Breaking News

ರಾಜ್ಯ

ರಾಜಕೀಯ ನಿವೃತ್ತಿ ಘೋಷಿಸಿದ ಮಾಜಿ ಸ್ಪೀಕರ್ ರಮೇಶ ಕುಮಾರ್

ಕೋಲಾರ: ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ. ಸಕ್ರಿಯ ರಾಜಕಾರಣದಿಂದ ಹೊರ ಬರುತ್ತೇನೆ ಎನ್ನುವ ಮೂಲಕ ಮಾಜಿ ಸ್ಪೀಕರ್ ರಮೇಶ ಕುಮಾರ್ ಅವರು ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ. ಗ್ರಾಮ ಪಂಚಾಯಿತಿ ಚುನಾವಣೆ ಹಿನ್ನೆಲೆಯಲ್ಲಿ ನಗರದಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ರಾಜಕಾರಣದಲ್ಲಿ ಮೌಲ್ಯಗಳು ಉಳಿದಿಲ್ಲ. ಪಕ್ಷದ ಕೆಲವರು ಹಣಕ್ಕೆ ತಲೆ ಮಾರಿಕೊಂಡು ಬಿಜೆಪಿಗೆ ಸೇರಿದರು. ತಾಯಿಯಂತಿರುವ ಪಕ್ಷಕ್ಕೆ ದ್ರೋಹ ಮಾಡಿದ್ದಾರೆ.   ಅಧಿಕಾರದ ದುರಾಸೆಯಾಗಿ ಅನೈತಿಕ ರಾಜಕೀಯ ಮಾಡುತ್ತಿದ್ದಾರೆ. …

Read More »

ಅನ್ನದಾತರ ಹೋರಾಟಕ್ಕೆ ಅಣ್ಣಾ ಹಜಾರೆ ಬೆಂಬಲ

ಪುಣೆ: ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆ ಅವರು ಮಂಗಳವಾರ ದಿನವಿಡೀ ಉಪವಾಸ ಸತ್ಯಾಗ್ರಹ ಮಾಡುವ ಮೂಲಕ ಕೇಂದ್ರದ ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುವಂತೆ ಒತ್ತಾಯಿಸಿ ರೈತರು ನಡೆಸುತ್ತಿರುವ ರಾಷ್ಟ್ರವ್ಯಾಪಿ ಹೋರಾಟ ಹಾಗೂ ‘ಭಾರತ್ ಬಂದ್’ಗೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಮಹಾರಾಷ್ಟ್ರದ ಅಹಮದ್‍ನಗರ್ ಜಿಲ್ಲೆಯ ರಾಳೆಗಾಂವ್ ಸಿದ್ದಿ ಗ್ರಾಮದಲ್ಲಿ ಮಂಗಳವಾರ ಉಪವಾಸ ಸತ್ಯಾಗ್ರಹ ಆರಂಭಿಸಿದ ಅಣ್ಣಾ ಹಜಾರೆ, ‘ಕೃಷಿಕರ ಹಿತಾಸಕ್ತಿಗೆ ಅನುಗುಣವಾಗಿ ಕಾರ್ಯನಿರ್ವಹಿಸುವಂತೆ ಸರ್ಕಾರದ ಮೇಲೆ ಒತ್ತಡ ತರುವ ನಿಟ್ಟಿನಲ್ಲಿ, ಈ ಆಂದೋಲನ ದೇಶವ್ಯಾಪಿ …

Read More »

ಭಾರತ್ ಬಂದ್ : ಗೋಕಾಕನಲ್ಲಿ ಸಹಜ ಸ್ಥಿತಿ

  https://youtu.be/klKiPyqipLk   ಗೋಕಾಕ : ರೈತರು ಭಾರತ್ ಬಂದ್ ಗೆ ಕರೆ ನೀಡಿದ ಹಿನ್ನೆಲೆ ರಾಜ್ಯಾದ್ಯಂತ ಪ್ರತಿಭಟನೆ ಕಾವು ಹೆಚ್ಚಾಗಿದೆ. ಆದರೆ ಗೋಕಾಕ ತಾಲ್ಲೂಕಿನಲ್ಲಿ ಪ್ರತಿಭಟನೆ ಬಿಸಿ ತಟ್ಟಿಲ್ಲ. ಎಂದಿನಂತೆ ಜನಜೀವನ ಸಹಜ ಸ್ಥಿತಿಯಲ್ಲಿದೆ. ಕೇಂದ್ರ ಸರ್ಕಾರದ ಕೃಷಿ ಕಾಯ್ದೆ ತಿದ್ದುಪಡಿ ವಾಪಸ್ ಪಡೆಯುವಂತೆ ಆಗ್ರಹಿಸಿ ಭಾರತ್ ಬಂದ್ ಕರೆ ನೀಡಲಾಗಿದೆ. ಆದರೆ ಜನರು ದಿನನಿತ್ಯದಂತೆ ಅಂಗಡಿ, ವ್ಯಾಪಾರ ವಹಿವಾಟು ನಡೆಸಿರುವುದು ಕಂಡು ಬಂದಿದೆ. ಇನ್ನೂ ಕೆಎಸ್ ಆರ್ …

Read More »

ಭಾರತ್ ಬಂದ್ ಕರೆಗೆ ಬೆಂಬಲ: ಕಾಂಗ್ರೆಸ್ ಪ್ರತಿಭಟನೆ

ಬೆಂಗಳೂರು: ಭಾರತ್ ಬಂದ್ ಕರೆಗೆ ಬೆಂಬಲ ಕೋರಿ ನಗರದ ಹಲವೆಡೆ ಕಾಂಗ್ರೆಸ್ ಮತ್ತು ರೈತ ಸಂಘಟನೆಗಳ ಮುಖಂಡರು ಬೈಕ್ ರ್‍ಯಾಲಿ ನಡೆಸುತ್ತಿದ್ದು, ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಕಾಂಗ್ರೆಸ್ ಪ್ರತಿಭಟನೆ ಆರಂಭಿಸಿದೆ. ವಿಧಾನಸಭೆ ವಿರೋಧ ಪಕ್ಷದ ಸಿದ್ದರಾಮಯ್ಯ, ರಾಮಲಿಂಗಾರೆಡ್ಡಿ, ಜಮೀರ್ ಅಹಮದ್, ಶಾಸಕ ಜಿ. ಪರಮೇಶ್ವರ್, ಕೆ.ಜೆ.ಜಾರ್ಜ್, ಪ್ರಿಯಾಂಕ್ ಖರ್ಗೆ ಹಾಗೂ ಇತರ ಶಾಸಕರು ಕಪ್ಪು ಬಾವುಟ ಹಿಡಿದು ಪ್ರತಿಭಟನೆ ಆರಂಭಿಸಿದ್ದಾರೆ. ಶಿವಾಜಿನಗರ, ಬ್ರಿಗೇಡ್ ರಸ್ತೆ, ಸಂಪಿಗೆ ರಸ್ತೆ ಮತ್ತು …

Read More »

ಮಗು ಸೇರಿ ಮೇಘನಾ ರಾಜ್‍ಗೆ ಕೊರೋನ ಪಾಸಿಟಿವ್!

ಬೆಂಗಳೂರು : ಹಿರಿಯ ನಟಿ ಪ್ರಮೀಳಾ ಜೋಷಾಯ್ ಅವರಿಗೆ ಕೊರೊನಾ ವೈರಸ್ ಸೋಂಕು ತಗುಲಿದ ಬೆನ್ನಲ್ಲೇ ಮೇಘನಾ ರಾಜ್ ಮತ್ತು ಅವರ ಪುತ್ರನಿಗೂ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ. ಈ ಕುರಿತು ಮಾಹಿತಿ ನೀಡಿರುವ ಸುಂದರ್ ರಾಜ್, ನಮ್ಮ ಕುಟುಂಬದ ಎಲ್ಲರಿಗೂ ಕೊರೊನಾ ಪಾಸಿಟಿವ್ ಬಂದಿದೆ. ಮೇಘನಾ ಮತ್ತು ಮಗುವಿಗೆ ಕೊರೊನಾ ಪಾಸಿಟಿವ್ ಬಂದಿದೆ ಎಂದು ಅವರು ತಿಳಿಸಿದ್ದಾರೆ. ಮೇಘನಾ ಮತ್ತು ಮಗುವಿಗೆ ಮನೆಯಲ್ಲೇ ಐಸೊಲೇಟ್ ಆಗಿ ಚಿಕಿತ್ಸೆ ನೀಡಲಾಗುತ್ತಿದೆ. …

Read More »

ಭೂಸುಧಾರಣೆ ಕಾಯ್ದೆ ತಿದ್ದುಪಡಿ: ಪರಿಷತ್‍ನಲ್ಲಿ ಕೋಲಾಹಲ

ಬೆಂಗಳೂರು: ಭೂ ಸುಧಾರಣಾ ಕಾಯ್ದೆಗೆ ತಿದ್ದುಪಡಿ ತರಲು ರಾಜ್ಯ ಸರ್ಕಾರ ಮಂಡಿಸಿದ ಪರಿಷ್ಕøತ ಮಸೂದೆ ವಿಧಾನ ಪರಿಷತ್‍ನಲ್ಲಿ ಮತ್ತೆ ಕೋಲಾಹಲಕ್ಕೆ ಕಾರಣವಾಯಿತು. ಹಿಂದಿನ ಅಧಿವೇಶನದಲ್ಲಿ ಭೂ ಸುಧಾರಣಾ ಕಾಯ್ದೆಯ ತಿದ್ದುಪಡಿ ಮಸೂದೆಗೆ ವಿಧಾನ ಪರಿಷತ್ ಒಪ್ಪಿಗೆ ದೊರಕಿರಲಿಲ್ಲ. ಸೋಮವಾರ ಆರಂಭವಾದ ಅಧಿವೇಶನದಲ್ಲಿ ಕಂದಾಯ ಸಚಿವ ಆರ್. ಅಶೋಕ ಅವರು ಮಸೂದೆಗೆ ಒಪ್ಪಿಗೆ ಪಡೆಯಲು ಪ್ರಯತ್ನಿಸಿದರು. ಮಸೂದೆಯ ಕುರಿತು ವಿಸ್ತೃತ ಚರ್ಚೆ ಆಗಬೇಕೆಂದು ಕಾಂಗ್ರೆಸ್ ಮತ್ತು ಜೆಡಿಎಸ್ ಸದಸ್ಯರು ಪಟ್ಟು ಹಿಡಿದರು. …

Read More »

ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಕೇಂದ್ರ ಸರ್ಕಾರ ಘೋಷಣೆ ಮಾಡಲಿದೆ.

ಬೆಂಗಳೂರು : ಕರ್ನಾಟಕ ರಾಜ್ಯದ ಬಯಲು ಸೀಮೆಗೆ ನೀರುಣಿಸುವ ಭದ್ರಾ ಮೇಲ್ದಂಡೆ ನೀರಾವರಿ ಯೋಜನೆಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಕೇಂದ್ರ ಸರ್ಕಾರ ಘೋಷಣೆ ಮಾಡಲಿದೆ. ರಾಜ್ಯದ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ‌ ಅವರ ಸತತ ಪ್ರಯತ್ನದ ಫಲವಾಗಿ ಈ ಯೋಜನೆಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಘೋಷಿಸಲು ಕೇಂದ್ರ ಜಲಶಕ್ತಿ ಸಚಿವರು ಸಮ್ಮತಿಸಿದ್ದಾರೆ. ಕೋವಿಡ್ ಲಾಕ್ ಡೌನ್ ಮಧ್ಯೆಯೂ 11 ಬಾರಿ ನವದೆಹಲಿಗೆ ತೆರಳಿ ಕೇಂದ್ರದ ಜಲಶಕ್ತಿ ಸಚಿವರನ್ನು ತರ್ಕಬದ್ಧವಾಗಿ ಒತ್ತಾಯಿಸಿದ್ದ ಸಚಿವ ರಮೇಶ್ …

Read More »

ಕಾರ್ ಹರಿದು ಸ್ಕೂಟಿ ಸವಾರ ಸಾವನ್ನಪ್ಪಿದ್ದಾರೆ. ಕಾರ್ ಬಿಜೆಪಿ ಮುಖಂಡ ವಿಶ್ವನಾಥ್ ಪಾಟೀಲ್ ಎಂಬವರಿಗೆ ಸೇರಿದ್ದು ಎನ್ನಲಾಗಿದೆ.

ಹಾವೇರಿ: ರಾಣೆಬೆನ್ನೂರು ನಗರದ ಪಿ.ಬಿ ರಸ್ತೆಯಲ್ಲಿ ಕಾರ್ ಹರಿದು ಸ್ಕೂಟಿ ಸವಾರ ಸಾವನ್ನಪ್ಪಿದ್ದಾರೆ. ಸ್ಕೂಟಿ ಮೇಲೆ ಕಾರ್ ಹರಿದ ಪರಿಣಾಮ ದ್ವಿಚಕ್ರ ಅಪ್ಪಚ್ಚಿಯಾಗಿದೆ.52 ವರ್ಷದ ಶಂಕರಗೌಡ ಪಾಟೀಲ್ ಮೃತ ದ್ವಿಚಕ್ರ ಸವಾರ. ಕಾರ್ ಬಿಜೆಪಿ ಮುಖಂಡ ವಿಶ್ವನಾಥ್ ಪಾಟೀಲ್ ಎಂಬವರಿಗೆ ಸೇರಿದ್ದು ಎನ್ನಲಾಗಿದೆ. ಪೊಲೀಸರು ಕಾರ್ ಚಾಲಕನನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದಾರೆ. ಸ್ಕೂಟಿಗೆ ಡಿಕ್ಕಿಯಾದ ಕಾರ್ ಡಿವೈಡರ್ ಮೇಲೆ ಬಂದು ನಿಂತಿದೆ. ಸ್ಥಳಕ್ಕೆ ಸಂಚಾರಿ ಠಾಣೆಯ ಪೊಲೀಸರು ಭೇಟಿ …

Read More »

ಬಂದ್‌ಗೆ ಬೆಂಬಲ ನೀಡಿದವರು ಯಾರು?

ಬೆಂಗಳೂರು: ಕೃಷಿ ಸಂಬಂಧಿ ಕಾಯ್ದೆಗಳನ್ನು ವಿರೋಧಿಸಿ ರೈತ ಸಂಘಟನೆಗಳುಭಾರತ್ ಬಂದ್‍ಗೆ ಕರೆ ನೀಡಿದೆ. ಸಹಜವಾಗಿಯೇ ಕರ್ನಾಟಕದಲ್ಲಿಯೂ ಕೂಡ ಭಾರತ್ ಬಂದ್‍ಗೆ ರೈತ ನಾಯಕರು ಕರೆ ನೀಡಿದ್ದಾರೆ. ರೈತರ ಈ ಉದ್ದೇಶಿತ ಬಂದ್‍ಗೆ ಬೆಂಬಲ ಸೂಚಿಸುವ ವಿಚಾರದಲ್ಲಿ ಹಲವು ಸಂಘ ಸಂಸ್ಥೆಗಳಿಂದ ಮಿಶ್ರ ಪ್ರತಿಕ್ರಿಯೆ. ರೈತ ಸಂಘಟನೆಗಳು, ಕಾರ್ಮಿಕ ಸಂಘಟನೆಗಳು ಭಾರತ್ ಬಂದ್‍ಗೆ ಬೆಂಬಲ ಘೋಷಿಸಿವೆ. ಆದರೆ ಕನ್ನಡ ಪರ ಸಂಘಟನೆಗಳಲ್ಲಿ ಈ ಬಗ್ಗೆ ಭಿನ್ನಾಭಿಪ್ರಾಯಗಳಿವೆ. ಕೆಲ ಸಂಘಟನೆಗಳು ಬಂದ್‍ನಲ್ಲಿ ಪಾಲ್ಗೊಳ್ಳುವುದಾಗಿ …

Read More »

ಬೆಳಗಾವಿ ಲೋಕಸಭೆ ಉಪಚುನಾವಣೆ: ಜಿಲ್ಲಾ ಕಾಂಗ್ರೆಸ್ ನಾಯಕರ ಜೊತೆ ಡಿಕೆಶಿ ಚರ್ಚೆ

ಬೆಂಗಳೂರು: ಲೋಕಸಭೆ ಕ್ಷೇತ್ರದ ಉಪ ಚುನಾವಣೆಗೆ ಅಭ್ಯರ್ಥಿ ಆಯ್ಕೆ ಮಾಡುವ ಕುರಿತಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಇಂದು ಬೆಳಗಾವಿ ಜಿಲ್ಲೆಯ ಕಾಂಗ್ರೆಸ್ ನಾಯಕರ ಜೊತೆ ಸಮಾಲೋಚನೆ ನಡೆಸಿದರು. ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸತೀಶ್ ಜಾರಕಿಹೊಳಿ, ಮಾಜಿ ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ, ಈಶ್ವರ ಖಂಡ್ರೆ, ಉಪ ಚುನಾವಣೆಯ ಉಸ್ತುವಾರಿ ವಹಿಸಿರುವ ಎಂ.ಬಿ. ಪಾಟೀಲ್, ಶಾಸಕರಾದ ಲಕ್ಷ್ಮೀ ಹೆಬ್ಬಾಳಕರ್, ಮಹಾಂತೇಶ ಕೌಜಲಗಿ …

Read More »