Breaking News

ರಾಜ್ಯ

ಬೆಳಗಾವಿ ವಿಭಜನೆಗೆ ತಾಂತ್ರಿಕ ತೊಂದರೆ : ಡಿಸಿಎಂ ಲಕ್ಷ್ಮಣ ಸವದಿ

ಬಳ್ಳಾರಿ : ಕಾಂಗ್ರೆಸ್, ಜೆಡಿಎಸ್ ಪಕ್ಷದ 17 ಜನರು ಬಿಜೆಪಿ ಪಕ್ಷಕ್ಕೆ ಬಂದ ಕಾರಣದಿಂದ ರಾಜ್ಯದಲ್ಲಿ ನಮ್ಮ ಸರ್ಕಾರ ಬಂದಿದೆ. ಅವರ ಬಗ್ಗೆ ಗೌರವವಿದೆ ಎಂದು ಡಿಸಿಎಂ ಲಕ್ಷ್ಮಣ ಸವದಿ ಹೇಳಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ಬರಲು 17 ಜನರು ಕಾರಣ. ಕೆಲವೇ ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆಯಾಗಲಿದೆ. ಯಾರಿಗೆ ಸಚಿವ ಸ್ಥಾನ ನೀಡಬೇಕು ಎಂಬುವುದು ಪಕ್ಷ ತೀರ್ಮಾನ ಮಾಡುತ್ತದೆ. ಸಿಎಂ ಬಿ.ಎಸ್.ಯಡಿಯೂರಪ್ಪ ಫೈನಲ್ …

Read More »

ಬೆಳಗಾವಿಯಲ್ಲಿ ನ.30ರಂದು ಮಹತ್ವದ ಸಭೆ ನಡೆಸಲಿರುವ ರಮೇಶ್ ಜಾರಕಿಹೊಳಿ

ಬೆಳಗಾವಿ : ಜಿಲ್ಲಾ ಉಸ್ತುವಾರಿ ಸಚಿವ ರಮೇಶ್ ಜಾರಕಿಹೊಳಿ ಅವರು ಸೋಮವಾರ ಜಲಸಂಪನ್ಮೂಲ ಮತ್ತು ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಮಹತ್ವರ ಸಭೆ ನಡೆಸಲಿದ್ದಾರೆ. ಕಳಸಾ ಬಂಡೂರ, ಗಟ್ಟಿ ಬಸವಣ್ಣ ಕುಡಿಯುವ ನೀರಿನ ಯೋಜನೆಗಳ ಅನುಷ್ಠಾನ ಸೇರಿ ಇತರೆ ಯೋಜನೆಗಳ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಲು ಉನ್ನತ ಮಟ್ಟದ ಸಭೆ ಹಮ್ಮಿಕೊಂಡಿದ್ದಾರೆ. ಬೆಳಗಾವಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಧ್ಯಾಹ್ನ 12 ಗಂಟೆಗೆ ಸಭೆ ನಡೆಯಲಿದ್ದು, ಸಭೆಯಲ್ಲಿ ಜಿಲ್ಲಾಧಿಕಾರಿ, ಜಲಸಂಪನ್ಮೂಲ ಮತ್ತು ಅರಣ್ಯ ಇಲಾಖೆಯ …

Read More »

ಇನ್ನೋವಾ ಕಾರು ಕಳ್ಳತನವಾಗಿದೆ ಎಂದು ದೂರು ನೀಡಿದ್ದ ಮಾಲೀಕನೇ ಅರೆಸ್ಟ್

ತುಮಕೂರು: ವಾಹನ ವಿಮೆ ಪಡೆಯುವ ದುರುದ್ದೇಶದಿಂದ ಕಾರು ಕಳ್ಳತನವಾಗಿದೆ ಎಂದು ಸುಳ್ಳು ದೂರು ಕೊಟ್ಟ ಕಾರು ಮಾಲೀಕನೇ ಈಗ ಬಂಧನವಾಗಿರುವ ಘಟನೆ ತುಮಕೂರಿನಲ್ಲಿ ನಡೆದಿದೆ.ಆರೋಪಿಯನ್ನು ದೊಡ್ಡೇಗೌಡ ಎಂದು ಗುರುತಿಸಲಾಗಿದೆ. ಈತ ಆಂಧ್ರದ ಮಡಕಶಿರಾ ಮೂಲದವನಾಗಿದ್ದಾನೆ. ವಿಮೆ ಪಡೆಯಲು ಕಾರು ಕಳೆದು ಹೋಗಿದೆ ಎಂದು ಸುಳ್ಳು ದೂರು ಕೊಟ್ಟು ಪೊಲೀಸರ ಕೈಗೆ ಸಿಕ್ಕಿ ಬಿದ್ದಿದ್ದಾನೆ. ಈ ಪ್ರಕರಣ ತುಮಕೂರು ಜಿಲ್ಲೆ ಮಧುಗಿರಿ ತಾಲೂಕಿನ ಮಿಡಿಗೇಶಿ ಠಾಣಾ ವ್ಯಾಪ್ತಿಯಲ್ಲಿ ಬೆಳಕಿಗೆ ಬಂದಿದೆ. ಆರೋಪಿ …

Read More »

ಮೋದಿ ಮನ್ ಕಿ ಬಾತ್‍ ಹೈಲೈಟ್ಸ್ …………..

ನವದೆಹಲಿ, ನ.29- ಕೃಷಿ ಕ್ಷೇತ್ರದ ಸುಧಾರಣಾ ಕ್ರಮಗಳು ಮುಂದಿನ ದಿನಗಳಲ್ಲಿ ರೈತ ಸಮುದಾಯದ ಅವಕಾಶಗಳನ್ನು ಮತ್ತಷ್ಟು ಹೆಚ್ಚಿಸಲಿವೆ ಎಂಬ ವಿಶ್ವಾಸವನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ವ್ಯಕ್ತಪಡಿಸಿದ್ದಾರೆ. ಅತ್ಯಂತ ಜನಪ್ರಿಯ ಕಾರ್ಯಕ್ರಮವಾಗಿರುವ ಮನ್ ಕಿ ಬಾತ್‍ನ 71ನೇ ಸರಣಿಯಲ್ಲಿ ಇಂದು ದೇಶವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಅವರು, ಕೇಂದ್ರ ಸರ್ಕಾರ ತಿದ್ದುಪಡಿ ತಂದಿರುವ ಹಲವಾರು ಕಾಯ್ದೆಗಳು ಕೃಷಿ ವಲಯವನ್ನು ಉನ್ನತ ಮಟ್ಟಕ್ಕೇರಿಸುವ ಜತೆಗೆ ರೈತರ ಅವಕಾಶಗಳನ್ನು ಮತ್ತಷ್ಟು ವಿಸ್ತರಿಸಲಿದೆ ಎಂದು ಹೇಳಿದರು. …

Read More »

ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್ ಮೊರೆ ಹೋಗಿದ್ದಾರೆ ರಾಗಿಣಿ

ಬೆಂಗಳೂರು: ಡ್ರಗ್ಸ್ ಪ್ರಕರಣದಲ್ಲಿ ಅರೆಸ್ಟ್ ಆಗಿರುವ ರಾಗಿಣಿ ದ್ವಿವೇದಿ ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್ ಮೊರೆ ಹೋಗಿದ್ದಾರೆ. ಹೈಕೋರ್ಟ್ ಆದೇಶ ಪ್ರಶ್ನಿಸಿ ರಾಗಿಣಿ ದ್ವಿವೇದಿ ಪರ ಗುಜರಾತ್ ಮೂಲದ ವಕೀಲರೊಬ್ಬರು ಸುಪ್ರೀಂಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಡಿಸೆಂಬರ್ 4ರಂದು ರಾಗಿಣಿ ದ್ವಿವೇದಿ ಅರ್ಜಿ ವಿಚಾರಣೆ ನ್ಯಾಯಾಲಯದ ಮುಂದೆ ಬರಲಿದೆ. ರಾಗಿಣಿ ದ್ವಿವೇದಿ ಮತ್ತು ಸಂಜನಾ ಗಲ್ರಾಣಿ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನ ನವೆಂಬರ್ 3ರಂದು ಹೈಕೋರ್ಟ್ ವಜಾ ಮಾಡಿ ಆದೇಶಿಸಿತ್ತು.ಹೈಕೋರ್ಟ್ ಆದೇಶ …

Read More »

ಯೂಟ್ಯೂಬ್ ವಿಡಿಯೋ ನೋಡಿ ಕೆಫೆಯ ಪೇಮೆಂಟ್ ಸಿಸ್ಟಮ್ ಹ್ಯಾಕ್ ಮಾಡಿದ 17 ವರ್ಷದ ವಿದ್ಯಾರ್ಥಿ

ಮುಂಬೈ: ಅಪ್ರಾಪ್ತನೋರ್ವ ಯೂಟ್ಯೂಬ್ ವಿಡಿಯೋ ನೋಡಿ ಕೆಫೆಯ ಪೇಮೆಂಟ್ ಸಿಸ್ಟಮ್ ಹ್ಯಾಕ್ ಮಾಡಿದ್ದು, ಗ್ರಾಹಕರು ಕೆಫೆಗೆ ಪಾವತಿಸುವ ಹಣವನ್ನು ತನ್ನ ಖಾತೆಗೆ ಬರುವಂತೆ ಮಾಡುತ್ತಿದ್ದ ಪ್ರಕರಣ ಮುಂಬೈನಲ್ಲಿ ನಡೆದಿದೆ. 17 ವರ್ಷದ ವಿದ್ಯಾರ್ಥಿ ಯೂಟ್ಯೂಬ್ ವಿಡಿಯೋ ನೋಡಿ ಈ ಕೃತ್ಯ ಎಸಗಿದ್ದು, ಬಾಲಾಪರಾಧಿ ನ್ಯಾಯಾಲಯ ಎರಡು ವರ್ಷಗಳ ಕಾಲ ಕೌನ್ಸಲಿಂಗ್‍ಗೆ ಒಳಪಡಿಸುವಂತೆ ಸೂಚಿಸಿದೆ. ವಿದ್ಯಾರ್ಥಿ 12ನೇ ತರಗತಿಯಲ್ಲಿ ಶೇ.80ರಷ್ಟು ಅಂಕ ಗಳಿಸಿ ಉತ್ತೀರ್ಣನಾದ ಬಳಿಕ ಚಾರ್ಟೆಡ್ ಅಕೌಂಟೆನ್ಸಿ ಮಾಡುತ್ತಿದ್ದಾನೆ. ಸೆಪ್ಟೆಂಬರ್ …

Read More »

ಎರಡೂ ರಾಷ್ಟ್ರೀಯ ಪಕ್ಷಗಳು ಪ್ರಾದೇಶಿಕ ಪಕ್ಷವಾದ ಜೆಡಿಎಸ್‍ನ್ನು ಮುಗಿಸಲು ಪ್ಲಾನ್ ಮಾಡಿವೆ: ಕೋನರೆಡ್ಡಿ

ಬೆಂಗಳೂರು, – ಎರಡೂ ರಾಷ್ಟ್ರೀಯ ಪಕ್ಷಗಳು ಪ್ರಾದೇಶಿಕ ಪಕ್ಷವಾದ ಜೆಡಿಎಸ್‍ನ್ನು ಮುಗಿಸಲು ಪ್ಲಾನ್ ಮಾಡಿವೆ ಎಂದು ಆರೋಪಿಸಿದ ಮಾಜಿ ಶಾಸಕ ಎನ್.ಎಚ್. ಕೋನರೆಡ್ಡಿ ಸಮರೋಪಾದಿಯಲ್ಲಿ ಪಕ್ಷ ಸಂಘಟನೆ ಮಾಡಬೇಕಿದೆ ಎಂದು ಹೇಳಿದರು. ಜೆಡಿಎಸ್ ಕಚೇರಿ ಜೆಪಿ ಭವನದಲ್ಲಿಂದು ಮುಂಬರುವ ಗ್ರಾಪಂ ಚುನಾವಣೆ, ಪಕ್ಷದ ಬಲವರ್ಧನೆ ಕುರಿತ ತಾಲೂಕು ಜಿಲ್ಲಾ ಮತ್ತು ರಾಜ್ಯಮಟ್ಟದ ಪ್ರಮುಖರ ಸಭೆಯಲ್ಲಿ ಮಾತನಾಡಿದ ಅವರು, ಎರಡೂ ರಾಷ್ಟ್ರೀಯ ಪಕ್ಷಗಳ ನಡುವೆ ಜೆಡಿಎಸ್ ಉಳಿಸಲು ಯುದ್ಧ ಮಾಡಬೇಕಿದೆ. ನಾಲ್ಕು …

Read More »

ವಾ.ಕ.ರ.ಸಾ.ಸಂಸ್ಥೆಯ ಮೂಡಲಗಿ ಬಸ್ ಘಟಕ ನಿರ್ಮಾಣಕ್ಕೆ ಮೂರು ಎಕರೆ ನಿವೇಶನವನ್ನು ನೀಡಲಾಗುವುದು: ಬಾಲಚಂದ್ರ ಜಾರಕಿಹೊಳಿ

ಮೂಡಲಗಿ: ಮೂಡಲಗಿ ಹೊಸ ತಾಲೂಕಾಗಿ ಕಾರ್ಯನಿರ್ವಹಿಸುತ್ತಿರುವುದರಿಂದ ಅಗತ್ಯವಿರುವ ಎಲ್ಲ ಸರ್ಕಾರಿ ಕಚೇರಿಗಳನ್ನು ಪ್ರಾರಂಭಿಸಲಾಗುವುದು. ಅಲ್ಲದೆ ವಾ.ಕ.ರ.ಸಾ.ಸಂಸ್ಥೆಯ ಮೂಡಲಗಿ ಬಸ್ ಘಟಕ ನಿರ್ಮಾಣಕ್ಕೆ ಮೂರು ಎಕರೆ ನಿವೇಶನವನ್ನು ನೀಡಲಾಗುವುದು ಎಂದು ಶಾಸಕ ಮತ್ತು ಕೆಎಮ್‍ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು. ತಾಲೂಕಿನ ಕುಲಗೋಡ ಗ್ರಾಮದಲ್ಲಿ ಪ್ರಾದೇಶಿಕ ಹಿಂದುಳಿದ ಪ್ರದೇಶಾಭಿವೃದ್ದಿ ಇಲಾಖೆಯಿಂದ (ನಂಜುಂಡಪ್ಪ ಆಯೋಗ) 95 ಲಕ್ಷ ರೂ.ಗಳ ವೆಚ್ಚದಲ್ಲಿ ನೂತನವಾಗಿ ನಿರ್ಮಿಸಿದ ಬಸ್ ನಿಲ್ದಾಣವನ್ನು ಉದ್ಘಾಟಿಸಿ ಮಾತನಾಡಿದ ಅವರು, ಮೂಡಲಗಿ …

Read More »

ಆನ್‍ಲೈನ್ ಗೇಮ್ ಹುಚ್ಚಿನಿಂದ ವ್ಯಕ್ತಿಯೊಬ್ಬ 16 ಲಕ್ಷ ರೂ. ಕಳೆದುಕೊಂಡು ಇದೀಗ ಆತ್ಮಹತ್ಯೆಗೆ ಶರಣಾದ

ಹೈದರಾಬಾದ್: ಆನ್‍ಲೈನ್ ಗೇಮ್ ಹುಚ್ಚಿನಿಂದ ವ್ಯಕ್ತಿಯೊಬ್ಬ 16 ಲಕ್ಷ ರೂ. ಕಳೆದುಕೊಂಡು ಇದೀಗ ಆತ್ಮಹತ್ಯೆಗೆ ಶರಣಾದ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದೆ. ಜಗದೀಶ್ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯಾಗಿದ್ದು, ಈತ ಎಲ್‍ಬಿ ನಗರ ನಿವಾಸಿ. ಆನ್‍ಲೈನ್ ಗೇಮ್ ಚಟದಿಂದಾಗಿ ಜಗದೀಶ್ ಲಕ್ಷಾಂತರ ರೂಪಾಯಿಗಳನ್ನು ಕಳೆದುಕೊಂಡನು. ಅಲ್ಲದೆ ಸಾಲ ತೀರಿಸಲು ಅಸಾಧ್ಯವಾಗಿತ್ತು. ಈ ಹಿನ್ನೆಲೆಯಲ್ಲಿ ಬೇರೆ ದಾರಿ ಕಾಣದೆ ತನ್ನ ಪ್ರಾಣವನ್ನೇ ಕಳೆದುಕೊಳ್ಳಲು ನಿರ್ಧರಿಸಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಕೆಲವು ದಿನಗಳ ಹಿಂದೆ ಜಗದೀಶ್ ತಂದೆ …

Read More »

ಪಕ್ಷದ ಸಂಘಟನೆಗೆ ಹೆಚ್ಚು ಒತ್ತು ನೀಡಿದರೆ ಪಕ್ಷ ಅಧಿಕಾರಕ್ಕೆ ಬರಲು ಸಾಧ್ಯ : ಸತೀಶ್ ಜಾರಕಿಹೊಳಿಯ

ಶಿರಸಿ: ಪಕ್ಷದ ಸಂಘಟನೆಗೆ ಹೆಚ್ಚು ಒತ್ತು ನೀಡುವ ಮೂಲಕ ಕಾಂಗ್ರೆಸ್ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರಬೇಕಿದೆ. ಇದರಲ್ಲಿ ಅತ್ಯಂತ ಮುಖ್ಯವಾದ ಪಾತ್ರ ಕಾರ್ಯಕರ್ತರದ್ದಾಗಿರುತ್ತದೆ. ವಿಧಾನಸಭೆ, ಲೋಕಸಭೆ, ಗ್ರಾಮ ಪಂಚಾಯತ್, ಜಿಲ್ಲಾ ಪಂಚಾಯತ್ ಸೇರಿದಂತೆ ಯಾವ ಚುನಾವಣೆಯೇ ಆಗಿರಲಿ ನಾವೆಲ್ಲ ಒಗ್ಗೂಡಿ ಪಕ್ಷ ಸಂಘಟನೆಗೆ ಹೆಚ್ಚು ಒತ್ತು ನೀಡಿದರೆ ಪಕ್ಷ ಅಧಿಕಾರಕ್ಕೆ ಬರಲು ಸಾಧ್ಯವೆಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಹೇಳಿದರು. ನಗರದ ತೋಟಗಾರರ ಕಲ್ಯಾಣಮಂಟಪದಲ್ಲಿ ಉತ್ತರಕನ್ನಡ ಜಿಲ್ಲಾ ಕಾಂಗ್ರೆಸ್ …

Read More »