗರದಲ್ಲಿಂದು ಬಾರುಕೋಲು ಚಳವಳಿ ನಡೆಸುವ ಮೂಲಕ ಸರ್ಕಾರದ ವಿರುದ್ಧ ಕಿಡಿ

ಬೆಂಗಳೂರು, ಡಿ.9- ಕೇಂದ್ರ ಸರ್ಕಾರದ ನೂತನ ಕೃಷಿ ಕಾಯ್ದೆಗಳು, ರಾಜ್ಯ ಸರ್ಕಾರದ ಭೂ ಸುಧಾರಣೆ ಕಾಯ್ದೆ ಖಂಡಿಸಿ ಅನ್ನದಾತರು ನಗರದಲ್ಲಿಂದು ಬಾರುಕೋಲು ಚಳವಳಿ ನಡೆಸುವ ಮೂಲಕ ಸರ್ಕಾರದ ವಿರುದ್ಧ ಕಿಡಿಕಾರಿದರು. ರಾಜ್ಯದ ವಿವಿಧ ಭಾಗಗಳಿಂದ ಹಸಿರು ಶಾಲು ಹೊದ್ದು ಕೈಯಲ್ಲಿ ಬಾರುಕೋಲು ಹಿಡಿದು ಬಂದಿದ್ದ ಸಾವಿರಾರು ರೈತರು ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಲ್ಲಿ ಜಮಾವಣೆಗೊಂಡು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ರೈತ ವಿರೋ ಧೋರಣೆ ಖಂಡಿಸಿ ಕ್ಕಾರದ ಘೋಷಣೆಗಳನ್ನು ಕೂಗಿದರು …

Read More »

ನಾಳೆ ಸಾರಿಗೆ ನೌಕರರ ಜಾಥಾ ಬಸ್ ರಸ್ತೆಗೆ ಇಳಿಯುವುದು ಡೌಟು!

ಬೆಂಗಳೂರು: ನಾಳೆ ಸಾರಿಗೆ ನೌಕರರು ಜಾಥಾ ನಡೆಸುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಬಸ್ ಸಂಚಾರ ವ್ಯತ್ಯಯವಾಗುವ ಸಾಧ್ಯತೆಯಿದೆ ಎಂದು ತಿಳಿದುಬಂದಿದೆ. ತಮ್ಮನ್ನು ಸರ್ಕಾರಿ ನೌಕರರನ್ನಾಗಿ ಪರಿಗಣಿಸುವಂತೆ ಆಗ್ರಹಿಸಿ ಕೆಎಸ್ಆರ್ ಟಿಸಿ, ಬಿಎಂಟಿಸಿ, ಎನ್ ಡ್ ಬ್ಲ್ಯೂ ಕೆಎಸ್ಆರ್ ಟಿಸಿ ಸೇರಿದಂತೆ ವಿವಿಧ ಸಾರಿಗೆ ನೌಕರರು ನಾಳೆ ಕಾಲ್ನಡಿಗೆ ಜಾಥಾ ನಡೆಸಲಿದ್ದಾರೆ. ನಾಳೆ ಬೆಳಿಗ್ಗೆ ಸಿಟಿ ರೈಲ್ವೆ ನಿಲ್ದಾಣದಿಂದ ವಿಧಾನಸೌಧದವರೆಗೆ ಸಾರಿಗೆ ನೌಕರರು ಹಾಗೂ ಕುಟುಂಬ ಸದಸ್ಯರಿಂದ ಜಾಥಾ ನಡೆಯಲಿದೆ. ಆದರೆ ಕೆಎಸ್ಆರ್ …

Read More »