ಬೆಂಗಳೂರು: ಅಕ್ರಮವಾಗಿ ಮಹಿಳೆಯೊಬ್ಬರನ್ನು ಬಂಧಿಸಿರುವ ಆರೋಪಕ್ಕೆ ಇನ್ಸ್‌ಪೆಕ್ಟರ್ ಸೇರಿ ನಾಲ್ವರು ವಿಜಯನಗರ ಠಾಣೆ ಪೊಲೀಸರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಅಕ್ರಮ ಬಂಧನ ಮಾಡಿದ್ದಾರೆ. ಹಾಗೂ ಅವ್ಯಾಚ್ಯಶಬ್ಧಗಳಿಂದ ನಿಂದಿಸಿದ್ದಾರೆ ಎಂದು ಮಹಿಳೆಯೊಬ್ಬರು ನ್ಯಾಯಾಲಯಕ್ಕೆ ಖಾಸಗಿ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಕೋರ್ಟ್ ಆದೇಶದ ಮೇರೆಗೆ ಪೊಲೀಸರ ವಿರುದ್ಧ FIR ದಾಖಲಾಗಿದೆ. ವಿಜಯನಗರ ಠಾಣೆಯ ಇನ್ಸ್‌ಪೆಕ್ಟರ್ ಆಗಿದ್ದ ಭರತ್, ಠಾಣೆಯ ಸಬ್ ಇನ್ಸ್‌ಪೆಕ್ಟರ್‌ಗಳಾದ ಅಕ್ಷತಾ, ಸಂತೋಷ್, ಹೆಡ್ ಕಾನ್ಸ್‌ಟೇಬಲ್ ಲಿಂಗರಾಜು ವಿರುದ್ಧ ವಿಜಯನಗರ …
Read More »ಬೆಳ್ಳಂ ಬೆಳಗ್ಗೆಯೇ ಖಾಕಿ ಗನ್ ಸದ್ದು ಮಾಡಿದೆ. 4 ಕೊಲೆ ಆರೋಪಿಗಳ ಮೇಲೆ ಪೊಲೀಸರು
ಆನೇಕಲ್: ಬೆಳ್ಳಂ ಬೆಳಗ್ಗೆಯೇ ಖಾಕಿ ಗನ್ ಸದ್ದು ಮಾಡಿದೆ. 4 ಕೊಲೆ ಆರೋಪಿಗಳ ಮೇಲೆ ಪೊಲೀಸರು ಫೈರಿಂಗ್ ಮಾಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಆನೇಕಲ್ ತಾಲೂಕಿನ ಗ್ರಾಮಗಳಾದ ಅವಡದೇವನಹಳ್ಳಿ, ಮುತ್ಯಾನಲ್ಲೂರಿನಲ್ಲಿ ನಡೆದಿದೆ. ಅವಡದೇವನಹಳ್ಳಿಯಲ್ಲಿ ಗೋಪಿ ಮತ್ತು ಗಂಗಾ ಎಂಬ ಇಬ್ಬರು ಆರೋಪಿಗಳ ಮೇಲೆ ಫೈರಿಂಗ್ ಆದ್ರೆ ಮುತ್ಯಾನಲ್ಲೂರಿನಲ್ಲಿ ಅನಂತ್, ಬಸವನ ಮೇಲೆ ಫೈರಿಂಗ್ ನಡೆದಿದೆ. ಅಕ್ಟೋಬರ್ 30ರಂದು ಶೆಟ್ಟಿಹಳ್ಳಿಯಲ್ಲಿ ವಿನೀತ್ ಕೊಲೆ ಹಿನ್ನೆಲೆಯಲ್ಲಿ ಆರೋಪಿಗಳ ಬಗ್ಗೆ ಖಚಿತ ಮಾಹಿತಿಯ …
Read More »2 ವಾಹನಗಳ ಮಧ್ಯೆ ಡಿಕ್ಕಿಯಾಗಿ 6 ಜನ ಸ್ಥಳದಲ್ಲೇ ಸಾವು
ಪಯಾಗ್‌ಪುರ: ಉತ್ತರ ಪ್ರದೇಶದ ಪಯಾಗ್‌ಪುರ ಬಳಿ ಭೀಕರ ಅಪಘಾತ ಸಂಭವಿಸಿದೆ. 2 ವಾಹನಗಳ ಮಧ್ಯೆ ಡಿಕ್ಕಿಯಾಗಿ 6 ಜನ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಹಾಗೂ 10 ಜನರಿಗೆ ಗಂಭೀರ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಹೆಚ್ಚಿನ ಮಾಹಿತಿ ಲಾಭ್ಯವಾಗಿಲ್ಲ.
Read More »ಕನ್ನಡ ಅಭಿಮಾನ
ಕನ್ನಡ ಅಭಿಮಾನ ಮೂಡಿಬರಲಿ ಕನ್ನಡ ಅಭಿಮಾನ ಕನ್ನಡ ನಾಡಿನ ಅಭಿಮಾನ ಒಕ್ಕೊರಲಿಂದ ಕನ್ನಡಿಗರೆಂದು ಹೇಳೋಣ ಎಲ್ಲರೂ ಒಂದಂಬ ಭಾವದಲಿ…. ಎಲ್ಲ ಕಡೆ ಚೆಲುವ ಕನ್ನಡ ಮೊಳಗಲಿ…. ಬೆಳಗಲಿ….. ಎಲ್ಲೆಲ್ಲಿಯೂ ಕನ್ನಡ ಜ್ಯೋತಿ ಬೆಳಗಲಿ….. ಬೆಳೆಯಲಿ….. ಭಾವೈಕ್ಯತೆಯ ಭಾವ ಮೂಡಲಿ ನಾಡು-ನುಡಿಗಾಗಿ ಮನ ತುಡಿಯಲಿ…. ಮಿಡಿಯಲಿ….. ನಾಡ ಸಂಸ್ಕೃತಿಯನು ಬೆಳೆಸಲಿ ಅರ್ಪಣೆಯಾಗಲಿ ನಾಡಿಗಾಗಿ ಬದುಕು ಕನ್ನಡದ ಪ್ರೀತಿ ಹೆಚ್ಚಲಿ….. ಕನ್ನಡತನಕ್ಕಾಗಿ ಹೋರಾಡು ನೀ ತೀರಿಸು ನೀ ಕನ್ನಡ ತಾಯಿಯ ಋಣ….. ವಿದ್ಯಾ …
Read More »ನಾನು ಕೂಡ ಸಿಎಂ ಸ್ಥಾನದ ಆಕಾಂಕ್ಷಿ ಅಂತಾ ಶಾಸಜ ತನ್ವೀರ್ ಸೇಠ್ ಹೊಸ ಬಾಂಬ್
ಮೈಸೂರು: ನಾನು ಕೂಡ ಸಿಎಂ ಸ್ಥಾನದ ಆಕಾಂಕ್ಷಿ ಅಂತಾ ಶಾಸಜ ತನ್ವೀರ್ ಸೇಠ್ ಹೊಸ ಬಾಂಬ್ ಸಿಡಿಸಿದ್ದಾರೆ. ನಗರದಲ್ಲಿ ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಯಾರು ಆಗ್ತಾರೆ ಎನ್ನುವುದು ಮುಖ್ಯವಲ್ಲ. ಅಂಕಿ ಸಂಖ್ಯೆ ಮುಖ್ಯವಾಗುತ್ತದೆ. ಪಕ್ಷ ಅಧಿಕಾರಕ್ಕೆ ಬರಬೇಕು. ಮುಂದೆ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲಿದೆ. ಬಂದಾಗ ಅಂಕಿ ಸಂಖ್ಯೆ ಅನುಗುಣವಾಗಿ ಹೈಕಮಾಂಡ್ ತೀರ್ಮಾನ ಮಾಡತ್ತೆ. ನಾನು ಸಿಎಂ ಆಗುವ ಅರ್ಹತೆ ಇಟ್ಟುಕೊಂಡಿದ್ದೇನೆ ಎಂದರು. ಜನರಿಂದ ಆಯ್ಕೆಯಾದವರು …
Read More »ಸರಳ ದಸಾರಕ್ಕೆ ವೆಚ್ಚವಾಗಿದ್ದು ಕೇವಲ 2 ಕೋಟಿ ರೂ.
ಮೈಸೂರು, ನ.1- ಕೊರೊನಾ ಹಿನ್ನೆಲೆಯಲ್ಲಿ ನಡೆದ ಸರಳ ದಸಾರಕ್ಕೆ ವೆಚ್ಚವಾಗಿದ್ದು ಕೇವಲ 2 ಕೋಟಿ ರೂ. ಸರ್ಕಾರ ದಸರಾ ಆಚರಣೆಗಾಗಿ 10 ಕೋಟಿ ರೂ.ವನ್ನು ಬಿಡುಗಡೆ ಮಾಡಿತ್ತು. ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ಷೇಪಕ್ಕೆ ಕಾರಣವಾಗಿತ್ತಾದರೂ ಸಂಪ್ರದಾಯವನ್ನು ಕೈ ಬಿಡದಂತೆ ವಿಶ್ವ ವಿಖ್ಯಾತ ದಸರಾವನ್ನು ಸರಳವಾಗಿ ಆಚರಿಸಿ ವೆಚ್ಚ ಮಾಡಿದ್ದು ಕೇವಲ 2 ಕೋಟಿ ರೂ. ಮಾತ್ರ. 25 ವರ್ಷಗಳ ಇತಿಹಾಸದಲ್ಲಿ ಒಂದು ವಾರದೊಳಗೆ ದಸರಾ ವೆಚ್ಚವನ್ನು ನೀಡಿರುವುದು ಇದೇ ಮೊದಲ …
Read More »ಎಂಇಎಸ್ ಪ್ರತಿಭಟನಾ ಸಭೆಯಲ್ಲಿ ಭಾಗಿಯಾಗಿರುವ ಮಹಾರಾಷ್ಟ್ರ ಎನ್‌ಸಿಪಿ ನಾಯಕಿ ರೂಪಾಲಿ ಕರ್ನಾಟಕದ ವಿರುದ್ದ ಪ್ರಚೋದನಕಾರಿ ಭಾಷಣ
ಬೆಳಗಾವಿ: ಪೊಲೀಸರ ಕಣ್ಣುತಪ್ಪಿಸಿ ಎನ್‌ಸಿಪಿ ಮಹಿಳಾ ಘಟಕದ ರೂಪಾಲಿ ಚಾಕನಕರ ಬೆಳಗಾವಿಗೆ ಆಗಮಿಸಿ ಎಂಇಎಸ್ ಪ್ರತಿಭಟನಾ ಸಭೆಯಲ್ಲಿ ಭಾಗಿಯಾಗಿದ್ದಾರೆ. ಎಂಇಎಸ್ ಪ್ರತಿಭಟನಾ ಸಭೆಯಲ್ಲಿ ಭಾಗಿಯಾಗಿರುವ ಮಹಾರಾಷ್ಟ್ರ ಎನ್‌ಸಿಪಿ ನಾಯಕಿ ರೂಪಾಲಿ ಕರ್ನಾಟಕದ ವಿರುದ್ದ ಪ್ರಚೋದನಕಾರಿ ಭಾಷಣ ಮಾಡಿದ್ದಾರೆ. ಎನ್‌ಸಿಪಿ ವರಿಷ್ಠ ಶರದ್ ಪವಾರ್ ಆದೇಶ ಮೇರೆಗೆ ಸಭೆಗೆ ಬಂದಿದ್ದೇನೆ. ಕರ್ನಾಟಕ ಸರ್ಕಾರ ಕರಾಳ ದಿನ ನಿಷೇಧಿಸಿದ್ದರೂ ನಾವು ಮಹಾರಾಷ್ಟ್ರದಲ್ಲಿ ಆಚರಿಸುತ್ತಿದ್ದೇವೆ. ಮಹಾರಾಷ್ಟ್ರದಲ್ಲಿ ನಾವು ಕಪ್ಪುಪಟ್ಟಿ ಧರಿಸಿ ಕರಾಳ ದಿನ ಆಚರಿಸುತ್ತಿದ್ದೇವೆ. …
Read More »ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಪಕ್ಷದ ಚೌಕಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುತ್ತದೆ: ಲಕ್ಷಣ ಸವದಿ
ರಾಯಚೂರು: ಸಿಎಂ ಬದಲಾವಣೆ ಹೇಳಿಕೆ ವಿಚಾರ ಹಿನ್ನೆಲೆಯಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಪಕ್ಷದ ಚೌಕಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುತ್ತದೆ ಅಂತ ಉಪಮುಖ್ಯಮಂತ್ರಿ ಲಕ್ಷಣ ಸವದಿ ಹೇಳಿದ್ದಾರೆ .ನಗರದಲ್ಲಿ ಕನ್ನಡ ರಾಜ್ಯೋತ್ಸವ ಧ್ವಜಾರೋಹಣ ಬಳಿಕ ಮಾತನಾಡಿದ ಅವರು, ಬಿಜೆಪಿ ರಾಜ್ಯಾಧ್ಯಕ್ಷರು, ರಾಷ್ಟ್ರಾಧ್ಯಕ್ಷರು ಆ ಬಗ್ಗೆ ಸೂಕ್ತ ಸಂದರ್ಭದಲ್ಲಿ ಕ್ರಮಕೈಗೊಳ್ಳುತ್ತಾರೆ ಎಂದರು. ಕಳೆದ ವರ್ಷದ ಬೆಳೆ ವಿಮೆಯ ಹಣ ರೈತರಿಗೆ ಸಿಗದೆ ಹೋಗಿದೆ. ಈ ಬಗ್ಗೆಯೂ ಪರಿಶೀಲಿಸಲಾಗುವುದು. ಭತ್ತ, ತೊಗರಿ, ಉದ್ದು …
Read More »65ನೇ ಕನ್ನಡ ರಾಜ್ಯೋತ್ಸವದ ಸಂಭ್ರಮ ನರೇಂದ್ರ ಮೋದಿಯವರು ರಾಜ್ಯದ ಜನತೆಗೆ ಕನ್ನಡದಲ್ಲಿಯೇ ಶುಭಾಶಯಗಳನ್ನು ಕೋರಿದ್ದಾರೆ.
ನವದೆಹಲಿ: 65ನೇ ಕನ್ನಡ ರಾಜ್ಯೋತ್ಸವದ ಸಂಭ್ರಮ ನಾಡಿನೆಲ್ಲೆಡೆ ಮನೆಮಾಡಿದ್ದು, ಈ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ರಾಜ್ಯದ ಜನತೆಗೆ ಕನ್ನಡದಲ್ಲಿಯೇ ಶುಭಾಶಯಗಳನ್ನು ಕೋರಿದ್ದಾರೆ. ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಮೋದಿಯವರು, ಕರ್ನಾಟಕದ ನನ್ನ ಸಹೋದರ ಮತ್ತು ಸಹೋದರಿಯರಿಗೆ ಕನ್ನಡ ರಾಜ್ಯೋತ್ಸವದ ಶುಭಾಶಯಗಳು. ಕನ್ನಡಿಗರ ಜನ ಶಕ್ತಿ ಮತ್ತು ಕೌಶಲ್ಯದಿಂದ ಕರ್ನಾಟಕ ಪ್ರಗತಿಯ ಉತ್ತುಂಗಕ್ಕೇರುತ್ತಿದೆ. ಕರ್ನಾಟಕದ ಜನತೆಯ ಸಂತಸ ಮತ್ತು ಉತ್ತಮ ಆರೋಗ್ಯಕ್ಕಾಗಿ ನಾನು ಪ್ರಾರ್ಥಿಸುತ್ತೇನೆಂದು …
Read More »ಮದ್ಯ ಸೇವಿಸುವವರಿಗೆ ‘ಕೊರೊನಾ’ದಿಂದ ಗಂಭೀರ ಸಮಸ್ಯೆ ಎದುರಾಗಲಿದೆ.
ಬೆಂಗಳೂರು: ಮದ್ಯ ಸೇವಿಸುವವರಿಗೆ ‘ಕೊರೊನಾ’ದಿಂದ ಗಂಭೀರ ಸಮಸ್ಯೆ ಎದುರಾಗಲಿದೆ. ಮದ್ಯಪ್ರಿಯರ ಲಿವರ್ ಮೇಲೆ ‘ಕೊರೊನಾ’ ಪ್ರಭಾವ ಅಪಾರವಾಗಿರುತ್ತೆ ಎಂದು ವೈದ್ಯರು ಎಚ್ಚರಿಕೆ ನೀಡಿದ್ದಾರೆ. ಸೋಂಕಿನಿಂದ ಮೃತಪಟ್ಟ ಕೆಲವರಲ್ಲಿ ಲಿವರ್ ಸಮಸ್ಯೆ ಕಂಡು ಬಂದಿದೆ. ಹೀಗಾಗಿ ಮದ್ಯಪಾನ ಮಾಡುವವರಿಗೆ ವೈದ್ಯರು ವಾರ್ನಿಂಗ್ ಕೊಟ್ಟಿದ್ದಾರೆ. ಸೋಂಕಿತರು ಲಿವರ್ ಮೇಲಾಗುವ ಪರಿಣಾಮದ ಬಗ್ಗೆ ಎಚ್ಚರಿಕೆ ವಹಿಸಬೇಕು. ಶ್ವಾಸಕೋಶದೊಂದಿಗೆ ವಿವಿಧ ಅಂಗಗಳ ಮೇಲೂ ಪರಿಣಾಮ ಬೀರುತ್ತೆ. ಮದ್ಯಪಾನ ಮಾಡುವವರ ಲಿವರ್ ದುರ್ಬಲವಾಗುವ …
Read More »
Laxmi News 24×7