ಬೆಂಗಳೂರು, ನ.14- ರಾಜ್ಯ ವಿಧಾನಸಭೆಯ ಚುನಾಯಿತ ಸದಸ್ಯರಿಂದ ರಾಜ್ಯಸಭೆಯ ಒಂದು ಸ್ಥಾನಕ್ಕೆ ನಡೆಯುವ ಚುನಾವಣೆಗೆ ಅಧಿಸೂಚನೆ ಹೊರಡಿಸಿ ಮೂರು ದಿನ ಕಳೆದರೂ ಯಾವುದೇ ನಾಮಪತ್ರ ಸಲ್ಲಿಕೆಯಾಗಿಲ್ಲ. ನವೆಂಬರ್ 11ರಂದು ಚುನಾವಣಾ ಅಧಿಸೂಚನೆ ಹೊರಡಿಸಲಾಗಿದ್ದು, ಅಂದಿನಿಂದಲೇ ನಾಮಪತ್ರ ಸಲ್ಲಿಕೆಗೆ ಅವಕಾಶ ಕಲ್ಪಿಸಲಾಗಿತ್ತು. ಆದರೆ, ಕಳೆದ ಮೂರು ದಿನಗಳಲ್ಲಿ ಯಾವುದೇ ಪಕ್ಷ ಅಥವಾ ಯಾವೊಬ್ಬ ಅಭ್ಯರ್ಥಿಯೂ ಉಮೇದುವಾರಿಕೆ ಸಲ್ಲಿಸಿಲ್ಲ. ರಾಜ್ಯಸಭಾ ಸದಸ್ಯರಾಗಿದ್ದ ಅಶೋಕ್ ಗಸ್ತಿ ಅವರ ನಿಧನದಿಂದ ತೆರವಾಗಿರುವ ಸ್ಥಾನಕ್ಕೆ ಭಾರತದ ಚುನಾವಣಾ …
Read More »ಲಾಕ್‍ಡೌನ್‍ನಿಂದಾಗಿ ತೀವ್ರ ಆರ್ಥಿಕ ಸಂಕಷ್ಟ ಎದುರಿಸುತ್ತಿರುವ ಸಾರಿಗೆ ಸಂಸ್ಥೆಗಳು ತಮ್ಮ ಅಧಿಕಾರಿ ಮತ್ತು ಸಿಬ್ಬಂದಿಗೆ ವೇತನ ನೀಡಲಾಗದ ಸ್ಥಿತಿಗೆ ತಲುಪಿವೆ.
ಬೆಂಗಳೂರು, ನ.14- ಕೋವಿಡ್-19ರ ಲಾಕ್‍ಡೌನ್‍ನಿಂದಾಗಿ ತೀವ್ರ ಆರ್ಥಿಕ ಸಂಕಷ್ಟ ಎದುರಿಸುತ್ತಿರುವ ಸಾರಿಗೆ ಸಂಸ್ಥೆಗಳು ತಮ್ಮ ಅಧಿಕಾರಿ ಮತ್ತು ಸಿಬ್ಬಂದಿಗೆ ವೇತನ ನೀಡಲಾಗದ ಸ್ಥಿತಿಗೆ ತಲುಪಿವೆ. ನವೆಂಬರ್ ತಿಂಗಳ ಎರಡು ವಾರ ಕಳೆದರೂ ಅಕ್ಟೋಬರ್ ತಿಂಗಳ ವೇತನವನ್ನು ಕೆಎಸ್‍ಆರ್‍ಟಿಸಿ, ಬಿಎಂಟಿಸಿ ಈಶಾನ್ಯ ಹಾಗೂ ವಾಯುವ್ಯ ಸಾರಿಗೆ ಸಂಸ್ಥೆಗಳ ಅಧಿಕಾರಿ ಮತ್ತು ಸಿಬ್ಬಂದಿಗೆ ನೀಡಿಲ್ಲ. ರಾಜ್ಯಸರ್ಕಾರ ಈ ಸಾರಿಗೆ ಸಂಸ್ಥೆಗಳಿಗೆ ಆರ್ಥಿಕ ನೆರವು ನೀಡಿದರೆ ಮಾತ್ರ ವೇತನ ನೀಡಲು ಸಾಧ್ಯ ಎಂದು ಸಾರಿಗೆ …
Read More »ಮೂರು ರಾಜ್ಯಗಳ ಉಸ್ತುವಾರಿ ಹೊಣೆ- ಸಿಟಿ ರವಿಗೆ ಅಣ್ಣಾಮಲೈ ವಿಶ್
ಬೆಂಗಳೂರು: ತಮಿಳುನಾಡು, ಮಹಾರಾಷ್ಟ್ರ ಮತ್ತು ಗೋವಾ ರಾಜ್ಯಗಳ ಬಿಜೆಪಿ ಉಸ್ತುವಾರಿಯಾಗಿ ಆಯ್ಕೆಯಾಗಿರುವ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಅವರಿಗೆ ಮಾಜಿ ಐಪಿಎಸ್ ಅಣ್ಣಾಮಲೈ ಶುಭ ಕೋರಿದ್ದಾರೆ. ಇತ್ತೀಚೆಗಷ್ಟೇ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಕಗೊಂಡಿದ್ದ ಮಾಜಿ ಸಚಿವ ಸಿಟಿ ರವಿ ಅವರ ಹೆಗಲಿಗೆ ಮೂರು ರಾಜ್ಯಗಳ ಉಸ್ತುವಾರಿಯನ್ನು ನೀಡಲಾಗಿದೆ. ತಮಿಳುನಾಡು, ಮಹಾರಾಷ್ಟ್ರ ಮತ್ತು ಗೋವಾ ರಾಜ್ಯಗಳ ಉಸ್ತುವಾರಿಯನ್ನು ಸಿಟಿ ರವಿ ಅವರಿಗೆ ವಹಿಸಲಾಗಿದೆ. ಕಾರ್ಕಳ ಶಾಸಕ ಸುನೀಲ್ ಕುಮಾರ್ ಕೇರಳ …
Read More »ಸಚಿವರು, ಶಾಸಕರು, ಜನಪ್ರತಿನಿಧಿಗಳ ವಿರುದ್ಧದ 570ಪ್ರಕರಣಗಳನ್ನು ಹಿಂಪಡೆದ ರಾಜ್ಯ ಸರಕಾರಕ್ಕೆ ನೋಟಿಸ್ ಜಾರಿ
ಸಚಿವರು, ಶಾಸಕರು, ಜನಪ್ರತಿನಿಧಿಗಳ ವಿರುದ್ಧ ದಾಖಲಾಗಿದ್ದ 570 ಕ್ರಿಮಿನಲ್ ಪ್ರಕರಣ ಬೆಂಗಳೂರು, ನ.13: ಸಚಿವರು, ಶಾಸಕರು, ಜನಪ್ರತಿನಿಧಿಗಳ ವಿರುದ್ಧದ 570 ಕ್ರಿಮಿನಲ್ ಪ್ರಕರಣಗಳನ್ನು ಹಿಂಪಡೆದ ರಾಜ್ಯ ಸಚಿವ ಸಂಪುಟದ ನಿರ್ಣಯ ಪ್ರಶ್ನಿಸಿ ವಕೀಲೆ ಸುಧಾ ಕಾಟ್ವಾ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕ ನೇತೃತ್ವದ ವಿಭಾಗೀಯ ಪೀಠ, ರಾಜ್ಯ ಸರಕಾರಕ್ಕೆ ನೋಟಿಸ್ ಜಾರಿಗೊಳಿಸಿ, ಅರ್ಜಿಗೆ ಡಿ.9ರ ಒಳಗೆ ಆಕ್ಷೇಪಣೆ ಸಲ್ಲಿಸುವಂತೆ ಸೂಚಿಸಿದೆ ಅರ್ಜಿದಾರರ …
Read More »ರಮೇಶ್ ಕತ್ತಿಗೆ ದೀಪಾವಳಿ ಉಡುಗೂರೆ : ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿ ಮರು ಆಯ್ಕೆ
ಉಪಾಧ್ಯಕ್ಷರಾಗಿ ಸುಭಾಷ್ ಢವಳೇಶ್ವರ ಬೆಳಗಾವಿ: ಭಾರೀ ಕುತೂಹಲ ಮೂಡಿಸಿದ್ದ ಬೆಳಗಾವಿ ಡಿಸಿಸಿ ಬ್ಯಾಂಕ್ ಅಧ್ಯಕ್ಷ, ಉಪಾಧ್ಯಕ್ಷ ಗದ್ದುಗೆಯ ಹಗ್ಗ ಜಗ್ಗಾಟಕ್ಕೆ ಶನಿವಾರ ತೆರೆ ಬಿದ್ದಿದ್ದು, ಅಧ್ಯಕ್ಷ,ಉಪಾಧ್ಯಕ್ಷ ಹೆಸರುಗಳನ್ನು ಘೋಷಣೆ ಮಾಡಲಾಗಿದೆ. ನಗರದ ಪ್ರವಾಸಿ ಮಂದಿರದಲ್ಲಿ ಶನಿವಾರ ಬೆಳಿಗ್ಗೆ ಘಟಾನುಘಟಿ ಬಿಜೆಪಿ ನಾಯಕರು ನಡೆಸಿದ ಸಭೆಯಲ್ಲಿ ಅವಿರೋಧ ಆಯ್ಕೆ ಬಗ್ಗೆ ಒಮ್ಮತದ ಅಭಿಪ್ರಾಯ ವ್ಯಕ್ತವಾಗಿದೆ. ಇದರಿಂದ ಅಧ್ಯಕ್ಷ ಸ್ಥಾನಕ್ಕೆ ರಮೇಶ ಕತ್ತಿಯಾಗಿದೆ ಮುಂದುವರೆಯಲಿದೆ. ಉಪಾಧ್ಯಕ್ಷ ಸ್ಥಾನಕ್ಕೆ ಸುಭಾಷ್ …
Read More »ಹೈಕಮಾಂಡ್ ನಡೆ ತೀವ್ರ ಕುತೂಹಲ ಇನ್ನೆರಡು ದಿನದಲ್ಲಿ ಯಡಿಯೂರಪ್ಪ ಸಂಪುಟದ ಭವಿಷ್ಯ? ಸಿಎಂ ದೆಹಲಿಗೆ ತೆರಳುವ ಸಾಧ್ಯತೆ
ಬೆಂಗಳೂರು: ಬಿಜೆಪಿ ಹೈಕಮಾಂಡ್ ನಡೆ ತೀವ್ರ ಕುತೂಹಲ ಹುಟ್ಟಿಸಿದ್ದು, ಇನ್ನೆರಡು ದಿನದಲ್ಲಿ ಯಡಿಯೂರಪ್ಪ ಸಂಪುಟದ ಭವಿಷ್ಯ ಗೊತ್ತಾಗಲಿದೆ. ಸಂಪುಟ ವಿಸ್ತರಣೆ ಅಥವಾ ಪುನಾರಚನೆಗೆ ಹೈಕಮಾಂಡ್ ಮನಸ್ಸು ಮಾಡಿದ್ರೆ ಸಿಎಂ ದೆಹಲಿಗೆ ತೆರಳುವ ಸಾಧ್ಯತೆ ಇದೆ. ಹೈಕಮಾಂಡ್ ಜೊತೆ ಮುಖಾಮುಖಿಯಾಗಿ ಭೇಟಿಯಾಗಿ ಸಿಎಂ ಮಾತುಕತೆ ನಡೆಸಲಿದ್ದಾರೆ. ಒಂದು ವೇಳೆ ಹೈಕಮಾಂಡ್ ಈಗ ಬೇಡ ಅಂದ್ರೆ ಡಿಸೆಂಬರ್ ಗೆ ಮುಂದೂಡಿಕೆಯಾಗುವ ಸಾಧ್ಯತೆಗಳು ಕೂಡ ಇವೆ. ಅಷ್ಟೇ ಅಲ್ಲ ಸಿಎಂ ದೆಹಲಿ …
Read More »ರವಿಬೆಳೆಗೆರೆ ಅವರ ಅಭಿನಯದ ಮಿಂಚು ಹೆಜ್ಜೆ ಗುರುತುಗಳು ಬಣ್ಣದ ಲೋಕದಲ್ಲೂ ಮೂಡಿವೆ
ಬೆಂಗಳೂರು, ನ.13- ಕಾದಂಬರಿಕಾರ, ಲೇಖಕ, ನಿರೂಪಕ ಹೀಗೆ ನಾನಾ ಮಜಲುಗಳಲ್ಲಿ ಗುರುತಿಸಿಕೊಂಡಿದ್ದ ರವಿಬೆಳೆಗೆರೆಯವರ ಹೆಜ್ಜೆ ಗುರುತುಗಳು ಬಣ್ಣದ ಲೋಕದಲ್ಲೂ ಮೂಡಿವೆ. ಸಿನಿಮಾಲೋಕ ಹಾಗೂ ಸಿನಿಮಂದಿ ಯೊಂದಿಗೆ ಅವಿನಾಭಾವ ಸಂಬಂಧ ಹೊಂದಿದ್ದ ರವಿಬೆಳೆಗೆರೆ ಅವರು ರವಿಶ್ರೀವಾತ್ಸ ನಿರ್ದೇಶನದ ಗಂಡ ಹೆಂಡತಿ ಚಿತ್ರದಲ್ಲಿ ತನಿಖಾಧಿಕಾರಿಯಾಗಿ ಗಮನ ಸೆಳೆದರು. ನಂತರ ಗುರುದೇಶಪಾಂಡೆ ನಿರ್ದೇಶಿಸಿದ್ದ ವಾರಸ್ದಾರ, ಶಿವರಾಜ್‍ಕುಮಾರ್ ಅಭಿನಯದ ಮಾದೇಶ, ಡೆಡ್ಲಿ ಸೋಮ ಚಿತ್ರಗಳಲ್ಲೂ ತಮ್ಮ ಅಭಿನಯದ ಮಿಂಚು ಹರಿಸಿದ್ದರು. ಡೆಡ್ಲಿ ಸೋಮ ಸಿನಿಮಾಕ್ಕೆ ರವಿಬೆಳೆಗೆರೆ …
Read More »IMA ಹೂಡಿಕೆದಾರರಿಗೆ ಹಣ ವಾಪಸ್ ನೀಡಲು ಆನ್‍ಲೈನ್ ಅರ್ಜಿ ಆಹ್ವಾನ
ಬೆಂಗಳೂರು,ನ.13- ಐಎಂಎ ಬಹುಕೋಟಿ ವಂಚನೆ ಪ್ರಕರಣದಲ್ಲಿ ಹೂಡಿಕೆದಾರರಿಗೆ ಹಣ ವಾಪಸ್ ಕೊಡಿಸಲು ರಾಜ್ಯ ಸರ್ಕಾರ ಪ್ರಕ್ರಿಯೆಗಳನ್ನು ಆರಂಭಿಸಲಾಗಿದೆ. ನ.25ರಿಂದ ಆನ್‍ಲೈನ್ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ವಾರ್ತಾ ಭವನದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಐಎಂಎ ಹಗರಣದ ಬಗ್ಗೆ ಮಾಹಿತಿ ನೀಡಿದ ಸಕ್ಷಮ ಪ್ರಾಧಿಕಾರ ಹಾಗೂ ವಿಶೇಷ ಅಧಿಕಾರಿ ಹರ್ಷಗುಪ್ತ ಅವರು, ಠೇವಣಿದಾರರು ಡಿಸೆಂಬರ್ 24ರೊಳಗಾಗಿ ಅರ್ಜಿ ಸಲ್ಲಿಸಬೇಕು. ಎರಡು ಹಂತದಲ್ಲಿ ಅರ್ಜಿ ಸಲ್ಲಿಕೆ ಅವಕಾಶವಿದ್ದು, ಮೊದಲ ಹಂತದಲ್ಲಿ ವೈಯಕ್ತಿಕ ವಿವರ, ಮೊಬೈಲ್ ಸಂಖ್ಯೆ, ಬ್ಯಾಂಕ್ ಖಾತೆಗಳನ್ನು …
Read More »ವಂಶಾಡಳಿತ ಮತ್ತು ಕುಟುಂಬ ರಾಜಕಾರಣದ ಬಗ್ಗೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ಆಕ್ರೋಶ
ಬೆಂಗಳೂರು: ಯಾರ ಹೆಸರನ್ನೂ ಉಲ್ಲೇಖಿಸದೇ ವಂಶಾಡಳಿತ ಮತ್ತು ಕುಟುಂಬ ರಾಜಕಾರಣದ ಬಗ್ಗೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಆಕ್ರೋಶ ಹೊರಹಾಕಿದ್ದಾರೆ. ಈ ಕುರಿತು ಫೇಸ್‍ಬುಕ್‍ನಲ್ಲಿ ಪೋಸ್ಟ್ ಹಾಕಿರುವ ಯತ್ನಾಳ್, ಪಕ್ಷದ ಹೈಕಮಾಂಡ್ ಎಲ್ಲ ಚಟುವಟಿಕೆಗಳನ್ನು ಗಮನಿಸುತ್ತಿದೆ. ಯಾವುದೇ ಕಾರಣಕ್ಕೂ ಕುಟುಂಬ ರಾಜಕಾರಣಕ್ಕೆ ಅವಕಾಶವಿಲ್ಲ ಎಂದು ಹೇಳುವ ಮೂಲಕ ಹೆಸರನ್ನು ಹೇಳದೇ ತಮ್ಮದೇ ಪಕ್ಷದ ಕೆಲವರಿಗೆ ಪರೋಕ್ಷವಾಗಿ ಟಾಂಗ್ ಕೊಟ್ಟಿದ್ದಾರೆ. ಪೋಸ್ಟ್ ನಲ್ಲಿ ಏನಿದೆ ನಮ್ಮ ಹೆಮ್ಮೆಯ ಪ್ರಧಾನಿ …
Read More »ಹಬ್ಬಕ್ಕೆ ಸಾಲು ಸಾಲು ರಜೆ – ಮೆಜೆಸ್ಟಿಕ್ KSRTC ಬಸ್ ನಿಲ್ದಾಣದಲ್ಲಿ ಜನಜಾತ್ರೆ
ಬೆಂಗಳೂರು: ದೀಪಾವಳಿ ಹಬ್ಬಕ್ಕೆ ಸಾಲು ಸಾಲು ರಜೆ ಹಿನ್ನೆಲೆ ಬೆಂಗಳೂರಿನ ಮಂದಿ ಊರುಗಳತ್ತ ಪ್ರಯಾಣಿಸುತ್ತಿದ್ದು, ಮೆಜೆಸ್ಟಿಕ್ ಕೆಎಸ್‍ಆರ್‍ಟಿಸಿ ಬಸ್ ನಿಲ್ದಾಣದ ಜಾತ್ರೆಯಂತಾಗಿದೆ. ಇಂದು ಮಧ್ಯಾಹ್ನದಿಂದಲೇ ಬೆಂಗಳೂರು ನಗರದ ಬಹುತೇಕ ಭಾಗಗಳಲ್ಲಿ ಬಿಟ್ಟು ಬಿಟ್ಟು ಮಳೆಯಾಗುತ್ತಿದೆ. ಜನ ಮಳೆ ಮತ್ತು ಕೊರೊನಾ ಸಹ ಲೆಕ್ಕಿಸದೇ ಊರುಗಳತ್ತ ಹೊರಟು ನಿಂತಿದ್ದಾರೆ. ಹಬ್ಬದ ಹಿನ್ನೆಲೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ಬಸ್ ನಿಲ್ದಾಣದತ್ತ ಆಗಮಿಸಿದ್ದರಿಂದ ಮೆಜೆಸ್ಟಿಕ್ ಸುತ್ತಮುತ್ತ ಟ್ರಾಫಿಕ್ ಜಾಮ್ ಉಂಟಾಗಿದೆ. ತುಮಕೂರು, ಬಳ್ಳಾರಿ, ಮೈಸೂರು …
Read More »
Laxmi News 24×7