Breaking News

ರಾಜ್ಯ

ಡಿಸಿಸಿ ಬ್ಯಾಂಕಿನಿಂದ ರೈತರ ಆರ್ಥಿಕಾಭಿವೃದ್ಧಿಗೆ ಹೊಸ ಯೋಜನೆಗಳು ಅನುಷ್ಠಾನಗೊಳ್ಳಲಿ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಬಿಡಿಸಿಸಿ ಬ್ಯಾಂಕ್ ನೂತನ ಅಧ್ಯಕ್ಷ ರಮೇಶ ಕತ್ತಿ ಅವರು ಬಾಲಚಂದ್ರ ಜಾರಕಿಹೊಳಿ ಅವರ ನಿವಾಸಕ್ಕೆ ಭೇಟಿ ನೀಡಿ ಅಭಿನಂದನೆ ಸಲ್ಲಿಕೆ

ಗೋಕಾಕ : ಶತಮಾನೋತ್ಸವದ ಹೊಸ್ತಿಲಿನಲ್ಲಿರುವ ಬಿಡಿಸಿಸಿ ಬ್ಯಾಂಕಿನಿಂದ ರೈತರಿಗೆ ಹೆಚ್ಚಿನ ಪ್ರಮಾಣದಲ್ಲಿ ಸಾಲ ಸೌಲಭ್ಯಗಳನ್ನು ಕಲ್ಪಿಸಿಕೊಡಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಬಿಡಿಸಿಸಿ ಬ್ಯಾಂಕಿನ ನೂತನ ಆಡಳಿತ ಮಂಡಳಿಗೆ ಸಲಹೆ ಮಾಡಿದರು. ಪ್ರತಿಷ್ಠಿತ ಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ನೂತನ ಅಧ್ಯಕ್ಷರಾದ ಬಳಿಕ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಗೋಕಾಕ ನಿವಾಸಕ್ಕೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿ, ಸತ್ಕಾರ ಮಾಡಿದ …

Read More »

ಬಿ.ವೈ.ವಿಜಯೇಂದ್ರ ಅವರನ್ನು ಕೆಲವು ಮಾಧ್ಯಮಗಳು ವೈಭವೀಕರಿಸುವ ಪ್ರಯತ್ನ ನಡೆಸುತ್ತಿವೆ.:ಈಶ್ವರಪ್ಪ

ಶಿವಮೊಗ್ಗ: ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರನ್ನು ಕೆಲವು ಮಾಧ್ಯಮಗಳು ವೈಭವೀಕರಿಸುವ ಪ್ರಯತ್ನ ನಡೆಸುತ್ತಿವೆ. ಇದಕ್ಕೆ ನನ್ನ ಅಭ್ಯಂತರವಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದ್ದಾರೆ.ಶಿವಮೊಗ್ಗದಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು ಶಿರಾ ಉಪ ಚುನಾವಣೆಯಲ್ಲಿ ವಿಜಯೇಂದ್ರ ಅವರ ಪ್ರಯತ್ನದಿಂದ ಗೆಲುವು ಸಾಧ್ಯವಾಯಿತು ಎಂದು ಕೆಲವು ಮಾಧ್ಯಮಗಳಲ್ಲಿ ವೈಭವೀಕರಿಸುವ ಪ್ರಯತ್ನ ನಡೆಯಿತು. ಬಿಜೆಪಿ ಯಾವುದೇ ಒಬ್ಬ ವ್ಯಕ್ತಿಯ ಪ್ರಯತ್ನದಿಂದ ಚುನಾವಣೆ ಗೆಲ್ಲಲ್ಲ. ಸಂಘಟನೆಯ ಪ್ರಯತ್ನದಿಂದ ಚುನಾವಣೆಯಲ್ಲಿ ಗೆಲುವು ಸಾಧ್ಯವಾಯಿತು ಎಂದು …

Read More »

ನನಗಾದ ಅನ್ಯಾಯಕ್ಕೆ ಕೊನೆಗೂ ನ್ಯಾಯ ಸಿಕ್ಕಿದೆ: ಅಖಂಡಶ್ರೀನಿವಾಸ್

ಬೆಂಗಳೂರು: ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆ ಹಾಗೂ ಶಾಸಕ ಅಖಂಡ ಶ್ರೀನಿವಾಸ್ ಮೆನೆಗೆ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮೇಯರ್ ಸಂಪತ್ ರಾಜ್ ಅವರನ್ನು ಸಿಸಿಬಿ ಪೊಲೀಸರು ಕೊನೆಗೂ ಬಂಧಿಸಿದ್ದಾರೆ. ತಲೆಮರೆಸಿಕೊಂಡಿದ್ದ ಸಂಪತ್ ರಾಜ್, ತಡರಾತ್ರಿ ಬೆಂಗಳೂರಿನ ತನ್ನ ಸ್ನೇಹಿತನ ಮನೆಗೆ ಬಂದಿದ್ದರು. ಈ ವೇಳೆ ಸಂಪತ್ ರಾಜ್ ನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಇಂದು ನ್ಯಾಯಾಲಯದ ಮುಂದೆ ಹಾಜರುಪಡಿಸಲಿದ್ದಾರೆ. ತನ್ನ ವಿರುದ್ಧ ಆರೋಪ ಕೇಳಿಬರುತ್ತಿದ್ದಂತೆಯೇ ಸಂಪತ್ ರಾಜ್ …

Read More »

ವೀರಶೈವ ಲಿಂಗಾಯತ ಪ್ರಾಧಿಕಾರ ರಚನೆಸಿದ್ದಗಂಗಾ ಮಠದ ಸಿದ್ದಲಿಂಗ ಸ್ವಾಮೀಜಿ ಪ್ರತಿಕ್ರಿಯ

ತುಮಕೂರು: ವೀರಶೈವ ಲಿಂಗಾಯತ ಪ್ರಾಧಿಕಾರ ರಚನೆ ಮಾಡಿರುವುದು ನನಗೆ ಅಚ್ಚರಿ ತಂದಿದೆ ಎಂದು ಸಿದ್ದಗಂಗಾ ಮಠದ ಸಿದ್ದಲಿಂಗ ಸ್ವಾಮೀಜಿ ಪ್ರತಿಕ್ರಿಯಿಸಿದ್ದಾರೆ. ಸಿದ್ದಗಂಗಾ ಮಠದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಾಧಿಕಾರ ರಚನೆ ನನಗೆ ಆಶ್ಚರ್ಯ ಎನಿಸುತ್ತದೆ. ಜಾತಿಗೊಂದು ಪ್ರಾಧಿಕಾರ ರಚನೆ ಮಾಡುತ್ತಾ ಹೋದರೆ ಅದಕ್ಕೆ ಮಿತಿನೇ ಇರಲ್ಲ. ಇದರ ಬದಲು ಎಲ್ಲಾ ಸಮಾಜ ಜಾತಿಯಲ್ಲಿ ಇದ್ದಂತಹ ಹಿಂದುಳಿದವರು ಹಾಗೂ ಆರ್ಥಿಕವಾಗಿ ಹಿಂದುಳಿದವರು ಇದ್ದಾರೆ. ಅಂಥವರಿಗೆ ಹೆಚ್ಚು ಒತ್ತುಕೊಡುವ ಕೆಲಸ ಸರ್ಕಾರ ಮಾಡಿದರೆ …

Read More »

ವೀರಶೈವ ಲಿಂಗಾಯತ ಅಭಿವೃದ್ದಿ ನಿಗಮವನ್ನು ಸ್ಥಾಪಿಸಲು ತಕ್ಷಣ ಆರಂಭ:B.S.Y.

ಬೆಂಗಳೂರು: ಸಮಾಜದ ಸರ್ವತೋಮುಖ ಅಭಿವೃದ್ಧಿಗಾಗಿ ವೀರಶೈವ ಲಿಂಗಾಯತ ಅಭಿವೃದ್ದಿ ನಿಗಮವನ್ನು ಸ್ಥಾಪಿಸಲು ಅಗತ್ಯ ಕ್ರಮಗಳನ್ನು ಕೈಗೊಂಡು ತಕ್ಷಣದಿಂದಲೇ ಜಾರಿಗೆ ಬರುವಂತೆ ನಿಗಮ ಆರಂಭಿಸಿಲು ಮುಖ್ಯಮಂತ್ರಿ ಯಡಿಯೂರಪ್ಪ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಆದೇಶ ನೀಡಿದ್ದಾರೆ. ಮರಾಠಾ ಅಭಿವೃದ್ಧಿ ನಿಗಮ ಸ್ಥಾಪನೆ ಬೆನ್ನಲ್ಲೇ ಲಿಂಗಾಯತ ಸಮುದಾಯದ ಸಚಿವರು ಮಾತ್ರವಲ್ಲದೆ ಕಾಂಗ್ರೆಸ್ ನಿಯೋಗವೂ ಸಹ ತಮ್ಮ ಸಮುದಾಯಕ್ಕೆ ಶೇ.16 ರಷ್ಟು ಮೀಸಲು ನೀಡುವಂತೆ ಮುಖ್ಯಮಂತ್ರಿಗಳಿಗೆ ಆಗ್ರಹಿಸಿತ್ತು. ಇದಕ್ಕೆ ಸಂಬಂಧಿಸಿದಂತೆ ಈ ಬಗ್ಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ …

Read More »

ಉತ್ತರ ಪ್ರದೇಶದಲ್ಲಿ ಮುಂದುವರಿದ ಪೈಶಾಚಿಕ ಕೃತ್ಯ

ಫತೇಪುರ್: ಇಬ್ಬರು ಅಪ್ರಾಪ್ತ ಸಹೋದರಿಯರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಉತ್ತರಪ್ರದೇಶದ ಫತೇಪುರ್ ಜಿಲ್ಲೆಯ ಅಶೋಧರ ಪ್ರದೇಶದ ಹಳ್ಳಿಯೊಂದರಲ್ಲಿ ನಡೆದಿದೆ. 12 ಹಾಗೂ 8 ವರ್ಷದ ಬಾಲಕಿಯರನ್ನು ಹತ್ಯೆ ಮಾಡಲಾಗಿದ್ದು, ಅವರ ದೇಹದ ಮೇಲೆ ಗಾಯದ ಗುರುತುಗಳು ಕಂಡು ಬಂದಿವೆ. ಗ್ರಾಮದ ಹೊರವಲಯದಲ್ಲಿರುವ ಕೊಳದಲ್ಲಿ ಬಾಲಕಿಯರ ಮೃತದೇಹಗಳು ಕಂಡುಬಂದಿವೆ ಎಂದು ಸಹಾಯಕ ಪೊಲೀಸ್ ಅಧೀಕ್ಷಕ ರಾಜೇಶ್ ಕುಮಾರ್ ಮಾಹಿತಿ ನೀಡಿದ್ದಾರೆ. ಬಾಲಕಿಯರ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ ಹತ್ಯೆ ಮಾಡಲಾಗಿದೆ ಎಂದು …

Read More »

ಆಟೋ ಮೇಲೆ ಪ್ರೆಸ್, ಶರ್ಟ್ ಮೇಲೆ ಕೆಎಸ್ಆರ್ ಟಿಸಿ ಲೋಗೋ! ವಿಜಯಪುರದಲ್ಲೊಬ್ಬ ‘ಬಹುಕಂಪನಿ ನೌಕರ’

ಆಟೋ ಮೇಲೆ ಪ್ರೆಸ್, ಶರ್ಟ್ ಮೇಲೆ ಕೆಎಸ್ಆರ್ ಟಿಸಿ ಲೋಗೋ! ವಿಜಯಪುರದಲ್ಲೊಬ್ಬ ‘ಬಹುಕಂಪನಿ ನೌಕರ’ ವಿಜಯಪುರ: ಮಾಧ್ಯಮ ಕ್ಷೇತ್ರದಲ್ಲಿ ದುಡಿಯುವ ಜನರು ತಮ್ಮ ಕಾರು, ಬೈಕ್ ಗಳ ಮೇಲೆ ಪ್ರೆಸ್ ಎಂದು‌ ಬರೆಸುವುದು ಸಾಮಾನ್ಯ. ಆದರೆ ವಿಜಯಪುರ ಜಿಲ್ಲೆಯಲ್ಲಿ ಪತ್ರಿಕೋದ್ಯಮ ಕ್ಷೇತ್ರಕ್ಕೆ ಸಂಬಂಧ ಇಲ್ಲದವರೂ ಟಂಟಂ, ಆಟೋಗಳ ಮೇಲೂ ಪ್ರೆಸ್ ಸ್ಟಿಕ್ಕರ್ ಬಳಕೆ ಮಾಡುವುದು ಕಂಡುಬರುತ್ತಿದೆ‌. ವಿಜಯಪುರ ನಗರದಲ್ಲಿ ಆಟೋ ಮೇಲೆ ತ್ರಿಟಿವಿ ಬಂಜಾರಾ- ಪ್ರೆಸ್ (3 TV Banjara …

Read More »

66 ಮಂದಿಯನ್ನು ಬಂಧಿಸಿ, ₹ 1 ಲಕ್ಷಕ್ಕೂ ಅಧಿಕ ಹಣವನ್ನು ವಶಪಡಿಸಿಕೊಂಡಿದ್ದಾರೆ.

ಕೂಡ್ಲಿಗಿ: ಎರಡು ಪ್ರತ್ಯೇಕ ಸ್ಥಳಗಳಲ್ಲಿ ದಾಳಿ ಕಾರ್ಯಾಚರಣೆ ನಡೆಸಿದ ಕೂಡ್ಲಿಗಿ ಪೊಲೀಸರು ಇಸ್ಪೀಟ್ ಜೂಜಾಟದಲ್ಲಿ ತೊಡಗಿದ್ದ 66 ಮಂದಿಯನ್ನು ಬಂಧಿಸಿ, ₹ 1 ಲಕ್ಷಕ್ಕೂ ಅಧಿಕ ಹಣವನ್ನು ವಶಪಡಿಸಿಕೊಂಡಿದ್ದಾರೆ. ಸಂಡೂರು ತಾಲ್ಲೂಕಿನ ಬಂಡ್ರಿ ಗ್ರಾಮದ ಸರ್ಕಾರಿ ಆಸ್ಪತ್ರೆಯ ಪಕ್ಕದಲ್ಲಿ ಜೂಜಾಟ ನಡೆದಿರುವ ಬಗ್ಗೆ ಖಚಿತ ಮಾಹಿತಿ ದೊರೆತ ಬಳಿಕ ಕೂಡ್ಲಿಗಿ ಸಿಪಿಐ ಪಂಪನಗೌಡ ಹಾಗೂ ಪಿಎಸ್‍ಐ ತಿಮ್ಮಣ್ಣ ಎಸ್. ಚಮನೂರು ಸಿಬ್ಬಂದಿಯೊಂದಿಗೆ ದಾಳಿ ಕಾರ್ಯಾಚರಣೆ ನಡೆಸಿದರು. ಅಲ್ಲಿ 60 ಮಂದಿಯನ್ನು ಬಂಧಿಸಿ …

Read More »

ಜೈಶ್-ಎ-ಮೊಹಮ್ಮದ್ ಭಯೋತ್ಪಾದಕರನ್ನು ಬಂಧಿಸಿದ್ದಾರೆ ಮತ್ತು ರಾಷ್ಟ್ರ ರಾಜಧಾನಿಯ ಮೇಲೆ ದೊಡ್ಡ ದಾಳಿಯನ್ನು ವಿಫಲಗೊಳಿಸಿದ್ದಾರೆ.

ನವದೆಹಲಿ : ದೆಹಲಿ ಪೊಲೀಸರು ಇಬ್ಬರು ಜೈಶ್-ಎ-ಮೊಹಮ್ಮದ್ ಭಯೋತ್ಪಾದಕರನ್ನು ಬಂಧಿಸಿದ್ದಾರೆ ಮತ್ತು ರಾಷ್ಟ್ರ ರಾಜಧಾನಿಯ ಮೇಲೆ ದೊಡ್ಡ ದಾಳಿಯನ್ನು ವಿಫಲಗೊಳಿಸಿದ್ದಾರೆ. ದೆಹಲಿಯಲ್ಲಿ ನಡೆಯಲಿದ್ದ ದೊಡ್ಡ ಭಯೋತ್ಪಾದಕ ದಾಳಿಯನ್ನು ತಡೆಗಟ್ಟಲು ದೆಹಲಿ ಪೊಲೀಸ್ ವಿಶೇಷ ಕೋಶ ಉಗ್ರರನ್ನು ಬಂಧಿಸಿದೆ. ದೆಹಲಿಯ ಸರಾಯ್ ಕೇಲ್ ಖಾನ್ ನಿಂದ ಬಂಧಿಸಲ್ಪಟ್ಟ ಇಬ್ಬರು ಭಯೋತ್ಪಾದಕರನ್ನು ಅಧಿಕಾರಿಗಳು ಈಗ ಪ್ರಶ್ನಿಸುತ್ತಿದ್ದಾರೆ. ದೆಹಲಿ ಪೊಲೀಸ್ ಅಧಿಕಾರಿಗಳ ಪ್ರಕಾರ, ಸೋಮವಾರ ರಾತ್ರಿ 10.15 ರ ಸುಮಾರಿಗೆ ಸರೈ ಕೇಲ್ ಖಾನ್‌ನ …

Read More »

ಏರಿಯಾದಲ್ಲಿ ಹವಾ ಮೇಂಟೇನ್​ ಮಾಡೋಕೆ ಹೋಗಿ ಯುವಕನೊಬ್ಬನನ್ನು ಆತನ ಗೆಳೆಯರೇ ಕೊಲೆಗೈದಿರುವ ಘಟನೆ

ಬೆಂಗಳೂರು: ಏರಿಯಾದಲ್ಲಿ ಹವಾ ಮೇಂಟೇನ್​ ಮಾಡೋಕೆ ಹೋಗಿ ಯುವಕನೊಬ್ಬನನ್ನು ಆತನ ಗೆಳೆಯರೇ ಕೊಲೆಗೈದಿರುವ ಘಟನೆ ನಿನ್ನೆ ಸಂಜೆ ಗಂಗಮ್ಮನಗುಡಿಯಲ್ಲಿ‌ ನಡೆದಿದೆ. ಕಾರ್ತಿಕ್(25) ಹತ್ಯೆಯಾದ ಯುವಕ. ಕಾರ್ತಿಕ್​ ಸ್ನೇಹಿತ ಅಶೋಕ್ ಹಾಗೂ ಆತನ ಸಹಚರರಿಂದ ಕೃತ್ಯ ಎಸಗಲಾಗಿದೆ ಎಂಬ ಮಾಹಿತಿ ದೊರೆತಿದೆ. ಅಂದ ಹಾಗೆ, ಹತ್ಯೆಯಾದ ಕಾರ್ತಿಕ್ ಮತ್ತು ಹಂತಕ ಅಶೋಕ್ ಒಂದೇ ಗ್ಯಾಂಗ್​ನ ಸದಸ್ಯರಂತೆ. ನಿನ್ನೆ ಮಧ್ಯಾಹ್ನ ಎಲ್ಲರೂ ಸೇರಿ ಎಣ್ಣೆ ಪಾರ್ಟಿ ಮಾಡಿದ ಬಳಿಕ ಅವರ ನಡುವೆಯೇ ಗಲಾಟೆ ಶುರುವಾಗಿದೆ. …

Read More »