Breaking News

ರಾಜ್ಯ

ದಾನಕ್ಕಿಂತ ಶ್ರೇಷ್ಠವಾದ ಕಾರ್ಯ ಮತ್ತೊಂದಿಲ್ಲ ಎನ್ನುತ್ತಾರೆ. ನಾವು ಬೇರೆಯವರಿಗೆ, ಕಷ್ಟದಲ್ಲಿರುವವರಿಗೆ ದಾನವನ್ನು ನೀಡಿದರೆ ಅದರಿಂದ

ದಾನಕ್ಕಿಂತ ಶ್ರೇಷ್ಠವಾದ ಕಾರ್ಯ ಮತ್ತೊಂದಿಲ್ಲ ಎನ್ನುತ್ತಾರೆ. ನಾವು ಬೇರೆಯವರಿಗೆ, ಕಷ್ಟದಲ್ಲಿರುವವರಿಗೆ ದಾನವನ್ನು ನೀಡಿದರೆ ಅದರಿಂದ ಪುಣ್ಯ ಪ್ರಾಪ್ತಿಯಾಗುತ್ತದೆ ಎಂದು ಹೇಳುತ್ತಾರೆ. ಆದರೆ ಅಪ್ಪಿತಪ್ಪಿಯೂ ಈ ವಸ್ತುವನ್ನು ದಾನ ಮಾಡಬೇಡಿ. ಕೆಲವರ ಮನೆಯಲ್ಲಿ ಲಕ್ಷ್ಮೀದೇವಿಯ ಪೂಜೆಗೆಂದು ಕಮಲದ ಹೂಗಳನ್ನು ತಂದಿರುತ್ತಾರೆ. ಆದರೆ ಕೆಲವೊಮ್ಮೆ ಈ ಹೂಗಳನ್ನು ಬೇರೆಯವರಿಗೆ ನೀಡುತ್ತೇವೆ. ಈ ರೀತಿ ಮಾಡಿದರೆ ನಿಮ್ಮ ಮನೆಯ ಲಕ್ಷ್ಮೀ ಹೊರಟುಹೋಗುತ್ತಾಳೆ. ಹಾಗೇ ಪ್ಲಾಸ್ಟಿಕ್ ವಸ್ತುಗಳನ್ನು ದಾನ ಮಾಡಬಾರದು. ಇದರಿಂದ ದೇವಿಯ ಕೋಪಕ್ಕೆ ಗುರಿಯಾಗುತ್ತೀರಿ. …

Read More »

ಅಧಿಕಾರಿಗಳು ಮತ್ತು ರಾಜಕಾರಣಿಗಳ ನಿರ್ಲಕ್ಷ್ಯದಿಂದ ಸಿಲಿಕಾನ್ ಸಿಟಿಯಲ್ಲಿ ಕೃತಕ ನೆರೆ ನಿರ್ಮಾಣವಾಗುತ್ತೆ.

ಬೆಂಗಳೂರು: ಅಧಿಕಾರಿಗಳು ಮತ್ತು ರಾಜಕಾರಣಿಗಳ ನಿರ್ಲಕ್ಷ್ಯದಿಂದ ಸಿಲಿಕಾನ್ ಸಿಟಿಯಲ್ಲಿ ಕೃತಕ ನೆರೆ ನಿರ್ಮಾಣವಾಗುತ್ತೆ. ಜೋರು ಮಳೆ ಬಂದ್ರೆ ಸಿಲಿಕಾನ್ ಸಿಟಿಯಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗುತ್ತೆ. ಏಕೆಂದರೆ ರಾಜಕಾಲುವೆಯ ಬಹುತೇಕ ಬಫರ್ ಝೋನ್ ಒತ್ತುವರಿ ಮಾಡಿಕೊಂಡು ಕಟ್ಟಡಗಳ ನಿರ್ಮಾಣ ಮಾಡಲಾಗಿದೆ. ಹಾಗೂ ಒತ್ತುವರಿ ಮಾಡಿರುವ ಜಾಗ ಕುಸಿಯದಂತೆ ತಡೆಗೋಡೆ ನಿರ್ಮಾಣ ಮಾಡಲಾಗಿದೆ. ಒತ್ತುವರಿಯಿಂದ ಮಳೆ ನೀರು ಸರಾಗವಾಗಿ ಹರಿದು ಹೋಗದ ಪರಿಸ್ಥಿತಿ ಇದೆ. ಇದರಿಂದಾಗಿ ತಡೆಗೋಡೆ ಒಡೆದು ನುಗ್ಗುವ ನೀರಿನಿಂದ ಪ್ರವಾಹ …

Read More »

ಬೆಳಗಾವಿ ಜಿಲ್ಲೆಯಲ್ಲಿ ಆಕ್ಸೀಜನ್ ಬೇಡಿಕೆ ಕಡಿಮೆಯಾಗಿದೆ- ಡಿಸಿ

ಬೆಳಗಾವಿ, -: ಜಿಲ್ಲೆಯಲ್ಲಿ ಒಟ್ಟು ಕೋವಿಡ್-೧೯ ಸೋಂಕಿತರ ಪೈಕಿ ಶೇ.94 ರಷ್ಟು ಜನರು ಗುಣಮುಖರಾಗಿದ್ದು, ಕಳೆದ ಹದಿನೈದು ದಿನಗಳಲ್ಲಿ ಮರಣ ಪ್ರಮಾಣ ಶೇ.0.4 ಕ್ಕೆ ಇಳಿಮುಖಗೊಂಡಿದೆ ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ತಿಳಿಸಿದ್ದಾರೆ. ಈ ಕುರಿತು ಶನಿವಾರ(ಅ.24) ಪ್ರಕಟಣೆ ನೀಡಿರುವ ಅವರು, ಜಿಲ್ಲೆಯಲ್ಲಿ ಇದುವರೆಗೆ 24,039 ಜನರಿಗೆ ಕೋವಿಡ್-೧೯ ಸೋಂಕು ತಗುಲಿದೆ ಎಂದು ತಿಳಿಸಿದ್ದಾರೆ. ಒಟ್ಟು ಸೋಂಕಿತರ ಪೈಕಿ 23,020 ಜನರು ಗುಣಮುಖರಾಗಿದ್ದಾರೆ. ಸದ್ಯಕ್ಕೆ 961 ಸಕ್ರಿಯ ಪ್ರಕರಣಗಳಿವೆ.

Read More »

ಮಟಕಾ ವಿರುದ್ಧ,ಬೆಳಗಾವಿ ಪೋಲೀಸರಿಂದ ಮಹಾ ಯುದ್ಧ…!

ಸಮರ್ಥ ನಗರದಲ್ಲಿ ಮಟಕಾ ದಾಳಿ… ಬೆಳಗಾವಿ- ರಾತ್ರಿ ಮಾರ್ಕೇಟ್ ಪೊಲೀಸ್ ಠಾಣೆ ವ್ಯಾಪ್ತಿಯ ಸಮರ್ಥನಗರದಲ್ಲಿ *ಮಟ್ಕಾ ದಾಳಿ* ಕೈಕಾಂಡಿದ್ದು, ಈ ಸಂದರ್ಭದಲ್ಲಿ *11 ಜನ* ಆರೋಪಿತರಾದ 1) ಸರ್ಫರಾಜ್ ಮಹಮ್ಮದಾಗೌಸ್ ಶಹಾಪಿರಿ ವಯಸ್ಸು 21, ಸಾ: ಕಾಕತಿ 2) ದಶರಥ ಭೀಮಶಿ ಕಾಂಬಳೆ ವಯಸ್ಸು 40, ಸಾ: ಉಪ್ಪಾರಗಲ್ಲಿ, ಖಾಸಬಾಗ 3)ಪ್ರಕಾಶ ಪಾಂಡುರಂಗ ಮಲಸೂರೆ ವಯಸ್ಸು 64, ಸಾ: ಮೀರಾಪೂರ ಗಲ್ಲಿ ಶಹಾಪೂರ 4) ಬಸವರಾಜ ಜ್ಯೋತಿಬಾ ಪಾಟೀಲ ವಯಸ್ಸು …

Read More »

ರಾಜ್ಯದೆಲ್ಲೆಡೆ ಇಂದು ಆಯುಧ ಪೂಜೆಯ ಸಂಭ್ರಮ. ಅದರಲ್ಲೂ ಅರಮನೆ ನಗರಿಯಲ್ಲಿ ಅಬ್ಬರ ಜೋರಾಗಿದೆ.

ಮೈಸೂರು: ರಾಜ್ಯದೆಲ್ಲೆಡೆ ಇಂದು ಆಯುಧ ಪೂಜೆಯ ಸಂಭ್ರಮ. ಅದರಲ್ಲೂ ಅರಮನೆ ನಗರಿಯಲ್ಲಿ ಅಬ್ಬರ ಜೋರಾಗಿದೆ. ಇಂದು ಆಯುಧ ಪೂಜೆ ನಡೆದ್ರೆ, ನಾಳೆ ಜಂಬೂ ಸವಾರಿ ನಡೆಯಲಿದೆ. ಬೆಳಗ್ಗೆಯಿಂದಲೇ ಅರಮನೆಯಲ್ಲಿ ಪೂಜಾ ಕೈಂಕರ್ಯಗಳು ಶುರುವಾಗಿವೆ. ಮೈಸೂರು ಅರಮನೆಯಲ್ಲಿ ಸರಳ ಆಯುಧ ಪೂಜೆ ಸಂಭ್ರಮ ಕಳೆಗಟ್ಟಿದೆ. ಬೆಳಗ್ಗೆ 6.15ಕ್ಕೆ ಅರಮನೆಯಲ್ಲಿ ಚಂಡಿ ಹೋಮದಿಂದ ಇಂದಿನ ಕಾರ್ಯಗಳು ಆರಂಭವಾಗಿದೆ. ಬೆಳಗ್ಗೆ 6.28ಕ್ಕೆ ಅರಮನೆ ಆವರಣದ ಕೋಡಿ ಸೋಮೇಶ್ವರ ದೇಗುಲಕ್ಕೆ ಆಯುಧಗಳನ್ನು ರವಾನಿಸಲಾಗುತ್ತೆ. ಸುಮಾರು ಒಂದು …

Read More »

ಆ ಶಾಲಾ ಆವರಣಕ್ಕೆ ನಿತ್ಯ ಬಾಲಕರ ದಂಡು ಆಟ ಆಡೋಕೆ ಹೋಗ್ತಿತ್ತು. ಆದ್ರೆ ಅಲ್ಲಿ ಹೊಸದಾಗಿ ಶಾಲಾ ಕೊಠಡಿಗಳ ನಿರ್ಮಾಣಕ್ಕೆ ಗುಂಡಿಗಳನ್ನ ತೆಗೆಯಲಾಗಿತ್ತು.

ಹಾವೇರಿ: ಆ ಶಾಲಾ ಆವರಣಕ್ಕೆ ನಿತ್ಯ ಬಾಲಕರ ದಂಡು ಆಟ ಆಡೋಕೆ ಹೋಗ್ತಿತ್ತು. ಆದ್ರೆ ಅಲ್ಲಿ ಹೊಸದಾಗಿ ಶಾಲಾ ಕೊಠಡಿಗಳ ನಿರ್ಮಾಣಕ್ಕೆ ಗುಂಡಿಗಳನ್ನ ತೆಗೆಯಲಾಗಿತ್ತು. ಆ ಗುಂಡಿಯಲ್ಲಿ ಮಳೆ ನೀರು ತುಂಬಿಕೊಂಡಿತ್ತು. ಈಗ ಆ ಗುಂಡಿಗಳೇ ಆ ಬಾಲಕರ ಪಾಲಿಗೆ ಮೃತ್ಯುಕೂಪವಾಗಿದ್ದು, ಮೂರು ಜೀವವನ್ನ ಪಡೆದಿವೆ. ಶಾಲಾ ಆವರಣದಲ್ಲಿರುವ ಗುಂಡಿಗಳಲ್ಲಿ ತುಂಬಿರೋ ನೀರು. ನೀರಿನಿಂದ ಬಾಲಕರ‌ ಮೃತದೇಹ ಹೊರತೆಗಿತಿರೋ ಅಗ್ನಿಶಾಮಕ ದಳ ಸಿಬ್ಬಂದಿ ಮತ್ತು ಸ್ಥಳೀಯರು. ಗುಂಡಿಯಲ್ಲಿನ ನೀರು ಹೊರಹಾಕ್ತಿರೋ …

Read More »

ಡಿಕೆಶಿಯವರದ್ದು ಯಾವಾಗಲೂ ಗೂಂಡಾ ರಾಜಕಾರಣ- ಶೋಭಾ ಕರಂದ್ಲಾಜೆ

ಮೈಸೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರದ್ದು ಯಾವಾಗಲೂ ಗೂಂಡಾ ರಾಜಕಾರಣ. ಆರ್.ಆರ್ ನಗರ ಚುನಾವಣೆಯಲ್ಲೂ ಗೂಂಡಾಗಿರಿ ಮೂಲಕ ಗೆಲ್ಲುವ ಪ್ರಯತ್ನ ನಡೆಸಿದ್ದಾರೆ ಎಂದು ಸಂಸದೆ ಶೋಭ ಕರಂದ್ಲಾಜೆ ವಾಗ್ದಾಳಿ ನಡೆಸಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆರ್.ಆರ್ ನಗರದಲ್ಲಿ ಡಿಕೆಶಿ ಸಹೋದರ ಡಿಕೆ ಸುರೇಶ್ ಅವರೇ ಸಂಸದರು. ಎಲ್ಲ ಗೂಂಡಾಗಳನ್ನು ಬಳಸಿಕೊಂಡು ಕಾನೂನು ಸುವ್ಯವಸ್ಥೆ ಹದಗೆಡಿಸುವ ಯತ್ನ ಮಾಡುತ್ತಿದ್ದಾರೆ. ಈ ಬಗ್ಗೆ ಬಿಜೆಪಿ ಚುನಾವಣಾ ಆಯೋಗಕ್ಕೆ ಮನವಿ ಸಲ್ಲಿಸಿದೆ. ಚುನಾವಣೆ …

Read More »

ಚೇಸ್ ಮಾಡಿ, ಕಾರು ಅಡ್ಡ ಹಾಕಿದಾಗ ಪೊಲೀಸರ ಮೇಲೆ ತಲವಾರು ಬೀಸಿದ ಕೊಲೆ ಆರೋಪಿ

ಮಂಗಳೂರು: ರೌಡಿಶೀಟರ್ ಚೆನ್ನೈ ಫಾರೂಕ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಆರೋಪಿ ಮೇಲೆ ಪೊಲೀಸರು ಗುಂಡಿನ ದಾಳಿ ನಡೆಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಗುಂಡ್ಯ ಬಳಿ ಈ ಘಟನೆ ನಡೆದಿದೆ. ಶುಕ್ರವಾರ ಬಂಟ್ವಾಳದ ಮೆಲ್ಕಾರ್ ಬಳಿ ಉಮಾರ್ ಫಾರೂಕ್ ಕೊಲೆ ನಡೆದಿತ್ತು. ಈ ಪ್ರಕರಣದ ಆರೋಪಿ ಖಲೀಲ್ ಮತ್ತು ತಂಡ ಕಾರಿನಲ್ಲಿ ತೆರಳುತ್ತಿತ್ತು. ಇದರ ನಿಖರ ಮಾಹಿತಿ ಪಡೆದ ಪೊಲೀಸರು ಆರೋಪಿ ಖಲೀಲ್ ಮತ್ತು ತಂಡವನ್ನು ಬಂಟ್ವಾಳ …

Read More »

ಹಬ್ಬಕ್ಕೆ ದಿನಸಿ ಖರೀದಿಸಲು ಬಂದ ವ್ಯಕ್ತಿ ಹೃದಯಾಘಾತದಿಂದ ಇದ್ದಕ್ಕಿದ್ದಂತೆ ಕುಸಿದು ಬಿದ್ದು ರಸ್ತೆಯಲ್ಲಿ ಸಾವನ್ನಪ್ಪಿದ್ದಾರೆ.

ಹಾಸನ: ಹಬ್ಬಕ್ಕೆ ದಿನಸಿ ಖರೀದಿಸಲು ಬಂದ ವ್ಯಕ್ತಿ ಹೃದಯಾಘಾತದಿಂದ ಇದ್ದಕ್ಕಿದ್ದಂತೆ ಕುಸಿದು ಬಿದ್ದು ರಸ್ತೆಯಲ್ಲಿ ಸಾವನ್ನಪ್ಪಿದ್ದಾರೆ. ಹಾಸನದ ಎಂಜಿ ರಸ್ತೆಯಲ್ಲಿ ಘಟನೆ ನಡೆದಿದ್ದು, ಇಂದು ಬೆಳಗ್ಗೆ 10:45 ರ ಸುಮಾರಿಗೆ ವ್ಯಕ್ತಿಯೊಬ್ಬರು ಎಂಜಿ ರಸ್ತೆಗೆ ಕುಟುಂಬದವರ ಜೊತೆಗೆ ಹಬ್ಬಕ್ಕೆ ದಿನಸಿ ಖರೀದಿಸಲು ಬಂದಿದ್ದಾರೆ. ಈ ವೇಳೆ ಅವರು ಹೃದಯಾಘಾತದಿಂದ ಕುಸಿದು ಬಿದ್ದಿದ್ದಾರೆ. ತಕ್ಷಣ ಅಂಬುಲೆನ್ಸ್ ಗೆ ಕರೆ ಮಾಡಿದರೂ ಸುಮಾರು ಅರ್ಧ ಗಂಟೆ ಆಂಬುಲೆನ್ಸ್ ತಡವಾಗಿ ಬಂದಿದೆ. ಅಷ್ಟರಲ್ಲಾಗಲೇ ವ್ಯಕ್ತಿಯ …

Read More »

ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ನೂತನ ಕ್ಯಾಂಪಸ್ ಅನ್ನು ಹಿರೇಬಾಗೇವಾಡಿಯಲ್ಲಿಯೇ ಸ್ಥಾಪಿಸಲು ಸರ್ಕಾರ ನಿರ್ಧರಿಸಿದೆ

ಬೆಳಗಾವಿ:  ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ನೂತನ ಕ್ಯಾಂಪಸ್ ಅನ್ನು ಹಿರೇಬಾಗೇವಾಡಿಯಲ್ಲಿಯೇ ಸ್ಥಾಪಿಸಲು ಸರ್ಕಾರ ನಿರ್ಧರಿಸಿದೆ. ಮೊದಲ ಹಂತದಲ್ಲಿ ನೂರು ಕೋಟಿ ರೂಪಾಯಿ ಒದಗಿಸಲಾಗುವುದು ಎಂದು ಉಪ ಮುಖ್ಯಮಂತ್ರಿಗಳೂ ಆಗಿರುವ ಉನ್ನತ ಶಿಕ್ಷಣ ಸಚಿವ ಡಾ. ಅಶ್ವತ್ ನಾರಾಯಣ ಸಿ.ಎನ್. ಅವರು ಹೇಳಿದರು. ರಾಣಿ ಚನ್ನಮ್ಮ ವಿಶ್ವವಿದ್ಯಾಲಯಕ್ಕೆ ಹಿರೇಬಾಗೇವಾಡಿ ಗ್ರಾಮದ ಬಳಿ ಮಂಜೂರು ಮಾಡಲಾಗಿರುವ ಜಮೀನನ್ನು ಶನಿವಾರ  ಪರಿಶೀಲಿಸಿದ ಬಳಿಕ ಮಾಧ್ಯಮ ಪ್ರತಿನಿಧಿ ಜತೆ ಅವರು ಮಾತನಾಡಿದರು. ಈಗಾಗಲೇ 127 ಎಕರೆ …

Read More »