Breaking News

ರಾಜ್ಯ

ಬೆಳಗಾವಿ ದೇಸೂರು ಬಳಿ ಓವರ್‍ಟೆಕ್ ಮಾಡುವ ವೇಳೆ ಲಾರಿಗೆ ಬೈಕ್ ಡಿಕ್ಕಿ ಅಕ್ಕ, ತಮ್ಮ ಸ್ಥಳದಲ್ಲೇ ಸಾವ

ಬೆಳಗಾವಿ: ಲಾರಿ ಡಿಕ್ಕಿಯಾಕಿ ಬೈಕಿನಲ್ಲಿ ತೆರಳುತ್ತಿದ್ದ ಅಕ್ಕ, ತಮ್ಮ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೆಳಗಾವಿ ತಾಲೂಕಿನ ದೇಸೂರು ಬಳಿ ನಡೆದಿದೆ. ರೇಣುಕಾ ತೇಗೂರ್(25), ಕಲ್ಮೇಶ್ ಕೊಳವಿ(19) ಮೃತ ದುರ್ದೈವಿಗಳು. ದೇಸೂರ್‍ನಿಂದ ಕಮಲ್ ನಗರದತ್ತ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಓವರ್‍ಟೆಕ್ ಮಾಡುವ ವೇಳೆ ಲಾರಿಗೆ ಬೈಕ್ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಲಾರಿ ಚಕ್ರದಡಿ ಸಿಲುಕಿ ಅಕ್ಕ-ತಮ್ಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮಟ್ಟಿತ್ತು. ಬೆಳಗಾವಿ ಗ್ರಾಮೀಣ …

Read More »

ಇಂಜಿನ್‍ನಲ್ಲಿ ತಾಂತ್ರಿಕ ದೋಷಎಪಿಎಂಸಿ ಮೈದಾನದಲ್ಲಿ ತುರ್ತು ಭೂ ಸ್ಪರ್ಶ ಮಾಡಿದ. ಎನ್-741 ಹೆಲಿಕಾಪ್ಟರ್,

ಕಾರವಾರ: ಇಂಜಿನ್‍ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನೆಲೆ ಭಾರತೀಯ ನೌಕಾದಳಕ್ಕೆ ಸೇರಿದ ಎನ್-741 ಹೆಲಿಕಾಪ್ಟರ್, ಶಿರಸಿ ತಾಲೂಕಿನ ದಾಸನಕೊಪ್ಪ ಗ್ರಾಮದ ಎಪಿಎಂಸಿ ಮೈದಾನದಲ್ಲಿ ತುರ್ತು ಭೂ ಸ್ಪರ್ಶ ಮಾಡಿದೆ. ಬೆಂಗಳೂರಿನಿಂದ ಗೋವಾದತ್ತ ಹೆಲಿಕಾಪ್ಟರ್ ತೆರಳುತಿದ್ದು, ಈ ವೇಳೆ ಇಂಜಿನ್‍ನಲ್ಲಿ ತಾಂತ್ರಿಕ ದೋಷ ಕಂಡುಬಂದಿದೆ. ನಂತರ ಪೈಲೆಟ್ ದಾಸನಕೊಪ್ಪದ ಮೈದಾನದಲ್ಲಿ ಜೀವರಕ್ಷಣೆಗಾಗಿ ಹೆಲಿಕಾಪ್ಟರ್ ಅನ್ನು ಕೆಳಗಿಳಿಸಿದ್ದಾರೆ. ಇಬ್ಬರು ಪೈಲಟ್, ಓರ್ವ ಕಮಾಂಡಿಂಗ್ ಆಫೀಸರ್ ಈ ಹೆಲಿಕಾಪ್ಟರಿನಲ್ಲಿ ಪ್ರಯಾಣಿಸುತ್ತಿದ್ದು, ಅದೃಷ್ಟವಶಾತ್ ಪೈಲೆಟ್ ಸಮಯ …

Read More »

ತಾನು ಕ್ಷಮೆ ಯಾಚಿಸುವುದಿಲ್ಲ, ದಂಡವನ್ನೂ ಪಾವತಿಸುವುದಿಲ್ಲ,:ಕುನಾಲ್ ಕಮ್ರಾ

ನವದೆಹಲಿ: ತಾನು ಕ್ಷಮೆ ಯಾಚಿಸುವುದಿಲ್ಲ, ದಂಡವನ್ನೂ ಪಾವತಿಸುವುದಿಲ್ಲ, ಸುಪ್ರೀಂಕೋರ್ಟ್ ಕಾರ್ಯವೈಖರಿ ಟೀಕಿಸಿರುವ ಟ್ವೀಟ್‍ಗಳನ್ನು ಡಿಲೀಟ್ ಮಾಡುವುದಿಲ್ಲ ಎಂದು ಸ್ಟಾಂಡ್‍ಅಪ್ ಕಾಮಿಡಿಯನ್ ಕುನಾಲ್ ಕಮ್ರಾ ಸ್ಪಷ್ಟಪಡಿಸಿದ್ದಾರೆ.   ಅರ್ನಬ್ ಗೋಸ್ವಾಮಿಗೆ ಜಾಮೀನು ನೀಡಿರುವ ಸುಪ್ರೀಂಕೋರ್ಟ್ ನಿರ್ಧಾರವನ್ನು ಕಾಮ್ರಾ ಟ್ವೀಟ್ ಮಾಡಿ ಟೀಕಿಸಿದ್ದರು. ‘ತಮಾಷೆಯ ಗೆರೆಯನ್ನು ಕಾಮ್ರಾ ದಾಟಿದ್ದಾರೆ’ ಎಂದು ಹೇಳಿದ್ದ ಅಟಾರ್ನಿ ಜನರಲ್ ವೇಣುಗೋಪಾಲ್, ಕಾಮ್ರಾ ವಿರುದ್ಧ ಕ್ರಿಮಿನಲ್ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಲು 8 ಮಂದಿಗೆ ಅವಕಾಶ ನೀಡಿದ್ದರು. ಕ್ಷಮಾಪಣೆ …

Read More »

ಕೃಷಿ ಹಾಗೂ ತೋಟಗಾರಿಕಾ ಬೆಳೆಗಳ ಸಾಗುವಳಿ ವೆಚ್ಚ ಉತ್ಪಾದನೆ

ಬೆಂಗಳೂರು: ಕೃಷಿ ಹಾಗೂ ತೋಟಗಾರಿಕಾ ಬೆಳೆಗಳ ಸಾಗುವಳಿ ವೆಚ್ಚ ಉತ್ಪಾದನೆ ಪ್ರಮಾಣ, ಮಾರುಕಟ್ಟೆ ಬೆಳೆಗಳ ವಸ್ತುಸ್ಥಿತಿ ಮತ್ತು ನೂತನ ಮಾರುಕಟ್ಟೆ ಕಾಯ್ದೆಗಳ ಕುರಿತು ಸರ್ಕಾರಕ್ಕೆ ಕೃಷಿ ಬೆಲೆ ಆಯೋಗ ಹಲವು ಶಿಫಾರಸುಗಳನ್ನು ಮಾಡಿದೆ. ಬೆಳೆ ಶಿಫಾರಸು-ಉತ್ಪಾದನಾ ವೆಚ್ಚ ಕಡಿಮೆ ಮಾಡಿ, ಉತ್ಪಾದನೆ ಹೆಚ್ಚಿಸುವ ಮೂಲಕ ಆದಾಯ ಅಧಿಕಗೊಳಿಸುವುದು, ತಳಿ ಸಂಶೋಧನೆ, ಪ್ರಾತ್ಯಕ್ಷತೆ ಮತ್ತು ತರಬೇತಿ, ಹಣಕಾಸು ಮತ್ತು ಮಾನವ ಸಂಪನ್ಮೂಲದ ಆದ್ಯತೆ, ಉತ್ಪಾದನಾ ಸುಸ್ಥಿರತೆ ಮತ್ತು ಆದಾಯ ಭದ್ರತೆ, ಬೆಳೆ …

Read More »

ಅಕ್ಷರ ಮಾಂತ್ರಿಕ”ನ ಅಗಲಿಕೆ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಸಂತಾಪ

ಗೋಕಾಕ : ಖ್ಯಾತ ಪತ್ರಕರ್ತ, ಸಾಹಿತಿ, ಲೇಖಕ, ಅಕ್ಷರ ಮಾಂತ್ರಿಕ ರವಿ ಬೆಳೆಗೆರೆ ಅವರ ನಿಧನಕ್ಕೆ ಕರ್ನಾಟಕ ಹಾಲು ಮಹಾಮಂಡಳಿ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ. ಕನ್ನಡ ಪತ್ರಿಕೋದ್ಯಮದಲ್ಲಿ ತಮ್ಮದೇಯಾದ ಅಸಂಖ್ಯಾತ ಅಭಿಮಾನಿಗಳನ್ನು ಹೊಂದಿದ್ದ ಬೆಳೆಗೆರೆ ಅವರ ನಿಧನದಿಂದ ನಾಡಿಗೆ ಅಪಾರ ನಷ್ಟವಾಗಿದೆ. ನಾಡಿನ ಹೆಸರಾಂತ ಪತ್ರಿಕೆಗಳಲ್ಲಿ ದುಡಿದು ನಂತರ ವಾರ ಪತ್ರಿಕೆಯ ಮೂಲಕ ದಿಟ್ಟ ಪತ್ರಕರ್ತರಾಗಿ ವಿಶಿಷ್ಟ ಸೇವೆ ಸಲ್ಲಿಸುತ್ತಿದ್ದ ಅವರ …

Read More »

ನಾಡಿನ ಜನತೆಗೆ ದೀಪಾವಳಿ ಹಬ್ಬದ ಶುಭಾಶಯ ಕೋರಿದ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

ಗೋಕಾಕ : ನಾಡಿನ ಜನತೆಗೆ ಕರ್ನಾಟಕ ಹಾಲು ಮಹಾಮಂಡಳಿ ಅಧ್ಯಕ್ಷ ಹಾಗೂ ಬಾಲಚಂದ್ರ ಜಾರಕಿಹೊಳಿ ಅವರು ಬೆಳಕಿನ ಹಬ್ಬ ದೀಪಾವಳಿಯ ಶುಭಾಶಯ ಕೋರಿದ್ದಾರೆ. ಎಲ್ಲರ ಬದುಕಿನಲ್ಲಿ ದೀಪಾವಳಿ ಹಬ್ಬ ನಿರಾಸೆಯ ಕಾರ್ಮೋಡ ತೊಡೆದು ಚೈತನ್ಯ ತುಂಬಲಿ. ಎಲ್ಲರ ಜೀವನದಲ್ಲಿ ದೀಪಗಳ ಬೆಳಕು ಸದಾ ಬೆಳಗಲಿ. ಮಹಾಲಕ್ಷ್ಮೀ ದೇವಿ ಸರ್ವರಿಗೂ ಸುಖ, ಶಾಂತಿ, ನೆಮ್ಮದಿ, ಸಮೃದ್ಧಿ, ಸಂಪತ್ತು, ಶಕ್ತಿ, ಆಯುರಾರೋಗ್ಯ ಕರುಣಿಸಲಿ ಎಂದು ಅವರು ದೇವರಲ್ಲಿ ಪ್ರಾರ್ಥಿಸಿದ್ದಾರೆ. ಕೋವಿಡ್-19 ಹಿನ್ನೆಲೆಯಲ್ಲಿ ದೀಪಾವಳಿ …

Read More »

ಇಂದು ರಾತ್ರಿಯಿಂದಲೇ ರಾಜ್ಯದ ನಾನಾ ಊರುಗಳಿಗೆ 1,000 ಹೆಚ್ಚುವರಿ ಕೆಎಸ್‍ಆರ್ಟಿಸಿ ಬಸ್ಗಳ ವ್ಯವಸ್ಥೆ

ಬೆಂಗಳೂರು-ಕೋವಿಡ್ -19 ಆತಂಕದ ನಡುವೆಯೇ ಬೆಳಕಿನ ಹಬ್ಬ ದೀಪಾವಳಿ ಆಚರಣೆ ಮಾಡಲು ಸಾರ್ವಜನಿಕರು ಊರಿಗೆ ತೆರಳುವವರ ಅನುಕೂಲಕ್ಕೆ ಇಂದು ರಾತ್ರಿಯಿಂದಲೇ ರಾಜ್ಯದ ನಾನಾ ಊರುಗಳಿಗೆ 1,000 ಹೆಚ್ಚುವರಿ ಕೆಎಸ್‍ಆರ್ಟಿಸಿ ಬಸ್ಗಳ ವ್ಯವಸ್ಥೆ ಮಾಡಲಾಗಿದೆ. ಇಂದು ರಾತ್ರಿ ಮತ್ತು ನಾಳೆ ರಾತ್ರಿ ಬೆಂಗಳೂರಿನಿಂದ ಕರ್ನಾಟಕದ ಬೇರೆ ಬೇರೆ ಜಿಲ್ಲೆಗಳು ಹಾಗೂ ಹೊರ ರಾಜ್ಯದ ವಿವಿಧ ಊರುಗಳಿಗೆ ಹೆಚ್ಚುವರಿಯಾಗಿ 1,000 ಕೆಎಸ್‍ಆರ್ಟಿಸಿ ಬಸ್ಗಳು ಸಂಚರಿಸಲಿವೆ. ಹಾಗೇ, ನ. 16ರಂದು ದೀಪಾವಳಿ ಹಬ್ಬ ಮುಗಿಸಿಕೊಂಡು …

Read More »

ರಿವರ್ಸ್ ತೆಗೆದುಕೊಳ್ಳುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಕಾರ್ ಕಾಲುವೆಗೆ

ಯಾದಗಿರಿ: ರಿವರ್ಸ್ ತೆಗೆದುಕೊಳ್ಳುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಕಾರ್ ಕಾಲುವೆಗೆ ಬಿದ್ದ ಪರಿಣಾಮ ಮೂವರು ಸಾವನ್ನಪ್ಪಿರುವ ಜಿಲ್ಲೆಯ ಹುಣಸಗಿ ತಾಲೂಕಿನ ಗುಳಬಾಳ ಗ್ರಾಮದ ಬಳಿ ನಡೆದಿದೆ. ನಾರಾಯಣಪುರ ಎಡದಂಡೆ ಕಾಲುವೆಯಲ್ಲಿ ಒಂದೇ ಕುಟುಂಬದ ಮೂವರು ಜಲ ಸಮಾಧಿಯಾಗಿದ್ದಾರೆ. ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಬನ್ನಟ್ಟಿ ಗ್ರಾಮದ ಪವನ್ ಬಿರಾದಾರ್ (34), ಪವನ್ ತಂದೆ ಶರಣಗೌಡ ಬಿರಾದಾರ್ (61), ತಾಯಿ ಜಾನಕಿ ಬಿರಾದಾರ್ (55) ಮೃತರು. ಮೃತ ಪವನ್ ಕುಟುಂಬದ ಎರಡು …

Read More »

ಆರ್‌ಆರ್‌ ನಗರದಲ್ಲಿ ಠೇವಣಿ ಕಳೆದುಕೊಂಡ ಜೆಡಿಎಸ್

ಬೆಂಗಳೂರು: ರಾಜರಾಜೇಶ್ವರಿ ಉಪ ಚುನಾವಣೆಯಲ್ಲಿ ಜೆಡಿಎಸ್ ಈ ಬಾರಿ ಹೀನಾಯವಾಗಿ ಸೋಲನುಭವಿಸಿದ್ದು, ಠೇವಣಿಯನ್ನು ಕಳೆದುಕೊಂಡಿದೆ. ಉಪಚುನಾವಣೆ ಬಿಜೆಪಿ ಅಭ್ಯರ್ಥಿ ಮುನಿರತ್ನ ಗೆಲುವಿನ ನಗೆ ಬೀರಿದ್ದು, ಕಾಂಗ್ರೆಸ್‍ನ ಕುಸುಮಾ ಎರಡನೇ ಸ್ಥಾನದಲ್ಲಿದ್ದಾರೆ. ಆದರೆ ಜೆಡಿಎಸ್ ಅಭ್ಯರ್ಥಿ ಕೃಷ್ಣಮೂರ್ತಿ 10,251 ಮತಗಗಳನ್ನು ಪಡೆಯುವ ಮೂಲಕ ಠೇವಣಿ ಕಳೆದುಕೊಂಡಿದ್ದಾರೆ. ಕಳೆದ ಬಾರಿ ಜೆಡಿಎಸ್ 60 ಸಾವಿರ ಮತಗಳನ್ನು ಪಡೆದಿತ್ತು. ಆದರೆ ಈ ಬಾರಿ ಇದರ ಅರ್ಧದಷ್ಟು ಮತಗಳನ್ನು ಸಹ ಜೆಡಿಎಸ್ ಅಭ್ಯರ್ಥಿ ಪಡೆದಿಲ್ಲ. ಒಟ್ಟು …

Read More »

ಹಗಲು ಮತ್ತು ರಾತ್ರಿ ವೇಳೆ ಬೀಗ ಹಾಕಿರುವ ಮನೆಗಳನ್ನು ಗುರುತಿಸಿ ಚಿನ್ನಾಭರಣ ಕಳ್ಳತನ ಮಾಡುತ್ತಿದ್ದಕಳ್ಳ

ಬೆಂಗಳೂರು, ನ.10- ಹಗಲು ಮತ್ತು ರಾತ್ರಿ ವೇಳೆ ಬೀಗ ಹಾಕಿರುವ ಮನೆಗಳನ್ನು ಗುರುತಿಸಿ ಚಿನ್ನಾಭರಣ ಕಳ್ಳತನ ಮಾಡುತ್ತಿದ್ದ ಕೋಲಾರ ಮೂಲದ ವ್ಯಕ್ತಿಯನ್ನು ಉತ್ತರ ವಿಭಾಗದ ಆರ್‍ಟಿ ನಗರ ಠಾಣೆ ಪೊಲೀಸರು ಬಂಧಿಸಿ 14.1 ಲಕ್ಷ ಮೌಲ್ಯದ ಚಿನ್ನಾಭರಣ ವಶಪಡಿಸಿಕೊಂಡಿದ್ದಾರೆ. ಕೋಲಾರದ ವೇಮಗಲ್, ನರಸಾಪುರದ ಸಂತೋಷ್ (36) ಬಂಧಿತ ಆರೋಪಿ. ಈತನಿಂದ 350.3 ಗ್ರಾಂ ತೂಕದ ಚಿನ್ನಾಭರಣ ಮತ್ತು ಎಲ್‍ಇಡಿ ಟಿವಿಯನ್ನು ವಶಪಡಿಸಿಕೊಂಡಿದ್ದಾರೆ. ಮುನೇಶ್ವರ ಬ್ಲಾಕ್‍ನಲ್ಲಿ ವಾಸವಾಗಿರುವ ಮುರಳಿಧರ್ ಎಂಬುವವರು ಲಾಕ್‍ಡೌನ್ …

Read More »