ರಾಯಚೂರು: ಜಿಲ್ಲೆಯಲ್ಲಿ ಪ್ರವಾಹವೇನೋ ಇಳಿಮುಖವಾಗಿದೆ. ಆದ್ರೆ ಅತೀವೃಷ್ಠಿಯಿಂದ ಮನೆ ಕಳೆದುಕೊಂಡ ಜನ ಮಾತ್ರ ಇನ್ನೂ ಬೀದಿಯಲ್ಲೇ ಇದ್ದಾರೆ. ಒಂದು ತಿಂಗಳಿನಿಂದ ಅತಿಯಾಗಿ ಸುರಿದ ಮಳೆ ರಾಯಚೂರು ತಾಲೂಕಿನ ಇಡಪನೂರು ಗ್ರಾಮದ ಜನರ ಬದುಕನ್ನ ಕಸಿದುಕೊಂಡಿದೆ. ಆಶ್ರಯ ಸಿಕ್ಕರೂ ಅನ್ನ ಸಿಗದೆ ಸಂತ್ರಸ್ತರು ಪರದಾಡುತ್ತಿದ್ದಾರೆ. ಸರ್ಕಾರಿ ಶಾಲೆ, ಸಮುದಾಯ ಭವನದಲ್ಲಿ ಜಿಲ್ಲಾಡಳಿತ ಆಶ್ರಯ ನೀಡಿದೆ. ಆದ್ರೆ ಯಾವುದೇ ವ್ಯವಸ್ಥೆಗಳನ್ನ ಮಾಡಿಲ್ಲ. ಹೀಗಾಗಿ ಸುಮಾರು 56 ಕುಟುಂಬಗಳು ಊಟವಿಲ್ಲದೆ ಪರದಾಡುತ್ತಿವೆ. ಚಿಕ್ಕಮಕ್ಕಳು, ವೃದ್ದರು, …
Read More »ಅಂಬೇಡ್ಕರ್ ಭವನ ನಿರ್ಮಾಣ ಕಾಮಗಾರಿಗೆ ಇಂದು ಚಾಲನೆ ನೀಡಿದರು.:ಲಕ್ಷ್ಮೀ ಹೆಬ್ಬಾಳ್ಕರ್
ಬೆಳಗಾವಿ: ಗ್ರಾಮೀಣ ಕ್ಷೇತ್ರದ ಹಂಗರಗಾ ಗ್ರಾಮದಲ್ಲಿ ಡಾ.ಬಾಬಾಸಾಹೇಬ್ ಅಂಬೇಡ್ಕರ್ ಭವನ ನಿರ್ಮಾಣ ಕಾಮಗಾರಿಗೆ ಇಂದು ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಚಾಲನೆ ನೀಡಿದರು.:ಲಕ್ಷ್ಮೀ ಹೆಬ್ಬಾಳ್ಕರ್ ಸಮಾಜ ಕಲ್ಯಾಣ ಇಲಾಖೆ ಹಾಗೂ ಪಂಚಾಯತ್ ರಾಜ್ ಇಂಜಿನಿಯರಿಂಗ್ ಇಲಾಖೆ ಒಟ್ಟು 12 ಲಕ್ಷ ರೂ. ವೆಚ್ಚದಲ್ಲಿ ” ಅಂಬೇಡ್ಕರ್ ಭವನ ” ಕಟ್ಟಡ ನಿರ್ಮಾಣದ ಕಾಮಗಾರಿಗೆ ಗ್ರಾಮಸ್ಥರ ಹಾಗೂ ಸ್ಥಳೀಯ ಜನ ಪ್ರತಿನಿಧಿಗಳ ಸಮ್ಮುಖದಲ್ಲಿ ಭೂಮಿ ಪೂಜೆಯನ್ನು ನೆರವೇರಿಸಿದರು. ಈ ಸಂದರ್ಭದಲ್ಲಿ ಗ್ರಾಮದ …
Read More »ಇಬ್ಬರು ಭ್ರಷ್ಟ ಅಧಿಕಾರಿಗಳು ಎಸಿಬಿ ಬಲೆಗೆ
ಬೆಂಗಳೂರು, ಅ.22- ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಇಬ್ಬರು ಭ್ರಷ್ಟ ಅಧಿಕಾರಿಗಳ ಮೇಲೆ ಎಸಿಬಿ ಪೊಲೀಸರು ದಾಳಿ ನಡೆಸಿ ಭಾರೀ ಪ್ರಮಾಣದ ಅಕ್ರಮ ಪತ್ತೆಹಚ್ಚಿದ್ದಾರೆ. ಬಾಗಲಕೋಟೆ ಜಿ.ಪಂ. ಕುಡಿಯುವ ನೀರು ಪೂರೈಕೆ ಹಾಗೂ ನೈರ್ಮಲ್ಯ ವಿಭಾಗದ ಸಹಾಯಕ ಎಂಜಿನಿಯರ್ ಅಶೋಕ್ ತೋಪಲಕಟ್ಟಿ ಅವರ ಮನೆ, ಕಚೇರಿ, ಗ್ಯಾಸ್ ಏಜೆನ್ಸಿ ಮೇಲೆ ಇಂದು ಮುಂಜಾನೆ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ದಾಳಿ ನಡೆಸಿ ಭಾರೀ ಪ್ರಮಾಣದ ಅಕ್ರಮ ಆಸ್ತಿ ಪತ್ತೆ …
Read More »ಈ ಉಪ ಚುನಾವಣೆಯನ್ನು ಸವಾಲಾಗಿ ಸ್ವೀಕರಿಸುತ್ತೆನೆ ಇಲ್ಲಿ ಹಣ ಬಲವೊ ಜನ ಬಲವೊ ನೋಡಿಯೇ ಬಿಡೋಣ:H,D.D.
ತುಮಕೂರು/ಶಿರಾ, ಅ.22- ಶಿರಾ ಉಪ ಚುನಾವಣೆ ಮುಗಿಯುವವರೆಗೂ ನಾನು ಇಲ್ಲೇ ಇದ್ದು ಹೋರಾಟ ಮಾಡುತ್ತೇನೆ. ಕೆ.ಆರ್.ಪೇಟೆ ಮಾದರಿಯಲ್ಲಿ ಏನಾದರೂ ಚುನಾವಣೆ ನಡೆಸಲು ಹೋದರೆ ನಾನು ರಸ್ತೆಗೆ ಇಳಿದು ಉಗ್ರ ಪ್ರತಿಭಟನೆ ನಡೆಸಲು ಹಿಂದೆ ಮುಂದೆ ನೋಡುವುದಿಲ್ಲ ಎಂದು ಜೆಡಿಎಸ್ ವರಿಷ್ಠ ಮಾಜಿ ಪ್ರಧಾನಿಗಳಾದ ಎಚ್.ಡಿ.ದೇವೇಗೌಡರು ಗುಡುಗಿದ್ದಾರೆ.ಏನಾದರೂ ನನ್ನ ಕಾರ್ಯಕರ್ತರ ಮೇಲೆ ದೌರ್ಜನ್ಯ ನಡೆದರೆ ಸಿಡಿದೇಳುತ್ತೇನೆ. ಈ ಉಪ ಚುನಾವಣೆಯನ್ನು ಸವಾಲಾಗಿ ಸ್ವೀಕರಿಸುತ್ತೆನೆ ಇಲ್ಲಿ ಹಣ ಬಲವೊ ಜನ ಬಲವೊ ನೋಡಿಯೇ …
Read More »ಹೊಟ್ಟೆಕಿಚ್ಚಿನಿಂದ ಸರ್ಕಾರ ಇಂದಿರಾ ಕ್ಯಾಂಟೀನ್ಗೆ ಅನುದಾನ ಕೊಟ್ಟಿಲ್ಲ ಎಂದು ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್ ರಾಜ್ಯ ಸರ್ಕಾರ ವಿರುದ್ಧ ವಾಗ್ದಾಳಿ
ಬೆಂಗಳೂರು: ಹೊಟ್ಟೆಕಿಚ್ಚಿನಿಂದ ಸರ್ಕಾರ ಇಂದಿರಾ ಕ್ಯಾಂಟೀನ್ಗೆ ಅನುದಾನ ಕೊಟ್ಟಿಲ್ಲ ಎಂದು ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್ ರಾಜ್ಯ ಸರ್ಕಾರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಇಂದಿರಾ ಕ್ಯಾಂಟೀನ್ ಕುರಿತು ಟ್ವೀಟ್ ಮಾಡಿರುವ ದಿನೇಶ್ ಗುಂಡೂರಾವ್, ಇಂದಿರಾ ಕ್ಯಾಂಟೀನ್ ನಿರ್ವಹಿಸುತ್ತಿರುವ ಬಿಬಿಎಂಪಿಗೆ ಸರ್ಕಾರ ಅನುದಾನ ನೀಡದಿರುವುದು ಹೊಟ್ಟೆಕಿಚ್ಚಿನ ರಾಜಕಾರಣ. ಇಂದಿರಾ ಕ್ಯಾಂಟೀನ್ ಮುಖಾಂತರ ಬಡವರ ಹಸಿದ ಹೊಟ್ಟೆಗಳು ತುಂಬುವುದು ಬಿಜೆಪಿಗೆ ಬೇಕಾಗಿಲ್ಲ. ಹಸಿವಿನ ಸಂಕಟ ಮತ್ತು ಅನ್ನದ ಬೆಲೆ ಗೊತ್ತಿದ್ದರೆ ಕೂಡಲೆ …
Read More »ಯತ್ನಾಳ್ ಹೇಳಿಕೆಯನ್ನು ಪಕ್ಷವು ಗಂಭೀರವಾಗಿ ಪರಿಗಣಿಸಿದ್ದು, ಪಕ್ಷದಿಂದ ಅಮಾನತು ಇಲ್ಲವೇ ಉಚ್ಛಾಟನೆ
ಬೆಂಗಳೂರು,ಅ.22-ಪಕ್ಷದ ನಿಯುಮ ಉಲ್ಲಂಘಿಸಿ ನಾಯಕರ ವಿರುದ್ದ ಬಹಿರಂಗವಾಗಿಯೇ ಹೇಳಿಕೆ ನೀಡುವ ಮೂಲಕ ಮುಜುಗರ ಉಂಟುಮಾಡುತ್ತಿರುವ ಮಾಜಿ ಸಚಿವ ಹಾಗೂ ವಿಜಪುರದ ವಿಧಾನಸಭಾ ಕ್ಷೇತ್ರದ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ವಿರುದ್ದ ಬಿಜೆಪಿ ಶಿಸ್ತು ಕ್ರಮ ಜರಗಿಸಲು ಮುಂದಾಗಿದೆ. ಯತ್ನಾಳ್ ವಿರುದ್ದ ಕ್ರಮ ಕೈಗೊಳ್ಳದಿದ್ದರೆ, ಮುಂದಿನ ದಿನಗಳಲ್ಲಿ ಉಳಿದಿರುವವರು ಇದೇ ಹಾದಿ ತುಳಿಯಬಹುದು ಎಂಬ ಹಿನ್ನಲೆಯಲ್ಲಿ ರಾಜ್ಯ ಬಿಜೆಪಿ ಘಟಕ, ಒಂದೆರೆಡು ದಿನದಲ್ಲಿ ಅವರ ಹೇಳಿಕೆ ಕುರಿತು ನೋಟಿಸ್ ಜಾರಿ ಮಾಡಲು …
Read More »ಬೆಳಗಾವಿಯ ಸಮರ್ಥ ನಗರದಲ್ಲಿ ಮಟ್ಕಾ ಅಡ್ಡೆಯ ಮೇಲೆ ಪೊಲೀಸರು ದಾಳಿ
ಬೆಳಗಾವಿ: ಬೆಳಗಾವಿಯ ಸಮರ್ಥ ನಗರದಲ್ಲಿ ಮಟ್ಕಾ ಅಡ್ಡೆಯ ಮೇಲೆ ಪೊಲೀಸರು ದಾಳಿ ನಡೆಸಿ, 11 ಜನ ಆರೋಪಿಗಳನ್ನು ನಿನ್ನೆ ತಡರಾತ್ರಿ ಬಂಧಿಸಿದ್ದಾರೆ. 27 ಸಾವಿರ ನಗದು ಹಣ, 8 ಮೊಬೈಲ್ ಜಪ್ತಿ ಮಾಡಿದ್ದಾರೆ. ಸರ್ಫರಾಜ್ ಶಹಾಪೂರಿ(21), ದಶರಥ ಕಾಂಬಳೆ(40), ಪ್ರಕಾಶ ಮಲಸೂರೆ(64), ಬಸವರಾಜ ಪಾಟೀಲ (38), ಮಧು ನಾಯಕ(40), ಅಕ್ಷಯ ಸಾಳುಂಕೆ(24), ಅರ್ಜುನ ಜಕ್ಕಪ್ಪನ್ನವರ(28), ಖಾಜಾಹುಸೇನ ಘೋರಿ(38), ಆನಂದ ಪ್ರಭು ವೆಂಕಟಪುರ(20), ವಸಂತ ನಾಯ್ಕ(38), ಚಂದ್ರಶೇಖರ ವೆಂಕಣ್ಣವರ(39) ಬಂಧಿತರು. ಮಾರ್ಕೇಟ್ …
Read More »ಯತ್ನಾಳ್ ಅವರನ್ನು ಪಕ್ಷದಿಂದ ಉಚ್ಛಾಟಿಸಬೇಕು,ನಿಮ್ಮನ್ನು ಏನು ಮಾಡಬೇಕು: ಹರಕು ಬಾಯಿಈಶ್ವರಪ್ಪ ಹೇಳಿಕೆಗೆ ಅಭಿಮಾನಿ ಫೋಸ್ಟ್
ವಿಜಯಪುರ: ತಮ್ಮನ್ನು ಪಕ್ಷದಿಂದ ಉಚ್ಛಾಟಿಸಬೇಕು ಎಂಬ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿಕೆಗೆ ಅಭಿಮಾನಿ ಫೋಸ್ಟ್ ಮಾಡಿರುವುದನ್ನು ನಮ್ಮ ಖಾತೆಗೆ ಹಂಚಿಕೊಳ್ಳುವ ಮೂಲಕ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ತಿರುಗೇಟು ನೀಡಿದ್ದಾರೆ. ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಸಿಎಂ ಹಾಗೂ ಅವರ ಪುತ್ರ ವಿಜಯೇಂದ್ರ ವಿರುದ್ಧ ಮಾಡಿರುವ ಆರೋಪಕ್ಕೆ ನಿನ್ನೆ ಸಚಿವ ಕೆ.ಎಸ್.ಈಶ್ವರಪ್ಪ, ಯತ್ನಾಳ್ ಅವರನ್ನು ಪಕ್ಷದಿಂದ ಉಚ್ಛಾಟಿಸಬೇಕು ಎಂದು ಆಗ್ರಹಿಸಿದ್ದರು. ಈ ಹೇಳಿಕೆಗೆ ಖಾರವಾಗಿ ಫೇಸ್ಬುಕ್ ಮೂಲಕ ಯತ್ನಾಳ್ ಬೆಂಬಲಿಗ ಎನ್ನಲಾದ …
Read More »ಮಲ್ಪೆ ಬಂದರಿನಲ್ಲಿ ಬಲೆಗೆ ಬಿದ್ವು 750, 250 ಕೆ.ಜಿ.ತೂಕದ ಮೀನುಗಳು- ಕ್ರೇನ್ ಬಳಸಿ ಸಾಗಣೆ
ಉಡುಪಿ: ಜಿಲ್ಲೆಯ ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ಬೃಹತ್ ಮೀನುಗಳು ಬಲೆಗೆ ಬಿದ್ದಿವೆ. ಭಾರೀ ಗಾತ್ರದ ಎರಡು ತೊರಕೆ ಮೀನುಗಳು ಆಳಸಮುದ್ರ ದೋಣಿಯ ಮೀನುಗಾರರ ಬಲೆಗೆ ಬಿದ್ದಿವೆ. ಒಂದು ಮೀನು 750 ಕೆ.ಜಿ. ಹಾಗೂ ಇನ್ನೊಂದು 250 ಕೆ.ಜಿ. ತೂಗುತ್ತಿದೆ. ಮಲ್ಪೆ ಸುಭಾಸ್ ಸಾಲಿಯಾನ್ ಅವರ ಮಾಲೀಕತ್ವದ ನಾಗಸಿದ್ಧಿ ದೋಣಿಯ ಬಲೆಗೆ ಬಿದ್ದಿರುವ ಈ ಮೀನುಗಳನ್ನು ಬಂದರಿನಲ್ಲಿ ಕ್ರೇನ್ ಮೂಲಕ ಇಳಿಸಲಾಯಿತು. ತೊರಕೆ ಮೀನು ತುಂಬಾ ರುಚಿಕರವಾಗಿದ್ದು, ವಿದೇಶಗಳಿಗೆ ರಫ್ತಾಗುತ್ತದೆ. ಬೃಹತ್ …
Read More »ಪೋಕರಿ ಕಟೀಲ್ ಕಾಡು ಮನುಷ್ಯ, ನಾಗರಿಕ ಜಗತ್ತಲ್ಲಿ ಇರಲು ನಾಲಾಯಕ್: ಸಿದ್ದರಾಮಯ್ಯ
ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಬೆನ್ನಲ್ಲೇ ಇದೀಗ ಪ್ರತಿಯಾಗಿ ಸಿದ್ದರಾಮಯ್ಯ ಸರಣಿ ಟ್ವೀಟ್‍ಗಳ ಮೂಲಕ ತಿರುಗೇಟು ನೀಡಿದ್ದಾರೆ. ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, ಮಾತೆತ್ತಿದರೆ ಸಂಸ್ಕಾರ, ಸಂಸ್ಕೃತಿ ಎಂದು ಬೋಧನೆ ಮಾಡುವ ಸಂಘ ಪರಿವಾರದಲ್ಲಿ ಯಾರಾದರೂ ಹಿರಿಯರು, ಮಾನವಂತರು ಉಳಿದಿದ್ದರೆ ಮೊದಲು ಈ ನಳಿನ್ ಕುಮಾರ್ ಅವರಿಗೆ ಸ್ವಲ್ಪ ಬುದ್ಧಿ ಹೇಳಿ …
Read More »
Laxmi News 24×7